Tag: H.Nagesh

  • ಮೈತ್ರಿ ಸರ್ಕಾರದ ಸಂಪುಟಕ್ಕೆ ಪಕ್ಷೇತರ ಶಾಸಕರ ಎಂಟ್ರಿ

    ಮೈತ್ರಿ ಸರ್ಕಾರದ ಸಂಪುಟಕ್ಕೆ ಪಕ್ಷೇತರ ಶಾಸಕರ ಎಂಟ್ರಿ

    ಬೆಂಗಳೂರು: ಹಲವು ಗೊಂದಲಗಳ ನಡುವೆ ಮೈತ್ರಿ ಸಂಪುಟಕ್ಕೆ ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಎಂಟ್ರಿ ಪಡೆದಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ಇಬ್ಬರು ಶಾಸಕರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹಿಂದೆ ಮೈತ್ರಿ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಆರ್.ಶಂಕರ್ ಇಂದು ಮತ್ತೊಮ್ಮೆ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಪದ ಗ್ರಹಣ ಕಾರ್ಯಕ್ರಮದಲ್ಲಿ ಸಿಎಂ, ಮಾಜಿ ಸಿಎಂ ಸಿದ್ದರಾಮಯ್ಯ ಸಚಿವರಾದ ಜಮೀರ್ ಅಹ್ಮದ್, ಡಿ.ಕೆ.ಶಿವಕುಮಾರ್ ಬಂಡೆಪ್ಪ ಕಾಶೆಂಪುರ್ ಮತ್ತು ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಪಕ್ಷೇತರರಿಗೆ ಸಂಪುಟದಲ್ಲಿ ಸ್ಥಾನ ಮಾನ ಕೊಟ್ರೇ ಏನ್ ತಪ್ಪಿದೆ. ಯಾವ ಅಸಮಾಧಾನವೂ ನಮ್ಮೊಳಗಿಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುತ್ತೇವೆ. ಪಕ್ಷ ಉಳಿಸಲು ಸ್ಥಿರತೆ ಕಾಪಾಡಲು ಎಲ್ಲರ ಒಮ್ಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಏಕಮುಖ ತೀರ್ಮಾನ ಅಲ್ಲ. ಹೊಸಬರಿಗೆ ಖಾತೆ ಹಂಚಿಕೆ ವಿಚಾರ ದ ಬಗ್ಗೆ ಮುಖಂಡರು ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದೇವೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಹೇಳಿದಂತೆ ನಾವು ನಡೆಯುತ್ತೇವೆ ಎಂದು ಹೇಳುವ ಶಾಸಕ ಸುಧಾಕರ್ ಹೇಳಿಕೆಗೆ ಟಾಂಗ್ ನೀಡಿದರು.

  • ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು ಯಾಕೆ: ಕಾರಣ ಕೊಟ್ಟ ಪಕ್ಷೇತರರು

    ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು ಯಾಕೆ: ಕಾರಣ ಕೊಟ್ಟ ಪಕ್ಷೇತರರು

    ಮುಂಬೈ: ಸಮ್ಮಿಶ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ನಮ್ಮನ್ನು ಗಣನೆಗೆ ತೆಗೆದುಕೊಳ್ಳದ್ದಕ್ಕೆ ನಾವು ಬೆಂಬಲವನ್ನು ವಾಪಸ್ ಪಡೆಯುತ್ತಿರುವುದಾಗಿ ರಾಣೆಬೆನ್ನೂರು ಶಾಸಕ ಆರ್. ಶಂಕರ್ ತಿಳಿಸಿದ್ದಾರೆ.

    ಮೃತ್ರಿ ಸರ್ಕಾರದ ಕಾರ್ಯವೈಖರಿಯಿಂದ ನಾವು ಬೇಸತ್ತಿದ್ದೇವೆ. ಹೀಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ನೀಡಿದ್ದ ಮೈತ್ರಿಯನ್ನು ಹಿಂಪಡೆದಿದ್ದೇವೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಮತ್ತೊಬ್ಬ ಪಕ್ಷೇತರ ಶಾಸಕ ಮುಳುಬಾಗಿಲು ನಾಗೇಶ್ ಅವರು, ಜನರು ಬಿಜೆಪಿಗೆ ಬೆಂಬಲ ನೀಡುತ್ತಿದ್ದು, ಮೈತ್ರಿ ಸರ್ಕಾರದಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ. ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಆಗುತ್ತವೆ ಅಂತ ಬೆಂಬಲ ನೀಡಿದ್ದೆ. ಆದರೆ ಅಂತಹ ಯಾವುದೇ ಬೆಳವಣಿಗೆಗಳು ಕಾಣುತ್ತಿಲ್ಲ. ಹೀಗಾಗಿ ನಾನು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದು, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮುಂದಾಗುತ್ತೇನೆ ಎಂದು ತಿಳಿಸಿದರು.

    ಸಚಿವ ಸ್ಥಾನ ಹಿಂಪಡೆದಿದ್ದರಿಂದ ಆರ್.ಶಂಕರ್ ಅವರು ಮೈತ್ರಿ ಸರ್ಕಾರದ ವಿರುದ್ಧ ಅಸಮಾಧನವನ್ನು ಹೊರಹಾಕಿದ್ದರು. ಇತ್ತ ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಪಕ್ಷೇತರ ಶಾಸಕ ನಾಗೇಶ್ ಅವರಿಗೆ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಈ ಕಾರಣಕ್ಕೆ ಇಬ್ಬರು ರಾಜ್ಯಪಾಲರಿಗೆ ಪತ್ರ ಬರೆದು ಸರ್ಕಾರಕ್ಕೆ ನೀಡಿದ ಬೆಂಬಲವವನ್ನು ವಾಪಸ್ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv