Tag: H.D kote

  • ಕಬಿನಿ ಡ್ಯಾಂಗೆ ಶಿವಣ್ಣ ದಂಪತಿ ಭೇಟಿ

    ಕಬಿನಿ ಡ್ಯಾಂಗೆ ಶಿವಣ್ಣ ದಂಪತಿ ಭೇಟಿ

    – ಹಾಡಿ ಮಕ್ಕಳ ಜೊತೆ ಫೋಟೊ ತೆಗೆಸಿಕೊಂಡ ಹ್ಯಾಟ್ರಿಕ್‌ ಹೀರೋ

    ಮೈಸೂರು: ಮೈಸೂರಿನ (Mysuru) ಹೆಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿನ ಕಬಿನಿ ಡ್ಯಾಂಗೆ (Kabini Dam) ನಟ ಶಿವರಾಜ್ ಕುಮಾರ್ (Shivarajkumar) ತಮ್ಮ ಪತ್ನಿ ಸಮೇತ ಭೇಟಿ ನೀಡಿದ್ದರು.

    ಕಬಿನಿ ಡ್ಯಾಂನಲ್ಲಿ ಶಿವಣ್ಣ ಜೊತೆ ಫೋಟೊಗೆ ಅಭಿಮಾನಿಗಳು ಮುಗಿಬಿದ್ದರು. ರಸ್ತೆಯಲ್ಲಿ ಹೋಗುವಾಗ ಹಾಡಿ ಮಕ್ಕಳನ್ನ ಕಂಡು ಮಕ್ಕಳ ಜೊತೆ ಶಿವಣ್ಣ ದಂಪತಿ ಫೋಟೊ ತೆಗೆಸಿಕೊಂಡರು. ಇದನ್ನೂ ಓದಿ: `ಸ್ಮೋಕರ್ ಶಿವ’ ಚಿತ್ರಕ್ಕೆ ನೆನಪಿರಲಿ ಪ್ರೇಮ್ ಸಾಥ್

    1986ರಲ್ಲಿ ‘ಆನಂದ್‌’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಶಿವಣ್ಣ ಎಂಟ್ರಿ ಕೊಟ್ಟರು. ಸಿನಿ ಜರ್ನಿಯಲ್ಲಿ 40 ವರ್ಷ ಪೂರೈಸಿದ್ದಾರೆ. ಕನ್ನಡದ ಜನಮಾನಸದಲ್ಲಿ ಹ್ಯಾಟ್ರಿಕ್‌ ಹೀರೋ, ಸೆಂಚುರಿ ಸ್ಟಾರ್‌ ಆಗಿ ಉಳಿದಿದ್ದಾರೆ.

    ಶಿವರಾಜ್‌ಕುಮಾರ್‌ ಸದ್ಯ 125 ಸಿನಿಮಾಗಳನ್ನು ಪೂರೈಸಿದ್ದಾರೆ. ಸದ್ಯ ಅವರ ಕೈಯಲ್ಲಿ ಐದಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳಿವೆ. ಕೆಲ ದಿನಗಳ ಹಿಂದಷ್ಟೇ ಸಿನಿಪಯಣದಲ್ಲಿ 40 ವರ್ಷದ ಪೂರೈಸಿದ ಸಂಭ್ರಮವನ್ನು ಶಿವಣ್ಣ ಮಿಂದೆದ್ದರು. ಇದನ್ನೂ ಓದಿ: `ಮಹಾವತಾರ ಸಿನಿಮಾಟಿಕ್ ಯೂನಿವರ್ಸ್’ ಅನಾವರಣ – ಹೊಂಬಾಳೆ ಫಿಲ್ಮ್ಸ್ ದಿಟ್ಟ ಹೆಜ್ಜೆ

  • ಮಗನ ಎದುರೇ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

    ಮಗನ ಎದುರೇ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

    ಮೈಸೂರು: ಪತ್ನಿ (Wife) ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ (H.D Kote) ಹನುಮಂತ ನಗರದಲ್ಲಿ ನಡೆದಿದೆ.

    ಪತಿಯ ಕ್ರೌರ್ಯದಿಂದ ಗಾಯಗೊಂಡ ಮಹಿಳೆಯನ್ನು ಮಧುರ ಎಂದು ಗುರುತಿಸಲಾಗಿದೆ. ಆಕೆಯ ಗಂಡ ಮಲ್ಲೇಶ್ ನಾಯ್ಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಹಿಳೆಗೆ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವಿನ ಹೋರಾಟ ಮಾಡುತ್ತಿದ್ದಾರೆ.

    ಮಲ್ಲೇಶ್ ನಾಯ್ಕ್ ಮೂಲತಃ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲೂಕಿನ ಬಿಬಿ ತಾಂಡದವನು. ಕಳೆದ 8 ವರ್ಷಗಳ ಹಿಂದೆ ಅದೇ ಗ್ರಾಮದ ಮಧುರಳನ್ನ ವಿವಾಹವಾಗಿದ್ದ. ಸದ್ಯ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದಾನೆ.

    ಮಲ್ಲೇಶ್ ಆರೇಳು ವರ್ಷಗಳಿಂದ ಪತ್ನಿಗೆ ವರದಕ್ಷಿಣೆ ಕಿರುಕುಳ ( Dowry Case ) ಹಾಗೂ ಅನುಮಾನದಿಂದ ನೋಡುತ್ತಿದ್ದ. ಅಲ್ಲದೇ ಪ್ರತಿ ದಿನ ಕುಡಿದು ಬಂದು ತವರು ಮನೆಯಿಂದ ಸೈಟ್ ಕೊಡಿಸುವಂತೆ ಗಲಾಟೆ ಮಾಡುತ್ತಿದ್ದ. ಈ ನಡುವೆ ಕೆಲ ದಿನಗಳ ಹಿಂದೆ ಒಂದೆರೆಡು ದಿನಗಳ ಮಟ್ಟಿಗೆ ಮಧುರ ತವರು ಮನೆಗೆ ಹೋಗಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಪತ್ನಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ.

    ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹೊಟ್ಟೆ ತುಂಬ ಊಟ ಕೊಡಿ ಪ್ಲೀಸ್ – ಅರೆಹೊಟ್ಟೆಯಲ್ಲಿ ವಸತಿ ಶಾಲಾ ವಿದ್ಯಾರ್ಥಿನಿಯರ ಪರದಾಟ

    ಹೊಟ್ಟೆ ತುಂಬ ಊಟ ಕೊಡಿ ಪ್ಲೀಸ್ – ಅರೆಹೊಟ್ಟೆಯಲ್ಲಿ ವಸತಿ ಶಾಲಾ ವಿದ್ಯಾರ್ಥಿನಿಯರ ಪರದಾಟ

    – ಸರ್ಕಾರಿ ಹಾಸ್ಟೆಲ್‍ನಲ್ಲಿ ಅವ್ಯವಸ್ಥೆ
    – ಟೀ ಮಾಡಲು 65 ವಿದ್ಯಾರ್ಥಿಗಳಿಗೆ 1.ಲೀ ಹಾಲು

    ಮೈಸೂರು: ಹೆಚ್.ಡಿ.ಕೋಟೆ (H.D Kote) ಪಟ್ಟಣದಲ್ಲಿರುವ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ (Kasturba Gandhi hostel) ಸರಿಯಾಗಿ ಊಟ ನಿಡುತ್ತಿಲ್ಲ ಎಂದು ವಿದ್ಯಾರ್ಥಿನಿಯರು (Students)  `ಪಬ್ಲಿಕ್ ಟಿವಿ’ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಕಳೆದ 15 ದಿನಗಳಿಂದ ವಸತಿ ನಿಲಯದಲ್ಲಿ ಸರಿಯಾದ ಊಟ ನೀಡುತ್ತಿಲ್ಲ. ವಸತಿ ನಿಲಯದಲ್ಲಿ ಆಹಾರ ಪದಾರ್ಥಗಳಿಲ್ಲದೆ ನಮಗೆ ಹೊಟ್ಟೆ ತುಂಬ ಊಟ ಸಿಗುತ್ತಿಲ್ಲ. ಕಾಫಿ, ಟೀ ಕೂಡ ಸರಿಯಾಗಿ ಸಿಗುತ್ತಿಲ್ಲ. 65 ವಿದ್ಯಾರ್ಥಿನಿಯರಿಗೆ 1 ಲೀಟರ್ ಹಾಲು ನೀಡಲಾಗುತ್ತಿದೆ. ಎಲ್ಲಾ ವಿದ್ಯಾರ್ಥಿನಿಯರ ಊಟಕ್ಕೆ ಕೇವಲ 5.5 ಕೆಜಿ ಸೊಸೈಟಿ ಅಕ್ಕಿ ಕೊಡಲಾಗುತ್ತದೆ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮೇಲ್ವಿಚಾರಕಿ, ಆಹಾರ ಪದಾರ್ಥ ಪೂರೈಸುವ ಗುತ್ತಿಗೆದಾರರು ಕೊಡುವ ಆಹಾರ ಪದಾರ್ಥದಿಂದಷ್ಟೇ ನಾನು ವಿದ್ಯಾರ್ಥಿನಿಯರಿಗೆ ಆಹಾರ ತಯಾರಿಸಿ ಕೊಡಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಆಹಾರ ಸಾಮಾಗ್ರಿಗಳನ್ನು ಪೂರೈಸುತ್ತಿದ್ದ ಗುತ್ತಿಗೆದಾರ, ಕಡಿಮೆ ದರಕ್ಕೆ ಟೆಂಡರ್ ಪಡೆದುಕೊಂಡಿದ್ದು ಆ ದರದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಪೂರೈಸಲು ಸಾಧ್ಯವಾಗುತ್ತಿಲ್ಲ. ನಾನು ಪಡೆದುಕೊಂಡಿದ್ದ ಟೆಂಡರ್ ಅವಧಿ ಪೂರ್ಣಗೊಂಡಿದೆ. ನನ್ನ ಟೆಂಡರ್ ರದ್ದುಗೊಳಿಸಲು ಪತ್ರ ಬರೆದಿದ್ದೇನೆ. ನನಗೂ ಹಾಸ್ಟೆಲ್‍ಗೂ ಯಾವ ಸಂಬಂಧ ಇಲ್ಲ ಎಂದಿದ್ದಾರೆ.

    ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಇದಾಗಿದೆ.

  • 500 ವರ್ಷ ಇತಿಹಾಸ ಹೊಂದಿದ ದೇವಸ್ಥಾನಕ್ಕೆ ಭೇಟಿ ನೀಡಿದ ಸೋನಿಯಾ

    500 ವರ್ಷ ಇತಿಹಾಸ ಹೊಂದಿದ ದೇವಸ್ಥಾನಕ್ಕೆ ಭೇಟಿ ನೀಡಿದ ಸೋನಿಯಾ

    ಮೈಸೂರು: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ(Sonia Gandhi) ಅವರು ವಿಜಯದಶಮಿ(Vijayadashami ) ಹಬ್ಬದ ಹಿನ್ನೆಲೆಯಲ್ಲಿ ಹೆಚ್ ಡಿ ಕೋಟಿ ತಾಲ್ಲೂಕಿನಲ್ಲಿರುವ ದೇವಸ್ಥಾನದಲ್ಲಿ(Temple) ಪೂಜೆ ಸಲ್ಲಿಸಿದ್ದಾರೆ.

    ಕಬಿನಿ ಹಿನ್ನಿರಿನಲ್ಲಿರುವ ಭೀಮನಕೊಲ್ಲಿ ದೇವಸ್ಥಾನಕ್ಕೆ(Bheemanakolli Temple) ಭೇಟಿ ನೀಡಿದ ಸೋನಿಯಾ ಗಾಂಧಿ ಮಹದೇಶ್ವರನ ದರ್ಶನ ಪಡೆದರು. ಕಬಿನಿ(Kabini) ಹಿನ್ನಿರಿನಲ್ಲಿರುವ ಮಹದೇಶ್ವರ ದೇವಸ್ಥಾನಕ್ಕೆ 500 ವರ್ಷಗಳ ಇತಿಹಾಸವಿದೆ. ಇಲ್ಲಿ ದೇವರ ಮೂರ್ತಿಯನ್ನು ತಂದು ಪ್ರತಿಷ್ಠೆ ಮಾಡಿದ್ದಲ್ಲ, ಇದು ಉದ್ಭವ ಮೂರ್ತಿ ಎಂಬ ನಂಬಿಕೆಯಿದೆ.

    ದೇವಸ್ಥಾನಕ್ಕೆ ಭೇಟಿ ನೀಡಿದ ಸೋನಿಯಾಗೆ ಅನುಷಾ ಎಂಬುವವರು ಮಹದೇಶ್ವರ ಸ್ವಾಮಿ ದೇವಸ್ಥಾನ ಹಿನ್ನೆಲೆಯ ಬಗ್ಗೆ ವಿವರಣೆ ನೀಡಿದ್ದಾರೆ. ಸೋನಿಯಾ ಗಾಂಧಿ ಭೇಟಿ ವೇಳೆ ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು ಸಾಥ್ ನೀಡಿದರು.

    ಸೋನಿಯಾ ಗಾಂಧಿ ಅವರು ತಮ್ಮ ಪುತ್ರ, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲು ಸೋಮವಾರ ಆಗಮಿಸಿದ್ದಾರೆ. ಇದನ್ನೂ ಓದಿ: ಕ್ರೀಸ್ ಬಿಟ್ಟರೆ ಉಳಿಗಾಲವಿಲ್ಲ ಸ್ಟಬ್ಸ್‌ಗೆ ಚಹರ್ ವಾರ್ನಿಂಗ್ – ಕಣ್ಸನ್ನೆಯಲ್ಲೇ ಮಾತುಕತೆ

    ಸೋನಿಯಾ ಗಾಂಧಿ ಅವರು ಕೊಡಗಿನ ರೆಸಾರ್ಟ್‌ನಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ವಾಸ್ತವ್ಯ ಹೂಡಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ನಲ್ಲಿ ಕೊಡಗಿಗೆ ತೆರಳಲು ಸಾಧ್ಯವಾಗಲಿಲ್ಲ. ಹೀಗಾಗಿ,ಎಚ್‌.ಡಿ. ಕೋಟೆ ತಾಲೂಕು ಕಬಿನಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಸೋನಿಯಾ ಗಾಂಧಿ ಅವರು ಶುಕ್ರವಾರ ಬೆಳಗ್ಗೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನ್ಯಾಯಕ್ಕಾಗಿ ನ್ಯಾಯಾಲಯದ ಆವರಣದಲ್ಲಿ ಬಿದ್ದು ಹೊರಳಾಡಿದ ಮಹಿಳೆ

    ನ್ಯಾಯಕ್ಕಾಗಿ ನ್ಯಾಯಾಲಯದ ಆವರಣದಲ್ಲಿ ಬಿದ್ದು ಹೊರಳಾಡಿದ ಮಹಿಳೆ

    ಮೈಸೂರು: ನ್ಯಾಯಕ್ಕಾಗಿ ನ್ಯಾಯಾಲಯದ ಆವರಣದಲ್ಲಿಯೇ ಮಹಿಳೆ ಬಿದ್ದು ಹೊರಳಾಡಿದ ಮನಕಲಕುವ ಘಟನೆ ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

    ಹೆಚ್.ಡಿ.ಕೋಟೆಯ ಲಕ್ಷ್ಮಿ ಅವರ ಆಕ್ರಂದನದ ಕಣ್ಣೀರು ಕೋರ್ಟ್ ಆವರಣದಲ್ಲಿದ್ದ ಜನರ ಕಣ್ಣಾಲಿಗಳು ತೇವಗೊಳ್ಳುವಂತೆ ಮಾಡಿದ್ದವು. 2005ರಲ್ಲಿ ಪಿರಿಯಾಪಟ್ಟಣ ತಾಲೂಕು ಬೈಲುಕುಪ್ಪೆಯ ಸತೀಶ್ ಎಂಬಾತನ ಜೊತೆ ಲಕ್ಷ್ಮಿ ವಿವಾಹವಾಗಿತ್ತು. ಹೆಣ್ಣು ಮಗು ಹುಟ್ಟಿದ್ದರಿಂದ ಸತೀಶ್ ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದನು. ಅಲ್ಲದೇ ಮತ್ತೊಬ್ಬ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿರುವ ಬಗ್ಗೆಯೂ ಆರೋಪಗಳು ಕೇಳಿ ಬಂದಿದೆ.

    ಲಕ್ಷ್ಮಿ ಅವರಿಗೆ ವಿಚ್ಛೇದನ ನೀಡದ ಸತೀಶ್ ಅಕ್ರಮ ಸಂಬಂಧ ಮುಂದುವರಿಸಿದ್ದನು. ಇದರಿಂದ ಬೇಸತ್ತ ಲಕ್ಷ್ಮಿ, ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಶುಕ್ರವಾರ ವಿಚಾರಣೆಗೆ ಲಕ್ಷ್ಮಿ ಮಗಳು ಹರ್ಷಿತಾ ಜೊತೆ ಆಗಮಿಸಿದ್ದರು. ನ್ಯಾಯಾಲಯದ ಆವರಣದಲ್ಲಿ ತಂದೆಯನ್ನ ಕಂಡ ಹರ್ಷಿತಾ ಮತನಾಡಿಸಲು ಹೋಗಿದ್ದಾಳೆ. ತನ್ನ ಮುಂದಿನ ಭವಿಷ್ಯಕ್ಕಾದ್ರೂ ಸಹಾಯ ಮಾಡುವಂತೆ ತಂದೆಯ ಬಳಿ ಮನವಿ ಮಾಡಿಕೊಂಡಿದ್ದಾಳೆ.

    ಈ ವೇಳೆ ಸತೀಶ್ ಕೆಟ್ಟ ಪದಗಳಿಂದ ಮಗಳನ್ನ ನಿಂದಿಸಿದ್ದಾನೆ. ಅಲ್ಲಿಯೇ ಇದ್ದ ಲಕ್ಷ್ಮಿ ಪತಿಯನ್ನ ಪ್ರಶ್ನಿಸಿಸಿದ್ದಕ್ಕೆ ಪತ್ನಿಯನ್ನು ಅವಾಚ್ಯ ಪದಗಳಿಂದ ರಸ್ತೆಯಲ್ಲಿ ತಳ್ಳಿ ಪರಾರಿಯಾಗಿದ್ದಾನೆ. ಪತಿಯ ವರ್ತನೆಗೆ ಬೇಸತ್ತ ಲಕ್ಮಿ ರಸ್ತೆಯಲ್ಲಿಯೇ ಕುಳಿತು ಆವರಣದಲ್ಲಿ ಕಣ್ಣೀರು ಹಾಕಿದ್ದಾರೆ.

  • ನಾಗರಹೊಳೆ, ಬಂಡೀಪುರ ಸಫಾರಿ ಬಂದ್

    ನಾಗರಹೊಳೆ, ಬಂಡೀಪುರ ಸಫಾರಿ ಬಂದ್

    ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

    ಜುಲೈ 10ರಿಂದ ಮುಂದಿನ ಆದೇಶದವರೆಗೆ ಹೊರ ಜಿಲ್ಲೆ/ರಾಜ್ಯ/ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಹೆಚ್.ಡಿ.ಕೋಟೆ ತಾಲೂಕಿನ ಎಲ್ಲ ಹೋಟೆಲ್, ರೆಸಾರ್ಟ್, ಲಾಡ್ಜ್, ಹೋಂ ಸ್ಟೇಗಳಲ್ಲಿ ವಸತಿ ಸೌಕರ್ಯ ನೀಡಕೂಡದು. ಮುಂದಿನ ಹೊರಭಾಗದ ಪ್ರವಾಸಿಗರ ಆನ್‍ಲೈನ್ ಅಥವಾ ಆಫ್‍ಲೈನ್ ಮುಂತಾದ ರೂಪದ ಬುಕ್ಕಿಂಗ್ ಮಾಡಿಕೊಳ್ಳಬಾರದು.

    ಸದ್ಯ ವಸತಿ ಸೌಕರ್ಯ ಪಡೆದುಕೊಂಡಿರುವ ಪ್ರವಾಸಿಗರನ್ನು ಬಲವಂತವಾಗಿ ಕಳಿಸಕೂಡದು. ಅವರ ಬುಕ್ಕಿಂಗ್ ಅವಧಿ ಮುಗಿಯವರೆಗೂ ಸೇವೆ ನೀಡತಕ್ಕದ್ದು ಎಂದು ಆದೇಶಿಸಿದೆ. ಪ್ರವಾಸಿ ಉದ್ದೇಶಕ್ಕೆ ಮುಂಗಡ ಬುಕ್ಕಿಂಗ್ ಮಾಡಿ ಆಗಮಿಸಿರದಿದ್ದಲ್ಲಿ ಸೂಕ್ತ ಮಾಹಿತಿ ನೀಡಿ ಬುಕ್ಕಿಂಗ್ ರದ್ದುಗೊಳಿಸಬೇಕು.

    ಹೆಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯಲ್ಲಿ ಬರುವ ದಮ್ಮನಕಟ್ಟೆ, ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳಲ್ಲಿ ಬರುವ ಎಲ್ಲ ಸಫಾರಿಗಳಿಗೂ ಸಹ ಅನ್ವಯವಾಗುತ್ತದೆ. ಮುಂದಿನ ಆದೇಶದವರೆಗು ಇಡೀ ತಾಲೂಕಿನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವಂತಿಲ್ಲ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

  • ಅಕ್ಕನ ಆರೈಕೆಗಾಗಿ ಶಾಲೆ ಬಿಟ್ಟು ಕೂಲಿಗೆ ಸೇರಿದ ತಮ್ಮ

    ಅಕ್ಕನ ಆರೈಕೆಗಾಗಿ ಶಾಲೆ ಬಿಟ್ಟು ಕೂಲಿಗೆ ಸೇರಿದ ತಮ್ಮ

    -ಹೆತ್ತವರಿಲ್ಲದೇ ಸಹಾಯ ಹಸ್ತ ಬಯಸುತ್ತಿರುವ ಬಡ ಜೀವಗಳು

    ಮೈಸೂರು: ಅಕ್ಕ-ತಮ್ಮ ಬಾಂಧವ್ಯ, ಅಣ್ಣ-ತಂಗಿಯ ಬಾಂಧವ್ಯ ಯಾವತ್ತೂ ಅಮರ. ಅಕ್ಕನಿಗಾಗಿ, ತಂಗಿಗಾಗಿ ಸಹೋದರ ಏನೂ ಬೇಕಾದರೂ ಮಾಡುತ್ತಾನೆ. ಯಾವ ತ್ಯಾಗಕ್ಕೂ ಬೇಕಾದರೂ ಸಿದ್ಧನಾಗುತ್ತಾನೆ. ಈ ಮಾತಿಗೆ ಸಾಕ್ಷಿ ಎನ್ನುವಂತಹ, ಮನ ಕಲುಕುವ ಸುದ್ದಿ ಇದಾಗಿದ್ದು, ತಂದೆ ತಾಯಿಯನ್ನು ಕಳೆದುಕೊಂಡ ಬಾಲಕ, ಪಾರ್ಶ್ವವಾಯು ರೋಗಕ್ಕೆ ಒಳಗಾದ ಅಕ್ಕನ ಆರೈಕೆಗಾಗಿ ಶಾಲೆ ಬಿಟ್ಟು ಕೂಲಿ ಮಾಡುತ್ತಿದ್ದಾನೆ.

    ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಅಲನಹಳ್ಳಿ ಗ್ರಾಮದ ಮಂಜುಳಾ ಮತ್ತು ಕುಮಾರ್ ದಂಪತಿ ಪುತ್ರ ಆಕಾಶ್(15) ತನ್ನ ಅಕ್ಕ ಅನುಷಾ(17) ಆರೈಕೆಗಾಗಿ ಓದು ಬಿಟ್ಟು ಕೂಲಿಗೆ ಇಳಿದಿದ್ದಾನೆ. ಅನಾರೋಗ್ಯದಿಂದ ಇವರ ತಂದೆ ತಾಯಿ ಮೃತಪಟ್ಟಿದ್ದಾರೆ. ಗ್ರಾಮದ ಟಿ.ಎಸ್ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಆಕಾಶ್ 8ನೇ ತರಗತಿ ಓದುತ್ತಿದ್ದ. ಹೆತ್ತವರು ಮೃತಪಟ್ಟ ಕಾರಣ ರೋಗ ಪೀಡಿತ ಅಕ್ಕನ ನೋಡಿಕೊಳ್ಳಲು ಯಾರು ಇಲ್ಲದೆ, ಮನೆ ನಿರ್ವಹಣೆಗೆ ದಾರಿಯೂ ಇಲ್ಲದ ಕಾರಣ ಶಾಲೆ ಬಿಟ್ಟು ಕೂಲಿ ಮಾಡುತ್ತಿದ್ದಾನೆ.

    ಅಕ್ಕನಿಗೆ ಕೈ ಕಾಲುಗಳು ಸ್ವಾಧೀನ ಇಲ್ಲ. ಆಕೆಯ ನಿತ್ಯ ಕರ್ಮ ಪೂರೈಸಲು, ಊಟ ಮಾಡಿಸಲು, ಬಟ್ಟೆ ಬದಲಿಸಲು ತಮ್ಮ ನೆರವಾಗುತ್ತಿದ್ದಾನೆ. ಅಕ್ಕನ ಕೆಲಸ ಮುಗಿಸಿ ಕೂಲಿಗೆ ಹೋಗುತ್ತಿದ್ದಾನೆ. ಸಂಜೆ ಮನೆಗೆ ಬಂದು ಅಡುಗೆ ಮಾಡಿ ಅಕ್ಕನಿಗೆ ಊಟ ಮಾಡಿಸುತ್ತಾನೆ. ಈ ಅನಾಥ ಅಕ್ಕ-ತಮ್ಮನಿಗೆ ಉಳ್ಳವರ ಸಹಾಯ ಬೇಕಿದೆ.

    ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲ್ಲೂಕಿನ ಹಾಲಹಳ್ಳಿ ಆಕಾಶ್ ಮನೆಗೆ ತಹಸೀಲ್ದಾರ್ ಆರ್ ಮಂಜುನಾಥ್ ಭೇಟಿ ನೀಡಿದ್ದರು. ಅನುಷಾಳಿಗೆ ಮೆದುಳು ನಿಷ್ಕ್ರಿಯ ಕಾಯಿಲೆ(ಸೆಬರ್ ಪಾಲ್ಸಿ) ಎಂಬ ಕಾಯಿಲೆ ಇದ್ದು, ಆಕೆಗೆ ಯಾವುದೇ ಸ್ವಾಧೀನ ಇರುವುದಿಲ್ಲ ಹೀಗಾಗಿ ಆಕೆಯನ್ನು ಮೈಸೂರಿನ ಕರುಣಾಲಯ ಟ್ರಸ್ಟ್ ಗೆ ಸ್ಥಳಾಂತರಿಸಿ ಆಕೆಯ ಶುಶ್ರೂಷೆಯನ್ನು ಮಾಡಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

    ಇತ್ತ ಆಕಾಶ್‍ನನ್ನು ಮೈಸೂರಿನ ಬಾಲಮಂದಿರಕ್ಕೆ ಸೇರಿಸಿ ಶಿಕ್ಷಣ ಕೊಡಿಸಲಾಗುವುದು ಎಂದು ತಿಳಿಸಿದಾಗ, ಬಾಲಕ ಆಲನಹಳ್ಳಿಯ ಶಾಲೆಯಲ್ಲಿ ಓದುತ್ತೇನೆ ನನಗೆ ಹಾಸ್ಟೆಲ್ ವ್ಯವಸ್ಥೆ ಮಾಡಿಕೊಡಿ ಎಂದು ಹೇಳಿದ್ದಾನೆ. ಆತನ ಇಚ್ಛೆಯಂತೆ ಕ್ಯಾತನಹಳ್ಳಿಯಲ್ಲಿ ಹಾಸ್ಟೆಲ್ ಇದ್ದು ಆತನನ್ನು ಅಲ್ಲಿಗೇ ಸೇರಿಸಿ ಶಿಕ್ಷಣ ಮುಂದುವರಿಸಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.