Tag: gurudatha ganiga

  • ಗುರುದತ್ ವಿಭಿನ್ನ ಪ್ರಯತ್ನ – ಜುಗಾರಿ ಕ್ರಾಸ್‌ಗೆ ರಾಜ್ ಬಿ ಶೆಟ್ಟಿ ಹೀರೋ

    ಗುರುದತ್ ವಿಭಿನ್ನ ಪ್ರಯತ್ನ – ಜುಗಾರಿ ಕ್ರಾಸ್‌ಗೆ ರಾಜ್ ಬಿ ಶೆಟ್ಟಿ ಹೀರೋ

    ತ್ತೀಚಿಗೆ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿವೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರು ಕೈ ಹಾಕುತ್ತಿಲ್ಲ. ಆದರೀಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ (Poornachandra Tejaswi) ಅವರ ಸುಪ್ರಸಿದ್ಧ ಜುಗಾರಿ ಕ್ರಾಸ್ (Jugari Cross) ತೆರೆಮೇಲೆ ಬರುತ್ತಿದೆ. ಜುಗಾರಿ ಕ್ರಾಸ್ ಕಾದಂಬರಿಗೆ ಸಿನಿಮಾ ರೂಪ ಕೊಡುವ ಸಾಹಸಕ್ಕೆ ಕೈ ಹಾಕಿದ್ದಾರೆ ನಿರ್ದೇಶಕ ಗುರುದತ್ ಗಾಣಿಗ. ಈಗಾಗಲೇ ಕರಾವಳಿ ಸಿನಿಮಾ ಮೂಲಕ ಭಾರೀ ಸದ್ದು ಮಾಡುತ್ತಿರುವ ನಿರ್ದೇಶಕ ಗುರುದತ್ (Gurudatha Ganiga) ಇದೀಗ ಜುಗಾರಿ ಕ್ರಾಸ್‌ನ್ನು ದೊಡ್ಡ ಪರದೆ ಮೇಲೆ ತರುವ ಸಾಹಸಕ್ಕೆ ಮುಂದಾಗಿದ್ದಾರೆ.

    ಈಗಾಗಲೇ ಜುಗಾರಿ ಕ್ರಾಸ್ ಸಿನಿಮಾ ಮಾಡುವುದಾಗಿ ಅನೌನ್ಸ್ ಮಾಡಿದ್ದರು. ಇದೀಗ ಟೀಸರ್ ರಿಲೀಸ್ ಆಗಿದೆ. ಜುಗಾರಿ ಕ್ರಾಸ್ ಸಿನಿಮಾ ಅನೌನ್ಸ್ ಮಾಡಿದಾಗಿನಿಂದ ಈ ಜನಪ್ರಿಯ ಕಾದಂಬರಿಗೆ ಹೀರೋ ಯಾರು ಎನ್ನುವ ಕುತೂಹಲ ಎಲ್ಲರಲ್ಲಿತ್ತು. ಆದರೀಗ ಟೀಸರ್ ಜೊತೆಗೆ ಹೀರೋ ಯಾರು ಎನ್ನುವ ಕುತೂಹಲಕ್ಕೂ ತೆರೆಬಿದ್ದಿದೆ. ಜುಗಾರಿ ಕ್ರಾಸ್‌ಗೆ ನಾಯಕನಾಗಿ ರಾಜ್ ಬಿ ಶೆಟ್ಟಿ (Raj B Shetty )ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ತಲೆಬುರಡೆ, ಹರಿಯುತ್ತಿರುವ ರಕ್ತ, ಕೆಂಪು ರತ್ನ ಜೊತೆಗೆ ಕುತೂಹಲ ಮತ್ತಷ್ಟು ದುಪ್ಪಟ್ಟು ಮಾಡುವಂತೆ ಇರುವ ಬ್ಯಾಗ್ರೌಂಡ್ ಮ್ಯೂಸಿಕ್, ಪವರ್ ಪ್ಯಾಕ್ಡ್ ಟೀಸರ್ ನೋಡುತ್ತಿದ್ರೆ ಸಿನಿಮಾ ಮೇಲಿನ ನಿರೀಕ್ಷೆ ಮತ್ತು ಕುತೂಹಲ ಮತ್ತಷ್ಟು ಹೆಚ್ಚಾಗುತ್ತಿದೆ. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಬ್ಲಾಕ್‌ಬಸ್ಟರ್‌ ಹಿಟ್; 2 ವಾರದಲ್ಲಿ 717 ಕೋಟಿ ಕಲೆಕ್ಷನ್‌

    ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿರುವ ಕರಾವಳಿ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ನಿರ್ದೇಶಕ ಗುರುದತ್ ಮತ್ತು ರಾಜ್ ಬಿ ಶೆಟ್ಟಿ ಇದೀಗ ಜುಗಾರಿ ಕ್ರಾಸ್ ಮೂಲಕ ಮತ್ತೆ ಕೈಜೋಡಿಸಿರುವುದು ಕುತೂಹಲ ಹೆಚ್ಚಿಸಿದೆ. ಕರಾವಳಿ ಸಿನಿಮಾ ರಿಲೀಸ್‌ಗೂ ಮೊದಲೇ ರಾಜ್ ಬಿ ಶೆಟ್ಟಿ ಮತ್ತು ನಿರ್ದೇಶಕ ಗುರುದತ್ ಜುಗಾರಿ ಕ್ರಾಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಪಾತ್ರಗಳ ಆಯ್ಕೆಯಲ್ಲಿ ರಾಜ್ ಬಿ ಶೆಟ್ಟಿ ಯಾವಾಗಲೂ ಚ್ಯೂಸಿ. ವಿಭಿನ್ನ ವಿನೂತನ ಪಾತ್ರಗಳನ್ನು ಹುಡುಕುತ್ತಿರುತ್ತಾರೆ. ʻಸು ಫ್ರಂ ಸೋʼನಲ್ಲಿ ಗುರೂಜಿಯಾಗಿ ರಂಜಿಸಿದ್ದ ಶೆಟ್ರು, ʻಕರಾವಳಿʼ ಸಿನಿಮಾದಲ್ಲಿ ಕೋಣಗಳ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಇದೀಗ ಜುಗಾರಿ ಕ್ರಾಸ್ ಅಂತ ಪವರ್ ಫುಲ್ ಕಾದಂಬರಿಗೆ ನಾಯಕನಾಗುತ್ತಿರುವುದು ವಿಶೇಷ.

    ಕರಾವಳಿ ಸಿನಿಮಾದ ಕಾಂಬಿನೇಷನ್ ಮತ್ತೆ ಜುಗಾರಿ ಕ್ರಾಸ್‌ನಲ್ಲೂ ಮುಂದುವರೆದಿದೆ ಅಂದರೆ ಗುರುದತ್ ಗಾಣಿಗ ಅವರ ಕೆಲಸ ಮತ್ತು ಅವರ ಟೀಂ ಮೇಲೆ ರಾಜ್ ಬಿ ಶೆಟ್ಟಿ ಇವರಿಗೆ ಇರುವ ನಂಬಿಕೆ ಮತ್ತು ಶ್ರದ್ಧೆ ಗೊತ್ತಾಗುತ್ತಿದೆ. ಸದ್ಯ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಕರಾವಳಿ ಸಿನಿಮಾದ ಶೂಟಿಂಗ್ ಸಂಪೂರ್ಣವಾಗಿ ಮುಗಿಸಿರುವ ಗುರುದತ್ ಆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಜೊತೆಗೆ ಜುಗಾರಿ ಕ್ರಾಸ್ ನಲ್ಲೂ ತೊಡಗಿಕೊಳ್ಳಲಿದ್ದಾರೆ. ಸಿನಿಮಾ ನಿರ್ದೇಶನದ ಜೊತೆಗೆ ಗುರುದತ್ತ ಗಾಣಿಗ ಫಿಲ್ಮಂಸ್ ಅಡಿಯಲ್ಲಿ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ ಡೈರೆಕ್ಟರ್ ಗುರುದತ್ತ ಗಾಣಿಗ. ಕರಾವಳಿ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದನ್ ಈ ಸಿನಿಮಾಗೂ ಕೆಲಸ ಮಾಡುತ್ತಿದ್ದಾರೆ. ಇನ್ನೂ ಚಿತ್ರಕ್ಕೆ ಸಚಿನ್ ಬಸ್ರೂರ್ ಸಂಗೀತ ನೀಡುತ್ತಿದ್ದಾರೆ. ಉಳಿದಂತೆ ಯಾರೆಲ್ಲ ಇರಲಿದ್ದಾರೆ ಎನ್ನುವ ಮಾಹಿತಿ ಸದ್ಯದಲ್ಲೇ ರಿವೀಲ್ ಆಗಲಿದೆ. ಇದನ್ನೂ ಓದಿ: ವಧುವಾದ ಗಾಯಕಿ ಸುಹಾನಾ ಸಯ್ಯದ್ – ʻಭಲೇ ಜೋಡಿʼ ಎಂದ ಫ್ಯಾನ್ಸ್‌

  • ಗುರುದತ್‌ ಗಾಣಿಗ ನಿರ್ದೇಶನದ ‘ಜುಗಾರಿ ಕ್ರಾಸ್’ ಸಿನಿಮಾ ಅನೌನ್ಸ್- ಕುತೂಹಲ ಹೆಚ್ಚಿಸಿದ ಫಸ್ಟ್ ಲುಕ್

    ಗುರುದತ್‌ ಗಾಣಿಗ ನಿರ್ದೇಶನದ ‘ಜುಗಾರಿ ಕ್ರಾಸ್’ ಸಿನಿಮಾ ಅನೌನ್ಸ್- ಕುತೂಹಲ ಹೆಚ್ಚಿಸಿದ ಫಸ್ಟ್ ಲುಕ್

    ‘ಜುಗಾರಿ ಕ್ರಾಸ್’ ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ (Poornachandra Tejaswi) ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಈ ‘ಜುಗಾರಿ ಕ್ರಾಸ್’. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ ಹೇಳಿದ್ದಾರೆ.

    ಓದುಗರ ನೆಚ್ಚಿನ ಶ್ರೇಷ್ಠ ಕಾದಂಬರಿ ‘ಜುಗಾರಿ ಕ್ರಾಸ್’ ಇದೀಗ ಸಿನಿಮಾವಾಗುತ್ತಿದೆ. ಬೆಳ್ಳಿಪರದೆಯ ಮೇಲೆ ತೇಜಸ್ವಿಯವರ ಜುಗಾರಿ ಕ್ರಾಸ್ ರಾರಾಜಿಸಲು ಸಿದ್ಧವಾಗುತ್ತಿದೆ. ಅಂದಹಾಗೆ, ಈ ಕಾದಂಬರಿಯನ್ನು ತೆರೆಯ ಮೇಲೆ ತರುವ ಸಾಹಸಕ್ಕೆ ಮುಂದಾಗಿದ್ದಾರೆ ‘ಕರಾವಳಿ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ. ಇಂದು ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾ ಅನೌನ್ಸ್ ಮಾಡಿ ಬಿಗ್ ಸರ್ಪ್ರೈಸ್ ನೀಡಿದ್ದಾರೆ ನಿರ್ದೇಶಕರು. ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು, ಗಮನ ಸೆಳೆಯುತ್ತಿದೆ. ಇದನ್ನೂ ಓದಿ:ಹೆರಿಗೆ ಆಸ್ಪತ್ರೆಗೆ ಅಡ್ಮಿಟ್ ಆದ ದೀಪಿಕಾ ಪಡುಕೋಣೆ

    ‘ಜುಗಾರಿ ಕ್ರಾಸ್’ (Jugari Cross) ಕಾದಂಬರಿಯನ್ನು ಸಿನಿಮಾ ಮಾಡಬೇಕೆಂದು ಕನಸು ಕಂಡವರು ಅನೇಕರು. ಸ್ಯಾಂಡಲ್‌ವುಡ್‌ನ ದೊಡ್ಡ ದೊಡ್ಡ ನಿರ್ದೇಶಕರು, ಕಲಾವಿದರು ಪ್ರಯತ್ನ ಪಟ್ಟಿದ್ದರು. ಆದರೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ಕೊನೆಗೂ ಕಾಲ ಕೂಡಿ ಬಂದಿದೆ. ಜುಗಾರಿ ಕ್ರಾಸ್ ಕಾಂದಬರಿಯನ್ನು ಸಿನಿಮಾ ರೂಪದಲ್ಲಿ ಕಣ್ತುಂಬಿಕೊಳ್ಳುವ ಸಮಯ ಬಂದಿದೆ. ಇನ್ನು ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ. ಜುಗಾರಿ ಕ್ರಾಸ್ ನಲ್ಲಿ ಬರುವ ಪಾತ್ರಗಳಿಗೆ ಯಾರೆಲ್ಲ ಜೀವ ತುಂಬಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಸುಪ್ರಸಿದ್ಧ ಕಾದಂಬರಿಯನ್ನು ತೆರೆ ಮೇಲೆ ತರುವುದೆ ಅತೀ ದೊಡ್ಡ ಜವಾಬ್ದಾರಿ. ಹಾಗಾಗಿ ಈ ಶ್ರೇಷ್ಠ ಕಾದಂಬರಿಯ ಸಿನಿಮಾದಲ್ಲಿ ಹೊಸ ಕಲಾವಿದರು ಕಾಣಿಸಿಕೊಳ್ಳುತ್ತಾರಾ ಅಥವಾ ಸ್ಟಾರ್ ನಟರು ಬಣ್ಣ ಹಚ್ಚುತ್ತಾರಾ ಕಾದುನೋಡಬೇಕು.

    ಈ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಕ್ಯಾಮೆರಾ ವರ್ಕ್ ಇರಲಿದೆ. ಇನ್ನು ತಾಂತ್ರಿಕ ವರ್ಗ, ಉಳಿದ ಎಲ್ಲಾ ಕಲಾವಿದರ ಬಗ್ಗೆ ಸಂಪೂರ್ಣ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ. ‘ಜುಗಾರಿ ಕ್ರಾಸ್’ ಸಿನಿಮಾಗುತ್ತಿದೆ ಎನ್ನುವ ಸುದ್ದಿ ಕೇಳಿಯೇ ತೇಜಸ್ವಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಇನ್ನೂ ಸಿನಿಮಾ ಹೇಗೆ ಮೂಡಿ ಬರಲಿದೆ ಎಂದು ಕುತೂಹಲ, ನಿರೀಕ್ಷೆ, ಕಾತರ ಎಲ್ಲರಲ್ಲೂ ಕಾಯುತ್ತಿದ್ದಾರೆ.