Tag: Guyana

  • ಗಯಾನಾದಲ್ಲಿ ಸಿಲುಕಿದ ಕೊಡಗಿನ ವ್ಯಕ್ತಿ – ಅನಾರೋಗ್ಯಕ್ಕೆ ತುತ್ತಾಗಿ ಸಾವು-ಬದುಕಿನ ಮಧ್ಯೆ ಹೋರಾಟ

    ಗಯಾನಾದಲ್ಲಿ ಸಿಲುಕಿದ ಕೊಡಗಿನ ವ್ಯಕ್ತಿ – ಅನಾರೋಗ್ಯಕ್ಕೆ ತುತ್ತಾಗಿ ಸಾವು-ಬದುಕಿನ ಮಧ್ಯೆ ಹೋರಾಟ

    ಮಡಿಕೇರಿ: ಕೆಲಸಕ್ಕೆಂದು ದಕ್ಷಿಣ ಅಮೆರಿಕದ ಗಯಾನಾಕ್ಕೆ (Guyana) ತೆರಳಿದ್ದ ಕೊಡಗಿನ ಪ್ರಜೆಯೊಬ್ಬರು ಅನಾರೋಗ್ಯಕ್ಕೆ ತುತ್ತಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಲ್ಲಿ ನೋಡಿಕೊಳ್ಳುವವರೂ ಇಲ್ಲದೇ ಇತ್ತ ತಾಯ್ತಾಡಿಗೂ ಮರಳಲಾಗದ ಸ್ಥಿತಿಯಲ್ಲಿ ಸಿಲುಕಿದ್ದಾರೆ.

    ಮಡಿಕೇರಿ (Madikeri) ತಾಲೂಕಿನ ಮದೆನಾಡು ಗ್ರಾಮದ ಪಿ.ಪಿ ಗಿರೀಶ್ ಕಳೆದ ಎರಡೂವರೆ ವರ್ಷಗಳಿಂದ ಗಯಾನಾದ ಜಾರ್ಜ್ ಟೌನ್‌ನ ಪನಾಮ (Panama) ಎಂಬಲ್ಲಿ ಖಾಸಗಿ ಆರೋಗ್ಯ ಸಂಸ್ಥೆಯೊಂದರಲ್ಲಿ ನರ್ಸಿಂಗ್ ಉದ್ಯೋಗಿಯಾಗಿದ್ದಾರೆ. ಜುಲೈ 3ರಂದು ಇದ್ದಕ್ಕಿದ್ದಂತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯದ ಸಮಸ್ಯೆ, ಪಾರ್ಶ ವಾಯು ಕಾಣಿಸಿಕೊಂಡು ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ. ಸದ್ಯ ಕೋಮ ಸ್ಥಿತಿಯಲ್ಲಿರುವ ಅವರಿಗೆ ತಾನು ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

    ಗಿರೀಶ್ ಕುಟುಂಬದವರು ಅಲ್ಲಿನ ಆಸ್ಪತ್ರೆ ಸಿಬ್ಬಂದಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿರುವ ಅವರನ್ನು ಇತ್ತ ಭಾರತಕ್ಕೂ ಕರೆಸಿಕೊಳ್ಳಲಾಗದೇ, ಅಲ್ಲಿಯೂ ಹೋಗಿ ನೋಡಿಕೊಳ್ಳಲೂ ಸಾಧ್ಯವಿಲ್ಲದೇ ಅವರ ಕುಟುಂಬದವರು ಪರಿತಪಿಸುವಂತಾಗಿದೆ. ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ – ಸುದೀಪ್‌ 47ನೇ ಸಿನಿಮಾ ಅನೌನ್ಸ್

    ಪಾಸ್‌ಪೋರ್ಟ್ ಕೂಡ ಇಲ್ಲ:
    ಗಿರೀಶ್ ಅವರ ಕುಟುಂಬದಲ್ಲಿ ಯಾರಿಗೂ ಪಾಸ್‌ಪೋರ್ಟ್ ಇಲ್ಲ. 4 ವರ್ಷದ ಹಿಂದೆ ಗಿರೀಶ್ ಅವರನ್ನು ವಿವಾಹವಾಗಿರುವ ಪತ್ನಿ ಜಾನಕಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ 2 ವರ್ಷದ ಮಗುವಿನೊಂದಿಗೆ ಅಲ್ಲಿಯೇ ನೆಲೆಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ 

    ಕೊಡಗು ಜಿಲ್ಲಾಡಳಿತದಲ್ಲಿ ವಿಪತ್ತು ನಿರ್ವಹಣಾಧಿಕಾರಿಯಾಗಿರುವ ಅನನ್ಯ ವಾಸುದೇವ್ ಅವರು ಈ ಹಿಂದೆ ವಿದೇಶಗಳಲ್ಲಿ ಸಿಲುಕಿರುವ ಅನೇಕರನ್ನು ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದ್ದು, ಗಿರೀಶ್ ಸಂಬಂಧಿಕರು ಸಂಪರ್ಕಿಸಿದ್ದಾರೆ. ಜಾನಕಿ ಅವರನ್ನು ಅಮೆರಿಕಕ್ಕೆ ಕಳುಹಿಸುವುದು ಅಥವಾ ಗಿರೀಶ್ ಅವರನ್ನು ಅಲ್ಲಿಂದ ಏರ್ ಲಿಫ್ಟ್ ಮಾಡಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಗಿರೀಶ್ ಪತ್ನಿಗೆ ತಾತ್ಕಾಲ್ ಪಾಸ್‌ಪೋರ್ಟ್‌ ಮಾಡಿಸಿದರೂ ಪ್ರಕ್ರಿಯೆಗಳೆಲ್ಲ ಮುಗಿಸಿ ಅಲ್ಲಿಗೆ ತೆರಳಲು 4-5 ದಿನಗಳು ಬೇಕು ಎನ್ನಲಾಗಿದೆ. ಇದನ್ನೂ ಓದಿ: ರಶ್ಮಿಕಾ ಕನ್ನಡದವಳಲ್ಲ ಅಂದ್ರು ಅವಳನ್ನ ನಾವ್ ಬಿಡೋಲ್ಲ: ಭಾವನಾ ರಾಮಣ್ಣ

  • ಗಯಾನಾ ಅಧ್ಯಕ್ಷಗೆ ಚನ್ನಪಟ್ಟಣ ಗೊಂಬೆ ಗಿಫ್ಟ್ ನೀಡಿದ ಮೋದಿ

    ಗಯಾನಾ ಅಧ್ಯಕ್ಷಗೆ ಚನ್ನಪಟ್ಟಣ ಗೊಂಬೆ ಗಿಫ್ಟ್ ನೀಡಿದ ಮೋದಿ

    – 5 ದಿನ, 31 ನಾಯಕರ ಭೇಟಿ ಮಾಡಿದ ಪ್ರಧಾನಿ

    ನವದೆಹಲಿ: ಗಯಾನಾ (Guyana) ಭೇಟಿ ನೀಡಿದ್ದ ಪ್ರಧಾನಿ ಮೋದಿ (PM Modi) ಅಧ್ಯಕ್ಷ ಇರ್ಫಾನ್ ಅಲಿಗೆ (Mohamed Irfaan Ali) ಚನ್ನಪಟ್ಟಣ ಗೊಂಬೆಯನ್ನು (Channapatna Doll) ಉಡುಗೊರೆಯಾಗಿ ನೀಡಿದ್ದಾರೆ.

    5 ದಿನಗಳ ಕಾಲ ಮೂರು ದೇಶಗಳ ಪ್ರವಾಸ ಮುಗಿಸಿ ಶುಕ್ರವಾರ (ನ.22) ಭಾರತಕ್ಕೆ ಮರಳಿದ ಮೋದಿ, ಗಯಾನಾ, ಬೆಜ್ರಿಲ್ ಹಾಗೂ ನೈಜೀರಿಯಾ ಪ್ರವಾಸ ಮಾಡಿದ್ದು, ಒಟ್ಟು 31 ನಾಯಕರನ್ನು ಭೇಟಿ ಮಾಡಿದ್ದಾರೆ.ಇದನ್ನೂ ಓದಿ: ನಿಖಿಲ್‌ ಕುಮಾರಸ್ವಾಮಿ, ಭರತ್‌ ಬೊಮ್ಮಾಯಿ, ಅನ್ನಪೂರ್ಣ ತುಕಾರಾಂಗೆ ಮುನ್ನಡೆ

