Tag: Gyanvapi Mosque Controversy

  • ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    ಲಕ್ನೋ: ಅಲಹಾಬಾದ್‌ ಹೈಕೋರ್ಟ್‌ನಿಂದ (Allahabad High Court) ಆದೇಶ ಹೊರಬಿದ್ದ ಬೆನ್ನಲ್ಲೇ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ತಂಡವು ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಸರ್ವೆ ಕಾರ್ಯ ಆರಂಭಿಸಿದೆ.

    ಎಎಸ್‌ಐ ತಂಡ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶದ ವಾರಣಾಸಿಯ (Varanasi) ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿತು. ಬಿಗಿ ಭದ್ರತೆಯ ನಡುವೆ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

    Gyanvapi mosque, 

    ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ಪ್ರಶ್ನಿಸಿ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿ ಗುರುವಾರ ಆದೇಶ ಹೊರಡಿಸಿದೆ. ಈಗ ಮತ್ತೆ ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

    ಎಎಸ್‌ಐ ಅಧಿಕಾರಿಗಳು ಸೇರಿದಂತೆ ಅನೇಕರು ಸ್ಥಳಕ್ಕೆ ತಲುಪಿದ್ದಾರೆ. ಸಮೀಕ್ಷೆ ಪ್ರಾರಂಭವಾಗಿದೆ. ನಾವೂ ಒಳಗೆ ಹೋಗುತ್ತಿದ್ದೇವೆ ಎಂದು ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂ ಪರ ವಕೀಲ ಸುಭಾಷ್ ನಂದನ್ ಚತುರ್ವೇದಿ ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ವಿಶೇಷ ಏರ್ ಶೋ ನಡೆಸಲು ಸಿಎಂ ಮನವಿ

    ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿ ನಿರ್ಮಿಸಲಾಗಿದೆ. ಇದನ್ನು ನಿರ್ಧರಿಸುವ ಏಕೈಕ ಮಾರ್ಗ ಮಸೀದಿಯನ್ನು ಸರ್ವೆಗೆ ಒಳಪಡಿಸುವುದು ಎಂದು ನಾಲ್ವರು ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ವಾರಣಾಸಿ ನ್ಯಾಯಾಲಯವು ಮಸೀದಿ ಸಮೀಕ್ಷೆ ನಡೆಸಲು ಅನುಮತಿಸಿ ಜು.21 ರಂದು ಆದೇಶ ಹೊರಡಿಸಿತ್ತು.

    ಜುಲೈ 24 ರಂದು ಸಮೀಕ್ಷೆ ಪ್ರಾರಂಭವಾಯಿತು. ಆದರೆ ಅದನ್ನು ವಿರೋಧಿಸಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಸರ್ವೆ ಆರಂಭವಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಮಸೀದಿ ವಿವಾದ – ಜಿಲ್ಲಾ ನ್ಯಾಯಾಲಯದಿಂದ ನಾಳೆ ಮಹತ್ವದ ಆದೇಶ

    ಜ್ಞಾನವಾಪಿ ಮಸೀದಿ ವಿವಾದ – ಜಿಲ್ಲಾ ನ್ಯಾಯಾಲಯದಿಂದ ನಾಳೆ ಮಹತ್ವದ ಆದೇಶ

    ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಾರಣಾಸಿಯ ಜಿಲ್ಲಾ ನ್ಯಾಯಾಲಯ ಮಹತ್ವದ ಆದೇಶ ನೀಡಲಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ಇಂದು ಸುಮಾರು 45 ನಿಮಿಷಗಳ ಸುಧೀರ್ಘ ವಿಚಾರಣೆ ನಡೆಸಿದ ನ್ಯಾ. ಅಜಯ್ ಕೃಷ್ಣ ವಿಶ್ವೇಶ ನಾಳೆಗೆ ತೀರ್ಪು ಕಾಯ್ದಿರಿಸಿದರು.

    supreme court 12

    ವಿಚಾರಣೆ ವೇಳೆ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಹಿಂದೂ ಪರ ವಕೀಲರು ಸಲ್ಲಿಸಿದ್ದ ಅರ್ಜಿಗೆ ಮಸೀದಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು. 1991 ಕಾಯಿದೆ ಅನ್ವಯ ಈ ಅರ್ಜಿ ವಿಚಾರಣೆ ಅರ್ಹವಾಗಿಲ್ಲ, ಇದು ಆರ್ಡರ್ 7 ರೂಲ್ 11 ಉಲ್ಲಂಘನೆಯಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್

    ಈ ನಿಯಮ ಉಲ್ಲಂಘಿಸಿ ನಡೆಸಿದ ಸರ್ವೆ ಕೂಡಾ ಅನೂರ್ಜಿತವಾಗಿದ್ದು ಮೊದಲು ಈ ಅರ್ಜಿ ವಿಚಾರಣೆಗೆ ಅರ್ಹವೇ? ಅಲ್ಲವೇ? ಎಂದು ತಿರ್ಮಾನವಾಗಬೇಕು ಎಂದು ಕೋರ್ಟ್ ಗೆ ಮನವಿ ಮಾಡಿದರು. ಇದಕ್ಕೆ ಪ್ರತಿವಾದ ಸಲ್ಲಿಸಿದ ಹಿಂದೂ ಪರ ವಕೀಲರು ಕಾನೂನು ಬದ್ಧವಾಗಿ ನಿರ್ಮಿಸಿದ ಧಾರ್ಮಿಕ ಕ್ಷೇತ್ರಗಳಿಗೆ ಮಾತ್ರ 1991 ಅನ್ವಯವಾಗಲಿದ್ದು ಅತಿಕ್ರಮಣ ಕಟ್ಟಡಗಳಿಗಲ್ಲ, ರಾಮ ಮಂದಿರ ಪ್ರಕರಣವನ್ನು ಇದೇ ಆಧಾರದ ಮೇಲೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ ಎಂದರು. ಇದನ್ನೂ ಓದಿ: ಎಟಿಎಂಗೆ ಹಣ ಹಾಕು ಅಂತ ಕೊಟ್ಟರೆ, ಹಣದೊಂದಿಗೆ ಎಸ್ಕೇಪ್ ಆದ ಭೂಪ

    ವಾದ ಪ್ರತಿವಾದ ಆಲಿಸಿದ ಜಿಲ್ಲಾ ನ್ಯಾಯಾಲಯ ನಾಳೆ ಅರ್ಜಿ ವಿಚಾರಣೆಗೆ ಅರ್ಹವೇ ಎಂಬುದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಲಿದೆ ಎಂದು ಹೇಳಿತು. ಅದರ ಅನ್ವಯ ಮುಂದಿನ ಹಂತದಲ್ಲಿ ಪ್ರಕರಣ ವಿಚಾರಣೆ ನಡೆಸುವುದಾಗಿಯೂ ಕೋರ್ಟ್ ಹೇಳಿತ್ತು.

    ಈ ವಿಚಾರಣೆ ವೇಳೆ ಹಿಂದೂ ಪರ ವಕೀಲರಿಂದ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದ್ದು, ಮೇ 16 ರಿಂದ 19 ವರೆಗೂ ವಜುಖಾನದಲ್ಲಿ ವಜು ಮಾಡಿದವರ ವಿರುದ್ಧ 156 (3) ಸಿಆರ್‌ಸಿಪಿ, ಐಪಿಸಿ 153ಎ (2), 505 (3) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲು ಮನವಿ ಮಾಡಲಾಗಿದೆ.

    ತೀರ್ಪು ಮಹತ್ವ ಪಡೆದುಕೊಂಡ ಅರ್ಜಿ ವಿಚಾರಣೆ ವೇಳೆ ಕೇವಲ 23 ಮಂದಿಗೆ ಮಾತ್ರ ಕೋರ್ಟ್ ಹಾಲ್ ಪ್ರವೇಶ ಮಾಡಲು ಅನುಮತಿ ನೀಡಲಾಗಿತ್ತು. 19 ಮಂದಿ ವಕೀಲರು ಮತ್ತು ನಾಲ್ಕು ಮಂದಿ ಅರ್ಜಿದಾರರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.