Tag: H Vishawanath

  • ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ: ಎಚ್ ವಿಶ್ವನಾಥ್

    ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ: ಎಚ್ ವಿಶ್ವನಾಥ್

    ಮೈಸೂರು: ಕೋವಿಡ್ ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ 1 ರಿಂದ 9 ತರಗತಿಯ ವರೆಗೆ ಸಂಪೂರ್ಣ ರಜೆ ಮಾಡಿ. ಎಸ್‍ಎಸ್‍ಎಲ್‍ಸಿ ಮತ್ತು 2ನೇ ಪಿಯುಸಿ ಮಕ್ಕಳಿಗೆ ಮಾತ್ರ ಭೌತಿಕವಾಗಿ ಕ್ಲಾಸ್ ಮಾಡಿ. ಇಡೀ ರಾಜ್ಯಕ್ಕೆ ಲಾಕ್‍ಡೌನ್ ಬೇಡ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾತ್ರ ಕಠಿಣ ಕ್ರಮ ಕೈಗೊಳ್ಳಬೇಕು. ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ ವೀಕೆಂಡ್ ಕರ್ಫ್ಯೂ  ನಿಂದ ಯಾವ ಪ್ರಯೋಜನಾವಾಗುತ್ತಿಲ್ಲ ಆದೇಶ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ

    night curfew

    ನಾವು ಅಂತರ ಜಿಲ್ಲಾ ಓಡಾಟಕ್ಕೆ ಕಡಿವಾಣ ಹಾಕಿಲ್ಲ. ವೀಕೆಂಡ್ ಕರ್ಫ್ಯೂನಿಂದ ಉದ್ದೇಶ ಸಾಧನೆ ಆಗುತ್ತಿಲ್ಲ. ಜನ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಕರ್ಫ್ಯೂ  ಬಿಟ್ಟು ಜನರ ನಿಯಂತ್ರಣಕ್ಕೆ ಕಠಿಣ ಕ್ರಮ ಜರುಗಿಸಿ ಎಂದರು. ಇದನ್ನೂ ಓದಿ: ಕೊರೊನಾ ಸೋಂಕು ಏರಿಕೆ ಮಧ್ಯೆ ಸಿಹಿ ಸುದ್ದಿ – ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ

    ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ಪಾದಯಾತ್ರೆ ಸಮರ ಅಲ್ಲ ಕಾನೂನು ಸಮರ ಆಗಬೇಕು. ಕೋಟ್ಯಂತರ ರೂ. ಖರ್ಚು ಮಾಡಿ ಪಾದಯಾತ್ರೆ ಮಾಡಿದ್ದಾರೆ. ಇಂತಹ ಪಾದಯಾತ್ರೆ ಯಿಂದ ಏನೂ ಉಪಯೋಗವಿಲ್ಲ. ಬಳ್ಳಾರಿ ಜನಾರ್ದನ ರೆಡ್ಡಿಯವರಿಗೆ ಜೈಲು ಶಿಕ್ಷೆ ಆಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡೆಸಿದ ಪಾದಯಾತ್ರೆಯಿಂದಲ್ಲ. ಕಾನೂನು ಮೂಲಕ ರೆಡ್ಡಿಯವರಿಗೆ ಶಿಕ್ಷೆಯಾಗಿದೆ. ಹೀಗಾಗಿ ಮೇಕೆದಾಟು ವಿಚಾರ ಕೂಡ ಕಾನೂನಿನ ಮೂಲಕವೇ ಬಗೆಹರಿಯಬೇಕು ಎಂದರು.

  • ವಿಶ್ವನಾಥ್ ಬಗ್ಗೆ ಮಾತನಾಡಲ್ಲ, ಶಿಸ್ತು ಕ್ರಮ ತೆಗೆದುಕೊಳ್ಳಬೇಕು – ಹೈಕಮಾಂಡ್‍ಗೆ ಸಿಎಂ ಮನವಿ

    ವಿಶ್ವನಾಥ್ ಬಗ್ಗೆ ಮಾತನಾಡಲ್ಲ, ಶಿಸ್ತು ಕ್ರಮ ತೆಗೆದುಕೊಳ್ಳಬೇಕು – ಹೈಕಮಾಂಡ್‍ಗೆ ಸಿಎಂ ಮನವಿ

    ಬೆಂಗಳೂರು: ವಿಶ್ವನಾಥ್ ಬಗ್ಗೆ ನಾನೇನು ಮಾತನಾಡುವುದಿಲ್ಲ. ಹೈಕಮಾಂಡ್‍ಗೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವನಾಥ್ ವಿರುದ್ಧವಾಗಿ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ – ವಿಶ್ವನಾಥ್ ಆರೋಪ

    ವಿಶ್ವನಾಥ್ ರಿಂದ ವಿಜಯೇಂದ್ರ ಹಸ್ತಕ್ಷೇಪ ಆರೋಪ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಆಧಾರ ರಹಿತವಾಗಿರುವ ಆರೋಪವಾಗಿದೆ. ಅನಾವಶ್ಯಕವಾಗಿ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ. ಅಂತಹ ಯಾವುದೇ ಹಸ್ತಕ್ಷೇಪ ಆಗಿಲ್ಲ. ನೀರಾವರಿ ಕಿಕ್ ಬ್ಯಾಕ್ ಆರೋಪ ಅದಕ್ಕೆ ನೀರಾವರಿ ಎಂಡಿ ಪ್ರತಿಕ್ರಿಯೆ ಕೊಡ್ತಾರೆ. ಶಿಸ್ತು ಕ್ರಮದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಂಜೆ ಕೋರ್ ಕಮಿಟಿ ಇದೆ. ಕೋರ್ ಕಮಿಟಿಯಲ್ಲಿ ಚರ್ಚೆ ಮಾಡೋಕೆ ಅಜೆಂಡಾ ಫಿಕ್ಸ್ ಆಗಿಲ್ಲ. ಎಲ್ಲಾ ವಿಚಾರದ ಬಗ್ಗೆ ಚರ್ಚೆ ಮಾಡ್ತೀವಿ. ಪ್ರವಾಹ, ರಾಜಕೀಯ ವಿಚಾರಗಳು ಸೇರಿದಂತೆ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಶ್ವನಾಥ್ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ: ರೇಣುಕಾಚಾರ್ಯ

    ವಿಶ್ವನಾಥ್ ಆರೋಪ ಏನು?
    ವಿಜಯೇಂದ್ರ ಭ್ರಷ್ಟಾಚಾರದ ಬಗ್ಗೆ ಎಲ್ಲಾ ಸಚಿವರು ಮಾತನಾಡುತ್ತಿದ್ದಾರೆ. ಯಾವ ಸಚಿವರು ಸಮಾಧಾನದಿಂದ ಇದ್ದಾರೆ ಹೇಳಿ? ಯಡಿಯೂರಪ್ಪ ಮಕ್ಕಳಿಂದ ಮೊದಲು ಜೈಲಿಗೆ ಹೋಗಿದ್ದರು. ಎರಡನೇ ಬಾರಿಗೆ ಹೀಗಾಗಬಾರದು ಅನ್ನೋದು ನಮ್ಮ ಆಶಯ. ಯಡಿಯೂರಪ್ಪನವರದು ಇ.ಡಿಯಲ್ಲಿ ಕೇಸಿಲ್ವಾ ಎಂದು ಪ್ರಶ್ನಿಸಿದ್ದಾರೆ. ರೇಣುಕಾಚಾರ್ಯ ಜಯಲಕ್ಷ್ಮಿ ನರ್ಸ್ ಕಥೆ ಏನಾಯ್ತು? ಊಟಕ್ಕೆ ಕರೆದ ಸ್ನೇಹಿತನ ಹೆಂಡತಿಯನ್ನು ಅತ್ಯಾಚಾರ ಮಾಡಲು ಹೋಗಿ ಹಾಲಪ್ಪ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದಾನೆ ಎಂದು ಎಚ್.ವಿಶ್ವನಾಥ್ ಬಹಿರಂಗವಾಗಿ ಕಿಡಿಕಾರಿದ್ದಾರೆ.

    ನಾನು ನಿನ್ನೆ ಅರುಣ್ ಸಿಂಗ್ ಭೇಟಿ ಮಾಡಿ ರಾಜ್ಯದಲ್ಲಿ ಪಕ್ಷದ ರಾಜಕಾರಣ ಹಾಗೂ ಸರ್ಕಾರದ ಆಡಳಿತದ ಬಗ್ಗೆ ಹೇಳಿದ್ದೇನೆ. ಇನ್ನು 22 ತಿಂಗಳು ಮಾತ್ರ ಬಾಕಿ ಉಳಿದಿದೆ. ಮುಂದಿನ ದಿನಗಳಲ್ಲಿ ಹೀಗೆ ಹೋದರೆ ಹಿನ್ನಡೆ ಆಗುತ್ತೆ ಅಂತ ಹೇಳಿದ್ದೇನೆ. ಅಲ್ಲದೆ 2024 ರ ಲೋಕಸಭೆ ಚುನಾವಣೆಗೂ ಎಫೆಕ್ಟ್ ಆಗುತ್ತೆ ಅಂತ ಹೇಳಿದ್ದೇನೆ. ಇದಕ್ಕೆಲ್ಲ ನಾಯಕತ್ವವೇ ಕಾರಣ, 75 ವರ್ಷ ಮೀರಿದವರ ಬಗ್ಗೆ ನಮ್ಮ ಪಕ್ಷದಲ್ಲೇ ಲಕ್ಣ್ಮಣ ರೇಖೆ ಇದೆ. ಅದು ದಾಟಿದ ಮೇಲೆ ವಯಸ್ಸು ಸಹಕರಿಸಲ್ಲ. ಯಡಿಯೂರಪ್ಪ ನವರಿಗೆ ಮೊದಲು ಶಕ್ತಿ ಇತ್ತು ಈಗ ಇಲ್ಲ. ಶಕ್ತಿ ಪೀಠದ ಪ್ರಭಾವಳಿ ಕಡಿಮೆ ಆಗುತ್ತಿದೆ. ಪಕ್ಷದ ಸಿದ್ಧಾಂತ ಹಾಗೂ ಕಾರ್ಯಕ್ರಮದ ವಿರುದ್ದ ಮಾತನಾಡಿಲ್ಲ ಎಂದು ಎಚ್.ವಿಶ್ವನಾಥ್ ಗುಡುಗಿದ್ದಾರೆ.

     

  • ಗೆದ್ದವರಿಗೆ ಸೋತವರ ಗುದ್ದು!

    ಗೆದ್ದವರಿಗೆ ಸೋತವರ ಗುದ್ದು!

    ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿಯ ನೂತನ ಶಾಸಕರಿಗೆ ಸೋತವರು ಗುದ್ದು ನೀಡಿದ್ದಾರೆ.

    ಸೋತವರು ಸದ್ಯಕ್ಕೆ ಸಚಿವರಾಗುವಂತಿಲ್ಲ ಎಂಬ ಸಿಎಂ ಹೇಳಿಕೆ ಬೆನ್ನಲ್ಲೇ ಸೋತ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಸ್ಪರ್ಧೆಯಿಂದ ಹಿಂದೆ ಸರಿದಿದ್ದ ಆರ್.ಶಂಕರ್ ಮಿತ್ರಮಂಡಳಿಯ ಇತರರ ಮೇಲೆ ಕೋಪಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗೆಲುವಿನ ಬಳಿಕ ನೀವ್ಯಾರು ನಮಗೆ ಸಚಿವ ಸ್ಥಾನ ಕೊಡುವಂತೆ ಹೇಳುತ್ತಿಲ್ಲ. ನಿಮಗೆ ಮಾತ್ರ ಸಚಿವ ಸ್ಥಾನ ಬೇಕೆಂದು ಮಾತ್ರ ಹೇಳಿದ್ರೆ ಹೇಗೆ? ನಮ್ಮೆಲ್ಲರ ನಡುವೆ ಮೊದಲಿನಂತೆ ಒಗ್ಗಟ್ಟಿಲ್ಲ. ನಿಮ್ಮ ಜೊತೆಗೆ ಬಿಜೆಪಿಗೆ ಬಂದ ನಾವು ಈಗ ಬೇರೆಯಾಗಿ ಬಿಟ್ಟವಾ ಎಂದು ಪ್ರಶ್ನಿಸಿ ಎಂಟಿಬಿ, ವಿಶ್ವನಾಥ್, ಆರ್. ಶಂಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇತ್ತ ಸಿಎಂ ಹೇಳಿಕೆಗೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿರುವ ಹಳ್ಳಿ ಹಕ್ಕಿ, ಸೋತವರ ಬಿಟ್ಟು ಸಚಿವ ಸಂಪುಟ ವಿಸ್ತರಣೆ ಹೇಗೆ ಸಾಧ್ಯ? ಸಿಎಂ ಅವರ ಮಾತನ್ನು ನೆನಪಿಸ್ತೇವೆ. ನಮ್ಮದು ಸಾಮಾನ್ಯ ಸೋಲಲ್ಲ. ಬಿಜೆಪಿ ಇಲ್ಲದ ಕಡೆ ಚುನಾವಣೆಗೆ ನಿಂತು ದೊಡ್ಡ ಮಟ್ಟದಲ್ಲಿ ಮತ ಪಡೆದಿದ್ದೇವೆ. ಸಿಎಂ ಹಾಗೂ ಬಿಜೆಪಿ ಇದನ್ನು ಪರಿಗಣಿಸಬೇಕು. ಶೀಘ್ರ ದಲ್ಲೆ ಎಲ್ಲಾ 17 ಶಾಸಕರು ಸಭೆ ಮಾಡಿ ಸಿಎಂ ಭೇಟಿ ಮಾಡುತ್ತೇವೆ ಎಂದಿದ್ದಾರೆ.

    ಹೊಸಕೋಟೆಯಲ್ಲಿ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಂಟಿಬಿ, ಮುಖ್ಯಮಂತ್ರಿಗಳು ಕೊಟ್ಟ ಮಾತು ತಪ್ಪಲ್ಲ ಅನ್ನೋ ವಿಶ್ವಾಸ ಇದೆ. ನಾವು 17 ಜನ ಸಭೆ ಸೇರಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಸಿಎಂ ಯಡಿಯೂರಪ್ಪ ಚುನಾವಣೆ ಗೆದ್ದ 24 ಗಂಟೆಯಲ್ಲಿ ಮಂತ್ರಿ ಮಾಡ್ತೀವಿ ಅಂದಿದ್ದರು. 24 ಗಂಟೆಯಲ್ಲ, 24 ದಿನ ಕಳೆದರೂ ಮಂತ್ರಿನೂ ಇಲ್ಲ, ಕ್ಯಾರೇಯೂ ಅಂತಿಲ್ಲ. ದಾರಿ ತಪ್ಪಿದ ಮಕ್ಕಳಾದಂತೆ ಆದ ಮಿತ್ರಮಂಡಳಿ ಸದಸ್ಯರ ಗೋಳಾಟದ ಬಗ್ಗೆ ಸಿಎಂ ಮಾತ್ರ ಮಾತನಾಡುತ್ತಾರೆ. ಆದರೆ ಯಾವುದೇ ಬಿಜೆಪಿ ನಾಯಕರು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಉಪ ಚುನಾವಣೆ ಗೆದ್ದ ಬಳಿಕ ಮೌನಕ್ಕೆ ಶರಣಾಗಿರುವ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಒಳಗೊಳಗೆ ಅಸಮಾಧಾನ ಹೊಂದಿದ್ದಾರೆ. ಇತ್ತ ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ವಿಶ್ವನಾಥ್, ಎಂ.ಟಿ.ಬಿ ಬೆಂಕಿಯುಂಡೆಯಾಗಿದ್ದಾರೆ ಎಂಬ ಮಾತುಗಳು ಬಿಜೆಪಿ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.