Tag: gururaj kulkarni

  • ಮುಕ್ತಾಯ ಹಂತದಲ್ಲಿ ರವಿಚಂದ್ರನ್ ನಟನೆಯ ‘ದ ಜಡ್ಜ್‌ಮೆಂಟ್‌’

    ಮುಕ್ತಾಯ ಹಂತದಲ್ಲಿ ರವಿಚಂದ್ರನ್ ನಟನೆಯ ‘ದ ಜಡ್ಜ್‌ಮೆಂಟ್‌’

    ಕ್ರೇಜಿಸ್ಟಾರ್ ವಿ ರವಿಚಂದ್ರನ್ (Ravichandran) ಪ್ರಮುಖಪಾತ್ರದಲ್ಲಿ ನಟಿಸಿರುವ  ‘ದ ಜಡ್ಜ್ ಮೆಂಟ್’ (The Judgment) ಚಿತ್ರದ ಚಿತ್ರೀಕರಣ (Shooting) ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರದ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಈ ಪತ್ರಿಕಾಗೋಷ್ಠಿಯಲ್ಲಿ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು.

    ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ) (Gururaj Kulkarni) , ನಮ್ಮ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸಂಕಲನ ಕಾರ್ಯ ನಡೆಯುತ್ತಿದೆ. ನಮ್ಮ ಚಿತ್ರದ ತಂತ್ರಜ್ಞರನ್ನು ಪರಿಚಯಿಸುವ ಸಲುವಾಗಿ ಈ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ.  ನಾನು ಹಿಂದೆ ನಿರ್ಮಾಪಕನಾಗಿ ಬಂದಾಗ ಯಾರು ಕೂಡ ನನ್ನನ್ನು ಪರಿಚಯಿಸಿರಲಿಲ್ಲ. ಆಗ ನನಗೆ ತುಂಬಾ ಬೇಸರವಾಗಿತ್ತು. ನಿರ್ಮಾಪಕರಿಗೆ ಸಲುವ ಗೌರವ ಸಲ್ಲಲ್ಲೇ ಬೇಕು. ಹಾಗಾಗಿ ನಾನು ಮೊದಲು ನಿರ್ಮಾಪಕರನ್ನು ಪರಿಚಯಿಸುತ್ತಿದ್ದೇನೆ. ಶರದ್ ನಾಡಗೌಡ, ವಿಶ್ವನಾಥ್ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಹಾಡನ್ನು ಬರೆದಿದ್ದಾರೆ. ವಾಸುದೇವ ಚಿತ್ರಕಥೆ, ಎಂ.ಎಸ್ ರಮೇಶ್ ಸಂಭಾಷಣೆ, ಕೆಂಪರಾಜ್ ಸಂಕಲನ ಹಾಗೂ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಈ ಚಿತ್ರಕ್ಕಿದೆ ಎಂದರು.

    ನಾವು ಗೆಳೆಯರೆಲ್ಲಾ ಸೇರಿಕೊಂಡು ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ ಚಿತ್ರೀಕರಣ ಪೂರ್ಣವಾಗಿ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ನಮ್ಮ ಚಿತ್ರ ಈಗಾಗಲೇ ಮುಂಬೈ ತನಕ ತಲುಪಿದೆ. ಚಿತ್ರವನ್ನು ಹಿಂದಿಯಲ್ಲಿ ರಿಮೇಕ್ ಮಾಡುವ ಯೋಜನೆಯಿದೆ. ಅಲ್ಲಿನ ಪ್ರಸಿದ್ದ ನಟರೊಬ್ಬರ ಜೊತೆ ಸದ್ಯದಲ್ಲೇ ಈ ಕುರಿತು ಚರ್ಚಿಸಲಿದ್ದೇವೆ.‌  ನಮ್ಮ ಚಿತ್ರ ಅಲ್ಲಿಯವರೆಗೂ ತಲುಪಲು ಇಲ್ಲಿನ ಮಾಧ್ಯಮ ನೀಡಿದ ಬೆಂಬಲ ಕಾರಣ ಎಂದರು ನಿರ್ಮಾಪಕರಾದ ಶರದ್ ನಾಡಗೌಡ ಹಾಗೂ ರಾಮು ರಾಯಚೂರು.

