Tag: Gurudev

  • ಧನಂಜಯ ನಟನೆಯ 25ನೇ ಸಿನಿಮಾ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

    ಧನಂಜಯ ನಟನೆಯ 25ನೇ ಸಿನಿಮಾ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

    ಡಾಲಿ ಧನಂಜಯ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ನಟ ಎಂದರೆ ತಪ್ಪಾಗಲ್ಲ. ಈಗಾಗಲೇ ತಮ್ಮ ವಿಭಿನ್ನ ಪಾತ್ರಗಳಿಂದ ಮನೆ ಮಾತಾಗಿರುವ ಧನಂಜಯರವರ ಸಿನಿ ಜರ್ನಿಯ ಸಿಲ್ವರ್ ಜೂಬ್ಲೀ ಸಂಭ್ರಮ ಬಹಳ ಜೋರಾಗಿದೆ. ಧನಂಜಯ (Dhananjay) ಅಭಿನಯದ 25ನೇ ಸಿನೆಮಾ ಗುರುದೇವ್ (Gurudev) ಹೊಯ್ಸಳ (Hoysala) ಭರವಸೆ ಹೆಚ್ಚಿಸಿದ್ದು, ಈ ಚಿತ್ರದಲ್ಲಿ ಡಾಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೂ ಮಾಡಿರದ ರೀತಿಯ ಪಾತ್ರ ಧರಿಸಿ, ಗುರುದೇವ್ ಹೊಯ್ಸಳ ಆಗಿ ಡಾಲಿ ಧನಂಜಯ್ ತೆರೆ ಮೇಲೆ ಅಬ್ಬರಿಸಲಿದ್ದಾರೆ.

    ಈಗಾಗಲೇ ಸಿನೆಮಾದ ಹಾಡುಗಳು, ಟೀಸರ್ ಬಿಡುಗಡೆಯಾಗಿದ್ದು, ಭಾರಿ ಸದ್ದು ಮಾಡುತ್ತಿವೆ. ನಿರೀಕ್ಷೆ ಹೆಚ್ಚಿಸುತ್ತಲೇ ಇರುವ ಗುರುದೇವ್ ಹೊಯ್ಸಳ ಸಿನೆಮಾ ರಿಲೀಸ್ ಗೆ ಇನ್ನೇನು ಕೆಲವೇ ಕೆಲವು ದಿನ ಬಾಕಿ ಇದ್ದು, ಅಭಿಮಾನಿಗಳು ಕಾತುರರಾಗಿ ಕಾಯುತ್ತಿದ್ದಾರೆ. ಹೀಗಿರುವಾಗಲೇ ಚಿತ್ರತಂಡ ಟ್ರೈಲರ್ (Trailer) ಯಾವಾಗ ಬಿಡುಗಡೆ ಮಾಡುತ್ತಾರೆ ಎನ್ನುವ ಪ್ರಶ್ನೆಗೆ ಬ್ರೇಕ್ ಬಿದ್ದಿದೆ. ಇದನ್ನೂ ಓದಿ: ʻಒಲವ ಘಮವುʼ ಆಲ್ಬಂ ಸಾಂಗ್‌ಗೆ ಧ್ರುವ ಸರ್ಜಾ ಮೆಚ್ಚುಗೆ

    ಮಾರ್ಚ್ 20, ಸಂಜೆ 7.29 ನಿಮಿಷಕ್ಕೆ “ಗುರುದೇವ್ ಹೊಯ್ಸಳ” ಚಿತ್ರದ ಟ್ರೈಲರ್ ಅನ್ನು ಆನಂದ್ ಆಡಿಯೋ ಚಾನಲ್ ನಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. “ಗುರುದೇವ್ ಹೊಯ್ಸಳ” ಚಿತ್ರದ ನಾಯಕ ನಟ ಪ್ರಾಮಾಣಿಕ ಅಧಿಕಾರಿನಾ? ನಟರಾಕ್ಷಸನ ರೀತಿ ಭಯಂಕರ ಖಡಕ್ ಅಧಿಕಾರಿನಾ? ಇಲ್ಲಾ ಎನ್​ಕೌಂಟರ್ ಸ್ಪೆಷಲಿಸ್ಟಾ? ಈ ಎಲ್ಲ ಪ್ರಶ್ನೆಗಳು ಸಿನಿ ಪ್ರೇಕ್ಷಕರನ್ನು ಕಾಡುತ್ತಿದ್ದು, ಟ್ರೈಲರ್ ನಲ್ಲಿ ಈ ಎಲ್ಲಾ ಪ್ರಶ್ನೆಗೆ ಉತ್ತರ ಸಿಗುತ್ತಾ ಎಂದು ಕಾಯಬೇಕಿದೆ.

    ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಸಿನಿಮಾ ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ.

    ಒಂದು ಸೋಷಿಯಲ್ ಮೆಸೇಜ್ ಹೊತ್ತಿರುವ ಪಕ್ಕಾ ಕಮರ್ಷಿಯಲ್ ಸಿನೆಮಾ ಇದಾಗಿದ್ದು ನಿರ್ದೇಶಕ ವಿಜಯ್. ಎನ್ ರವರು ಆಕ್ಷನ್ ಕಟ್ ಹೇಳಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಗುರುದೇವ್ ಹೊಯ್ಸಳನಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಕಾಣಿಸಿಕೊಂಡಿದ್ದು, ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

  • 25ನೇ ಚಿತ್ರದಲ್ಲಿ ಗುರುದೇವ್ ಹೊಯ್ಸಳನಾದ ಧನಂಜಯ್

    25ನೇ ಚಿತ್ರದಲ್ಲಿ ಗುರುದೇವ್ ಹೊಯ್ಸಳನಾದ ಧನಂಜಯ್

    ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ನಿರ್ಮಿಸಿರುವ ‘ಹೊಯ್ಸಳ’ (Hoysala) ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್, ಹಾಡುಗಳಿಂದ ಪ್ರೇಕ್ಷಕರ ಹೃದಯ ಗೆದ್ದಿರುವ ‘ಹೊಯ್ಸಳ’ ತಂಡದಿಂದ ಸದ್ಯದಲ್ಲಿಯೇ ಟ್ರೇಲರ್ ಕೂಡ ಬಿಡುಗಡೆ ಆಗಲಿದೆ. ಚಿತ್ರದ ಪ್ರಮೋಷನ್ ಜೋರಾಗಿದ್ದು, ನಾಯಕ ಡಾಲಿ ಧನಂಜಯ್ ಉತ್ತರ ಕರ್ನಾಟಕದಲ್ಲಿ ಸಂಚರಿಸುತ್ತಿದ್ದಾರೆ.

    ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಂಜಯ್ (Dhananjay) “ರತ್ನನ ಪ್ರಪಂಚ’ ಆದಮೇಲೆ ಕೆ.ಆರ್.ಜಿ ಸ್ಟುಡಿಯೋ ಜೊತೆ ಕನೆಕ್ಟ್ ಆಗಿ ಒಂದಿಷ್ಟು ಸಿನಿಮಾ ಮಾಡುವ ಪ್ಲ್ಯಾನ್ ಮಾಡಿಕೊಂಡೆವು. ಆಗ ಈ ಚಿತ್ರದ ಕಥೆ ಬಂತು. ಕಥೆ ಕೇಳಿದಾಗ ತುಂಬಾ ಇಷ್ಟವಾಯ್ತು. ನಂತರ ಗೊತ್ತಾಯ್ತು ಇದು ನನ್ನ ಅಭಿನಯದ 25ನೇ ಸಿನಿಮಾ ಅಂತ. ನನಗೂ ಸಮಾಜಕ್ಕೆ ಎನಾದರೂ ಸಂದೇಶ ಹೇಳುವ ಸಿನಿಮಾ ಮಾಡಬೇಕು ಎನಿಸಿತ್ತು. ಅದರಂತೆಯೇ ಫ್ಯಾಮಿಲಿ ಜೊತೆ ಕುಳಿತು ನೋಡುವ ಕಥೆ ನಂಗೆ ‘ಹೊಯ್ಸಳ’ದಲ್ಲಿ ಸಿಕ್ಕಿತು. ಇದರಲ್ಲಿ ಒಂದು ಸೀರಿಯಸ್ ಅಂಶವನ್ನು ಹೇಳುವ ಪ್ರಯತ್ನ ಮಾಡಲಾಗಿದ್ದು, ಒಳ್ಳೆ ಮೆಸೇಜ್ ಇರುವ ಕಮರ್ಷಿಯಲ್ ಸಿನಿಮಾ. ನಾವು ಚಿತ್ರದ ಶೀರ್ಷಿಕೆಯನ್ನು ರಾಮು ಫಿಲ್ಮಸ್ ಜೋತೆ ಮಾತನಾಡಿ ಪಡೆದುಕೊಂಡೆವು. ಆದರೇ ಇದೇ ಹೆಸರಿನಲ್ಲಿ ಇನ್ನೊಂದು ಸಿನಿಮಾ ಸೆನ್ಸಾರ್ ಆಗಿದೆಯಂತೆ. ಹಾಗಾಗಿ ನಾನು ಚಿತ್ರದಲ್ಲಿ ಗುರುದತ್ ಹೊಯ್ಸಳ ಹೆಸರಿನಲ್ಲಿ ಕಾಣಿಸಿಕೊಂಡಿದ್ದು, ಇದೇ ಹೆಸರಿನಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಿದ್ದರಾಗಿದ್ದೇವೆ. ಈ ಸಿನಿಮಾಗಾಗಿ ನಾನು ಕಾಯತಾ ಇದ್ದು, ತುಂಬಾ ವಿಷಯಗಳ ಬಗ್ಗೆ ಚಿತ್ರ ಮಾತನಾಡುತ್ತದೆ’ ಎಂದು ಹೇಳಿದರು.

    ನಂತರ ಮತ್ತೋರ್ವ ನಟ ನವೀನ ಶಂಕರ್ (Naveen) ಮಾತನಾಡಿ ‘ಈ ಸಿನಿಮಾ ಸಿಲ್ಕಿದ್ದು ನಂಗೆ ಖುಷಿಯ ವಿಷಯ. ಇದೇ ಮೊದಲಬಾರಿ ನಾನು ಕಂಪರ್ಟ್ನಲ್ಲಿ ನಟನೆ ಮಾಡಿದ್ದೇನೆ. ಇಲ್ಲಿ ನಾನು ಬಲಿ ಪಾತ್ರ ಮಾಡಿದ್ದು ರಗಡ್ ಲುಕ್‌ನಲ್ಲಿ ವಿಲನ್ ಆಗಿರುತ್ತೇನೆ. ಧನಂಜಯ್ ‘ಹೆಡ್ಡಬುಷ್’ ಸಿನಿಮಾಗೆ ಕರೆದಿದ್ದರು ಆಗಿರಲಿಲ್ಲ. ಈಗ ಗೆಳೆಯನ ಜೊತೆ ನಟನೆ ಮಾಡಿದ್ದು ಖುಷಿ ಇದೆ. ನಿರ್ಮಾಪಕರು ಕರೆದು ಅವಕಾಶ ಕೊಟ್ಟರು. ಪಾತ್ರ ಅದ್ಭುತವಾಗಿ ಬಂದಿದ್ದು, ಒಳ್ಳೆ ಜರ್ನಿ ನೀಡುವ ಸಿನಿಮಾ ಇದು ನಂಗೆ. ಅಪ್ಪಟ ಕಮರ್ಷಿಯಲ್ ಸಿನಿಮಾ ಇದಾಗಿದ್ದು, ಎಲ್ಲಾ ಪಾತ್ರಗಳಿಗೂ ಗಟ್ಟಿತನ ಇದೆ’ ಎನ್ನುವರು. ಇದನ್ನೂ ಓದಿ: ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಚಿತ್ರದ ನಾಯಕಿ ಅಮೃತ ಅಯ್ಯಂಗಾರ್ (Amrita Iyengar) ‘ಧನಂಜಯ ಜೊತೆ ನಂಗೆ ಇದು 3ನೇ ಸಿನಿಮಾ. ಇದರಲ್ಲಿ ನಾನು ಗಂಗಾ ಆಗಿ ಪೊಲೀಸ್ ಆಫೀಸರ್ ಹೆಂಡತಿ ಪಾತ್ರ ಮಾಡಿದ್ದೇನೆ. ಜೊತೆಗೆ ನಾನು ಭರತನಾಟ್ಯ ಟೀಚರ್ ಆಗಿರುತ್ತೇನೆ. ಈ ಪಾತ್ರ ಮಾಡುವುದು ನಂಗೆ ಚಾಲೆಂಜಿಂಗ್ ಆಗಿತ್ತು. ಈ ಚಿತ್ರ ಒಳ್ಳೆ ಪೊಲೀಸ್ ಸ್ಟೋರಿ ಫೀಲ್ ಕೊಡುತ್ತದೆ’ ಎಂದು ಹೇಳಿದರು. ನಟ ಅವಿನಾಶ್ ಮಾತನಾಡಿ ‘ಇದರಲ್ಲಿ ನಾನು ವಿಲನ್ ಪಾತ್ರ ಮಾಡಿದ್ದು, ಅದ್ಭುತವಾಗಿ ಬಂದಿದೆ. ನಿರ್ದೇಶಕರು ನಂಗೆ ಕಥೆ ಹೇಳುವಾಗ ನಾನಾ ಪಾಟೇಕರ್ ತರಾ ಪಾತ್ರ ಇರುತ್ತದೆ ಎಂದು ಹೇಳಿದ್ದರು. ಈ ಪೊಲೀಸ್ ಸ್ಟೋರಿ ಸಿನಿಮಾ ಅದ್ಭುತವಾಗಿ ಬಂದಿದ್ದು, ನಾನಿಲ್ಲಿ ದಾದಾ ಪಾತ್ರ ಮಾಡಿದ್ದೇನೆ’ ಎನ್ನುವರು.

    ಇದೇ ಸಂದರ್ಭದಲ್ಲಿ ನಿರ್ಮಾಪಕ ಯೋಗಿ ಜಿ. ರಾಜ್ ಮಾತನಾಡಿ ‘ಧನು ಜೊತೆ ಸಿನಿಮಾ ಮಾಡಲು ಸಿದ್ದರಾದಾಗ ನಿರ್ದೇಶಕರು ಕಥೆ ಹೇಳಿದ್ರು. ಕಥೆ ತುಂಬಾ ಚನ್ನಾಗಿದೆ ಅನಿಸಿ ನಿರ್ಮಾಣಕ್ಕೆ ಮುಂದಾದೆವು. ಚಿತ್ರ ಇದೇ ಮಾರ್ಚ್ 30 ರಂದು ವಿಶ್ವಾದ್ಯಂತ ಕನ್ನಡ ಭಾಷೆಯಲ್ಲಿಯೇ ರಿಲೀಸ್ ಆಗಲಿದೆ. ಇದರಲ್ಲಿ ನಾಯಕನ ಹೆಸರು ಗುರುದೇವ ಹೊಯ್ಸಳ ಅಂತ ಇರುತ್ತದೆ. ಕಥೆ ಬೆಳಗಾವಿ ಭಾಗದಲ್ಲಿ ನಡೆಯುತ್ತದೆ’ ಎಂದರು. ನಿರ್ದೇಶಕ ವಿಜಯ್ ಎನ್ ‘ಈ ಚಿತ್ರವನ್ನು ಪೊಲೀಸ್ ಡಿಪಾರ್ಟ್ಮೆಂಟ್‌ಗೆ ಅರ್ಪಣೆ ಮಾಡಲಾಗುತ್ತಿದೆ’ ಎಂದಷ್ಟೇ ಹೇಳಿದರು.

  • ಡಾಲಿ ಧನಂಜಯ್ ನಟನೆಯ  25ನೇ ಸಿನಿಮಾ ‘ಹೊಯ್ಸಳ’ ಟೀಸರ್ ರಿಲೀಸ್

    ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ ‘ಹೊಯ್ಸಳ’ ಟೀಸರ್ ರಿಲೀಸ್

    ಕೆ.ಆರ್.ಜಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಿರುವ, ನಟ ರಾಕ್ಷಸ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, “ಹೊಯ್ಸಳ” ದ ಟೀಸರ್ ಇಂದು ಬಿಡುಗಡೆಯಾಗಿದೆ. ನಿಷ್ಠಾವಂತ – ಖಡಕ್ ಪೊಲೀಸ್ ಪಾತ್ರ ನಿರ್ವಹಿಸಿರುವ ನಟ ಧನಂಜಯ, ತಪ್ಪು ಮಾಡಿದವರ ಪಾಲಿಗೆ ಖಾಕಿ ತೊಟ್ಟ ಯಮನಾಗಿ ಕಾಣಿಸಿಕೊಂಡಿದ್ದಾರೆ.

    ಟೀಸರ್ ಬಿಡುಗಡೆಯಾಗಿದ್ದು, ಭಾರತ ಸಿನಿಮಾಗಳಲ್ಲಿ ರಫ್ ಅಂಡ್ ಟಫ್ ಪೊಲೀಸ್ ಆಫೀಸರ್ ಗಳಾಗಿ ಕಾಣಿಸಿಕೊಂಡಿದ್ದ ಕನ್ನಡದ ಕಿಚ್ಚ ಸುದೀಪ, ತೆಲುಗು ನಟ ಅದಿವಿ ಶೇಷ್, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಕಾರ್ತಿ ರವರು ‘ಗ್ಲಿಮ್ಪ್ಸ್ ಆಫ್ ಗುರುದೇವ್’ ಅನ್ನು ಬಿಡುಗಡೆ ಮಾಡಿದರು. ಆಫೀಸರ್ ಗುರುದೇವ್ ಅಲಿಯಾಸ್ ಧನಂಜಯರವರನ್ನು ಅಭಿನಂದಿಸಿ ತಮ್ಮ ಪೊಲೀಸ್ ಗ್ಯಾಂಗ್ ಗೆ ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ

    ಹೊಯ್ಸಳ ಟೀಸರ್ ನಲ್ಲಿ ಧನಂಜಯರವರ ಖಾಕಿ ಖದರ್, ಹಾಗೂ ಡೈಲಾಗ್ ಗೆ ಜನ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಆನಂದ್ ಆಡಿಯೋ ಚಾನೆಲ್ ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಚಿತ್ರವು ಇದೇ ಮಾರ್ಚ್ ಬಿಡುಗಡೆಯಾಗಲಿದ್ದು ಡಾಲಿ ಧನಂಜಯ ರವರು ಪೊಲೀಸ್ ಆಫೀಸರ್  “ಗುರುದೇವ್” ಆಗಿ ಮಾರ್ಚ್ 30 ರಿಂದ ಚಾರ್ಜ್ ತೆಗೆದುಕೊಳ್ಳಲಿದ್ದಾರೆ.

    ಡಾಲಿ ಧನಂಜಯರವರ 25ನೇ ಚಿತ್ರ ಇದಾಗಿದ್ದು,  ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅರ್ಪಿಸುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್‌ನಡಿ  ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ರವರು ಚಿತ್ರವನ್ನು ನಿರ್ಮಿಸಿದ್ದಾರೆ. ವಿಜಯ್.ಎನ್ ರವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜಿಸಿದ್ದು, ಕಾರ್ತಿಕ್ ಎಸ್ ರವರು ಛಾಯಾಗ್ರಾಹಕರಾಗಿದ್ಡಾರೆ.

    ಸಂಕಲನ ದೀಪು ಎಸ್ ಕುಮಾರ್, ಸಂಭಾಷಣೆ ಮಾಸ್ತಿ ಅವರದು. ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k