Tag: h d kumarswamy

  • ನನ್ನನ್ನು, ದೇವೇಗೌಡರನ್ನು ಮುಗಿಸೋಕೆ ಯಾರಿಂದಲೂ ಆಗಲ್ಲ: ಹೆಚ್.ಡಿ.ರೇವಣ್ಣ

    ನನ್ನನ್ನು, ದೇವೇಗೌಡರನ್ನು ಮುಗಿಸೋಕೆ ಯಾರಿಂದಲೂ ಆಗಲ್ಲ: ಹೆಚ್.ಡಿ.ರೇವಣ್ಣ

    ಹಾಸನ: ಕೆಲವರನ್ನು ನಾನೇ ಮೇವು ಹಾಕಿ ಸಾಕಿದ್ದೇನೆ, ಈಗ ಅವು ನನ್ನ ಮೇಲೆಯೇ ಕುಸ್ತಿ ಮಾಡ್ತಿದ್ದಾವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ (H D Revanna) ಬೇಸರ ಹೊರಹಾಕಿದ್ದಾರೆ.

    ಜಿಲ್ಲೆಯ ಹಾಲು ಒಕ್ಕೂಟ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ನಾನು ಶಾಸಕನಾಗಿ 30 ವರ್ಷ ಆಯ್ತು. ನಾನು ಕೆಲಸ ಮಾಡಿದ್ದೀನಿ. ನನ್ನ ಮನೆ ಕೆಲಸ ಮಾಡಿಲ್ಲ. ಒಂದು ಕಾರು ತಗೊಳೋಕೆ ಆಗಿಲ್ಲ. ರೇವಣ್ಣ ಅವರನ್ನು ಮುಗಿಸುತ್ತೇವೆ ಎಂದಿದ್ದಾರೆ. ರೇವಣ್ಣ ಅವರನ್ನು, ದೇವೇಗೌಡರನ್ನು (H D Devegowda) ಮುಗಿಸೋಕೆ ಯಾರಿಂದಲೂ ಆಗಲ್ಲ. 1500 ಸೊಸೈಟಿ ನಡೆಸುವುದು ಸುಲಭ ಅಲ್ಲ. ಕೆಲವರನ್ನು ನಾನೇ ಹದಿನೈದು, ಇಪ್ಪತ್ತು ವರ್ಷ ಮೇವು ಹಾಕಿ ಸಾಕಿದ್ದೆ. ಈಗ ಅವು ನನ್ನ ಮೇಲೆ ಕುಸ್ತಿ ಮಾಡ್ತಿದ್ದಾವೆ. ಎಲ್ಲಿ ಹೋಗ್ತಾರೆ ನನ್ ಕೈಗೆ ಸಿಗದೇ, ಕಾಯ್ತಾ ಇದ್ದೀನಿ. ಯಾವುದು ಏನ್ ಇವತ್ತಿಗೆ ಮುಗಿಯಲ್ಲ ಎಂದು ವಿರೋಧಿಗಳ ವಿರುದ್ಧ ಗುಡುಗಿದ್ದಾರೆ.ಇದನ್ನೂ ಓದಿ: ಮದುವೆಯಾಗ್ತೀನಿ ಅಂತಾ ಎಣ್ಣೆ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುರುಳು

    ಏನೋ ಒಂದ್ ಕೇಸ್ ಹಾಕಿ ರೇವಣ್ಣನನ್ನ ಹೆದರಿಸುತ್ತೀನಿ ಅನ್ಕೊಂಡಿದ್ದೀರಾ? ನಾನೇನು ಹೆದರಿ ಓಡಿ ಹೋಗೋದಿಲ್ಲ. ರೇವಣ್ಣ ಅವರನ್ನು, ದೇವೇಗೌಡರನ್ನು ಮುಗಿಸೋಕೆ ಯಾರಿಂದಲೂ ಆಗಲ್ಲ. ದೇವರೇ ಶಿಕ್ಷೆ ಕೊಡುವ ಕಾಲ ಬರುತ್ತದೆ. ಈಗಲೇ ಏನೂ ಹೇಳಲ್ಲ ನಾಲ್ಕೈದು ತಿಂಗಳು ಕಳೀಲಿ. ದೇವೇಗೌಡರಿಗೆ, ನನಗೆ, ಕುಮಾರಸ್ವಾಮಿಗೆ (H D Kumarswamy) ಶಕ್ತಿ ಕೊಟ್ಟಿರುವ ಜಿಲ್ಲೆ ಇದು. ನನ್ನ ಆಸೆ ಈ ಜಿಲ್ಲೆಯನ್ನು ನಂಬರ್ ಒನ್ ಮಾಡಬೇಕು ಎನ್ನುವುದು ಎಂದಿದ್ದಾರೆ.

    ಇದೇ ವೇಳೆ ದೇವಗೌಡರ ಕುರಿತು ಮಾತನಾಡಿದ ಅವರು, ದೇವೇಗೌಡರು ಅಂದ್ರೆ ಒಂದು ಶಕ್ತಿ. ಅವರು ಇಲ್ಲಾ ಅಂದ್ರೆ ಯಾರು ಕೇಳುತ್ತಾರೆ. ಈ ವಯಸ್ಸಿನಲ್ಲಿ ಕಾಶ್ಮೀರಕ್ಕೆ ಹೋಗಿದ್ದರು. ಅಲ್ಲಿ ಅವರ ಕಾಲದಲ್ಲಿ ಮಾಡಿದ ಯೋಜನೆಯನ್ನು ನೋಡಿ ಬಂದಿದ್ದಾರೆ. ನಾವು ಇನ್ನು ಮೂರ್ನಾಲ್ಕು ವರ್ಷ ಹೋದರೆ ಮೂಲೇಲಿ ಕೂತ್ಕೋತೀವಿ ದೇವೇಗೌಡರಿಗೆ 92 ವರ್ಷವಾದರೂ ಓಡಾಡ್ತಾರೆ. ಅವರು ಕೇವಲ ಹತ್ತೂವರೆ ತಿಂಗಳಲ್ಲಿ ಇಡೀ ದೇಶಕ್ಕೆ ಮಾದರಿ ಕೆಲಸ ಮಾಡಿದ್ದಾರೆ. ಸಮಯ ಬಂದಾಗ ವಿಧಾನಸಭೆಯಲ್ಲಿ ಎಳೆ ಎಳೆಯಾಗಿ ಬಿಡಿಸಿ ಹೇಳ್ತೇನೆ ಎಂದು ಸಿಡಿದಿದ್ದಾರೆ.ಇದನ್ನೂ ಓದಿ: ಗುಡಿ ಗೋಪುರವಿಲ್ಲದ ʼಸೌತಡ್ಕ ಮಹಾಗಣಪತಿʼಗೆ ಬಯಲೇ ಆಲಯ!

  • ಆಪರೇಷನ್ ಹಸ್ತದ ನಡುವೆ ಮಂಡ್ಯ ನಗರಸಭೆ ಗದ್ದುಗೆ ಏರಿದ ಜೆಡಿಎಸ್-ಬಿಜೆಪಿ

    ಆಪರೇಷನ್ ಹಸ್ತದ ನಡುವೆ ಮಂಡ್ಯ ನಗರಸಭೆ ಗದ್ದುಗೆ ಏರಿದ ಜೆಡಿಎಸ್-ಬಿಜೆಪಿ

    ಮಂಡ್ಯ: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ (JDS-BJP) ಹಾಗೂ ಕಾಂಗ್ರೆಸ್ (Congress) ನಡುವೆ ತೀವ್ರ ಪೈಪೋಟಿ ಎದುರಾಗಿ ಕೊನೆಗೆ ಸಿನಿಮೀಯ ಮಾದರಿಯಲ್ಲಿ ಜೆಡಿಎಸ್-ಬಿಜೆಪಿ ಮಂಡ್ಯ (Mandya) ನಗರಸಭೆ ಗದ್ದುಗೆ ಏರಿದೆ.

    ಹಳ್ಳಿ ಎಲೆಕ್ಷನ್ ಇರಲಿ. ದಿಲ್ಲಿ ಎಲೆಕ್ಷನ್ ಇರಲಿ. ಅದು ರಾಜ್ಯದಲ್ಲಿ ಚರ್ಚೆ ಆಗೋದಂತೂ ಗ್ಯಾರಂಟಿ. ಅಂತಹದ್ದೆ ರಾಜಕೀಯ ಸೌಂಡ್‌ನ್ನು ಇಂದು ಮಂಡ್ಯದ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮಾಡಿದೆ. ನಗರಸಭೆಯ ಗದ್ದುಗೆಯನ್ನು ಏರಲು ಸಚಿವ ಚಲುವನಾರಾಯಣಸ್ವಾಮಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಇದರ ನೇತೃತ್ವವನ್ನು ಕಾಂಗ್ರೆಸ್‌ನಲ್ಲಿ ಶಾಸಕ ರವಿಕುಮಾರ್ ಗೌಡಗೆ ನೀಡಿದ್ದರು. ಈ ಪ್ರತಿಷ್ಠೆಯ ಸವಾಲನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಹ ಸ್ವೀಕಾರ ಮಾಡಿ ತೊಡೆ ತಟ್ಟಿ ಅಖಾಡಕ್ಕೆ ಧುಮುಕಿದರು.ಇದನ್ನೂ ಓದಿ: ದುಡ್ಡಿದ್ರೆ ಏನಾದರೂ ಮಾಡಬಹುದು ಅನ್ನೋದನ್ನು ನಾನು ಒಪ್ಪಲ್ಲ: ಉಮೇಶ್ ಬಣಕಾರ್

    ಮಂಡ್ಯ ನಗರಸಭೆಯಲ್ಲಿ 35 ಸದಸ್ಯರ ಬಲವಿದ್ದು, ಈ ಪೈಕಿ ಕಾಂಗ್ರೆಸ್ 10, ಜೆಡಿಎಸ್ 18, ಬಿಜೆಪಿ 2 ಹಾಗೂ ಪಕ್ಷೇತರ 5 ಸದಸ್ಯರು ಇದ್ದರು. ನಗರಸಭೆ ಗದ್ದುಗೆ ಏರಲು 19 ಮತಗಳು ಅನಿವಾರ್ಯವಾಗಿತ್ತು. ಹೀಗಾಗಿ ಕಾಂಗ್ರೆಸ್ ತಮ್ಮ 10 ಸದಸ್ಯರ ಜೊತೆಗೆ ಪಕ್ಷೇತರ 5 ಮಂದಿಯನ್ನು ಒಟ್ಟುಗೂಡಿಸಿ, ಶಾಸಕರ 1 ಮತದ ಜೊತೆಗೆ ಜೆಡಿಎಸ್ 3 ಸದಸ್ಯರನ್ನು ಆಪರೇಷನ್ ಮಾಡಿ 19 ಮತ ಪಡೆದು ಅಧಿಕಾರ ಹಿಡಿಯಲು ಮುಂದಾಗಿತ್ತು. ಕಾಂಗ್ರೆಸ್, ಜೆಡಿಎಸ್‌ನ 3 ಸದಸ್ಯರನ್ನು ಆಪರೇಷನ್ ಮಾಡಿತು. ಇತ್ತ ಜೆಡಿಎಸ್, ಕಾಂಗ್ರೆಸ್‌ನ ಓರ್ವ ಸದಸ್ಯನನ್ನು ಆಪರೇಷನ್ ಮಾಡಿತು.

    ಇಂದು ಕಾಂಗ್ರೆಸ್ ಸದಸ್ಯರು ಹಾಗೂ ಓರ್ವ ಆಪರೇಷನ್ ಮಾಡಿದ ಸದಸ್ಯರನ್ನು ಶಾಸಕ ರವಿಕುಮಾರ್ (Ravikumar Gowda) ನಗರಸಭೆಗೆ ಬಸ್‌ನಲ್ಲಿ ಕರೆತಂದರು. ಬಳಿಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumarswamy) ಸಹ ತಮ್ಮ ಸದಸ್ಯರು ಹಾಗೂ ಓರ್ವ ಕಾಂಗ್ರೆಸ್ ಸದಸ್ಯನ್ನು ಬಸ್‌ನಲ್ಲಿ ಕರೆತಂದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೆ ವಾತಾವರಣ ನಿರ್ಮಾಣವಾಯಿತು. ಕುಮಾರಸ್ವಾಮಿ ಅವರು ಇದ್ದರೂ ಸಹ ವಾತಾವರಣ ತಿಳಿಯಾಗಲಿಲ್ಲ. ಬಳಿಕ ನಗರ ಪೊಲೀಸರು ಬಂದು ವಾತಾವರಣವನ್ನು ತಣ್ಣಗೆ ಮಾಡಿದರು.ಇದನ್ನೂ ಓದಿ: ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿ ಭಾವಚಿತ್ರ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ

    ಬಳಿಕ ನಗರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ನ ಓರ್ವ ಸದಸ್ಯನ ಮತ ಸೇರಿ 19 ಮತಗಳು ಬಿದ್ದವು. ಇನ್ನೂ ಕಾಂಗ್ರೆಸ್‌ಗೆ ಶಾಸಕ ರವಿಕುಮಾರ್, ಜೆಡಿಎಸ್‌ನ ಮೂವರು ಸದಸ್ಯರು ಸೇರಿದಂತೆ 18 ಮತಗಳು ಬಿದ್ದವು. ಈ ಮೂಲಕ ಒಂದು ಮತದಿಂದ ಜೆಡಿಎಸ್‌ನ ನಾಗೇಶ್ ಅಧ್ಯಕ್ಷರಾಗಿ, ಬಿಜೆಪಿಯ ಅರುಣ್‌ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಶಾಸಕ ರವಿಕುಮಾರ್ ಜೆಡಿಎಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಸದಸ್ಯರನ್ನು ಬೆದರಿಸಿ ಅಧಿಕಾರ ಹಿಡಿದಿದೆ ಎಂದು ಆರೋಪ ಮಾಡಿದರು. ಇದಕ್ಕೆ ಕೌಂಟರ್ ಆಗಿ ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮದೇ ಶೈಲಿಯಲ್ಲಿ ಎದುರೇಟು ನೀಡಿದರು.

  • ಗನ್ ತೋರಿಸಿ ವಿಧವೆಯರಿಂದ ನಿವೇಶನ ಕಬ್ಜ ಮಾಡಿದ್ದು ಡಿಕೆಶಿ: ಹೆಚ್‍ಡಿಕೆ ಬಾಂಬ್

    ಗನ್ ತೋರಿಸಿ ವಿಧವೆಯರಿಂದ ನಿವೇಶನ ಕಬ್ಜ ಮಾಡಿದ್ದು ಡಿಕೆಶಿ: ಹೆಚ್‍ಡಿಕೆ ಬಾಂಬ್

    – ಬಿಡದಿಯಲ್ಲಿ 20 ಟನ್ ಕೊಬ್ಬರಿ ಬೆಳೆದಿದ್ದೇನೆ – ರೈತನಲ್ಲ ಎಂದ ಡಿಸಿಎಂಗೆ ತಿರುಗೇಟು

    ರಾಮನಗರ: ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumarswamy) ಮತ್ತೆ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರಿಗೆ ಸವಾಲು ಹಾಕಿದ್ದಾರೆ.

    ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನವಾದ ಇಂದು ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳುತ್ತಾರೆ. ಆ ನಿವೇಶನಕ್ಕೆ ಸಂಪೂರ್ಣವಾಗಿ ಹಣ ಕೊಟ್ಟಿಲ್ಲ. ಕಾಂಗ್ರೆಸ್ ನಾಯಕ ಅಲ್ಲಂ ವೀರಭದ್ರಪ್ಪ ಅವರು ಒಂದು ನಿವೇಶನ ಖರೀದಿ ಮಾಡುವುದಾಗಿ ಮುಂಗಡ ಹಣ ಕೊಡುತ್ತಾರೆ. ಆದರೆ, ಅವರು ಪೂರ್ಣ ಮೊತ್ತ ಕೊಡುವುದಿಲ್ಲ. ಆಮೇಲೆ ಈ ವ್ಯಕ್ತಿ ಮಧ್ಯಪ್ರವೇಶ ಮಾಡುತ್ತಾರೆ ಎಂದು ಪರೋಕ್ಷವಾಗಿ ಆರೋಪಗಳ ಸುರಿಮಳೆಗೈದಿದ್ದಾರೆ.

    ಬಳಿಕ ಈ ವ್ಯಕ್ತಿ ಮಂತ್ರಿಯಾದ ಮೇಲೆ ರಾತ್ರೋರಾತ್ರಿ ಅವರನ್ನು ಕರೆಸಿ ಹೆದರಿಸಿ, ಬೆದರಿಸಿ ಸೇಲ್ ಅಗ್ರಿಮೆಂಟಿಗೆ ರುಜು ಹಾಕಿಸಿಕೊಂಡಿದ್ದಾರೆ. ಇಂತಹ ವ್ಯಕ್ತಿ ದೇವೇಗೌಡರ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾವು ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

    ಈಗ ಚನ್ನಪಟ್ಟಣಕ್ಕೆ ಬಂದು ಏನೋ ಉದ್ದಾರ ಮಾಡುತ್ತೇವೆ ಎಂದು ಅಣ್ಣ ತಮ್ಮ ಬಂದಿದ್ದಾರೆ. ನೂರಾರು ವರ್ಷ ಬಾಳಿ ಬದುಕಿರುವ ಮನೆಗಳಿಗೆ ಈಗ ಬಂದು ಹಕ್ಕುಪತ್ರ ಕೊಡ್ತಾರಂತೆ. ಹಾಗಾದರೆ, ರಾಜ್ಯದಲ್ಲಿ ನಿಮ್ಮ ಸರ್ಕಾರ ಬಂದು ಒಂದೂವರೆ ವರ್ಷ ಆಯ್ತು, ಇಷ್ಟು ದಿನ ಏನು ಮಾಡ್ತಿದ್ರಿ? ಚನ್ನಪಟ್ಟಣವನ್ನು ಉದ್ಧಾರ ಮಾಡಿರೋದು ಇಲ್ಲಿನ ಜನರಿಗೆ ಬಹಳ ಚೆನ್ನಾಗಿ ಗೊತ್ತಿದೆ. ಇಲ್ಲಿನ ಮತ್ತಿಕೆರೆ ಬಳಿ ಕಲ್ಲು ಗೋದಾಮು ಇದೆ. ಅಲ್ಲಿ ಹೋಗಿ ನೋಡಿ, ಎಷ್ಟು ಕಲ್ಲುಗಳನ್ನು ತಂದು ಇಲ್ಲಿ ಗುಡ್ಡೆ ಹಾಕ್ತಿದ್ದೀರಿ? ಎಲ್ಲೆಲ್ಲಿಗೆ ಕಳಿಸುತ್ತಿದ್ದೀರಿ? ನನಗೆ ಗೊತ್ತಿಲ್ಲದ ವಿಷಯವೇ? ಎಂದು ಸಭೆಯಲ್ಲಿ ಕಲ್ಲು ಗೋದಾಮುಗಳ ಫೋಟೋಗಳನ್ನು ತೋರಿಸಿ, ಇದಕ್ಕೆ ಉತ್ತರ ಕೊಡಪ್ಪಾ ಎಂದು ಕುಟುಕಿದ್ದಾರೆ.

    ಕನಕಪುರದಲ್ಲಿ ಎಷ್ಟು ದಲಿತ ಕುಟುಂಬಗಳ ಹಾಳು ಮಾಡಿದ್ದೀರಿ ನೀವು? ಆ ಜನ ಕಣ್ಣಲ್ಲಿ ನೀರು ಹಾಕಿದ್ದನ್ನು ನಾನು ನೋಡಿದ್ದೇನೆ. ಕುಮಾರಸ್ವಾಮಿ ರೈತನ ಮಗ ಅಲ್ಲ ಎಂದಿದ್ದಾರೆ. ಪ್ಯಾಂಟ್ ತೆಗೆದು ಪಂಚೆ ಹಾಕಿದ್ರೆ ರೈತ ಅಲ್ಲ ಎಂದಿದ್ದೀರಿ. ಬಿಡದಿಗೆ ಬಂದು ನೋಡಿ, 20 ಟನ್ ಕೊಬ್ಬರಿ ಬೆಳೆದಿದ್ದೇನೆ. ತೆಂಗು, ಬಾಳೆ, ಅಡಿಕೆಯಲ್ಲಿ 50 ಲಕ್ಷ ರೂ. ರೈತನಾಗಿ ಸಂಪಾದನೆ ಮಾಡಿದ್ದೇನೆ. ನಿಮ್ಮಿಂದ ಇದು ಸಾಧ್ಯವೇ? ಎಂದು ಟಾಂಗ್ ಕೊಟ್ಟಿದ್ದಾರೆ.

  • ಮೋದಿಯದ್ದು ಬರೀ ಬುರುಡೇ ಭಾಷಣ, ಸರ್ಪ ಯಾವಾಗಲೂ ಡೇಂಜರ್: ಹೆಚ್‌ಡಿಕೆ ವಾಗ್ದಾಳಿ

    ಮೋದಿಯದ್ದು ಬರೀ ಬುರುಡೇ ಭಾಷಣ, ಸರ್ಪ ಯಾವಾಗಲೂ ಡೇಂಜರ್: ಹೆಚ್‌ಡಿಕೆ ವಾಗ್ದಾಳಿ

    ಬಾಗಲಕೋಟೆ: ಮೋದಿ (Narendra Modi) ಭಾಷಣ ಎಲ್ಲಾ ಸಂತೆ ಭಾಷಣ. ಯಾವುದೂ ಜಾರಿಗೆ ತರಲು ಗೊತ್ತಿಲ್ಲ. ಬರೀ ಬುರುಡೆ ಭಾಷಣ ಮಾಡಿ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumarswamy) ಮೋದಿ ವಿರುದ್ಧ ಕಿಡಿಕಾರಿದ್ದಾರೆ.

    ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ರಾಷ್ಟ್ರನಾಯಕರು ರಾಜ್ಯದಲ್ಲಿ ಟಿಕಾಣಿ ಹೂಡಿ ಪ್ರಚಾರ ಮಾಡುತ್ತಿರುವ ವಿಚಾರವಾಗಿ ಬಾದಮಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರೆಲ್ಲಾ 9ನೇ ತಾರೀಕಿನವರೆಗೂ ಇರುತ್ತಾರೆ. ಆಮೇಲೆ ಕರ್ನಾಟಕದಲ್ಲಿ ಏನಾಗಿದೆ ಎಂದು ಕೇಳಲು ಬರುತ್ತಾರಾ? ಕಾಂಗ್ರೆಸ್ ಹಾಗೂ ಬಿಜೆಪಿಯ ರಾಷ್ಟ್ರನಾಯಕರು ರಾಜ್ಯಕ್ಕೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಮೋದಿ ಸಹ ಬಂದಿದ್ದಾರೆ. ಚುನಾವಣೆ ಮುಗಿದ ಮೇಲೆ ಕರ್ನಾಟಕಕ್ಕೆ ಟಾಟಾ ಮಾಡಿ ಹೋಗುತ್ತಾರೆ. ಮತ್ತೆ ಬರೋದು ಲೋಕಸಭಾ ಚುನಾವಣೆಯ ವೇಳೆ ಎಂದು ಟೀಕೆ ಮಾಡಿದರು. ಇದನ್ನೂ ಓದಿ: ಜೆಡಿಎಸ್ ಮುಖಂಡ ಭೋಜೆಗೌಡರಿಂದ ಕಾಂಗ್ರೆಸ್ ಪರ ಪ್ರಚಾರ – ವೀಡಿಯೋ ವೈರಲ್

    ಜನರ ಒಳಿತಿಗಾಗಿ ನಾನು ಸರ್ಪ ಆಗಲು ಸಿದ್ಧ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸರ್ಪ ಆಗೋದಾದರೆ ಆಗಲಿ. ಆದರೆ ಸರ್ಪ ಯಾವಾಗಲೂ ಡೇಂಜರ್. ಅದು ಜನಕ್ಕೆ ಆದರೂ ಅಷ್ಟೇ. ಇನ್ನೊಬ್ಬರಿಗೆ ಆದರೂ ಅಷ್ಟೇ. ನಾನು ಸರ್ಪ, ವಿಷಕನ್ಯೆ ಬಗ್ಗೆ ಚರ್ಚೆ ಮಾಡಲು ಹೋಗುವುದಿಲ್ಲ. ಇವೆಲ್ಲಾ ಇವತ್ತಿನ ರಾಜಕಾರಣದಲ್ಲಿ ಅವಶ್ಯಕತೆ ಇರಲಿಲ್ಲ. ನಮ್ಮ ರಾಜ್ಯದಲ್ಲಿ ಅಕಾಲಿಕ ಮಳೆ ಆಗಿ ರೈತರ ಬೆಳೆ ನಾಶವಾಗಿದೆ. ಆ ಬಗ್ಗೆ ಚರ್ಚೆ ಆಗಬೇಕು. ಆ ಬಗ್ಗೆ ಚರ್ಚೆ ಮಾಡದೇ ಯಾವುದೋ ವಿಷಕನ್ಯೆ, ವಿಷಸರ್ಪದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಜನರ ಬದುಕನ್ನು ಸರಿಪಡಿಸಿಕೊಡುತ್ತಾರಾ ಇವರು ಎಂದು ಹರಿಹಾಯ್ದರು. ಇದನ್ನೂ ಓದಿ: ಹ್ಯಾಟ್ರಿಕ್ ಗೆಲುವಿನ ಬಳಿಕ ಮತ್ತೆ ಗೆಲ್ತಾರಾ ಹೆಚ್.ಕೆ ಕುಮಾರಸ್ವಾಮಿ? – ಸಕಲೇಶಪುರ ಮೀಸಲು ಕ್ಷೇತ್ರ ಯಾರಿಗೆ ಒಲಿಯುತ್ತೆ

    ಮೋದಿ ಡಬಲ್ ಎಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಎನ್ನುತ್ತಾರೆ. ಲೂಟಿ ಹೊಡೆಯುವುದೇ ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿಯಾ? ಯಾರು ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಾರೋ ಅದು ಬಿಜೆಪಿಗೆ ಮತ್ತು ನರೇಂದ್ರ ಮೋದಿಯವರಿಗೆ ಅಭಿವೃದ್ಧಿ. ಅದು ಡಬಲ್ ಎಂಜಿನ್ ಸರ್ಕಾರ ಇದ್ರೆ ಮಾತ್ರ ಸಾಧ್ಯ ಎಂಬುದು ಅವರ ಮಾತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್

    ಜೆಡಿಎಸ್ (JDS) ಕಾಂಗ್ರೆಸ್‌ನ ಬಿ ಟೀಮ್ ಎಂಬ ಬಿಜೆಪಿ ಆರೋಪದ ಕುರಿತು ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್‌ನ ಬಿ ಟೀಮ್ ಎನ್ನುತ್ತಾರೆ. ಕಾಂಗ್ರೆಸ್‌ನ ಸಿದ್ದರಾಮಯ್ಯ (Siddaramaiah) ಕೂಡಾ ಜೆಡಿಎಸ್ ಬಿ ಟೀಮ್ ಎನ್ನುತ್ತಿದ್ದಾರೆ. ನಾನು ಯಾವ ಟೀಮ್ ಎಂದು ಹೇಳಲಿ? ನಾನು ಜನತೆಯ ಬಿ ಟೀಮ್. ನಾನು ರಾಜ್ಯದ ಕನ್ನಡಿಗರ ಬಿ ಟೀಮ್ ಎಂದರು. ಇದನ್ನೂ ಓದಿ: ಹೊಯ್ಸಳರ ನಾಡಲ್ಲಿ ತ್ರಿಕೋನ ಸ್ಪರ್ಧೆ – ಯಾರಾಗ್ತಾರೆ ಸಾಮ್ರಾಟ?

  • ಕುಟುಂಬದ ನಡುವೆ ಬೇರೆ ಒಂದು ಮುಖವಿರಲಿ ಎಂದು ಇಬ್ರಾಹಿಂಗೆ ಮಣೆ: ಈಶ್ವರಪ್ಪ ವ್ಯಂಗ್ಯ

    ಕುಟುಂಬದ ನಡುವೆ ಬೇರೆ ಒಂದು ಮುಖವಿರಲಿ ಎಂದು ಇಬ್ರಾಹಿಂಗೆ ಮಣೆ: ಈಶ್ವರಪ್ಪ ವ್ಯಂಗ್ಯ

    ಹಾಸನ/ಶಿವಮೊಗ್ಗ: ಜೆಡಿಎಸ್ ಒಂದೇ ಕುಟುಂಬದ ಪಕ್ಷ, ಮಧ್ಯದಲ್ಲಿ ಒಂದು ಬೇರೆ ಮುಖ ಇರಲಿ ಎಂದು ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S Eshwarappa) ಲೇವಡಿ ಮಾಡಿದ್ದಾರೆ.

    ಹಾಸನದ ಹಳ್ಳಿ ಮೈಸೂರಿನಲ್ಲಿ (Halli Mysore) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ (JDS) ಮುಖಂಡರು ನಮ್ಮದು ವಂಶ ಪಾರಂಪರಿಕ ಪಕ್ಷವೆಂದು ಟೀಕೆ ಮಾಡುತ್ತಾರೆ ಎಂದು ಹೇಳಿಕೊಳ್ಳುತ್ತಾರೆ. ಆ ಪಕ್ಷಕ್ಕೆ ಮತ್ತೆ ಏನೆಂದು ಕರೆಯಬೇಕು ಎಂದು ಕುಮಾರಸ್ವಾಮಿಯವರು (H.D kumarswamy) ಹೇಳಬೇಕು. ಇದರ ನಡುವೆ ನಮ್ಮ ಸಿಸ್ಟರ್ ಭವಾನಿ ರೇವಣ್ಣ ಟಿಕೆಟ್‍ಗಾಗಿ ಹೋರಾಟ ಮಾಡಿದ್ದರು. ಮತದಾರರು ಇಂತಹ ಪಕ್ಷವನ್ನು ಬೆಂಬಲಿಸಬೇಕಾ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಇಂದು ಮೋದಿ ಎಂಟ್ರಿ – ಬೀದರ್, ವಿಜಯಪುರ, ಬೆಳಗಾವಿಯಲ್ಲಿ ಕ್ಯಾಂಪೇನ್

    ಕನಕದಾಸ ಜಯಂತಿ ಘೋಷಣೆ ಹಾಗೂ ಕಾಗಿನೆಲೆ ಪ್ರತಿಷ್ಠಾನ ಮಾಡಿದ್ದು ಯಡಿಯೂರಪ್ಪನವರು. ಇದು ಕುರುಬರ ವೋಟಿಗಾಗಿ ಅಲ್ಲ. ಕನಕದಾಸರ ವಿಚಾರಧಾರೆ ಎಲ್ಲರಿಗೂ ತಲುಪಬೇಕು ಎಂದು ಈ ಅಭಿವೃದ್ಧಿ ಮಾಡಿದ್ದಾರೆ. ಇದೇ ರೀತಿ ಎಲ್ಲಾ ಸಮಾಜಗಳಿಗೂ ಜಾಗೃತಿ ಮೂಡಿಸುವ ಕೆಲಸವನ್ನು ಬಿಜೆಪಿ ಮಾಡಿದೆ. ಆದರೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಮಾಜದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಎಐಸಿಸಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡ ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಇನ್ನೇನಾದರೂ ಸ್ಥಾನ ಪಡೆಯಲು ನಾಯಕರ ತೃಪ್ತಿಗಾಗಿ ನರೇಂದ್ರ ಮೋದಿಯವರನ್ನು (Narendra Modi) ವಿಷ ಸರ್ಪಕ್ಕೆ ಹೋಲಿಸುತ್ತಿದ್ದಾರೆ. ನಿಮ್ಮ ಬಾಯಲ್ಲಿ ಇಂತಹ ಮಾತುಗಳು ಬಂದ ಮೇಲೆ ನೀವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದು ಒಳ್ಳೆಯದು ಎಂದು ಗುಡುಗಿದ್ದಾರೆ.

    1989ರಲ್ಲಿ ವಿಧಾನಸಭೆಗೆ ಬಂದಾಗಿನಿಂದ ಇಲ್ಲಿಯವರೆಗೂ ರಾಮಸ್ವಾಮಿಯವರನ್ನು ನೋಡುತ್ತಾ ಬಂದಿದ್ದೇನೆ. ಅವರು ಮಾತನಾಡುವಾಗ ಸರಿಯಾದ ವ್ಯಕ್ತಿ ಸರಿಯಾದ ಪಕ್ಷದಲ್ಲಿ ಇಲ್ಲ ಎನಿಸುತ್ತಿತ್ತು. ಈಗ ಅವರು ಬಿಜೆಪಿಗೆ ಬಂದಿರುವುದು ಭೀಮ ಬಲ ಬಂದಂತಾಗಿದೆ. ಮೊದಲ ಬಾರಿ ವಿಧಾನಸಭೆಗೆ ಆಯ್ಕೆಯಾದ ವೇಳೆ ನಾಲ್ಕೇ ಜನ ಎಂಎಲ್‍ಎಗಳು ಇಡೀ ದೇಶದಲ್ಲಿ ರಾಮಮಂದಿರ ಆಗಬೇಕು ಎಂದು ದ್ವನಿ ಎತ್ತಿದ್ದೆವು ಎಂದಿದ್ದಾರೆ. ಈ ವೇಳೆ ಶಿಳ್ಳೆ ಹೊಡೆದ ರಾಮಸ್ವಾಮಿ ಬೆಂಬಲಿಗರ ವಿರುದ್ಧ ಈಶ್ವರಪ್ಪ ಗರಂ ಆದರು. ಇದನ್ನೂ ಓದಿ: `ಮೋದಿ ವಿಷ ಸರ್ಪ, ಸೋನಿಯಾ ವಿಷಕನ್ಯೆ’ ಹೇಳಿಕೆ – ಖರ್ಗೆ, ಯತ್ನಾಳ್ ವಿರುದ್ಧ ದೂರು

  • ಧರ್ಮ, ಜಾತಿ ಆಧಾರದ ಮೇಲೆ ವೋಟ್ ಕೇಳಲ್ಲ – ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಪ್ರಚಾರ: HDK

    ಧರ್ಮ, ಜಾತಿ ಆಧಾರದ ಮೇಲೆ ವೋಟ್ ಕೇಳಲ್ಲ – ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಪ್ರಚಾರ: HDK

    ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election) ಪಂಚರತ್ನ ಯೋಜನೆಗಳನ್ನು (Pancharatna Yatra) ಇಟ್ಟುಕೊಂಡು ಅಭಿವೃದ್ಧಿಯ ಅಜೆಂಡಾದೊಂದಿಗೆ ಜನರ ಮುಂದೆ ಹೋಗುತ್ತೇನೆಯೇ ಹೊರತು, ಜಾತಿ ಮತ್ತು ಧರ್ಮ ಇಟ್ಟುಕೊಂಡು ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D Kumarswamy) ಹೇಳಿದ್ದಾರೆ.

    ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ನಿಮಿತ್ತ ಗ್ರಾಮ ವಾಸ್ತವ್ಯ ಹೂಡಿದ್ದ ಹೆಚ್‍ಡಿಕೆ ಭಾನುವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ, ಸಾವಿರಾರು ಜನರನ್ನು ಅನಾಥರನ್ನಾಗಿ ಮಾಡಿದ್ದೇ ಬಿಜೆಪಿ. ಕರ್ನಾಟಕ ರಾಜ್ಯ ಅತ್ಯಂತ ಶಾಂತಿಯುತವಾಗಿ ಇದ್ದ ರಾಜ್ಯ. ಜನ ನೆಮ್ಮದಿಯಿಂದ ಇದ್ದರು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬಿಜೆಪಿ (BJP) ಬೆಂಕಿ ಹಚ್ಚುತ್ತಿದೆ. ರಾಜ್ಯದಲ್ಲಿ ಶಾಂತಿ ನೆಲೆಸಬೇಕು. ಅದಕ್ಕೆ ಜೆಡಿಎಸ್ (JDS) ಬರಲೇಬೇಕು. ಜೆಡಿಎಸ್ ಸರ್ಕಾರ ಬರುವ ಅನಿವಾರ್ಯತೆ ಹಿಂದೆಂದಿಗಿಂತ ಈಗ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಕಾವು ಪಡೆದ ರಾಜಕೀಯ – ಕನಕಪುರದ ಬಂಡೆ ಮದ್ದೂರಿನಲ್ಲಿ ಸ್ಪರ್ಧೆ?

    ಮುಂದಿನ ಚುನಾವಣೆಗೆ ನಾನು ಧರ್ಮದ ಹೆಸರಿನಲ್ಲಿ ಪ್ರಚಾರ ಮಾಡ್ತಿಲ್ಲ. ಪಂಚರತ್ನ ಯೋಜನೆಯನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡ್ತಿದ್ದೇನೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಜನರ ಜೀವನ ಉತ್ತಮಗೊಳಿಸುವೆ. ಕೋವಿಡ್‍ನಿಂದ (Covid-19) ಸಾವನ್ನಪ್ಪಿದವರಿಗೆ 1 ಲಕ್ಷ ರೂ. ಪರಿಹಾರ ಕೊಡುತ್ತೇವೆ. ಬಿಜೆಪಿ ಸರ್ಕಾರದಿಂದ ಇದುವರೆಗೂ ಯಾರಿಗೂ ಒಂದು ರೂಪಾಯಿ ಸಿಕ್ಕಿಲ್ಲ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಆರೋಗ್ಯ ವ್ಯವಸ್ಥೆಯನ್ನು ಅಮೂಲಾಗ್ರವಾಗಿ ಸುಧಾರಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: ಕೆಎಂಎಫ್ ಹಾಲು ಪೂರೈಕೆದಾರರಿಂದ ಮುಷ್ಕರ – ನಂದಿನಿ ಬೂತ್‌ಗಳಲ್ಲಿ ಹಾಲು, ಮೊಸರು ಸಿಗದೇ ಜನ ವಾಪಸ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಡ್ಯದಲ್ಲಿ ಕಾವು ಪಡೆದ ರಾಜಕೀಯ – ಕನಕಪುರದ ಬಂಡೆ ಮದ್ದೂರಿನಲ್ಲಿ ಸ್ಪರ್ಧೆ?

    ಮಂಡ್ಯದಲ್ಲಿ ಕಾವು ಪಡೆದ ರಾಜಕೀಯ – ಕನಕಪುರದ ಬಂಡೆ ಮದ್ದೂರಿನಲ್ಲಿ ಸ್ಪರ್ಧೆ?

    ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಸಂಕ್ರಾಂತಿ ಮುಗಿಯುತ್ತಿದ್ದ ಹಾಗೆ ರಾಜಕೀಯ ಬೆಳವಣಿಗೆ ಗರಿಗೆದರಿವೆ. ಕನಕಪುರದ ಬಂಡೆ ಡಿ.ಕೆ ಶಿವಕುಮಾರ್‌ ಮದ್ದೂರಿನಲ್ಲಿ ಸ್ಪರ್ಧೆ ಮಾಡ್ತಾರೆ ಎಂಬ ಚರ್ಚೆ ಶುರುವಾಗಿದೆ.

    ಒಂದು ಕಡೆ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ರಾಜ್ಯ ರಾಜಕೀಯದ ಎಂಟ್ರಿ ಕುರಿತು ಸುಳಿವು ನೀಡಿದ್ರೆ, ಮತ್ತೊಂದೆಡೆ ರೆಬಲ್ ಲೇಡಿ ಮಾದರಿಯಲ್ಲಿ ಸ್ವಾಭಿಮಾನದ ಹೆಸರಿನ ಮೂಲಕ ಎಲ್.ಆರ್.ಶಿವರಾಮೇಗೌಡ (L. R. Shivarame Gowda)  ಕಹಳೆ ಊದಲು ಮುಂದಾಗಿದ್ದಾರೆ. ಇದರ ನಡುವೆ ಜಾತಿ ಹಾಗೂ ಸಿಎಂ ಅಸ್ತ್ರ ಬಳಸಿಕೊಂಡು ಮಂಡ್ಯದಲ್ಲಿ ಕನಕಪುರದ ಬಂಡೆ ಸ್ಪರ್ಧೆ ಮಾಡ್ತಾರೆ ಎಂಬ ಚರ್ಚೆ ಸಾಕಷ್ಟು ಸದ್ದು ಮಾಡುತ್ತಿದೆ.

    ಒಕ್ಕಲಿಗ ಜಾತಿ ಹಾಗೂ ಸಿಎಂ ಅಸ್ತ್ರವನ್ನು ಮುಂದಿಟ್ಟುಕೊಂಡು ಡಿ.ಕೆ.ಶಿವಕುಮಾರ್ ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಒಂದು ಲೆಕ್ಕಾಚಾರ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ (H.D Kumarswamy) ಮುಖ್ಯಮಂತ್ರಿ ಆಗ್ತಾರೆ ಎಂದು ಒಕ್ಕಲಿಗ ಸಮೂದಾಯ ಮಂಡ್ಯ ಜಿಲ್ಲೆಯ 7 ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ರು. ಇದೀಗ ಡಿಕೆಶಿ ಸಹ ಅದೇ ಹಾದಿಯಲ್ಲಿ ಹೊರಟಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುಚರಣ್ ಹಾಗೂ ಕಾಂಗ್ರೆಸ್‍ನ ನಾಯಕರು ಡಿಕೆಶಿ ಅವರಿಗೆ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡಿದ್ದಾರೆ. ಡಿಕೆ ಸಹ ಎರಡು ಮೂರು ದಿನಗಳ ನಂತರ ನಿರ್ಧಾರ ಹೇಳ್ತೀನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈವರೆಗೂ ನಾನು ತಟಸ್ಥವಾಗಿದ್ದೇನೆ, ಸ್ಪರ್ಧೆ ಬಗ್ಗೆ ಮುಂದೆ ತೀರ್ಮಾನ: ಸುಮಲತಾ

     

     

     

     

     

     

     

     

    ಒಂದು ಕಡೆ ಸುಮಲತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡುವ ಸುಳಿವು ನೀಡುತ್ತಿದ್ರೆ, ಇನ್ನೊಂದೆಡೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಜೆಡಿಎಸ್ ಮೇಲೆ ಸೇಡು ತೀರಿಸಿಕೊಳ್ಳಲು ನಾಗಮಂಗಲ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸ್ವಾಭಿಮಾನದ ಹೆಸರಿನಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಕ್ಷೇತ್ರದ್ಯಾಂತ ಓಡಾಡುತ್ತಿದ್ದಾರೆ. ನಾಗಮಂಗಲ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾಭಿಮಾನಿ ಪರ್ವ ಕಾರ್ಯಕ್ರಮ ನಡೆಸಿ ಜನರಿಗೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡ್ತಾ ಇದೀನಿ ನನ್ನ ಬೆಂಬಲಿಸಿ ಎಂದು ಜನರಲ್ಲಿ ಕೇಳಿಕೊಳ್ಳುತ್ತಾ ಇದ್ದಾರೆ. ಈ ನಡುವೆ ಶಿವರಾಮೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರನ್ನು (D.K Shivakumar) ಭೇಟಿಯಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ ಶಿವರಾಮೇಗೌಡ ಕಾಂಗ್ರೆಸ್‍ನಿಂದ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂದು ಮಂಡ್ಯ ರಾಜಕೀಯದಲ್ಲಿ ಓಡಾಡುತ್ತಿದೆ.

    ರಾಜ್ಯ ಮಾತ್ರವಲ್ಲ ಇಂಡಿಯಾದ ರಾಜಕೀಯ ಚಿತ್ರಣ ಬೇರೆ ಆದ್ರೆ ಸಕ್ಕರೆ ನಾಡು ಮಂಡ್ಯದ ರಾಜಕೀಯವೇ ಬೇರೆ. ಇದಕ್ಕೆ ಉದಾಹರಣೆಗೆ ಎಂದ್ರೆ ಕಳೆದ ಲೋಕಸಭಾ ಚುನಾವಣೆಯೇ ಸಾಕ್ಷಿ. ಇದೀಗ ಅಂತಹದೊಂದು ಜಿದ್ದಾಜಿದ್ದಿನ ರಾಜಕಾರಣಕ್ಕೆ ಸಕ್ಕರೆ ನಾಡು ಮಂಡ್ಯ ಜಿಲ್ಲೆ ಸಾಕ್ಷಿಯಾಗಲು 2023ರ ವಿಧಾನಸಭಾ ಚುನಾವಣೆಯ ವೇದಿಕೆ ಸಜ್ಜುಗೊಳ್ಳುತ್ತಿದೆ. ಸದ್ಯ ಎಂಪಿಯಾಗಿ ರಾಷ್ಟ್ರ ರಾಜಕೀಯದಲ್ಲಿ ಆಕ್ಟೀವ್ ಆಗಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಮೂಲಕ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡುವ ಸುಳಿವನ್ನು ನೀಡುತ್ತಿದ್ದಾರೆ. ಸದ್ಯ ಪಕ್ಷೇತರವಾಗಿ ಉಳಿದಿರುವ ಸುಮಲತಾ ಅಂಬರೀಶ್ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಮಂಡ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಲೆಕ್ಕಾಚಾರವನ್ನು ಸುಮಲತಾ ಹಾಕಿಕೊಂಡಂತೆ ಕಾಣುತ್ತಿದೆ. ಸುಮಲತಾ ಅಂಬರೀಶ್ ಅವರು ಎಂಎಲ್‍ಎ ಚುನಾವಣೆಯ ಸ್ಪರ್ಧೆಯನ್ನು ತಳ್ಳಿ ಹಾಕುತ್ತಿಲ್ಲ. ನಾನು ಎಂಪಿಯಾಗಿ ಬರಬೇಕು ಅಂದುಕೊಂಡಿರಲಿಲ್ಲ, ಅದೇ ರೀತಿ ಮುಂದೆ ಸಂದರ್ಭಕ್ಕೆ ಅನುಗುಣವಾಗಿ ನಾನು ತೀರ್ಮಾನ ಮಾಡುತ್ತೇನೆ ಎಂದು ಸುಮಲತಾ ಹೇಳಿದ್ದಾರೆ. ಇನ್ನೊಂದೆಡೆ ಸುಮಲತಾ ಎಂಎಲ್‍ಎ ಚುನಾವಣೆ ಸ್ಪರ್ಧೆಯ ಸಂಬಂಧ ಇನ್ನೇರಡು ದಿನಗಳಲ್ಲಿ ಸಭೆಯನ್ನು ಸುಮಲತಾ ಬೆಂಬಲಿಗರು ಮಾಡ್ತಾ ಇದ್ದಾರೆ. ಇವೆಲ್ಲವನ್ನು ನೋಡಿದ್ರೆ ಸುಮಲತಾ ಅಂಬರೀಶ್ ಅವರು ಎಂಎಲ್‍ಎ ಎಲೆಕ್ಷನ್ ಸ್ಪರ್ಧೆ ಮಾಡುವುದು ಖಚಿತ ಎಂದು ಅನ್ನಿಸುತ್ತಿದೆ. ಇದನ್ನೂ ಓದಿ: ನಮ್ಮಪ್ಪ ಸಿದ್ರಾಮಯ್ಯ ಅಂತ ಹೆಸರಿಟ್ಟಿಲ್ವಾ, ಸಿದ್ರಾಮುಲ್ಲಾ ಅನ್ನೋಕೆ ಇವನ್ಯಾರು: ಸಿ.ಟಿ.ರವಿ ವಿರುದ್ಧ ಸಿದ್ದರಾಮಯ್ಯ ಕಿಡಿ

    ಒಟ್ಟಾರೆ ಮಂಡ್ಯದಲ್ಲಿ ರಾಜಕೀಯದ ಕಾವು ರಣ-ರಣ ಎನ್ನುತ್ತಿದ್ದು, ಸುಮಲತಾ, ಶಿವರಾಮೇಗೌಡ, ಡಿಕೆ ಮಂಡ್ಯ ರಾಜಕೀಯಕ್ಕೆ ಮತ್ತಷ್ಟು ಮೆರಗು ನೀಡಿದ್ದಾರೆ. ಮುಂದೆ ಸಕ್ಕರೆ ನಾಡಿನ ರಾಜಕೀಯ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೃಹ ಸಚಿವರಿಗೆ ಅವರ ಇಲಾಖೆಯಲ್ಲಿ ನಡೆಯೋ ವಿಷಯ ಗೊತ್ತಿಲ್ಲವೇ?: ಹೆಚ್‍ಡಿಕೆ ವಾಗ್ದಾಳಿ

    ಗೃಹ ಸಚಿವರಿಗೆ ಅವರ ಇಲಾಖೆಯಲ್ಲಿ ನಡೆಯೋ ವಿಷಯ ಗೊತ್ತಿಲ್ಲವೇ?: ಹೆಚ್‍ಡಿಕೆ ವಾಗ್ದಾಳಿ

    ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D Kumarswamy) ಪ್ರಶ್ನೆ ಮಾಡಿದ್ದಾರೆ.

    ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ಅವರು, ತಮ್ಮ ಇಲಾಖೆಯಲ್ಲಿ ದಂಧೆ ನಡೆಯುತ್ತಿದ್ದರೆ ಸಚಿವರು ಏನು ಮಾಡುತ್ತಿದ್ದರು. ಅದನ್ನು ಅವರು ಜನರಿಗೆ ತಿಳಿಸಬೇಕು ಅಲ್ಲವೇ? ಸ್ಯಾಂಟ್ರೋ ರವಿ (Santro Ravi) ಬಳಿ ಹಣ ಪಡೆದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ತೀನಿ ಎನ್ನುವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರು ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ನಾನ್ಯಾಕೆ ಹೇಳಲಿ. ಈ ಸರ್ಕಾರದಲ್ಲಿ ನಡೆಯುತ್ತಿರುವ ಕಾಸಿಗಾಗಿ ಪೋಸ್ಟಿಂಗ್ ವಿಚಾರ ಬೀದಿ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ದಂಧೆಗಳ ಜನರು ಕೂತಲ್ಲಿ, ನಿಂತಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    ಈಗ ಬಂಧನಕ್ಕೆ ಒಳಗಾಗಿರುವ ವ್ಯಕ್ತಿ ಎಲ್ಲಿ, ಯಾರಿಂದ ಏನೆಲ್ಲಾ ಕೆಲಸ ಮಾಡಿಕೊಂಡಿದ್ದಾನೆ ಎಲ್ಲ ಕಡೆ ಹೇಳಿಕೊಂಡು ತಿರುಗಿದ್ದಾನೆ. ಆತನ ಫೋಟೋಗಳು, ಅಡಿಯೋಗಳು ರಾಜ್ಯದ ತುಂಬಾ ಹಬ್ಬಿವೆ. ಇದೆಲ್ಲಾ ಗೃಹ ಸಚಿವರ ಗಮನಕ್ಕೆ ಬಂದಿಲ್ಲವೇ ಎಂದು ಸಚಿವರಿಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಆರೋಗ್ಯ ಇಲಾಖೆಯ ಟೆಂಡರ್ ಕೊಡಿಸದ್ದಕ್ಕೆ ನನ್ನ ಮೇಲೆ ಭ್ರಷ್ಟಾಚಾರ ಆರೋಪ: ಶಾಸಕ ತಿಪ್ಪಾರೆಡ್ಡಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ

    ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ

    ರಾಯಚೂರು: ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್ (JDS) ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ದೇವೇಗೌಡರನ್ನಾಗಲಿ (Deve Gowda), ಕುಮಾರಣ್ಣನನ್ನಾಗಲಿ (H.D Kumarswamy), ಜೆಡಿಎಸ್ ಪಕ್ಷವನ್ನಾಗಲಿ ಏನೂ ಮಾಡಲು ಆಗಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಗುಡುಗಿದ್ದಾರೆ.

    ರಾಯಚೂರಿನ ಸಿಂಧನೂರಿನಲ್ಲಿ ಶಾಸಕ ವೆಂಕಟರಾವ್ ನಾಡಗೌಡ ಹುಟ್ಟುಹಬ್ಬ ಸಮಾರಂಭ ಹಿನ್ನೆಲೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮಂಡ್ಯಕ್ಕೆ ಅಮಿತ್ ಶಾ (AmitShah) ಅಥವಾ ಯಾರೇ ಬಂದ್ರೂ ಜೆಡಿಎಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಇಂದಿನಿಂದ ಕುಮಾರಣ್ಣ ಬೀದರ್‌ನಿಂದ ಯಾತ್ರೆ ಶುರು ಮಾಡಿದ್ದಾರೆ. ಎಲ್ಲೆಡೆಯೂ ಎರಡು ರಾಷ್ಟ್ರೀಯ ಪಕ್ಷಗಳಿಗೆ ಧಿಕ್ಕರಿಸಿ ಈ ಬಾರಿ ಕುಮಾರಣ್ಣ ನಾಯಕತ್ವಕ್ಕೆ ಬೆಂಬಲಿಸುವ ಮಾತುಗಳು ಕೇಳಿಬರುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಪತ್ರ- ಚೆನ್ನೈನಲ್ಲಿ ಓರ್ವನ ಬಂಧನ

    ಎರಡು ಪಕ್ಷಗಳ ಬಗ್ಗೆ ನಾವು ಮಾತನಾಡಲು ಸಿದ್ಧರಿಲ್ಲ. ಜನಸಂಕಲ್ಪ ಯಾತ್ರೆಯೂ ನೀವೂ ನೋಡಿದ್ರಿ. ಭಾರತ್ ಜೋಡೋ ಯಾತ್ರೆಯೂ ನೋಡಿದ್ರಿ. ಬಿಜೆಪಿಯವರು ಯಾವ ಪುರುಷಾರ್ಥಕ್ಕೆ ಜನ ಸಂಕಲ್ಪ ಯಾತ್ರೆ ಮಾಡುತ್ತಿದ್ದೀರಿ? 40 ಪೆರ್ಸೆಂಟ್ ಲೂಟಿ ಹೊಡೆಯುತ್ತಿದ್ದೀರಿ. ರಾಜ್ಯದ ಜನರ ಬೊಕ್ಕಸ ಲೂಟಿ ಹೊಡೆಯಲು ಜನ ಸಂಕಲ್ಪ ಯಾತ್ರೆ ಮಾಡುತ್ತೀರಾ ಎಂದು ಪ್ರಶ್ನಿಸಿದರು. ಭಾರತ್ ಜೋಡೋ (Bharat Jodo Yatra)  ಯಾತ್ರೆ ಕಾಂಗ್ರೆಸ್ ನಾಯಕರ ಜೋಡೋ ಯಾತ್ರೆ ಆಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಸಿಎಂ ಆಗಿದ್ದಾಗಲೇ ಸ್ಯಾಂಟ್ರೋ ರವಿಯಿಂದ ಹೆಚ್ಚು ವ್ಯವಹಾರ: ಆರಗ ತಿರುಗೇಟು

    ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಹೆಚ್ಚಾಗಿ ಆಡಳಿತ ನಡೆಸಿವೆ. ಆದ್ರೆ ಕುಮಾರಣ್ಣ 34 ತಿಂಗಳಲ್ಲಿ ನೀಡಿದ ಕಾರ್ಯಕ್ರಮದ ಬಗ್ಗೆ ರಾಜ್ಯದ ಜನರು ಇವತ್ತೂ ಚರ್ಚೆ ಮಾಡುತ್ತಾರೆ. ಪಂಚರತ್ನ ಕಾರ್ಯಕ್ರಮ ಎಲ್ಲರಿಗೂ ಅನುಕೂಲವಾಗುವ ಕಾರ್ಯಕ್ರಮ ಎಂದು ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೊರೊನಾ ಬಿಜೆಪಿಯವರಿಗೆ ಮಾತ್ರ ಬರುತ್ತಾ? -ಹೆಚ್‍ಡಿಕೆ, ಡಿಕೆಶಿಗೆ ಸಿ.ಟಿ.ರವಿ ಟಾಂಗ್

    ಕೊರೊನಾ ಬಿಜೆಪಿಯವರಿಗೆ ಮಾತ್ರ ಬರುತ್ತಾ? -ಹೆಚ್‍ಡಿಕೆ, ಡಿಕೆಶಿಗೆ ಸಿ.ಟಿ.ರವಿ ಟಾಂಗ್

    ಚಿಕ್ಕಮಗಳೂರು: ಕೊರೊನಾ ಬಿಜೆಪಿಯವರಿಗೆ ಮಾತ್ರ ಬರುತ್ತಾ ಇಲ್ಲ ಎಲ್ಲರಿಗೂ ಬರುತ್ತಾ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ಕೊಟ್ಟಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಟಿ ರವಿ ಅವರು, ಇದೇ ತಿಂಗಳು 18ರಂದು ನಡೆಯುವ ಸರ್ವಪಕ್ಷ ಸಭೆಗೆ ಏಕೆ ಹೋಗಬೇಕು ಎಂದು ಪ್ರಶ್ನಿಸಿದ್ದ ಡಿ.ಕೆ.ಶಿವಕುಮಾರ್ ಹಾಗೂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಖಾರವಾಗಿ ಕಿಡಿ ಕಾರಿದ್ದು, ಇಂದು ಸಂಖ್ಯಾಬಲದಿಂದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಹಾಗಾದರೆ ಕಾಂಗ್ರೆಸ್-ಜೆಡಿಎಸ್‍ಗೆ ರಾಜ್ಯದ ಬಗ್ಗೆ ಜವಾಬ್ದಾರಿ ಇಲ್ವಾ ಎಂದು ಪ್ರಶ್ನಿಸಿದ್ದಾರೆ.

    ಕೊರೊನಾ ವೈರಸ್ ಬಿಜೆಪಿ ಬೆಂಬಲಿಗರಿಗೆ ಮಾತ್ರ ಬರುತ್ತೋ ಅಥವಾ ಎಲ್ಲರಿಗೂ ಬರುತ್ತೋ ಎಂದು ಕಾಂಗ್ರೆಸ್-ಜೆಡಿಎಸ್ ವಿರುದ್ಧ ವ್ಯಂಗ್ಯವಾಡಿ, ಕೊರೊನಾ ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಸೇರಿದಂತೆ ಎಲ್ಲರಿಗೂ ಬಂದಿದೆ. ರಾಜಕಾರಣಕ್ಕೆ ಸಂಬಂಧವೇ ಇಲ್ಲದವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾವೇ ರಾಜಕಾರಣ ಮಾಡಿಲ್ಲ ಇವರೇಕೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಇವರು ರಾಜಕಾರಣವನ್ನೇ ಮಾಡಬೇಕು ಎಂದರೆ ಬೇರೆ ಸಾಕಷ್ಟು ವಿಷಯಗಳಿವೆ ಅಲ್ಲಿ ಮಾಡಲಿ. ಇದು ರಾಜಕಾರಣ ಮಾಡುವ ವಿಷಯವಲ್ಲ. ಇದರಲ್ಲೂ ರಾಜಕಾರಣದ ಬಳಕೆ ದುರದೃಷ್ಟಕರ ಸಂಗತಿಯಾಗಿದೆ. ಸರ್ಕಾರ ವ್ಯವಸ್ಥೆ ನಿರ್ಮಾಣ ಮಾಡಬೇಕು. ಅದರ ನಿಯಂತ್ರಣ ಎಲ್ಲರ ಸಹಕಾರದಿಂದಲೇ ಆಗಬೇಕು. ಇದು ರಾಜಕಾರಣದ ವಿಷಯವಲ್ಲ. ಇಲ್ಲಿ ರಾಜಕಾರಣ ಮಾಡೋದು ಬಿಟ್ಟು ಸಲಹೆ-ಸಹಕಾರ ಕೊಡಲಿ. ಅದು ಸೂಕ್ತವಾಗಿದ್ದಾರೆ, ಅದನ್ನು ಸ್ವೀಕರಿಸುವ ಮನಸ್ಸು ಸರ್ಕಾರಕ್ಕೂ ಇರಬೇಕು ಎಂದು ಅಭಿಪ್ರಾಯಪಟ್ಟರು.