Tag: H.D.Deve Gowda

  • ರವಿ ಕುಮಾರ್ ಶಾಸಕರಾಗುವುದು ಸತ್ಯ, ಕುಮಾರಸ್ವಾಮಿ ಸಿಎಂ ಆಗೋದು ಅಷ್ಟೇ ಸತ್ಯ: ಹೆಚ್‌ಡಿಡಿ

    ರವಿ ಕುಮಾರ್ ಶಾಸಕರಾಗುವುದು ಸತ್ಯ, ಕುಮಾರಸ್ವಾಮಿ ಸಿಎಂ ಆಗೋದು ಅಷ್ಟೇ ಸತ್ಯ: ಹೆಚ್‌ಡಿಡಿ

    ಚಿಕ್ಕಬಳ್ಳಾಪುರ: ಶಿಡ್ಲಘಟ್ಟ (Sidlaghatta) ವಿಧಾನಸಭಾ ಕ್ಷೇತ್ರದಿಂದ ಮೇಲೂರು ರವಿಕುಮಾರ್ ಶಾಸಕರಾಗೋದು ಸತ್ಯ. ಅದೇ ರಿತಿ ಕುಮಾರಸ್ವಾಮಿ (H.D.Kumaraswamy) ಸಹ ಸಿಎಂ ಆಗೋದು ಅಷ್ಟೇ ಸತ್ಯ. ಆ ದಿನ ನೋಡೋಕೆ ನಾನು ಕಾಯುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (H.D.Deve Gowda) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಶಿಡ್ಲಘಟ್ಟ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಮೋದಿ ಯಾಕೆ ಎರಡು ದಿನ ರೋಡ್ ಶೋ ಮಾಡುತ್ತಿದ್ದಾರೆ? ಇದೇನು ಪಾರ್ಲಿಮೆಂಟ್ ಚುನಾವಣೆನಾ? ಕರ್ನಾಟಕದಲ್ಲಿ ಬಿಜೆಪಿಯ ಶಕ್ತಿ ಕುಂದಿದೆ ಎಂದು ಮೋದಿಯವರಿಗೆ (Narendra Modi) ಅರ್ಥ ಆಗಿದೆ. ಹಾಗಾಗಿ ಎರಡು ದಿನ ರೋಡ್ ಶೋ ಮಾಡುತ್ತಿದ್ದಾರೆ. ಮೋದಿಯವರು ರೋಡ್ ಶೋ ಮಾಡಿ ಜನರನ್ನು ಮರಳು ಮಾಡಲು ಆಗಲ್ಲ. ದೇಶದಲ್ಲಿ ಬಿಜೆಪಿ (BJP) ಆಡಳಿತದ ಯಾವ ರಾಜ್ಯದಲ್ಲಿ ಮುಸ್ಲಿಂ ಮುಖ್ಯಮಂತ್ರಿ ಇದ್ದಾರೆ ತೋರಿಸಿ. ನಾನು ಮುಸ್ಲಿಂಗೆ ರಿಸರ್ವೇಶನ್ ಕೊಟ್ಟೆ. ನಾವು ಭಾರತಾಂಬೆಯ ಮಕ್ಕಳು. ಯಾಕೆ ಈ ತಾರತಮ್ಯ ಎಂದು ಕಿಡಿಕಾರಿದರು. ಇದನ್ನೂ ಓದಿ: ಖರ್ಗೆ ಹತ್ಯೆಗೆ ಸಂಚು ಆಡಿಯೋ ಬಾಂಬ್‌ – ಸಿಎಂ ಬೊಮ್ಮಾಯಿ ಹೇಳಿದ್ದೇನು?

    ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಕಾಂಗ್ರೆಸ್ (Congress) ಮುಖಂಡರು. ಅವರು ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರು. 18 ಜನರನ್ನು ಮುಂಬೈಗೆ ಕಳುಹಿಸಿದವರು ಯಾರು? ಕಾಂಗ್ರೆಸ್ ಮುಖಂಡರೇ ಸತ್ಯ ಹೇಳಿ. ರಾಹುಲ್ ಗಾಂಧಿ (Rahul Gandhi) ಹಾಸನಕ್ಕೆ ಬಂದು ಜೆಡಿಎಸ್ ಬಿಜೆಪಿಯ ಬಿ ಟೀಮ್ ಎನ್ನುತ್ತಾರೆ. ಏನು ಹುಡುಗಾಟಿಕೆನಾ ಎಂದು ಹರಿಹಾಯ್ದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಯನ್ನು ಜಿರಲೆಗೆ ಹೋಲಿಸಿದ ಸಚಿವ ಈಶ್ವರಪ್ಪ

  • ರಾಹುಲ್ ಗಾಂಧಿ ಯಂಗ್‌ಸ್ಟರ್ – ಹೆಚ್.ಡಿ.ದೇವೇಗೌಡ

    ರಾಹುಲ್ ಗಾಂಧಿ ಯಂಗ್‌ಸ್ಟರ್ – ಹೆಚ್.ಡಿ.ದೇವೇಗೌಡ

    ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಯಂಗ್‌ಸ್ಟರ್. ಅವರು ಬೇಕಾದರೆ ಏನಾದರೂ ಮಾತನಾಡಲಿ ಎಂದು ಜೆಡಿಎಸ್ (JDS) ವರಿಷ್ಠ ಹೆಚ್.ಡಿ.ದೇವೇಗೌಡ (H.D.Deve gowda) ಹೇಳಿದರು.

    ಜೆಡಿಎಸ್ ಕಾಂಗ್ರೆಸ್‌ನ (Conrgess) ‘ಬಿ’ ಟೀಂ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕಳೆದ ಬಾರಿ ರಾಹುಲ್ ಗಾಂಧಿ ಜೆಡಿಎಸ್‌ ಬಿಜೆಪಿಯ ‘ಬಿ’ ಟೀಂ ಎಂದು ಹೇಳಿದ್ದರು. ಈ ಬಾರಿ ಮೋದಿ ಅವರು ಹೇಳಿದ್ದಾರೆ. ಮೋದಿ ಅವರು ಎತ್ತರಕ್ಕೆ ಬೆಳೆದ ನಾಯಕ. ಅವರು ಹಾಗೆ ಮಾತಾಡೋದು ಸರಿನಾ? ಅವರಿಗೆ ಬಿಡ್ತೀನಿ. ರಾಹುಲ್ ಗಾಂಧಿ ಯಂಗ್‌ಸ್ಟರ್, ಅವರು ಬೇಕಾದ್ರೆ ಏನಾದ್ರು ಮಾತಾಡಲಿ. ಮೋದಿ ಅವರು ಹಾಗೆ ಹೇಳಿದ್ದನ್ನು ಅವರಿಗೆ ಬಿಡ್ತೀನಿ. ನಾನೇನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೋಮಣ್ಣಗೆ ಲೋ ಬಿಪಿ

    ಮಾಡಿದ್ದಾರೆ ಇಡೀ ರಾಷ್ಟ್ರಕ್ಕೆ ಗೊತ್ತು. ನಾನು ಏನೇನು ಮಾಡಿದ್ದೇನೆ ಅಂತ ಪುಸ್ತಕ ಬಂದಿದೆ. ಹಲವಾರು ವಿಷಯ ಅದರಲ್ಲಿ ಇದೆ. ಮುಸ್ಲಿಂ ಮೀಸಲಾತಿ, ಮಹಿಳೆಯರ ಮೀಸಲಾತಿ, ವಾಲ್ಮೀಕಿ ಮೀಸಲಾತಿ, ಈದ್ಗಾ ವಿಚಾರ ಏನೇನು ಮಾಡಿದ್ದೇನೆ ನೋಡಲಿ. ದೊಡ್ಡವರ ಹೇಳಿದ್ದಾರೆ ಹೇಳಲಿ. ಅವರ ಬಗ್ಗೆ ನಾನು ಟೀಕೆ ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು.

    ಜೆಡಿಎಸ್‌ಗೆ ಹಾಕೋ ಒಂದೊಂದು ವೋಟು ಕಾಂಗ್ರೆಸ್‌ಗೆ ಹಾಕಿದಂತೆ ಅನ್ನೋ ಮೋದಿ ಹೇಳಿಕೆ ಕುರಿತು ಮಾತನಾಡಿ, ಮೋದಿ ಅವರು ಹಾಗೆ ಹೇಳಲು ಅಧಿಕಾರ ಇದೆ. ಸ್ವಾತಂತ್ರ‍್ಯ ಇದೆ ಹೇಳಲಿ. ಮಾತಾಡೋಕೆ ಸ್ವಾತಂತ್ರ‍್ಯ ಇದೆ, ಮಾತಾಡಲಿ ಸಂತೋಷ. ರಾಜ್ಯಕ್ಕೆ ಪದೇ ಪದೇ ಮೋದಿ ಬರುವುದರಿಂದ ನಮಗೇನು ತೊಂದರೆ ಇಲ್ಲ. ಆನಂದವಾಗಿ ಅವರು ರಾಜ್ಯಕ್ಕೆ ಬರಲಿ. ಚುನಾವಣೆ ಮುಗಿಯೋವರೆಗೂ ಬರಲಿ. ಚುನಾವಣೆ ಮುಗಿದ ಮೇಲೂ ಲೋಕಸಭೆ ಚುನಾವಣೆಗೂ ಬರಲಿ. ನಮಗೇನು ತೊಂದರೆ ಇಲ್ಲ. ಮೋದಿ ನನಗಿಂತ ಯಂಗ್ ಇದ್ದಾರೆ. ನನಗೂ ಅವರಿಗೂ 15 ವರ್ಷ ವ್ಯತ್ಯಾಸ ಇದೆ. ಕರ್ನಾಟಕದ ಮಹಾ ಜನತೆಯ ಸಮಸ್ಯೆ ಬಗೆಹರಿಸೋಕೆ ಅವರು ಬಂದರೆ ನನಗೆ ಸಂತೋಷ ಎಂದು ಕುಟುಕಿದರು. ಇದನ್ನೂ ಓದಿ: ಸಾ.ರಾ. ಬಾಸ್‌ಗೆ ದೇಶ ಕಾಯುವ ಸೈನಿಕನಿಂದ ಮೊದಲ ಮತ – ವೋಟ್‌ ಹಾಕಿ ಬ್ಯಾಲೆಟ್‌ ಪೇಪರ್‌ ಪ್ರದರ್ಶಿಸಿದ ಯೋಧನ ಫೋಟೋ ವೈರಲ್‌

    ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರೋದಿಲ್ಲ. ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ದೇವೇಗೌಡರು ನಿರಾಕರಿಸಿದರು.

  • ದೊಡ್ಡಗೌಡರ ಆಶೀರ್ವಾದ ಪಡೆದ ಎಂಪಿ ಕುಮಾರಸ್ವಾಮಿ

    ದೊಡ್ಡಗೌಡರ ಆಶೀರ್ವಾದ ಪಡೆದ ಎಂಪಿ ಕುಮಾರಸ್ವಾಮಿ

    ಬೆಂಗಳೂರು: ಮೂಡಿಗೆರೆ (Mudigere) ಜೆಡಿಎಸ್ (JDS) ಅಭ್ಯರ್ಥಿ ಎಂ.ಪಿ ಕುಮಾರಸ್ವಾಮಿ (M.P Kumaraswamy) ಮಾಜಿ ಪ್ರಧಾನಿ ದೇವೇಗೌಡ (H.D Deve Gowda) ಅವರನ್ನು ಬುಧವಾರ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಬಿ ನಿಂಗಯ್ಯ ಅವರು ಸ್ವಯಂಪ್ರೇರಿತರಾಗಿ ನಾಮಪತ್ರ ಹಿಂಪಡೆದಿದ್ದಾರೆ. ಅವರೂ ಕೂಡ ನಮ್ಮೊಂದಿಗೆ ಕೈಜೋಡಿಸಿದ್ದಾರೆ. ಈ ಬಾರಿ ಮತದಾರರು ನನ್ನ ಪರವಾಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ (Election) ಗೆಲ್ಲುವ ಭರವಸೆ ಇದೆ ಎಂದಿದ್ದಾರೆ. ಇದನ್ನೂ ಓದಿ: ರಕ್ತದಲ್ಲಿ ಬರೆದು ಕೊಡ್ತೀನಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ – ಡಿಕೆಶಿ

    ಜೆಡಿಎಸ್‍ನಲ್ಲಿ ನಿಂತು ಗೆಲ್ತೀರಾ ಎಂಬ ಬಿಜೆಪಿ (BJP) ಮುಖಂಡ ಸಿ.ಟಿ ರವಿ (C.T Ravi) ಹೇಳಿಕೆ ವಿಚಾರವಾಗಿ, ಯಾರನ್ನು ಸೋಲಿಸಬೇಕು, ಯಾರನ್ನು ಗೆಲ್ಲಿಸಬೇಕು ಎಂದು ಜನ ತೀರ್ಮಾನಿಸಲಿದ್ದಾರೆ. ಚುನಾವಣೆಯ ನಂತರ ಎಲ್ಲವೂ ತಿಳಿಯಲಿದೆ ಎಂದು ಕುಟುಕಿದ್ದಾರೆ.

    ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಸಚಿವ ಸೋಮಣ್ಣ ಆಮಿಷ ಒಡ್ಡಿದ ವಿಚಾರವಾಗಿ, ಸೋಮಣ್ಣ ದೊಡ್ಡವರು. ದೊಡ್ಡವರ ಬಗ್ಗೆ ನಾನು ಮಾತನಾಡುವುದಿಲ್ಲ. ಪಕ್ಷದಲ್ಲಿ ದೊಡ್ಡ ನಾಯಕರಿದ್ದಾರೆ ಅವರು ಈ ಬಗ್ಗೆ ಮಾತಾಡುತ್ತಾರೆ ಎಂದಿದ್ದಾರೆ.

    ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D Kumaraswamy) ಈಗಾಗಲೇ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ದೇವೇಗೌಡರು ಪ್ರಚಾರಕ್ಕೆ ಬರಲಿದ್ದಾರೆ. ಈ ಬಾರಿ ಮತದಾರರಲ್ಲಿ ಜೆಡಿಎಸ್ ಪರ ಒಲವಿದೆ ಎಂದಿದ್ದಾರೆ. ಇದನ್ನೂ ಓದಿ: ಮೈಲಾರಿ ಹೋಟೆಲ್‌ನಲ್ಲಿ ತಾನೇ ದೋಸೆ ಹಾಕಿ ರುಚಿಗೆ ಫಿದಾ ಆದ ಪ್ರಿಯಾಂಕಾ ಗಾಂಧಿ

  • ಬಿಜೆಪಿಯವರು ಚುನಾವಣಾ ಪ್ರಚಾರಕ್ಕೆ ಅಮೆರಿಕಾ, ರಷ್ಯಾ ಪ್ರೆಸಿಡೆಂಟ್‍ನ್ನು ಕರ್ಕೊಂಡು ಬರಲಿ: ಹೆಚ್‍ಡಿ ರೇವಣ್ಣ ಟಾಂಗ್

    ಬಿಜೆಪಿಯವರು ಚುನಾವಣಾ ಪ್ರಚಾರಕ್ಕೆ ಅಮೆರಿಕಾ, ರಷ್ಯಾ ಪ್ರೆಸಿಡೆಂಟ್‍ನ್ನು ಕರ್ಕೊಂಡು ಬರಲಿ: ಹೆಚ್‍ಡಿ ರೇವಣ್ಣ ಟಾಂಗ್

    ಹಾಸನ: ಬಿಜೆಪಿಯವರು (BJP) ಚುನಾವಣಾ ಪ್ರಚಾರಕ್ಕೆ ಅಮೆರಿಕಾ ಪ್ರೆಸಿಡೆಂಟ್ ಹಾಗೂ ರಷ್ಯಾ ಪ್ರೆಸಿಡೆಂಟ್‍ನ್ನು ಕರೆದುಕೊಂಡು ಬರಲಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D Revanna) ವ್ಯಂಗ್ಯವಾಡಿದ್ದಾರೆ.

    ಬೇಲೂರಿನಲ್ಲಿ (Belur) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾಸನ ಜಿಲ್ಲೆಗೆ ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ವಿಚಾರವಾಗಿ, ನಮಗೆ ಮಾಜಿ ಪ್ರಧಾನಿ ದೇವೇಗೌಡರು (H.D Deve Gowda), ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು (H.D Kumaraswamy) ಹಾಗೂ ಕ್ಷೇತ್ರದ ಜನರೇ ಸಾಕು. ಇವರೇ ನಮಗೆ ಚಾಣಕ್ಯರು, ನಮ್ಮ ಬಳಿ ಬೇರೆ ಚಾಣಕ್ಯರು ಯಾರೂ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ರೇಡ್

    ಜೆಡಿಎಸ್ (JDS) ಈ ಬಾರಿ 123 ಸೀಟ್‍ಗಳ ಟಾರ್ಗೆಟ್ ಮಾಡಿದೆ. ಈ ಚುನಾವಣೆಯಲ್ಲಿ ಬಹುಮತ ಕೊಡಿ ಎಂದು ಜನರ ಬಳಿ ಕೇಳಿದ್ದೇವೆ. ದೇವೇಗೌಡರು, ಕುಮಾರಸ್ವಾಮಿಯವರು ಸಾಮಾನ್ಯ ರೈತನ ಮಕ್ಕಳು, ನಮಗೆ ಜನರ ಆಶೀರ್ವಾದ ಇರುವವರೆಗೂ ಯಾವುದೇ ತೊಂದರೆ ಆಗುವುದಿಲ್ಲ. ನಮಗೆ ಮತದಾರರ ಮೇಲೆ ನಂಬಿಕೆ ಇದೆ. ಈ ಬಾರಿ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ ಎಂದಿದ್ದಾರೆ.

    ರಾಜ್ಯದ ಜನ ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತವನ್ನು ನೋಡಿದ್ದಾರೆ. ಇವೆರಡು ಪಕ್ಷಗಳನ್ನು ಸ್ವಲ್ಪ ದಿನ ವಿಶ್ರಾಂತಿಗೆ ಕಳುಹಿಸಬೇಕೆಂದು ತೀರ್ಮಾನ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ದೇವೇಗೌಡರ ಅವಧಿಯಲ್ಲಿ ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ಗ್ರಾಮಗಳ ಅಭಿವೃದ್ಧಿ ಸೇರಿ ಐದು ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದಾರೆ. ನಮ್ಮ ರಾಜ್ಯ ಉಳಿಯಬೇಕು ಅದಕ್ಕಾಗಿ ದುಡಿಯುತ್ತೇವೆ ಎಂದು ಹೇಳಿದ್ದಾರೆ.

    ಪ್ರೀತಂ ಗೌಡ ಸೈಲೆಂಟ್ ಆಗಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರೀತಂ ಗೌಡರು ದೊಡ್ಡವರಿದ್ದಾರೆ. ಅವರ ಬಗ್ಗೆ ಮಾತನಾಡುವ ಶಕ್ತಿ ನನಗೆ ಇಲ್ಲ. ಅವರು ದೊಡ್ಡವರಿರುವಾಗ ಆ ಮಟ್ಟಕ್ಕೆ ನಾನು ಬೆಳೆದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮೂರು ಪಕ್ಷದಿಂದಲೂ ನನಗೆ ಆಫರ್ ಇತ್ತು ಎಂದು ಅಚ್ಚರಿ ಮೂಡಿಸಿದ ರಮ್ಯಾ 

  • ರೇವಣ್ಣ ಕುಟುಂಬದವ್ರು ನನ್ನ ಪರ ಪ್ರಚಾರಕ್ಕೆ ಬರುತ್ತಾರೆ: ಹಾಸನ ಜೆಡಿಎಸ್ ಅಭ್ಯರ್ಥಿ

    ರೇವಣ್ಣ ಕುಟುಂಬದವ್ರು ನನ್ನ ಪರ ಪ್ರಚಾರಕ್ಕೆ ಬರುತ್ತಾರೆ: ಹಾಸನ ಜೆಡಿಎಸ್ ಅಭ್ಯರ್ಥಿ

    ಹಾಸನ: ಟಿಕೆಟ್ ನೀಡಿದ್ದಕ್ಕಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ( H. D. Deve Gowda) ಧನ್ಯವಾದ ಅರ್ಪಿಸುತ್ತೇನೆ ಎಂದು ಜೆಡಿಎಸ್ (JDS) ಅಭ್ಯರ್ಥಿ ಹೆಚ್.ಪಿ ಸ್ವರೂಪ್ (H.P Swaroop) ಹೇಳಿದ್ದಾರೆ.

    ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಹೈಕಮಾಂಡ್ ನನಗೆ ಟಿಕೆಟ್ ನೀಡಿರುವುದು ಸಂತಸ ತಂದಿದೆ. ರೇವಣ್ಣ (H. D. Revanna) ಕುಟುಂಬ ನನ್ನ ಪರ ಪ್ರಚಾರಕ್ಕೆ ಬರುತ್ತಾರೆ. ಶೀಘ್ರದಲ್ಲೇ ರೇವಣ್ಣ ಅವರನ್ನು ಭೇಟಿಯಾಗುತ್ತೇನೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

    ಈ ಚುನಾವಣೆ ಶಾಸಕ ಪ್ರೀತಂಗೌಡ ಹಾಗೂ ಸ್ವಾಭಿಮಾನದ ನಡುವೆ ನಡೆಯುವ ಚುನಾವಣೆಯಾಗಿದೆ. ಇಲ್ಲಿ ನಮ್ಮ ತಂದೆಯ ಕೆಲಸಗಳು ನನ್ನ ಕೈಹಿಡಿಯಲಿವೆ. ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದಿದ್ದಾರೆ.

    ಪಕ್ಷದ ಟಿಕೆಟ್ ಸಿಗಲು ಕಾರಣರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ – ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

  • ಕನಕಪುರದಲ್ಲಿ ಮೋದಿ, ಶಾ ಆಟ ನಡೆಯೋದಿಲ್ಲ: ಡಿಕೆ ಸುರೇಶ್

    ಕನಕಪುರದಲ್ಲಿ ಮೋದಿ, ಶಾ ಆಟ ನಡೆಯೋದಿಲ್ಲ: ಡಿಕೆ ಸುರೇಶ್

    ರಾಮನಗರ: ಕನಕಪುರದಲ್ಲಿ ಪ್ರಧಾನಿ ಮೋದಿ (Narendra Modi) ಹಾಗೂ ಗೃಹ ಸಚಿವ ಅಮಿತ್ ಶಾ (Amit Shah) ಚುನಾವಣಾ ತಂತ್ರಗಳು ಫಲಿಸುವುದಿಲ್ಲ ಎಂದು ಸಂಸದ ಡಿ.ಕೆ ಸುರೇಶ್ (D.K Suresh) ಹೇಳಿದ್ದಾರೆ.

    ಕನಕಪುರದಲ್ಲಿ (Kanakapur) ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧೆ ವಿಚಾರವಾಗಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಡಿಕೆ ಶಿವಕುಮಾರ್‌  ಮಾಜಿ ಪ್ರಧಾನಿ ದೇವೇಗೌಡ (H. D. Deve Gowda) ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಚುನಾವಣೆ ಎದುರಿಸಿದ್ದರು. ಇಡೀ ಜೀವನವನ್ನೇ ನಾವು ಹೋರಾಟವಾಗಿ ಮಾಡಿಕೊಂಡು ಬಂದಿದ್ದೇವೆ. ಬಿಜೆಪಿಯ ತಂತ್ರಗಳ ಎದುರು ಸ್ಪರ್ಧಿಸುವುದು ದೊಡ್ಡ ವಿಚಾರವಲ್ಲ. ನನಗೆ ರಾಜಕೀಯ ಹೊಸದಲ್ಲ ರಾಜಕೀಯದ ಅನುಭವವಿದೆ ಎಂದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಡಿಕೆ ಶಿವಕುಮಾರ್ ಕೇವಲ ಅರ್ಜಿ ಹಾಕಿ ರಾಜ್ಯ ಸುತ್ತಲು ಆಗಲ್ಲ: ಸಿಪಿ ಯೋಗೇಶ್ವರ್

    ಪದ್ಮನಾಭನಗರದಿಂದ ಶಿವಕುಮಾರ್ ಸಹೋದರ ಸಂಸದ ಡಿ.ಕೆ ಸುರೇಶ್ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರ ಕೇಳಿ ಬಂದಿತ್ತು. ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಬಿಜೆಪಿ ಹೈಕಮಾಂಡ್ ಅಶೋಕ್ ಅವರಿಗೆ ಟಿಕೆಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಅಶೋಕ್ ವಿರುದ್ಧ ಡಿಕೆ ಸುರೇಶ್ ಅವರನ್ನು ಕಣಕ್ಕೆ ಇಳಿಸಿದರೆ ಉತ್ತಮ ಎಂಬ ಸಲಹೆ ವ್ಯಕ್ತಪಡಿಸಿದ್ದರು.

    ಆರ್.ಅಶೋಕ್‍ಗೆ (R. Ashoka) ಟಿಕೆಟ್ ನೀಡಿದ ವಿಚಾರವಾಗಿ ಬಿಜೆಪಿ ನಾಯಕರು ಡಿ.ಕೆ ಶಿವಕುಮಾರ್ ವಿರುದ್ಧ ಪ್ರಬಲ ಒಕ್ಕಲಿಗ ನಾಯಕ ಆರ್. ಅಶೋಕ್‍ರನ್ನು ಕಣಕ್ಕಿಳಿಸಲಾಗಿದೆ. ಈ ಚುನಾವಣೆ ಗೆಲ್ಲುವ ಭರವಸೆ ಇದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪದ್ಮನಾಭನಗರದಿಂದ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

  • ದೇವೇಗೌಡ್ರು ಅಡುಗೆ ಮನೆಯಲ್ಲಿ ಅರ್ಧ ಗಂಟೆ ಕುಳಿತರೆ ಜೆಡಿಎಸ್ ಟಿಕೆಟ್ ಹಂಚಿಕೆ ಮುಗಿಯುತ್ತೆ: ತೇಜಸ್ವಿ ಸೂರ್ಯ ವ್ಯಂಗ್ಯ

    ದೇವೇಗೌಡ್ರು ಅಡುಗೆ ಮನೆಯಲ್ಲಿ ಅರ್ಧ ಗಂಟೆ ಕುಳಿತರೆ ಜೆಡಿಎಸ್ ಟಿಕೆಟ್ ಹಂಚಿಕೆ ಮುಗಿಯುತ್ತೆ: ತೇಜಸ್ವಿ ಸೂರ್ಯ ವ್ಯಂಗ್ಯ

    ಬೀದರ್: ಜೆಡಿಎಸ್‍ನಲ್ಲಿ (JDS) ಟಿಕೆಟ್ ಹಂಚುವುದು ಬಹಳ ಸುಲಭ. ದೇವೇಗೌಡ್ರು (H.D.Deve Gowda) ಅಡುಗೆ ಮನೆಯಲ್ಲಿ ಕುಳಿತುಕೊಂಡು ಚರ್ಚಿಸಿದರೆ ಅರ್ಧ ಗಂಟೆಯಲ್ಲಿ ಎಲ್ಲಾ ಮುಗಿದು ಹೋಗುತ್ತದೆ ಎಂದು ಜೆಡಿಎಸ್ ವಿರುದ್ಧ ಬಿಜೆಪಿ (BJP) ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ (Tejasvi Surya) ಬೀದರ್‌ನಲ್ಲಿ (Bidar) ಲೇವಡಿ ಮಾಡಿದ್ದಾರೆ.

    ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು ಜೆಡಿಎಸ್‍ನಲ್ಲಿ ಸೊಸೆಗೆ ಟಿಕೆಟ್ ಕೊಡಬೇಕಾ, ಮಗನಿಗೆ ಕೊಡಬೇಕಾ? ಮಗಳಿಗೆ ಕೊಡಬೇಕಾ ಅಥವಾ ಅಳಿಯನಿಗೆ ಕೊಡಬೇಕಾ ಎಂದು ಅಡುಗೆ ಮಾಡತ್ತಾ ಮಾಡತ್ತಾ ಟಿಕೆಟ್ ಹಂಚಿಕೆ ಮುಗಿದು ಹೋಗುತ್ತದೆ. ಆದರೂ ಹಾಸನ ಟಿಕೆಟ್ ಹಂಚಿಕೆ ಇನ್ನೂ ಮುಗಿಯುತ್ತಿಲ್ಲ. ಹಾಸನದಲ್ಲಿ ಸೊಸೆಗೆ ಕೊಡಬೇಕೋ, ಇಲ್ಲಾ ಮಗನಿಗೆ ಕೊಡಬೇಕಾ ಎಂಬ ಗಲಾಟೆ ಇನ್ನೂ ತಣ್ಣಗಾಗಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ಶಾಸಕ ಡಾ.ಶಿವರಾಜ್ ಪಾಟೀಲ್ ವಿರುದ್ಧ ಜೆಡಿಎಸ್ ದೂರು

    ಕಾಂಗ್ರೆಸ್‍ನಲ್ಲಿ ಎರಡು, ಮೂರು ಬಣಗಳು ಕುಳಿತು ಟಿಕೆಟ್ ಫೈನಲ್ ಮಾಡುತ್ತವೆ. ಈ ರೀತಿ ಬೇಕಾದವರಿಗೆ ಟಿಕೆಟ್ ಕೊಟ್ಟು ಇಂದು ರಸ್ತೆ ರಸ್ತೆಯಲ್ಲಿ ಬಂಡಾಯ ಅಭ್ಯರ್ಥಿಗಳು ಹೊಡೆದಾಡುತ್ತಿದ್ದಾರೆ. ಆದರೆ ಬಿಜೆಪಿಯಲ್ಲಿ ಮನೆಯಲ್ಲಿ ಕುಳಿತುಕೊಂಡು ಟಿಕೆಟ್ ಫೈನಲ್ ಮಾಡುವ ಸಂಪ್ರದಾಯ ಇಲ್ಲ. ರಾಜ್ಯ ಹಾಗೂ ಕೇಂದ್ರದ ನಾಯಕರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿ ಟಿಕೆಟ್ ಕೊಡತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

    ನಟ ಸುದೀಪ್ (Sudeep) ಬಿಜೆಪಿ ಬೆಂಬಲ ವಿಚಾರವಾಗಿ ಮಾತನಾಡಿ, ಬಿಜೆಪಿಗೆ ಬೆಂಬಲ ನೀಡಿದ್ದಕ್ಕಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್‍ನವರು ಅವರನ್ನು ವಿಲನ್ ಮಾಡಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಸುದೀಪ್ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಆಗ ಅವರು ಬಹಳ ಸಜ್ಜನ ಹಾಗೂ ಒಳ್ಳೆಯ ವ್ಯಕ್ತಿಯಾಗಿದ್ದರು. ಮೋದಿ (Narendra Modi) ಹಾಗೂ ಬೊಮ್ಮಾಯಿ (Basavaraj Bommai) ಸಂಬಂಧದಿಂದ ಪಕ್ಷಕ್ಕೆ ಬೆಂಬಲ ನೀಡಿದರೆ ಒಳ್ಳೆಯ ವ್ಯಕ್ತಿ ಅಲ್ಲ. ಅವರ ಸಿನಿಮಾ ಬ್ಯಾನ್ ಮಾಡಬೇಕು. ಸುದೀಪ್ ಇಡಿ, ಸಿಬಿಐನ ಭಯದಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಸುಳ್ಳಿನ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗುಜರಾತ್ ನಾಯಕರನ್ನು ಮೆಚ್ಚಿಸಲು KMF ಮುಗಿಸುವ ಹುನ್ನಾರ: ಹೆಚ್ಡಿಕೆ ವಾಗ್ದಾಳಿ

  • ಗುಜರಾತ್ ನಾಯಕರನ್ನು ಮೆಚ್ಚಿಸಲು KMF ಮುಗಿಸುವ ಹುನ್ನಾರ: ಹೆಚ್ಡಿಕೆ ವಾಗ್ದಾಳಿ

    ಗುಜರಾತ್ ನಾಯಕರನ್ನು ಮೆಚ್ಚಿಸಲು KMF ಮುಗಿಸುವ ಹುನ್ನಾರ: ಹೆಚ್ಡಿಕೆ ವಾಗ್ದಾಳಿ

    ರಾಮನಗರ: ರಾಜ್ಯ ಮಾರುಕಟ್ಟೆಗೆ ಅಮುಲ್ ಲಗ್ಗೆ ಇಟ್ಟಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (H.D.Kumaraswamy) ಬಿಡದಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

    ಅಮುಲ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಶೋಭಾ ಕರಂದ್ಲಾಜೆ ಹೇಳಿಕೆ ಗಮನಿಸಿದ್ದೇನೆ. ಅವರಿಗೆ ಕೆಎಂಎಫ್ ( Karnataka Milk Federation) ಮೇಲಾಗುವ ದಾಳಿ ಅರಿವಾಗುತ್ತಿಲ್ಲ. ಅವರಿಬ್ಬರೂ ಅದರ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು. ರಾಜ್ಯ ನಾಯಕರು ಗುಜರಾತ್ (Gujarat) ನಾಯಕರನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಾನ್ವಿ ಕ್ಷೇತ್ರದಲ್ಲಿ ಜೋರಾದ ಕಾಂಗ್ರೆಸ್ ಟಿಕೆಟ್ ಫೈಟ್- ಸ್ಥಳೀಯರಿಗೆ ಮಣೆ ಹಾಕದಿದ್ದರೆ ಬಂಡಾಯದ ಎಚ್ಚರಿಕೆ

    ದೇವೇಗೌಡರು (H.D.Deve Gowda) ಪ್ರಧಾನಿ ಆಗಿದ್ದಾಗ 13 ಒಕ್ಕೂಟಗಳು ಉತ್ತಮ ಸ್ಥಿತಿಯಲ್ಲಿದ್ದವು. ರೈತರ ಬದುಕಿಗೆ ಆಸರೆ ಆಗಿದ್ದವು. ಆದರೆ ಇಂದು ಹಂತ ಹಂತವಾಗಿ ಕೆಎಂಎಫ್ ಮೇಲೆ ದಾಳಿ ಮಾಡಲು ಹೊರಟಿದ್ದಾರೆ. ಅದರ ನಷ್ಟ ಏನು ಎಂಬುದು ಇವರಿಗೆ ಅರ್ಥ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕೆಎಂಎಫ್‍ನ ಎಂ.ಡಿ ದುಡ್ಡು ಹೊಡೆಯಲು ಶುರು ಮಾಡಿದ್ದಾರೆ. ಕರ್ನಾಟಕವನ್ನು ಇನ್ನೊಂದು ಗುಜರಾತ್ ಮಾಡಲು ಹೊರಟಿದ್ದಾರೆ. ಇದನ್ನ ಬೇಗ ಸರಿಪಡಿಸಿಕೊಳ್ಳಬೇಕು. ಕೆಎಂಎಫ್ ಕಷ್ಟದಲ್ಲಿ ಕಟ್ಟಿರುವ ಸಂಸ್ಥೆ. ಇದರಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ. ರೈತರ ಬದುಕಿನ ವಿಷಯದಲ್ಲಿ ಚೆಲ್ಲಾಟ ಆಡುತ್ತಿರುವುದನ್ನ ಪ್ರಶ್ನಿಸುತ್ತಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದು ಸವಾಲು ಹಾಕಿದ್ದಾರೆ.

    ಈಗ ಮೂರನೇ ಹಂತದಲ್ಲಿ ಕೆಎಂಎಫ್ ಮುಗಿಸುವ ಕಾರ್ಯ ನಡೆಯುತ್ತಿದೆ. ಕೆಎಂಎಫ್‍ನ ಅಧಿಕಾರಿಗಳೇ ಇದರಲ್ಲಿ ಭಾಗಿಯಾಗಿದ್ದಾರೆ. ಹಣ ದೋಚುವುದೊಂದೇ ಅವರ ಉದ್ದೇಶವಾಗಿದೆ. ನಂದಿನಿ ಅಮುಲ್‍ಗಿಂತ ಕಡಿಮೆ ಇಲ್ಲ. ಅಮುಲ್‍ನ್ನು ಹಿಂದಿಕ್ಕುವ ಶಕ್ತಿ ನಮ್ಮ ರೈತರಿಗಿದೆ ಎಂದು ಹೇಳಿದ್ದಾರೆ.

    ಜೆಡಿಎಸ್ (JDS) ಎರಡನೇ ಪಟ್ಟಿ ಬಿಡುಗಡೆ ವಿಚಾರವಾಗಿ, ಸೋಮವಾರದ ನಂತರ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈಗ ಸಾಕಷ್ಟು ಒತ್ತಡಗಳಿವೆ. ಕೆಲವು ಕಡೆ ಮತದಾರರು ನನಗೆ ಮತ ಹಾಕಲು ತಯಾರಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಆ ಕೊರತೆ ನೀಗಿಸುವ ಕೆಲಸ ನಡೆಯುತ್ತಿದೆ. ಇನ್ನೂ ರಾಷ್ಟ್ರೀಯ ಪಕ್ಷದ ಮೊದಲ ಪಟ್ಟಿಯೇ ಬಿಡುಗಡೆ ಆಗಿಲ್ಲ. ಈಗ ಹಲವಾರು ಪ್ರಮುಖರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುವುದು ಪ್ರಾರಂಭ ಆಗಿದೆ. ಕಾಂಗ್ರೆಸ್ಸಿನ ಹಲವಾರು ಜನ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವ ಪ್ರಕ್ರಿಯೆ ಆರಂಭ ಆಗಿದೆ. ಕಾಂಗ್ರೆಸ್‍ನಲ್ಲಿ ಓವರ್ ಲೋಡ್ ಆಗಿ ನಮಗೆ ಶಕ್ತಿ ತುಂಬುವ ಕೆಲಸ ಆಗುತ್ತಿದೆ. 15ಕ್ಕೂ ಹೆಚ್ಚು ಸಮರ್ಥ ಅಭ್ಯರ್ಥಿಗಳು ಪಕ್ಷಕ್ಕೆ ಬರಲಿದ್ದಾರೆ. 120 ಸೀಟ್‍ಗೆ ಬೇಕಾದ ಅಭ್ಯರ್ಥಿಗಳು ಸೇರುವ ವಾತಾವರಣ ನಿರ್ಮಾಣ ಆಗಿದೆ ಎಂದು ಹೇಳಿದ್ದಾರೆ.

    ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಧಾನಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ವಿಹಾರಕ್ಕಾಗಿ ಬರುತ್ತಿದ್ದಾರೆ. ರಾಜ್ಯದ ಜನತೆಯ ವಿಹಾರ ಅವರಿಗೆ ಬೇಕಿಲ್ಲ. ರಾಜ್ಯದ ಜನರ ಕಷ್ಟಕ್ಕಾಗಿ ಬಂದಿಲ್ಲ. ಈಗ ಚುನಾವಣೆ ಕೆಲಸ ಮಾಡಿ ಸುಸ್ತಾಗಿದ್ದಾರೆ. ಅದಕ್ಕೆ ರೆಸ್ಟ್ ಮಾಡಲು ಬಂದಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್‍ಗಾಗಿ ದೈವದ ಮೊರೆ ಹೋದ ಮಡಿಕೇರಿ ಆಕಾಂಕ್ಷಿ ಭರತೀಶ್

  • ವರುಣಾದಲ್ಲಿ ಸಿದ್ದು-ಬಿಎಸ್‌ವೈ ಹೊಂದಾಣಿಕೆ ಮಾಡ್ಕೊಂಡಿದ್ದಾರೆ: ಹೆಚ್‌ಡಿಡಿ ಹೊಸ ಬಾಂಬ್‌

    ವರುಣಾದಲ್ಲಿ ಸಿದ್ದು-ಬಿಎಸ್‌ವೈ ಹೊಂದಾಣಿಕೆ ಮಾಡ್ಕೊಂಡಿದ್ದಾರೆ: ಹೆಚ್‌ಡಿಡಿ ಹೊಸ ಬಾಂಬ್‌

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಹೊಂದಾಣಿಕೆ ಪಾಲಿಟಿಕ್ಸ್ ಆರೋಪ ಕೇಳಿಬಂದಿದೆ. ಚುನಾವಣಾ ರಾಜಕೀಯದಲ್ಲಿ ಮಾಜಿ ಸಿಎಂಗಳಾದ ಯಡಿಯೂರಪ್ಪ (Yediyurappa) ಹಾಗೂ ಸಿದ್ದರಾಮಯ್ಯ (Siddaramaiah) ಹೊಂದಾಣಿಕೆ ರಾಜಕಾರಣ ಮಾಡ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ದೆಹಲಿಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು (H.D.Deve Gowda) ಹೊಸ ಬಾಂಬ್ ಸಿಡಿಸಿದ್ದಾರೆ. ವರುಣಾ ಕ್ಷೇತ್ರದಲ್ಲಿ ಸಿದ್ದು, ಬಿಎಸ್‌ವೈ ನಡುವೆ ಒಳ ಒಪ್ಪಂದ ಇದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ಮ್ಯಾಚ್ ಫಿಕ್ಸಿಂಗ್ ಸಂಶಯ ಹುಟ್ಟು ಹಾಕಿದ್ದಾರೆ.

    ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ಕಾಂಗ್ರೆಸ್‌ನ ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದೇಕೆ? ಇದು ಏನನ್ನು ಸೂಚಿಸುತ್ತದೆ? ಇಬ್ಬರು ಮಾಜಿ ಸಿಎಂಗಳು ತಂತ್ರಗಾರಿಕೆಯ ತಿಳುವಳಿಕೆ ಹೊಂದಿದ್ದಾರೆ ಎಂಬುದು ಇದರ ಅರ್ಥ. ರಾಜ್ಯದಲ್ಲಿ ಹೀಗಾಗಲು ಬಿಜೆಪಿ ವರಿಷ್ಠರು ಹೇಗೆ ಅವಕಾಶ ನೀಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

    ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದಿಂದ ಈ ಬಾರಿ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿತ್ತು. ಆದರೆ ಪುತ್ರನ ರಾಜಕೀಯ ಭವಿಷ್ಯದ ಹಿತದೃಷ್ಟಿಯಿಂದ, ಈ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧಿಸಲ್ಲ ಎಂದು ಬಿಎಸ್‌ವೈ ತಿಳಿಸಿದ್ದಾರೆ. ಬಿಎಸ್‌ವೈ ಈ ನಿರ್ಧಾರ ನಾನಾ ಚರ್ಚೆಗೆ ಕಾರಣವಾಗಿದೆ.

    ‘ಹೊಂದಾಣಿಕೆ’ ರಾಜಕಾರಣ?
    ವರುಣಾ ಕ್ಷೇತ್ರ 2008ರಲ್ಲಿ ಸೃಷ್ಟಿಯಾಯ್ತು. ಅಂದಿನಿಂದ 3 ಬಾರಿ ಚುನಾವಣೆ ನಡೆದಿದೆ. 3ರಲ್ಲಿ 2 ಬಾರಿ ಸಿದ್ದರಾಮಯ್ಯ ಸ್ಪರ್ಧಿಸಿ ಗೆದ್ದಿದ್ದಾರೆ, 1 ಬಾರಿ ಯತೀಂದ್ರ ಗೆದ್ದಿದ್ದಾರೆ. ವರುಣಾದಲ್ಲಿ ಲಿಂಗಾಯತ ಮತದಾರರು ಹೆಚ್ಚಿದ್ದರೂ ಬಿಜೆಪಿ ಪ್ರಬಲ ಲಿಂಗಾಯತ ಅಭ್ಯರ್ಥಿ ಕಣಕ್ಕಿಳಿಸಲಿಲ್ಲ. ಲಿಂಗಾಯತರನ್ನೇ ಬಿಜೆಪಿ ಅಭ್ಯರ್ಥಿ ಮಾಡಿದ್ರೂ ಸಿದ್ದುಗೆ ಪೈಪೋಟಿ ಕೊಡಬಲ್ಲ ಒಬ್ಬರನ್ನೂ ಬಿಎಸ್‌ವೈ ಸ್ಪರ್ಧೆಗೆ ಇಳಿಸಿಲ್ಲ. 2008ರಲ್ಲಿ ಹೆಚ್‌ಡಿಕೆ ಅಧಿಕಾರ ನೀಡದೇ ವಚನ ಭ್ರಷ್ಟರಾದಾಗಿನಿಂದ ಸಿದ್ದು-ಬಿಎಸ್‌ವೈ ಒಂದಾದರು. ಜರ್ನಾದನ ರೆಡ್ಡಿ ವಿರುದ್ಧ ಸಿದ್ದು ತೊಡೆತಟ್ಟಿ ಸಮರಕ್ಕಿಳಿದಾಗಲೂ ಸಿದ್ದು ಜೊತೆ ಬಿಎಸ್‌ವೈ ಕಿತ್ತಾಟಕ್ಕೆ ಹೋಗಲಿಲ್ಲ ಎಂಬ ಮಾತಿದೆ. 2013ರಲ್ಲಿ ಕೆಜೆಪಿ ಕಟ್ಟಿ ಬಿಜೆಪಿಗೆ ಡ್ಯಾಮೇಜ್ ಆಗೋ ಹಾಗೆ ಮಾಡಿ ಸಿದ್ದು ಅಧಿಕಾರದ ಗದ್ದುಗೆ ಏರುವಂತೆ ಮಾಡಿದ್ದರು ಎನ್ನಲಾಗಿದೆ.

    ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಯಡಿಯೂರಪ್ಪ ಸೀಟು ಬಿಟ್ಟುಕೊಟ್ಟಿದ್ದರು. ಸಮ್ಮಿಶ್ರ ಸರ್ಕಾರ ಮಾಡಿದಾಗಲೂ ಕುಮಾರಸ್ವಾಮಿ ವಿರುದ್ಧ ಬಿಎಸ್‌ವೈ ಗುಡುಗಿದರು. ಆದರೆ ಸಿದ್ದರಾಮಯ್ಯ ವಿರುದ್ಧ ಮಾತಾಡಲಿಲ್ಲ. ಕಳೆದ ಬಾರಿ ಯತೀಂದ್ರ ವಿರುದ್ಧ ವಿಜಯೇಂದ್ರ ಕಣಕ್ಕೆ ಇಳಿದೇ ಬಿಟ್ಟರು ಎನ್ನುವಾಗ ಮಗನ ಸ್ಪರ್ಧೆ ಇಲ್ಲ ಅಂತ ಘೋಷಿಸಿದರು. ಈ ಬಾರಿಯೂ ವಿಜಯೇಂದ್ರ ಹೆಸರು ವರುಣಾದಲ್ಲೂ ಕೇಳಿಬಂದರೂ ಬಿಎಸ್‌ವೈ ಹಿಂಪಡೆದಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

  • ಕ್ಲೈಮ್ಯಾಕ್ಸ್ ಹಂತ ತಲುಪಿದ ಹಾಸನ ಟಿಕೆಟ್ ದಂಗಲ್ – ಇಂದು ಹೆಚ್‌ಡಿಕೆ, ರೇವಣ್ಣ ಸಂಧಾನ

    ಕ್ಲೈಮ್ಯಾಕ್ಸ್ ಹಂತ ತಲುಪಿದ ಹಾಸನ ಟಿಕೆಟ್ ದಂಗಲ್ – ಇಂದು ಹೆಚ್‌ಡಿಕೆ, ರೇವಣ್ಣ ಸಂಧಾನ

    ಹಾಸನ: ಹಾಸನ (Hassan) ಟಿಕೆಟ್ ದಂಗಲ್ ಕ್ಲೈಮ್ಯಾಕ್ಸ್ (Climax) ಹಂತಕ್ಕೆ ತಲುಪಿದ್ದು, ಭಾನುವಾರ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (H.D.Deve Gowda) ಹೆಚ್‌ಡಿ ಕುಮಾರಸ್ವಾಮಿ ಹಾಗೂ ಹೆಚ್‌ಡಿ ರೇವಣ್ಣ ಅವರ ಜೊತೆ ಮಾತನಾಡಿ ಸಂಧಾನ ಮಾಡಲಿದ್ದಾರೆ.

    ಸೋಮವಾರ ಜೆಡಿಎಸ್ (JDS) ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್‌ಡಿ ರೇವಣ್ಣ (H.D.Revanna) ದಂಪತಿ ಕೊನೆ ಕ್ಷಣದ ಕಸರತ್ತನ್ನು ನಡೆಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾಗಿ ಅವರ ಮನವೊಲಿಸುವ ಸಲುವಾಗಿ ರೇವಣ್ಣ ಹಾಗೂ ಅವರ ಪತ್ನಿ ಭವಾನಿ ರೇವಣ್ಣ (Bhavani Revanna) ಭಾನುವಾರ ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಈ ಮೂಲಕ ಕಟ್ಟ ಕಡೆಯ ಪ್ರಯತ್ನಕ್ಕೆ ರೇವಣ್ಣ ದಂಪತಿ ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ

    ಸೋಮವಾರ ಎರಡನೇ ಪಟ್ಟಿ ಬಿಡುಗಡೆ ಎಂದು ಕುಮಾರಸ್ವಾಮಿ (H.D.Kumaraswamy) ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಹೆಚ್‌ಡಿಕೆ ಹಾಗೂ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿ ಸಂಧಾನ ಮಾಡುವ ಸಾಧ್ಯತೆಯಿದೆ. ಇಬ್ಬರೂ ಒಮ್ಮತಕ್ಕೆ ಬಂದಲ್ಲಿ ನಾಳೆ ಹಾಸನ ಟಿಕೆಟ್ ಘೋಷಣೆಯಾಗುವ ಸಾಧ್ಯತೆಯಿದೆ. ರೇವಣ್ಣ ತಮ್ಮ ಪತ್ನಿ ಭವಾನಿಗೆ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸುತ್ತಿದ್ದರೆ ಇತ್ತ ಕುಮಾರಸ್ವಾಮಿ ಹೆಚ್‌ಪಿ ಸ್ವರೂಪ್ (H.P.Swaroop) ಬೆನ್ನಿಗೆ ನಿಂತಿದ್ದಾರೆ. ಇದನ್ನೂ ಓದಿ: ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