    ಈಗ ಸಾಮಾನ್ಯವಾಗಿ ಮೊಬೈಲ್ ನಲ್ಲೇ ಟ್ಯೂನ್ ಕಳುಹಿಸುತ್ತಾರೆ. ನಾವು ಸಾಹಿತ್ಯ ಬರೆದು ಕಳುಹಿಸುತ್ತೇವೆ. ಆದರೆ ಈ ಚಿತ್ರದಲ್ಲಿ ಅನೂಪ್ ಸೀಳಿನ್ ಅವರ ಉಪಸ್ಥಿತಿಯಲ್ಲೇ ಹಾಡು ಬರೆದಿದ್ದೇನೆ. ನಿರ್ದೇಶಕರಿಗೂ ಇಷ್ಟವಾಗಿದೆ ಎಂದರು ಗೀತರಚನೆಕಾರ ಪ್ರಮೋದ್ ಮರವಂತೆ. ನನ್ನ ಮೂವತ್ತೆರಡು ವರ್ಷಗಳ ಸಿನಿ ಜರ್ನಿಯಲ್ಲಿ ತಂತ್ರಜ್ಞರಿಗಾಗಿ ಪತ್ರಿಕಾಗೋಷ್ಠಿ ಆಯೋಜಿಸಿರುವುದು ಇದೇ ಮೊದಲಿರಬೇಕು. ಈ ಚಿತ್ರದ ಸಂಭಾಷಣೆ ಮಾಮೂಲಿ ತರಹ ಇಲ್ಲ. ಸ್ವಲ್ಪ ಭಿನ್ನವಾಗಿದೆ ಎಂದರು ಸಂಭಾಷಣೆ ಬರೆದಿರುವ ಎಂ ಎಸ್ ರಮೇಶ್.

    ಈಗ ಸಾಮಾನ್ಯವಾಗಿ ಕಥೆಯನ್ನು ಯಾರೊಂದಿಗೂ ಜಾಸ್ತಿ ಚರ್ಚೆ ಮಾಡುವುದಿಲ್ಲ. ಆದರೆ ಈ ಚಿತ್ರದ ಕಥೆಯನ್ನು ನಿರ್ದೇಶಕರು ಸತ್ಯಪ್ರಕಾಶ್, ಗೋಪಿ ಪೀಣ್ಯ ಮುಂತಾದವರ ಜೊತೆ ಚರ್ಚಿಸಿದ್ದರು. ಹಾಗೆ ಮಾಡಿದಾಗ ಒಂದೊಳ್ಳೆ ಕಥೆ ಹುಟ್ಟುತ್ತದೆ ಎಂದರು ಸಂಕಲನಕಾರ ಕೆಂಪರಾಜು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಸಹ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಬಗ್ಗೆ ಸಂತಸ ವ್ಯಕ್ತಪಡಿಸಿ, ಚಿತ್ರೀಕರಣದ ಸನುಭವವನ್ನು ಹಂಚಿಕೊಂಡರು. ಕ್ರೇಜಿಸ್ಟಾರ್ ರವಿಚಂದ್ರನ್, ನಾಗಾಭರಣ, ದಿಗಂತ್ , ಧನ್ಯ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ದಿ ಜಡ್ಜ್ ಮೆಂಟ್’ ಚಿತ್ರಕ್ಕೆ ಕ್ಲೈಮ್ಯಾಕ್ಸ್: ನಟ ರವಿಚಂದ್ರನ್ ಭಾಗಿ

    ‘ದಿ ಜಡ್ಜ್ ಮೆಂಟ್’ ಚಿತ್ರಕ್ಕೆ ಕ್ಲೈಮ್ಯಾಕ್ಸ್: ನಟ ರವಿಚಂದ್ರನ್ ಭಾಗಿ

    ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್ ಮೆಂಟ್’ (The Judgment) ಚಿತ್ರದ ಮಧ್ಯಂತರ ಮತ್ತು ಕ್ಲೈಮ್ಯಾಕ್ಸ್  (Climax Shooting) ಭಾಗದ ಚಿತ್ರೀಕರಣ ಇತ್ತೀಚೆಗೆ ಮೈಸೂರು ರಸ್ತೆಯಲ್ಲಿರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು. ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್, ಸುಜಯ್ ಶಾಸ್ತ್ರಿ, ಜಗದೀಶ್ ಮಲ್ನಾಡ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ  ಮತ್ತು ಅರವಿಂದ್ ಕುಪ್ಳೀಕರ್ ಮುಂತಾದ ನುರಿತ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

    ಗುರುರಾಜ ಕುಲಕರ್ಣಿ(ನಾಡಗೌಡ) (Gururaj Kulkarni) ನಿರ್ದೇಶನದಲ್ಲಿ, ಸಿನಿಮಾಟೋಗ್ರಾಫರ್ ಪಿ. ಕೆ. ಹೆಚ್. ದಾಸ್ ಮೂರು ಕ್ಯಾಮೆರಾಗಳನ್ನು ಬಳಸಿಕೊಂಡು ಕ್ಲೈಮ್ಯಾಕ್ಸ್ ಭಾಗವನ್ನು ಚಿತ್ರಿಸಿಕೊಂಡರು. ವಿಶ್ವನಾಥ ಗುಪ್ತಾ, ರಾಮು ರಾಯಚೂರು ಮತ್ತು ರಾಜಶೇಖರ ಪಾಟೀಲ್ ಈ ಚಿತ್ರದ ನಿರ್ಮಾಪಕರು.

    ದಿ ಜಡ್ಜ್ ಮೆಂಟ್ ಕಥೆ ಲೀಗಲ್ ಥ್ರಿಲ್ಲರ್  ಶೈಲಿಯದಾಗಿದ್ದು, ರಾಜ್ಯಾಂಗ ಮತ್ತು ನ್ಯಾಯಾಂಗದ ಸುತ್ತ ನಡೆಯುವ ಘಟನೆಗಳನ್ನು ಬಳಸಿಕೊಂಡು ಕಾಲ್ಪನಿಕ ಕಥೆ ಹೆಣೆಯಲಾಗಿದೆ. ಈ ಸಿನಿಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವದು ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ  ತಿಳಿಸಿದ್ದಾರೆ.

    ಕ್ರೇಜಿ ಸ್ಟಾರ್ ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್ ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ ಎಸ್ ನಾಗಾಭರಣ, ಪ್ರಕಾಶ್  ಬೆಳವಾಡಿ, ರಂಗಾಯಣ ರಘು, ಸುಜಯ್ ಶಾಸ್ತ್ರಿ, ರಾಜೇಂದ್ರ ಕಾರಂತ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಮ್, ಬಾಲಾಜಿ ಮನೋಹರ್, ಅರವಿಂದ್ ಕುಪ್ಳೀಕರ್ ಮತ್ತು ಜಗದೀಶ್ ಮಲ್ನಾಡ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಗುರುರಾಜ ಕುಲಕರ್ಣಿ  ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌,  ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ.  ರವಿ ವರ್ಮ ಸಾಹಸ ನಿರ್ದೇಶನ ಹಾಗೂ ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ದ ಜಡ್ಜ್ ಮೆಂಟ್ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರವಿಚಂದ್ರನ್ ಗಾಗಿ ಮತ್ತೆ ಕನ್ನಡಕ್ಕೆ ಬರಲಿದ್ದಾರಂತೆ ಖುಷ್ಬೂ

    ರವಿಚಂದ್ರನ್ ಗಾಗಿ ಮತ್ತೆ ಕನ್ನಡಕ್ಕೆ ಬರಲಿದ್ದಾರಂತೆ ಖುಷ್ಬೂ

    ಣಧೀರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹೆಸರು ರವಿಚಂದ್ರನ್ (Ravichandran) ಮತ್ತು ಖುಷ್ಭೂ (Khushbhu) ಅವರದ್ದು. ಈ ಸಿನಿಮಾದ ನಂತರ ಇದೇ ಜೋಡಿ ಅನೇಕ ಸಿನಿಮಾಗಳನ್ನೂ ಮಾಡಿದೆ. ನಂತರದ ದಿನಗಳಲ್ಲಿ ಮತ್ತೆ ಕಾಣಿಸಿಕೊಂಡಿಲ್ಲ. ಸದ್ಯ ಗಾಂಧಿನಗರದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ ಮತ್ತೆ ರವಿಚಂದ್ರನ್ ಹಾಗೂ ಖುಷ್ಭೂ ಒಟ್ಟಾಗಿ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ನಿರ್ದೇಶಕ ಗುರುರಾಜ್ ಕುಲಕರ್ಣಿ (Gururaj Kulkarni) ಎನ್ನುವವರು ರವಿಚಂದ್ರನ್ ಗಾಗಿ ಸಿನಿಮಾವೊಂದನ್ನು ಮಾಡುತ್ತಿದ್ದು, ಈ ಸಿನಿಮಾದ ನಾಯಕಿಯನ್ನಾಗಿ ಖುಷ್ಬೂ ಅವರನ್ನೇ ಆಯ್ಕೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದಾರೆ. ಒಂದು ಸುತ್ತಿನ ಮಾತುಕತೆ ಕೂಡ ಆಗಿದೆ ಎನ್ನುವ ಸುದ್ದಿಯಿದೆ. ಸದ್ಯ ಖುಷ್ಭೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪಾತ್ರ ಒಪ್ಪಬಹುದು ಎನ್ನಲಾಗುತ್ತಿದೆ.

    ಇದೊಂದು ಥ್ರಿಲ್ಲರ್ ಮಾದರಿಯ ಚಿತ್ರವಾಗಿದ್ದು, ರವಿಚಂದ್ರನ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ ಖುಷ್ಭೂ ಅವರನ್ನು ಮತ್ತೆ ತೆರೆಯ ಮೇಲೆ ತೋರಿಸಬೇಕು ಎನ್ನುವ ಆಸೆ ನಿರ್ದೇಶಕರದ್ದು. ಇದೇ ತಿಂಗಳು 21ರಂದು ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಆಗಲಿದೆಯಂತೆ. ಅಂದುಕೊಂಡಂತೆ ಆದರೆ, ಆ ದಿನದೊಳಗೆ ಖುಷ್ಭೂ ಅವರನ್ನು ಮಾತನಾಡಿಸುವ ಪ್ರಯತ್ನ ಕೂಡ ಮಾಡಲಿದ್ದಾರಂತೆ. ಇದನ್ನೂ ಓದಿ: ಮದುವೆ ಆಗುವ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ಟ ಶರ್ಮಿಳಾ ಮಾಂಡ್ರೆ

    ರವಿಚಂದ್ರನ್ ಅವರೇ ಸಿನಿಮಾದ ಹೀರೋ ಆಗಿರುವಾಗ ಖುಷ್ಭೂ ಬರಬಹುದು ಎನ್ನುವ ಅಂದಾಜಿದೆ. ಅದರ ಜೊತೆಗೆ ರಾಜಕಾರಣದಲ್ಲೂ ಅವರು ಬ್ಯುಸಿಯಾಗಿರುವುದರಿಂದ ಮತ್ತೆ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವ ಅನುಮಾನವೂ ಇದೆ. ಸದ್ಯಕ್ಕೆ ಖುಷ್ಭೂ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡವೇ ಕೊಡಬಹುದು.

  • ‘ಅಮೃತ ಅಪಾರ್ಟ್‌ಮೆಂಟ್ಸ್’ನಲ್ಲೊಂದು ಮರ್ಡರ್ ಮಿಸ್ಟ್ರಿ ಕಥೆ ಹೇಳ ಹೊರಟ ಗುರುರಾಜ್ ಕುಲಕರ್ಣಿ

    ‘ಅಮೃತ ಅಪಾರ್ಟ್‌ಮೆಂಟ್ಸ್’ನಲ್ಲೊಂದು ಮರ್ಡರ್ ಮಿಸ್ಟ್ರಿ ಕಥೆ ಹೇಳ ಹೊರಟ ಗುರುರಾಜ್ ಕುಲಕರ್ಣಿ

    ನಿರ್ದೇಶಕ ನಿರ್ಮಾಪಕನಾಗುತ್ತಾನೆ, ಆದ್ರೆ ನಿರ್ಮಾಪಕ ನಿರ್ದೇಶಕನಾಗೋದು ಬೆರಳೆಣಿಕೆಯವರಷ್ಟೇ. ಆ ಬೆರಳೆಣಿಕೆಯವರ ಸಾಲಿಗೆ ಸೇರುವವರು ಆಕ್ಸಿಡೆಂಟ್ ಹಾಗೂ ಲಾಸ್ಟ್ ಬಸ್ ಸಿನಿಮಾ ನಿರ್ಮಾಪಕ ಗುರುರಾಜ ಕುಲಕರ್ಣಿ. ನಿರ್ಮಾಪಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಗುರುರಾಜ ಕುಲಕರ್ಣಿ ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಅಮೃತ ಅಪಾರ್ಟ್‌ಮೆಂಟ್ಸ್‌’ ಸಿನಿಮಾ ನವೆಂಬರ್ 26ಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ.

    ಅಮೃತ ಅಪಾರ್ಟ್‌ಮೆಂಟ್ಸ್‌ ಫ್ಯಾಮಿಲಿ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಸಿನಿಮಾ. ಚಿತ್ರದ ಹಾಡು ಟೀಸರ್, ಟ್ರೇಲರ್ ನೋಡಿದವರಿಗೆ ಸಿನಿಮಾ ಮೇಲೆ ಒಂದು ನಿರೀಕ್ಷೆ ಈಗಾಗಲೇ ಚಿಗುರಿದೆ. ಭರವಸೆ ಮೂಡಿಸುವಂತ ಕಟೆಂಟ್ ಇದೆ ಎಂಬ ಅರಿವೂ ಆಗಿದೆ. ಆದ್ರಿಂದ ಸಿನಿಮಾವನ್ನೊಮ್ಮೆ ನೋಡಬೇಕು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಪ್ರವಾಹಪೀಡಿತ ಜನರ ನೆರವಿಗೆ ನಿಂತ ಸೋನು ಸೂದ್‌

    ಗುರುರಾಜ ಕುಲಕರ್ಣಿ ಈ ಚಿತ್ರದ ಸೂತ್ರಧಾರಿ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಷ್ಟಕ್ಕೆ ನಿಂತಿಲ್ಲ ನಿರ್ಮಾಣದ ನೊಗವನ್ನು ಇವರೇ ಹೊತ್ತಿದ್ದಾರೆ. ಒಂದು ರೀತಿ ಒನ್ ಮ್ಯಾನ್ ಆರ್ಮಿಯಾಗಿ ಸಿನಿಮಾವನ್ನು ನಿಭಾಯಿಸಿದ್ದಾರೆ. ಫ್ಯಾಮಿಲಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳು ಸಾಲು ಸಾಲು ಬಂದಿವೆ. ಇದರಲ್ಲೇನು ವಿಶೇಷ ಅಂದ್ರೆ ವಿಶೇಷತೆ ಹಲವು ಅನ್ನುತ್ತೆ ಚಿತ್ರತಂಡ. ಇಲ್ಲಿ ಪ್ರತಿಯೊಬ್ಬ ಬೆಂಗಳೂರಿಗನ ಕಥೆಯಿದೆ, ಬೆಂಗಳೂರಿನಲ್ಲಿ ಚಿಗುರೊಡೆಯೋ ಪ್ರೀತಿಕಥೆಯಿದೆ, ಭಾವನೆಗಳಿವೆ, ರಿಯಾಲಿಸ್ಟಿಕ್ ಜೀವನಕ್ಕೆ ಹತ್ತಿರವಾದ ಹಲವು ಸಂಗತಿಗಳಿವೆ ಎನ್ನುವುದು ಚಿತ್ರತಂಡದ ಉತ್ತರ.

    ಬೆಂಗಳೂರು ಬಹು ಭಾಷೆಯ, ಬಹು ಸಂಸ್ಕೃತಿಯ ಆಗರ ಇಂತಹದ್ದೊಂದು ಊರಲ್ಲಿ ಸಾಮಾನ್ಯವಾಗಿ ಘಟಿಸುವ ಘಟನೆಯನ್ನು ಸಿನಿಮ್ಯಾಟಿಕ್ ಟಚ್ ಕೊಟ್ಟು ಪ್ರೇಕ್ಷಕರನ್ನು ರಂಜಿಸಲಿದ್ದಾರೆ ನಿರ್ದೇಶಕರು. ಬದುಕು ಕಟ್ಟಿಕೊಳ್ಳಲು ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ, ದೇಶಗಳಿಂದ ಜನರು ಇಲ್ಲಿಗೆ ಬರ್ತಾನೆ ಇರ್ತಾರೆ. ಹೀಗೆ ಬೇರೆ ಪ್ರದೇಶದ, ಬೇರೆ ಸಂಸ್ಕೃತಿಯ ನಾಯಕ ನಾಯಕಿ ನಡುವೆ ಚಿಗುರೊಡೆಯೋ ಪ್ರೀತಿ ಕಥೆಯೇ ಅಮೃತ ಅಪಾರ್ಟ್ ಮೆಂಟ್ಸ್. ಈ ಪ್ರೀತಿ ಮುಂದೆ ಯಾವೆಲ್ಲ ತಿರುವು ಪಡೆಯುತ್ತೆ, ಇಬ್ಬರೂ ಒಂದಾಗಿ ಇರ್ತಾರ ಎನ್ನುವುದೇ ಅಮೃತ್ ಅಪಾರ್ಟ್‌ಮೆಂಟ್ಸ್‌ ಒನ್ ಲೈನ್ ಕಹಾನಿ. ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

    ಕೆಜಿಎಫ್, ಯುವರತ್ನ ಸಿನಿಮಾಗಳ ಮೂಲಕ ಮುನ್ನೆಲೆಗೆ ಬಂದಿರುವ, ವಿಲನ್ ಪಾತ್ರಗಳಲ್ಲಿ ಮಿಂಚಿರುವ ತಾರಕ್ ಪೊನ್ನಪ್ಪ ಈ ಚಿತ್ರದಲ್ಲಿ ನಾಯಕ ನಟನಾಗಿ ಕಾಣಸಿಗಲಿದ್ದಾರೆ. ಇವರಿಗೆ ನಾಯಕಿಯಾಗಿ ಊರ್ವಶಿ ಗೋವರ್ಧನ್ ಬಣ್ಣ ಹಚ್ಚಿದ್ದಾರೆ. ಚಿತ್ರದ ಕಥೆಗೆ ತಕ್ಕಂತೆ ಸಿನಿಮಾದಲ್ಲಿನ ಪೋಷಕ ಪಾತ್ರಗಳು ಕೂಡ ಅಷ್ಟೇ ಎಫೆಕ್ಟಿವ್ ಆಗಿದ್ದು, ಪ್ರತಿಭಾವಂತ ನಟ ಬಾಲಾಜಿ ಮನೋಹರ್, ಸಂಪತ್ ಮೈತ್ರೇಯ, ಮಾನಸ ಜೋಶಿ, ಸೀತಾ ಕೋಟೆ, ಪ್ರಧಾನ ಪಾತ್ರಗಳಲ್ಲಿ ಮಿಂಚಿದ್ದಾರೆ. ಉಳಿದಂತೆ ಸಿತಾರಾ, ಮಾಲತೇಶ, ರಾಜ ನೀನಾಸಂ, ಜಗದೀಶ್ ಜಾಲಾ, ರಂಗಸ್ವಾಮಿ ಒಳಗೊಂಡ ರಂಗಭೂಮಿ ಕಲಾವಿದರ ದಂಡು ಚಿತ್ರದಲ್ಲಿದೆ.

    ಖ್ಯಾತ ಸಂಕಲನಕಾರ ಬಿ.ಎಸ್.ಕೆಂಪರಾಜು ಸಂಕಲನ ಚಿತ್ರಕ್ಕಿದ್ದು, ಅರ್ಜುನ್ ಅಜಿತ್ ಕ್ಯಾಮೆರಾ ವರ್ಕ್, ಎಸ್.ಡಿ ಅರವಿಂದ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಜಿ-9 ಕಮ್ಯನಿಕೇಶನ್ ಮೀಡಿಯಾ ಅಂಡ್ ಎಂಟಟೈನ್ಮೆಂಟ್ ಬ್ಯಾನರ್‌ನಡಿ ಸಿನಿಮಾ ನಿರ್ಮಾಣವಾಗಿದ್ದು, ನವೆಂಬರ್ 26ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.