Tag: h aanjaneya

  • ಯಾರೋ ಹುಟ್ಟಿಸಿದ ಮಗುವಿಗೆ ನಾ ತಂದೆ ಎನ್ನುವವರು ಬಿಜೆಪಿಯವರು: ಹೆಚ್.ಆಂಜನೇಯ

    ಯಾರೋ ಹುಟ್ಟಿಸಿದ ಮಗುವಿಗೆ ನಾ ತಂದೆ ಎನ್ನುವವರು ಬಿಜೆಪಿಯವರು: ಹೆಚ್.ಆಂಜನೇಯ

    ಚಿತ್ರದುರ್ಗ: ಯಾರೋ ಹುಟ್ಟಿಸಿದ ಮಗುವಿಗೆ ನಾನು ತಂದೆ ಎಂದು ಹೇಳುವವರು ಬಿಜೆಪಿಯವರು. ಅಭಿವೃದ್ಧಿ ಬಗ್ಗೆ ಬಿಜೆಪಿ ನಾಯಕರಿಗೆ ಕಳಕಳಿ ಇಲ್ಲ ಎಂದು ಮಾಜಿ ಸಚಿವ ಹೆಚ್.ಆಂಜನೇಯ ವಾಗ್ದಾಳಿ ನಡೆಸಿದ್ರು.

    ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರೋ ಹುಟ್ಟಿಸಿದ ಮಗುವಿಗೆ ನಾನು ತಂದೆ ಎಂದು ಹೇಳುವವರು ಬಿಜೆಪಿಯವರು. ಅಭಿವೃದ್ಧಿ ಬಗ್ಗೆ ಅವರಿಗೆ ಕಿಂಚಿತ್ತೂ ಕಳಕಳಿ ಇಲ್ಲ. ಭದ್ರಾ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಬಿಜೆಪಿ ಶ್ರಮ ವಹಿಸಿಲ್ಲ. ಮಹದಾಯಿ ಯೋಜನೆ ಜಾರಿಗೊಳಿಸಲು ಬಿಜೆಪಿಗೆ ಬದ್ಧತೆ ಇಲ್ಲ. ಗೋವಾ, ಮಹಾರಾಷ್ಟ್ರದೊಂದಿಗೆ ಮಾತನಾಡಿ ನೀರಿನ ಸಮಸ್ಯೆ ಪರಿಹರಿಸಬೇಕಿತ್ತು. ಭದ್ರಾ ಯೋಜನೆ ತಾಂತ್ರಿಕ ದೋಷದಿಂದ ತಡವಾಗಿದೆ. ಮಾಹಿತಿ ಕೊರತೆಯಿಂದ ಬಿಜೆಪಿ ಇಲ್ಲಸಲ್ಲದ ಆರೋಪ ಸರಿಯಲ್ಲ. ಯೋಜನೆಗೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ರು.

    ಏಪ್ರಿಲ್ 13 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಕೋಟೆನಾಡು ಚಿತ್ರದುರ್ಗಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಾರೆ. ಈ ವೇಳೆ ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಬೃಹತ್ ಸಮಾವೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ಸಮಾವೇಶದಲ್ಲಿ ಸಿಎಂ ಕುಮಾರಸ್ವಾಮಿ, ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಪರಮೇಶ್ವರ್ ಸಚಿವರಾದ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

    ಸಮಾವೇಶಕ್ಕಾಗಿ ವಿನೂತನ ಜರ್ಮನ್ ಟೆಂಟ್ ಹೌಸ್ ವೇದಿಕೆ ರೆಡಿ ಮಾಡಲಾಗುತ್ತಿದೆ. ವೇದಿಕೆ ಮುಂಭಾಗದಲ್ಲಿ 25000 ಆಸನಗಳ ವ್ಯವಸ್ಥೆ ಮಾಡಲಾಗುತ್ತದೆ. ರಾಹುಲ್ ಗಾಂಧಿಗೆ ಕೋಟೆ ನಾಡನ್ನಾಳಿದ ಪಾಳೆಗಾರ ವೀರ ಮದಕರಿನಾಯಕರ ಪ್ರತಿಮೆ ನೀಡಿ ಸನ್ಮಾನ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಅಂದ್ರು.

    ಈ ವೇಳೆ ಮೈತ್ರಿ ಅಭ್ಯರ್ಥಿ ಚಂದ್ರಪ್ಪ, ಶಾಸಕ ರಘುಮೂರ್ತಿ, ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

  • ಫೇಕ್ ಅಕೌಂಟ್ ಪಾಠದ ವಿಡಿಯೋ ಕುರಿತು ರಮ್ಯಾ ಪರ ನಿಂತ ಎಚ್ ಆಂಜನೇಯ

    ಫೇಕ್ ಅಕೌಂಟ್ ಪಾಠದ ವಿಡಿಯೋ ಕುರಿತು ರಮ್ಯಾ ಪರ ನಿಂತ ಎಚ್ ಆಂಜನೇಯ

    ಬೆಂಗಳೂರು: ನಕಲಿ ಫೇಸ್ ಬುಕ್ ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಅವರು ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಪರ ನಿಂತಿದ್ದಾರೆ.

    ಮೋಹಕ ತಾರೆ ರಮ್ಯಾ ಕಾಂಗ್ರೆಸ್‍ನಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಸಂಸದರಾಗಲು ಒಳ್ಳೆಯ ಕೆಲಸ ಮಾಡಿದ್ದಾರೆ. ಇದೆಲ್ಲ ಸೃಷ್ಟಿ, ಆ ವಿಡಿಯೋನೇ ಸುಳ್ಳು ಅಂತ ಆಂಜನೇಯ ಹೇಳಿದ್ದಾರೆ. ಇದನ್ನೂ ಓದಿ: ಫೇಕ್ ಖಾತೆ ಹೊಂದಿದ್ರೆ ತಪ್ಪಲ್ಲ : ರಮ್ಯಾ ಮೇಡಂ ಪಾಠದ ವಿಡಿಯೋ ಫುಲ್ ವೈರಲ್

    ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಅವಹೇಳನಕಾರಿ ಟ್ವೀಟ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರ ವಿರುದ್ಧ ಮಾತಾಡಿ ಸಾಕಾಗಿದೆ. ಬಿಜೆಪಿ ನಡೆಯೇ ಹಾಗೇ. ನನ್ನ ಬಾಯಲ್ಲಿ ಆ ರೀತಿ ಮಾತು ಬರಲ್ಲ. ರಮ್ಯಾ ಬೆಳವಣಿಗೆ ಸಹಿಸದೇ ಈ ಷಡ್ಯಂತ್ರ ರೂಪಿಸಿದ್ದಾರೆ. ಅವರು ನಮ್ಮ ಸಾಮಾಜಿಕ ಜಾಲತಾಣ ಬಲಪಡಿಸಲಿ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಫೇಕ್ ಅಕೌಂಟ್ ಪಾಠದ ವಿಡಿಯೋ ಬಗ್ಗೆ ರಮ್ಯಾ ಮೇಡಂ ಹೀಗಂದ್ರು

    ಏನದು ಫೇಕ್ ಅಕೌಂಟ್ ಪಾಠ?: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಮ್ಯಾ ಕಳೆದ ವಾರ ನಕಲಿ ಖಾತೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪಾಠ ಮಾಡಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರು ಫೇಸ್‍ಬುಕ್ ಫೇಕ್ ಅಕೌಂಟ್ ಬಗ್ಗೆ ಕೇಳಿದ ಪ್ರಶ್ನೆಗೆ ರಮ್ಯಾ, ಒಬ್ಬರಿಗೆ ಮೂರು ನಾಲ್ಕು ಅಕೌಂಟ್ ಗಳಿದ್ದರೆ ತಪ್ಪೇನಿಲ್ಲ. ಆದರೆ ಫೇಕ್ ಅಕೌಂಟ್ ಅಂದ್ರೆ ರೋಬಾಟ್ಸ್ ಅದು ಮಷೀನ್, ಮನುಷ್ಯ ಅಲ್ಲ. ಆದ್ರೆ ಒಬ್ಬರಿಗೆ ಹಲವು ಅಕೌಂಟ್ ಇದ್ರೆ ತಪ್ಪಿಲ್ಲ ಎಂದು ಉತ್ತರಿಸಿದ್ದರು. ಇದನ್ನೂ ಓದಿ: ಮುಗಿಯದ ರಮ್ಯಾ-ಜಗ್ಗೇಶ್ ಟ್ವೀಟ್ ಜಗಳ – ಫೇಕ್ ಪಾಠ ಹಿಡಿದು ಜಗ್ಗಾಡಿದ ನಟ

    ಈ ಪಾಠದ ವಿಡಿಯೋ ವೈರಲ್ ಆಗಿದ್ದೆ ತಡ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಅಭಿಮಾನಿಗಳು ನಕಲಿ ಖಾತೆಗಳಿಗೆ ರಮ್ಯಾ ಕುಮ್ಮಕ್ಕು ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.

    https://www.youtube.com/watch?v=FPbeaJ04p7o

  • ರಾಜ್ಯಕ್ಕೆ ಅಮಿತ್ ಶಾ ಬಂದಿದ್ದು ಯಾಕೆ: ಆಂಜನೇಯ ಹೇಳ್ತಾರೆ ಓದಿ

    ರಾಜ್ಯಕ್ಕೆ ಅಮಿತ್ ಶಾ ಬಂದಿದ್ದು ಯಾಕೆ: ಆಂಜನೇಯ ಹೇಳ್ತಾರೆ ಓದಿ

    ಚಿತ್ರದುರ್ಗ: ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುವ ಅಂಚಿನಲ್ಲಿರುವುದರಿಂದ ಅಮಿತ್ ಶಾರನ್ನು ಕರೆಸಿ ರಾಜ್ಯ ನಾಯಕರು ಇಮೇಜ್ ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಲೇವಡಿ ಮಾಡಿದ್ದಾರೆ.

    ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪರಿವರ್ತನಾ ರ್ಯಾಲಿ ವೇಳೆ ರಾಜ್ಯದ ಮುಖ್ಯ ಮಂತ್ರಿಗಳ ಬಗ್ಗೆ ಅಸಭ್ಯವಾಗಿ ಮಾತನಾಡಿರುವುದು, 6.5 ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಅವರು ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಟ್ಟು ಅವರು ಸಭ್ಯತೆಯಿಂದ ವರ್ತಿಸಬೇಕು ಎಂದ್ರು.

    ರಾಜ್ಯೋತ್ಸವವನ್ನು ನಾವು ಸಂಭ್ರಮದಿಂದ ಆಚರಣೆ ಮಾಡಿದ್ದೇವೆ. ಅದೇ ರೀತಿ ಟಿಪ್ಪು, ಕಿತ್ತೂರು ರಾಣಿ ಚೆನ್ನಮ್ಮ ಹಾಗು ಕನಕದಾಸರು ಸೇರಿದಂತೆ ವಿವಿಧ ದಾರ್ಶನಿಕರ ಜಯಂತಿ ಆಚರಣೆ ಮಾಡುವ ಮೂಲಕ, ಅವರ ಚರಿತ್ರೆಯನ್ನು ಇಂದಿನ ಯುವ ಪೀಳಿಗೆಗೆ ತಲುಪಿಸುವ ಕೆಲಸ ಮಾಡುತ್ತೇವೆ. ಆದ್ರೆ ಬಿಜೆಪಿಯವರಿಗೆ ಟಿಪ್ಪು ಕಂಡ್ರೆ ಯಾಕೆ ಭಯ ಎಂಬುದು ಗೊತ್ತಿಲ್ಲ. ಈ ಹಿಂದೆ ಟಿಪ್ಪು ವೇಷ ಧರಿಸಿ ಹಾಡಿ ಹೊಗಳಿದ್ದ ಬಿಜೆಪಿಯವರು ಚುನಾವಣೆಯ ಸಮಯದಲ್ಲಿ ಒಂದು ಕೋಮಿನ ನಾಯಕರ ಹೋರಾಟಗಾರರ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ ಎಂದ್ರು.