Tag: gundlupet

  • ಹುಲಿ ಹಿಡಿಯಲು ವಿಫಲ – ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಜನ

    ಹುಲಿ ಹಿಡಿಯಲು ವಿಫಲ – ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಜನ

    ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ಅರಣ್ಯ ಪ್ರದೇಶ ಹೆಚ್ಚಿದೆ. ಅರಣ್ಯದ ಅಂಚಿನ ಗ್ರಾಮಗಳಿಗೆ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು ಇಟ್ಟಿದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿದ ಘಟನೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.

    ಹುಲಿ, ಚಿರತೆ ದಾಳಿಗೆ ಬೇಸತ್ತ ರೈತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಹುಲಿ ಹಿಡಿಯಲು ಎಂದು ಬಂದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಾಣ ಭಯದಲ್ಲಿ ಜೀವ ನಡೆಸುತ್ತಿರುವ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಜಮೀನಿನಲ್ಲಿ ಇದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ 2 ತಿಂಗಳಿನಿಂದ ಗ್ರಾಮದ ಹೊರವಲಯದಲ್ಲಿ ಹುಲಿ ಹಾಗೂ ಚಿರತೆ ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ, ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಬೋನು ಇಡಲಾಗಿದೆ. ಮಂಗಳವಾರ ಹುಲಿ ಮತ್ತೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಜನರು ಅರಣ್ಯ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ.

    ಜಾನುವಾರುಗಳ ಮೇಲೆ ದಾಳಿ:
    ತಿಂಗಳಿನಿಂದ ಗ್ರಾಮದ ಸುತ್ತಲೂ ಓಡಾಡುತ್ತಿರುವ ಹುಲಿ ಜಾನುವಾರುಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ರೈತರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ನಂತರ ಅರಣ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಇತ್ತ ಸುಳಿಯದೇ ಇರುವುದು ರೈತರು ಪಿತ್ತ ನೆತ್ತಿಗೇರಿಸಿತ್ತು.

    ಅರಣ್ಯ ಇಲಾಖೆ ಸಿಬ್ಬಂದಿಯನ್ನ ಬೋನ್​​ನಲ್ಲಿ ಇರಿಸಿದ ಬಗ್ಗೆ ಮಾಹಿತಿ ಪಡೆದ ಗುಂಡ್ಲುಪೇಟೆ ವಲಯದ ಎಸಿಎಫ್ ಸುರೇಶ್ ಹಾಗೂ ಬಂಡೀಪುರ ವಲಯದ ಎಸಿಎಫ್ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ. ಈ ವೇಳೆ, ರೈತರು ಹಾಗೂ ಅರಣ್ಯಾಧಿಕಾರಿಗಳ ನಡುವೆ ಮಾತಿನ‌ ಚಕಮಕಿ ನಡೆಯಿತು. ಕಾಡುಪ್ರಾಣಿಗಳ ಭೀತಿಯಲ್ಲಿ ನಾವು ಜೀವನ ನಡೆಸುತ್ತಿದ್ದೇವೆ. ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಸಿಬ್ಬಂದಿಯನ್ನ ಬೋನಿನಿಂದ ಹೊರ ಬಿಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವೊಲಿಸಿದರು.

  • ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

    ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

    ಚಾಮರಾಜನಗರ: ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೊನಿಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಇದು ಎರಡನೇ ಸಾವಾಗಿದೆ.

    ದೇಶಿಪುರ ಕಾಲೊನಿಯ ಪುಟ್ಟಮ್ಮ ಎಂಬಾಕೆ ಹುಲಿಗೆ ಬಲಿಯಾದವರು. ಕಾಲೊನಿ ಸಮೀಪ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಏಕಾಏಕಿ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ ಭಾಗದಲ್ಲಿ ಬಲವಾಗಿ ದಾಳಿ ನಡೆಸಿ ಕೊಂದಿದೆ. ನಂತರ, ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದಿತ್ತು. ಗ್ರಾಮಸ್ಥರು ಹುಡುಕಾಡಿದಾಗ ಪುಟ್ಟಮ್ಮನ ಶವ ದೊರೆತಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಹುಲಿ ದಾಳಿ ನಡೆದಿದೆ.

    ಬಂಡೀಪುರ ಸಿಎಫ್ಒ ಪ್ರಭಾಕರನ್ ಮಾತನಾಡಿ, ಮಹಿಳೆ ಹುಲಿ ದಾಳಿಗೆ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುವುದು ಎಂದರು.

    ಕಳೆದ 10 ರಂದು ಚಾಮರಾಜನಗರ ತಾಲೂಕಿನ ಬೇಡಗುಳಿಯಲ್ಲಿ ಬಹಿರ್ದೆಸೆಗೆಂದು ತೆರಳಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿ ದೇಹದ ಅಲ್ಪಸ್ವಲ್ಪ ತಿಂದಿತ್ತು. ಬಳಿಕ, ಬಿಆರ್‌ಟಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಲವೇ ತಾಸುಗಳಲ್ಲಿ ಹುಲಿ ಸೆರೆ ಹಿಡಿದಿದ್ದರು.

  • ರಾಜ್ಯಕ್ಕೆ ಎಂಟ್ರಿಯಾಗ್ತಿದೆ ಕೇರಳ ತ್ಯಾಜ್ಯ – ವಾಹನಗಳನ್ನು ಹಿಡಿದ ಗಡಿಜಿಲ್ಲೆಯ ಜನರು

    ರಾಜ್ಯಕ್ಕೆ ಎಂಟ್ರಿಯಾಗ್ತಿದೆ ಕೇರಳ ತ್ಯಾಜ್ಯ – ವಾಹನಗಳನ್ನು ಹಿಡಿದ ಗಡಿಜಿಲ್ಲೆಯ ಜನರು

    -ತ್ಯಾಜ್ಯ ಹೊತ್ತು ತಂದ ಐದು ಲಾರಿ ಸೀಜ್, ಐವರ ವಿರುದ್ಧ ಎಫ್‌ಐಆರ್

    ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರಕ್ಕೆ (Chamarajangar) ಮತ್ತೇ ಮತ್ತೇ ಕೇರಳದಿಂದ ಕಸ ಬರುತ್ತಿದೆ. ಜಿಲ್ಲೆಯ ಗುಂಡ್ಲುಪೇಟೆ ಕೇರಳದ ತ್ಯಾಜ್ಯ ಸುರಿಯುವ ಕಸದ ತೊಟ್ಟಿಯಾಗಿದೆ.

    ಕೇರಳಿಗರು ತಮ್ಮ ರಾಜ್ಯದಿಂದ ನಾನಾ ರೀತೀಯ ತ್ಯಾಜ್ಯವನ್ನು ಗುಂಡ್ಲುಪೇಟೆ ತಾಲೂಕಿನ ನಿರ್ಜನ ಪ್ರದೇಶಗಳಲ್ಲಿ ಸುರಿದು ಹೋಗುತ್ತಿದ್ದು, ಜಿಲ್ಲಾಡಳಿತ ಮೌನವಹಿಸಿದೆ. ಹೀಗೆ ನಿತ್ಯ ಇಲ್ಲಿಗೆ ಬಂದು ತ್ಯಾಜ್ಯ ಸುರಿದು ಹೋಗುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ರೋಗರುಜಿನಗಳು ಹರಡುವ ಆತಂಕ ಎದುರಾಗಿದೆ.ಇದನ್ನೂ ಓದಿ: ಎಡನೀರು ಮಠದ ಶ್ರೀಗಳ ಕಾರಿನ ಮೇಲೆ ಅನ್ಯ ಕೋಮಿನ ಯುವಕರಿಂದ ದಾಳಿ

    ರಾಷ್ಟ್ರೀಯ ಹೆದ್ದಾರಿ 766ರ ಮೂಲಕ ಕೇರಳದಿಂದ ಮೆಡಿಕಲ್ ವೇಸ್ಟ್, ಚಪ್ಪಲಿ, ಮಾಂಸ, ಕೊಳೆತ ತರಕಾರಿ, ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ತಂದು ಗಡಿಭಾಗದ ನಿರ್ಜನ ಪ್ರದೇಶಗಳಲ್ಲಿ ಸುರಿದು ಹೋಗುವುದು ಅಥವಾ ಗುಂಡ್ಲುಪೇಟೆ ಮೂಲಕ ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡುವುದು ನಿರಂತರವಾಗಿ ನಡೆಯುತ್ತಲೇ ಇದೆ. ಇಷ್ಟೆಲ್ಲಾ ಆಗುತ್ತಿದ್ದರೂ ಕರ್ನಾಟಕ ಗಡಿಭಾಗದ ಚೆಕ್‌ಪೋಸ್ಟ್ನಲ್ಲಿ ಯಾವುದೇ ತಪಾಸಣೆ ನಡೆಯದೆ ಕೇವಲ ಗ್ರೀನ್ ಟ್ಯಾಕ್ಸ್ ವಸೂಲಿಗಷ್ಟೇ ಸೀಮಿತವಾಗಿದೆ.

    ನೆರೆಯ ಕೇರಳಿಗರು ಎಗ್ಗಿಲ್ಲದೇ ಚೆಕ್‌ಪೋಸ್ಟ್ ದಾಟಿ ಲಾರಿ ಮತ್ತು ಟೆಂಪೋಗಳಲ್ಲಿ ಕರ್ನಾಟಕಕ್ಕೆ ಕಸ ಸಾಗಣೆ ಮಾಡುತ್ತಿದ್ದಾರೆ. ಚೆಕ್‌ಪೋಸ್ಟ್ನಲ್ಲಿರುವ ಪೊಲೀಸ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಗಂಭೀರ ಆರೋಪವು ಇದೆ.

    ಇನ್ನೂ ಕೇರಳದಿಂದ ಕರ್ನಾಟಕಕ್ಕೆ ಕಸ ನಿರಂತರವಾಗಿ ಸಾಗಣೆಯಾಗುತ್ತಿದ್ದರೂ ಕೂಡ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಇದರಿಂದ ಬೇಸತ್ತ ಕನ್ನಡಪರ ಸಂಘಟನೆಗಳು ಕೇರಳದಿಂದ ತ್ಯಾಜ್ಯ ತುಂಬಿಕೊಂಡು ಬಂದ 5 ಲಾರಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೇರಳದ ಐವರು ಲಾರಿ ಚಾಲಕರ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

    ಚೆಕ್‌ಪೋಸ್ಟ್ನಲ್ಲಿ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಕೆಲಸಕ್ಕೆ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆ ಮುಂದಾಗಬೇಕಿದೆ. ಇದರ ಜೊತೆಗೆ ಕೇರಳ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿ ತ್ಯಾಜ್ಯ ಸಾಗಾಣಿಕೆಗೆ ಕಡಿವಾಣ ಹಾಕಬೇಕಿದೆ.ಇದನ್ನೂ ಓದಿ: ಅಥಣಿ | ಅಂತರರಾಜ್ಯ ಕಳ್ಳರ ಸೆರೆ : 40 ಲಕ್ಷ ರೂ. ಚಿನ್ನಾಭರಣ ವಶಕ್ಕೆ

  • ಚಾಮರಾಜನಗರ| ಕಾಡಾನೆ ದಾಳಿಗೆ ಟೊಮೆಟೊ, ಬೀನ್ಸ್‌, ಬಾಳೆ ಬೆಳೆ ನಾಶ

    ಚಾಮರಾಜನಗರ| ಕಾಡಾನೆ ದಾಳಿಗೆ ಟೊಮೆಟೊ, ಬೀನ್ಸ್‌, ಬಾಳೆ ಬೆಳೆ ನಾಶ

    ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೆನ್ನವಡೆಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ 10 ಎಕರೆಗೂ ಹೆಚ್ಚು ಫಸಲು ನಾಶವಾಗಿರುವ ಘಟನೆ ನಡೆದಿದೆ.

    ಕುಮಾರ ಎಂಬವರಿಗೆ ಸೇರಿದ 2 ಎಕರೆ ಟೊಮೆಟೊ ಹಾಗೂ ಬೀನ್ಸ್, ಶಿವಪ್ಪ ಎಂಬವರಿಗೆ ಸೇರಿದ 2 ಎಕರೆ ಬಾಳೆ ಬೆಳೆ ಮತ್ತು ಸುತ್ತಮುತ್ತಲಿನ 10 ಎಕರೆ ಪ್ರದೇಶದ ಬೆಳೆಯನ್ನು ಆನೆಗಳು ತಿಂದು ತುಳಿದು ನಾಶಪಡಿಸಿವೆ.

    ಇಷ್ಟಾದರೂ ಬಂಡೀಪುರದ ಓಂಕಾರ ವಲಯದ ವಲಯಾರಣ್ಯಾಧಿಕಾರಿ ಇತ್ತ ತಲೆ ಹಾಕಿಲ್ಲ ಎಂದು ರೈತರು ಆರೋಪಿಸಿದ್ದಾರೆ.

  • ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಚಾಮರಾಜನಗರ: ಶವಸಂಸ್ಕಾರಕ್ಕೆ (Funeral) ತೆರಳಿದ್ದ ವೇಳೆ ಹೆಜ್ಜೇನು ದಾಳಿ (Bee Attack) ನಡೆಸಿ ಹಲವರು ಗಾಯಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

    ಹೆಜ್ಜೇನು ದಾಳಿಯಲ್ಲಿ 42 ಮಂದಿ ಗಾಯಗೊಂಡಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಮಹಾದೇವಯ್ಯ ಎಂಬವರ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಅಂತ್ಯಸಂಸ್ಕಾರದಲ್ಲಿ ಬೆಂಕಿ ಹಾಕಿದ್ದ ಹೊತ್ತಲ್ಲಿ ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್‌ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ

    ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಹೆಚ್‌ಒ ಚಿದಂಬರಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ‌ ಮೋರ್ಚಾದಿಂದ ಉಚಿತ‌ ಹೊಲಿಗೆ ಯಂತ್ರ ವಿತರಣೆ

  • ಗುಂಡ್ಲುಪೇಟೆಯ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ

    ಗುಂಡ್ಲುಪೇಟೆಯ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ

    ಚಾಮರಾಜನಗರ: ದೇಶಾದ್ಯಂತ ದೀಪ ಬೆಳಗಿಸಿ ಸಡಗರ ಸಂಭ್ರಮದಿಂದ ದೀಪಾವಳಿ ಹಬ್ಬವನ್ನ ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರದ (Chamarajanagara) ಈ ಏಳು ಗ್ರಾಮಗಳಲ್ಲಿ ದೀಪಾವಳಿಯ (Deepavali) ಸಡಗರ-ಸಂಭ್ರಮ ಯಾವುದೂ ಕಾಣುತ್ತಿಲ್ಲ. ಇದಕ್ಕೆ ಕಾರಣ ಮಂಗಳವಾರ ಹಬ್ಬ ಬಂದಿರುವುದು. ಹಾಗಾದರೆ ಈ ಗ್ರಾಮಗಳಲ್ಲಿ ದೀಪಾವಳಿ ಹಬ್ಬ ಯಾವಾಗ ಆಚರಿಸುತ್ತಾರೆ? ಯಾಕೆ ಬುಧವಾರದ ದಿನ ಹೊರತು ಪಡಿಸಿ ಉಳಿದ ದಿನಗಳಲ್ಲಿ ಹಬ್ಬ ಆಚರಿಸಲ್ಲ ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

    ಹೌದು, ದೀಪದಿಂದ ದೀಪವನ್ನು ಹಚ್ಚುತ್ತಾ ಮನೆ, ಮನಗಳಲ್ಲಿ ಸಂಭ್ರಮದ ವಾತಾವರಣ ಸೃಷ್ಟಿ ಮಾಡುವುದೇ ದೀಪಾವಳಿ ಹಬ್ಬ. ದೇಶಾದ್ಯಂತ ಸಂಭ್ರಮ, ಸಡಗರದಿಂದ ದೀಪಾವಳಿಯನ್ನ ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬೆಂಡಗಳ್ಳಿ, ವೀರನಪುರ, ಬನ್ನಿತಾಳಪುರ, ಮಾಡ್ರಹಳ್ಳಿ, ನಲ್ಲೂರು, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ಇಂದು (ಭಾನುವಾರ) ದೀಪಾವಳಿ ಹಬ್ಬವನ್ನ ಆಚರಿಸುತ್ತಿಲ್ಲ. ಇದಕ್ಕೆ ಕಾರಣ ದೀಪಾವಳಿಯ ಬಲಿಪಾಡ್ಯಮಿ ಮಂಗಳವಾರ ಬಂದಿರುವುದು. ಇದನ್ನೂ ಓದಿ: ದೀಪಾವಳಿ: ವ್ಯಾಪಾರ ವೃದ್ಧಿಗೆ ಮಾಡಿ ಧನಲಕ್ಷ್ಮಿ ಪೂಜೆ

    ಈ ಮೇಲಿನ 7 ಗ್ರಾಮಗಳಲ್ಲಿ ಹಿಂದಿನ ಕಾಲದಿಂದಲೂ ದೀಪಾವಳಿಯ ಬಲಿಪಾಡ್ಯಮಿ ಬುಧವಾರ ಬಿಟ್ಟು ವಾರದ ಬೇರೆ ಯಾವುದೇ ದಿನಗಳಲ್ಲಿ ಬಂದರೂ ಆಚರಿಸುವುದಿಲ್ಲ. ಬದಲಾಗಿ ಹಬ್ಬವನ್ನ ಮುಂದಿನ ಬುಧವಾರ ಆಚರಿಸುತ್ತಾರೆ. ಬುಧವಾರದಂದು ಹೊಸ ಬಟ್ಟೆ ತೊಟ್ಟು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ರಾಸುಗಳಿಗೆ ಎಣ್ಣೆ ಸ್ನಾನ ಮಾಡಿಸಿ ಮನೆಯಲ್ಲಿ ಸಿಹಿ ಊಟ ಮಾಡುತ್ತಾರೆ. ಕಳೆದ ಮೂರು ತಲೆಮಾರುಗಳಿಂದ ಈ ಏಳು ಗ್ರಾಮದವರು ಬುಧವಾರವೇ ಹಬ್ಬ ಆಚರಿಸುವ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದಾರೆ. ಅಷ್ಟಕ್ಕೂ ಬುಧವಾರವೇ ಏಕೆ ಹಬ್ಬ ಆಚರಿಸಬೇಕು ಎಂಬ ಪ್ರಶ್ನೆಗೆ ಗ್ರಾಮದವರ ಉತ್ತರ ಹೀಗಿದೆ.

    ಬುಧವಾರ ಹೊರತುಪಡಿಸಿ ಬೇರೆ ಯಾವ ದಿನದಲ್ಲಿ ಹಬ್ಬ ಆಚರಿಸಿದರೆ ಊರಿಗೆ ಕೆಡಕಾಗುತ್ತದೆ. ರಾಸುಗಳು ಜಾನುವಾರುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತವೆ ಎಂಬ ನಂಬಿಕೆ ಇದೆ. ಹಾಗಾಗಿ ನೂರಾರು ವರ್ಷಗಳಿಂದ ದೀಪಾವಳಿ ಹಬ್ಬವನ್ನ ಬುಧವಾರವನ್ನ ಹೊರತು ಪಡಿಸಿ ಇನ್ಯಾವುದೇ ದಿನದಲ್ಲಿ ಬಂದರೂ ಸುತ್ತಮುತ್ತ 7 ಗ್ರಾಮದ ಜನರು ಆಚರಿಸುವುದಿಲ್ಲ. ಬುಧವಾರದಂದು ದೇವಸ್ಥಾನದಿಂದ ತೀರ್ಥ ತಂದು ಹಸುಗಳಿಗೆ ಪೂಜೆ ಮಾಡಿ ಬಳಿಕ ಹಸುಗಳನ್ನ ಊರಿನ ಸುತ್ತ ಒಂದು ಸುತ್ತು ಹಾಕಿಸಲಾಗುವುದು. ಇದನ್ನೂ ಓದಿ: ಅಯೋಧ್ಯೆಯಲ್ಲಿ ದೀಪದಿಂದ ಎಣ್ಣೆ ಕದ್ದ ಮಕ್ಕಳು; ವೀಡಿಯೋ ಹಂಚಿಕೊಂಡ ಅಖಿಲೇಶ್‌ ಯಾದವ್‌

  • ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು – ಹೊರಬರಲಾರದೆ ಚಾಲಕ ಸಜೀವದಹನ

    ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು – ಹೊರಬರಲಾರದೆ ಚಾಲಕ ಸಜೀವದಹನ

    ಚಾಮರಾಜನಗರ: ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ (Driver) ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಹಿರಿಕಾಟಿ ಗೇಟ್ ಬಳಿ ದುರ್ಘಟನೆ ನಡೆದಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮೈಸೂರು ಮೂಲದ ಮುಜಾಮಿಲ್ ಅಹಮದ್ ಎಂದು ಗುರುತಿಸಲಾಗಿದೆ.

    ಕಳೆದ ಒಂದು ವಾರದ ಹಿಂದೆ ಪಾರ್ವತಮ್ಮ ರಾಜ್‌ಕುಮಾರ್ ತಮ್ಮನ ಪುತ್ರ ಸೂರಜ್‌ಗೆ ಅಪಘಾತವಾಗಿದ್ದ ಸಮೀಪದ ಸ್ಥಳದಲ್ಲೇ ಮತ್ತೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಭೀಮಾ ನದಿಯಲ್ಲಿ ನೀರು ಕುಡಿಯಲು ಹೋದ ಇಬ್ಬರು ಬಾಲಕರ ಸಾವು

    ಸ್ಥಳಕ್ಕೆ ಚಾಮರಾಜನಗರ ಎಸ್‌ಪಿ ಪದ್ಮಿನಿ ಸಾಹು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಗೂರು ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೈಸೂರು ಸಂಸದರ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್‌ಸ್ಟೇಬಲ್ ಅಮಾನತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುಗಾದಿ ಹಬ್ಬಕ್ಕೆಂದು ಬಂದಿದ್ದ ಲೈಟ್ ಬಾಯ್ – ಹುಡುಗಿ ವಿಚಾರಕ್ಕೆ ಹತ್ಯೆ

    ಯುಗಾದಿ ಹಬ್ಬಕ್ಕೆಂದು ಬಂದಿದ್ದ ಲೈಟ್ ಬಾಯ್ – ಹುಡುಗಿ ವಿಚಾರಕ್ಕೆ ಹತ್ಯೆ

    ಚಾಮರಾಜನಗರ: ಪ್ರೇಮ ವಿಚಾರಕ್ಕೆ ಲೈಟ್ ಬಾಯ್ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

    boy, dark and light - image #5141808 on Favim.com

    ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ಪ್ರೇಮ ವಿಚಾರಕ್ಕೆ ಜಗಳ ಅತಿರೇಕಕ್ಕೆ ಹೋಗಿದ್ದು, ಹೊಸೂರು ಬಡಾವಣೆಯ ಚಿಕ್ಕರಾಜು(30) ಕೊಲೆಯಾಗಿದ್ದಾನೆ. ಬೆಂಗಳೂರಿನಲ್ಲಿ ಲೈಟ್ ಬಾಯ್ ಆಗಿದ್ದ ಚಿಕ್ಕರಾಜು ಹಬ್ಬಕ್ಕೆ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ.  ಇದನ್ನೂ ಓದಿ: ದೃಢಸಂಕಲ್ಪ, ಜಾಣ್ಮೆ, ತಾಳ್ಮೆ ಇವು ಯಶಸ್ಸಿನ ಸೂತ್ರಗಳು: ಆನಂದ್ ಮಹೀಂದ್ರಾ

    ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿದ್ದ ಯುವತಿಯನ್ನು ಚಿಕ್ಕರಾಜು ಪ್ರೀತಿ ಮಾಡುತ್ತಿದ್ದ. ಈ ವಿಚಾರ ಯುವತಿಯ ಸಂಬಂಧಿಕರಿಗೆ ತಿಳಿದಿದ್ದು, ಇದನ್ನು ವಿರೋಧಿಸಿ ಚಿಕ್ಕರಾಜುನನ್ನು ಪ್ರಶ್ನಿಸಿದ್ದಾರೆ. ಆದರೆ ಚಿಕ್ಕರಾಜು ಇದನ್ನು ವಿರೋಧಿಸಿದ್ದಾನೆ.

    POLICE JEEP

    ಪರಿಣಾಮ ವೀರಭದ್ರನಾಯ್ಕ, ಯುವತಿ ತಂದೆ ಮಹದೇವನಾಯ್ಕ, ಸಹೋದರರಾದ ಕಿರಣ್, ಅಭಿಷೇಕ್ ಆತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೃತ್ಯ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಪ್ರಸ್ತುತ ಈ ಪ್ರಕರಣ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ಕೆಲಸ ಮಾಡುತ್ತಿದ್ದ ವೇಳೆ ಮೆಷಿನ್‍ಗೆ ವೇಲ್ ಸಿಲುಕಿ ಯುವತಿ ಸಾವು

    ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಶೋಧ ಕಾರ್ಯ ಮಾಡುತ್ತಿದ್ದಾರೆ.

  • ಕ್ವಾರಿಯಲ್ಲಿ ಗುಡ್ಡ ಕುಸಿತ – 4 ಗಂಟೆಗೂ ಹೆಚ್ಚು ಕಾಲ ಬಂಡೆಯಡಿ ಸಿಲುಕಿ ಬದುಕುಳಿದಾತನಿಗೆ ಮುಂದುವರಿದ ಚಿಕಿತ್ಸೆ

    ಕ್ವಾರಿಯಲ್ಲಿ ಗುಡ್ಡ ಕುಸಿತ – 4 ಗಂಟೆಗೂ ಹೆಚ್ಚು ಕಾಲ ಬಂಡೆಯಡಿ ಸಿಲುಕಿ ಬದುಕುಳಿದಾತನಿಗೆ ಮುಂದುವರಿದ ಚಿಕಿತ್ಸೆ

    ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆಯ ಗುಮ್ಮಕಲ್ಲುಗುಡ್ಡ ಗಣಿ ಕುಸಿತ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಎನ್‍ಡಿಆರ್‌ಎಫ್ ಪಡೆಗಳು ಹರಸಾಹಸ ಮಾಡಿ ಈವರೆಗೂ ಒಬ್ಬರ ಶವ ಹೊರ ತೆಗೆದಿದ್ದಾರೆ.

    ನಿನ್ನೆ ಬಂಡೆಯಡಿ 4 ಗಂಟೆಗೂ ಹೆಚ್ಚು ಕಾಲ ಸಿಲುಕಿ ಬದುಕುಳಿದಿದ್ದ ನೂರುದ್ದೀನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಬೃಹತ್ ಕಲ್ಲುಗಳ ಅಡಿ ಇನ್ನೂ ಇಬ್ಬರು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಆದರೆ ನಿನ್ನೆ ಗುಡ್ಡ ಕುಸಿತ ವೇಳೆ 20ಕ್ಕೂ ಹೆಚ್ಚು ಕಾರ್ಮಿಕರಿದ್ದರು ಅಂತ ಪ್ರತ್ಯಕ್ಷದರ್ಶಿ ಹೇಳಿಕೆ ನೀಡಿದ್ದಾರೆ.‌ ಇದನ್ನೂ ಓದಿ: ಕ್ವಾರಿಯಲ್ಲಿ ಗುಡ್ಡ ಕುಸಿತ- ಮೂವರ ವಿರುದ್ಧ ಕೇಸ್ ದಾಖಲು

    ಗಣಿ ಗುತ್ತಿಗೆ ಪಡೆದಿದ್ದ ಮಹೇಂದ್ರಪ್ಪ, ಉಪಗುತ್ತಿಗೆ ಪಡೆದಿದ್ದ ಹಕೀಂ, ಗಣಿ ನೋಡಿಕೊಳ್ಳುತ್ತಿದ್ದ ನವೀದ್ ವಿರುದ್ಧ ಗಣಿ, ಭೂ ವಿಜ್ಞಾನ ಇಲಾಖೆ ದೂರು ದಾಖಲಿಸಿದೆ. ಮೂವರ ಪೈಕಿ ನವೀದ್‍ನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಗುಡ್ಡ ಕುಸಿತ – ಇಬ್ಬರು ಗಣಿ ಕಾರ್ಮಿಕರು ಸಾವು?

    ಈ ನಡುವೆ ನಾಳೆಯಿಂದ ಒಂದು ತಿಂಗಳು ಚಾಮರಾಜನಗರದ ಎಲ್ಲಾ ಕ್ವಾರಿಗಳ ಸ್ಥಗಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸೂಚಿಸಿದರು. ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ವೇಳೆ ಸಚಿವರಿಗೆ ಸ್ಥಳೀಯರು ತರಾಟೆ ತೆಗೆದುಕೊಂಡರು. ಸಚಿವರ ಕಾರ್‌ಗೆ ಅಡ್ಡ ಮಲಗಲು ನೋಡಿದ ಆಕ್ರೋಶಿತನೊಬ್ಬನನ್ನು ಪೊಲೀಸರು ಹೊತ್ತೊಯ್ಯಬೇಕಾಯ್ತು.

  • ಅಭಿಮಾನಿ ರವಿ ಆತ್ಮಹತ್ಯೆ ಸುದ್ದಿ ದಿಗ್ಭ್ರಮೆ ತರಿಸಿದೆ – ವಿಜಯೇಂದ್ರ

    ಅಭಿಮಾನಿ ರವಿ ಆತ್ಮಹತ್ಯೆ ಸುದ್ದಿ ದಿಗ್ಭ್ರಮೆ ತರಿಸಿದೆ – ವಿಜಯೇಂದ್ರ

    ಬೆಂಗಳೂರು: ಗುಂಡ್ಲುಪೇಟೆಯ ಬೊಮ್ಮಲಾಪುರದ ರವಿ ಆತ್ಮಹತ್ಯೆಗೆ ಶರಣಾದ ಸುದ್ದಿ ದಿಗ್ಭ್ರಮೆ ತರಿಸಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ತಂದೆ ಯಡಿಯೂರಪ್ಪನವರ ಬಗ್ಗೆ ಇಡೀ ರಾಜ್ಯದ ಜನತೆ ಇಟ್ಟಿರುವ ಪ್ರೀತ್ಯಾದಾರಗಳನ್ನು ನಮ್ಮ ಕುಟುಂಬ ಋಣಿಯಾಗಿ ಸ್ಮರಿಸುತ್ತದೆ ಎಂದು ತಿಳಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಜನನಾಯಕ, ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜೀನಾಮೆಯಿಂದ ಮನನೊಂದು ಗುಂಡ್ಲುಪೇಟೆಯ ಬೊಮ್ಮಲಾಪುರದ ರವಿ ಆತ್ಮಹತ್ಯೆಗೆ ಶರಣಾದ ಸುದ್ದಿ ದಿಗ್ಬ್ರಮೆ ತರಿಸಿದೆ. ಪೂಜ್ಯ ತಂದೆ ಯಡಿಯೂರಪ್ಪನವರ ಬಗ್ಗೆ ಇಡೀ ರಾಜ್ಯದ ಜನತೆ ಇಟ್ಟಿರುವ ಪ್ರೀತ್ಯಾದಾರಗಳನ್ನು ನಮ್ಮ ಕುಟುಂಬ ಋಣಿಯಾಗಿ ಸ್ಮರಿಸುತ್ತದೆ. ಇದನ್ನೂ ಓದಿ : ಬಿಎಸ್‍ವೈ ರಾಜೀನಾಮೆ – ನೇಣಿಗೆ ಶರಣಾದ ಅಭಿಮಾನಿ 

    ಅಭಿಮಾನದ ಹೆಸರಲ್ಲಿ ಜೀವ ಕಳೆದುಕೊಂಡಿದ್ದು ಅತೀವ ಯಾತನೆಯನ್ನುಂಟು ಮಾಡಿದೆ. ರವಿ ಕುಟುಂಬದ ನೋವು, ನಷ್ಟವನ್ನು ನಮ್ಮದೇ ಕುಟುಂಬದ್ದೆಂದು ಭಾವಿಸಿದ್ದೇವೆ. ರವಿ ಆತ್ಮಕ್ಕೆ ಸದ್ಗತಿ ದೊರಕಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ.

    ಅಭಿಮಾನಿಗಳ ಹೃದಯದ ವೇದನೆಯ ಆಳ ನಮಗೆ ಅರ್ಥವಾಗುತ್ತದೆ. ಆದರೆ ದುಡುಕಿನ ನಿರ್ಧಾರಗಳು, ವರ್ತನೆಗಳು ಮಾನ್ಯ ಯಡಿಯೂರಪ್ಪನವರ ವ್ಯಕ್ತಿತ್ವ ಹಾಗೂ ಮನಸ್ಸಿಗೆ ಘಾಸಿಯುಂಟುಮಾಡದಂತಿರಲಿ ಎಂದು ಕಳಕಳಿಯಿಂದ ವಿನಂತಿಸುವೆ.