ಸೆಟ್ಟೇರಿದಾಗಿಂದಲೂ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಕರಾವಳಿ.. ಗುರುದತ್ ಗಾಣಿಗ (Gurudutt Ganiga) ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರೋ ಕರಾವಳಿ (Karavali) ಸಿನಿಮಾಗೆ ಖಡಕ್ ವಿಲನ್ ಎಂಟ್ರಿ ಕೊಟ್ಟಾಗಿದೆ. ಪ್ರತಿ ಪಾತ್ರ ವರ್ಗವನ್ನ ವಿಭಿನ್ನ ರೀತಿಯಲ್ಲಿ ಇಂಟ್ರಡ್ಯೂಸ್ ಮಾಡುತ್ತಿರೋ ನಿರ್ದೇಶಕ ಗುರುದತ್ ಗಾಣಿಗ ಚಿತ್ರದ ಮತ್ತೊಂದು ಮುಖ್ಯಪಾತ್ರಧಾರಿಯನ್ನ ವಿಶೇಷ ರೀತಿಯಲ್ಲಿ ಪರಿಚಯಿಸಿದ್ದಾರೆ…ಕರಾವಳಿ ಸಿನಿಮಾದಲ್ಲಿ ಡೈನಾಮಿಕ್ ಪ್ರಿನ್ಸ್ ಎದುರು ಅಬ್ಬರಿಸಲು ಮಿಸ್ಟರ್ ದುಬೈ ಶಿಥಿಲ್ ಪೂಜಾರಿಯನ್ನ (Shithil Pujari) ಆಯ್ಕೆ ಮಾಡಿಕೊಂಡಿದ್ದಾರೆ…
ಮಂಗಳೂರು ಮೂಲದ ಶಿಥಿಲ್ ಪೂಜಾರಿ ದುಬೈನಲ್ಲಿ ನೆಲಸಿದ್ದು ಕರಾವಳಿ ಚಿತ್ರಕ್ಕೆ ಆಡಿಷನ್ ಮೂಲಕ ಆಯ್ಕೆ ಆಯ್ಕೆ ಆಗಿದ್ದಾರೆ. ಬೆಸ್ಟ್ ಎಂಟರ್ಟೈನರ್ ದುಬೈ, ಬೆಸ್ಟ್ ಪೀಪಲ್ ಚಾಯ್ಸ್ ದುಬೈ , ಬೆಸ್ಟ್ ಫಿಜಿಕ್ಸ್ ದುಬೈ ಪಡೆದುಕೊಂಡು ಈ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿರೋ ಮೊದಲ ಕನ್ನಡಿಗ ಶಿಥಿಲ್ ಆಗಿದ್ದಾರೆ…
ಸದ್ಯ ಕರಾವಳಿ ಸಿನಿಮಾದಲ್ಲಿ ವಾಲಿ ಎಂಬ ನೆಗೆಟಿವ್ ಶೇಡ್ ನಲ್ಲಿ ಶಿಥಿಲ್ಅಭಿನಯ ಮಾಡುತ್ತಿದ್ದು ಮೊದಲ ಹಂತದ ಚಿತ್ರೀಕರಣ ಮುಗಿಸಿರೋ ಶಿಥಿಲ್ ಮತ್ತೆ ಎರಡನೇ ಹಂತದ ಚಿತ್ರೀಕರಣಕ್ಕೇ ಕರಾವಳಿ ತಂಡ ಸೇರಿಕೊಳ್ಳಲಿದ್ದಾರೆ…ಸದ್ಯ ಶಿಥಿಲ್ ಲುಕ್ ಮೊದಲ ನೋಟದಲ್ಲೇ ಭರವಸೆ ಮೂಡಿಸುತ್ತಿದ್ದು ಮುಂದಿನ ದಿನಗಳಲ್ಲಿ ಕನ್ನಡಕ್ಕೆ ಭರವಸೆಯ ಖಳನಾಟನಾಗುವ ಸಾಧ್ಯತೆ ಹೆಚ್ಚಾಗಿ ಕಾಣುತ್ತಿದೆ.
ಯುಗಾದಿ ಹಬ್ಬಕ್ಕೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ನೋಡಿದ್ರೆ ನಿಜಕ್ಕೂ ಪ್ರಜ್ವಲ್ ಅವರೇನಾ ಎಂದು ಅಚ್ಚರಿ ಪಡುವಂತಿದೆ. ಮೊಟ್ಟ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಯಕ್ಷಗಾನ ವೇಷಧಾರಿಯಾಗಿ ಕಾಣಿಸಿಕೊಂಡಿದ್ದು ಪೋಸ್ಟರ್ ರೋಮಾಂಚನಕಾರಿಯಾಗಿದೆ. ಅಂದಹಾಗೆ ಇದು ಕರಾವಳಿ ಸಿನಿಮಾದ ಹೊಸ ಪೋಸ್ಟರ್. ಪ್ರಜ್ವಲ್ ದೇವರಾಜ್ ಸದ್ಯ ಕರಾವಳಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.
ಗುರುದತ್ ಗಾಣಿಗ (Gurudutt Ganiga) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ (Karavali) ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಪ್ರಜ್ವಲ್ ದೇವರಾಜ್ ಅವರ ಹೊಸ ಲುಕ್ ರಿವೀಲ್ ಮಾಡುವ ಮೂಲಕ ಸಿನಿಮಾತಂಡ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಈಗಾಗಲೇ ಕರಾವಳಿ ಸಿನಿಮಾ ಟೀಸರ್ ಮತ್ತು ಪೋಸ್ಟರ್ ಗಳ ಮೂಲಕ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಈ ನಡುವೆ ಯುಗಾದಿ ಹಬ್ಬದ ಪ್ರಯುಕ್ತ ಬಂದಿರುವ ಪ್ರಜ್ವಲ್ ಅವರ ಯಕ್ಷಗಾನ ಲುಕ್ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಕರಾವಳಿ ಸಿನಿಮಾದಲ್ಲಿ ಪ್ರಜ್ವಲ್ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಂಬಳದ ಜೊತೆಗೆ ಯಕ್ಷಗಾನ (Yakshagana) ಕೂಡ ಕರಾವಳಿ ಸಿನಿಮಾದ ಹೈಲೈಟ್ ಗಳಲ್ಲಿ ಒಂದಾಗಿದೆ ಎನ್ನುವುದು ಈ ಲುಕ್ ನೋಡಿದ್ರೆ ಗೊತ್ತಾಗುತ್ತೆ. ಅಂದಹಾಗೆ ಈ ಲುಕ್ ಅನ್ನು ಪ್ರೊಫೆಷನಲ್ ಕಲಾವಿದರೇ ಮಾಡಿದ್ದು ವಿಶೇಷ. ಯಕ್ಷಗಾನ ಭಾಗವತರೇ ಆಗಿರುವ ಪಲ್ಲವ ಗಾಣಿಗ ಎನ್ನುವರು ಈ ಲುಕ್ ಡಿಸೈನ್ ಮಾಡಿದ್ದಾರೆ. ಪ್ರಜ್ವಲ್ ಅವರಿಗೆ ಈ ಲುಕ್ ಡಿಸೈನ್ ಮಾಡಲು ಅರ್ಥ ದಿನಾ ತೆಗೆದುಕೊಂಡಿದ್ದಾರೆ.
ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿದ್ದು 2ನೇ ಶೆಡ್ಯೂಲ್ ಯುಗಾದಿ ಹಬ್ಬದ ಬಳಿಕ ಪ್ರಾರಂಭವಾಗಲಿದೆ ಮಂಗಳೂರಿನ ಸುತ್ತಮುತ್ತ ಕರಾವಳಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.
ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬರಲಿದೆ. ಕರಾವಳಿ ಸಿನಿಮಾಗೆ ಅಭಿಮನ್ಯು ಸದಾನಂದ್ ಕ್ಯಾರೆಮಾ ವರ್ಕ್ ಇದೆ, ಸಚಿನ್ ಬಸ್ರೂರು ಸಂಗೀತ ಚಿತ್ರಕ್ಕಿದೆ. ಇನ್ನು ಉಳಿದಂತೆ ಈ ಸಿನಿಮಾದಲ್ಲಿ ನಟ ಮಿತ್ರ, ಟಿವಿ ಶ್ರೀಧರ್, ಜಿ ಜಿ, ನಿರಂಜನ್ ಸೇರಿದಂತೆ ಹಲವು ಪ್ರಖ್ಯಾತ ಕಲಾವಿದರು ನಟಿಸುತ್ತಿದ್ದಾರೆ.
‘ಕರಾವಳಿ’ (Karavali) ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾಗೆ ಗುರುದತ್ ಗಾಣಿಗ (Gurudutt Ganiga) ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇತ್ತೀಚಿಗಷ್ಟೇ ನಾಯಕಿ ಸಂಪದ ಅವರನ್ನು ಪರಿಚಯಿಸಿದ್ದ ಸಿನಿಮಾ ತಂಡ ಇದೀಗ ಮತ್ತೊಂದು ಮಹತ್ವದ ಪಾತ್ರದ ಪರಿಚಯ ಮಾಡಿಕೊಡುವ ಮೂಲಕ ಸಿನಿಮ ಬಗ್ಗೆ ಮತ್ತಷ್ಟು ಕುತೂಹಲವನ್ನ ಹೆಚ್ಚಿಸಿದೆ. ಕರಾವಳಿ ಸಿನಿಮಾಗೆ ಖ್ಯಾತ ನಟ ಮಿತ್ರ (Mitra) ಎಂಟ್ರಿ ಕೊಟ್ಟಿದ್ದಾರೆ.
ಇಂದು ಮಹಾಶಿವರಾತ್ರಿಯ ಪ್ರಯುಕ್ತ ಫಸ್ಟ್ ಲುಕ್ ರಿವೀಲ್ ಮಾಡುವ ಮೂಲಕ ನಟ ಮಿತ್ರ ಅವರನ್ನು ಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರಿದೆ ಕರಾವಳಿ ಸಿನಿಮಾತಂಡ. ಸಿನಿಮಾದಲ್ಲಿ ನಾಯಕ ನಾಯಕಿಯ ಹಾಗೆ ಪೋಷಕ ಪಾತ್ರಗಳು ಸಹ ಅಷ್ಟೇ ಮುಖ್ಯ ಪಾತ್ರ ನಿರ್ವಹಿಸುತ್ತದೆ. ಕರಾವಳಿಯಲ್ಲಿ ನಟ ಮಿತ್ರ ಅವರು ನಿರ್ವಹಿಸುತ್ತಿರುವ ಪಾತ್ರ ಅಷ್ಟೇ ಮಹತ್ವದಾಗಿದೆ. ಸದ್ಯ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ನಟ ಮಿತ್ರ ಎರಡು ಕೋಣಗಳನ್ನು ಹಿಡಿದು ನಿಂತಿದ್ದಾರೆ. ಅವರ ಹಿಂದೆ ಒಂದು ಲಾರಿ ನಿಂತಿದ್ದು ಅದರ ಮೇಲೆ ಮಾರಣಕಟ್ಟೆ ಎಂದು ಬರೆಯಲಾಗಿದೆ. ಈ ಲುಕ್ ನೋಡ್ತಿದ್ರೆ ಮಿತ್ರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ದುಪ್ಪಟ್ಟಾಗಿಸಿದೆ. ಮಹಾಬಲ ಪಾತ್ರದಲ್ಲಿ ಮಿತ್ರ ಮಿಂಚಲಿದ್ದಾರೆ.
ಇನ್ನೂ ಈ ಬಗ್ಗೆ ಮಾತನಾಡಿರುವ ಮಿತ್ರ, ‘ನನ್ನ ಸಿನಿ ಜೀವನದಲ್ಲಿಯೇ ನಾನು ಮಾಡಿರದ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಿರ್ದೇಶಕ ಗುರುದತ್ ಗಾಣಿಗ ಅವರು ನನಗೆ ಅದ್ಭುತವಾದ ಪಾತ್ರವನ್ನು ನೀಡಿದ್ದಾರೆ. ಕರಾವಳಿ ಸಿನಿಮಾದಲ್ಲಿ ನಟಿಸುತ್ತಿರುವ ಖುಷಿ ನನಗಿದೆ’ ಎನ್ನುತ್ತಾರೆ.
ಇತ್ತೀಚಿಗಷ್ಟೇ ಮುಹೂರ್ತ ಮಾಡಿಕೊಂಡು ಚಿತ್ರೀಕರಣಕ್ಕೆ ಹೊರಟಿರುವ ಸಿನಿಮಾ ತಂಡ ಕರಾವಳಿಯ ಸುತ್ತಮುತ್ತ ಶೂಟಿಂಗ್ ನಲ್ಲಿ ಬಿಸಿಯಾಗಿದೆ. ಚಿತ್ರಕ್ಕೆ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.
ಕರಾವಳಿ ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬರಲಿದೆ. ಕಂಬಳ ಪ್ರಪಂಚದಲ್ಲಿ ನಡೆಯುತ್ತಿರುವ ಕಥೆ. ಈ ಸಿನಿಮಾ ಸಂಪೂರ್ಣವಾಗಿ ಕಂಬಳದ ಬಗ್ಗೆ ಇರಲಿದೆ. ಇನ್ನು ಕರಾವಳಿ ಸಿನಿಮಾಗೆ ಅಭಿಮನ್ಯು ಸದಾನಂದ್ ಕ್ಯಾರೆಮಾ ವರ್ಕ್ ಇದೆ, ಸಚಿನ್ ಬಸ್ರೂರು ಸಂಗೀತ ಚಿತ್ರಕ್ಕಿದೆ. ಇನ್ನು ಉಳಿದಂತೆ ಈ ಸಿನಿಮಾದಲ್ಲಿ ಟಿವಿ ಶ್ರೀಧರ್, ಜಿ ಜಿ, ನಿರಂಜನ್ ಸೇರಿದಂತೆ ಹಲವು ಪ್ರಖ್ಯಾತ ಕಲಾವಿದರು ನಟಿಸುತ್ತಿದ್ದಾರೆ.
ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ (Karavali)ಸಿನಿಮಾದ ಮತ್ತೊಂದು ಮೆಗಾ ಪಾತ್ರ ರಿವೀಲ್ ಆಗಿದೆ. ಶಿವರಾತ್ರಿ ದಿನದಂದು ಅವನು ಎಂಟ್ರಿ ಕೊಡುತ್ತಿದ್ದಾನೆ ಎಂದು ಹೇಳುವ ಮೂಲಕ ಚಿತ್ರತಂಡ ಕುತೂಹಲ ಸೃಷ್ಟಿ ಮಾಡಿತ್ತು. ಇದೀಗ ಮಹಾಬಲ (Mahabala) ಪಾತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ. ಈ ಪಾತ್ರದಲ್ಲಿ ಹೆಸರಾಂತ ಹಾಸ್ಯ ನಟ ಮಿತ್ರ (Mitra) ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಇಂಥದ್ದೊಂದು ಪಾತ್ರವನ್ನು ಅವರು ನಿರ್ವಹಿಸುತ್ತಿದ್ದಾರೆ.
ಗುರುದತ್ ಗಾಣಿಗ (Gurudutt Ganiga) ನಿರ್ದೇಶದ ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾ ನಾನಾ ಕಾರಣಗಳಿಂದಾಗಿ ನಿರೀಕ್ಷೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊನ್ನೆಯಷ್ಟೇ ಸಿನಿಮಾದಿಂದ ನಾಯಕಿ ಯಾರು ಎನ್ನುವ ಮಾಹಿತಿ ಬಹಿರಂಗವಾಗಿತ್ತು. ಕರಾವಳಿಗೆ ನಾಯಕಿ ಯಾರಾಗಲಿದ್ದಾರೆ? ಕನ್ನಡದವರಾ ಅಥವಾ ಪರಭಾಷೆಯ ನಟಿನಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಅದಕ್ಕೂ ತೆರೆ ಎಳೆದಿದ್ದಾರೆ.
ನಟಿ ಸಂಪದಾ (Sampada) ಕರಾವಳಿ ಸಿನಿಮಾಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ್ದ ಸಂಪದಾ ಇದೀಗ ಪ್ಜಜ್ವಲ್‌ಗೆ ನಾಯಕಿಯಾಗುವ ಮೂಲಕ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆ ಬಳಿಕ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳದ ಸಂಪದಾ ಇದೀಗ ಬಹುನಿರೀಕ್ಷೆಯ ಸಿನಿಮಾಗೆ ನಾಯಕಿಯಾಗಿ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ಸಂಪದಾಗೆ ಇದು ಮೊದಲ ಸಿನಿಮಾವಲ್ಲ. ಈಗಾಗಲೇ ನಿಖಿಲ್ ಕುಮಾರ್ ನಟನೆಯ ರೈಡರ್ ಸಿನಿಮಾದಲ್ಲಿ ಸಂಪದಾ ನಟಿಸಿದ್ದರು. ಇದೀಗ ಕರಾವಳಿ ಕಥೆ ಕೇಳಿ ಇಂಪ್ರೆಸ್ ಆದ ಸಂಪದಾ ಪ್ರಜ್ವಲ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಸಂಪದಾ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೈಟಲ್ ಹೇಳುವ ಹಾಗೆ ಇದು ಪಕ್ಕಾ ಕರಾವಳಿ ಭಾಗದ ಸಿನಿಮಾ. ಸಂಪೂರ್ಣ ಬ್ಯಾಕ್ ಡ್ರಾಪ್ ಕರಾವಳಿ ಭಾಗದ್ದೆ ಆಗಿರಲಿದೆ. ಸಂಪದಾ ಕೂಡ ಕರಾವಳಿ ಹುಡುಗಿಯಾಗಿ ಮಿಂಚಲಿದ್ದಾರೆ.
ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರಜ್ವಲ್ ನಟನೆಯ 40ನೇ ಸಿನಿಮಾ ಇದಾಗಿದೆ. ಡೈನಾಮಿಕ್ ಪ್ರಿನ್ಸ್ ಈ ಸಿನಿಮಾದಲ್ಲಿ ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಸದ್ಯ ಫಸ್ಟ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕರಾವಳಿ ಸಂಪೂರ್ಣ ಚಿತ್ರೀಕಣ ಮಂಗಳೂರು ಸುತ್ತಮುತ್ತ ನಡೆಯಲಿದೆ.
ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ಕರಾವಳಿ ಸಿನಿಮಾ ಟೀಮ್ ಮಹಾಶಿವರಾತ್ರಿಗೆ (Mahashivaratri) ಮತ್ತೊಂದು ಉಡುಗೊರೆ ನೀಡಲು ರೆಡಿಯಾಗಿದೆ. ಅವನು ಬರುತ್ತಿದ್ದಾನೆ, ಮಹಾಶಿವರಾತ್ರಿಗೆ ಎಂಟ್ರಿ ಕೊಡುತ್ತಿದ್ದಾನೆ ಎಂದು ಪೋಸ್ಟರ್ ರಿಲೀಸ್ ಮಾಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಯಾರು ಬರುತ್ತಿದ್ದಾರೆ? ಯಾವುದದು ಎಂಟ್ರಿ ಎನ್ನುವುದನ್ನು ತಿಳಿದುಕೊಳ್ಳಲು ನಾಳೆಯವರೆಗೂ ಕಾಯಲೇಬೇಕು.
ಗುರುದತ್ ಗಾಣಿಗ (Gurudutt Ganiga) ನಿರ್ದೇಶದ ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾ ನಾನಾ ಕಾರಣಗಳಿಂದಾಗಿ ನಿರೀಕ್ಷೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊನ್ನೆಯಷ್ಟೇ ಸಿನಿಮಾದಿಂದ ನಾಯಕಿ ಯಾರು ಎನ್ನುವ ಮಾಹಿತಿ ಬಹಿರಂಗವಾಗಿತ್ತು. ಕರಾವಳಿಗೆ ನಾಯಕಿ ಯಾರಾಗಲಿದ್ದಾರೆ? ಕನ್ನಡದವರಾ ಅಥವಾ ಪರಭಾಷೆಯ ನಟಿನಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಅದಕ್ಕೂ ತೆರೆ ಎಳೆದಿದ್ದಾರೆ.
ನಟಿ ಸಂಪದಾ (Sampada) ಕರಾವಳಿ ಸಿನಿಮಾಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ್ದ ಸಂಪದಾ ಇದೀಗ ಪ್ಜಜ್ವಲ್‌ಗೆ ನಾಯಕಿಯಾಗುವ ಮೂಲಕ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆ ಬಳಿಕ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳದ ಸಂಪದಾ ಇದೀಗ ಬಹುನಿರೀಕ್ಷೆಯ ಸಿನಿಮಾಗೆ ನಾಯಕಿಯಾಗಿ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ಸಂಪದಾಗೆ ಇದು ಮೊದಲ ಸಿನಿಮಾವಲ್ಲ. ಈಗಾಗಲೇ ನಿಖಿಲ್ ಕುಮಾರ್ ನಟನೆಯ ರೈಡರ್ ಸಿನಿಮಾದಲ್ಲಿ ಸಂಪದಾ ನಟಿಸಿದ್ದರು. ಇದೀಗ ಕರಾವಳಿ ಕಥೆ ಕೇಳಿ ಇಂಪ್ರೆಸ್ ಆದ ಸಂಪದಾ ಪ್ರಜ್ವಲ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಸಂಪದಾ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೈಟಲ್ ಹೇಳುವ ಹಾಗೆ ಇದು ಪಕ್ಕಾ ಕರಾವಳಿ ಭಾಗದ ಸಿನಿಮಾ. ಸಂಪೂರ್ಣ ಬ್ಯಾಕ್ ಡ್ರಾಪ್ ಕರಾವಳಿ ಭಾಗದ್ದೆ ಆಗಿರಲಿದೆ. ಸಂಪದಾ ಕೂಡ ಕರಾವಳಿ ಹುಡುಗಿಯಾಗಿ ಮಿಂಚಲಿದ್ದಾರೆ.
ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರಜ್ವಲ್ ನಟನೆಯ 40ನೇ ಸಿನಿಮಾ ಇದಾಗಿದೆ. ಡೈನಾಮಿಕ್ ಪ್ರಿನ್ಸ್ ಈ ಸಿನಿಮಾದಲ್ಲಿ ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಸದ್ಯ ಫಸ್ಟ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕರಾವಳಿ ಸಂಪೂರ್ಣ ಚಿತ್ರೀಕಣ ಮಂಗಳೂರು ಸುತ್ತಮುತ್ತ ನಡೆಯಲಿದೆ.
ಕರಾವಳಿ (Karavali) ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ (Gurudutt Ganiga) ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ನಿರ್ಮಾ಼ಣವಾಗಿರೋ ಚಿತ್ರ. ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈಗಾಗಲೇ ಕರಾವಳಿ ಸಿನಿಮಾ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಚಿತ್ರತಂಡ ಅಧಿಕೃತವಾಗಿ ಮೂಹೂರ್ತ ಮಾಡುವ ಮೂಲಕ ಶೂಟಿಂಗ್ ಗೆ ಹೊರಡಲು ಸಿದ್ಧವಾಗಿದೆ. ಬೆಂಗಳೂರಿನ ಪ್ರಸಿದ್ಧ ಬುಲ್ ಟೆಂಪಲ್ ನಲ್ಲಿ ಚಿತ್ರದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ.
ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾ ತಂಡ ಹಾಜರಾಗಿತ್ತು. ಜೊತೆಗೆ ಹಿರಿಯ ನಟ ದೇವರಾಜ್ ದಂಪತಿ ಸೇರಿದಂತೆ ಪ್ರಜ್ವಲ್ ದೇವರಾಜ್ ಅವರ ಫ್ಯಾಮಿಲಿ ಕೂಡ ಭಾಗಿಯಾಗಿತ್ತು. ಇನ್ನು ವಿಶೇಷ ಎಂದರೆ ಎಡಿಜಿಪಿ ಅನುಚಿತ್ ಅವರು ಭಾಗಿಯಾಗಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ನಿರ್ಮಾಪಕ ಜಾಕ್ ಮಂಜು ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದರು. ಡೈನಾಮಿಕ್ ದೇವರಾಜ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದ್ರು.
ಮುಹೂರ್ತದ ಹೈಲೈಟ್ಸ್ ಎಂದರೆ ಕೋಣ. ಕರಾವಳಿ ಚಿತ್ರದ ಫಸ್ಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕೋಣ ಪತ್ರಿಕಾಗೋಷ್ಠಿಗೂ ಹಾಜರಾಗಿದ್ದು ವಿಶೇಷವಾಗಿತ್ತು. ಗಜಗಾತ್ರದ ಕೋಣವನ್ನ ನೋಡಿದವರೆಲ್ಲಾ ಆಶ್ಚರ್ಯ ಪಟ್ಟಿದ್ದೆ ಹೆಚ್ಚು. ಇನ್ನು ಮಾಧ್ಯಮದ ಮುಂದೆ ಹಾಜರಾಗಿದ್ದ ಸಿನಿಮಾ ತಂಡ ಚಿತ್ರದ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಹಂಚಿಕೊಂಡರು. ನಿರ್ದೇಶಕ ಮತ್ತು ನಿರ್ಮಾಪಕ ಗುರುದತ್ ಗಾಣಿಗ ಮಾತನಾಡಿ, ‘ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಹಳ್ಳಿಯ ಕಥೆ. ಕಂಬಳ ಪ್ರಪಂಚದಲ್ಲಿನೋಡಯುತ್ತಿರುವವ ಕಥೆ. ಕಂಬಳದ ಬಗ್ಗೆ ಇರಲಿದೆ’ ಎಂದು ಹೇಳಿದರು. ಮತ್ತು ಪ್ರಾಣಿಗಳ ಜೊತೆ ಕೆಲಸ ಮಾಡುವುದು ಎಷ್ಟು ಕಷ್ಟ, ಹೇಗೆ ಕೆಲಸ ಮಾಡಬೇಕು, ಚಿತ್ರೀಕರಣಕ್ಕೆ ಏನೆಲ್ಲಾ ತಯಾರಿ ಮಾಡಿಕೊಂಡಿದ್ದೇವೆ ಎನ್ನುವುದನ್ನು ಸಹ ತಿಳಿಸಿದರು .
ನಟ ಪ್ರಜ್ವಲ್ ದೇವರಾಜ್ ಮಾತನಾಡಿ ಕೋಣದ ಜೊತೆಗಿನ ಶೂಟಿಂಗ್ ಅನುಭವ ಬಿಚ್ಚಿಟ್ಟರು. ‘ನೋಡೋಕೆ ಮಾತ್ರ ಭಯ ಆದರೆ ತುಂಬಾ ಸಾಫ್ಟ್ ಆಗಿದೆ. ಕನ್ನಡ ಸಿನಿಮಾರಂಗ ಬೆಳೆಯುತ್ತಿದೆ. ಕರಾವಳಿ ಸಿನಿಮಾದ ಟೀಸರ್ ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಕಥೆ ತುಂಬಾ ಚೆನ್ನಾಗಿದೆ. ನನಗೆ ತುಂಬಾ ಇಷ್ಟವಾಗಿದೆ. ನನ್ನ ಫ್ಯಾನ್ಸ್‌ಗೆ ಖುಷಿಯಾಗುವ ಹಾಗೆ ನಾನು ಸಿನಿಮಾಗಳನ್ನ ಮಾಡುತ್ತೇನೆ. ಕರಾವಳಿ ಸಿನಿಮಾ ಕೂಡ ನನ್ನ ಫ್ಯಾನ್ಸಿಗೆ ತುಂಬಾ ಇಷ್ಟ ಆಗುತ್ತೆ. ಇದು ನನ್ನ 40 ನೇ ಸಿನಿಮಾ ಎನ್ನುವುದು ವಿಶೇಷ’ ಎಂದರು.
ಇನ್ನು ಮಗನ ಸಿನಿಮಾ ಮುಹೂರ್ತಕ್ಕೆ ಆಗಮಿಸಿದ ಡೈನಾಮಿಕ್ ಸ್ಟಾರ್ ದೇವರಾಜ್ ಮಾತನಾಡಿ, ಇಡೀ ತಂಡಕ್ಕೆ ಶುಭ ಹಾರೈಸುವ ಜೊತೆಗೆ ‘ಕರಾವಳಿ ನನ್ನ ಮಗನ ಕರಿಯರ್ ನಲ್ಲೇ ಬೆಸ್ಟ್ ಸಿನಿಮಾ ಆಗಲಿದೆ. ಎಲ್ಲೇ ಹೋದರು ಕರಾವಳಿ ಚಿತ್ರದ ಬಗ್ಗೆ ಕೇಳುತ್ತಾರೆ’ ಎಂದರು. ಕರಾವಳಿ ಸಿನಿಮಾಗೆ ನಾಯಕಿಯಾಗಿ ಸಂಪದಾ ಆಯ್ಕೆ ಆಗಿದ್ದಾರೆ. ಈಗಾಗಲೇ ಬೆಂಕಿ ಹಾಗೂ ರೈಡರ್ ಸಿನಿಮಾಗಳಲ್ಲಿ ಕಾಣಿಸೊಂಡಿದ್ದ ಸಂಪದಾ ಇದೀಗ ಕರಾವಳಿ ಸಿನಿಮಾದಲ್ಲಿಮಿಂಚಲಿದ್ದಾರೆ. ಚಿತ್ರದ ಬಗ್ಗೆಸ ಸಖತ್ ಎಕ್ಸಾಯಿಟ್ ಆಗಿರುವ ಸಂಪದಾ ಪಶುವೈದ್ಯೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನು ಕರಾವಳಿ ಸಿನಿಮಾಗೆ ಅಭಿಮನ್ಯು ಸದಾನಂದ್ ಕ್ಯಾರೆಮಾ ವರ್ಕ್ ಇದೆ, ಸಚಿನ್ ಬಸ್ರೂರು ಸಂಗೀತ ಚಿತ್ರಕ್ಕಿದೆ. ವಿಶೇಷ ಎಂದರೆ ನಟ ಮಿತ್ರ ಕರಾವಳಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಈ ಟಿವಿ ಶ್ರೀಧರ್, ಜಿ ಜಿ, ನಿರಂಜನ್ ಇನ್ನು ಹಲವು ಪ್ರಖ್ಯಾತ ಕಲಾವಿದರು ಕರಾವಳಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸದ್ಯ ಮುಹೂರ್ತ ಮುಗಿಸಿರೋ ಸಿನಿಮಾತಂಡ ಇದೇ ತಿಂಗಳು 23 ರಿಂದ ಕರಾವಳಿ ಭಾಗದಲ್ಲಿ ಚಿತ್ರೀಕರಣ ಶುರು ಮಾಡಲಿದೆ.
ಕರಾವಳಿ (Karavali) ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ (Gurudutt Ganiga) ನಿರ್ದೇಶದ ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾದ ಅಪ್‌ಡೇಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇದೀಗ ಸಿನಿಮಾದಿಂದ ನಾಯಕಿ ಯಾರು ಎನ್ನುವ ಮಾಹಿತಿ ಬಹಿರಂಗವಾಗಿದೆ. ಕರಾವಳಿಗೆ ನಾಯಕಿ ಯಾರಾಗಲಿದ್ದಾರೆ? ಕನ್ನಡದವರಾ ಅಥವಾ ಪರಭಾಷೆಯ ನಟಿನಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಆದರೀಗ ಆ ಕುತೂಹಲಕ್ಕೆ ತೆರೆ ಎಳೆದಿದೆ ಸಿನಿಮಾತಂಡ.
ಈ ಸಿನಿಮಾ ಅಮೂಲ್ಯ ನಾಯಕಿಯಾಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಆದರೆ, ಹೊಸ ಹುಡುಗಿಗೆ ನಿರ್ದೇಶಕರು ಮಣೆ ಹಾಕಿದ್ದಾರೆ. ನಟಿ ಸಂಪದಾ (Sampada) ಕರಾವಳಿ ಸಿನಿಮಾಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ್ದ ಸಂಪದಾ ಇದೀಗ ಪ್ಜಜ್ವಲ್‌ಗೆ ನಾಯಕಿಯಾಗುವ ಮೂಲಕ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆ ಬಳಿಕ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳದ ಸಂಪದಾ ಇದೀಗ ಬಹುನಿರೀಕ್ಷೆಯ ಸಿನಿಮಾಗೆ ನಾಯಕಿಯಾಗಿ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ಸಂಪದಾಗೆ ಇದು ಮೊದಲ ಸಿನಿಮಾವಲ್ಲ. ಈಗಾಗಲೇ ನಿಖಿಲ್ ಕುಮಾರ್ ನಟನೆಯ ರೈಡರ್ ಸಿನಿಮಾದಲ್ಲಿ ಸಂಪದಾ ನಟಿಸಿದ್ದರು. ಇದೀಗ ಕರಾವಳಿ ಕಥೆ ಕೇಳಿ ಇಂಪ್ರೆಸ್ ಆದ ಸಂಪದಾ ಪ್ರಜ್ವಲ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇಂದು ಪ್ರೇಮಿಗಳ ದಿನದ ವಿಶೇಷವಾಗಿ ಕರಾವಳಿ ಸಿನಿಮತಂಡ ನಾಯಕಿ ಯಾರೆಂದು ರಿವೀಲ್ ಮಾಡಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಸಂಪದಾ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೈಟಲ್ ಹೇಳುವ ಹಾಗೆ ಇದು ಪಕ್ಕಾ ಕರಾವಳಿ ಭಾಗದ ಸಿನಿಮಾ. ಸಂಪೂರ್ಣ ಬ್ಯಾಕ್ ಡ್ರಾಪ್ ಕರಾವಳಿ ಭಾಗದ್ದೆ ಆಗಿರಲಿದೆ. ಸಂಪದಾ ಕೂಡ ಕರಾವಳಿ ಹುಡುಗಿಯಾಗಿ ಮಿಂಚಲಿದ್ದಾರೆ.
ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರಜ್ವಲ್ ನಟನೆಯ 40ನೇ ಸಿನಿಮಾ ಇದಾಗಿದೆ. ಡೈನಾಮಿಕ್ ಪ್ರಿನ್ಸ್ ಈ ಸಿನಿಮಾದಲ್ಲಿ ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಸದ್ಯ ಫಸ್ಟ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕರಾವಳಿ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ ಮಾಡಲಿದೆ. ಸಂಪೂರ್ಣ ಚಿತ್ರೀಕಣ ಮಂಗಳೂರು ಸುತ್ತಮುತ್ತ ನಡೆಯಲಿದೆ.
ಅಂಬಿ ನಿಂಗೆ ವಯಸ್ಸಾಯ್ತು ಸಿನಿಮಾ ಮೂಲಕ ಚಿತ್ರಜಗತ್ತಿಗೆ ನಿರ್ದೇಶಕರಾಗಿ ಎಂಟ್ರಿ ಪಡೆದಿರುವ ಗುರುದತ್ ಗಾಣಿಗ, ಇದೀಗ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಆ ಚಿತ್ರಕ್ಕೆ ಅವರು ಕರಾವಳಿ ಎಂದು ಹೆಸರಿಟ್ಟಿದ್ದಾರೆ. ಈ ಹಿಂದೆ ಟೀಸರ್ ರಿಲೀಸ್ ಮಾಡುವ ಮೂಲಕ ಸಿನಿಮಾ ಬಗ್ಗೆ ಕುತೂಹಲ ಮೂಡಿಸಿದ್ದವರು, ಇದೀಗ ಹೊಸ ವರ್ಷಕ್ಕೆ ಹೊಸದೊಂದು ಪೋಸ್ಟರ್ (Poster) ರಿಲೀಸ್ ಮಾಡಿದ್ದಾರೆ. ಆ ಪೋಸ್ಟರ್ ಕೂಡ ಗಮನ ಸೆಳೆಯುತ್ತಿದೆ.
ಕರಾವಳಿ (Karavali) ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಇದಾಗಿದ್ದು, ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದೆ. ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಈ ಹಿಂದೆ ಅದ್ದೂರಿಯಾಗಿ ಲಾಂಚ್ ಮಾಡಲಾಗಿತ್ತು. ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ (Gurudutt Ganiga) ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.
ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಗೆಯೇ ಎಮ್ಮೆ ಕೂಡ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್ ನೋಡ್ತಿದ್ರೆ ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಬಗ್ಗೆ ಇರುವ ಸಿನಿಮಾ ಎನ್ನುವುದು ಮೇಲ್ನೋಟಕ್ಕೆ ಗೋತ್ತಾಗುತ್ತಿದೆ. ಬ್ಯಾಗ್ರೌಂಡ್‌ನಲ್ಲಿ ಬರುವ ಯಕ್ಷಗಾನದ ಧ್ವನಿ ಟೀಸರ್‌ನ ತೂಕವನ್ನು ಹೆಚ್ಚಿಸುವ ಜೊತೆಗೆ ಕುತೂಹಲ ದುಪ್ಪಟ್ಟು ಮಾಡಿದೆ.
ಕರಾವಳಿ ಎಂದಮೇಲೆ ಆ ಭಾಗದ ಸಂಸ್ಕೃತಿ, ದೈವ, ಯಕ್ಷಗಾನ ಮುಖ್ಯವಾಗಿ ಕಂಬಳ ಸೇರಿದಂತೆ ಅಲ್ಲಿನ ಆಚಾರ ವಿಚಾರ ಎಲ್ಲವನ್ನು ಈ ಸಿನಿಮಾದಲ್ಲಿ ನೋಡುವ ಕಾತರದಲ್ಲಿದ್ದಾರೆ ಅಭಿಮಾನಿಗಳು. ಇನ್ನು ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
ಸದ್ಯ ರಿಲೀಸ್ ಆಗಿರುವ ಟೀಸರ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರ ಪಾತ್ರ ನೋಡಿದ್ರೆ ಇದುವರೆಗೂ ಅವರು ಮಾಡಿರುವ ಪಾತ್ರಗಳಲ್ಲಿಯೇ ಅತ್ಯಂತ ವಿಭಿನ್ನವಾಗಿದೆ. ಟೀಸರ್ ನೋಡ್ತಿದ್ರೆ ಪ್ರಜ್ವಲ್ 40ನೇ ಸಿನಿಮಾ ತುಂಬಾ ವಿಶೇಷವಾಗಿ ಮೂಡಿ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುದರಲ್ಲಿ ಎರಡು ಮಾತಿಲ್ಲ.
ಸ್ಯಾಂಡಲ್‌ವುಡ್ ನಲ್ಲಿ ಕರಾವಳಿ (Karavali) ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ (Gurudutt Ganiga) ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.
ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಗೆಯೇ ಎಮ್ಮೆ ಕೂಡ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್ ನೋಡ್ತಿದ್ರೆ ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಬಗ್ಗೆ ಇರುವ ಸಿನಿಮಾ ಎನ್ನುವುದು ಮೇಲ್ನೋಟಕ್ಕೆ ಗೋತ್ತಾಗುತ್ತಿದೆ. ಬ್ಯಾಗ್ರೌಂಡ್‌ನಲ್ಲಿ ಬರುವ ಯಕ್ಷಗಾನದ ಧ್ವನಿ ಟೀಸರ್‌ನ ತೂಕವನ್ನು ಹೆಚ್ಚಿಸುವ ಜೊತೆಗೆ ಕುತೂಹಲ ದುಪ್ಪಟ್ಟು ಮಾಡಿದೆ.
ಕರಾವಳಿ ಎಂದಮೇಲೆ ಆ ಭಾಗದ ಸಂಸ್ಕೃತಿ, ದೈವ, ಯಕ್ಷಗಾನ ಮುಖ್ಯವಾಗಿ ಕಂಬಳ ಸೇರಿದಂತೆ ಅಲ್ಲಿನ ಆಚಾರ ವಿಚಾರ ಎಲ್ಲವನ್ನು ಈ ಸಿನಿಮಾದಲ್ಲಿ ನೋಡುವ ಕಾತರದಲ್ಲಿದ್ದಾರೆ ಅಭಿಮಾನಿಗಳು. ಇನ್ನು ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
ಸದ್ಯ ರಿಲೀಸ್ ಆಗಿರುವ ಟೀಸರ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರ ಪಾತ್ರ ನೋಡಿದ್ರೆ ಇದುವರೆಗೂ ಅವರು ಮಾಡಿರುವ ಪಾತ್ರಗಳಲ್ಲಿಯೇ ಅತ್ಯಂತ ವಿಭಿನ್ನವಾಗಿದೆ. ಟೀಸರ್ ನೋಡ್ತಿದ್ರೆ ಪ್ರಜ್ವಲ್ 40ನೇ ಸಿನಿಮಾ ತುಂಬಾ ವಿಶೇಷವಾಗಿ ಮೂಡಿ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುದರಲ್ಲಿ ಎರಡು ಮಾತಿಲ್ಲ. ಇದೀಗ ಟೀಸರ್ ಮೂಲಕ ಸದ್ದು ಮಾಡುತ್ತಿರುವ ‘ಕರಾವಳಿ’ ಈ ತಿಂಗಳ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಶೂಟಿಂಗ್‌ಗೆ ಹೊರಡಲಿದೆ. ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.
ನಟ ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ಹೊಸ ಸಿನಿಮಾದ (New Movie) ಪೋಸ್ಟರ್ ನವರಾತ್ರಿಯ ಮೊದಲ ದಿನ ಬಿಡುಗಡೆಯಾಗಿದೆ. ಇದು ಪ್ರಜ್ವಲ್ ನಟನೆಯ 40ನೇ ಸಿನಿಮಾ. ಈಗಾಗಲೇ ಪ್ರಜ್ವಲ್ ಬಳಿ ‘ಮಾಫಿಯಾ’ ಸೇರಿದಂತೆ ಇನ್ನೂ ಹೆಸರಿಡದ ಎರಡು ಚಿತ್ರಗಳಿವೆ. ಇದೀಗ 40ನೇ ಸಿನಿಮಾ ಅನೌನ್ಸ್ ಆಗಿದೆ. ಸದ್ಯ ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಪ್ರಜ್ವಲ್ ಹೊಸ ಸಿನಿಮಾಗೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ಭರ್ಜರಿ ಆಗಿದ್ದು ಕುತೂಹಲ ಹೆಚ್ಚಿಸಿದೆ. ಪ್ರಜ್ವಲ್ ಸಿನಿ ಜೀವನದಲ್ಲೇ ಇದೊಂದು ವಿಭಿನ್ನವಾದ ಸಿನಿಮಾವಾಗಲಿದೆ. ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ.
ಪ್ರಜ್ವಲ್ ದೇವರಾಜ್ ಅವರ 40ನೇ ಸಿನಿಮಾಗೆ ‘ಅಂಬಿ ನಿಂಗೆ ವಯಸಾಯ್ತೋ’ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಗುರುದತ್ (Gurudutt Ganiga) ನಿರ್ದೇಶನದ ಎರಡನೇ ಸಿನಿಮಾವಾಗಿದೆ. ಮೊದಲ ಸಿನಿಮಾ ‘ಅಂಬಿ ನಿಂಗೆ ವಯಸಾಯ್ತೋ’ 2018 ರಲ್ಲಿ ಬಿಡುಗಡೆಯಾಗಿತ್ತು. ಬಳಿಕ ಗುರುದತ್ ಯಾವುದೇ ಸಿನಿಮಾ ಮಾಡಿರಲಿಲ್ಲ. ಮೊದಲ ಸಿನಿಮಾದಲ್ಲೇ ರೆಬಲ್ ಸ್ಟಾರ್ ಅಂಬರೀಶ್, ಕಿಚ್ಚ ಸುದೀಪ್, ಸುಹಾಸಿನಿ ಅಂತಹ ದೊಡ್ಡ ದೊಡ್ಡ ಸ್ಟಾರ್ ಕಲಾವಿದರಿಗೆ ನಿರ್ದೇಶನ ಮಾಡಿದ್ದ ಗುರು ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಇದೀಗ ಆ ಎಲ್ಲಾ ಕುತೂಹಲ ಮತ್ತು ಪ್ರಶ್ನೆಗಳಿಗೆ ತೆರೆಬಿದ್ದಿದೆ.
ಸಿನಿಮಾದ ಪೋಸ್ಟರ್ ನೋಡಿದ್ದರೆ ಇದು ಕಂಬಳದ ಬಗ್ಗೆ ಇರುವ ಸಿನಿಮಾ ಎನ್ನುವುದು ಗೊತ್ತಾಗುತ್ತಿದೆ. ಈ ಮೂಲಕ ಕರಾವಳಿ ಭಾಗದ ಮತ್ತೊಂದು ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಬರಲು ಸಜ್ಜಾಗುತ್ತಿದೆ. ಈ ಸಿನಿಮಾ ವಿಕೆ ಫಿಲ್ಮ್ಸ್ ಹಾಗೂ ಗುರುದತ್ ಗಾಣಿಗ ನಿರ್ಮಾಣದಲ್ಲಿ ಮೂಡಿಬರುತ್ತಿದೆ.
ಗುರು ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಸಿನಿಮಾಗೆ ಸಚಿನ್ ಬಸ್ರೂರು ಸಂಗೀತವಿದೆ. ಅಭಿಮನ್ಯು ಸಧಾನಂದ್ ಅವರ ಕ್ಯಾಮರಾ ವರ್ಕ್ ಸಿನಿಮಾಗಿದೆ. ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಸದ್ಯದಲ್ಲೇ ಟೈಟಲ್ ಮತ್ತು ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬರಲಿದೆ.