ನವದೆಹಲಿ: ಸ್ವಾತಂತ್ರ‍್ಯ ದಿನದಿಂದು (Independence day) ಪ್ರಧಾನಿ ನರೇಂದ್ರ ಮೋದಿ (Narendra Modi) ರಾಷ್ಟ್ರಧ್ವಜ ಹಾರಿಸುವುದನ್ನ ತಡೆಯಲು ಬಹುಮಾನ ಘೋಷಿಸಿದ್ದ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ವಿರುದ್ಧ ಎನ್‌ಐಎ (NIA) ಪ್ರಕರಣ ದಾಖಲಿಸಿಕೊಂಡಿದೆ.
ಆಗಸ್ಟ್ 10 ರಂದು ಲಾಹೋರ್‌ನ ಪ್ರೆಸ್ ಕ್ಲಬ್‌ನಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪನ್ನುನ್ ಪ್ರಚೋದನಕಾರಿ ಘೋಷಣೆ ಮಾಡಿದ್ದ. ಆ.15 ಸ್ವಾತಂತ್ರ್ಯ ದಿನದಂದು ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ತ್ರಿವರ್ಣ ಧ್ವಜ ಹಾರಿಸುವುದನ್ನು ತಡೆಯುವ ಸಿಖ್ಖ್ ಸೈನಿಕರಿಗೆ 11 ಕೋಟಿ ರೂ. ಬಹುಮಾನ ಘೋಷಣೆ ಮಾಡಿದ್ದ. ಇದನ್ನೂ ಓದಿ: ತನ್ನ ದೇಶದಲ್ಲೇ ಪಾಕ್ ಏರ್‌ಸ್ಟ್ರೈಕ್‌ಗೆ 30 ಮಂದಿ ಬಲಿ – UNHRC ಸಭೆಯಲ್ಲಿ ಭಾರತ ತೀವ್ರ ಖಂಡನೆ
ಸದ್ಯ ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ಭಾರತದ ವಿರುದ್ಧ ಸಿಖ್ಖರಲ್ಲಿ ಅಸಮಾಧಾನ ಹರಡಿದ್ದಕ್ಕಾಗಿ ಪನ್ನುನ್ ವಿರುದ್ಧ ಎನ್‌ಐಎ ಪ್ರಕರಣ ದಾಖಲಿಸಿದೆ.
ಪನ್ನುನ್ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್‌ನ ಪ್ರಮುಖ ನಾಯಕನಾಗಿದ್ದು, ಈ ಹಿಂದೆ ಏರ್ ಇಂಡಿಯಾ ಪ್ರಯಾಣಿಕರಿಗೆ ಬೆದರಿಕೆ ಹಾಕುವ ವೀಡಿಯೋ ಸಂದೇಶಗಳನ್ನು ಬಿಡುಗಡೆ ಮಾಡಿದ್ದಕ್ಕಾಗಿ ಎನ್‌ಐಎ ಪನ್ನುನ್ ವಿರುದ್ಧ ಪ್ರಕರಣ ದಾಖಲಿಸಿತ್ತು.
ನವದೆಹಲಿ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಸೇರಿದಂತೆ ಹಿಂದೂ ದೇವಾಲಯಗಳನ್ನು (Hindu Temples) ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುವುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (Sikhs for Justice) ಸಂಘಟನೆಯ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ಹಾಕಿದ್ದಾನೆ.
ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಪನ್ನುನ್, ನವೆಂಬರ್ 16 ಮತ್ತು 17 ರಂದು ದಾಳಿಯ ಬಗ್ಗೆ ಎಚ್ಚರಿಸಿದ್ದಾರೆ. ಇದು ಕೆನಡಾದ ಬ್ರಾಂಪ್ಟನ್‌ನಲ್ಲಿ ರೆಕಾರ್ಡ್ ಮಾಡಲಾದ ವೀಡಿಯೊ ಎನ್ನಲಾಗಿದ್ದು, ಹಿಂದೂ ಪೂಜಾ ಸ್ಥಳಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಎಪಿಎಂಸಿ ಹೊರಗೆ ಯುವಕನ ಶವ ಪತ್ತೆ – ಅನೈತಿಕ ಸಂಬಂಧಕ್ಕೆ ಬಲಿಯಾದ ಶಂಕೆ!
ಹಿಂಸಾತ್ಮಕ ಹಿಂದುತ್ವ ಸಿದ್ಧಾಂತದ ಜನ್ಮಸ್ಥಳವಾದ ಅಯೋಧ್ಯೆಯ ಅಡಿಪಾಯವನ್ನು ನಾವು ಅಲುಗಾಡಿಸುತ್ತೇವೆ. ಹಿಂದೂ ದೇವಾಲಯಗಳ ಮೇಲಿನ ಖಲಿಸ್ತಾನಿ ದಾಳಿಯಿಂದ ದೂರವಿರುವಂತೆ ಕೆನಡಾದಲ್ಲಿರುವ ಭಾರತೀಯರಿಗೆ ಪನ್ನುನ್ ಎಚ್ಚರಿಕೆ ನೀಡಿದ್ದಾನೆ. ಕಳೆದ ತಿಂಗಳು, ನವೆಂಬರ್ 1 ಮತ್ತು 19ರ ನಡುವೆ ಏರ್ ಇಂಡಿಯಾ ವಿಮಾನಗಳಲ್ಲಿ ಹಾರಾಟ ಮಾಡದಂತೆ ಪನ್ನುನ್ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದ. ಇದಕ್ಕೂ ಮೊದಲು ಭಾರತೀಯ ರಾಜತಾಂತ್ರಿಕರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದ. ಇದನ್ನೂ ಓದಿ: ಮಹಿಳೆಯರಿಗೆ ಫ್ರೀ ಬಸ್ ಕೊಟ್ಟರು, ಪಾಪ ಪುರುಷರಿಗೆ ಏನ್ ಮಾಡಿದ್ರು? – ಸರ್ಕಾರಕ್ಕೆ ನಟಿ ತಾರಾ ಪ್ರಶ್ನೆ
ಪನ್ನುನ್ ಕೋಮು ಸೌಹಾರ್ದತೆಯನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಹಲವಾರು ವಿವಾದತ್ಮಾಕ ಹೇಳಿಕೆಗಳನ್ನು ನೀಡಿದ್ದಾನೆ. ಜುಲೈ 2020ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA) ಅಡಿಯಲ್ಲಿ ಪನ್ನುನ್‌ನನ್ನು ಭಯೋತ್ಪಾದಕ ಎಂದು ಹೆಸರಿಸಲಾಯಿತು. ಭಾರತ ಸರ್ಕಾರವು ಆತನ ಬಂಧನಕ್ಕೆ ಅನೇಕ ವಾರಂಟ್‌ಗಳನ್ನು ಸಹ ಹೊರಡಿಸಿದೆ. ಆದಾಗ್ಯೂ ಪನ್ನುನ್ ಅಮೆರಿಕ ಮತ್ತು ಕೆನಡಾದಿಂದ ಕಾರ್ಯ ನಿರ್ವಹಿಸುವುದನ್ನು ಮುಂದುವರೆಸಿದ್ದಾನೆ. ಇದನ್ನೂ ಓದಿ: ಐತಿಹಾಸಿಕ ಸೋಮೇಶ್ವರ ದೇವಸ್ಥಾನ ವಕ್ಫ್‌ಗೆ ಪರಭಾರೆ ಆರೋಪ; ವಕ್ಫ್ ಬೋರ್ಡ್, ಸರ್ಕಾರದ ವಿರುದ್ಧ ಪ್ರತಿಭಟನೆ
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ವಿದೇಶಿ ಪ್ರವಾಸದ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ನಿಷೇಧಿತ ಸಜ್ಜು ‘ಸಿಖ್ಸ್ ಫಾರ್ ಜಸ್ಟಿಸ್ (SFJ)’ ಮುಖ್ಯಸ್ಥ ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಘೋಷಿಸಿದ್ದಾನೆ.
ಸಿಖ್ಖರ ಕಾನೂನುಬಾಹಿರ ಹತ್ಯೆಗಳಿಗೆ ಸಿಆರ್‌ಪಿಎಫ್ ಅಧಿಕಾರಿಗಳು, ಕೆಪಿಎಸ್ ಗಿಲ್‌ನಿಂದ ಹಿಡಿದು ವಿಕಾಶ್ ಯಾದವ್ ಕಾರಣರಾಗಿದ್ದಾರೆ. ಇದು ಮೊದಲು ಪಂಜಾಬ್‌ನಲ್ಲಿ ಸಂಭವಿಸಿತ್ತು, ಈಗ ವಿದೇಶಗಳಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾನೆ.