    ಭೇಟಿಯಾದ ಗಣ್ಯರಿಗೆ ಭಾರತದ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುವ ಉಡುಗೊರೆಗಳನ್ನು ನೀಡಿದ್ದಾರೆ. ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಅಲಿ ಅವರ ಮಗ ಲಿಲನ್ ಅಲಿಗೆ ಗೊಂಬೆಗಳಿಗೆ ಪ್ರಸಿದ್ಧವಾದ ಕರ್ನಾಟಕದ ಚನ್ನಪಟ್ಟಣದ ಮರದ ಆಟಿಕೆ ರೈಲನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಕರ್ನಾಟಕದ್ದು ಮಾತ್ರವಲ್ಲದೇ ಮಹಾರಾಷ್ಟ್ರದ 8, ಜಮ್ಮು ಕಾಶ್ಮೀರದಿಂದ 5, ತಮಿಳುನಾಡು, ಉತ್ತರ ಪ್ರದೇಶ, ಬಿಹಾರ, ಒಡಿಶಾ, ಲಡಾಖ್‌ನ ತಲಾ ಒಂದೊಂದು ಉಡುಗೊರೆಗಳನ್ನು ಮೋದಿ ವಿವಿಧ ನಾಯಕರಿಗೆ ನೀಡಿದ್ದಾರೆ.ಇದನ್ನೂ ಓದಿ: ನಿಖಿಲ್‌ ಕುಮಾರಸ್ವಾಮಿ, ಭರತ್‌ ಬೊಮ್ಮಾಯಿ, ಅನ್ನಪೂರ್ಣ ತುಕಾರಾಂಗೆ ಮುನ್ನಡೆ

  • ಪ್ರಧಾನಿ ಮೋದಿಗೆ ಗಯಾನಾದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ

    ಪ್ರಧಾನಿ ಮೋದಿಗೆ ಗಯಾನಾದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ

    ಜಾರ್ಜ್‌ಟೌನ್‌: ಗಯಾನಾ (Guyana) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಗಯಾನಾ ಸರ್ಕಾರ ಅತ್ಯುನ್ನತ ಗೌರವವಾದ `ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿ ನೀಡಿ ಗೌರವಿಸಿದೆ.

    ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಮೋದಿ ಬುಧವಾರ (ನ.20) ಗಯಾನಾಕ್ಕೆ ಭೇಟಿ ನೀಡಿದ್ದು, 56 ವರ್ಷಗಳ ಬಳಿಕ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ.ಇದನ್ನೂ ಓದಿ: ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ

    ಇಂದು (ನ.21) ಜಾರ್ಜ್‌ಟೌನ್‌ನ (Georgetown) ಸ್ಟೇಟ್ ಹೌಸ್‌ನಲ್ಲಿ ನಡೆಯುತ್ತಿರುವ ಭಾರತ-ಕೆರಕಮ್ (ಕೆರಿಬಿಯನ್ ಸಮುದಾಯ) ಶೃಂಗಸಭೆಯಲ್ಲಿ ಗಯಾನಾದ ಅಧ್ಯಕ್ಷ ಮೊಹಮದ್ ಇರ್ಫಾನ್ ಅಲಿ ಅವರು ಪ್ರಧಾನಿ ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

    ಗಯಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದವರ ಪೈಕಿ ಪ್ರಧಾನಿ ಮೋದಿ ನಾಲ್ಕನೇ ವಿದೇಶಿ ನಾಯಕರಾಗಿದ್ದಾರೆ.

    ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, ಗಯಾನಾಕ್ಕೆ ನೀಡಿದ ಈ ಭೇಟಿಯು ಭಾರತದ ಜೊತೆಗಿನ ಸಂಬಂಧವನ್ನು ಬಲಪಡಿಸುತ್ತದೆ. ಅಧ್ಯಕ್ಷ ಇರ್ಫಾನ್ ಅಲಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದು, ಈ ಪ್ರಶಸ್ತಿ 140 ಕೋಟಿ ಭಾರತೀಯರಿಗೆ ಸಲ್ಲುವ ಗೌರವವಾಗಿದೆ ಎಂದು ತಿಳಿಸಿದರು.

