Tag: H.P.Swaroop

  • ರೇವಣ್ಣ ಕುಟುಂಬದವ್ರು ನನ್ನ ಪರ ಪ್ರಚಾರಕ್ಕೆ ಬರುತ್ತಾರೆ: ಹಾಸನ ಜೆಡಿಎಸ್ ಅಭ್ಯರ್ಥಿ

    ರೇವಣ್ಣ ಕುಟುಂಬದವ್ರು ನನ್ನ ಪರ ಪ್ರಚಾರಕ್ಕೆ ಬರುತ್ತಾರೆ: ಹಾಸನ ಜೆಡಿಎಸ್ ಅಭ್ಯರ್ಥಿ

    ಹಾಸನ: ಟಿಕೆಟ್ ನೀಡಿದ್ದಕ್ಕಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ( H. D. Deve Gowda) ಧನ್ಯವಾದ ಅರ್ಪಿಸುತ್ತೇನೆ ಎಂದು ಜೆಡಿಎಸ್ (JDS) ಅಭ್ಯರ್ಥಿ ಹೆಚ್.ಪಿ ಸ್ವರೂಪ್ (H.P Swaroop) ಹೇಳಿದ್ದಾರೆ.

    ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಹೈಕಮಾಂಡ್ ನನಗೆ ಟಿಕೆಟ್ ನೀಡಿರುವುದು ಸಂತಸ ತಂದಿದೆ. ರೇವಣ್ಣ (H. D. Revanna) ಕುಟುಂಬ ನನ್ನ ಪರ ಪ್ರಚಾರಕ್ಕೆ ಬರುತ್ತಾರೆ. ಶೀಘ್ರದಲ್ಲೇ ರೇವಣ್ಣ ಅವರನ್ನು ಭೇಟಿಯಾಗುತ್ತೇನೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

    ಈ ಚುನಾವಣೆ ಶಾಸಕ ಪ್ರೀತಂಗೌಡ ಹಾಗೂ ಸ್ವಾಭಿಮಾನದ ನಡುವೆ ನಡೆಯುವ ಚುನಾವಣೆಯಾಗಿದೆ. ಇಲ್ಲಿ ನಮ್ಮ ತಂದೆಯ ಕೆಲಸಗಳು ನನ್ನ ಕೈಹಿಡಿಯಲಿವೆ. ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದಿದ್ದಾರೆ.

    ಪಕ್ಷದ ಟಿಕೆಟ್ ಸಿಗಲು ಕಾರಣರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ – ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

  • ಕ್ಲೈಮ್ಯಾಕ್ಸ್ ಹಂತ ತಲುಪಿದ ಹಾಸನ ಟಿಕೆಟ್ ದಂಗಲ್ – ಇಂದು ಹೆಚ್‌ಡಿಕೆ, ರೇವಣ್ಣ ಸಂಧಾನ

    ಕ್ಲೈಮ್ಯಾಕ್ಸ್ ಹಂತ ತಲುಪಿದ ಹಾಸನ ಟಿಕೆಟ್ ದಂಗಲ್ – ಇಂದು ಹೆಚ್‌ಡಿಕೆ, ರೇವಣ್ಣ ಸಂಧಾನ

    ಹಾಸನ: ಹಾಸನ (Hassan) ಟಿಕೆಟ್ ದಂಗಲ್ ಕ್ಲೈಮ್ಯಾಕ್ಸ್ (Climax) ಹಂತಕ್ಕೆ ತಲುಪಿದ್ದು, ಭಾನುವಾರ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (H.D.Deve Gowda) ಹೆಚ್‌ಡಿ ಕುಮಾರಸ್ವಾಮಿ ಹಾಗೂ ಹೆಚ್‌ಡಿ ರೇವಣ್ಣ ಅವರ ಜೊತೆ ಮಾತನಾಡಿ ಸಂಧಾನ ಮಾಡಲಿದ್ದಾರೆ.

    ಸೋಮವಾರ ಜೆಡಿಎಸ್ (JDS) ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್‌ಡಿ ರೇವಣ್ಣ (H.D.Revanna) ದಂಪತಿ ಕೊನೆ ಕ್ಷಣದ ಕಸರತ್ತನ್ನು ನಡೆಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾಗಿ ಅವರ ಮನವೊಲಿಸುವ ಸಲುವಾಗಿ ರೇವಣ್ಣ ಹಾಗೂ ಅವರ ಪತ್ನಿ ಭವಾನಿ ರೇವಣ್ಣ (Bhavani Revanna) ಭಾನುವಾರ ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಈ ಮೂಲಕ ಕಟ್ಟ ಕಡೆಯ ಪ್ರಯತ್ನಕ್ಕೆ ರೇವಣ್ಣ ದಂಪತಿ ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ

    ಸೋಮವಾರ ಎರಡನೇ ಪಟ್ಟಿ ಬಿಡುಗಡೆ ಎಂದು ಕುಮಾರಸ್ವಾಮಿ (H.D.Kumaraswamy) ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಹೆಚ್‌ಡಿಕೆ ಹಾಗೂ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿ ಸಂಧಾನ ಮಾಡುವ ಸಾಧ್ಯತೆಯಿದೆ. ಇಬ್ಬರೂ ಒಮ್ಮತಕ್ಕೆ ಬಂದಲ್ಲಿ ನಾಳೆ ಹಾಸನ ಟಿಕೆಟ್ ಘೋಷಣೆಯಾಗುವ ಸಾಧ್ಯತೆಯಿದೆ. ರೇವಣ್ಣ ತಮ್ಮ ಪತ್ನಿ ಭವಾನಿಗೆ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸುತ್ತಿದ್ದರೆ ಇತ್ತ ಕುಮಾರಸ್ವಾಮಿ ಹೆಚ್‌ಪಿ ಸ್ವರೂಪ್ (H.P.Swaroop) ಬೆನ್ನಿಗೆ ನಿಂತಿದ್ದಾರೆ. ಇದನ್ನೂ ಓದಿ: ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