ಅ.20 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ CRPF ಶಾಲೆಯ ಬಳಿ ನಿಗೂಢ ಸ್ಫೋಟ ಸಂಭವಿಸಿದ ನಂತರ ಪನ್ನುನ್ ಕರೆ ಬಂದಿದೆ. ಇದು ಭದ್ರತಾ ಎಚ್ಚರಿಕೆಯನ್ನು ಹುಟ್ಟುಹಾಕಿದೆ. ಕಚ್ಚಾ ಬಾಂಬ್‌ನಿಂದ ಸ್ಫೋಟ ಮಾಡಲಾಗಿತ್ತು. ಶಾಲೆಯ ಗೋಡೆಗೆ ಭಾಗಶಃ ಹಾನಿಯಾಗಿದ್ದು, ಹತ್ತಿರದಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿಯಾಗಿದ್ದವು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಇದನ್ನೂ ಓದಿ: ಸಾರ್ವಜನಿಕ-ಖಾಸಗಿ ಭದ್ರತಾ ಸಹಕಾರಕ್ಕೆ ಉತ್ತೇಜನ – OSAC ಇಂಡಿಯಾದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟನೆ
ಒಟ್ಟಾವಾ: ಬಾಂಬ್ ಇಟ್ಟಿರುವುದಾಗಿ ಭಾರತದ ವಿವಿಧ ವಿಮಾನಗಳಿಗೆ ಬೆದರಿಕೆ ಕರೆ ಬರುತ್ತಿರುವ ಸಂದರ್ಭದಲ್ಲೇ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು (Gurpatwant Singh Pannun) ಹೊಸ ಬೆದರಿಕೆಯೊಂದನ್ನ ಹಾಕಿದ್ದಾರೆ. ನವೆಂಬರ್ 1ರಿಂದ 19ರ ವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಯೋಗೇಶ್ವರ್ ಗುಡ್‌ಬೈ – ಕಾಂಗ್ರೆಸ್‌ನಿಂದ ಕೊನೆ ಕ್ಷಣದ ಕಸರತ್ತು ಆರಂಭ
ಸಿಖ್ ಹತ್ಯಾಕಾಂಡಕ್ಕೆ 40 ವರ್ಷ ಪೂರ್ಣಗೊಳ್ಳುವ ನಿರ್ದಿಷ್ಟ ದಿನಾಂಕದಂದು ಏರ್ ಇಂಡಿಯಾ ವಿಮಾನದ ಮೇಲೆ ದಾಳಿ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ ಎಂಬುದಾಗಿ ವರದಿಯಾಗಿದೆ. ಕನಡಾ ಮತ್ತು ಅಮೆರಿಕದ ದ್ವೀಪೌರತ್ವ ಹೊಂದಿರುವ ಸಿಖ್ ಫಾರ್ ಜಸ್ಟೀಸ್ (SFJ) ಸಂಸ್ಥಾಪಕ ಪನ್ನು, ಕಳೆದ ವರ್ಷ ಸಹ ಇದೇ ಅವಧಿಯಲ್ಲಿ ಬೆದರಿಕೆ ಒಡ್ಡಿದರು.
ನಿಜ್ಜರ್ ಹತ್ಯೆ ಸೇರಿದಂತೆ ಕೆನಡಾದಲ್ಲಿರುವ ಖಲಿಸ್ತಾನ ಹೋರಾಟಗಾರರನ್ನು ಭಾರತ ಗುರಿಯಾಗಿಸಿಕೊಂಡಿದೆ ಎಂದು ಕೆನಡಾ ಆರೋಪಿಸುತ್ತಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಸಂಘರ್ಷ ನಡೆಯುತ್ತಿದೆ. 2023ರ ನವೆಂಬರ್‌ನಲ್ಲೂ ಇದೇ ರೀತಿಯ ಬೆದರಿಕೆ ಒಡ್ಡಿದ್ದ ಪನ್ನು, ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಹೆಸರು ಬದಲಿಸಲಾಗುವುದು. ನವೆಂಬರ್ 19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಈತನ ವಿರುದ್ಧ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿದೆ. ಡಿಸೆಂಬರ್ 13ರಂದು ಅಥವಾ ಅದಕ್ಕೂ ಮುನ್ನ ಸಂಸತ್ ಭವನವನ್ನು ಸ್ಫೋಟಿಸುವುದಾಗಿ ಕಳೆದ ವರ್ಷ ಬೆದರಿಕೆ ಹಾಕಿದ್ದರು.ಇದನ್ನೂ ಓದಿ: ವಿಪತ್ತು ತಡೆಯಲು ವಯನಾಡಿನಲ್ಲಿ X ಬ್ಯಾಂಡ್ ರೇಡಾರ್ ಅಳವಡಿಕೆ – ರೇಡಾರ್ ವಿಶೇಷತೆಯೇನು?
ವಾಷಿಂಗ್ಟನ್: ಪ್ರತ್ಯೇಕತಾವಾದಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು (Gurpatwant Singh Pannun) ಹತ್ಯೆಗೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಭಾರತದ ನಿವೃತ್ತ ಗುಪ್ತಚರ ಅಧಿಕಾರಿಯೊಬ್ಬರನ್ನ (RAW Officer) ಮೋಸ್ಟ್ ವಾಂಟೆಡ್ ಎಂದು ಅಮೆರಿಕದ ಎಫ್‌ಬಿಐ (FBI) ಆಪಾದಿಸಿದೆ.
ಈ ಪ್ರಕರಣದಲ್ಲಿ ಭಾರತದ ನಿವೃತ್ತ ʻರಾʼ ಅಧಿಕಾರಿ ವಿಕಾಸ್ ಯಾದವ್‌ನನ್ನ (39) ಮೋಸ್ಟ್ ವಾಂಟೆಡ್ (Most Wanted) ಎಂದು ಹೆಸರಿಸಿದೆ. ಅಲ್ಲದೇ ವಿಕಾಸ್ ಯಾದವ್‌ನ ಮೂರು ಚಿತ್ರಗಳನ್ನ ಮೋಸ್ಟ್ ವಾಂಟೆಡ್ ಎನ್ನುವ ಪೋಸ್ಟರ್ ಸಹ ಬಿಡುಗಡೆ ಮಾಡಿದ್ದು, ಇದೇ ತಿಂಗಳ ಅಕ್ಟೋಬರ್ 10 ರಂದು ಬಂಧನದ ವಾರಂಟ್ ಜಾರಿಗೊಳಿಸಿದೆ.
