Tag: h k patil

  • ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಹೆಚ್.ಕೆ ಪಾಟೀಲ್

    ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಹೆಚ್.ಕೆ ಪಾಟೀಲ್

    ಬೆಂಗಳೂರು: ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ಸೆ.9ರಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ (H.K.Patil) ತಿಳಿಸಿದ್ದಾರೆ.

    ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುಧಾರಕರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹುವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡು ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಒಪ್ಪಿಗೆ ಪಡೆದು ಇಂದು ಅಧಿಸೂಚಿಸಿದೆ. ಇದನ್ನೂ ಓದಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ: ಸಿಎಂ

    ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಬಹುದಾದ ಆಸ್ತಿಯನ್ನು ಗುರುತಿಸಿ, ಅಂತಹ ಆಸ್ತಿಯನ್ನು ಜಪ್ತಿಮಾಡಲು ಸರ್ಕಾರಕ್ಕೆ ಅಧಿಕಾರ ದೊರಕಿದೆ. ಅಕ್ರಮ ಗಣಿಗಾರಿಕೆ ಕುರಿತು ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆಯಾಗಿ ನನ್ನ ಅಧ್ಯಕ್ಷತೆಯಲ್ಲಿ ಜು.5 ರಂದು ಸಚಿವ ಸಂಪುಟದ ಉಪಸಮಿತಿ ರಚನೆಯಾಗಿತ್ತು. ಈ ಸಮಿತಿಯು ಆ.13 ರಂದು ಸಚಿವ ಸಂಪುಟಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಈ ವರದಿಯ ಜೊತೆಗೆ ಕರಡು ಮಸೂದೆಯನ್ನು ಸಹ ಸಚಿವ ಸಂಪುಟಕ್ಕೆ ಮಂಡಿಸಿತ್ತು. ಈ ಮಸೂದೆಯೊಂದಿಗೆ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ಸಚಿವ ಸಂಪುಟವು ಸರ್ವಾನುಮತದಿಂದ ಅಂಗೀಕರಿಸಿ, ಅಕ್ರಮ ಗಣಿಗಾರಿಕೆ ವಿರುದ್ಧ ಅತ್ಯಂತ ಕಠಿಣಾತಿ-ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಮೋದನೆ ನೀಡಿತ್ತು ಎಂದು ಹೇಳಿದ್ದಾರೆ.

    ರಾಜ್ಯ ಸಚಿವ ಸಂಪುಟದ ನಿರ್ಣಯದಂತೆ ಆ.18 ರಂದು ವಿಧಾನಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಯಿತು. ಆ.21 ರಂದು ವಿಧಾನಸಭೆಯಲ್ಲಿ ಮತ್ತು 22 ರಂದು ವಿಧಾನ ಪರಿಷತ್ತಿನಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕರಿಸಲಾಯಿತು. ಈ ವಸೂಲಾತಿ ಆಯುಕ್ತರ ನೇಮಕದಿಂದಾಗಿ ರಾಜ್ಯದಲ್ಲಿ ಆರ್ಥಿಕ ಶಿಸ್ತು ತರಲು ಸೂಕ್ತವಾದಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವರು ಪ್ರಕಟಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ಹಿಂದೂಗಳನ್ನ ಯಾವ ಸ್ಥಿತಿಗೆ ತಳ್ಳಿರಬಹುದು? – ವಿಜಯೇಂದ್ರ ಆತಂಕ

    ರಾಜ್ಯಪಾಲರು ಸೆ.9 ರಂದು ಈ ಐತಿಹಾಸಿಕ ಮಸೂದೆಗೆ ಅಂಕಿತ ಹಾಕುವ ಮೂಲಕ ಸರ್ಕಾರದ ಬದ್ಧತೆಗೆ ಮುದ್ರೆ ಒತ್ತಿದ್ದಾರೆ. ಕನ್ನಡಿಗರ ಆಸ್ತಿ ಕನ್ನಡಿಗರಿಗೆ ಮರಳಿಸುವ ಉದ್ದೇಶ ಈಡೇರಿದೆ. ನಮ್ಮ ಪಕ್ಷ ಮತ್ತು ಸರ್ಕಾರ ಈ ಮೊದಲು ಕನ್ನಡ ನಾಡಿನ ಜನತೆಗೆ ನೀಡಿದ ವಾಗ್ದಾನವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