    ಅಧ್ಯಕ್ಷ ಇರ್ಫಾನ್ ಅಲಿ ಅವರೊಂದಿಗಿನ ಈ ಸಂಬಂಧ ಭಾರತ ಹಾಗೂ ಗಯಾನಾ ದೇಶವನ್ನು ಎತ್ತರಕ್ಕೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ. ಭಾರತವು ಗಯಾನಾದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲು ಸಿದ್ಧವಾಗಿದೆ. ಅಸಂಖ್ಯಾತ ಜಲಪಾತಗಳು ಮತ್ತು ಸರೋವರಗಳಿಂದ ಕೂಡಿರುವ ಗಯಾನಾವನ್ನು `ದಿ ಲ್ಯಾಂಡ್ ಆಫ್ ಮೆನಿ ವಾಟರ್ಸ್’ ಎಂದು ಕರೆಯಲಾಗುತ್ತದೆ. ಗಯಾನಾ ನದಿಗಳು ಇಲ್ಲಿನ ಜನರ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಹಾಗೆಯೇ ಭಾರತದ ಗಂಗಾ, ಯಮುನಾ ಮತ್ತು ಬ್ರಹ್ಮಪುತ್ರ ನದಿಗಳು ನಮ್ಮ ಪ್ರಾಚೀನ ನಾಗರಿಕತೆಯ ಜನ್ಮಸ್ಥಳವಾಗಿದೆ. ಇದು ಭಾರತ ಮತ್ತು ಗಯಾನಾ ನಡುವೆ ಸಾಮ್ಯತೆಗಳ ಅನೇಕ ಉದಾಹರಣೆಗಳಿವೆ ಎಂದು ತಿಳಿಸಿದರು.

    ಇತ್ತೀಚಿಗಷ್ಟೇ ಪ್ರಧಾನಿ ಮೋದಿಗೆ ನೈಜೀರಿಯಾ ದೇಶ ತನ್ನ ಅತ್ಯುನ್ನತ `ದಿ ಗ್ರ್ಯಾಂಡ್‌ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಇದೀಗ ಗಯಾನಾ ಸರ್ಕಾರ ಪ್ರಶಸ್ತಿಯನ್ನು ನೀಡಿದ್ದು, ದೇಶವೊಂದು ನೀಡುತ್ತಿರುವ 18ನೇ ಅಂತಾರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.

    ಪ್ರಧಾನಿ ಮೋದಿ ಸ್ವೀಕರಿಸಿದ ಗೌರವಗಳ ಪಟ್ಟಿ:
    ಗಯಾನಾ: 2024ರಲ್ಲಿ ದಿ ಆರ್ಡರ್ ಆಫ್ ಎಕ್ಸಲೆನ್ಸ್’
    ಡೊಮಿನಿಕಾ: 2024ರಲ್ಲಿ ಡೊಮಿನಿಕಾ ಅವಾರ್ಡ್ ಆಫ್ ಆನರ್
    ನೈಜಿರೀಯಾ: 2024ರಲ್ಲಿ ದಿ ಗ್ರ್ಯಾಂಡ್‌ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’
    ರಷ್ಯಾ: 2024ರಲ್ಲಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ಪ್ರಶಸ್ತಿ
    ಭೂತಾನ್: 2024ರಲ್ಲಿ ಡ್ರುಕ್ ಗಯಾಲ್ಪೋ ಆದೇಶ
    ಫ್ರಾನ್ಸ್: 2023ರಲ್ಲಿ ಲೀಜನ್ ಆಫ್ ಆನರ್ ಗ್ರ್ಯಾಂಡ್‌ ಕ್ರಾಸ್
    ಈಜಿಪ್ಟ್: 2023ರಲ್ಲಿ ಆರ್ಡರ್ ಆಫ್ ನೈಲ್
    ಪಪುವಾ ನ್ಯೂಗಿನಿಯಾ: 2023ರಲ್ಲಿ ಆರ್ಡರ್ ಆಫ್ ಲೋಗೊಹುವಿನ ಗ್ರ್ಯಾಂಡ್‌ ಕಂಪ್ಯಾನಿಯನ್
    ಫಿಜಿ: 2023ರಲ್ಲಿ ಆರ್ಡರ್ ಆಫ್ ಫಿಜಿಯ ಒಡನಾಡಿ
    ಪಲಾವ್: 2023ರಲ್ಲಿ ಎಬಾಕಲ್ ಪ್ರಶಸ್ತಿ
    ಗ್ರೀಸ್: 2023ರಲ್ಲಿ ಆರ್ಡರ್ ಆಪ್ ಆನರ್
    ಯುಎಸ್: 2020 ರಲ್ಲಿ ಲೀಜನ್ ಆಫ್ ಮೆರಿಟ್
    ಮಾಲ್ಡೀವ್ಸ್: 2019ರಲ್ಲಿ ನಿಶಾನ್ ಇಝುದ್ದೀನ್ ಆಳ್ವಿಕೆ
    ಯುಎಇ: 2019ರಲ್ಲಿ ಆರ್ಡರ್ ಆಫ್ ಜಾಯೆದ್ ಪ್ರಶಸ್ತಿ
    ಬಹ್ರೇನ್: 2019ರಲ್ಲಿ ಕಿಂಗ್ ಹಮದ್ ಆರ್ಡರ್ ಆಫ್ ದಿ ರಿನೈಸಾನ್ಸ್
    ಪ್ಯಾಲೆಸ್ಟೈನ್: 2018ರಲ್ಲಿ ಪ್ಯಾಲೆಸ್ಟೈನ್ ರಾಜ್ಯದ ಗ್ರ್ಯಾಂಡ್‌ ಕಾಲರ್ ಪ್ರಶಸ್ತಿ
    ಅಫ್ಘಾನಿಸ್ತಾನ: 2016ರಲ್ಲಿ ಸ್ಟೇಟ್ ಆರ್ಡರ್ ಆಫ್ ಗಾಜಿ ಅಮೀರ್ ಅಮಾನುಲ್ಲಾ ಖಾನ್ ಪ್ರಶಸ್ತಿ
    ಸೌದಿ ಅರೇಬಿಯಾ: 2016ರಲ್ಲಿ ಕಿಂಗ್ ಅಬ್ದುಲ್ ಅಜೀಜ್ ಸಾಶ್.ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ

  • 56 ವರ್ಷಗಳ ಬಳಿಕ ಗಯಾನದಲ್ಲಿ ಭಾರತದ ಪ್ರಧಾನಿ – ಮೋದಿಗೆ ಭವ್ಯವಾದ ಸ್ವಾಗತ

    56 ವರ್ಷಗಳ ಬಳಿಕ ಗಯಾನದಲ್ಲಿ ಭಾರತದ ಪ್ರಧಾನಿ – ಮೋದಿಗೆ ಭವ್ಯವಾದ ಸ್ವಾಗತ

    ಜಾರ್ಜ್‌ಟೌನ್‌: ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಮೋದಿ (PM Narendra Modi) ಇಂದು (ನ.20) ಗಯಾನಾಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ 56 ವರ್ಷಗಳಲ್ಲಿ ಮೊದಲ ಭಾರತೀಯ ಪ್ರಧಾನಿಯಾಗಿ ಭೇಟಿ ನೀಡಿದ ಗೌರವಕ್ಕೆ ಪಾತ್ರರಾಗಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗಯಾನಾಗೆ (Guyana) ಆಗಮಿಸಿದ್ದು, 56 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ದಕ್ಷಿಣ ಅಮೆರಿಕಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.ಇದನ್ನೂ ಓದಿ: ವೈಭವದಿಂದ ನಡೆಯಿತು ಶ್ರೀ ಅಭಯ ಆಂಜನೇಯ ಸ್ವಾಮಿ ಪ್ರತಿಷ್ಠಾಪನಾ ಮಹೋತ್ಸವ

    ಜಾರ್ಜ್‌ಟೌನ್‌ಗೆ (Georgetown) ಬಂದಿಳಿದ ಮೋದಿಯವರನ್ನು ಸ್ವಾಗತಿಸಲು ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ ಅಲಿ (Mohamed Irfaan Ali) ಮತ್ತು ಹನ್ನೆರಡು ಕ್ಯಾಬಿನೆಟ್ ಮಂತ್ರಿಗಳು ಆತ್ಮೀಯತೆಯಿಂದ ಬರಮಾಡಿಕೊಂಡರು.

    ಪ್ರಧಾನಿ ಮೋದಿಯವರು ಇಂದು ಅಧ್ಯಕ್ಷ ಮೊಹಮದ್ ಇರ್ಫಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದು, ದಕ್ಷಿಣ ಅಮೆರಿಕಾದ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

    ಕೆರಿಬಿಯನ್ ಸಮುದಾಯದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ ಅವರ ಆಹ್ವಾನದ ಮೇರೆಗೆ ಕೈಗೊಂಡ ಈ ಭೇಟಿಯು ಭಾರತ ಮತ್ತು ಗಯಾನಾ ನಡುವಿನ ಬಾಂಧವ್ಯವನ್ನು ಬಲಪಡಿಸುತ್ತದೆ.