ಅಮೆರಿಕ (USA) ಹಾಗೂ ಕೆನಡಾದ ದ್ವಿಪೌರತ್ವ ಹೊಂದಿರುವ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆ ಮಾಡಲು ಈ ನಿವೃತ್ತ ಅಧಿಕಾರಿ ಹಣ ನೀಡಿ ಹಂತಕರನ್ನು ನಿಯೋಜಿಸಿದ್ದರು ಎಂದು ಎಫ್‌ಬಿಐ ಆಪಾದಿಸಿದೆ. ಜೊತೆಗೆ ವಿಕಾಸ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನೂ ದಾಖಲು ಮಾಡಿದೆ. ಈ ಕುರಿತು ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟೀಸ್ (DOJ) ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಕ್ರಿಮಿನಲ್ ಆರೋಪಗಳನ್ನು ಪ್ರಕಟಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಎಫ್‌ಬಿಐ ನಿರ್ದೇಶಕ ಕ್ರಿಸ್ಟೋಫರ್ ವ್ರೇ (Christopher Wray) ಅವರು, ಅಮೆರಿಕ ನೆಲದಲ್ಲಿ ಈ ರೀತಿಯ ಕೃತ್ಯ ಎಸಗುವ ಪ್ರಯತ್ನವನ್ನ ಎಫ್‌ಬಿಐ ಸಹಿಸೋದಿಲ್ಲ ಎಂದಿದ್ದಾರೆ. ನಮ್ಮ ಪ್ರಜೆಗಳಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಲು ನಾವು ಸರ್ವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಅಮೆರಿಕ ಎಫ್‌ಬಿಐ ಆಪಾದನೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದು, ವಿಕಾಸ್ ಯಾದವ್ ಎಂಬವರು ಭಾರತ ಸರ್ಕಾರದ ಉದ್ಯೋಗಿಯಲ್ಲ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಮುಖ್ಯಸ್ಥನ ಕೊನೆ ಕ್ಷಣಗಳ ಡ್ರೋನ್ ದೃಶ್ಯ ಬಿಡುಗಡೆ ಮಾಡಿದ ಇಸ್ರೇಲ್
ಏನಿದು ಪ್ರಕರಣ?
ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ನೆಲೆಸಿರುವ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಕಳೆದ ವರ್ಷ ಯತ್ನ ನಡೆದಿತ್ತು. ಈ ಪ್ರಕರಣದಲ್ಲಿ ಭಾರತ ಸರ್ಕಾರದ ನಿವೃತ್ತ ರಾ ಉದ್ಯೋಗಿಯನ್ನು ವಿಕಾಸ್‌ನನ್ನ ಸಿಸಿ-1 (ಸಹ ಸಂಚುಕೋರ) ಆರೋಪಿ ಎಂದು ಹೆಸರಿಸಲಾಗಿದೆ.
18 ಪುಟಗಳ ದೋಷಾರೋಪ ಪಟ್ಟಿಯಲ್ಲಿ ಹಲವು ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನ್ಯೂಯಾರ್ಕ್‌ನಲ್ಲಿ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಡಾಲರ್‌ಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವ ಚಿತ್ರವನ್ನೂ ಸಹ ನಮೂದಿಸಲಾಗಿದೆ. ಇದು ಆರೋಪಿ ನಿಖಿಲ್ ಗುಪ್ತಾ ಮತ್ತು ವಿಕಾಸ್ ಯಾದವ್ ಅವರ ಪರವಾಗಿ ಕೊಲೆಗಾರನಿಗೆ ಹತ್ಯೆ ಮಾಡಲು ವ್ಯಕ್ತಿಯೊಬ್ಬರು ಪಾವತಿಸುತ್ತಿದ್ದಾರೆ ಎಂದು ಫೆಡರಲ್ ಪ್ರಾಸಿಕ್ಯೂಟರ್‌ಗಳು ಹೇಳಿದ್ದಾರೆ. ಇದನ್ನೂ ಓದಿ: ಹಮಾಸ್ ಈ ಕೆಲಸ ಮಾಡಿದ್ರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ – ಇಸ್ರೇಲ್ ಪ್ರಧಾನಿ ಎಚ್ಚರಿಕೆ
ನವದೆಹಲಿ: ಖಲಿಸ್ತಾನಿ ಉಗ್ರ (Khalistani) ಗುರುಪಂತ್‍ವಂತ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ ಅಮೆರಿಕ ನ್ಯಾಯಾಲಯವು (United States Court) ಭಾರತ ಸರ್ಕಾರಕ್ಕೆ ಸಮನ್ಸ್ ನೀಡಿದ ವಿಚಾರಕ್ಕೆ, ಈ ಆರೋಪ ಅನಗತ್ಯ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿಕೆಯಲ್ಲಿ, ನಾವು ಮೊದಲೇ ಹೇಳಿದಂತೆ, ಇವು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರ ರಹಿತ ಆರೋಪಗಳಾಗಿವೆ. ಈ ಆರೋಪದ ಮೇಲೆ ನಮ್ಮ ದೃಷ್ಟಿಕೋನವನ್ನು ಬದಲಾಯಿಸುವುದಿಲ್ಲ. ಈ ನಿರ್ದಿಷ್ಟ ಪ್ರಕರಣದ ಹಿಂದಿರುವ ವ್ಯಕ್ತಿಯ ಪೂರ್ವಾಪರಗಳು ಚೆನ್ನಾಗಿ ತಿಳಿದಿವೆ ಎಂದು ಹೇಳಿದ್ದಾರೆ.