  • ಕನ್ನಡಪರ, ರೈತ ಪರ ಹೋರಾಟಗಾರರ ಕೇಸ್ ವಾಪಸ್ ಪಡೆದಿದ್ದೇವೆ: ಹೆಚ್.ಕೆ.ಪಾಟೀಲ್

    ಕನ್ನಡಪರ, ರೈತ ಪರ ಹೋರಾಟಗಾರರ ಕೇಸ್ ವಾಪಸ್ ಪಡೆದಿದ್ದೇವೆ: ಹೆಚ್.ಕೆ.ಪಾಟೀಲ್

    ಬೆಂಗಳೂರು: ಕನ್ನಡಪರ ಹೋರಾಟಗಾರರು, ರೈತ ಹೋರಾಟಗಾರ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ. ಕ್ಯಾಬಿನೆಟ್ ಸಬ್ ಕಮಿಟಿ ಮತ್ತು ಕ್ಯಾಬಿನೆಟ್ ನಿರ್ಧಾರ ಮಾಡಿ ಈ ಕೇಸ್ ವಾಪಸ್ ಪಡೆಯೋ ಪ್ರಕ್ರಿಯೆ ಮಾಡಿದ್ದೇವೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ (H K Patil) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕಾನೂನು ಇಲಾಖೆ, ಪೊಲೀಸ್ ಇಲಾಖೆ ಕೇಸ್ ವಾಪಸ್ ಪಡೆಯೋದು ಬೇಡ ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಕ್ಯಾಬಿನೆಟ್ ಸಬ್ ಕಮಿಟಿ ಮತ್ತು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಕೇಸ್ ವಾಪಸ್ ಪಡೆದಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಆಯೋಗ, ಇವಿಎಂ ವಿಶ್ವಾಸಾರ್ಹತೆ ಕಳೆದುಕೊಂಡಿದೆ, ಅದಕ್ಕಾಗಿ ಬ್ಯಾಲೆಟ್ ಪೇಪರ್ ಜಾರಿ: ಹೆಚ್‌ಕೆ ಪಾಟೀಲ್

    ಕನ್ನಡ ಹೋರಾಟಗಾರರು, ರೈತರ ಹೋರಾಟದ ಕೇಸ್‌ಗಳನ್ನು ವಾಪಸ್ ಪಡೆಯೋಕೆ ನಮ್ಮ ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಆಗಿದ್ರೆ, ಸರ್ಕಾರದ ಆಸ್ತಿ ನಷ್ಟ ಆಗಿದ್ರೆ, ಅಂತಹ ಕೇಸ್‌ಗಳ ವಿಚಾರಣೆ ವಿಳಂಬವಾಗಿರಬಹುದು. ಆದರೆ ಕನ್ನಡಕ್ಕಾಗಿ ಹೋರಾಡಿದವರ ಕೇಸ್‌ಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ. ವೈಯಕ್ತಿಕ ಕೇಸ್‌ಗಳ ಬಗ್ಗೆ ನಾನು ನೋಡಿಲ್ಲ. ನೋಡಿ ಮಾತನಾಡುತ್ತೇನೆ ಎಂದಿದ್ದಾರೆ.

  • ಗದಗ | ಬೆಳೆ ಹಾನಿ ಪ್ರದೇಶಗಳಿಗೆ ಹೆಚ್.ಕೆ ಪಾಟೀಲ್ ಭೇಟಿ – ರೈತರಿಗೆ ಪರಿಹಾರದ ಭರವಸೆ

    ಗದಗ | ಬೆಳೆ ಹಾನಿ ಪ್ರದೇಶಗಳಿಗೆ ಹೆಚ್.ಕೆ ಪಾಟೀಲ್ ಭೇಟಿ – ರೈತರಿಗೆ ಪರಿಹಾರದ ಭರವಸೆ

    ಗದಗ: ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಗದಗ (Gadag) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಗದಗ ತಾಲೂಕಿನ ಬಿಂಕದಕಟ್ಟಿ ಭಾಗದಲ್ಲಿ ಹೆಸರು ಹಾಗೂ ಮೆಕ್ಕೆಜೋಳ ಬೆಳೆ ಹಾನಿಯಾಗಿತ್ತು. ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕ್ರೆ ಜಮೀನಿನಲ್ಲಿ ಬೆಳೆದ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಬೆಳೆಹಾನಿ ವೀಕ್ಷಣೆ ನಡೆಸಿ ಪರಿಹಾರದ ಭರವಸೆ ನೀಡಿದರು. ಇದನ್ನೂ ಓದಿ: ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿದ್ದನ್ನು ಸ್ವಾಗತಿಸುತ್ತೇವೆ: ಅಶ್ವಥ್ ನಾರಾಯಣ್

    ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ, ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ

    ಗದಗ ಜಿಲ್ಲೆಯಲ್ಲಿ ಆ.1 ರಿಂದ ಆ.18 ವರೆಗೆ ವಾಡಿಕೆ ಮಳೆ 46.9 ಮೀ.ಮೀ ಆಗಬೇಕಿತ್ತು. ಆದ್ರೆ 140.2 ರಷ್ಟು ಮಳೆ ಆಗುವ ಮೂಲಕ 198.9% ರಷ್ಟು ಅಧಿಕ ಮಳೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 94,884 ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಇದರಲ್ಲಿ ಹೆಸರು ಬೆಳೆ 67,533 ಹೆಕ್ಟೇರ್ ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಇನ್ನು ಸಮೀಕ್ಷಾಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ – ಪಾಗಲ್ ಪ್ರೇಮಿ ಅರೆಸ್ಟ್

    ಈ ವೇಳೆ ಎಡಿಸಿ ದುರಗೇಶ್ ಕೆ.ಆರ್, ಎಸಿ ಗಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಶೈಲೇಂದ್ರ ಬಿರಾದಾರ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

  • ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

    ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

    ಗದಗ: ನಗರದ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಅನ್ನು ಶುಕ್ರವಾರ ಕಾನೂನು, ನ್ಯಾಯ, ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಲೋಕಾರ್ಪಣೆ ಮಾಡಿದರು.

    ಬಳಿಕ ಮಾತನಾಡಿದ ಅವರು ಈ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ (Indira Canteen) ತೆರೆದಿದ್ದರಿಂದ ಗ್ರಾಮೀಣ ಭಾಗದವರಿಗೆ ತುಂಬಾನೇ ಅನುಕೂಲ ಆಗಲಿದೆ. ನಗರದ ಬಸ್ ನಿಲ್ದಾಣಕ್ಕೆ ಗದಗ ತಾಲೂಕು ಅಷ್ಟೇ ಅಲ್ಲ, ಬೇರೆ ಬೇರೆ ತಾಲೂಕಿನ ಜನರು ಬರುತ್ತಾರೆ. ಅವರಿಗೆ ಕಡಿಮೆ ಹಣದಲ್ಲಿ ಊಟ, ಉಪಹಾರ ಸಿಗುತ್ತೆ. ಹಾಗಾಗಿ ಇಲ್ಲಿಗೆ ಈ ಇಂದಿರಾ ಕ್ಯಾಂಟೀನ್‌ನ ಅವಶ್ಯಕತೆ ಇತ್ತು ಎಂದರು. ಇದನ್ನೂ ಓದಿ: ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

    ನಂತರ ಹೆಚ್.ಕೆ ಪಾಟೀಲ್ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ನೂತನ ಇಂದಿರಾ ಕ್ಯಾಂಟೀನ್‌ನಲ್ಲಿ ಉಪಹಾರ ಸೇವಿಸಿದರು. ಇದನ್ನೂ ಓದಿ: ಬನ್ನೇರುಘಟ್ಟ ಸಫಾರಿ ವೇಳೆ ಬೊಲೆರೋ ಹಿಂಬಾಲಿಸಿ ಬಾಲಕನ ಮೇಲೆ ಚಿರತೆ ದಾಳಿ

    ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅಕ್ಬರ್‌ಸಾಬ್ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್ ಸೇರಿ ಅನೇಕರು ಉಪಸ್ಥಿತರಿದ್ದರು.

  • ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಸಲು ಸಾಧ್ಯವಿಲ್ಲ: ಹೆಚ್.ಕೆ ಪಾಟೀಲ್

    ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಸಲು ಸಾಧ್ಯವಿಲ್ಲ: ಹೆಚ್.ಕೆ ಪಾಟೀಲ್

    ಗದಗ: ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಅಂತ ನೋಡಲು ಪ್ರಯತ್ನ ಮಾಡ್ತಿದ್ದಾರೆ. ಅಂತವರಿಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕಾನೂನು, ನ್ಯಾಯ ಸಚಿವ ಹೆಚ್.ಕೆ ಪಾಟೀಲ್ (H K Patil) ಹೇಳಿದ್ದಾರೆ.

    ಗದಗದಲ್ಲಿ (Gadag) ಮಾಧ್ಯಮಗಳೊಂದಿಗೆ ಮಾತನಾತನಾಡಿದ ಅವರು, ಧರ್ಮಸ್ಥಳದ (Dharmasthala Case) ವಿಷಯ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ ತನಿಖೆ ನಡೆದಿದೆ. ತನಿಖೆಯು ಯಾವ ಹಂತದಲ್ಲಿದೆ ಎಂಬ ಕೆಲವು ಭಾಗ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಬಗ್ಗೆ ಬಹುಶಃ ಸೋಮವಾರ ಇನ್ನು ಹೆಚ್ಚಿನ ಮಾಹಿತಿಯನ್ನು ಗೃಹ ಸಚಿವರು ನೀಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್‌ ವಶಕ್ಕೆ

    ಶಾಸನ ಸಭೆಯಲ್ಲಿ ಚರ್ಚೆ ಮಾಡಿದ್ದರಿಂದ ಸೋಮವಾರ ಸರ್ಕಾರ ತನ್ನ ಉತ್ತರ ನೀಡಲಿದೆ. ನಾವು ಧರ್ಮಸ್ಥಳ ಮಂಜುನಾಥನ ಸನ್ನಿಧಾನ ಬಗ್ಗೆ ವಿಶೇಷ ಭಕ್ತಿ, ಗೌರವ, ಅಭಿಮಾನ ಹೊಂದಿದವರು. ಆದ್ದರಿಂದ ಸರ್ಕಾರದ ಬಗ್ಗೆ ಯಾರು ಅನುಮಾನದ ಮಾತುಗಳನ್ನಾಡುತ್ತಿದ್ದಾರೆ. ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುತ್ತಿದ್ದಾರೆ. ಇವತ್ತು ಮಾತನಾಡುವವರು 10 ದಿನಗಳ ಹಿಂದೆ ಯಾಕೆ ಮಾತನಾಡಲಿಲ್ಲ.? ಸಮಯದ ಉಪಯೋಗ ಮಾಡಿಕೊಂಡು ಏನಾದ್ರು ಮಾಡುವ ಪ್ರಯತ್ನಿಸಿದರೆ ಅದರಿಂದ ಏನು ಲಾಭ ಆಗುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ

    ಇನ್ನು ಒಳಮೀಸಲಾತಿ ಕುರಿತು ಮಾತನಾಡಿದ ಅವರು, ಒಳಮೀಸಲಾತಿಗೆ ಸಂಬಂಧಪಟ್ಟಂತೆ ಆ.16 ರಂದು ವಿಶೇಷ ಸಚಿವ ಸಂಪುಟ ಕರೆಯಲಾಗಿತ್ತು. ಆದರೆ ಈ ಬಗ್ಗೆ ಕೆಲವು ಸಚಿವರು, ಸಿಎಂ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳನ್ನು ಚರ್ಚೆ ಮಾಡ್ತಿದ್ದಾರೆ. ಅದಕ್ಕೆ ಒಂದೆರಡು ದಿನ ಹೆಚ್ಚಿಗೆ ಸಮಯ ತೆಗೆದುಕೊಂಡಿದ್ದಾರೆ. ಆದ್ದರಿಂದ ಆ.19ರಂದು ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ. ಅದರೊಳಗೆ ನಾಗಮೋಹನ್‌ದಾಸ್ ವರದಿ ಬಗ್ಗೆ ಅಂತಿಮವಾಗಿ ಚರ್ಚೆ ಹಾಗೂ ನಿರ್ಣಯ ಆಗುತ್ತದೆ ಎಂದು ತಿಳಿಸಿದ್ದಾರೆ.

  • ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್

    ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ (Congress) ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಮುಜುಗರ ದಿನೇ ದಿನೇ ಹೆಚ್ಚಾಗುತ್ತಿದೆ.

    ವಸತಿ ಯೋಜನೆಯಲ್ಲಿ ಗೋಲ್ಮಾಲ್ ಬಗ್ಗೆ ಶಾಸಕ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ಆಗಿ ಸರ್ಕಾರಕ್ಕೆ ಇರಿಸುಮುರಿಸು ಉಂಟುಮಾಡಿತ್ತು. ಇದೀಗ ಶಾಸಕರ ಬಳಿಕ ಸಚಿವ ಹೆಚ್.ಕೆ ಪಾಟೀಲ್ (H.K Patil) ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಖಾರವಾಗಿ ಸಚಿವರು ಸುದೀರ್ಘ 7 ಪುಟಗಳ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸರ್ಕಾರಕ್ಕೆ ಅಕ್ರಮ ಗಣಿಗಾರಿಕೆಯ ತನಿಖೆಯನ್ನು ನೆನಪಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಇರಾನ್‌ ಪರ ನಿಲ್ಲಿ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

    ಪತ್ರದಲ್ಲಿ ಅಕ್ರಮ ಗಣಿಗಾರಿಕೆಯ ತನಿಖಾ ಪ್ರಗತಿ ಬಗ್ಗೆ ಉಲ್ಲೇಖಿಸಿದ್ದಾರೆ. ಗಣಿಗಾರಿಕೆ ವಿರುದ್ಧ ಪಾದಯಾತ್ರೆ ನಡೆಸಿದ್ದನ್ನು ನೆನಪಿಸಿದ್ದಾರೆ. ಅಲ್ಲದೇ, 2007ರಿಂದ 2011ರವರೆಗೆ ನಡೆದಿದ್ದ ಅಕ್ರಮ ಗಣಿಗಾರಿಕೆಯಲ್ಲಿ 1 ಲಕ್ಷದ 50 ಸಾವಿರ ಕೋಟಿ ರೂ. ನಷ್ಟ ಸಂಭವಿಸಿತ್ತು. ಅಕ್ರಮ ಗಣಿಗಾರಿಕೆ ವಿರುದ್ಧ ನೀವು ವಿರೋಧ ಪಕ್ಷದ ನಾಯಕರಾಗಿದ್ದಾಗ 320 ಕಿಲೋಮೀಟರ್ ಪಾದಯಾತ್ರೆ ಮಾಡಲಾಗಿತ್ತು. ಬಳಿಕ ಕೆಲ ಪ್ರಕರಣಗಳನ್ನ ತನಿಖಾ ಸಂಸ್ಥೆಗಳಿಗೆ ವಹಿಸಲಾಗಿತ್ತು. ಆದರೆ ಕೆಲ ಅಪರಾಧಿಗಳಿಗೆ ಮಾತ್ರ ಶಿಕ್ಷೆ ಆಗಿದೆ. ಬಹಳ ವರ್ಷವಾದರೂ ಎಸ್‍ಐಟಿ ತನಿಖೆ ಪ್ರಗತಿಯೂ ಸಾಧಿಸಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಅಕ್ರಮ ಗಣಿಗಾರಿಕೆ ಪ್ರಕರಣದ ತಪ್ಪಿತಸ್ಥರನ್ನು ಶಿಕ್ಷಿಸಲು ಪೊಲೀಸ್ ಇಲಾಖೆ ಅಡಿಯಲ್ಲಿ ಬಲಯುತವಾದ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: `ಮನಿ’ ಕೊಟ್ಟರಷ್ಟೇ ಸರ್ಕಾರಿ `ಮನೆ’ – ಜಮೀರ್‌ಗೆ ಗೊತ್ತಿಲ್ಲ ಅಂದ್ರೆ ತನಿಖೆ ಮಾಡಿಸಲಿ: ಬಿ.ಆರ್ ಪಾಟೀಲ್ ಬಾಂಬ್‌

  • ಗದಗ | ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಸ್ಕೂಲ್‌ಗೆ ಸೇರಿಸಿದ ಹೆಚ್.ಕೆ ಪಾಟೀಲ್

    ಗದಗ | ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಸ್ಕೂಲ್‌ಗೆ ಸೇರಿಸಿದ ಹೆಚ್.ಕೆ ಪಾಟೀಲ್

    ಗದಗ: ಜಿಲ್ಲೆ ಸಿದ್ದರಾಮೇಶ್ವರ ನಗರದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಸಚಿವ ಹೆಚ್.ಕೆ ಪಾಟೀಲ್ (H K Patil) ಅವರು ಸ್ವತಃ ತಮ್ಮ ಕಾರಿನಲ್ಲಿ ಸ್ಕೂಲ್‌ಗೆ ಸೇರಿಸಿ ಆತ್ಮಸ್ಥೈರ್ಯ ತುಂಬಿದರು.

    ಸುಮಾರು 7 ಮಕ್ಕಳು ಶಾಲೆ ತೊರೆದು ಮನೆಯಲ್ಲಿದ್ದರು. ಆ ಮಕ್ಕಳ ಮನೆಗಳಿಗೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಭೇಟಿ ನೀಡುವ ಮೂಲಕ ಜಿಲ್ಲೆಯಾದ್ಯಂತ ಶಾಲೆ ಬಿಟ್ಟ ಮಕ್ಕಳಿಗಾಗಿ `ಭವ್ಯ ಭವಿಷ್ಯದ ನಾಳೆಗೆ ಬನ್ನಿ ಬನ್ನಿ ಶಾಲೆಗೆ’ ಅಭಿಯಾನಕ್ಕೆ ವಿಭಿನ್ನವಾಗಿ ಚಾಲನೆ ನೀಡಿದರು. ಇದನ್ನೂ ಓದಿ: ಜೂ.3ರಂದು ಅಯೋಧ್ಯಾ ರಾಮಮಂದಿರದ ಸ್ವರ್ಣಗೋಪುರ ಉದ್ಘಾಟನೆ

    ಬಳಿಕ ಸಚಿವರು, ಅಧಿಕಾರಿಗಳು ಸೇರಿ ಹೆತ್ತವರ ಬಳಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಮನವೊಲಿಸಿದರು. ಶಾಲೆ ತೊರೆದ ಮಕ್ಕಳಿಗೆ ಗುಲಾಬಿ ಹೂ ನೀಡಿ, ಅವರನ್ನು ತಮ್ಮ ಕಾರಿನಲ್ಲಿ ನಗರದ ಸಿಧ್ಧಲಿಂಗ ನಗರದ ಸರ್ಕಾರಿ ಪ್ರೌಢಶಾಲೆಗೆ ಸೇರಿಸಿದರು. ಶಾಲೆಯಲ್ಲಿ ಸಮವಸ್ತ್ರ, ಪಠ್ಯಪುಸ್ತಕ, ಹೂವು ನೀಡಿ ಮಕ್ಕಳನ್ನು ಮರಳಿ ಶಾಲೆಗೆ ಸ್ವಾಗತಿಸಿದರು. ನಂತರ ಪ್ರತಿಜ್ಞಾವಿಧಿ ಬೋಧಿಸಿದರು. ಇದನ್ನೂ ಓದಿ: ಪ್ರತಿ ಬಾರಿ ಕಪ್ ನಮ್ದೆ ಅಂತಿದ್ವಿ, ಈ ಸಲ ಆದ್ರೂ ಕಪ್ ನಮ್ಮದಾಗಲಿ: ಎಂ.ಸಿ ಸುಧಾಕರ್

    ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಡಿಡಿಪಿಐ ಆರ್.ಎಸ್ ಬುರಡಿ, ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ ಅಸೂಟಿ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

  • ಸರ್ಕಾರದ ಮೇಲೆ ಸುಳ್ಳು ಆರೋಪ – ಅದಕ್ಕೆ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್: ಹೆಚ್.ಕೆ ಪಾಟೀಲ್

    ಸರ್ಕಾರದ ಮೇಲೆ ಸುಳ್ಳು ಆರೋಪ – ಅದಕ್ಕೆ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್: ಹೆಚ್.ಕೆ ಪಾಟೀಲ್

    ಬೆಂಗಳೂರು: ನಮ್ಮ ಸರ್ಕಾರದ ಮೇಲೆ ತಪ್ಪು ಮಾಹಿತಿ ಕೊಡುವುದು. ಅಪಪ್ರಚಾರ ಮಾಡುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ(BJP) ವಿರುದ್ಧ ಸರ್ಕಾರ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್(H K Patil) ತಿಳಿಸಿದರು.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಸುಳ್ಳು ಮಾಹಿತಿ ಕೊಡ್ತಿದ್ದಾರೆ. ಸರ್ಕಾರದ ವಿರುದ್ಧ ತಪ್ಪು ಅಭಿಪ್ರಾಯ ಬರೋ ಹಾಗೇ ಮಾಡ್ತಿದ್ದಾರೆ. ಹೀಗಿರುವಾಗ ಸುಮ್ಮನೆ ಇರೋದಕ್ಕೆ ಸಾಧ್ಯನಾ? ಹೀಗಾಗಿ ಕೇಸ್ ಹಾಕಲಾಗಿದೆ. ಸರ್ಕಾರದ ವಿರುದ್ಧ ಮಾತಾಡಿದ್ರೆ ಸುಮ್ಮನೆ ಇರೋಕೆ ಸಾಧ್ಯವಿಲ್ಲ. ಅದಕ್ಕೆ ಕೇಸ್ ಹಾಕಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್ ಖರ್ಗೆ

    ಬಿಜೆಪಿ ಸರ್ಕಾರ ಇದ್ದಾಗ 40% ಕಮಿಷನ್ ಬಗ್ಗೆ ಕಾಂಗ್ರೆಸ್(Congress) ಆರೋಪ ಮಾಡಿತ್ತು. ಆಗ ನೀವು ಮಾಡಿದ್ದು ಸುಳ್ಳು ಆರೋಪ ಅಲ್ವಾ ಎಂಬ ಪ್ರಶ್ನೆ. ವಿಪಕ್ಷ ಇದ್ದಾಗ ನಾವು ಮಾಡಿದ ಆರೋಪಗಳಿಗೆ ಅವರು ಕೇಸ್ ಹಾಕಿಲ್ಲ ಅಂದರೆ ಅದರ ಬಗ್ಗೆ ನಮಗೆ ಗೊತ್ತಿಲ್ಲ. ಕೇಸ್ ಹಾಕೋದು ಬಿಡೋದು ಅವರಿಗೆ ಬಿಟ್ಟಿದ್ದು. ನಮ್ಮ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಅದಕ್ಕೆ ನಾವು ಕೇಸ್ ಹಾಕಿದ್ದೇವೆ ಎಂದು ಹೇಳಿದರು.

  • ಭಾರತೀಯರಿಗೆ ಇಂದು ಸಮಾಧಾನ ತಂದ ದಿನ: ಹೆಚ್.ಕೆ ಪಾಟೀಲ್

    ಭಾರತೀಯರಿಗೆ ಇಂದು ಸಮಾಧಾನ ತಂದ ದಿನ: ಹೆಚ್.ಕೆ ಪಾಟೀಲ್

    ಗದಗ: ಇವತ್ತು ಭಾರತೀಯರಿಗೆ ಸಮಾಧಾನದ ದಿನವಾಗಿದೆ. ಉಗ್ರರು ಕುತಂತ್ರದಿಂದ ದೇಶದ ಪ್ರಜೆಗಳ ಹತ್ಯೆಗೈದಿದ್ದರು. ಅವರಿಗೆ ತಕ್ಕ ಶಾಸ್ತಿ ಮಾಡಲು ಸೇನೆಯು ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದು ಸಮಾಧಾನ ತಂದಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್(H K Patil) ಹೇಳಿದರು.

    ಗದಗನಲ್ಲಿ(Gadag) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಸೈನ್ಯ 9 ಸ್ಥಳಗಳಲ್ಲಿ ಆಪರೇಷನ್ ಸಿಂಧೂರ(Operation Sindoor) ಹೆಸರಲ್ಲಿ ಕಾರ್ಯಚರಣೆ ಮಾಡಿದೆ. ದೇಶದ ಜನ ನಿರ್ಣಯಿಸಿ, ಒಗ್ಗಟ್ಟಿನ ಬಲವನ್ನು ಸೈನ್ಯಕ್ಕೆ ನೀಡಿದ್ದೇವೆ. ಭಾರತವನ್ನು(India) ಕೆಣಕಿದರೇ ತಕ್ಕ ಶಾಸ್ತಿ ಆಗುತ್ತದೆ. ದಾಳಿ ಮೂಲಕ ಮೊದಲ ಹೆಜ್ಜೆಯನ್ನು ಇಂದು ಇಟ್ಟಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼ ಪಾಕ್‌ಗೆ ಎಚ್ಚರಿಕೆ ಗಂಟೆ, ಭದ್ರತೆ ವಿಚಾರದಲ್ಲಿ ರಾಜಿ ಇಲ್ಲ: ಗುಡುಗಿದ ಸಿದ್ದರಾಮಯ್ಯ

    ಭಾರತ ಕೇವಲ ಶಾಂತಿ ಪ್ರಿಯರು ಎಂದು ಪಾಕಿಸ್ತಾನದವರು ತಿಳಿದುಕೊಂಡಿದ್ದರು. ಅವರಿಗೆ ಸರಿಯಾದ ಉತ್ತರ ನೀಡುವ ಮೂಲಕ ಜ್ಞಾನೋದಯ ಮಾಡಲಾಗಿದೆ. ಭಾರತವನ್ನು ಕೆಣಕಿದರೆ ಬಿಡುವ ಮಾತೇ ಇಲ್ಲ ಎನ್ನುವಂತಹ ಕಾರ್ಯಚರಣೆ ಮಾಡಲಾಗಿದೆ. ಇದು ಯುದ್ಧ ಕಾಲವಾಗಿದ್ದು, ಎಲ್ಲರೂ ಸನ್ನದ್ಧರಾಗಿರಬೇಕು. ಎಲ್ಲರೂ ತಯಾರಿ ಮಾಡಿಕೊಳ್ಳಬೇಕಿದೆ ಎಂದರು. ಇದನ್ನೂ ಓದಿ: I TOLD MODI – ಆಪರೇಷನ್‌ ಸಿಂಧೂರ ಬೆನ್ನಲ್ಲೇ ಕಾರ್ಟೂನ್‌ ವೈರಲ್‌ !

    ಜಿಲ್ಲೆಯಲ್ಲಿ ಡಿಸಿ, ಎಸ್ಪಿ ಹಾಗೂ ಮಾಜಿ ಸೈನ್ಯದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ನಾಳೆ ಮಾಜಿ ಸೈನಿಕರು, ಎನ್‌ಸಿಸಿ, ಸ್ಕೌಟ್ಸ್, ಗೈಡ್ಸ್, ಪೊಲೀಸ್ ಅಂಗ ಸಂಸ್ಥೆಗಳ ಜೊತೆ ಡಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಜನರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.

  • ಜಾತಿಗಣತಿ ವರದಿ ಅವೈಜ್ಞಾನಿಕ, ತಪ್ಪು ಎಂಬುದೆಲ್ಲಾ ಸಮಾಜ ದ್ರೋಹಿ ಮಾತುಗಳು: ಹೆಚ್.ಕೆ.ಪಾಟೀಲ್

    ಜಾತಿಗಣತಿ ವರದಿ ಅವೈಜ್ಞಾನಿಕ, ತಪ್ಪು ಎಂಬುದೆಲ್ಲಾ ಸಮಾಜ ದ್ರೋಹಿ ಮಾತುಗಳು: ಹೆಚ್.ಕೆ.ಪಾಟೀಲ್

    – ವರದಿ ಓದದೇ ಅವೈಜ್ಞಾನಿಕ ಅಂದ್ರೆ ಹೇಗೆ? ಎಂದು ಸಚಿವರ ಪ್ರಶ್ನೆ
    – ಮುಸ್ಲಿಮರು ಮುಸ್ಲಿಂ ಅಂತ ಬರೆದುಕೊಟ್ಟಿದ್ದಾರೆ

    ಗದಗ: ಜಾತಿ ಜನಗಣತಿ ಅವೈಜ್ಞಾನಿಕ ಹೇಗೆ ಆಗುತ್ತದೆ. ಅವೈಜ್ಞಾನಿಕ, ತಪ್ಪು ವರದಿ, ಯಾರೋ ಹೇಳಿ ಬರೆಸಿದ್ದಾರೆ ಎಂಬ ಮಾತುಗಳು ಸಮಾಜವನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ. ಇವೆಲ್ಲಾ ಸಮಾಜ ದ್ರೋಹಿ ಮಾತುಗಳು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ (H K Patil) ಹೇಳಿದರು.

    ಗದಗದಲ್ಲಿ (Gadag) ಮಾಧ್ಯಮಗಳೊಂದಿಗೆ ಜಾತಿ ಜನಗಣತಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ನಾಯಕರ ಹೇಳಿಕೆ ಕುರಿತು ಅವರು ಮಾತನಾಡಿದರು. ಜಾತಿಗಣತಿ (Caste Census) ವಿವರಗಳು ಬಹುತೇಕ ಬಹಿರಂಗಗೊಂಡಿವೆ. ನಮಗೂ ಅದರ ಪ್ರತಿಗಳು ದೊರೆತಿವೆ. ಏ.17ರಂದು ವಿಶೇಷ ಕ್ಯಾಬಿನೆಟ್ ಸಭೆ ಕರೆಯಲಾಗಿದೆ. ಇದರಲ್ಲಿ ರಾಜಕಾರಣ ಮಾಡಲು ಹೋಗಬಾರದು. ಸಮೀಕ್ಷೆಗಳು ಏನಿವೆ ಎಂಬುದು ಗೊತ್ತಿಲ್ಲದೆ ತಮ್ಮ ಅಭಿಪ್ರಾಯಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇದು ಜಾತ್ಯಾತೀತ ರಾಷ್ಟ್ರ, ಜಾತಿಗಣತಿಗೆ ಯಾವುದೇ ಮಹತ್ವ ಇಲ್ಲ: ಡಾ.ಮಂಜುನಾಥ್

    ಸರ್ಕಾರ ಇನ್ನೂ ಏನು ನಿರ್ಣಯ ಮಾಡಿಲ್ಲ. ಏನು ಸಮೀಕ್ಷೆ ಆಗಿದೆ ಅದನ್ನು ನಾವು ಮಂಡನೆ ಮಾಡಿದ್ದೇವೆ. ಸಿದ್ದರಾಮಯ್ಯ (Siddaramaiah) ಅವರ ಮನೆಯಲ್ಲಿ ಜಾತಿ ಗಣತಿ ಬರೆದಿದ್ದಾರೆ ಎಂದು ಆರ್. ಅಶೋಕ್ (R Ashok) ಹೇಳಿದ್ದಾರೆ. ಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ. ಅದರಲ್ಲಿ ತಕರಾರು ಇದ್ದರೆ, ಹೀಗೆ ಮಾಡಿಲ್ಲ. ಹೀಗೆ ಮಾಡಿ ಎಂಬ ಅಭಿಪ್ರಾಯ ಸೂಚಿಸಿರಿ. ಅದನ್ನು ಸರಿಪಡಿಸುವುದು ಇದ್ದರೆ ಮಾಡುತ್ತೇವೆ ಎಂದರು. ಇದನ್ನೂ ಓದಿ: SRH ತಂಡ ಉಳಿದುಕೊಂಡಿದ್ದ ಹೈದರಾಬಾದ್‌ ಹೋಟೆಲ್‌ನಲ್ಲಿ ಅಗ್ನಿ ಅವಘಡ

    ಸರ್ಕಾರ ಇಷ್ಟೆಲ್ಲಾ ಅವಕಾಶ ಕೊಟ್ಟಾಗಲೂ ರಾಜಕೀಯ ಮಾಡುವುದು ಸರಿಯಾದ ಕ್ರಮವಲ್ಲ. ಅವೈಜ್ಞಾನಿಕ ಯಾವುದು ಇದೆ. ವರದಿ ಓದದೇ ಅವೈಜ್ಞಾನಿಕ ಅಂದ್ರೆ ಹೇಗೆ? ನಿಮ್ಮ ಮನೆಗಳಲ್ಲಿ ಗಣತಿ ಮಾಡಿದ್ದರೆ ನಮ್ಮದು ಈ ಜಾತಿ ಅಂತ ಅದಕ್ಕೆ ನಿಮ್ಮ ಸಹಿ ಇದೆ. ಹೀಗಾಗಿ ಅದು ಹೇಗೆ ಅವೈಜ್ಞಾನಿಕ ಆಗುತ್ತದೆ ಎಂದು ಪ್ರಶ್ನಿಸಿದರು.  ಇದನ್ನೂ ಓದಿ: ಜಾತಿಗಣತಿ ಹೊರಗಡೆ ತರಲು ಕಷ್ಟ, ಆದ್ರೂ ಸಿಎಂ ತಂದಿದ್ದಾರೆ: ಪರಮೇಶ್ವರ್

    ಇನ್ನೂ ಜಾತಿಗಣತಿ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ (V Somanna) ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ಅವರು ಜಾತಿಗಣತಿ ವಿಚಾರದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಏನು ಬದ್ಧತೆ ಇದೆ. ಆ ಬದ್ಧತೆಯನ್ನು ಸಿಎಂ ಅಭಿವ್ಯಕ್ತ ಮಾಡಿದ್ದಾರೆ. ಸಿಎಂ ರಾಜಕೀಯ ಲಾಭ-ನಷ್ಟ ಲೆಕ್ಕ ಹಾಕಿಲ್ಲ ಎಂದರು. ಇದನ್ನೂ ಓದಿ: ಮುಸ್ಲಿಮರು ಜಾಸ್ತಿಯಿದ್ದರೆ ಅಲ್ಪಸಂಖ್ಯಾತರಲ್ಲ ಎಂದು ಘೋಷಿಸಿ: ಛಲವಾದಿ ನಾರಾಯಣಸ್ವಾಮಿ ಸವಾಲ್

    ಜಾತಿ-ಉಪಜಾತಿಗಳ ವಿಂಗಡನೆ ಮಾಡಿದ್ದು, ಮುಸ್ಲಿಂ ವಿಂಗಡನೆ ಯಾಕಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಮರು ಮುಸ್ಲಿಂ ಅಂತ ಬರೆದುಕೊಟ್ಟಿದ್ದಾರೆ. ನಿಮ್ಮ ಜಾತಿ ಯಾವುದು ಎಂಬುದನ್ನು ನೀವೇ ಬರೆದು ಕೊಟ್ಟಿದ್ದಿರಲ್ಲ. ನೀವೇ ಜಾತಿ-ಉಪಜಾತಿಗಳನ್ನು ವಿಂಗಡನೆ ಮಾಡಿಕೊಂಡರೇ ಯಾರು ಏನು ಮಾಡಬೇಕು. ನೀವೇ ಹೇಳಿದ್ದನ್ನು ತೆಗೆದುಕೊಂಡರೇ ಅದು ಅವೈಜ್ಞಾನಿಕನಾ ಎಂದು ಬಿಜೆಪಿ ನಾಯಕರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ

    ಪೊಲೀಸರು ಆತ್ಮರಕ್ಷಣೆಗಾಗಿ ಒಳ್ಳೇ ಹೆಜ್ಜೆ ಇಟ್ಟಿದ್ದಾರೆ
    ಹುಬ್ಬಳ್ಳಿ (Hubballi) ಬಾಲಕಿ ಸಾವು ಪ್ರಕರಣದ ಕುರಿತು ಮಾತನಾಡಿದ ಅವರು, ಹುಬ್ಬಳ್ಳಿ ಬಾಲಕಿಯದ್ದು ಅತ್ಯಂತ ದುರ್ದೈವದ ಘಟನೆಯಾಗಿದೆ. ಮನುಷ್ಯನಂತೆ ವರ್ತನೆ ಮಾಡದೇ ಇದ್ದ ವ್ಯಕ್ತಿ, ಪೊಲೀಸರ ಮೇಲೆಯೂ ಹಲ್ಲೆ ಮಾಡಲು ಹೋಗಿದ್ದ. ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಒಂದು ಒಳ್ಳೇ ಹೆಜ್ಜೆ ಇಟ್ಟಿದ್ದಾರೆ. ಸಮಾಜದಲ್ಲಿ ಇಂತಹ ಘಟನೆಗಳು ಆಗುವುದು ನಿಲ್ಲಬೇಕು. ಅಂತಹ ಸಮಾಜವನ್ನು ನಾವು ಕಟ್ಟಬೇಕಿದೆ ಎಂದು ಹೇಳಿದರು.