Tag: H.D.Deve Gowda

  • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve Gowda) ಅವರು ಇಂದು (ಗುರುವಾರ) ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ತಂಡದಿಂದ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ತಜ್ಞ ವೈದ್ಯರ ತಂಡ ನಿಗಾವಹಿಸಿದೆ. ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಗಲಾಟೆ ಸೃಷ್ಟಿಸಿದ ಕೇಂದ್ರ ಸರ್ಕಾರದ ಅನುದಾನ ಫೈಟ್

    ಜ್ವರ ಮತ್ತು ಗಂಟಲು ನೋವಿನಿಂದ ಹೆಚ್‌ಡಿಡಿ ಬಳಲುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆ ಜ್ವರ ಹೆಚ್ಚಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಇಂದು ಅಸ್ಪತ್ರೆಯಲ್ಲೇ ಇರಲು ಸೂಚನೆ ನೀಡಿದ್ದಾರೆ. ಗಾಬರಿಯಾಗುವಂತಹ ಪರಿಸ್ಥಿತಿ ಇಲ್ಲ. ದೇವೇಗೌಡರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

    ದೇವೇಗೌಡರಿಗೆ ಚಿಕಿತ್ಸೆ ನೀಡಿದ ಡಾ.ಸತ್ಯನಾರಾಯಣ ಮಾತನಾಡಿ, ದೇವೇಗೌಡರು ಉಸಿರಾಟದ ಸಮಸ್ಯೆಯಿಂದ ಅಡ್ಮಿಟ್ ಆಗಿದ್ದಾರೆ. ರೆಸ್ಪಿರೇಟರಿ ಇನ್ಫೆಕ್ಷನ್ ಆಗಿದೆ. ಎರಡು-ಮೂರು ದಿನದಿಂದ ಇನ್ಫೆಕ್ಷನ್ ಆಗಿದೆ. ಚಿಕಿತ್ಸೆ ನೀಡಲು ಒಂದು ತಂಡವಿದೆ. ಪರಿಸ್ಥಿತಿ ನೋಡಿಕೊಂಡು ಡಿಸ್ಚಾರ್ಜ್ ಮಾಡ್ತೇವೆ. ಜನರಲ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಎರಡು ಮೂರು ದಿನ ಚಿಕಿತ್ಸೆ ನಡೆಯಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೂರು ಕೊಟ್ಟು ಶಿಕ್ಷಕಿ ತಪ್ಪು ಮುಚ್ಚಿ ಹಾಕಲು ಸಾಧ್ಯವಿಲ್ಲ: ಸಿ.ಟಿ.ರವಿ

    ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಮತ್ತಷ್ಟು ಚಿಕಿತ್ಸೆಯ ಅಗತ್ಯತೆ ಇದೆ. ಇನ್ನೂ ಡಿಸ್ಚಾರ್ಜ್ ಬಗ್ಗೆ ತೀರ್ಮಾನ ಮಾಡಿಲ್ಲ. ಡಾ. ಮಂಜುನಾಥ್ ಅವರು ಕೂಡ ಇಲ್ಲೇ ಇದ್ದಾರೆ. ಮನೆಯವರು ಜೊತೆಗಿದ್ದಾರೆ. ಚಿಕಿತ್ಸೆಗಾಗಿ ವಿಶೇಷ ತಂಡ ಮಾಡಿದ್ದೇವೆ. ಆದಷ್ಟು ಬೇಗ ಗುಣಮುಖರಾಗಿ ಮನೆಗೆ ವಾಪಾಸ್ ಆಗಲಿ ಅನ್ನೋದು ಆಶಯವಾಗಿದೆ ಎಂದು ಹೇಳಿದ್ದಾರೆ.

    ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ದೇವೇಗೌಡರು, ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಉತ್ಪ್ರೇಕ್ಷಿತ ವರದಿಗಳು ಸುದ್ದಿ ವಾಹಿನಿಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಎಂದು ನನಗೆ ತಿಳಿದಿದೆ. ನಾನು ವಾಡಿಕೆಯ ತಪಾಸಣೆಗಾಗಿ ಮಾತ್ರ ಆಸ್ಪತ್ರೆಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತೇನೆ. ಯಾವುದೇ ಆತಂಕಕ್ಕೆ ಕಾರಣವಿಲ್ಲ ಎಂದು ತಿಳಿಸಿದ್ದಾರೆ.

  • ರಾಮಮಂದಿರ ಪ್ರಾಣ ಪ್ರತಿಷ್ಠೆ; ಅಯೋಧ್ಯೆಗೆ ಖಾಸಗಿ ವಿಮಾನದಲ್ಲಿ ಹೊರಟ ದೊಡ್ಡಗೌಡ್ರ ಕುಟುಂಬ

    ರಾಮಮಂದಿರ ಪ್ರಾಣ ಪ್ರತಿಷ್ಠೆ; ಅಯೋಧ್ಯೆಗೆ ಖಾಸಗಿ ವಿಮಾನದಲ್ಲಿ ಹೊರಟ ದೊಡ್ಡಗೌಡ್ರ ಕುಟುಂಬ

    ಬೆಂಗಳೂರು: ಸೋಮವಾರ (ಜ.22) ರಂದು ರಾಮಮಂದಿರದಲ್ಲಿ (Ram Mandir) ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ (Pran Pratishtha ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ (H.D.Deve Gowda) ಅವರು ಕುಟುಂಬ ಸಮೇತರಾಗಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.

    ಇಂದು (ಭಾನುವಾರ) ಹೆಚ್‌ಎಎಲ್‌ನಿಂದ ಪ್ರೈವೆಟ್‌ ಜೆಟ್‌ನಲ್ಲಿ ಅಯೋಧ್ಯೆಗೆ ಹೊರಟಿದ್ದಾರೆ. ಹೆಚ್‌.ಡಿ.ದೇವೇಗೌಡರ ಜೊತೆ ಪತ್ನಿ ಚೆನ್ನಮ್ಮ, ಪುತ್ರ ಹಾಗೂ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy), ಮೊಮ್ಮಗ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕೂಡ ಹೊರಟಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕೆ ಹೋಗಲ್ಲ.. ನಾವು ಅಣ್ಣಮ್ಮ, ಮಾರಮ್ಮ, ಭೂತ ಪೂಜೆ ಮಾಡೋರು.. ಅಲ್ಲಿಗೆ ಹೋಗ್ತೀವಿ: ಬಿ.ಕೆ.ಹರಿಪ್ರಸಾದ್

    ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಹೆಚ್‌.ಡಿ.ದೇವೇಗೌಡ, ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿತ್ತು. ಅದರಂತೆ ಎಲ್ಲರೂ ಅಯೋಧ್ಯೆ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.

    ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ದೇಶದೆಲ್ಲೆಡೆ ರಾಮಭಕ್ತರಲ್ಲಿ ಸಂಭ್ರಮ-ಸಡಗರ ಮನೆ ಮಾಡಿದೆ. 500 ವರ್ಷಗಳ ನಂತರ ಶ್ರೀರಾಮ ಮತ್ತೆ ಪಟ್ಟಕ್ಕೇರಲು ಸಿದ್ಧನಾಗಿದ್ದಾನೆ. ಸೋಮವಾರ ಪ್ರಾಣ ಪ್ರತಿಷ್ಠೆಗಾಗಿ ಅಯೋಧ್ಯೆ ಕಂಗೊಳಿಸುತ್ತಿದೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗಾಗಿ ಅರ್ಧದಿನ ರಜೆ ಘೋಷಿಸಿದ್ದ AIIMS – ಒಂದು ದಿನದ ನಂತ್ರ ಆದೇಶ ವಾಪಸ್‌!

  • ನನಗೆ 92 ವಯಸ್ಸಾಯ್ತು.. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ: ಹೆಚ್‌ಡಿಡಿ

    ನನಗೆ 92 ವಯಸ್ಸಾಯ್ತು.. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ: ಹೆಚ್‌ಡಿಡಿ

    ಬೆಂಗಳೂರು: ನಾನು ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡೊಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ (H.D.Devegowda) ಸ್ಪಷ್ಟಪಡಿಸಿದ್ದಾರೆ.

    ಲೋಕಸಭೆ (Lok Sabha) ಚುನಾವಣೆಗೆ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನನಗೆ 92 ವರ್ಷ ವಯಸ್ಸು ಆಯ್ತು. ಇನ್ನು ಎರಡೂವರೆ ವರ್ಷ ರಾಜ್ಯಸಭೆ ಅವಧಿ ಇದೆ. ನನಗೆ ಅಷ್ಟೆ ಸಾಕು. ಬಿಜೆಪಿ ಜೊತೆ ಮೈತ್ರಿ ಆಗಿದೆ. ಚುನಾವಣೆ ಪ್ರಚಾರಕ್ಕೆ ಯಾರೇ ಕರೆದರೂ ಹೋಗಿ ಅಲ್ಲಿಗೆ ಪ್ರಚಾರ ಮಾಡ್ತೀನಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಯೋಧ್ಯೆ ಭೇಟಿಯಲ್ಲಿ ತಪ್ಪೇನಿದೆ?: ಸಿಎಂ ಹೇಳಿಕೆ ಸಮರ್ಥಿಸಿದ ಸಚಿವ ಕೆ.ಎನ್ ರಾಜಣ್ಣ

    ರಾಮಮಂದಿರ (Ram Mandir) ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿಯವರು ಮಾಡ್ತಿರೋ ವ್ರತಕ್ಕೆ ಮಾಜಿ ಪ್ರಧಾನಿ ದೇವೇಗೌಡ ಶ್ಲಾಘಿಸಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಮೋದಿಯವರು ಪುಣ್ಯ ಮಾಡಿಕೊಂಡು ಬಂದಿದ್ದಾರೆ. ಶಿಸ್ತಿನಿಂದ ರಾಮಪ್ರತಿಷ್ಠಾಪನೆ ಕಾರ್ಯಕ್ರಮ ಮಾಡ್ತಿದ್ದಾರೆ. 11 ದಿನ ನಿಷ್ಠೆಯಿಂದ, ಬದ್ಧತೆಯಿಂದ, ಶ್ರದ್ಧೆಯಿಂದ ಅವರು ವೃತ ಮಾಡ್ತಿದ್ದಾರೆ. ನಾನು ಕೂಡಾ ಇಂತಹ ವ್ರತ ಮಾಡಿರಲಿಲ್ಲ. ಮೋದಿಗೆ ಒಂದು ದೈವ ಶಕ್ತಿ ಇದೆ. ಸೀತಾ ಅಪಹರಣವಾದ ಸ್ಥಳದಿಂದ ವ್ರತ ಶುರು ಮಾಡಿದ್ದು, ಇದು ಅವರ ಪುಣ್ಯದಿಂದ ಆಗಿದೆ ಎಂದು ರಾಮಮಂದಿರ ಕಾರ್ಯಕ್ರಮಕ್ಕೆ ಮೋದಿಯವರ ಭಕ್ತಿಯನ್ನು ಹಾಡಿ ಹೊಗಳಿದ್ದಾರೆ. ರಾಮಮಂದಿರ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ನಾನು 99% ಹೋಗುತ್ತೇನೆ. ಶ್ರೀಮತಿಯವರನ್ನು ಕರೆದುಕೊಂಡು ಹೋಗುತ್ತೇನೆ ಎಂದಿದ್ದಾರೆ.

    ಹಾಸನದಿಂದ ಪ್ರಜ್ವಲ್ ರೇವಣ್ಣರವರೇ ಸ್ಪರ್ಧೆ ಮಾಡುತ್ತಾರೆ ಅಂತಾ ಮಾಜಿ ಪ್ರಧಾನಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಹಾಸನದಲ್ಲಿ ಪ್ರಜ್ವಲ್‌ಗೆ ವಿರೋಧ ಇದೆ. ಹೀಗಾಗಿ ಪ್ರಜ್ವಲ್ ಸ್ಪರ್ಧೆ ಮಾಡ್ತಾರಾ ಅಥವಾ ಡಾ. ಮಂಜುನಾಥ್ ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ಪುರಸಭೆ ಸ್ಥಾನ ಸೋತಿದ್ದಕ್ಕೆ ಹೀಗೆ ಮಾತಾಡೋದು ಸರಿಯಲ್ಲ.ಪ್ರಜ್ವಲ್‌ಗೆ ಮೋದಿ ಅವರು ಆಶೀರ್ವಾದ ಮಾಡ್ತಾರೆ. ಅವರು ತಳ್ಳಿ ಹಾಕೊಲ್ಲ. ಕುಮಾರಸ್ವಾಮಿ ಕೂಡಾ ಆಶೀರ್ವಾದ ಮಾಡ್ತಾರೆ. ನಾನು ಕೂಡಾ ಆಶೀರ್ವಾದ ಮಾಡಿದ್ದೀನಿ ಎನ್ನುವ ಮೂಲಕ ಹಾನಸಕ್ಕೆ ಪ್ರಜ್ವಲ್ ಸ್ಪರ್ಧೆ ಫಿಕ್ಸ್ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಜೊತೆಗೆ ಮಂಪರು ಪರೀಕ್ಷೆಗೆ ಒಳಪಡಿಸುವುದಾದ್ರೆ ನಾನು ಸಿದ್ಧ: ಬಿ.ಕೆ ಹರಿಪ್ರಸಾದ್

    ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಆ ಬಗ್ಗೆ ಚರ್ಚೆ ಆಗಿಲ್ಲ. ಆದರೆ ಮೋದಿ ಅವರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಒಂದು ಬಾರಿ ಸಂಸತ್ ಸದಸ್ಯ ಆದವರನ್ನು ಮಂತ್ರಿ ಮೋದಿ ಮಾಡಿದ್ದಾರೆ. ಮೋದಿ ಅವರ ಆ್ಯಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗೊಲ್ಲ. ಹೀಗಾಗಿ ಅವರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

  • ನನ್ನ ಉಸಿರು ಇರೋವರೆಗೂ ಕಾವೇರಿಗಾಗಿ ಹೋರಾಟ ಮಾಡ್ತೀನಿ: ಹೆಚ್.ಡಿ.ದೇವೇಗೌಡ

    ನನ್ನ ಉಸಿರು ಇರೋವರೆಗೂ ಕಾವೇರಿಗಾಗಿ ಹೋರಾಟ ಮಾಡ್ತೀನಿ: ಹೆಚ್.ಡಿ.ದೇವೇಗೌಡ

    ಬೆಂಗಳೂರು: ನನ್ನ ಉಸಿರು ಇರೋ ವರೆಗೂ ಕಾವೇರಿ (Cauvery Dispute) ಪರವಾಗಿ ನಾನು ಹೋರಾಟ ಮಾಡ್ತೀನಿ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ (H.D.Deve Gowda) ತಿಳಿಸಿದರು.

    ಜೆಪಿ‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಕಾವೇರಿ ನೀರಾವರಿ ಬೋರ್ಡ್‌ನ ತೀರ್ಪು ರಾಜ್ಯಕ್ಕೆ ಮರಣ ಶಾಸನ. ನಿನ್ನೆ ಕೇಂದ್ರ ಜಲಶಕ್ತಿ ಸಚಿವಾಲಯದ ಜಲ‌ ಸಂಪನ್ಮೂಲ ಸ್ಥಾಯಿ ಸಮಿತಿ ಸಭೆ ಇತ್ತು. ಆ ಸಭೆಯಲ್ಲಿ ಈ‌ ಎಲ್ಲಾ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕೈ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತ, ಹೈಕಮಾಂಡ್ ಮೇಲಿನ ಭಯವೇ ಜಾಸ್ತಿ: ಅಶೋಕ್‌ ವ್ಯಂಗ್ಯ

    ಕಾವೇರಿ ಜಲ ವಿವಾದ ಮಂಡಳಿ ಏಕಪಕ್ಷೀಯವಾಗಿ 1991 ರಲ್ಲಿ ಮಧ್ಯಂತರ ಆದೇಶ ನೀಡಿ ಕರ್ನಾಟಕ ರಾಜ್ಯ ತನ್ನ ನೀರಾವರಿ ಅಚ್ಚುಕಟ್ಟನ್ನು 11.20 ಲಕ್ಷ ಹೆಕ್ಟೇರ್‌ಗೆ ಸೀಮಿತಗೊಳಿಸುವಂತೆ ಮತ್ತು ತಮಿಳುನಾಡಿನ 205 TMC ನೀರನ್ನು ಬಿಡುಗಡೆ ‌ಮಾಡುವಂತೆ ಆದೇಶಿಸಿರುವುದರಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಕಾವೇರಿ ಕಣಿವೆಯಲ್ಲಿ KRS, ಹಾರಂಗಿ, ಕಬಿನಿ, ಹೇಮಾವತಿ ಜಲಾಶಯಗಳನ್ನು ತಮಿಳುನಾಡಿಗೆ ಪ್ರತಿ ವರ್ಷ ಜೂನ್ ತಿಂಗಳಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 177.25 TMC ನೀರು ಬಿಡುವ ಆದೇಶದಿಂದ ಕ್ಲಿಷ್ಟ ಮತ್ತು ಬರಗಾಲದಲ್ಲಿ ಕರ್ನಾಟಕ ರಾಜ್ಯವನ್ನು ಸಂಕಷ್ಟಕ್ಕೆ ಸಿಲುಕಿದೆ. ಈ‌ ಬಗ್ಗೆ ಸಮಿತಿ ಗಮನಕ್ಕೆ ತರಲಾಗಿದೆ. ಮೇಕೆದಾಟು ಯೋಜನೆಗೆ ಕೂಡಲೇ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ. ಮೇಕೆದಾಟು ಕುಡಿಯುವ ನೀರಿನ‌ ಯೋಜನೆ. ಹೀಗಾಗಿ ಕೂಡಲೇ ಮೇಕೆದಾಟು ಯೋಜನೆಗೆ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ ಎಂದರು.

    ತಮಿಳುನಾಡಿನವರು ಪ್ರತಿ ವರ್ಷ ನೀರಾವರಿ ಬೋರ್ಡ್ ಮುಂದೆ ನೀರು ಬಿಡಿ ಅಂತಾ ಅರ್ಜಿ ಹಾಕ್ತಾರೆ. ನಮ್ಮ ಬಳಿ ನೀರು ಇಲ್ಲದೆ ಹೋದ್ರೂ ನೀರು ಬಿಡಿ ಅಂತಾರೆ. ನಮ್ಮ ಅಧಿಕಾರಿಗಳು ಏನೇ ವಾದ ಮಾಡಿದ್ರೂ ಪ್ರಯೋಜನ ಆಗಿಲ್ಲ. ನೀರಾವರಿ ಬೋರ್ಡ್ ಅವರು ಯಾವತ್ತು ನಮ್ಮ ರಾಜ್ಯಕ್ಕೆ ಬಂದು ನೀರು ಎಷ್ಟು ಇದೆ ಅಂತಾ ನೋಡಿಲ್ಲ. ನೀರು ಇಲ್ಲದೆ ಇದ್ದರೂ ನೀರು ಬಿಡಿ ಅನ್ನೋದು ಕರ್ನಾಟಕಕ್ಕೆ ಮರಣ ಶಾಸನ. ತಮಿಳುನಾಡಿನವರಿಗೆ ಶಕ್ತಿ ಇದೆ. ಹೀಗಾಗಿ ನೀರು ತೆಗೆದುಕೊಂಡು ಹೋಗ್ತಿದ್ದಾರೆ. ಕಾವೇರಿ ನೀರಾವರಿ ಬೋರ್ಡ್‌ನಿಂದ ನಮಗೆ ಅನ್ಯಾಯ ಆಗಿದೆ. ನಾನು ಈ‌ ಬಗ್ಗೆ ಮೋದಿ ಅವರ ಗಮನಕ್ಕೆ ತಂದಿದ್ದೇನೆ. ನಾವೆಲ್ಲರೂ ಈ‌ ಬಗ್ಗೆ ಹೋರಾಟ ಮಾಡ್ತೀವಿ. ಮೋದಿ ಅವರು ಕೂಡಲೇ ಎಲ್ಲಾ ಮಾಡಲು ಆಗೊಲ್ಲ. ಕಾವೇರಿ ನೀರಾವರಿ ಬೋರ್ಡ್‌ನಿಂದ ನಮಗೆ ಅನ್ಯಾಯ ಆಗಿದೆ. ಮಳೆ ಇಲ್ಲದೆ ಹೋದ್ರೂ ನೀರು ಬಿಡಿ ಅಂತ ಅದೇಶ ಮಾಡೋದು ಸರಿಯಲ್ಲ ಎಂದು ಕಾವೇರಿ ನೀರಾವರಿ ಬೋರ್ಡ್ ವಿರುದ್ಧ ದೇವೇಗೌಡ ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಹಾವೇರಿ ಗ್ಯಾಂಗ್ ರೇಪ್ ಪ್ರಕರಣ ತನಿಖೆ ಬಳಿಕ ಕಾನೂನು ಕ್ರಮ: ಪರಮೇಶ್ವರ್

    ತಮಿಳುನಾಡಿಗೆ ದೈತ್ಯ ರಾಜಕೀಯ ಶಕ್ತಿ ಇದೆ. ಅವರಿಗೆ ಎಷ್ಟು ನೀರು ಕೊಟ್ಟರೂ ಸಾಲದು. ತಮಿಳುನಾಡಿನಲ್ಲಿ ಎಲ್ಲಾ ಲಿಫ್ಟ್ ಇರಿಗೇನ್ ಮಾಡ್ತಿದ್ದಾರೆ. ಅವರಿಗೆ ಮಳೆ ಬಂದರೂ ನೀರು ಬೇಕು ಅಂತಾ ಕೇಳ್ತಾರೆ. ತಮಿಳುನಾಡಿನ ನೀರಾವರಿ ಬಗ್ಗೆ ಸ್ವಾಮಿನಾಥನ್ ಅವರು ವರದಿ ಕೊಟ್ಟಿದ್ದಾರೆ. ಅವರು ವಾರ್ಷಿಕ 3 ಬೆಳೆ ಅರಾಮವಾಗಿ ಬೆಳೆಯುತ್ತಾರೆ. ನಮಗೆ ಒಂದು ಬೆಳೆ ಬೆಳೆಯೋಕೆ ಆಗ್ತಿಲ್ಲ. ಇದು ಒಂದು ದಿನದ ಕೆಲಸ ಅಲ್ಲ. ಮಂಡ್ಯದಲ್ಲಿ ಹೋರಾಟ ಮಾಡ್ತಾರೆ. ಏನು ಆಗ್ತಿಲ್ಲ. ಇದೆಲ್ಲವನ್ನು ಸಮಿತಿ ಗಮನಕ್ಕೆ ತಂದಿದ್ದೇವೆ ಎಂದರು.

    ಕಾವೇರಿ ಸಮಸ್ಯೆ ಪರಿಹಾರ ಇದೆ. ನಮಗೆ ಆಗಿರೋ ಅನ್ಯಾಯ ಪ್ರಧಾನಿ ಮೋದಿ ಅವರಿಗೆ ಮುಟ್ಟುವಂತೆ ನಾವು ಒಟ್ಟಾಗಿ ಹೋರಾಬೇಕು. ರಾಜಕೀಯ ಪಕ್ಷಗಳು ಒಟ್ಟಾಗಿ ನಾವು ಹೋರಾಟ ಮಾಡಬೇಕು. ‌ನಾನು ಇನ್ನೂ ಎರಡೂವರೆ ವರ್ಷ ರಾಜ್ಯಸಭೆಯಲ್ಲಿ ಇರುತ್ತೇನೆ. ನಾನು ಸಾಯೋವರೆಗೂ ಕಾವೇರಿ ಬಗ್ಗೆ ಹೋರಾಟ ಮಾಡ್ತೀನಿ. ನ್ಯಾಯ ಸಿಗೋವರೆಗೂ ನಾನು ಸುಮ್ಮನೆ ಕೂರೊಲ್ಲ. ನನ್ನ ಕೊನೆಯುಸಿರು ಇರೋವರೆಗೂ ಹೋರಾಟ ಮಾಡ್ತೀನಿ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಅತಿಹೆಚ್ಚು ದೇಣಿಗೆ ಕೊಟ್ಟಿದ್ದು ಮುಸ್ಲಿಮರು!

  • ಹೆಚ್‍ಡಿಕೆ ಸ್ವಾಮಿಯೇ ಅಯ್ಯಪ್ಪ ಅಂತಿಲ್ಲ, ಅಮಿತ್ ಅಯ್ಯಪ್ಪ ಅಂತಿದ್ದಾರೆ: ಸಿಎಂ ಇಬ್ರಾಹಿಂ ವ್ಯಂಗ್ಯ

    ಹೆಚ್‍ಡಿಕೆ ಸ್ವಾಮಿಯೇ ಅಯ್ಯಪ್ಪ ಅಂತಿಲ್ಲ, ಅಮಿತ್ ಅಯ್ಯಪ್ಪ ಅಂತಿದ್ದಾರೆ: ಸಿಎಂ ಇಬ್ರಾಹಿಂ ವ್ಯಂಗ್ಯ

    ಬೆಂಗಳೂರು: ಕುಮಾರಸ್ವಾಮಿಯವರು (H.D Kumaraswamy) ಸ್ವಾಮೀಯೇ ಅಯ್ಯಪ್ಪ ಎನ್ನುತ್ತಿಲ್ಲ. ಬದಲಿಗೆ ಸ್ವಾಮಿಯೇ ಅಮಿತ್ ಅಯ್ಯಪ್ಪ ಎಂದು ಮಾಲೆ ಹಾಕಿದ್ದಾರೆ ಎಂದು ಜೆಡಿಎಸ್‍ನಿಂದ (JDS) ಅಮಾನತುಗೊಂಡ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿ (C.M Ibrahim) ವ್ಯಂಗ್ಯವಾಡಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದತ್ತಮಾಲೆ ಹಾಕುತ್ತೇನೆ ಎಂಬ ಮಾಜಿ ಸಿಎಂ ಹೆಚ್‍ಡಿಕೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮೊದಲು ಆತ್ಮ ಶುದ್ಧವಾಗಿ ಇಟ್ಟುಕೊಳ್ಳಿ. ನಿಮಗೆ ಮತ ಕೊಟ್ಟ ಚನ್ನಪಟ್ಟಣದ ಜನರಿಗೆ ನೀವು ಧನ್ಯವಾದವನ್ನೂ ಹೇಳಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ತೆಲಂಗಾಣ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದ ಜನರ ಹಣ ಲೂಟಿ – ಕೇಂದ್ರ ಸಚಿವ ಕಿಶನ್ ರೆಡ್ಡಿ ಕಿಡಿ

    ದತ್ತಮಾಲೆ ಹಾಕಲು ಸಿಟಿ ರವಿ ಖಾಲಿ ಇದ್ದಾರೆ ಇಬ್ಬರು ಸೇರಿ ಹಾಕಿಕೊಳ್ಳಲಿ. ಬೇಕಾದರೆ ದೇವೇಗೌಡರನ್ನು ಕರೆದುಕೊಂಡು ಹೋಗಿ ದತ್ತಾತ್ರೇಯ ಪೂಜೆ ಮಾಡಿ. ನೀವು ಮಾಲೆ ಹಾಕುತ್ತಿರುವುದು ಅಮಿತ್ ಶಾ ಖುಷಿಗೋಸ್ಕರ. ಅವರಿಗೆ ನಾನು ಹಿಂದೂ ಎಂದು ತೋರಿಸಲು ಹೋಗುತ್ತಿದ್ದೀರಿ. ಇದು ತಮಾಷೆಯ ವಿಚಾರವಾಗಿ ಕಾಣುತ್ತಿದೆ. ಕರ್ನಾಟಕದ ರಾಜಕೀಯ ಈ ಹಂತಕ್ಕೆ ಬಂದಿರುವುದು ನೋವಿನ ಸಂಗತಿಯಾಗಿದೆ ಎಂದಿದ್ದಾರೆ.

    ಇವರಿಗೆ ಧೈರ್ಯ ಇದ್ದರೆ 19 ಜನರ ಕೈಯಲ್ಲಿ ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆ ಮಾಡಲಿ. ಕುಮಾರಸ್ವಾಮಿ ಒಬ್ಬರೇ ರಾಜೀನಾಮೆ ಕೊಟ್ಟು ಮತ್ತೆ ಗೆದ್ದು ಬರಲಿ. ಆಗ ಬೇಕಾದರೆ ಬಿಜೆಪಿ ಹಾಗೂ ದತ್ತಪೀಠಕ್ಕೆ ಹೋಗಲಿ. ಚುನಾವಣೆ ವೇಳೆ ನನಗೆ ಒಂದು ಕಪ್ ಟೀ ಕೊಡಲಿಲ್ಲ. ನನ್ನ ಕಾರಿಗೆ ಪೆಟ್ರೋಲ್ ಹಾಕಿಸಿಲ್ಲ. ನನ್ನ ಸಹಾಯ ಪಡೆದು ಚುನಾವಣೆ ಗೆದ್ದಿದ್ದಿರಿ, ಈಗ ನನ್ನನ್ನ ಅಮಾನತು ಮಾಡಿದ್ದೀರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಜಾಮೀನು ಪಡೆದ ನಾಲ್ಕೇ ದಿನದಲ್ಲಿ ಮುರುಘಾ ಶ್ರೀ ಮತ್ತೆ ಅರೆಸ್ಟ್

  • ಇಸ್ರೇಲ್‍ನಲ್ಲಿ ಸಿಲುಕಿರುವ ಹಾಸನದ ಜನರ ಕರೆತರಲು ಹೆಚ್‍ಡಿಡಿ ಪ್ರಯತ್ನ

    ಇಸ್ರೇಲ್‍ನಲ್ಲಿ ಸಿಲುಕಿರುವ ಹಾಸನದ ಜನರ ಕರೆತರಲು ಹೆಚ್‍ಡಿಡಿ ಪ್ರಯತ್ನ

    ಹಾಸನ: ಯುದ್ಧ ಪೀಡಿತ ಇಸ್ರೇಲ್‍ನಲ್ಲಿರುವ (Israel) ಜಿಲ್ಲೆಯ (Hassan) 25ಕ್ಕೂ ಹೆಚ್ಚು ಜನರನ್ನು ಕರೆತರಲು ಕೇಂದ್ರ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (H.D. Deve Gowda) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‍ನಲ್ಲಿ ಸಿಲುಕಿದ ಜಿಲ್ಲೆಯ ಜನರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಇದೆ. ಅವರನ್ನು ಸುರಕ್ಷಿತವಾಗಿ ಕರೆತರಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಈ ಸಲುವಾಗಿ ಕೇಂದ್ರದೊಂದಿಗೆ ಚರ್ಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿದ್ಯುತ್‌, ಆಹಾರ, ನೀರು ಪೂರೈಕೆ ಇಲ್ಲ; ಗಾಜಾ ಸಂಪೂರ್ಣ ಸೀಜ್‌ಗೆ ಇಸ್ರೇಲ್ ಆದೇಶ

    ಈ ಬಗ್ಗೆ ತಕ್ಷಣವೇ ವಿದೇಶಾಂಗ ಸಚಿವರ ಜೊತೆ ಮಾತನಾಡುತ್ತೇನೆ. ಅಲ್ಲಿ ಭಾರತದವರು ಹೆಚ್ಚು ಮಂದಿ ಇದ್ದಾರೆ. ಜಿಲ್ಲೆಯ ಸಕಲೇಶಪುರ, ಬೇಲೂರು, ಚನ್ನರಾಯಪಟ್ಟಣದ ಮಂದಿ ಅಲ್ಲಿ ಸಿಲುಕಿದ್ದಾರೆ. ಅವರ ಹೆಸರುಗಳನ್ನು ತಿಳಿದುಕೊಂಡ ತಕ್ಷಣವೇ ಯಾವ ಪ್ರದೇಶದಲ್ಲಿ ಇದ್ದಾರೆ ಎಂದು ಮಾಹಿತಿ ಪಡೆದುಕೊಂಡು ಚರ್ಚಿಸುತ್ತೇನೆ. ಈ ವಿಚಾರವಾಗಿ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ ಎಂದಿದ್ದಾರೆ.

    ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇಲ್ಲಿಯವರೆಗೂ 1,300 ಜನ ಮೃತಪಟ್ಟಿದ್ದಾರೆ. ಯುದ್ಧ ಇನ್ನೂ ಮುಂದುವರೆದಿದ್ದು ಎರಡೂ ಕಡೆಗಳಲ್ಲೂ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ಯಾಲೆಸ್ಟೈನ್‌ ಬೆಂಬಲಿಸಿ ನಿರ್ಣಯ ಕೈಗೊಂಡ ಕಾಂಗ್ರೆಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಸಿದ್ದರಾಮಯ್ಯ ಮುಖಾಮುಖಿ ಭೇಟಿ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಸಿದ್ದರಾಮಯ್ಯ ಮುಖಾಮುಖಿ ಭೇಟಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಭಾನುವಾರ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು.

    CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.

    ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಬ್ಬ ರೈತನ ಮಗನಾಗಿ ನನಗೆ ನೋವಿದೆ: ಹೆಚ್‌ಡಿಡಿ

    ಒಬ್ಬ ರೈತನ ಮಗನಾಗಿ ನನಗೆ ನೋವಿದೆ: ಹೆಚ್‌ಡಿಡಿ

    ಹಾಸನ: ಒಬ್ಬ ರೈತನ ಮಗನಾಗಿ ನನಗೆ ನೋವಿದೆ ಎಂದು ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve Gowda) ಪ್ರತಿಕ್ರಿಯೆ ನೀಡಿದರು.

    ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಾಲ್ಕು ದಿನಗಳ ಹಿಂದೆ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಸರ್ಕಾರ ಇನ್ನೂ ಒಂದು, ಎರಡು ಗಂಟೆಗಳಲ್ಲಿ ತನ್ನ ನಿಲುವನ್ನು ಹೇಳಬಹುದು. ನಾನು ಬರೆದಿರುವ ಪತ್ರದಲ್ಲಿ ನಮ್ಮ ಸ್ಟ್ಯಾಂಡಿಂಗ್ ಕ್ರಾಪ್‌ಗೆ 70 ಟಿಎಂಸಿ ಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದೇನೆ. ಆದರೆ ತಮಿಳರು ಕೊಡುವ ಅಂಕಿ ಅಂಶಗಳೇ ಬೇರೆ. ಸ್ಥಳ ಪರಿಶೀಲನೆ ಮಾಡದೆ ಕೆರೆ ತುಂಬಿಸಿಕೊಂಡಿದ್ದೇವೆ. ಅದನ್ನು ಬಂದು ನೋಡಿದ್ರೆ ಎಲ್ಲಾ ಮುಳುಗಿ ಹೋಗುತ್ತೆ ಅನ್ನೋದು ನಮ್ಮ ರಾಜ್ಯದ ಅಧಿಕಾರಿಗಳ ಭಾವನೆ. ನಾನು ನೀರಾವರಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಒಬ್ಬ ಸಣ್ಣ ಇಂಜಿನಿಯರಿಂಗ್ ಆಗಿ, ದೇಶದ ಪ್ರಧಾನ ಮಂತ್ರಿಯಾಗಿಯೂ ಕೆಲಸ ಮಾಡಿದ್ದೇನೆ. ಒಬ್ಬ ರೈತನ ಮಗನಾಗಿ ನನಗೆ ನೋವಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಕಾವೇರಿ ಬಗ್ಗೆ ಕಾಳಜಿಯಿಲ್ಲ: ಜಿ.ಟಿ.ದೇವೇಗೌಡ

    ಕಾವೇರಿ ವಿಷಯದಲ್ಲಿ ಜೆಡಿಎಸ್-ಬಿಜೆಪಿ ರಾಜಕೀಯ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಆರೋಪ ಕುರಿತು ಮಾತನಾಡಿ, ನಾನು ಪತ್ರ ಬರೆದಿದ್ದನ್ನು ಸಿದ್ದರಾಮಯ್ಯ ಅವರೇ ವೆಲ್‌ಕಮ್ ಮಾಡಿದ್ದಾರೆ. ಸರ್ಕಾರ ಏನು ತೀರ್ಮಾನ ಮಾಡುತ್ತೋ ಮಾಡಲಿ. ಹಿಂದೆ ಸಂಕಷ್ಟ ಬಂದಾಗ ಸಿದ್ದರಾಮಯ್ಯ, ವಕೀಲರು ನಮ್ಮ ಮನೆಗೆ ಬಂದಿದ್ದರು. ನಾನು ಗಾಂಧಿ ಪ್ರತಿಮೆ ಬಳಿ ಧರಣಿ ಕುಳಿತೆ. ಅನಂತ್‌ಕುಮಾರ್ ದೆಹಲಿಯಿಂದ ಬಂದರು. ಇದೇ ಪ್ರಧಾನಮಂತ್ರಿ ಇದ್ದರು. ದೇವೇಗೌಡರು ಏನು ಹೇಳಿದ್ದಾರೆ, ಅದರಂತೆ ಮಾಡುತ್ತೇನೆ ಎಂದಿದ್ದರು. ಈಗ ಆ ಶಕ್ತಿ ನನ್ನಲ್ಲಿ ಇಲ್ಲ. ನೀವು ಕರುಣೆ ತೋರಿಸಬೇಕು. ಈಗ 93 ವರ್ಷ ನನಗೆ ಎಂದು ಹೇಳಿದರು.

    1962 ರಲ್ಲಿ ಅಸೆಂಬ್ಲಿಗೆ ಎಂಟ್ರಿಯಾದೆ. ನನ್ನ ಹೋರಾಟ ಅಲ್ಲಿಂದ ಪ್ರಾರಂಭವಾಯ್ತು. 1964 ರಲ್ಲಿ ನಿಜಲಿಂಗಪ್ಪ ಅವರು ಇದ್ದಾಗ ಅಸೆಂಬ್ಲಿಯಲ್ಲಿ ನಿರ್ಣಯ ಆಗಿದೆ. ಕಮಿಟಿ ವರದಿ ಕೊಟ್ಟಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕೆಲವರು ಶುಕ್ರವಾರ ಬಂದ್ ಮಾಡ್ತರಂತೆ. ಕೆಲವರು ಇವತ್ತು ಮಾಡಿದ್ದಾರೆ. ಕೆಲವರು ವಿಧಾನಸೌಧ ಮುತ್ತಿಗೆ ಹಾಕ್ತಾರಂತೆ. ಇದು ಕರ್ನಾಟಕ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವ ಮೋದಿಗೆ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ವಾ?: ಪ್ರಿಯಾಂಕ್ ಖರ್ಗೆ

    ಕುಮಾರಸ್ವಾಮಿ ಅವರು ಡ್ಯಾಂನ ಸ್ಥಳ ಪರಿಶೀಲನೆ ಮಾಡಿ, ಅಲ್ಲಿ ನೀರು ಎಷ್ಟಿದೆ ಎಂದು ವಿವರ ತೆಗೆದುಕೊಂಡು ಬಂದ ಮೇಲೆ ನಾನು ಪತ್ರ ಬರೆದಿದ್ದೇನೆ. ನಿಷ್ಪಕ್ಷಪಾತವಾಗಿ ಎರಡು ರಾಜ್ಯಗಳ ಸ್ಥಿತಿಯನ್ನು ಪರಿಶೀಲನೆ ಮಾಡಲಿ. ಒಂದು ಟೀಂ ಕಳುಹಿಸಲಿ, ವಾಸ್ತವ ಸ್ಥಿತಿ ತಿಳಿಯಲಿ. ನಾನು ಬರೆದ ಪತ್ರದ ಸಾರಾಂಶ ಇದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಎಲ್ಲರೂ ಅದನ್ನು ಸ್ವಾಗತಿಸಿದ್ದಾರೆ. ಇವತ್ತು ಸಿಡಬ್ಯುಆರ್‌ಸಿ ಸಭೆ ಇತ್ತು. ಅವರು ಕುಳಿತು ನಿರ್ಣಯ ಮಾಡಿದ್ದಾರೆ. ಸಿಡಬ್ಯುಆರ್‌ಸಿ ಆದೇಶದಂತೆ 63 ಸಾವಿರ ಕ್ಯೂಸೆಕ್ ನೀರು ಬಿಡಬೇಕು. ಆರು ಟಿಎಂಸಿ ನೀರು ಬಿಡಬೇಕು. ನಮ್ಮ ಸರ್ಕಾರ ಕೊಟ್ಟಿರುವ ಲೆಕ್ಕ 56 ಟಿಎಂಸಿ. ನಮ್ಮ ಸ್ಟ್ಯಾಂಡ್ 70 ಟಿಎಂಸಿ ಬೇಕು, ಅದನ್ನು ಒದಗಿಸಲು ಇವರ ಕೈಯಲ್ಲಿ ಆಗಲ್ಲ. ಏನು ಮಾಡುತ್ತಾರೋ ಗೊತ್ತಿಲ್ಲ ಎಂದರು.

    ಸರ್ಕಾರದ ನಿಲುವನ್ನು ಇನ್ನೂ ಹೇಳಿಲ್ಲ. ಈಗ ವೈಯುಕ್ತಿಕ ಅಭಿಪ್ರಾಯ ಕೊಡುವುದು ಸೂಕ್ತವಲ್ಲ. ಈ ವಿಷಯದಲ್ಲಿ ಒಬ್ಬ ಹಿರಿಯ ರಾಜಕಾರಣಿ ಆಗಿ ಮೊದಲಿನಿಂದಲೂ ಕಾವೇರಿ ಬಗ್ಗೆ ಐಕ್ಯತೆ ಇಲ್ಲಾ ಎಂದು ಹಲವಾರು ಬಾರಿ ಹೇಳಿದ್ದಾರೆ. ತಮಿಳುನಾಡಿನಲ್ಲಿ ಐಕ್ಯತೆ ಇದೆ. ಸರ್ಕಾರದ ನಿಲುವು ಬಂದ ಮೇಲೆ ನಾನು ನನ್ನ ಅಭಿಪ್ರಾಯ ಹೇಳುತ್ತೇನೆ. ಸರ್ಕಾರದ ತೀರ್ಮಾನಕ್ಕೆ ನಾನು, ಕುಮಾರಸ್ವಾಮಿ ಸಹಕರಿಸಬೇಕಾಗುತ್ತದೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೈಲ್ವೆ ಸಚಿವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದು, ರಾಜೀನಾಮೆಗೆ ಆಗ್ರಹ ಸರಿಯಲ್ಲ: ಹೆಚ್‌ಡಿಡಿ

    ರೈಲ್ವೆ ಸಚಿವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದು, ರಾಜೀನಾಮೆಗೆ ಆಗ್ರಹ ಸರಿಯಲ್ಲ: ಹೆಚ್‌ಡಿಡಿ

    ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ (Odisha Train Tragedy) ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (H.D.Deve Gowda) ಹೇಳಿದ್ದಾರೆ.

    ಮಂಗಳವಾರ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ರೈಲು ದುರಂತದಿಂದ ಸಂಭವಿಸಿದ ಬಳಿಕ ಅಲ್ಲಿನ ಪರಿಸ್ಥತಿಯನ್ನು ಸಹಜಸ್ಥಿತಿಗೆ ತರಲು ಅಶ್ವಿನಿ ವೈಷ್ಣವ್ ಅವರು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ

    2024ರ ಚುನಾವಣೆಗೆ ವಿರೋಧ ಪಕ್ಷಗಳು ಒಗ್ಗೂಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಯಾವುದೇ ಚರ್ಚೆಯನ್ನು ಮಾಡಿಲ್ಲ. ಮೊದಲನೆಯದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ನಾವು ಬಯಸುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಜಾರ್ಖಂಡ್‍ನಲ್ಲಿ ತಪ್ಪಿತ್ತು ರೈಲು ದುರಂತ!

    ಜೂನ್ 2ರಂದು ಒಡಿಶಾದ ಬಾಲಸೋರ್‌ನಲ್ಲಿ (Balasore) ತ್ರಿವಳಿ ರೈಲುಗಳು ಏಕಕಾಲಕ್ಕೆ ಡಿಕ್ಕಿಯಾದ ಪರಿಣಾಮ ಭಾರೀ ಪ್ರಮಾಣದ ನಷ್ಟವುಂಟಾಗಿದೆ. ಈ ಘಟನೆಯಲ್ಲಿ 278 ಮಂದಿ ಸಾವನ್ನಪ್ಪಿದ್ದು, 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲು ದುರಂತದ ತನಿಖೆಯನ್ನು ಸಿಬಿಐಗೆ (CBI) ಒಪ್ಪಿಸಿದ್ದು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎರಡು ದಿನಗಳ ಕಾಲ ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮತ್ತು ಪುನಃಸ್ಥಾಪನೆ ಕಾರ್ಯವನ್ನು ಮೇಲ್ವಿಚಾರಣೆ ಮಾಡಿದ್ದಾರೆ. ಇದನ್ನೂ ಓದಿ: ಕೇವಲ ಎರಡೂವರೆ ನಿಮಿಷದಲ್ಲಿ ಬ್ರೈನ್ ಆಪರೇಷನ್- ನಾರಾಯಣ ಹೆಲ್ತ್ ಸಿಟಿ ವೈದ್ಯರಿಂದ ಮಹತ್ತರ ಸಾಧನೆ

  • ಗುರುವಾರ ಜೆಡಿಎಸ್‌ನಿಂದ ಪರಾಮರ್ಶೆ ಸಭೆ – ಮತ್ತೆ ಸಿನಿಮಾದತ್ತ ನಿಖಿಲ್ ಒಲವು

    ಗುರುವಾರ ಜೆಡಿಎಸ್‌ನಿಂದ ಪರಾಮರ್ಶೆ ಸಭೆ – ಮತ್ತೆ ಸಿನಿಮಾದತ್ತ ನಿಖಿಲ್ ಒಲವು

    ಬೆಂಗಳೂರು: ವಿಧಾನಸಭೆ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಗುರುವಾರ ಜೆಡಿಎಸ್ (JDS) ಸೋಲಿನ ಪರಾಮರ್ಶೆ ಸಭೆ ನಡೆಸಲಿದೆ.

    ಅರಮನೆ ಮೈದಾನದಲ್ಲಿ ಮಾಜಿ ಪ್ರಧಾನಿ ದೇವೇಗೌಡ (H.D.Deve Gowda), ಮಾಜಿ ಸಿಎಂ ಕುಮಾರಸ್ವಾಮಿ (H.D.Kumaraswamy), ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (C.M.Ibrahim) ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಹಾಲಿ ಶಾಸಕರು, ಸೋತ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ಹಾಲಿ ಮಾಜಿ ಶಾಸಕರು, ಸಂಸದರು, ತಾಲೂಕು ಅಧ್ಯಕ್ಷರುಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಸೋಲಿಗೆ ಕಾರಣಗಳೇನು, ಎಲ್ಲಿ ಪಕ್ಷಕ್ಕೆ ಹಿನ್ನಡೆ ಆಗಿದೆ ಎಂಬ ಅಂಶಗಳ ಕುರಿತು ಅವಲೋಕನವನ್ನು ನಾಯಕರು ಮಾಡಲಿದ್ದಾರೆ. ಇದನ್ನೂ ಓದಿ: ಆರ್‌ವಿ ರಸ್ತೆ, ಬೊಮ್ಮಸಂದ್ರ ಪ್ರಯಾಣಿಕರಿಗೆ ಗುಡ್ ನ್ಯೂಸ್ – ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

    ರಾಮನಗರದಲ್ಲಿ (Ramanagara) ಸೋಲಿನ ನಂತರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮತ್ತೆ ಸಿನಿಮಾದತ್ತ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಮತ್ತೆ ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ನಿಖಿಲ್ ನಿರ್ಧಾರ ಮಾಡಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನ ತ್ಯಜಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೊಸಬರಿಗೆ ಅವಕಾಶ ಕೊಡುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರವೇ ಯುವ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ: ಗ್ಯಾರಂಟಿ ಲಾಭ ಪಡೆಯಲು ದುಂಬಾಲು – ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್‌ ಡಿಮ್ಯಾಂಡ್‌