Tag: Gyanvapi

  • ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ – ನ್ಯಾಯಾಧೀಶರ ವಿರುದ್ಧ ವಕೀಲನಿಂದ ಅವಹೇಳನಕಾರಿ ಪೋಸ್ಟ್

    ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ – ನ್ಯಾಯಾಧೀಶರ ವಿರುದ್ಧ ವಕೀಲನಿಂದ ಅವಹೇಳನಕಾರಿ ಪೋಸ್ಟ್

    ರಾಮನಗರ: ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಹಿಂದೂಗಳ ಪೂಜೆಗೆ ಅವಕಾಶ ನೀಡಿದ ವಿಚಾರವಾಗಿ ನ್ಯಾಯಾಧೀಶರ ವಿರುದ್ಧ ವಕೀಲನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾನೆ.

    ರಾಮನಗರದ (Ramanagara) ಐಜೂರಿನ ವಕೀಲ ಚಾನ್ ಪಾಷಾ ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ನ್ಯಾಯಾಧೀಶರ (Varanasi District Judge) ಬಗ್ಗೆ ಆವಹೇಳನಕಾರಿಯಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಪೋಸ್ಟ್‌ನಲ್ಲಿ ನ್ಯಾಯಾಧೀಶರ ವಿರುದ್ಧ ನಾಲಾಯಕ್, ಚಡ್ಡಿ ನ್ಯಾಯಾಧೀಶ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೀಗ ವಕೀಲನ ವಿರುದ್ಧ ಹಿಂದೂ ಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ವಕೀಲನ ವಿರುದ್ಧ ಕಾನೂನು ಕ್ರಮವಹಿಸುವಂತೆ ಹಿಂದೂ ಪರ ಸಂಘಟನೆಗಳ ಸದಸ್ಯರು ಆಗ್ರಹಿಸಿದ್ದಾರೆ. ಈ ಸಂಬಂಧ ಹಿಂದೂ ಸಂಘಟನೆಗಳ ನಿಯೋಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಆತನನ್ನು ಬಂಧಿಸುವಂತೆ ನಿಯೋಗ ಒತ್ತಾಯಿಸಿದೆ. ಅಲ್ಲದೇ ರೌಡಿಶೀಟರ್ ಹಿನ್ನೆಲೆ ಹೊಂದಿರುವ ಚಾನ್ ಪಾಷಾನನ್ನು ಗಡಿಪಾರು ಮಾಡುವಂತೆ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದಾರೆ.

    ಜ್ಞಾನವಾಪಿ ಮಸೀದಿಯಲ್ಲಿ ಪುರಾತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಮಸೀದಿ ನಿರ್ಮಾಣ ಆಗಿರುವುದು ಮಂದಿರದ ಮೇಲೆ ಎಂಬ ಸತ್ಯ ಬಯಲಾಗಿತ್ತು. ಇದರ ಬೆನ್ನಲ್ಲೇ ವಾರಣಾಸಿ ನ್ಯಾಯಾಲಯ ( District Court Varanasi) ಜ.31ರಂದು ನೀಡಿದ್ದ ಆದೇಶದಲ್ಲಿ ನೆಲ ಮಹಡಿಯಲ್ಲಿರುವ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ ನೀಡಿತ್ತು. ಇದನ್ನೂ ಓದಿ: ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲ್ಲ- ಮುಸ್ಲಿಂ ಸಮಿತಿ ಮನವಿ ತಿರಸ್ಕರಿಸಿದ ಹೈಕೋರ್ಟ್‌

  • ಜ್ಞಾನವಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಸೀದಿ ಸಮಿತಿ

    ಲಕ್ನೋ: ಜ್ಞಾನವಾಪಿ (Gyanvapi) ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ (Varanasi Court) ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಅಲಹಾಬಾದ್ ಹೈಕೋರ್ಟ್‍ನ (Allahabad High Court) ಮೆಟ್ಟಿಲೇರಿದೆ.

    ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಅವರ ಮುಂದೆ ಹಿರಿಯ ವಕೀಲ ಎಸ್‍ಎಫ್‍ಎ ನಖ್ವಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಈ ವೇಳೆ ವಿಷಯವನ್ನು ತುರ್ತು ಪಟ್ಟಿಯಲ್ಲಿ ಸೇರಿಸಲು ರಿಜಿಸ್ಟ್ರಾರ್ ಬಳಿಗೆ ಹೋಗುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ. ಅದರಂತೆ ವಕೀಲ ನಖ್ವಿ ಪ್ರಕರಣವನ್ನು ತುರ್ತು ಪಟ್ಟಿ ಸೇರಿಸುವಂತೆ ರಿಜಿಸ್ಟ್ರಾರ್‍ಗೆ ಮನವಿ ಮಾಡಿದ್ದಾರೆ. ಸದ್ಯದಲ್ಲೇ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ನೆಲಮಾಳಿಗೆಯಲ್ಲಿರುವ ವ್ಯಾಸ್ ಜಿ ಕಾ ತೆಹ್ಖಾನಾದಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿ ವಾರಣಾಸಿ ಜಿಲ್ಲಾ ನ್ಯಾಯಾಲಯ ಜ.31 ರಂದು ಆದೇಶ ನೀಡಿತ್ತು. ಇದರ ವಿರುದ್ಧ ಮಸೀದಿ ಸಮಿತಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಸಮಿತಿ ಹೈಕೋರ್ಟ್ ಮೊರೆ ಹೋಗಿದೆ. ಈ ನಡುವೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ ಪ್ರಾರಂಭಗೊಂಡಿದೆ.

    ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಮುಚ್ಚಿದ ನೆಲಮಾಳಿಗೆ ತೆಹ್ಖಾನಾ ಒಳಗಡೆ ಹಿಂದೂಗಳು ಪೂಜಾ ವಿಧಿಗಳನ್ನು ನಡೆಸಲು 7 ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು. ಇದನ್ನೂ ಓದಿ: Gyanvapi Mosque Case: ವಜುಖಾನಾ ಡಿ-ಸೀಲಿಂಗ್‌ಗೆ ಹಿಂದೂ ಪರ ಅರ್ಜಿದಾರರಿಂದ ಸುಪ್ರೀಂಕೋರ್ಟಿಗೆ ಅರ್ಜಿ

  • ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ಲಕ್ನೋ: ಕಾಶಿ (Kashi) ಜ್ಞಾನವ್ಯಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳು ನಡೆಸಿದ್ದ ಕಾನೂನು ಹೋರಾಟಕ್ಕೆ ಮಹತ್ವದ ಜಯ ಸಿಕ್ಕಿದೆ.

    ಪುರಾತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಮಸೀದಿ (Varanasi Gyanvapi Mosque) ನಿರ್ಮಾಣ ಆಗಿರುವುದು ಮಂದಿರದ ಮೇಲೆ ಎಂಬ ಸತ್ಯ ಬಯಲಾದ ಬೆನ್ನಲ್ಲೇ ಹಿಂದೂಗಳಿಗೆ ಈಗ ಪೂಜಾಧಿಕಾರ ದಕ್ಕಿದೆ. ಈ ಪ್ರಾರ್ಥನಾ ಮಂದಿರದಲ್ಲಿ ಸೀಲ್ ಮಾಡಿರುವ ಬೇಸ್‌ಮೆಂಟ್‌ನಲ್ಲಿ ಇರುವ ಹಿಂದೂ ವಿಗ್ರಹಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ (Varanasi Court) ಅನುಮತಿ ನೀಡಿದೆ.  ಇದನ್ನೂ ಓದಿ: ಮೈಸೂರಿಗೂ ಕಾಲಿಟ್ಟ ಧ್ವಜ ದಂಗಲ್- ಪ್ರತಾಪ್ ಸಿಂಹ ವಿರೋಧದ ಬೆನ್ನಲ್ಲೇ ಟಿಪ್ಪು ಬಾವುಟ ತೆರವು

     

    ಮುಂದಿನ ಒಂದು ವಾರದಲ್ಲಿ ಪೂಜೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಕಾಶಿ ವಿಶ್ವನಾಥ ಮಂದಿರಕ್ಕೆ ಸೇರಿದ ಅರ್ಚಕರನ್ನು ಗುರುವಾರ ನೇಮಿಸಬೇಕು. ಹಿಂದೂ ಅರ್ಚಕರು ಪೂಜೆ ಮಾಡಲು ಬ್ಯಾರಿಕೇಡ್ ತೆರವು ಮಾಡಬೇಕು ಎಂದು ಸ್ಥಳೀಯ ಆಡಳಿತಕ್ಕೆ ವಾರಣಾಸಿ ಕೋರ್ಟ್ ನಿರ್ದೇಶನ ನೀಡಿದೆ.

    ಈ ಐತಿಹಾಸಿಕ ತೀರ್ಪು ನೀಡಿದ ವಾರಾಣಸಿ ನ್ಯಾಯಾಲಯದ ನ್ಯಾಯಮೂರ್ತಿ ಎ.ಕೆ. ವಿಶ್ವೇಶ ಅವರು ಇವತ್ತೇ ನಿವೃತ್ತರಾಗಿದ್ದಾರೆ. ಇದನ್ನೂ ಓದಿ: ಭಾರೀ ಬಿಗಿ ಭದ್ರತೆಯಲ್ಲಿ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿ ಕೋರ್ಟ್‍ಗೆ ಹಾಜರು

    ವಾರಣಾಸಿ ಕೋರ್ಟ್ ತೀರ್ಪು ಹಿಂದೂಗಳಲ್ಲಿ ಸಂತಸ ತಂದಿದೆ. ಈ ತೀರ್ಪನ್ನು, 1983ರಲ್ಲಿ ಅಯೋಧ್ಯೆ ರಾಮಮಂದಿರದ ಬೀಗ ತೆರೆಯಲು ಜಸ್ಟೀಸ್ ಕೃಷ್ಣಮೋಹನ್ ಪಾಂಡೆ ನೀಡಿದ್ದ ಆದೇಶಕ್ಕೆ ಹೋಲಿಕೆ ಮಾಡಲಾಗುತ್ತಿದೆ. ಮುಂದೊಂದು ದಿನ ಈ ಮಸೀದಿ ಕೂಡ, ಅಯೋಧ್ಯೆ ರಾಮಮಂದಿರದ ರೀತಿಯಲ್ಲಿ ಹಿಂದೂಗಳಿಗೆ ದಕ್ಕಬಹುದು ಎಂದು ವ್ಯಾಖ್ಯಾನಿಸಲಾಗುತ್ತಿದೆ.

     

    ಇದು ಹಿಂದೂಗಳಿಗೆ ದಕ್ಕಿದ ದೊಡ್ಡ ಗೆಲುವು.ಒಂದು ವಾರದಲ್ಲಿ ಪೂಜೆ ಆರಂಭಿಸುತ್ತೇವೆ ಎಂದು ಕಾಶಿವಿಶ್ವನಾಥ ಮಂದಿರ ಟ್ರಸ್ಟ್ ತಿಳಿಸಿದೆ. ಆದರೆ ಈ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೇಲ್ಮನವಿ ಹೋಗಲು ಮಸೀದಿ ಆಡಳಿತ ಮಂಡಳಿ ನಿರ್ಧರಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

    ಹಿಂದೂಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಪ್ರತಿಕ್ರಿಯಿಸಿ, ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂಗಳಿಗೆ ಸಿಕ್ಕಿದ ಮೊದಲ ದೊಡ್ಡ ಗೆಲುವು ಎಂದು ಬಣ್ಣಿಸಿದ ಅವರು ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ 31 ವರ್ಷದ ಬಳಿಕ ಪೂಜೆ ಮಾಡಲು ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.

  • ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಸಲ್ಲಿಕೆ

    ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಸಲ್ಲಿಕೆ

    ನವದೆಹಲಿ: ಜ್ಞಾನವಾಪಿ (Gyanvapi) ಸಮೀಕ್ಷೆಯ ವರದಿಯನ್ನು (Survey Report) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದೆ. ವರದಿ ಸಲ್ಲಿಕೆಗೆ ನಾಲ್ಕು ವಾರದ ಸಮಯ ವಿಸ್ತರಣೆಯಾದ ಬಳಿಕ ಇಂದು ಅಂತಿಮವಾಗಿ ನ್ಯಾ. ಡಾ.ಅಜಯ್ ಕೃಷ್ಣ ವಿಶ್ವೇಶ್ ಅವರಿಗೆ ಎಎಸ್‌ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಅವಿನಾಶ್ ಮೊಹಾಂತಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ.

    ಜಿಲ್ಲಾ ನ್ಯಾಯಾಧೀಶ ಡಾ.ಅಜಯ್ ಕೃಷ್ಣ ವಿಶ್ವೇಶ್ ಅವರ ಆದೇಶದ ಮೇರೆಗೆ ಎಎಸ್‌ಐ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಜು.24ರಂದು ಸರ್ವೆ ಕಾರ್ಯ ಆರಂಭಿಸಲಾಗಿತ್ತು, ನ.2ರಂದು ಸರ್ವೆ ಕಾರ್ಯ ಪೂರ್ಣಗೊಂಡಿತ್ತು. ಸರ್ವೆ ಬಳಿಕ ವರದಿಯನ್ನು ಸಿದ್ಧಪಡಿಸಲು 15 ದಿನಗಳ ಹೆಚ್ಚುವರಿ ಸಮಯ ನೀಡಲಾಗಿತ್ತು. ಬಳಿಕ ವಿವಿಧ ಹಂತದಲ್ಲಿ ನ್ಯಾಯಾಲಯವು ವರದಿ ಸಲ್ಲಿಸಲು ನಾಲ್ಕು ಬಾರಿ ಹೆಚ್ಚುವರಿ ಸಮಯವನ್ನು ನೀಡಲಾಗಿತ್ತು. ಡಿಸೆಂಬರ್ 21 ರಂದು ಅರ್ಜಿದಾರರೊಂದಿಗೆ ಈ ವರದಿಯನ್ನು ಹಂಚಿಕೊಳ್ಳಲಾಗುವುದು ಮತ್ತು ಅದರ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಕಳುಹಿಸಲಾಗುವುದು. ಇದನ್ನೂ ಓದಿ: ಮಕ್ಕಳೊಂದಿಗೆ ಮಗುವಾದ ಮೋದಿ – ತನಗಾಗಿ ವಿಶೇಷ ಕವಿತೆ ಹಾಡಿದ ಬಾಲಕಿಗೆ ಭೇಷ್‌ ಎಂದ ಪ್ರಧಾನಿ

    ವರದಿಯ ಸಲ್ಲಿಕೆ ಕುರಿತು ಮಾತನಾಡಿದ ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್, ಎಎಸ್‌ಐ ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯದ ಮುಂದೆ ತನ್ನ ವೈಜ್ಞಾನಿಕ ಸಮೀಕ್ಷೆ ವರದಿಯನ್ನು ಸಲ್ಲಿಸಿದೆ. 17 ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಎಎಸ್‌ಐ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಲಾಗಿದೆ ಎಂದರು. ಇದನ್ನೂ ಓದಿ: ವಾರಣಾಸಿಯಲ್ಲಿ ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ ಉದ್ಘಾಟಿಸಿದ ಪಿಎಂ ಮೋದಿ- ವಿಶೇಷತೆ ಏನು?

    ಅಲಹಾಬಾದ್ ಹೈಕೋರ್ಟ್ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ಬಳಿಕ ಸಮೀಕ್ಷೆಯು ಪ್ರಾರಂಭವಾಯಿತು. ಅಲಹಾಬಾದ್ ಹೈಕೋರ್ಟಿನ ಆದೇಶದ ನಂತರ, ಜ್ಞಾನವಾಪಿ ಸಮಿತಿಯು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿತ್ತು. ಸಿಜೆಐ ಡಿ.ವೈ ಚಂದ್ರಚೂಡ್ ಪೀಠ ಹೈಕೋರ್ಟ್‌ನ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. ಇದನ್ನೂ ಓದಿ: ಐಸಿಸ್ ಉಗ್ರರ ನಂಟು ಪ್ರಕರಣ – ಬೆಂಗ್ಳೂರು ಸೇರಿದಂತೆ 4 ರಾಜ್ಯಗಳ 19 ಕಡೆ NIA ದಾಳಿ

  • ಜ್ಞಾನವಾಪಿ ಮಸೀದಿ ವಿವಾದ – ಇಂದು ಜಿಲ್ಲಾ ಕೋರ್ಟ್‌ಗೆ ವರದಿ ಸಲ್ಲಿಕೆ

    ಜ್ಞಾನವಾಪಿ ಮಸೀದಿ ವಿವಾದ – ಇಂದು ಜಿಲ್ಲಾ ಕೋರ್ಟ್‌ಗೆ ವರದಿ ಸಲ್ಲಿಕೆ

    ಲಕ್ನೋ: ಜ್ಞಾನವಾಪಿ (Gyanvapi)  ಸಮೀಕ್ಷೆಯ ವರದಿಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಇಂದು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಿದೆ.

    ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಅವಿನಾಶ್ ಮೊಹಾಂತಿ (Avinash Mohanty) ಅವರ ರಕ್ತದೊತ್ತಡ ಹಠಾತ್ ಹೆಚ್ಚಳ ಮತ್ತು ಆರೋಗ್ಯ ಹದಗೆಟ್ಟಿದ್ದರಿಂದ ಡಿಸೆಂಬರ್ 11ರಂದು ವರದಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ಕೋರ್ಟ್ ಒಂದಿ ವಾರದ ಸಮಯ ನೀಡಿತ್ತು. ಜಿಲ್ಲಾ ನ್ಯಾಯಾಧೀಶ ಡಾ.ಅಜಯ್ ಕೃಷ್ಣ ವಿಶ್ವೇಶ್ ಅವರ ಆದೇಶದ ಮೇರೆಗೆ ಎಎಸ್‍ಐ ಜ್ಞಾನವಾಪಿ ಮಸೀದಿಯಮ ಆವರಣದಲ್ಲಿ ಜುಲೈ 24ರಂದು ಸರ್ವೆ ಕಾರ್ಯ ಆರಂಭಿಸಲಾಗಿದ್ದು, ನವೆಂಬರ್ ನ.2ರಂದು ಸರ್ವೆ ಕಾರ್ಯ ಪೂರ್ಣಗೊಂಡಿತ್ತು.

    ಸರ್ವೆ ಬಳಿಕ ವರದಿಯನ್ನು ಸಿದ್ಧಪಡಿಸಲು 15 ದಿನಗಳ ಹೆಚ್ಚುವರಿ ನೀಡಲಾಗಿತ್ತು. ಬಳಿಕ ವಿವಿಧ ಹಂತದಲ್ಲಿ ನ್ಯಾಯಾಲಯವು ವರದಿ ಸಲ್ಲಿಸಲು ನಾಲ್ಕು ಬಾರಿ ಹೆಚ್ಚುವರಿ ಸಮಯವನ್ನು ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ಇಂದು ಎಎಸ್‍ಐ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತಾರಾ ಅಥವಾ ಮತ್ತೊಮ್ಮೆ ಹೆಚ್ಚುವರಿ ಕಾಲಾವಕಾಶ ಕೋರುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಕೆಗೆ ನೀಡಿದ್ದ ಗಡುವು ಅಂತ್ಯ

  • ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? – ಯೋಗಿ ಆದಿತ್ಯನಾಥ್ ಪ್ರಶ್ನೆ

    ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? – ಯೋಗಿ ಆದಿತ್ಯನಾಥ್ ಪ್ರಶ್ನೆ

    ಲಕ್ನೋ: ಜ್ಞಾನವಾಪಿ (Gyanvapi) ಮಸೀದಿ ಮಸೀದಿಯಾಗಿದ್ದರೇ ಅದರ ಆವರಣದಲ್ಲಿ ತ್ರಿಶೂಲ ಏನು ಮಾಡುತ್ತಿದೆ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಪ್ರಶ್ನಿಸಿದ್ದಾರೆ.

    ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐತಿಹಾಸಿಕ ಪ್ರಮಾದವನ್ನು ಸರಿಪಡಿಸಲು ಮುಸ್ಲಿಂ ಅರ್ಜಿದಾರರು ಒಂದು ನಿರ್ಣಯಕ್ಕೆ ಮುಂದಾಗಬೇಕು. ಸರ್ಕಾರವು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಬಯಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆ – ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

    ನಾವು ಅದನ್ನು ಮಸೀದಿ ಎಂದು ಕರೆದರೆ ಅದು ಸಮಸ್ಯೆಯಾಗುತ್ತದೆ. ಹಾಗಿದ್ದರೆ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? ತ್ರಿಶೂಲವನ್ನು ನಾವು ಇಟ್ಟಿಲ್ಲ. ಮಸೀದಿಯ ಪಕ್ಕದಲ್ಲಿ ಜ್ಯೋತಿರ್ಲಿಂಗವಿದೆ, ದೇವತೆಗಳಿದ್ದಾರೆ. ಐತಿಹಾಸಿಕ ಪ್ರಮಾದವನ್ನು ಸರಿಪಡಿಸಲು ಮುಸ್ಲಿಂ ಕಡೆಯಿಂದ ಪ್ರಸ್ತಾವನೆ ಬರಬೇಕು ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಪ್ರಧಾನಿ ಮೋದಿ ತಯಾರಿ ಏನು?

    ಜ್ಞಾನವಾಪಿ ಮಸೀದಿ ಸರ್ವೆಗೆ ವಾರಣಾಸಿ ಜಿಲ್ಲಾ ನ್ಯಾಯಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಅಲಹಬಾದ್ ಹೈಕೋರ್ಟ್ ಅಗಸ್ಟ್ 3ಕ್ಕೆ ಆದೇಶ ಕಾಯ್ದಿರಿಸಿದೆ. ಇದನ್ನೂ ಓದಿ: ಇಡಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅಧಿಕಾರಾವಧಿ ವಿಸ್ತರಣೆಗೆ ಸುಪ್ರೀಂ ಸಮ್ಮತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

    ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

    ಲಕ್ನೋ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ತಂಡ ಇಂದು (ಸೋಮವಾರ) ವಾರಣಾಸಿಯ (Varanasi) ಜ್ಞಾನವಾಪಿ (Gyanvapi) ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ.

    ಮಸೀದಿ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ (Court) ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಈ ಸರ್ವೆ ಆರಂಭಗೊಂಡಿದೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಸಮೀಕ್ಷೆ ಸೀಲ್ ಮಾಡಿದ ಶಿವಲಿಂಗದ ಆಕೃತಿ ಇರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಾ ಪ್ರದೇಶಗಳಲ್ಲೂ ನಡೆಯಲಿದೆ. ಮಸೀದಿಯಲ್ಲಿ ಶಿವಲಿಂಗದಂತೆ ಕಾಣುವ ರಚನೆ 2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿತ್ತು. ಈಗ ನಡೆಯುತ್ತಿರುವ ಸಮೀಕ್ಷೆಯ ವರದಿಯನ್ನು ಆ.4ರ ಒಳಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

    ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಈ ತಪಾಸಣೆ ನಡೆಸಲಾಗುತ್ತಿದೆ. ಪುರಾತನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ನಂತರ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ಬಗ್ಗೆ ಸಂಪೂರ್ಣ ಸತ್ಯವನ್ನು ಹೊರತರಲು ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದಿದ್ದರು. ಆದರೆ ಜ್ಞಾನವಾಪಿ ಮಸೀದಿಯ ಸಿಬ್ಬಂದಿ ಶಿವಲಿಂಗದ ರಚನೆಯು ವಝುಖಾನಾದಲ್ಲಿ ಕಾರಂಜಿಯ ಒಂದು ಭಾಗವಾಗಿದೆ ಎಂದು ಹೇಳಿದ್ದರು. ವಿಚಾರಣೆಯ ಭಾಗವಾಗಿ ವೈಜ್ಞಾನಿಕ ತನಿಖೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

    ಅರ್ಜಿದಾರರ ಪರವಾಗಿಯೂ ಪ್ರತಿನಿಧಿಸುವ ಸುಭಾಷ್ ನಂದನ್ ಚತುರ್ವೇದಿ, ನ್ಯಾಯಾಲಯದ ನಿರ್ಧಾರವು ಪ್ರಕರಣದಲ್ಲಿ ಮಹತ್ವದ ತಿರುವು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸಲು ಹೈಕೋರ್ಟ್ ಆದೇಶ

    ಜ್ಞಾನವಾಪಿ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸಲು ಹೈಕೋರ್ಟ್ ಆದೇಶ

    ಲಕ್ನೋ: ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯೊಳಗೆ (Gyanvapi Mosque) ಪತ್ತೆಯಾದ ಶಿವಲಿಂಗವನ್ನು (Shivling) ಕಾರ್ಬನ್ ಡೇಟಿಂಗ್ (Carbon Dating) ಸೇರಿದಂತೆ ವೈಜ್ಞಾನಿಕ ಸಮೀಕ್ಷೆಗೆ (Scientific Survey) ಒಳಪಡಿಸುವಂತೆ ಅಲಹಬಾದ್ ಹೈಕೋರ್ಟ್ (Allahabad High Court) ಶುಕ್ರವಾರ ಆದೇಶಿಸಿದೆ.

    ಅಲಹಬಾದ್ ಹೈಕೋರ್ಟ್ ಶುಕ್ರವಾರ ಕೆಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿ ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾಗಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ಅನುಮತಿ ನೀಡಿದೆ.

    ಕಳೆದ ವರ್ಷ ಜ್ಞಾನವಾಪಿ ಮಸೀದಿಯ ಆವರಣದೊಳಗೆ ವೀಡಿಯೋ ಸಮೀಕ್ಷೆಯನ್ನು ನಡೆಸಲಾಗಿತ್ತು. ಈ ವೇಳೆ ಶಿವಲಿಂಗದAತಹ ಆಕೃತಿಯೊಂದು ಪತ್ತೆಯಾಗಿದ್ದು, ಬಳಿಕ ಭಾರೀ ವಿವಾದಕ್ಕೆ ಕಾರಣವಾಯಿತು. ಹಿಂದೂ ಕಡೆಯವರು ಪತ್ತೆಯಾದ ಆಕೃತಿಯನ್ನು ಶಿವಲಿಂಗ ಎಂದು ಹೇಳಿಕೊಂಡರೆ ಮುಸ್ಲಿಂ ಕಡೆಯವರು ಇದು ಕಾರಂಜಿ ಎಂದು ವಾದಿಸಿದರು. ಬಳಿಕ ಆ ಆಕೃತಿಯನ್ನು ವೈಜ್ಞಾನಿಕ ಸಮೀಕ್ಷೆಗೆ ಒಳಪಡಿಸಬೇಕು ಎಂದು ಹಿಂದೂ ಪರ ಅರ್ಜಿದಾರರು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಸಿಬಿಐನಿಂದ ಭ್ರಷ್ಟಾಚಾರ ಕೇಸ್ ದಾಖಲು

    ಮಸೀದಿ ಸಂಕೀರ್ಣದೊಳಗಿನ ದೇಗುಲದಲ್ಲಿ ವರ್ಷಪೂರ್ತಿ ಪೂಜೆ ಮಾಡಲು 5 ಹಿಂದೂ ಮಹಿಳೆಯರು ಮನವಿ ಮಾಡಿಕೊಂಡಿದ್ದರು. 5 ಅರ್ಜಿದಾರರಲ್ಲಿ ನಾಲ್ವರು ಶಿವಲಿಂಗ ಎಷ್ಟು ವರ್ಷ ಹಳೆಯದು ಎಂಬುದನ್ನು ಖಚಿತಪಡಿಸಿಕೊಳ್ಳಲು ಕಾರ್ಬನ್ ಡೇಟಿಂಗ್ ಒಳಗೊಂಡAತೆ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿಕೊಂಡಿದ್ದರು. ಇದನ್ನೂ ಓದಿ: ಫಲಿತಾಂಶ ಹೊರಬೀಳುವ ಹೊತ್ತಿನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್ – ವಿದ್ಯುತ್‌ ದರ ಹೆಚ್ಚಳ

  • ಬಾಬರಿ ಮಸೀದಿ ಕೇಸ್ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ: ಓವೈಸಿ

    ಬಾಬರಿ ಮಸೀದಿ ಕೇಸ್ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ: ಓವೈಸಿ

    ಹೈದರಾಬಾದ್: ಜ್ಞಾನವಾಪಿ ಮಸೀದಿ (Gyanvapi Masjid) ವಿಚಾರದಲ್ಲಿ ಅಸಮಾದಾನ ವ್ಯಕ್ತಪಡಿಸಿರುವ ಎಐಎಂಐಎಂ (AIMIM) ನಾಯಕ ಅಸಾದುದ್ದೀನ್ ಓವೈಸಿ (Asaduddin Owaisi)ವಾರಣಾಸಿ ನ್ಯಾಯಾಲಯದ ಆದೇಶವನ್ನು ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ನೀಡಿದ ತೀರ್ಪಿನೊಂದಿಗೆ ಹೋಲಿಸಿದ್ದಾರೆ.

    ಅಲ್ಲದೇ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋಗಲು ಕರೆ ನೀಡಿದ್ದು, ವಾರಣಾಸಿಯ ಅಂಜುಮನ್ ಮಸೀದಿ ಸಮಿತಿಯವರು ವಾರಣಾಸಿ ಜಿಲ್ಲಾ ನ್ಯಾಯಾಲಯದ (Varanasi Court) ತೀರ್ಪಿನ ವಿರುದ್ಧ ಹೈಕೋರ್ಟ್‌ (UP HighCourt)  ಮೇಲ್ಮನವಿ ಸಲ್ಲಿಸುವ ವಿಶ್ವಾಸವಿದೆ ಎಂದು ಓವೈಸಿ ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    ಈ ಕುರಿತು ಮಾಧ್ಯಮಗಳೊಂದಿಗೆ ಅವರಿಂದು ಮಾತನಾಡಿ, ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯದ ಆದೇಶವು ಅಸ್ಥಿರಗೊಳಿಸುವ ಪರಿಣಾಮ ಬೀರುತ್ತದೆ. ಇದರಿಂದ ದೇಶದಲ್ಲಿ ಸಮಸ್ಯೆಗಳೂ ಸೃಷ್ಟಿಯಾಗುತ್ತವೆ ಎಂದು ಓವೈಸಿ ಅಭಿಪ್ರಾಯಪಟ್ಟಿದ್ದಾರೆ.

    ಈಗ ದಾವೆಗಳ ಹೂಡುವ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬೆಳವಣಿಗೆಯು ಪ್ರಸ್ತುತ ಸಮಾಜವನ್ನು 1980 ಮತ್ತು 1990ರ ದಶಕಗಳ ಹಿಂದಕ್ಕೆ ಕೊಂಡೊಯ್ಯುತ್ತದೆ. ಈ ಅವಧಿಯ ದಶಕವನ್ನು ಮರುಪ್ರವೇಶಿಸಿದರೆ ದೇಶದಲ್ಲಿ ಅಸ್ಥಿರತೆ ಉಂಟಾಗುತ್ತದೆ ಎಂದು ಓವೈಸಿ ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    ಆರಾಧನಾ ಸ್ಥಳಗಳ ಕಾಯಿಯ್ದೆಯ ಪ್ರಸ್ತುತತೆ ಏನು? (The Places of Worship Act) ಬಾಬರಿ ಮಸೀದಿ ತೀರ್ಪಿನ ಸಂದರ್ಭದಲ್ಲಿ 1947ರ ಆಗಸ್ಟ್ 15ರ ನಂತರ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಈಗ ಈ ವಿಷಯಕ್ಕೆ ಕಾಯಿದೆ ಅಡ್ಡಿಯಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

    ಬಾಬರಿ ಮಸೀದಿ ಪ್ರಕರಣದ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ. ಬಾಬರಿ ಮಸೀದಿಯ ತೀರ್ಪು ಬಂದಾಗ, ನಂಬಿಕೆಯ ಆಧಾರದ ಮೇಲೆ ಈ ತೀರ್ಪು ನೀಡಿದ್ದರಿಂದ ದೇಶದಲ್ಲಿ ಸಮಸ್ಯೆಗಳು ಉಂಟಾಗುತ್ತವೆ ಎಂದು ಎಲ್ಲರಿಗೂ ಎಚ್ಚರಿಸಿದ್ದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್

    ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್

    ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗವನ್ನು ಪೂಜಿಸಲು ಅನುಮತಿ ನೀಡಬೇಕಾಗಿ ಕೋರಿ ಇತ್ತೀಚೆಗೆ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

    ಕೆಲವು ದಿನಗಳ ಹಿಂದೆ 7 ಹಿಂದೂ ಮಹಿಳೆಯರ ಗುಂಪು ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಜಸ್ಟಿನ್ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಈ ಮನವಿಯನ್ನು ನಿರಾಕರಿಸಿದೆ. ಇದನ್ನೂ ಓದಿ: ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಿದ್ದಕ್ಕೆ ಬೀದಿಗಿಳಿದಿದ್ದಾರೆ: ಬಿಜೆಪಿ

    ಶ್ರಾವಣ ಮಾಸ ಪ್ರಾರಂಭವಾಗುತ್ತಿರುವುದರಿಂದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹಾಗೂ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಬೇಕಾಗಿ ಅರ್ಜಿಯಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್

    ಈ ಹಿಂದೆ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾದ ಶಿವಲಿಂಗದ ರಚನೆಯನ್ನು ಮಸೀದಿಯ ಸಮಿತಿ ಅದು ಶಿವಲಿಂಗವಲ್ಲ, ಕಾರಂಜಿ ಎಂದು ವಾದಿಸಿತ್ತು. ಈ ವಿಚಾರವಾಗಿ ದೇಶಾದ್ಯಂತ ವಿವಾದ ಉಂಟಾಗಿದ್ದು, ಬಳಿಕ ಅಲ್ಲಿನ ಜಿಲ್ಲಾ ನ್ಯಾಯಾಲಯ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಆರಾಧನೆಯ ಹಕ್ಕನ್ನು ನಿರ್ಬಂಧಿಸಿ, ಆ ಸ್ಥಳವನ್ನು ರಕ್ಷಿಸುವಂತೆ ಸುಪ್ರೀಂ ಕೋರ್ಟ್ ಅನ್ನು ಕೇಳಿಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]