ಬೆಂಗಳೂರು: ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನಾಗಮೋಹನ್ ದಾಸ್ (Nagamohan Das) ಅವರ ಏಕಸದಸ್ಯ ಆಯೋಗ ನೇಮಕ ಮಾಡಲಾಗಿತ್ತು. ಒಳಮೀಸಲಾತಿ ವರ್ಗೀಕರಣ ವಿಚಾರದಲ್ಲಿ ಮಧ್ಯಂತರ ವರದಿ ನೀಡಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ (H K Patil) ಹೇಳಿದರು.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಧ್ಯಂತರ ವರದಿಯಲ್ಲಿ 4 ಶಿಫಾರಸು ಮಾಡಿದ್ದಾರೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣವನ್ನು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ನೂತನ ವಿಜ್ಞಾನ ತಂತ್ರಜ್ಞಾನದ ಸಾಧನೆಗಳನ್ನು ಬಳಸಿ 30 ರಿಂದ 40 ದಿವಸಗಳ ಒಳಗೆ ಹೊಸದಾದ ಸಮೀಕ್ಷೆಯನ್ನು ನಡೆಸಬಹುದು. ಹೊಸ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿ ಸಿದ್ಧಪಡಿಸಬೇಕು. ಇದಕ್ಕೆ ಉನ್ನತ ಮಟ್ಟದ ಸಮಿತಿ ರಚನೆ ಸೂಕ್ತ ಎಂದರು. ಇದನ್ನೂ ಓದಿ: ನಂದಿನಿ ಹಾಲಿನ ದರ 4 ರೂ. ಹೆಚ್ಚಳ – ರೈತರಿಗೆ ಪೂರ್ಣ ಹಣ ವರ್ಗಾವಣೆಗೆ ಕ್ಯಾಬಿನೆಟ್ ತೀರ್ಮಾನ
ಹೊಸ ಸಮೀಕ್ಷೆಯ ದತ್ತಾಂಶದ ಆಧಾರದ ಮೇಲೆ ಆದ್ಯತೆಯ ಮೇರೆಗೆ ಹಂಚಿಕೆ ಮಾಡಬೇಕು ಅಂತಾ ಶಿಫಾರಸು ಮಾಡಿದ್ದಾರೆ. ಅಲ್ಲದೇ ನಾಗಮೋಹನ್ ದಾಸ್ ಸಮಿತಿಯನ್ನೇ ಮುಂದುವರಿಸಲು ಕ್ಯಾಬಿನೆಟ್ ತೀರ್ಮಾನ ಮಾಡಿದ್ದು, 60 ದಿವಸಗಳ ಒಳಗೆ ಈ ಕಾರ್ಯವನ್ನು ಪೂರ್ಣಗೊಳಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ – ಹೊಸ ಬಾಂಬ್ ಸಿಡಿಸಿದ ಸಚಿವ ರಾಜಣ್ಣ ಪುತ್ರ
ಬೆಂಗಳೂರು: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಚಿವರ ಭಾಗಿ ಆರೋಪ ವಿಚಾರಕ್ಕೆ ಸಚಿವ ಹೆಚ್.ಕೆ.ಪಾಟೀಲ್ (H.K.Patil) ಪ್ರತಿಕ್ರಿಯಿಸಿದ್ದಾರೆ.
ಮೊದಲು ಇಬ್ಬರು ಸಚಿವರು ಅಂತಾ ಹೇಳಿದ್ರು. ಈಗ ಮೂವರು ಸಚಿವರು ಅಂತಿದ್ದಾರೆ. ಏನೇ ಇರಲಿ, ಕಾನೂನು ಪ್ರಕಾರ ಕ್ರಮ ಆಗಬೇಕು. ಸಿಬಿಐ ತನಿಖೆ ನಡೆಯುತ್ತಿದೆ. ನಾನು ಯಾರ ಮೇಲೂ ಆರೋಪ ಮಾಡಲ್ಲ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಆಗಬೇಕು ಎಂದರು. ಇದನ್ನೂ ಓದಿ: ರನ್ಯಾ ರಾವ್‌ಗೆ KIADBಯಿಂದ ಜಮೀನು ಮಂಜೂರು ಮಾಡಿಲ್ಲ: ಸಿಇಓ ಸ್ಪಷ್ಟನೆ
ಇದೇ ವೇಳೆ, ಸಚಿವ ಎಂ.ಬಿ.ಪಾಟೀಲ್ (M.B.Patil) ಮಾತನಾಡಿ, ಯಾವ ಸಚಿವರು? ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಮಾಧ್ಯಮದಲ್ಲಿ ಬಂದಿದ್ದನ್ನ ನಾನು ಗಮನಿಸಿದ್ದೇನೆ ಎಂದು ತಿಳಿಸಿದರು.
ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕೆಐಎಡಿಬಿಯಿಂದ ಭೂಮಿ ಹಂಚಿಕೆ ಪ್ರಕರಣ ಆರೋಪ ಕುರಿತು ಮಾತನಾಡಿ, ಕೆಐಎಡಿಬಿ ಭೂಮಿ ಹಂಚಿಕೆ ವಿಚಾರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದು. ಅವರ ಕಂಪನಿಗೆ ಶಿರಾದಲ್ಲಿ ಭೂಮಿ ಹಂಚಿಕೆ ಆಗಿತ್ತು ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸಚಿವರಿಗೆ ರನ್ಯಾ ಕರೆ ಮಾಡಿದ್ದಾಳೆ: ಶಾಸಕ ಭರತ್ ಶೆಟ್ಟಿ ಬಾಂಬ್
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ಗೆ ರಾಜ್ಯದ ಪ್ರಭಾವಿ ನಾಯಕರ ಜೊತೆ ನಂಟಿದೆ ಎಂಬ ಆರೋಪ ಕೇಳಿಬಂದಿದೆ. ನಟಿ ಕೆಲ ಸಚಿವರಿಗೆ ಕರೆ ಮಾಡಿದ್ದಾಳೆ. ಆಕೆಯನ್ನು ಬಿಡಿಸಲು ಸಚಿವರು ಪ್ರಭಾವ ಬಳಸಿದ್ದಾರೆಂಬ ಆರೋಪ ವ್ಯಕ್ತವಾಗಿವೆ.
– ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ – ಸಚಿವ ಹೆಚ್.ಕೆ.ಪಾಟೀಲ
ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ಸರ್ಕಾರ ನಿರ್ಣಯ ಕೈಗೊಂಡಿದೆ. ಇವುಗಳ ನಿರ್ಮಾಣ ಮತ್ತು ಕಾರ್ಯನಿರ್ವಹಣೆಯನ್ನು ಅಧಿಕೃತಗೊಳಿಸಿ, ಸುಗಮಗೊಳಿಸುವ ಹಾಗೂ ನಿಯಂತ್ರಿಸುವ ಸಲುವಾಗಿ 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಹೇಳಿದರು.
ಸುವರ್ಣ ಸೌಧದಲ್ಲಿ ಸೋಮವಾರ ವಿಧಾನಸಭೆ ಕಲಾಪದಲ್ಲಿ ವಿಧೇಯಕವನ್ನು ಸದನದ ಪರ್ಯಾಲೋಚನೆಗೆ ಅವರು ಮಂಡಿಸಿದರು. ರೋಪ್‌ವೇಗಳ ನಿರ್ಮಾಣದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ದೊರಕಲಿದೆ. ಈ ರೋಪ್‌ವೇಗಳ ನಿರ್ಮಾಣದ ಜೊತೆಗೆ ನಿರ್ವಹಣೆಯನ್ನು ಸಹ ಪ್ರತ್ಯೇಕವಾಗಿ ಇಡಲು ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಸದನ ಒಪ್ಪಿಗೆ ನೀಡುವಂತೆ ಅವರು ಕೋರಿದರು.
ಆರ್.ಅಶೋಕ್ ಮಾತನಾಡಿ, ವಿಧೇಯಕದಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್‌ವೇ ನಿರ್ಮಿಸಲು ಉದ್ದೇಶಿಸಿದ ಅನೇಕ ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಇದರಿಂದ ಶೀಘ್ರವೇ ಅನುಮತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಸಕ ಡಾ.ಅಶ್ವಥ್ ನಾರಾಯಣ ಮಾತನಾಡಿ, ರೋಪ್‌ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.
ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್‌ವೇಗಳ ಸುರಕ್ಷತೆ ಹಾಗೂ ಗುಣಮಟ್ಟ ಪರೀಶಿಲನೆಗೆ ಸರ್ಕಾರ ವಿಧೇಯಕದಲ್ಲಿ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಶಾಸಕ ಹೆಚ್.ಸಿ.ಬಾಲಕೃಷ್ಣ ಶ್ರವಣಬೆಳಗೊಳದಲ್ಲಿ ರೋಪ್ ವೇ ನಿರ್ಮಿಸಲು ಭಾರತೀಯ ಪುರತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ರೋಪ್ ವೇ ಸಲಹಾ ಪ್ರಾಧಿಕಾರದಲ್ಲಿ ಪುರತತ್ವ ಇಲಾಖೆ ಅಧಿಕಾರಿಗಳನ್ನು ಸಹ ಸದಸ್ಯರನ್ನಾಗಿ ಮಾಡುವಂತೆ ಸಲಹೆ ನೀಡಿದರು. ಶಾಸಕರು ಸಲಹೆ ನೀಡಿದ ಸೂಚನೆಗಳ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ಸದನ ಧ್ವನಿ ಮತದಿಂದೊಂದಿಗೆ ಅಂಗೀಕಾರ ನೀಡಿತು.
ವಿಧೇಯಕ ವಾಪಸ್ಸು: ರಾಜ್ಯಪಾಲರ ಸಲಹೆ ಮೇರೆಗೆ ಸಚಿವ ಹೆಚ್.ಕೆ.ಪಾಟೀಲ 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಅನರ್ಹತಾ ನಿವಾರಣೆ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಸದನದಲ್ಲಿ ಅನುಮತಿ ಕೋರಿದರು. ವಿಧೇಯಕ ಹಿಂಪಡೆಯಲು ಸದನ ಅನುಮತಿ ನೀಡಿತು.
ಗದಗ: ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ (Congress) ಗೆಲುವು ಸಾಧಿಸಿದೆ. ಬಿಜೆಪಿಯವರಿಗೆ ಜನ ಮಂಗಳಾರತಿ ಮಾಡಿದ್ದಾರೆ. ಜಾಗೃತ ಮತದಾರ ಬಿಜೆಪಿಗೆ ತಕ್ಕ ಕಪಾಳಮೋಕ್ಷವನ್ನು ಈ ಉಪಚುನಾವಣೆ ಮೂಲಕ ಮಾಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ (H K Patil) ಹೇಳಿದ್ದಾರೆ.
ಇಂದು (ಶನಿವಾರ) ನಗರದ ಕಾಟನ್ ಸೇಲ್ ಸೊಸೈಟಿ ಆವರಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶ ಬಹಳ ಮಹತ್ವದ್ದಾಗಿತ್ತು. ಕಳೆದ ಮೂರು ತಿಂಗಳಿಂದ ನಡೆದ ಹಲವಾರು ರಾಜಕೀಯ ಬೆಳವಣಿಗೆಗೆ ಉತ್ತರ ಕೊಡಬೇಕಾಗಿತ್ತು. ಆ ಉತ್ತರವನ್ನು ಜನ ಸಮರ್ಪಕವಾಗಿ ಕೊಟ್ಟಿದ್ದಾರೆ. ಬಿಜೆಪಿಯವರ ಮುಖಕ್ಕೆ ಮಂಗಳಾರತಿ ಮಾಡಿದ್ದಾರೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆ, ರಾಜ್ಯದಲ್ಲಿ ಸುಳ್ಳು ಪ್ರಚಾರ ನಡೆದವು. ನಮ್ಮ ಸಮಾಜವನ್ನು ಒಡೆಯುವ ದೊಡ್ಡ ಹುನ್ನಾರ, ಕುಕೃತ್ಯ ಮಾಡುವ ಎಲ್ಲಾ ರೀತಿಯ ರಾಜಕೀಯ ನಿಲುವು ಹಾಗೂ ದಾಳ ಬಳಸುವ ಕೆಲಸ ಬಿಜೆಪಿ ಮಾಡಿತು ಎಂದು ಹರಿಹಾಯ್ದರು. ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ
ವಕ್ಫ್ (Waqf) ಹೆಸರಲ್ಲಿ ಸಮಾಜ ಒಡೆಯುವ ಪ್ರಯತ್ನ ಮಾಡಿದರು. ಗ್ಯಾರಂಟಿ ನಿಲ್ಲುಸುತ್ತೇವೆ ಎಂದು ಪ್ರಧಾನಿಯಿಂದ ಸುಳ್ಳು ಹೇಳಿಸಿದರು. ಜನರ ಮನಸ್ಸಿನಲ್ಲಿ ಗೊಂದಲ ಹುಟ್ಟಿಸುವ ಪ್ರಯತ್ನ ಮಾಡಿದರು. ಸಿಎಂ ಅವರನ್ನು ತೇಜೋವಧೆ ಮಾಡುವ ಮೂಲಕ ಸರ್ಕಾರ ಉಳಿಯುವುದಿಲ್ಲ. ಸರ್ಕಾರ ಅಭದ್ರವಾಯಿತು, ಸರ್ಕಾರ ಬದಲಾಗುತ್ತೆ, ಸರ್ಕಾರದ ಭದ್ರತೆ ಬಗ್ಗೆ ಶಂಕೆ ಮೂಡಿಸಿ ಲಾಭ ಪಡೆಯುವ ಪ್ರಯತ್ನ ಬಿಜೆಪಿಗರು ಮಾಡಿದ್ರು. ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳಿದರು. ಜಾಗೃತ ಮತದಾರ ಬಿಜೆಪಿಗೆ ತಕ್ಕ ಕಪಾಳಮೋಕ್ಷವನ್ನು ಚುನಾವಣೆ ಮೂಲಕ ಮಾಡಿದ್ದಾರೆ. ಜಾಗೃತ ಮತದಾರರಿಗೆ ಪಕ್ಷದ ಪರವಾಗಿ, ವೈಯಕ್ತಿಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ರಾಜ್ಯದ ಮೂರು ಕ್ಷೇತ್ರದ ಮತದಾರರಿಗೆ ಸಚಿವರು ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು
ಇನ್ನಾದರೂ ಬಿಜೆಪಿ (BJP) ಅರ್ಥೈಸಿಕೊಳ್ಳಬೇಕು, ಸುಳ್ಳುಗಳು ಬಹಳ ದಿನ ನಡೆಯುವುದಿಲ್ಲ. ಈ ಚುನಾವಣೆ ಸುಳ್ಳುಗಳನ್ನು ಸೋಲಿಸಿ, ಸಮಾಜ ಒಡೆಯುವ ಆ ಕೆಟ್ಟ ಶಕ್ತಿಗಳಿಗೆ ತಕ್ಕ ಶಾಸ್ತಿ ಮಾಡಿದೆ. ತೇಜೋವಧೆ ಮೂಲಕ ರಾಜಕಾರಣ ಮಾಡುತ್ತೇವೆ ಎನ್ನುವ ಪ್ರಯತ್ನಕ್ಕೆ ಸಮಾಜ ತಿರಸ್ಕಾರ ಭಾವನೆ ತೋರಿಸಿದೆ. ಈ ಚುನಾವಣೆಯಲ್ಲಿ ಕೆಟ್ಟ ಭಾಷೆ, ಕೆಟ್ಟ ಸಂಸ್ಕೃತಿ, ಕೆಟ್ಟ ರಾಜಕೀಯ ನಿಲುವುಗಳು, ಸತ್ಯಕ್ಕೆ ದೂರವಾದ ನಿಲುವುಗಳನ್ನು ಇಟ್ಟುಕೊಂಡು ಏನಾದ್ರೂ ಮಾಡಿ ಗೆಲುವು ಪಡೆಯುವ ಪ್ರಯತ್ನ ಮಾಡುತ್ತಿದ್ದರು. ಅವರಿಗೆ ಅಪಜಯ, ಸೋಲು ಆಗಿದೆ. ಇನ್ನಾದರೂ ಮನಗಂಡು ಉತ್ತಮ ರೀತಿಯ ರಾಜಕಾರಣ, ಸುಸಂಸ್ಕೃತ ರಾಜಕಾರಣ ಮಾಡಬೇಕು ಎಂದು ಅಪೇಕ್ಷೆ ಮಾಡುತ್ತೇವೆ. ಈ ಗೆಲುವು ಕೇವಲ ಬಿಜೆಪಿಯನ್ನು ಸೋಲಿಸಿಲ್ಲ. ಸುಳ್ಳು ಹೇಳುವ ಪ್ರವೃತ್ತಿಯ ಮೋದಿ, ಅಮಿತ್ ಶಾ ಅವರನ್ನು ಸೋಲಿಸಿದೆ. ಚುನಾವಣೆ ಪರಿಣಾಮ ಮತ್ತೆ ಸಿದ್ದರಾಮಯ್ಯ ನಾಯಕತ್ವ ಗಟ್ಟಿಗೊಳಿಸಿದೆ ಎಂದರು. ಇದನ್ನೂ ಓದಿ: ಮಂಗಳೂರು | ಎದುರಾಳಿ ವಿರುದ್ಧ ಸಂಚು ಮಾಡ್ತಿದ್ದಾಗ್ಲೇ ನಟೋರಿಯಸ್ ರೌಡಿಶೀಟರ್ ಅರೆಸ್ಟ್!
ಸಿದ್ದರಾಮಯ್ಯನವರನ್ನು (Siddaramaiah) ಏನಾದರೂ ಮಾಡಿ, ಅಶಕ್ತರನ್ನಾಗಿ ಮಾಡುವ ನಿಮ್ಮ ಕುತಂತ್ರ ನಡೆಯದಂತಾಯಿತು. ಜನತಾ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರು ಮತ್ತೆ ಹೀರೊ ಆಗಿ, ನಾಯಕನಾಗಿ ಹೊರಹೊಮ್ಮಿದ್ದಾರೆ. ನಮ್ಮ ಗ್ಯಾರಂಟಿಗಳ ಕ್ರಾಂತಿಕಾರಕ ದೊಡ್ಡ ಜಯ ಇದಾಗಿದೆ. ಇನ್ನು ಮಹಾರಾಷ್ಟ್ರದ ಚುನಾವಣೆ ಬಗ್ಗೆ ಮಾತನಾಡಿ, ಮಹಾರಾಷ್ಟ್ರದಲ್ಲಿ ಆದ ಪರಿಣಾಮ ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಆ ಪರಿಣಾಮಗಳ ಬಗ್ಗೆನೇ ಅನುಮಾನಾಸ್ಪದದಲ್ಲಿದ್ದೇವೆ. ಚುನಾವಣೆ ಪ್ರಕ್ರಿಯೆ, ಎಣಿಕೆಯಲ್ಲಿ ಏನಾಗಿದೆ ಎಂಬುದರ ಬಗ್ಗೆ ಅನುಮಾನ ಬಂದಿದೆ. ರಾಜಕೀಯ ಮಹತ್ವದ ನಾಯಕರು ಅನುಮಾನದ ಬಗ್ಗೆ ಅಭಿಪ್ರಾಯ ಪಡಲು ಪ್ರಾರಂಭ ಮಾಡಿದ್ದಾರೆ. ಸ್ವಲ್ಪ ಕಾದು ನೋಡಬೇಕು, ಅವಲೋಕನ ಮಾಡುತ್ತೇವೆ. ಇದು ಅವಲೋಕನ ಮಾಡಲೇಬೇಕಾದ ಪ್ರಸಂಗ ಎಂದು ಹೇಳಿದರು. ಈ ವೇಳೆ ಕಾಂಗ್ರೆಸ್ ಜಿಲ್ಲಾ ಮುಖಂಡರಾದ ಬಿ.ಬಿ ಅಸೂಟಿ, ಅಶೋಕ ಮಂದಾಲಿ, ಬಸವರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆರ್‌ಎಸ್‌ಎಸ್ ಏನೇನು ಕಾರ್ಯತಂತ್ರ ಮಾಡಿತ್ತು?
ಗದಗ: ಟ್ಯಾಕ್ಸಿ ಪಡೆದ ಯುವಕರು ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು, ಉತ್ತಮ ಜೀವನ ನಡೆಸಿ ರಾಷ್ಟ್ರಕಟ್ಟುವಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿ ಆಗಬೇಕು ಎಂದು ರಾಜ್ಯದ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ (Gadaga) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್ (H K Patil) ಹೇಳಿದರು.
ನಗರದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವರು ಶನಿವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಪ್ರವಾಸಿ ಟ್ಯಾಕ್ಸಿ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಗದಗ ಜಿಲ್ಲೆಯೂ ಪ್ರವಾಸೋದ್ಯಮ ತಾಣ ಆಗಬೇಕು. ರಾಜಧಾನಿ ಬೆಂಗಳೂರಿನಿಂದ ದೂರ ಇರುವ ಕಾರಣಕ್ಕೆ ಪಾರಂಪರಿಕ ಸಂಪತ್ತಾದ ಐತಿಹಾಸಿಕ ದೇವಸ್ಥಾನ ಹೊಂದಿದ ಜಿಲ್ಲೆಯನ್ನು, ಪ್ರವಾಸೋದ್ಯಮ ತಾಣವಾಗಿಸಲು ಪ್ರವಾಸೋದ್ಯಮ ಇಲಾಖೆಯಿಂದ ಸಾಕಷ್ಟು ಕೆಲಸ ಪ್ರಾರಂಭವಾಗಿದೆ. ಯುವಕರು ಸ್ವಯಂ ಉದ್ಯೋಗ ಮಾಡಿ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕು. ಅದಕ್ಕಾಗಿ 200 ಯುವ ಜನಕ್ಕೆ ಪ್ರವಾಸಿ ಟ್ಯಾಕ್ಸಿ ನೀಡಿ ಐತಿಹಾಸಿಕ ದಾಖಲೆಗೆ ಸಾಕ್ಷಿಯಾಗಿದೆ. ಟ್ಯಾಕ್ಸಿಯನ್ನು ತೆಗೆದುಕೊಂಡ ಯುವಕರು ಶ್ರದ್ಧೆಯಿಂದ ಟ್ಯಾಕ್ಸಿಯನ್ನು ಸದುಪಯೋಗ ಪಡೆಸಿಕೊಂಡು 1 ವರ್ಷದ ನಂತರ ಉತ್ತಮ ಜೀವನ ನಡೆಸಿ ಸಾಧನೆ ಮಾಡಿ ಸಮಾಜಕ್ಕೆ ಮಾದರಿ ಆಗಬೇಕು ಎಂದು ಪ್ರೇರೆಪಿಸಿದರು. ಇದನ್ನೂ ಓದಿ: ಒತ್ತೆಯಾಳುಗಳ ಹತ್ಯೆ – ಮಣಿಪುರದ ಸಚಿವರು, ಶಾಸಕರ ಮನೆಗಳ ಮೇಲೆ ಪ್ರತಿಭಟನಾಕಾರರ ದಾಳಿ
ಗದಗ ಜಿಲ್ಲೆಯ ಯುವಕರು ಉತ್ಸಾಹದಿಂದ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾರೆ. ಹಾಗಾಗಿ ಬೆಂಗಳೂರಿನ (Bengaluru) ವಿಮಾನ ನಿಲ್ದಾಣದಲ್ಲಿ ಸಂಚಾರಕ್ಕಾಗಿ ಬಳಸುವ ಟ್ಯಾಕ್ಸಿಗಳಲ್ಲಿ ಇಂದು ಟ್ಯಾಕ್ಸಿ ಪಡೆದ ಜಿಲ್ಲೆಯ ಯುವಕರನ್ನು ಪರಿಗಣಿಸಿ ಬಳಸಿಕೊಳ್ಳಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಅವರಿಗೆ ತಿಳಿಸಿದರು. ಟ್ಯಾಕ್ಸಿಗಳನ್ನು ಪಡೆದ ಯುವಕರು ಗದಗ ಜಿಲ್ಲೆಯನ್ನು ಪ್ರವಾಸೋದ್ಯಮ ತಾಣವನ್ನಾಗಿಸಿ ಅಭಿವೃದ್ಧಿ ಪಡಿಸುವ ಗುರಿ ಹೊಂದಬೇಕು. ಗದಗ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದಲ್ಲಿರುವ ವಿವಿಧ ದೇವಾಲಯ, ಸ್ಮಾರಕ, ನಿಸರ್ಗ ಧಾಮ ಅಲ್ಲಿನ ವಸತಿ, ಊಟ ವ್ಯವಸ್ಥೆ, ಐತಿಹಾಸಿಕ ಹಿನ್ನೆಲೆ ಬಗ್ಗೆ ಮಾಹಿತಿ ಹೊಂದಿರಬೇಕು. ಓಡಾಟದ ನಡುವೆ ಯಾವುದೇ ಚಟಕ್ಕೆ ಬಲಿಯಾಗದೇ ಉತ್ತಮ ಆಹಾರ ಸೇವಿಸಿ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ GRAP-III ಜಾರಿ – ನಿಯಮ ಉಲ್ಲಂಘಿಸಿದವರಿಂದ 5 ಕೋಟಿಗೂ ಅಧಿಕ ದಂಡ ವಸೂಲಿ
ಈ ವೇಳೆ ಶಾಸಕ ಜಿ.ಎಸ್. ಪಾಟೀಲ (G S Patil), ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಗದಗ-ಬೆಟಗೇರಿ (Betageri) ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಬರ್ಚಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಕೆಡಿಪಿ ಸದಸ್ಯ ಡಿಆರ್ ಪಾಟೀಲ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಐಯ್ಯಸ್ವಾಮಿ, ಸಿದ್ದು ಪಾಟೀಲ, ಪ್ರಭು ಬುರಬುರಿ, ನಗರಸಭೆ ಸದಸ್ಯರು, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಾಜೇಂದ್ರ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭರತ್, ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಇದನ್ನೂ ಓದಿ: ಅಪ್ಪ, ಮಕ್ಕಳು ಒಬ್ಬೊರನ್ನ ಕೈ ಬಿಡ್ತಾರೆ, ಇದೇ ದಂಧೆ ಮಾಡ್ತಾರೆ – ಮತ್ತೆ ಸಿಡಿದ ಯತ್ನಾಳ್
ನ್ಯಾ.ಕುನ್ಹಾ ಏಜೆಂಟ್ ಎಂಬ ಜೋಶಿ ಹೇಳಿಕೆಗೆ ಸಚಿವರ ತಿರುಗೇಟು
ಗದಗ: ಜಸ್ಟಿಸ್ ಮೈಕೆಲ್ ಕುನ್ಹಾ (Michael D’Cunha) ಅವರು ಕಡತಗಳನ್ನು ಪರಿಶೀಲಿಸಿ 7,223 ಕೋಟಿ ರೂ. ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ. ನೂರಾರು ಕೋಟಿ ರೂ. ವೆಚ್ಚಗಳ ಕುರಿತು ಲೆಕ್ಕಪತ್ರಗಳಿಲ್ಲ, ಕಾಗದಗಳೂ ಇಲ್ಲ. ಯಡಿಯೂರಪ್ಪ ಸಿಎಂ ಹಾಗೂ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕೆಲ್ ಕುನ್ಹಾ ಅವರ ಆಯೋಗವು ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ಯಡಿಯೂರಪ್ಪ (B. S.Yediyurappa) ಅವರು ಸಿಎಂ ಹಾಗೂ ಶ್ರೀರಾಮುಲು ಅವರು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ 3 ಲಕ್ಷ ಪಿಪಿಇ ಕಿಟ್‌ಗಳನ್ನು 2,117 ರೂ. ನಂತೆ ಖರೀದಿಸಿ ಮಾರಾಟ ಮಾಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಸ್ಟಿಸ್ ಮೈಕೆಲ್ ಕುನ್ಹಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿ. ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು. ಜೋಶಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: 3 ಕ್ಷೇತ್ರದಲ್ಲಿ ಶಾಂತಿಯುತ ಮತದಾನ – ಚನ್ನಪಟ್ಟಣದಲ್ಲಿ 89% ದಾಖಲೆಯ ವೋಟಿಂಗ್
ಕಳೆದ ಕೆಲ ದಿನಗಳಿಂದ ಉನ್ನತ ಹಾಗೂ ಎತ್ತರದ ಹುದ್ದೆಗಳಲ್ಲಿರುವ ಜವಾಬ್ದಾರಿ ವ್ಯಕ್ತಿಗಳು ಮನಬಂದಂತೆ ಮಾತನಾಡುತ್ತಿದ್ದಾರೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯಮೂರ್ತಿಗಳು ಹಾಗೂ ತನಿಖಾ ಸಂಸ್ಥೆಯ ನೇತೃತ್ವ ಹೊಂದಿರುವ ಆಯೋಗಗಳಿಗೂ ಮನಬಂದಂತೆ ಮಾತನಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಜೋಶಿ (Pralhad Joshi) ನಮ್ಮ ರಾಜ್ಯದ ತನಿಖಾ ಆಯೋಗದಕ್ಕೆ ಅಗೌರವ ಹಾಗೂ ಅಸಂಬದ್ಧ ರೀತಿ ನಡೆದುಕೊಂಡಿರುವುದು ಸರಿಯಲ್ಲ. ರಾಷ್ಟ್ರಪತಿಗಳು ಅವರನ್ನು ತಕ್ಷಣ ಮಂತ್ರಿ ಸ್ಥಾನದಿಂದ ತೆಗೆದುಹಾಕಬೇಕು. ಅಲ್ಲದೇ ರಾಜಕೀಯ ಭಯ, ಸತ್ಯಾನ್ವೇಶನೆ ನಡೆಯಬಾರದು. ಭ್ರಷ್ಟಾಚಾರಿಗಳಿಗೆ ಶಿಕ್ಷೆ ಆಗಬಾರದು ಎಂಬ ಹಾದಿಯಲ್ಲಿ ಹೊರಟಿರುವ ಜೋಶಿ ಅವರ ಮೇಲೆ ರಾಷ್ಟ್ರಪತಿಗಳು ಕಾನೂನು ಕ್ರಮಕೈಗೊಳ್ಳುವ ಮೊದಲೇ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಆರೋಗ್ಯವಾಗಿದ್ದೇನೆ, ಕಠಿಣ ವ್ಯಾಯಾಮದಲ್ಲಿ ತೊಡಗಿರೋದ್ರಿಂದ ದೈಹಿಕ ಬದಲಾವಣೆ: ಸುನಿತಾ ವಿಲಿಯಮ್ಸ್ ಸ್ಪಷ್ಟನೆ
ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮಾನ್ಯತೆ ಇಲ್ಲದ 14 ಖಾಸಗಿ ಪ್ರಯೋಗಾಲಯ ಕೋಟ್ಯಂತರ ಹಣ ಸಂದಾಯ ಮಾಡಿದ್ದಾರೆ. ಮತ್ತು ಇನ್ನೂ 8 ಪ್ರಯೋಗಾಲಯ 4 ಕೋಟಿ ಗೂ ಅಧಿಕ ಹಣ ಸಂದಾಯ ಮಾಡಿರುವುದನ್ನು ಆಯೋಗ ತರಾಟೆ ತೆಗೆದುಕೊಂಡಿದೆ. ಕರೋನಾದಂತಹ ಸನ್ನಿವೇಶದಲ್ಲಿ ಭ್ರಷ್ಟಾಚಾರ ಮಾಡಿರುವುದನ್ನು ಆಯೋಗ ಹೇಳಿದೆ. ಅದನ್ನು ಸಹಿಸಿಕೊಳ್ಳಲಾಗದೇ ಜೋಶಿ ಅವರು ಪ್ರತಿಕ್ರಿಯಿಸಿದ್ದಾರೆ. ಸತ್ಯವನ್ನು ಎದುರಿಸುವ ಧೈರ್ಯ ಇಲ್ಲದ ಜೋಶಿ ಅವರು ಕುನ್ಹಾ ಅವರ ಆಯೋಗದ ಬಗ್ಗೆ ಏಜೆಂಟ್ ಎಂದು ಕರೆದಿರುವುದು, ಮದ್ಯಂತರ ವರದಿಗಳ ಬಗ್ಗೆ ಟೀಕೆ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದರು. ಇದನ್ನೂ ಓದಿ: ಪರಿಹಾರದ ಹಣ ನೀಡಲಿಲ್ಲ ಅಂತ ಎಸಿ ಕೂತಿದ್ದ ಚೇರನ್ನೇ ಹೊತ್ತೊಯ್ದ ಸಂತ್ರಸ್ತರು!
ಇನ್ನು ಜಿಲ್ಲೆಯಲ್ಲಿ ಕೋಟುಮಚಗಿ ಗ್ರಾಮದಲ್ಲಿ 562 ಸರ್ವೇ ನಂಬರ್‌ನ ಸೋಮೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ಹೆಸರು ಇದ್ದಾಗ್ಯೂ ಇದು ವಕ್ಫ್ ಹೆಸರಿನಲ್ಲಿದೆ ಎಂದು ಅಪಪ್ರಚಾರ ಮಾಡಿದ್ದಾರೆ. ಇದು ಬದಲಾವಣೆ ಆಗಿಲ್ಲ. ಆ ರೀತಿ ಬದಲಾವಣೆ ಮಾಡಕೂಡದು ಎಂದು ಸರಕಾರ ಆದೇಶ ನೀಡಿದೆ. ಈ ಕುರಿತು ತಪ್ಪು ಮಾಹಿತಿ ಹರಡುವವರ ಮಾತಿಗೆ ಯಾರೂ ಕಿವಿಕೊಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಮೆರಿಕದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಬದ್ಧ, 15,000 ಉದ್ಯೋಗ ಸೃಷ್ಟಿ ಗುರಿ: ಅದಾನಿ
ಬೆಂಗಳೂರು: ನಾಲಗೆಯನ್ನು ಬಿಗಿ ಹಿಡಿದು ಮಾತನಾಡಬೇಕಾದ ದೊಡ್ಡ ಜವಾಬ್ದಾರಿ ಮೋದಿಯವರ (Narendra Modi) ಮೇಲಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ (H K Patil) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಬಹಳ ಜನರಿಂದ ಬುದ್ಧಿ ಹೇಳಿಸಿಕೊಳ್ಳಬೇಕಾದ ಸ್ಥಿತಿಗೆ ಮೋದಿಯವರು ಬಂದಿದ್ದಾರೆ. ತಪ್ಪು ಮಾಡಿದರೆ ಮೋದಿಯವರಿಗೂ ಬುದ್ಧಿ ಹೇಳಬೇಕಾಗುತ್ತದೆ. ಮೋದಿ ವಿರುದ್ಧ ಸಿಎಂ ಪುಢಾರಿ ಪದ ಬಳಸಿದ್ದಾರೆ ಎಂದರೆ ನಾಲಗೆ ಬಿಗಿ ಹಿಡಿದು ಮಾತನಾಡುವ ದೊಡ್ಡ ಜವಾಬ್ದಾರಿ ಮೋದಿಯವರ ಮೇಲಿದೆ. ಪ್ರಜಾಪ್ರಭುತ್ವ ಯಶಸ್ಸಿಗೆ ಒಕ್ಕೂಟ ವ್ಯವಸ್ಥೆ ಕಾರಣ. ಒಕ್ಕೂಟ ವ್ಯವಸ್ಥೆಯನ್ನೇ ಅಶಕ್ತಗೊಳಿಸುವ ನಿಟ್ಟಿನಲ್ಲಿ ಹೇಳಿಕೆ ಕೊಟ್ಟಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಚಿಕನ್ ನೀಡದ್ದಕ್ಕೆ ಹೋಟೆಲ್ ಸಪ್ಲೈಯರ್‌ನನ್ನು ಹತ್ಯೆಗೈದ ಯುವಕರು!
ಟ್ವೀಟ್ ಮೂಲಕ ಕರ್ನಾಟಕದ (Karnataka) ಬಗ್ಗೆ ಹೇಳಿಕೆ ಕೊಡೋದು ಸರಿನಾ? ನ್ಯಾಯಬದ್ಧವಾಗಿ ಬರಬೇಕಾದ ಬರ ಪರಿಹಾರ ಕೊಡಲಿಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗಿ ನಮ್ಮ ಪಾಲು ಪಡೆಯಬೇಕಾಯಿತು. ಇದು ನಿಮ್ಮ ರೀತಿ ನೀತಿ, ಗ್ಯಾರಂಟಿಗಳನ್ನ ಸಹಿಸದೆ ಸಂಕಟ ಬಿದ್ದು ಮಾತನಾಡಿದರೆ ಹೇಗೆ? ತಪ್ಪು ಮಾಡಿದಾಗ ಮೋದಿಯವರಿಗೂ ಬುದ್ಧಿಮಾತು ಹೇಳಬೇಕಾಗುತ್ತದೆ. ಬಹಳ ಬುದ್ಧಿ ಹೇಳಿಸಿಕೊಳ್ಳುವ ಹಂತಕ್ಕೆ ಮೋದಿ ಬಂದಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಐಫೋನ್ 16 ಆಯ್ತು ಈಗ ಇಂಡೋನೇಷ್ಯಾದಲ್ಲಿ ಗೂಗಲ್ ಪಿಕ್ಸೆಲ್ ಮಾರಾಟಕ್ಕೆ ನಿಷೇಧ
ಮೋದಿ ಗ್ಯಾರಂಟಿ ಬದಲು ಕರ್ನಾಟಕ ಗ್ಯಾರಂಟಿ ಚರ್ಚೆ ಆಗುತ್ತಿದೆ. ಗ್ಯಾರಂಟಿ ಕುರಿತು ಲಘುವಾಗಿ ಮಾತನಾಡುತ್ತಾರೆ. ಇದು ಸರಿನಾ? ನಾವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಜಾರಿ ಮಾಡಿಲ್ವ? ವಕ್ಫ್ ಬೋರ್ಡ್ ತೆಗೆಯುತ್ತೇವೆ ಅಂದರೆ ಏನ್ರಿ ಅದು? ವಕ್ಫ್ ಬೋರ್ಡ್ ಅಂದರೆ ಸರ್ಕಾರದ ಒಂದು ಭಾಗ. ಇಷ್ಟು ದಿನ ವಕ್ಫ್ ಬೋರ್ಡ್ (Waqf Board) ಕಾಣಿಸಲಿಲ್ವ? ಈಗ ಚುನಾವಣೆ ಬಂದಿದೆ, ಜನರ ಭಾವನೆಗಳನ್ನ ಕೆರಳಿಸಲು ಈ ರೀತಿ ಮಾಡುತ್ತೀರಾ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ:ಪಾರದರ್ಶಕ ಚುನಾವಣೆ ಹಾಳುಗೆಡವಲು ಕಾಂಗ್ರೆಸ್ ಸಂಚು; ಹೆಚ್‌ಡಿಕೆ ನೇರ ಆರೋಪ
ಗದಗ: ರೈತರ ಆಸ್ತಿ ವಕ್ಫ್ (Waqf Land) ಪಾಲಾಗುತ್ತಿದೆ ಎಂಬುದು ತಪ್ಪು ಕಲ್ಪನೆ. ಇದಕ್ಕೆ ಗದಗದಲ್ಲಿ ಆತಂಕ, ಟೀಕೆ ಟಿಪ್ಪಣಿಗೆ ಅವಕಾಶವಿಲ್ಲ. 689 ವಕ್ಫ್ ಆಸ್ತಿಗಳಿವೆ. ಯಾವುದೇ ರೈತರಿಗೆ ನೋಟಿಸ್ ಬಂದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಸರ್ಕಾರದ ಮೇಲೆ ಸುಳ್ಳು ಆಪಾದನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಉಪಚುನಾವಣೆಗಾಗಿ ಮಾಡಿರುವ ಗೊಂದಲ, ಸೃಷ್ಟಿ ಹೊರತು ಬೇರೇನಲ್ಲ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ (H K Patil) ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಇಂದು (ಬುಧವಾರ) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ಆಸ್ತಿ ಖಾತಾ ಬದಲಾವಣೆ ವಕ್ಫ್ ಆಗಿರುವ ಬಗ್ಗೆ ನಮ್ಮ ರೈತರಿಗೆ ಆತಂಕದ ಪರಿಸ್ಥಿತಿ ಇಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿ, ತಹಶಿಲ್ದಾರ್ ಸುದೀರ್ಘವಾಗಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳು 2019 ರಿಂದ 2023ರ ಅವಧಿಯಲ್ಲಿ ವಕ್ಫ್ ಆಸ್ತಿಗಳಿಗೆ ಸಂಭಂದಿಸಿದಂತೆ ರೈತರಿಗೆ ಯಾವುದೇ ನೋಟಿಸ್ ನೀಡಿಲ್ಲ ಎನ್ನುವ ಮಾಹಿತಿಯನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ
ನಂತರ ಕಪ್ಪತ್ತಗುಡ್ಡ ವಿಷಯವಾಗಿ ಮಾತನಾಡಿ, ಅಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ. ಕಪ್ಪತ್ತಗುಡ್ಡ ಸಂರಕ್ಷಣೆ ನಮ್ಮ ಹೊಣೆ. ಕಪ್ಪತ್ತಗುಡ್ಡ ಉಳಿಸಲು ನಮ್ಮ ಸರ್ಕಾರ ಬದ್ಧವಿದೆ. ಕಪ್ಪತ್ತಗುಡ್ಡ ಕಬ್ಬಿಣದ ಅದಿರು, ಬಂಗಾರ ಗಣಿಗಾರಿಕೆ, ಇತರೆ ಅದಿರು ತೆಗೆಯಲು ಬಳಕೆ ಆಗಬಾರದು ಎನ್ನುವ ಬಗ್ಗೆ ಸರ್ವಾನುಮತದ ನಿರ್ಣಯ ಜನತೆ ತೆಗೆದುಕೊಂಡಿದ್ದಾರೆ. ಈಗ ಹೇಗಿದೆ, ಹಾಗೆ ಉಳಿಸಬೇಕು ಎಂಬ ದೃಢವಾದ ಸಂಕಲ್ಪ ನಮ್ಮದು. ಆ ಸಂಕಲ್ಪ ಮುಂದುವರೆಸುವ ಪ್ರಯತ್ನ ಮಾಡುತ್ತೇವೆ. ಅಲ್ಲಿ ಪರಿಸರ ವೃದ್ಧಿ ಆಗಬೇಕು. ಪ್ರವಾಸಿಗರು ಬರಬೇಕು. ನೀವು ಪ್ರಕೃತಿ ಸೌಂದರ್ಯ ಸವಿಯಲು, ಆನಂದಕ್ಕಾಗಿ ಅಲ್ಲಿಗೆ ಹೋಗಬೇಕು ವಿನಃ ಬೇಟೆಯಾಡಲು ಅಲ್ಲ ಎಂಬ ಖಡಕ್ ಸಂದೇಶ ನೀಡಿದರು. ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ನಾವು ವಿರುದ್ಧವಾಗಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಮಾತು ಸತ್ಯಕ್ಕೆ ದೂರ: ಪರಮೇಶ್ವರ್
ಪ್ರತಿ ವರ್ಷ ರಾಜ್ಯದಲ್ಲಿ 36 ರಿಂದ 40 ಕೋಟಿ ಜನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಈ ಸಂಖ್ಯೆಯನ್ನು 48 ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಸುಮಾರು 10 ರಿಂದ 12 ಲಕ್ಷ ಜನ ವಿದೇಶಿಗರು ನಮ್ಮ ರಾಜ್ಯಕ್ಕೆ ಬರುತ್ತಾರೆ. ವಿದೇಶಿಗರ ಪ್ರಮಾಣವನ್ನು 20 ಲಕ್ಷಕ್ಕೆ ಏರಿಸುವ ಗುರಿ ಹೊಂದಲಾಗಿದ್ದು, ಈ ಮೂಲಕ ರಾಜ್ಯದ ಪ್ರವಾಸೋದ್ಯಮವನ್ನು ಉನ್ನತೀಕರಿಸುವ ಕೆಲಸ ಸರ್ಕಾರ ಮಾಡಲಿದೆ. ನಮ್ಮ ಗುರಿ ಮುಟ್ಟುವಲ್ಲಿ ಜನರ ಸಹಕಾರ, ಸ್ನೇಹ ಮನೋಭಾವದ ಅವಶ್ಯಕತೆ ಇದೆ. ಅತಿಥಿಗಳಿಗೆ ಗೌರವಿಸುವ ಗುಣವನ್ನು ಸ್ಥಳಿಯರು ಬೆಳೆಸಿಕೊಂಡಾಗ ಪ್ರವಾಸೋದ್ಯಮ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದರು. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ಜೈಲಿಂದ ಹೊರಬಂದ ದರ್ಶನ್; ಬಳ್ಳಾರಿ ಜೈಲಿನ ಹೊರಗೆ ‘ಅಭಿಮಾನದ ಹೊಳೆ’
ಒಟ್ಟಾರೆಯಾಗಿ ಕರ್ನಾಟಕವನ್ನು ಪ್ರವಾಸಿ ತಾಣವಾಗಿಸಲು ಹೊಸ ನೀತಿ ಜಾರಿಗೆ ತರಲಾಗಿದೆ. ಸಾಂಸ್ಕೃತಿಕ, ಪರಿಸರ, ಶೈಕ್ಷಣಿಕ, ಚಲನಚಿತ್ರ, ಒಳನಾಡಿನ ಜಲ, ವೈದ್ಯಕೀಯ, ಗಣಿಗಾರಿಕೆ, ಗ್ರಾಮೀಣ, ಆಧ್ಯಾತ್ಮಿಕ, ಸ್ವಾಸ್ಥ್ಯ ಪ್ರವಾಸೋದ್ಯಮ ಸೇರಿದಂತೆ ಒಟ್ಟು 25 ವಿಷಯಾಧಾರಿತ ಕ್ಷೇತ್ರಗಳನ್ನು ಯಶಸ್ವಿ ಮಾಡಲು 44 ವಿವಿಧ ರೀತಿಯ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಾಗಿದೆ. ಇದನ್ನೂ ಓದಿ: Madhya Pradesh| ಹುಲಿಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳ ನಿಗೂಢ ಸಾವು
1924 ಡಿ.26 ಮತ್ತು 27ರಲ್ಲಿ ಬೆಳಗಾವಿಯಲ್ಲಿ (Belagavi) ನಡೆದ ಎಐಸಿಸಿ ಸಭೆಯಲ್ಲಿ ಮಹಾತ್ಮ ಗಾಂಧಿ ಕಾಂಗ್ರೆಸ್‌ನ (Congress) ಅಧ್ಯಕ್ಷರಾಗಿರುತ್ತಾರೆ. ಅದು 39ನೇ ಅಧಿವೇಶನವಾಗಿತ್ತು. ಮಹಾತ್ಮ ಗಾಂಧಿ ಪಕ್ಷದ ನಾಯಕತ್ವ ವಹಿಸಿದ ಮೇಲೆ ಸ್ವಾತಂತ್ರ‍್ಯ ಸಂಗ್ರಾಮದ ಸ್ವರೂಪ ಬದಲಾವಣೆ ಆಯಿತು. ಈ ಮಹತ್ವದ ಅಧಿವೇಶನ ಮೆಲುಕು ಹಾಕಲು ಶತಮಾನೋತ್ಸವ ನಡೆಸಲು ತಿರ್ಮಾನಿಸಲಾಗಿದೆ. ಅ.2, 2024 ರಿಂದ ಅ.2, 2025ರವರೆಗೆ ಅದ್ಧೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ. ಈ ಕಾರ್ಯಕ್ರಮ ಯಶಸ್ವಿಗೆ 30 ಜನರ ಸಮಿತಿ ರಚಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಅಮೇರಿಕಾ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಅವರನ್ನು ಆಹ್ವಾನಿಸಲು ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – A8 ಆರೋಪಿ ರವಿಶಂಕರ್ ಬಿಡುಗಡೆ
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗುರಣ್ಣ ಬಳಗಾನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ್ ಬಬರ್ಚಿ, ಗದಗ-ಬೆಟಗೇರಿ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಿ. ಬಿ ಅಸೂಟಿ, ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಮಂದಾಲಿ, ಕೆಡಿಪಿ ಸಮಿತಿ ಸದಸ್ಯ ಎಸ್ ಎನ್ ಬಳ್ಳಾರಿ, ಬಸವರಾಜ ಕಡೆಮನಿ ಉಪಸ್ಥಿತರಿದ್ದರು. ಇದನ್ನೂ ಓದಿ:ದರ್ಶನ್ ಬಿಡುಗಡೆ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಫ್ಯಾನ್ಸ್
ಬೆಂಗಳೂರು: ವಿಜಯಪುರದ (Vijayapura) ರೈತರಿಗೆ ವಕ್ಫ್ ಬೋರ್ಡ್ (Waqf Board) ನೀಡಿರುವ ನೋಟಿಸ್‌ನ್ನು ವಾಪಸ್ ಪಡೆಯುತ್ತೇವೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ( H.K Patil ) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ. ರೈತರಿಗೆ ನೋಟಿಸ್ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಎಂ. ಬಿ ಪಾಟೀಲ್ ಹೇಳಿದ್ದಾರೆ. ಸರ್ಕಾರ ನೋಟಿಸ್ ವಾಪಸ್ ಪಡೆಯಲಿದೆ. ಅಲ್ಲಿನ ತಹಶಿಲ್ದಾರ್ ತಪ್ಪು ಮಾಡಿದ್ದಾರೆ. ಹೀಗಾಗಿ ನೋಟಿಸ್ ವಾಪಸ್ ಪಡೆಯೋ ಕೆಲಸ ಮಾಡ್ತೀವಿ. ರಾಜಕೀಯವಾಗಿ ಆರೋಪ ಮಾಡೋದು ಸರಿಯಲ್ಲ ಎಂದು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೊನ್ನೆ 11 ಸಾವಿರ ಅಂದಿದ್ರು, ಈಗ 15 ಸಾವಿರ ಎಕ್ರೆಗೆ ಏರಿಕೆಯಾಗಿದೆ: ಜಮೀರ್ ವಿರುದ್ಧ ಯತ್ನಾಳ್ ಕಿಡಿ
ಸಚಿವ ಜಮೀರ್ ಅಹಮದ್ ರಾಜೀನಾಮೆಗೆ ಬಿಜೆಪಿ ಅಗ್ರಹ ವಿಚಾರವಾಗಿ, ಜಮೀರ್ ಯಾಕೆ ರಾಜೀನಾಮೆ ಕೊಡಬೇಕು? ತಹಶಿಲ್ದಾರ್ ತಪ್ಪು ಮಾಡಿರೋದು. ತಹಶಿಲ್ದಾರ್ ನೊಟೀಸ್ ಕೊಟ್ಟಿದ್ರೆ ಅದನ್ನು ಡಿಸಿ ನೋಡ್ತಾರೆ. ಅದಕ್ಕೂ ಮೇಲೆ ಸರ್ಕಾರ ಇದೆ. ಹೀಗಿರುವಾಗ ಜಮೀರ್ ಯಾಕೆ ರಾಜೀನಾಮೆ ನೀಡಬೇಕು? ಎಂ.ಬಿ ಪಾಟೀಲ್ ಎಲ್ಲಾ ಗೊಂದಲಗಳನ್ನ ನಿವಾರಣೆ ಮಾಡಿದ್ದಾರೆ. ಈಗ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ
– ಕೇಸ್‌ನಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನ ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಆರೋಪ
ಬೀದರ್: ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಟೈಂನಲ್ಲಿ. ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನು ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಬೀದರ್‌ನಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಬಾಂಬ್ ಸಿಡಿಸಿದ್ದಾರೆ.
ಈ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ, ಆರ್.ಅಶೋಕ್ ಸೇರಿದಂತೆ ಎಲ್ಲರೂ ಕ್ಷಮೆ ಕೇಳಬೇಕು. ಸೈಲ್‌ಗೆ ಲೂಟಿ ಮಾಡಲು ಅನುಕೂಲ ಮಾಡಿದ 23 ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದರು. ಹೀಗಾಗಿ, ಇಂಥಾ ತೀರ್ಪು ಬಂದಾಗ ಬಿಜೆಪಿ ನಾಯಕರು ಮುಖ ಕೆಳಗಡೆ ಹಾಕಬೇಕು ಎಂದು ಕಿಡಿಕಾರಿದರು.
ಈ ಪ್ರಕರಣದಲ್ಲಿ ಇದ್ದವರನ್ನು ನೀವು ಕೈಬಿಟ್ಟಿದ್ದೀರಿ. ಆದರೆ, ನಾಚಿಗೆ ಪಟ್ಟುಕೊಳ್ಳದೇ ಹೇಳಿಕೆ ನೀಡಲು ಬರುತ್ತೀರಲ್ಲ? ಸಮಾಜಕ್ಕೆ ಮುಖ ತೋರಿಸಲು ನಿಮಗೆ ಮುಜುಗರ ಅನಿಸೋದಿಲ್ವಾ? ಸೈಲ್‌ಗೆ ಸಹಕಾರ ನೀಡಿದ ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದಕ್ಕೆ ನೀವು ಕ್ಷಮೆ ಕೇಳಬೇಕು. ಜೊತೆಗೆ ನೀವು ಪಶ್ಚಾತ್ತಾಪ ಏನು ಮಾಡಬೇಕು ಎಂದು ಆತ್ಮಾವಲೋಕ ಮಾಡಿಕೊಳ್ಳಿ ಎಂದು ಬಿಜೆಪಿ ನಾಯಕರಿಗೆ ತೀರುಗೇಟು ನೀಡಿದರು.
ಬೇಲೆಕೇರಿ ಅದಿರು ಪ್ರಕರಣದಲ್ಲಿ ಸತೀಶ್ ಸೈಲ್‌ಗೆ ಜೈಲು ಶಿಕ್ಷೆ ಕುರಿತು ಮಾತನಾಡಿ, ಯಾರು ಉಪ್ಪು ತಿಂದಿದ್ದಾರೋ ಅವರು ನೀರು ಕುಡಿಯಲೇಬೇಕು. ಅವರಿಗೆ ಶಿಕ್ಷೆಯಾಗಬೇಕು ಅಂತಾ ನಾವೇ ತನಿಖೆ ಮಾಡಿಸಿದ್ದು. ಹೀಗಾಗಿ ಇಂದು ಕೋರ್ಟ್ ಸೈಲ್‌ಗೆ ಶಿಕ್ಷೆ ನೀಡಿದ್ದು. ಲೂಟಿ ಮಾಡಿದವರಿಗೆ ಈ ಮಟ್ಟದ ಶಿಕ್ಷೆ ನೀಡಬಹುದು ಎಂದು ಕೋರ್ಟ್ ತೀರ್ಪು ನೀಡಿ ತೋರಿಸಿದೆ ಎಂದು ಸೈಲ್ ವಿರುದ್ಧವೇ ಸಚಿವರು ಗುಡುಗಿದ್ದಾರೆ.