1967 ರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ, ದೇಶವಿರೋಧಿ ಮತ್ತು ಅದರಲ್ಲಿ ತೊಡಗಿರುವ ಪನ್ನುನ್ ಪ್ರತಿನಿಧಿಸುವ ಸಂಸ್ಥೆಯನ್ನು ಕಾನೂನುಬಾಹಿರ ಸಂಸ್ಥೆ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಯಾರ್ಕ್‍ನ ಸದರ್ನ್ನ ಜಿಲ್ಲಾ ನ್ಯಾಯಾಲಯವು ಸಮನ್ಸ್‌ನಲ್ಲಿ ಭಾರತ ಸರ್ಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval), ಭಾರತದ ಗುಪ್ತಚರ ಸಂಸ್ಥೆಯ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್, ಏಜೆಂಟ್ ವಿಕ್ರಮ್ ಯಾದವ್ ಮತ್ತು ಭಾರತೀಯ ಉದ್ಯಮಿ ನಿಖಿಲ್ ಗುಪ್ತಾ ಅವರನ್ನು ಹೆಸರಿಸಿತ್ತು. ಅಲ್ಲದೇ ಸಮನ್ಸ್‍ನಲ್ಲಿ ಹೆಸರಿಸಿದವರು 21 ದಿನಗಳಲ್ಲಿ ಉತ್ತರಿಸುವಂತೆ ನ್ಯಾಯಾಲಯ ಸೂಚಿಸಿತ್ತು.
ನ್ಯೂಯಾರ್ಕ್‍ನಲ್ಲಿ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಅಮೆರಿಕ ಸರ್ಕಾರದ ಕೋರಿಕೆಯ ಮೇರೆಗೆ ನಿಖಿಲ್ ಗುಪ್ತಾ ಅವರನ್ನು ಕಳೆದ ವರ್ಷ ಜೆಕ್ ರಿಪಬ್ಲಿಕ್‍ನಲ್ಲಿ ಬಂಧಿಸಲಾಗಿತ್ತು. ಈ ವರ್ಷದ ಜೂನ್‍ನಲ್ಲಿ ಅವರನ್ನು ಜೆಕ್ ಗಣರಾಜ್ಯದಿಂದ ಯುಎಸ್‍ಗೆ ಹಸ್ತಾಂತರಿಸಲಾಯಿತು.
ಮೂಲಭೂತ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್‍ನ ಮುಖ್ಯಸ್ಥ ಮತ್ತು ಅಮೆರಿಕ ಮತ್ತು ಕೆನಡಾದ ದ್ವಿ ಪೌರತ್ವವನ್ನು ಹೊಂದಿರುವ ಪನ್ನುನ್‍ನನು ಕೊಲ್ಲುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ನವೆಂಬರ್‌ನಲ್ಲಿ ಪತ್ರಿಕೆಯೊಂದು ವರದಿ ಮಾಡಿತ್ತು. ಬಳಿಕ ಅಮೆರಿಕದ ಅಧಿಕಾರಿಗಳು ಇದನ್ನು ದೃಢಪಡಿಸಿದ್ದರು.
ಇದರ ಬೆನ್ನಲ್ಲೇ, ಈ ವಿಚಾರವಾಗಿ ವಿದೇಶಾಂಗ ಸಚಿವಾಲಯ ಇದು ಕಳವಳಕಾರಿ ವಿಷಯ ಎಂದು ಹೇಳಿತ್ತು. ಅಲ್ಲದೇ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಅವರು ಭಾರತವು ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ. ಆದರೆ ಇದು ಭಾರತ-ಅಮೆರಿಕದ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಒತ್ತಿ ಹೇಳಿದ್ದರು.
ಪನ್ನುನ್ ಭಾರತೀಯ ನಾಯಕರ ವಿರುದ್ಧ ದ್ವೇಷ ಭಾಷಣ ಮತ್ತು ಹಲವಾರು ಬೆದರಿಕೆಗಳನ್ನು ಹಾಕಿದ್ದಾನೆ. ಕೇಂದ್ರ ಸರ್ಕಾರ 2020ರಲ್ಲಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿತ್ತು.
ವಾಷಿಂಗ್ಟನ್: ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಹೂಡಿರುವ ಸಿವಿಲ್ ಮೊಕದ್ದಮೆ ಹಿನ್ನೆಲೆಯಲ್ಲಿ ಅಮೆರಿಕ ಕೋರ್ಟ್ (United States Court) ಭಾರತ ಸರ್ಕಾರಕ್ಕೆ (Indian Government ) ಸಮನ್ಸ್ (Summons) ಜಾರಿ ಮಾಡಿದೆ.
ನ್ಯೂಯಾರ್ಕ್‍ನ ಸದರ್ನ್ನ ಜಿಲ್ಲಾ ನ್ಯಾಯಾಲಯದ ಸಮನ್ಸ್‌ನಲ್ಲಿ ಭಾರತ ಸರ್ಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval), ಭಾರತದ ಗುಪ್ತಚರ ಸಂಸ್ಥೆಯ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್, ಏಜೆಂಟ್ ವಿಕ್ರಮ್ ಯಾದವ್ ಮತ್ತು ಭಾರತೀಯ ಉದ್ಯಮಿ ನಿಖಿಲ್ ಗುಪ್ತಾ ಅವರನ್ನು ಹೆಸರಿಸಲಾಗಿದೆ. ಸಮನ್ಸ್‌ನಲ್ಲಿ ಹೆಸರಿಸಿದವರು 21 ದಿನಗಳಲ್ಲಿ ಉತ್ತರಿಸುವಂತೆ ನ್ಯಾಯಾಲಯ ಸೂಚಿಸಿದೆ.
ಸಮನ್ಸ್‌ಗೆ ಭಾರತ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಸಮನ್ಸ್‌ನ ಪ್ರತಿಯನ್ನು ಹಂಚಿಕೊಂಡ ಪನ್ನು ಅವರ ಎಕ್ಸ್ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ. ಅಲ್ಲದೇ ಈ ವಿಷಯವು ಭಾರತ-ಯುಎಸ್ ಬಾಂಧವ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೂಲಭೂತ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್‍ನ ಮುಖ್ಯಸ್ಥ ಮತ್ತು ಅಮೆರಿಕ ಮತ್ತು ಕೆನಡಾದ ದ್ವಿ ಪೌರತ್ವವನ್ನು ಹೊಂದಿರುವ ಪನ್ನುನ್‍ನನು ಕೊಲ್ಲುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ನವೆಂಬರ್‌ನಲ್ಲಿ ಪತ್ರಿಕೆಯೊಂದು ವರದಿ ಮಾಡಿತ್ತು. ಬಳಿಕ ಅಮೆರಿಕದ ಅಧಿಕಾರಿಗಳು ಇದನ್ನು ದೃಢಪಡಿಸಿದ್ದರು.
ಇದರ ಬೆನ್ನಲ್ಲೇ, ಈ ವಿಚಾರವಾಗಿ ವಿದೇಶಾಂಗ ಸಚಿವಾಲಯ ಇದು ಕಳವಳಕಾರಿ ವಿಷಯ ಎಂದು ಹೇಳಿತ್ತು. ಅಲ್ಲದೇ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಅವರು ಭಾರತವು ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ. ಆದರೆ ಇದು ಭಾರತ-ಅಮೆರಿಕದ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಒತ್ತಿ ಹೇಳಿದ್ದರು.
ಪನ್ನುನ್ ಭಾರತೀಯ ನಾಯಕರ ವಿರುದ್ಧ ದ್ವೇಷ ಭಾಷಣ ಮತ್ತು ಹಲವಾರು ಬೆದರಿಕೆಗಳನ್ನು ಹಾಕಿದ್ದಾನೆ. ಕೇಂದ್ರ ಸರ್ಕಾರ 2020ರಲ್ಲಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿತು.
ನವದೆಹಲಿ: ಭಾರತ ಸರ್ಕಾರ ನಿಷೇಧಿಸಿದ ಖಲಿಸ್ತಾನಿ ಪರ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ರಾಹುಲ್ ಗಾಂಧಿ (Rahul Gandhi) ಹೇಳಿಕೆಯನ್ನು ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ್ ರಾಷ್ಟ್ರ (Khalistan Nation) ಬೇಡಿಕೆಯನ್ನು ಮತ್ತೊಮ್ಮೆ ಮುಂದಿಟ್ಟಿದ್ದಾನೆ.
ವಾಷಿಂಗ್ಟನ್‌ನಲ್ಲಿರುವ ಗುರುಪತ್‌ವಂತ್ ಸಿಂಗ್ ಪನ್ನುನ್ ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾನೆ.
ಹೇಳಿಕೆಯಲ್ಲಿ ಏನಿದೆ?
ಅನೇಕ ಖಲಿಸ್ತಾನ್ ಪರ ಸಿಖ್ಖರು ಹಾಜರಿದ್ದ ವಾಷಿಂಗ್ಟನ್ ಡಿಸಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು SFJ ಯ ಜಾಗತಿಕ ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹ ಅಭಿಯಾನವನ್ನು ಸಮರ್ಥಿಸಿಕೊಂಡಿದ್ದಾರೆ. ಭಾರತದಲ್ಲಿ ಸಿಖ್ಖರಿಗೆ ಪೇಟ, ಕಡವನ್ನು ಧರಿಸಿ ಗುರುದ್ವಾರಕ್ಕೆ ಹೋಗುವುದಕ್ಕೆ ಅನುಮತಿ ನೀಡಲಾಗುತ್ತದೆಯೇ ಎಂಬುದರ ಬಗ್ಗೆ ಯೋಚಿಸಬೇಕಿದೆ ಎಂದು ಹೇಳಿದ್ದಾರೆ.
ಭರತದ ಸಿಖ್ಬರ್ ಬಗ್ಗೆ ರಾಹುಲ್ ಆಡಿರುವ ಮಾತು ದಿಟ್ಟತನದಿಂದ ಕೂಡಿರುವುದು ಮಾತ್ರವಲ್ಲ 1947 ರಿಂದ ಭಾರತದಲ್ಲಿ ಸಿಖ್ಖರು ಎದುರಿಸುತ್ತಿರುವ ವಾಸ್ತವಿಕ ಇತಿಹಾಸದಲ್ಲಿ ಎದುರಿಸುತ್ತಿರವ ಸಮಸ್ಯೆಯನ್ನು ತಿಳಿಸಿದೆ. ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆ ಸಿಖ್ಖರ ತಾಯ್ನಾಡಾಗಿ ಖಲಿಸ್ತಾನ ಪ್ರತ್ಯೇಕ ರಾಷ್ಟ್ರ ಸ್ಥಾಪಿಸಬೇಕೆಂಬ ಪಂಜಾಬ್ ಸ್ವಾತಂತ್ರ್ಯದ ಜನಾಭಿಪ್ರಾಯ ಸಂಗ್ರಹಣೆಯ ಸಮರ್ಥನೆಯನ್ನು ದೃಢೀಕರಿಸುತ್ತದೆ ಎಂದು ಹೇಳಿದ್ದಾನೆ. ಇದನ್ನೂ ಓದಿ: ರಾಹುಲ್ ಗಾಂಧಿಯನ್ನು ಕೋರ್ಟ್‌ಗೆಳೆಯುತ್ತೇವೆ; ಸಿಖ್ ಸಮುದಾಯದ ಬಗ್ಗೆ ಹೇಳಿಕೆಗೆ ಎಚ್ಚರಿಕೆ ನೀಡಿ ಕೇಂದ್ರ ಸಚಿವ ಪುರಿ
ರಾಹುಲ್ ಹೇಳಿದ್ದೇನು?
ಸಿಖ್ಖರು (Sikhs) ಟರ್ಬನ್, ಖಡಗ ಧರಿಸುವುದಕ್ಕೆ ಹೆದರುವಂತಾಗಿದೆ. ಇದು ಒಬ್ಬ ವ್ಯಕ್ತಿ ಮತ್ತು ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲಾ ಧರ್ಮಗಳಲ್ಲೂ ಇಂತಹ ಸ್ಥಿತಿ ಇದೆ. ಸ್ವಾತಂತ್ರ್ಯಾನಂತರದ ಇತಿಹಾಸದಲ್ಲಿ, ಸಿಖ್ ಸಮುದಾಯದ ಮೇಲೆ ಹತ್ಯಾಕಾಂಡ ನಡೆದ ಸಂದರ್ಭವಿತ್ತು. ಆಗ 3,000 ಅಮಾಯಕ ಸಿಖ್ಖರನ್ನು ಕೊಲ್ಲಲಾಯಿತು. ಆ ಸಂದರ್ಭದಲ್ಲಿ ನನ್ನ ಕೆಲವು ಸಹೋದರರು ಪೇಟ ಧರಿಸುವುದನ್ನೇ ಬಿಟ್ಟರು ಎಂದು ರಾಹುಲ್ ಹೇಳಿದ್ದರು.
This is unprecedented. Sikhs For Justice, the banned Khalistan terror group, has backed Rahul Gandhi’s mis-informed comments on the Sikh community, in the US.
After Ilhan Omar, this is yet another instance of Congress in cahoots with anti-India forces.
ಗುರುಪತ್‌ವಂತ್ ಸಿಂಗ್ ಪುನ್ನುನ್ ಹೇಳಿಕೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಹುಲ್ ಗಾಂಧಿಯನ್ನು ಟೀಕಿಸಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ನಿಜಕ್ಕೂ ಭಾರತದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರು ಭಾರತದ ಸಾಮಾಜಿಕ ರಚನೆಯನ್ನು ನಾಶಮಾಡಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕ ಮೂಲದ ಸಿಖ್ ಫಾರಿ ಜಸ್ಟಿಸ್‌ನ (ಎಸ್‌ಎಫ್‌ಜೆ) ಮುಖ್ಯಸ್ಥನಾಗಿದ್ದಾನೆ. ಮಾತ್ರವಲ್ಲದೇ ಭಾರತೀಯ ತನಿಖಾ ಸಂಸ್ಥೆಗಳಿಗೆ ಮೋಸ್ಟ್ ವಾಂಟೆಡ್ ವ್ಯಕ್ತಿಯಾಗಿದ್ದಾನೆ.
ವಾಷಿಂಗ್ಟನ್: ಭಾರತ, ಅಮೆರಿಕ ಕಾರ್ಯತಂತ್ರದ ಪಾಲುದಾರ ಹಾಗೂ ಅಮೆರಿಕದ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂ (Gurpatwant Singh Pannun) ಹತ್ಯೆ ಮಾಡುವ ಸಂಚು ರೂಪಿಸಿದವರನ್ನು ನೇರ ಹೊಣೆಗಾರರನ್ನಾಗಿ ಮಾಡುವಂತೆ ಶ್ವೇತಭವನವು ನವದೆಹಲಿಯನ್ನು ಒತ್ತಾಯಿಸಿದೆ.
ಈ ಸಂಬಂಧ ಶ್ವೇತಭವನದ (White House) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ (John Kirby), ಭಾರತವು ಒಂದು ಕಾರ್ಯತಂತ್ರದ ಪಾಲುದಾರ. ನಾವು ಆ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಳಗೊಳಿಸುತ್ತಿದ್ದೇವೆ. ಭಾರತ- ಅಮೆರಿಕ (India- America) ಕ್ವಾಡ್ ಸದಸ್ಯ ರಾಷ್ಟ್ರಗಳಾಗಿವೆ. ಈ ಎರಡೂ ರಾಷ್ಟ್ರಗಳು ಅನೇಕ ಸಮಸ್ಯೆಗಳ ಕುರಿತು ಮಾತುಕತೆ ನಡೆಸುತ್ತಿವೆ. ಅದು ನಿರಂತರವಾಗಿ ಮುಂದುವರಿಯುವುದನ್ನು ನಾವು ನೋಡಲು ಬಯಸುತ್ತೇವೆ. ಇದೇ ಸಮಯದಲ್ಲಿ ಈ ಆರೋಪಗಳ ಗಂಭೀರತೆಯನ್ನು ನಾವು ಖಂಡಿತವಾಗಿ ಗುರುತಿಸುತ್ತೇವೆ ಎಂದು ತಿಳಿಸಿದರು.
ಇದೇ ವೇಳೆ ಈ ಆರೋಪ ಎರಡೂ ರಾಷ್ಟ್ರಗಳ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಿರ್ಬಿ, ನಾವು ಅದನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕೆಂದು ಬಯಸುತ್ತೇವೆ. ಅಲ್ಲದೆ ಪ್ರಕರಣದ ಹಿಂದೆ ಯಾರಿದ್ದಾರೋ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದರು. ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಭಾರತ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದು ಸಂತಸದ ವಿಷಯವಾಗಿದೆ. ಹೀಗಾಗಿ ತನಿಖೆ ಪೂರ್ಣಗೊಳ್ಳದೇ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಕಿರ್ಬಿ ತಿಳಿಸಿದರು.
ಕಳೆದ ಜೂನ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಭೇಟಿಯ ನಂತರ ಘೋಷಿತ ಖಲಿಸ್ತಾನಿ ಉಗ್ರ ಹಾಗೂ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್‍ನ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಗೆ ರೂಪಿಸಿದ್ದ ಸಂಚನ್ನು ಭೇದಿಸಲಾಯಿತು.
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ (Khalistan Terrorists) ಗುರ್ಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ (Parliament) ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿರುವ ವೀಡಿಯೋವನ್ನು ಬಿಡುಗಡೆ ಮಾಡಿದ್ದಾನೆ.
ಪನ್ನುನ್ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ 2001ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಕಂಡುಬಂದಿದೆ. ಅದರಲ್ಲಿ ‘ದೆಹಲಿ ಬನೇಗಾ ಖಲಿಸ್ತಾನ್’ (ದೆಹಲಿ ಖಲಿಸ್ತಾನ್ ಆಗಿ ಬದಲಾಗುತ್ತದೆ) ಎಂಬ ಶೀರ್ಷಿಯನ್ನೂ ನೀಡಲಾಗಿದೆ. ವೀಡಿಯೋದಲ್ಲಿ ಪನ್ನುನ್, ಭಾರತ ತನ್ನನ್ನು ಕೊಲ್ಲಲು ನಡೆಸಿದ ಸಂಚು ವಿಫಲವಾಗಿದೆ. ಅಲ್ಲದೇ ಭಯೋತ್ಪಾದಕರು ಸಂಸತ್ತಿನ ಮೇಲೆ ದಾಳಿ ನಡೆಸಿ ಡಿಸೆಂಬರ್ 13ಕ್ಕೆ 22 ವರ್ಷಗಳಾಗುತ್ತದೆ. ಇದೇ ದಿನ ಸಂಸತ್ತಿನ ಮೇಲೆ ದಾಳಿ ನಡೆಸಲಾಗುವುದು. ಇಲ್ಲವೇ ಅದಕ್ಕೂ ಮೊದಲೇ ದಾಳಿ ನಡೆಸುವುದಾಗಿ ಹೇಳಿಕೆ ನೀಡಿದ್ದಾನೆ.
ಮೂಲಗಳ ಪ್ರಕಾರ, ಭದ್ರತಾ ಏಜೆನ್ಸಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ನ ಕೆ-2 (ಕಾಶ್ಮೀರ-ಖಾಲಿಸ್ತಾನ್) ಭಾರತ ವಿರೋಧಿ ನಿರೂಪಣೆಯನ್ನು ಪ್ರಚಾರ ಮಾಡುವ ತಮ್ಮ ಕಾರ್ಯಸೂಚಿಯನ್ನು ಮುಂದುವರಿಸಲು ಪನ್ನುನ್‌ಗೆ ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದೆ.