Tag: Guru Purnima

  • ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ

    ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ

    ಮುಂಬೈ: ಗುರುಪೂರ್ಣಿಮೆ ಸಂದರ್ಭದಲ್ಲೇ ಶಿರಡಿಯ ಸಾಯಿಬಾಬಾ ದೇವಸ್ಥಾನಕ್ಕೆ (Shiradi Sai Baba Temple) ಅನಾಮಧೇಯ ಭಕ್ತರೊಬ್ಬರು 59 ಲಕ್ಷದ ಚಿನ್ನದ ಕಿರೀಟ (Gold Crown) ಸೇರಿ 65 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದಾನವಾಗಿ ನೀಡಿದ್ದು, ಬಾಬಾ ಕೃಪೆಗೆ ಪಾತ್ರರಾಗಿದ್ದಾರೆ.

    ದೇಣಿಗೆ ನೀಡಲಾದ 65 ಲಕ್ಷರೂ. ಮೌಲ್ಯದ ಆರಭರಣಗಳ ಪೈಕಿ 566 ಗ್ರಾಂ ತೂಕದ 59 ಲಕ್ಷ ಮೌಲ್ಯದ ಚಿನ್ನದ ಕಿರೀಟ, 54 ಗ್ರಾಂ ತೂಕದ ಚಿನ್ನದ ಹೂವುಗಳು (ಆಭರಣ), 2 ಕೆಜಿ ತೂಕದ ಬೆಳ್ಳಿಯ ಹಾರ ಸೇರಿವೆ. ಆಭರಣವನ್ನು ಬಾಬಾಗೆ ಅರ್ಪಿಸುವಾಗ ಭಕ್ತರು ತಮ್ಮ ಹೆಸರು ಅಥವಾ ವಿಳಾಸವನ್ನ ಬಹಿರಂಗಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ

    ಭಕ್ತರು ಕಾಣಿಕೆ ನೀಡಿರುವ ಬಗ್ಗೆ ಮಾತನಾಡಿರುವ ಶಿರಡಿ ಸಾಯಿ ಟ್ರಸ್ಟ್‌ನ ಸಿಇಒ ಗೋರಕ್ಷ ಗಾಡಿಲ್ಕರ್, ಇದು ಕೇವಲ ಹಣಕಾಸಿನ ದೃಷ್ಟಿಯಿಂದ ಅಮೂಲ್ಯವಾದ ದೇಣಿಗೆಯಾಗಿರದೇ, ಆಳವಾದ ಭಕ್ತಿ ಮತ್ತು ಭಕ್ತಿಯ ಸಂಕೇತವೂ ಆಗಿದೆ. ಜೊತೆಗೆ ಸಾಯಿ ಬಾಬಾ ಭಕ್ತನ ಹೃದಯದಿಂದ ಮೂಡಿದ ಭಕ್ತಿ ಮತ್ತು ಕೃತಜ್ಞತೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: 3ನೇ ಆಷಾಢ ಸಂಭ್ರಮ; ಗಜ ಲಕ್ಷ್ಮಿ, ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ ತಾಯಿ

    ಶಿರಡಿ ಸಾಯಿಬಾಬಾ ದೇವಾಲಯದಲ್ಲಿ 1908 ರಿಂದಲೂ ಗುರು ಪೂರ್ಣಿಮೆ (Guru Purnima) ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ದೇಶಾದ್ಯಂತ ಹಾಗೂ ವಿದೇಶಿ ಭಕ್ತರಿಂದ ಹತ್ತಾರು ಕೊಡುಗೆಗಳು ದೇವಸ್ಥಾನಕ್ಕೆ ಹರಿದು ಬರುತ್ತದೆ. ಈ ಬಾರಿ 61 ದೇಶಗಳಿಂದ ವಿದೇಶಿಯರು ಪ್ರಾರ್ಥನೆ ಸಲ್ಲಿಸಲು ಬಂದಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್‌ನಲ್ಲಿ ಕೆಲಸ ಗಿಟ್ಟಿಸಿಕೊಂಡ ಕನ್ನಡತಿ

    ವ್ಯಾಸ ಪೂರ್ಣಿಮೆ ಎಂದೂ ಕರೆಯಲ್ಪಡುವ ಗುರು ಪೂರ್ಣಿಮೆಯನ್ನು ಭಾರತ, ನೇಪಾಳ, ಭೂತಾನ್ ಮತ್ತು ಇತರ ಹಲವು ದೇಶಗಳಲ್ಲಿ ಹಿಂದೂ, ಬೌದ್ಧ ಮತ್ತು ಜೈನ ಸಮುದಾಯಗಳಲ್ಲಿ ಆಚರಿಸಲಾಗುತ್ತದೆ. ಇದು ಮಹರ್ಷಿ ವೇದ ವ್ಯಾಸರ ಜನ್ಮವನ್ನು ಸ್ಮರಿಸುತ್ತದೆ.

  • ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ – ಅದ್ದೂರಿಯಾಗಿ ನಡೆದ ಮೃತ್ತಿಕಾ ಸಂಗ್ರಹ ಮಹೋತ್ಸವ

    ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ – ಅದ್ದೂರಿಯಾಗಿ ನಡೆದ ಮೃತ್ತಿಕಾ ಸಂಗ್ರಹ ಮಹೋತ್ಸವ

    ರಾಯಚೂರು: ಗುರುಪೂರ್ಣಿಮೆ ಹಿನ್ನೆಲೆ ರಾಯರ ಸನ್ನಿಧಿ ಮಂತ್ರಾಲಯ (Mantralaya) ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮೃತ್ತಿಕಾ ಸಂಗ್ರಹ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

    ಮೆರವಣಿಗೆ ಮೂಲಕ ತುಳಸಿ ವನಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆಗಳನ್ನ ಸಲ್ಲಿಸಿ ಮೃತ್ತಿಕಾ ಸಂಗ್ರಹಿಸಿದರು. ಬಳಿಕ ಸುವರ್ಣ ಪಲ್ಲಕ್ಕಿಯಲ್ಲಿ ಮೃತ್ತಿಕಾವನ್ನು ಮೆರವಣಿಗೆ ಮೂಲಕ ತಂದು ರಾಯರ ವೃಂದಾವನದ ಮುಂದೆ ಇಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಸಿಎಂ ಬದಲಾವಣೆ – ನನಗೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ ಎಂದ ಪರಮೇಶ್ವರ್

    ಗುರುವಾರವೇ ಗುರುಪೂರ್ಣಿಮೆ ಬಂದಿರುವ ಹಿನ್ನೆಲೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ರಾಯರ ದರ್ಶನಕ್ಕೆ ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು ಸೇರಿ ದೇಶದ ವಿವಿಧ ಭಾಗಗಳಿಂದ ಭಕ್ತ ಸಾಗರವೇ ಹರಿದು ಬಂದಿತ್ತು. ಇದನ್ನೂ ಓದಿ: ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

  • ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್‌ನಿಂದ ವೈಭವದ ಗುರುಪೂರ್ಣಿಮೆ ಆಚರಣೆ – ಹೂವು, ಹಣ್ಣುಗಳಿಂದ ಅದ್ಧೂರಿ ಅಲಂಕಾರ!

    ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್‌ನಿಂದ ವೈಭವದ ಗುರುಪೂರ್ಣಿಮೆ ಆಚರಣೆ – ಹೂವು, ಹಣ್ಣುಗಳಿಂದ ಅದ್ಧೂರಿ ಅಲಂಕಾರ!

    ಬೆಂಗಳೂರು: ವಿಶೇಷ ಅಲಂಕಾರಕ್ಕೆ ಹಾಗೂ ಪೂಜೆಗೆ ಪ್ರಸಿದ್ಧಿಯಾಗಿರುವ ಬೆಂಗಳೂರು ಜೆ.ಪಿ ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ (Satya Ganapathi Shiradi Sai Trust) ವಿಶೇಷವಾಗಿ ಗುರುಪೂರ್ಣಿಮೆ ಆಚರಿಸಲಾಯಿತು.

    ಸಾಯಿ ಬಾಬಾರ (Sai Baba) ಮೂರ್ತಿಯನ್ನು ಹೂವು ಹಾಗೂ ಹಣ್ಣಿನಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಜೊತೆಗೆ ಬೆಳಿಗ್ಗೆ 7 ಗಂಟೆಯಿಂದ ವಿಶೇಷ ಪೂಜೆ ಮತ್ತು ಹೋಮಗಳನ್ನು ನಡೆಸಲಾಯಿತು. ಇದನ್ನೂಓದಿ: ಜೀವನದ ರಿಯಲ್ ಹೀರೋಯಿನ್ ಬಗ್ಗೆ ಗುಡ್ ನ್ಯೂಸ್ ಕೊಡಲು ಸಜ್ಜಾದ ‘ಕಾಟೇರ’ ಡೈರೆಕ್ಟರ್

    ಪ್ರತಿವರ್ಷದಂತೆ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಅದ್ದೂರಿಯಾಗಿ ಗುರು ಪೂರ್ಣಿಮೆ ಆಚರಿಸಲಾಯಿತು, ಈ ಬಾರಿ ಮತ್ತಷ್ಟು ಸಂಭ್ರಮ ಮತ್ತು ವಿಶೇಷತೆಗಳೊಂದಿಗೆ ಸಾಯಿ ಬಾಬಾರ ಸ್ಮರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಬಾಬಾರ ʻಸಬ್ ಕಾ ಮಾಲೀಕ್ ಏಕ್ ಹೇʼ ಎಂಬ ಪರಿಕಲ್ಪನೆಯಡಿ ಬಡವ, ಬಲ್ಲಿದ ಬೇಧ-ಭಾವವಿಲ್ಲದೇ ಎಲ್ಲಾ ಸಮುದಾಯದವರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ಹಣ್ಣುಗಳು, ವಿಶೇಷ ಹೂವುಗಳಿಂದ ದೇವಸ್ಥಾನವನ್ನು ಆಲಂಕರಿಸಲಾಗಿದೆ ಎಂದು ಟ್ರಸ್ಟ್‌ ತಿಳಿಸಿದೆ.

    ಅಭಿಷೇಕ, ಅಲಂಕಾರ, ಸಾಯಿ ಮಂತ್ರ ಹೋಮ, ಸುದರ್ಶನ ಹೋಮ, ದತ್ತಾತ್ರೇಯ ಹೋಮ ಸೇರಿದಂತೆ ಇನ್ನಿತರ ಪೂಜೆಗಳನ್ನು ಆಯೋಜಿಸಲಾಗಿತ್ತು, ಸಾವಿರಾರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಇದನ್ನೂಓದಿ: ಹೆಚ್ಚಿದ ತುಂಗಭದ್ರಾ ನೀರಿನ ಮಟ್ಟ – ಜಾನುವಾರು ಮೈತೊಳೆಯಲು ತೆರಳಿದ್ದ ಯುವಕ ನೀರುಪಾಲು

    ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್‌ನಿಂದ ಕಳೆದ ವರ್ಷವೂ ಶಿರಡಿ ಬಾಬಾರಿಗೆ ವಿಶೇಷ ಅಲಂಕಾರ ಮಾಡುವ ಮೂಲಕ ಗುರುಪೂರ್ಣಿಮೆ ಆಚರಿಸಲಾಗಿತ್ತು. 20 ಸಾವಿರ ತೆಂಗಿನಕಾಯಿ, 2,500 ಪರಂಗಿ, ಹಲಸಿನ ಹಣ್ಣು, 5 ಸಾವಿರ ಬೆಲ್ಲ, 25 ಸಾವಿರಕ್ಕೂ ಹೆಚ್ಚು ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಹಣ್ಣುಗಳು, ಅಸಂಖ್ಯಾತ ನವಧಾನ್ಯಗಳ ಮೂಲಕ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಲ್ಲದೇ ಕಳೆದ ವರ್ಷ ಗಣೇಶ ಚುತುರ್ಥಿಯಲ್ಲಿ ನೋಟುಗಳ ಮೂಲಕ ದೇವಸ್ಥಾನ ಅಲಂಕರಿಸಿ ಗಮನ ಸೆಳೆದಿತ್ತು. ಇದನ್ನೂಓದಿ: ಕೆಆರ್‌ಎಸ್ ಡ್ಯಾಂ ಭರ್ತಿಗೆ ಕೇವಲ 2 ಅಡಿಯಷ್ಟೇ ಬಾಕಿ

  • ಜೆಪಿ ನಗರದಲ್ಲಿ ಸಾಯಿ ಟ್ರಸ್ಟ್‌ನಿಂದ ಗುರುಪೂರ್ಣಿಮೆ – 20 ಸಾವಿರ ತೆಂಗಿನಕಾಯಿಯಿಂದ ವಿಶೇಷ ಅಲಂಕಾರ

    ಜೆಪಿ ನಗರದಲ್ಲಿ ಸಾಯಿ ಟ್ರಸ್ಟ್‌ನಿಂದ ಗುರುಪೂರ್ಣಿಮೆ – 20 ಸಾವಿರ ತೆಂಗಿನಕಾಯಿಯಿಂದ ವಿಶೇಷ ಅಲಂಕಾರ

    ಬೆಂಗಳೂರು: ಜೆಪಿ ನಗರದ ಶ್ರೀ ಸತ್ಯಗಣಪತಿ (Satya Ganapathi Temple) ಶಿರಡಿ ಸಾಯಿ ಟ್ರಸ್ಟ್ ನಿಂದ ವಿಶೇಷವಾಗಿ ಗುರುಪೂರ್ಣಿಮೆ (Guru Purnima) ಆಚರಿಸಲಾಗಿದ್ದು, ಶಿರಡಿ ಸಾಯಿ ಬಾಬಾರಿಗೆ ವಿಶೇಷ ಅಲಂಕಾರ, ವೈಭವದ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿತ್ತು.

    ‍ಶಿರಡಿ ಬಾಬಾರನ್ನು 20 ಸಾವಿರ ತೆಂಗಿನಕಾಯಿ, 2,500 ಪರಂಗಿ, ಹಲಸಿನ ಹಣ್ಣು, 5 ಸಾವಿರ ಬೆಲ್ಲ, 25 ಸಾವಿರಕ್ಕೂ ಹೆಚ್ಚು ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಹಣ್ಣುಗಳು, ಅಸಂಖ್ಯಾತ ನವಧಾನ್ಯಗಳ ಮೂಲಕ ವಿಶೇಷ ಅಲಂಕಾರ ಮಾಡಲಾಗಿದ್ದು, ಗುರುಪೂರ್ಣಿಗೆ ಬಾಬಾ ಹಿಂದೆಂದಿಗಿಂತಲೂ ಈ ಬಾರಿ ವಿಶೇಷವಾಗಿ ಕಂಗೊಳಿಸುತ್ತಿದ್ದಾರೆ. ಕೆಂದು ಬಣ್ಣದ ಎಳನೀರಿನಿಂದಲೂ ವಿಶೇಷ ಅಲಂಕಾರ ಮಾಡಲಾಗಿದೆ ಎಂದು ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನ ಟ್ರಸ್ಟಿ ರಾಮಮೋಹನ್‌ ರಾಜ್‌ ತಿಳಿಸಿದ್ದಾರೆ.

    ಸಾಯಿ ಬಾಬಾ (Sai Baba) ಅವರಿಗೆ ಅಲಂಕಾರ ಮಾಡಿದ ಎಲ್ಲಾ ವಸ್ತುಗಳನ್ನು ಮರಳಿ ಭಕ್ತರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಹಣ್ಣಾದ ಪರಂಗಿ, ಹಲಸು ಮತ್ತಿತರ ಆಹಾರ ವಸ್ತುಗಳನ್ನು ಸ್ಥಳದಲ್ಲಿಯೇ ಭಕ್ತಾದಿಗಳಿಗೆ ಸಮರ್ಪಿಸಲಾಗುತ್ತಿದೆ. ಕಳೆದ ವರ್ಷ ಕ್ರೀಡಾ ಪರಿಕರಗಳಿಂದ ಬಾಬಾ ಅವರನ್ನು ಸಿಂಗರಿಸಲಾಗಿತ್ತು. ನಂತರ 500 ಶಾಲೆಗಳಿಗೆ ಈ ವಸ್ತುಗಳನ್ನು ವಿತರಣೆ ಮಾಡಲಾಗಿತ್ತು ಎಂದು ರಾಮಮೋಹನ್‌ ರಾಜ್‌ ತಿಳಿಸಿದರು. ಇದನ್ನೂ ಓದಿ: ಲವರ್ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ಳು – ಪತ್ನಿ ಸೇರಿ ಐವರು ಅರೆಸ್ಟ್

    ಗುರು ಪೂರ್ಣಿಮೆ ಅಂಗವಾಗಿ ಗುರು ಶಿರಡಿ ಬಾಬಾರಿಗೆ ಅಭಿಷೇಕ, ಹೋಮ, ಪ್ರಸಾದ ಸೇವೆ, ಅಲಂಕಾರ ಸೇವೆ, ಸರ್ವ ಸೇವೆ ಒಳಗೊಂಡಂತೆ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿತ್ತು. ಸೋಮವಾರ ಬೆಳಿಗ್ಗೆಯಿಂದ ಭಕ್ತರಿಗೆ ನಿರಂತರವಾಗಿ ಪ್ರಸಾದ ವಿತರಣೆ ಮಾಡಲಾಯಿತು ಎಂದು ತಿಳಿಸಿದರು.

     

    ಪ್ರತಿವರ್ಷ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್‌ನಿಂದ ಅದ್ದೂರಿಯಾಗಿ ಗುರು ಪೂರ್ಣಿಮೆ ಆಚರಿಸುತ್ತಿದ್ದು, ಈ ಬಾರಿ ಮತ್ತಷ್ಟು ಸಂಭ್ರಮ ಮತ್ತು ವಿಶೇಷತೆಗಳೊಂದಿಗೆ ಸಾಯಿ ಬಾಬಾರ ಸ್ಮರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಬಾಬಾರ ‘’ಸಬ್ ಕಾ ಮಾಲೀಕ್ ಏಕ್ ಹೇ’’ ಎಂಬ ಪರಿಕಲ್ಪನೆಯಡಿ ಬಡವ, ಬಲ್ಲಿದ ಬೇಧ-ಭಾವವಿಲ್ಲದೇ ಎಲ್ಲಾ ಸಮುದಾಯದವರಿಗೆ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಗುರು ಪೂರ್ಣಿಮೆ

    ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಗುರು ಪೂರ್ಣಿಮೆ

    ಬೆಂಗಳೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಅದ್ಧೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

    ಈ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದನ್ನೂ ಓದಿ: ಕೆಸರು ಗದ್ದೆಯಾದ ಗ್ರಾಮದ ಮುಖ್ಯರಸ್ತೆ – ಅಧಿಕಾರಿಗಳಿಗೆ ಜನರ ಹಿಡಿ ಶಾಪ

    ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳು, ಗಣ್ಯರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು. ಪೂಜ್ಯ ಮಹಾ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.

    Live Tv
    [brid partner=56869869 player=32851 video=960834 autoplay=true]