    ಪ್ರಧಾನಿ ಮೋದಿಯವರಿಗೆ ಗಯಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ `ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಅನ್ನು ನೀಡಲಿದೆ. ಜೊತೆಗೆ ಬಾರ್ಬಡೋಸ್ ತನ್ನ ಪ್ರತಿಷ್ಠಿತ `ಆರ್ಡರ್ ಆಫ್ ಫ್ರೀಡಮ್ ಆಫ್ ಬಾರ್ಬಡೋಸ್’ ಅನ್ನು ನೀಡಲಿದೆ. ಈ ಮೂಲಕ ಪ್ರಧಾನಿ ಮೋದಿ ಒಟ್ಟು 19 ಅಂತರಾಷ್ಟ್ರೀಯ ಗೌರವಗಳನ್ನು ಸ್ವೀಕರಿಸಿದಂತಾಗುತ್ತದೆ.ಇದನ್ನೂ ಓದಿ: ವಿಕ್ರಂ ಗೌಡ ಎನ್‌ಕೌಂಟರ್‌| ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ: ಪರಮೇಶ್ವರ್‌

  • ರೋಹಿತ್ ಶರ್ಮಾ, ಕೊಹ್ಲಿ ಹಿಂದಿಕ್ಕಿದ ಮಿಥಾಲಿ ರಾಜ್

    ರೋಹಿತ್ ಶರ್ಮಾ, ಕೊಹ್ಲಿ ಹಿಂದಿಕ್ಕಿದ ಮಿಥಾಲಿ ರಾಜ್

    ಮುಂಬೈ: ಟೀಂ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ರನ್ ಗಳಿಕೆಯಲ್ಲಿ ಟೀಂ ಇಂಡಿಯಾ ಪುರುಷ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರನ್ನು ಹಿಂದಿಕ್ಕಿ ವಿಶೇಷ ಸಾಧನೆ ನಿರ್ಮಿಸಿದ್ದಾರೆ.

    ಅಂತರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್ 85 ಪಂದ್ಯಗಳ 80 ಇನ್ನಿಂಗ್ಸ್ ಗಳಿಂದ 2,283 ರನ್ ಗಳಿಸಿದ್ದು, ಈ ಮೂಲಕ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‍ನಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಈಗಾಗಲೇ ಮಹಿಳಾ ಏಕದಿನ ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್ 6,550 ಗಳಿಸಿದ್ದು, ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ.

    ಟೀಂ ಇಂಡಿಯಾ ಪುರುಷರ ತಂಡದಲ್ಲಿ ರೋಹಿತ್ ಶರ್ಮಾ 80 ಇನ್ನಿಂಗ್ಸ್ ಗಳಿಂದ 2,207 ರನ್ ಗಳಿಸಿದ್ದು, ಕೊಹ್ಲಿ 58 ಇನ್ನಿಂಗ್ಸ್ ಗಳಿಂದ 2,102 ರನ್ ಸಿಡಿಸಿದ್ದಾರೆ. ಉಳಿದಂತೆ ಪಟ್ಟಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ 1,827 ರನ್, ಸುರೇಶ್ ರೈನಾ 1,605 ರನ್ ಹಾಗೂ ಎಂಎಸ್ ಧೋನಿ 1,487 ರನ್ ಗಳಿಸಿದ್ದಾರೆ.

    ಐಸಿಸಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಮಿಥಾಲಿ ರಾಜ್ ಅವರ ಸಾಧನೆ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಸದ್ಯ ಟೀಂ ಇಂಡಿಯಾ ಮಹಿಳಾ ತಂಡ ಐಸಿಸಿ ವಿಶ್ವಕಪ್‍ನಲ್ಲಿ ಭಾಗವಹಿಸಿದ್ದು, ಟೂರ್ನಿಯಲ್ಲಿ ಸತತವಾಗಿ 3ನೇ ಬಾರಿಗೆ ಸೆಮಿ ಫೈನಲ್ ಪ್ರವೇಶ ಮಾಡಿದೆ. ಗುರುವಾರ ಐರ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಮಿಥಾಲಿ ರಾಜ್ 51 ರನ್ ಸಿಡಿಸಿ ಮಿಂಚಿದ್ದರು. ಗಯಾನದಲ್ಲಿ ನಡೆದ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಟೀಂ ಇಂಡಿಯಾ 52 ರನ್ ಜಯ ದಾಖಲಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews