Tag: Gururaja Poojary

  • CommonwealthGames: ಚಿನ್ನದ ಬೇಟೆಯೊಂದಿಗೆ ದಾಖಲೆ ಬರೆದ ಮೀರಾಬಾಯಿ ಚಾನು

    CommonwealthGames: ಚಿನ್ನದ ಬೇಟೆಯೊಂದಿಗೆ ದಾಖಲೆ ಬರೆದ ಮೀರಾಬಾಯಿ ಚಾನು

    ಬರ್ಮಿಂಗ್ ಹ್ಯಾಮ್: 2020ರ ಟೋಕಿಯೋ ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಕಿರೀಟ ಮುಡಿಗೇರಿಸಿಕೊಂಡಿದ್ದ ಸಾಯಿಕೋಮ್ ಮೀರಾಬಾಯಿ ಚಾನು ಇದೀಗ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

    ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳೆಯರ ವಿಭಾಗದ 49 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ 201 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಸ್ನ್ಯಾಚ್‌ನಲ್ಲಿ 88 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 113 ಕೆಜಿ ಭಾರ ಎತ್ತುವ ಮೂಲಕ ಸ್ಪರ್ಧೆಯಲ್ಲಿ ಮೈಲಿಗಲ್ಲು ಸಾಧಿಸಿದ್ದಾರೆ. ಈ ಮೂಲಕ ಭಾರತ ಮೊದಲ ದಿನದ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಸತತ 3 ಪದಕಗಳ ಭರ್ಜರಿ ಬೇಟೆಯಾಡಿದೆ. ಇದನ್ನೂ ಓದಿ: ಕಾಮನ್‌ವೆಲ್ತ್‌ನಲ್ಲಿ ಕರ್ನಾಟಕದ ಗುರುರಾಜ್‌ಗೆ ಕಂಚು – ಭಾರತಕ್ಕೆ 2ನೇ ಪದಕ

    55 ಕೆಜಿ ಪುರುಷರ ವಿಭಾಗದಲ್ಲಿ ಸಂಕೇತ್‌ ಸರ್ಗರ್‌ ಬೆಳ್ಳಿ ಪದಕ ಗೆಲ್ಲುವ ಮೂಲಕ ಖಾತೆ ತೆರೆದರು. ಈ ಬೆನ್ನಲ್ಲೇ ಕನ್ನಡಿಗ ಕುಂದಾಪುರದ ಗುರುರಾಜ್‌ ಪೂಜಾರಿ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದರು. ಒಲಿಂಪಿಕ್ಸ್‌ನಲ್ಲಿ ಬೆಳ್ಳಿಪದಕಕ್ಕೆ ಮುತ್ತಿಟ್ಟಿದ್ದ ಮೀರಾಬಾಯಿ ಚಾನು ಕಾಮನ್‌ವೆಲ್ತ್‌ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: ಭಾರತದ ಪದಕ ಬೇಟೆ ಆರಂಭ – ಸಂಕೇತ್‌ಗೆ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ

    ಮೀರಾಬಾಯಿ ಚಾನು 2014ರ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಬೆಳ್ಳಿ, 2018ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೇ 2017ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ ಚಿನ್ನದ ಪದಕ ನಂತರ ಏಷ್ಯನ್ ಚಾಂಪಿಯನ್‌ಶಿಪ್ ಪದಕಗಳನ್ನೂ ಬೇಟೆಯಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಮನ್‌ವೆಲ್ತ್‌ನಲ್ಲಿ ಕರ್ನಾಟಕದ ಗುರುರಾಜ್‌ಗೆ ಕಂಚು – ಭಾರತಕ್ಕೆ 2ನೇ ಪದಕ

    ಕಾಮನ್‌ವೆಲ್ತ್‌ನಲ್ಲಿ ಕರ್ನಾಟಕದ ಗುರುರಾಜ್‌ಗೆ ಕಂಚು – ಭಾರತಕ್ಕೆ 2ನೇ ಪದಕ

    ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕರ್ನಾಟಕ ಮೂಲದ ಕ್ರೀಡಾಪಟು ಕಂಚಿನ ಪದಕ ಗೆದ್ದಿದ್ದು, ಭಾರತಕ್ಕೆ 2ನೇ ಪದಕ ಲಭಿಸಿದೆ.

    ಕರ್ನಾಟಕದ ಗುರುರಾಜ್ ಪೂಜಾರಿ ವೇಟ್‌ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದನ್ನೂಓದಿ: ಭಾರತದ ಪದಕ ಬೇಟೆ ಆರಂಭ – ಸಂಕೇತ್‌ಗೆ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ

    ಗುರುರಾಜ್ ಒಟ್ಟು 269 ಕೆಜಿ ತೂಕ ಎತ್ತುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಸ್ನ್ಯಾಚ್‌ ಸುತ್ತಿನ ಮುಕ್ತಾಯದ ನಂತರ ಅವರು ನಾಲ್ಕನೇ ಸ್ಥಾನದಲ್ಲಿದ್ದರು. ಇದಕ್ಕೂ ಮುನ್ನ ಮೊದಲ ಎರಡು ಪ್ರಯತ್ನದಲ್ಲಿ ಕ್ರಮವಾಗಿ 118, 115 ಕೆ.ಜಿ ಎತ್ತಿದ್ದರು. ಈ ಮೂಲಕ ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಗುರುರಾಜ್ 2ನೇ ಪದಕ ವಿಜೇತರಾದ ಸಾಧನೆ ಮಾಡಿದ್ದಾರೆ. ಈ ಹಿಂದೆ 2018ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲೂ ಬೆಳ್ಳಿ ಗೆದ್ದಿದ್ದರು.

    Live Tv
    [brid partner=56869869 player=32851 video=960834 autoplay=true]