Tag: H1N1

  • ಮೈಸೂರಿನಲ್ಲಿ ಹಂದಿಜ್ವರಕ್ಕೆ ತುಂಬು ಗರ್ಭಿಣಿ ಬಲಿ

    ಮೈಸೂರಿನಲ್ಲಿ ಹಂದಿಜ್ವರಕ್ಕೆ ತುಂಬು ಗರ್ಭಿಣಿ ಬಲಿ

    ಮೈಸೂರು: 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ ಹಂದಿಜ್ವರಕ್ಕೆ ಬಲಿಯಾಗಿದ್ದು, ಇದರಿಂದ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ.

    H1N1

    ಹುಣಸೂರು ತಾಲ್ಲೂಕಿನ ಕೋಣನ ಹೊಸಳ್ಳಿ ಗ್ರಾಮದ ಸ್ವಾಮಿ ನಾಯ್ಕ ಎಂಬವರ ಪುತ್ರಿ ಛಾಯಾ ಅವರು ಊ1ಓ1 ನಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್

    ಛಾಯಾ ಅವರಿಗೆ ಈಗಾಗಳೇ 4 ವರ್ಷದ ಗಂಡು ಮಗುವಿದ್ದು, 2ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಹಂದಿಜ್ವರಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಛಾಯಾ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಛಾಯಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ

    ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ

    ತಿರುವನಂತಪುರಂ: ಈಗಾಗಲೇ ಕೋವಿಡ್ 4ನೇ ಅಲೆ ಭಾರತದ ಕೆಲ ರಾಜ್ಯಗಳಿಗೆ ಅಪ್ಪಳಿಸಿದೆ. ಓಮಿಕ್ರಾನ್ ಉಪತಳಿಗಳಾದ ಬಿಎ-1, 2, 3, 4, 5 ತಳಿಗಳು ಸಾವಿರಾರು ಜನರನ್ನು ಬಾದಿಸುತ್ತಿವೆ. ಈ ಬೆನ್ನಲ್ಲೇ ಕೇರಳಕ್ಕೆ ಹಂದಿಜ್ವರ ಮತ್ತೆ ಲಗ್ಗೆಯಿಟ್ಟಿದೆ. ಇಲ್ಲಿನ ಕೋಯಿಕ್ಕೋಡ್‌ನ ಉಲಿಯೇರಿ ಪ್ರದೇಶದಲ್ಲಿ 12 ವರ್ಷದ ಹುಡುಗಿಯೊಬ್ಬರಿಗೆ ಎಚ್1-ಎನ್1 ಹಂದಿಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಮೃತಪಟ್ಟಿದ್ದಾರೆ.

    H1N1

    ಈಚೆಗಷ್ಟೇ ಕೇರಳದ ಈ ಹುಡುಗಿ ಬೆಂಗಳೂರಿಗೆ ಭೇಟಿ ನೀಡಿದ್ದರು. ಬೆಂಗಳೂರಿನಿಂದ ಹಿಂದಿರುಗಿದ ಬಳಿಕ ಕೇರಳದ ಕೋಯಿಲಂಡಿ ತಾಲೂಕು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಎಚ್1-ಎನ್1 ಸೋಂಕು ಇರುವುದು ದೃಢಪಟ್ಟಿತು. ತಕ್ಷಣ ಹುಡುಗಿಯನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ನಿನ್ನೆ ಮೃತಪಟ್ಟಿದ್ದಾಳೆ. ಬಾಲಕಿ ಸಂಪರ್ಕದಲ್ಲಿದ್ದ ಅವಳಿ ಸಹೋದರಿಗೂ ಎಚ್1-ಎನ್1 ಇರುವುದು ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

    H1N1

    1918-1919 ರಲ್ಲಿ ಕಾಣಿಸಿಕೊಂಡಿದ್ದ ಹಂದಿಜ್ವರ ಎಚ್1-ಎನ್1 ಇನ್‌ಫ್ಲುಯೆನ್ಸ್ ವೈರಸ್ 2009 ರಲ್ಲಿ ದೇಶದ ಅನೇಕ ಕಡೆ ವ್ಯಾಪಕವಾಗಿ ಹರಡಿತ್ತು. ಸುಮಾರು 2.84 ಲಕ್ಷ ಜನರನ್ನು ಬಲಿ ಪಡೆದಿತ್ತು. ಇದರಿಂದ ವಿಶ್ವಸಂಸ್ಥೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್

    ಬೆಂಗಳೂರಿಗೂ ಆತಂಕ: ಕಳೆದ ಮರ‍್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ 150ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇದರ ಬೆನ್ನಲ್ಲೇ ಕೇರಳದಲ್ಲಿ ಹಂದಿ ಜ್ವರಕ್ಕೆ ಬಲಿಯಾದ ಬಾಲಕಿ ಈಚೆಗಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದರು ಎಂಬುದು ಅನೇಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನಲ್ಲೂ ಹಂದಿಜ್ವರ ಕಾಣಿಸಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.

  • ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ

    ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ

    ನವದೆಹಲಿ: ಕೋವಿಡ್-19 ರೋಗ ಸದ್ಯ ಸ್ಥಳೀಯವಾಗಿ ಇದ್ದರೂ ಹಿಂದಿನಂತೆ ತೀವ್ರರೂಪದಲ್ಲಿ ಇಲ್ಲ. ಮುಂದೆ ಬರಲಿರುವ ಮೂರನೇ ಅಲೆಯೂ ತೀವ್ರ ಸ್ವರೂಪ ತಾಳುವ ಸಾಧ್ಯತೆ ಕಡಿಮೆ ಇದೆ. ದೇಶಾದ್ಯಂತ ಜನರಿಗೆ ನೀಡುತ್ತಿರುವ ಲಸಿಕೆಗಳು ಉತ್ತಮವಾಗಿದೆ. ಹೀಗಾಗಿ ಬೂಸ್ಟರ್ ಡೋಸ್ ನೀಡುವ ಅಗತ್ಯ ಭಾರತದ ಜನರಿಗೆ ಇಲ್ಲ ಎಂದು ಪ್ರಮುಖ ವೈದ್ಯಕೀಯ ತಜ್ಞ ಹಾಗೂ ಏಮ್ಸ್‍ನ ಮುಖ್ಯಸ್ಥ ರಣದೀಪ್ ಗುಲೇರಿಯಾ ಭವಿಷ್ಯ ನುಡಿದಿದ್ದಾರೆ.

    ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ ಬರೆದ ರೂಪಾ ಪ್ರಕಟಣೆಯ ‘ಗೋಯಿಂಗ್ ವೈರಲ್’ ಬಿಡುಗಡೆ ಕಾರ್ಯಕ್ರಮದಲ್ಲಿ ಗುಲೇರಿಯಾ ಹೇಳಿಕೆ ನೀಡಿದರು. ಇದನ್ನೂ ಓದಿ: ಖಾಲಿ ಇರುವ 6 ಸಾವಿರ ಪೊಲೀಸ್ ಹುದ್ದೆಗಳನ್ನು ವಾರದೊಳಗೆ ಭರ್ತಿ ಮಾಡಿ: ಅಸ್ಸಾಂ ಸಿಎಂ

    ರಾಷ್ಟ್ರೀಯ ಕೋವಿಡ್-19 ಲಸಿಕಾ ಕಾರ್ಯಕ್ರಮವು ಈಗಾಗಲೇ ರೋಗ ಮತ್ತು ಸಾವುಗಳನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಬೃಹತ್ ರೂಪದಲ್ಲಿ ಕೋವಿಡ್‍ನ ಮೂರನೇ ಅಲೆ ಮರುಕಳಿಸುವ ಸಾಧ್ಯತೆ ವಿರಳ. ಇದು ಹಂದಿ ಜ್ವರ (ಹೆಚ್1ಎನ್1) ನಂತೆ ಆಗುವ ಸಾಧ್ಯತೆ ಇರುತ್ತದೆ. ಜನರು ರೋಗಕ್ಕೆ ಒಳಗಾದರೂ ತೀವ್ರ ಪ್ರಮಾಣದಲ್ಲಿ ಅದು ಇರುವುದಿಲ್ಲ ಎಂದು ಗುಲೇರಿಯಾ ಹೇಳಿದರು.

    ಕೋವಿಡ್-19 ಲಸಿಕೆಗಳನ್ನು ದೇಶಾದ್ಯಂತ ಜನರಿಗೆ ನೀಡುತ್ತಿರುವುದರಿಂದ ನಾವು ಪ್ರಗತಿಯಲ್ಲಿರುವ ಸೋಂಕುಗಳನ್ನು ಕಡಿಮೆಯಾಗಿ ನೋಡುತ್ತಿದ್ದೇವೆ. ಮೊದಲ ಡೋಸ್ ಅನ್ನು ಹೆಚ್ಚಿನ ಜನರು ತೆಗೆದುಕೊಂಡಿದ್ದಾರೆ. ಈಗ ಎರಡನೇ ಡೋಸ್‍ಅನ್ನು ತೆಗೆದುಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸಬೇಕು. ಹೀಗೆ ಮಾಡಿದ್ದಲ್ಲಿ ಬೂಸ್ಟರ್ ಡೋಸ್‍ನ ಅಗತ್ಯವೇ ಬೀಳುವುದಿಲ್ಲ ಎಂದರು. ಇದನ್ನೂ ಓದಿ: ಕಾವೇರಿದ ಮಂಡ್ಯ ಎಂಎಲ್‍ಸಿ ಚುನಾವಣೆ – ಯಾರಿಗೆ ಸಿಗುತ್ತೆ ಸುಮಲತಾ ಬೆಂಬಲ?

    CORONA-VIRUS.

    ನಾವು ನೋಡಿದ ಕೊನೆಯ ಸಾಂಕ್ರಾಮಿಕ ರೋಗ ಅದು 2009ರಲ್ಲಿ ಕಾಡಿದ ಹೆಚ್1ಎನ್1. ಆಗ ನಮ್ಮ ಬಳಿ ಲಸಿಕೆ ಇರಲಿಲ್ಲ. ನಾವು ಲಸಿಕೆಗಳಿಗಾಗಿ ವಿಶ್ವ ಆರೋಗ್ಯ ಸಂಸ್ಥೆಯನ್ನು ಅವಲಂಭಿಸಬೇಕಾಯಿತು. ಆಗಿನಿಂದ ಇಲ್ಲಿಯವರೆಗೆ ದೇಶ ಭಾರೀ ಬದಲಾವಣೆ ಹೊಂದಿದೆ. ಈಗ ದೇಶ ಕೋವಿಡ್-19 ಲಸಿಕೆಯನ್ನು ಇತರ ದೇಶಗಳಿಗೆ ರಫ್ತು ಮಾಡುತ್ತಿದೆ. ಅದು ನಾವು ಸಾಧಿಸಿದ ಪ್ರಯಾಣವಾಗಿದೆ ಎಂದು ಗುಲೇರಿಯಾ ಶ್ಲಾಘಿಸಿದರು.

  • H1N1ಗೆ ಬೆಚ್ಚಿ ಬಿದ್ದ ಬೆಂಗಳೂರು ಟೆಕ್ಕಿಗಳು

    H1N1ಗೆ ಬೆಚ್ಚಿ ಬಿದ್ದ ಬೆಂಗಳೂರು ಟೆಕ್ಕಿಗಳು

    ಬೆಂಗಳೂರು: ಇಡೀ ವಿಶ್ವದೆಲ್ಲೆಡೆ ಕೊರೊನಾ ಭೀತಿ ಎದುರಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ ಮಹಾಮಾರಿ ಎಚ್1ಎನ್1 ಭಯ ಕಾಡುತ್ತಿದೆ.

    ಜನವರಿಯಿಂದ ಇಂದಿನವರೆಗೂ ಬೆಂಗಳೂರಿನಲ್ಲಿ 66ಕ್ಕೂ ಹೆಚ್ಚು ಮಂದಿಗೆ ಎಚ್1ಎನ್1 ಪಾಸಿಟಿವ್ ರಿಸಲ್ಟ್ ಬಂದಿದೆ. ರಾಜ್ಯದಲ್ಲಿ ಜನವರಿಯಿಂದ ಈವರೆಗೆ 171 ಮಂದಿ ಈ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಜಾಪುರದ ಇಕೋ ವರ್ಲ್ಡ್ ಕ್ಯಾಂಪಸ್‍ನ ನಾಲ್ಕೈದು ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪೆನಿಯ ಸಿಬ್ಬಂದಿ, ಕೆಲ ದಿನಗಳ ಮಟ್ಟಿಗೆ ವರ್ಕ್ ಫ್ರಂ ಹೋಂ ಅಂದರೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಿದೆ. ಇದನ್ನೂ ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    ಇಕೋ ವರ್ಲ್ಡ್‌ನಲ್ಲಿ 25ಕ್ಕೂ ಹೆಚ್ಚು ಸಾಫ್ಟ್‌ವೇರ್ ಸಂಸ್ಥೆಗಳ 2 ಲಕ್ಷಕ್ಕೂ ಹೆಚ್ಚು ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವೈನ್ ಫ್ಲೂ ಕಾಣಿಸಿಕೊಂಡ ಕಾರಣ ಸಂಸ್ಥೆಯ ಸಿಬ್ಬಂದಿಯನ್ನು ಕಡ್ಡಾಯವಾಗಿ ಫೆ. 20ರಿಂದ 28ರವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸುವಂತೆ ತಿಳಿಸಲಾಗಿದೆ. ಈ ಬಗ್ಗೆ ಸಿಬ್ಬಂದಿಗೆ ಇ-ಮೇಲ್ ಮಾಡಿದೆ.

    ಇನ್ನೂ ಕೆಲ ಸಾಫ್ಟ್‌ವೇರ್ ಕಂಪೆನಿಗಳ ಕಚೇರಿಗಳಲ್ಲಿ ಔಷಧಿ ಸಿಂಪಡಣೆ, ಕ್ಲೀನಿಂಗ್ ಕೂಡ ಮಾಡಲಾಗುತ್ತಿದೆ. ಜೊತೆಗೆ ಸಿಬ್ಬಂದಿಗಳ ಕುಟುಂಬದವರಲ್ಲಿ ಯಾರಿಗಾದರೂ ಚಳಿ, ಜ್ವರ ಅಥವಾ ಕೆಮ್ಮು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಎಂದು ಸಲಹೆ ನೀಡಲಾಗಿದೆ.

  • ಯುವ ಪತ್ರಕರ್ತೆ ಅರ್ಚನಾ ಗುಂಡ್ಮಿ ಸಾವು

    ಯುವ ಪತ್ರಕರ್ತೆ ಅರ್ಚನಾ ಗುಂಡ್ಮಿ ಸಾವು

    ಉಡುಪಿ: ಯುವ ಪತ್ರಕರ್ತೆ ಅರ್ಚನಾ ಗುಂಡ್ಮಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ಎಚ್1ಎನ್1 ನಿಂದ ಅರ್ಚನಾ ಮೃತಪಟ್ಟಿದ್ದಾರೆ. ಮೃತ ಅರ್ಚನಾ ಹದಿನೆಂಟು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅರ್ಚನಾ ಮೂರುವರೆ ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ಆದರೆ ಆಸ್ಪತ್ರೆಯ ನಿರ್ಲಕ್ಷ್ಯದಿಂದಲೇ ಅರ್ಚನಾ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ.

     

    ಅರ್ಚನಾ ಬ್ರಹ್ಮಾವರ ತಾಲೂಕು ಸಸ್ತಾನ ಗ್ರಾಮದ ನಿವಾಸಿಯಾಗಿದ್ದು, ಆರಂಭದಲ್ಲಿಯೇ ಎಚ್1ಎನ್1 ಎಂದು ಆಸ್ಪತ್ರೆ ಖಚಿತಪಡಿಸಲಿಲ್ಲ. ಹೀಗಾಗಿ ತಡವಾಗಿ ರೋಗ ಪತ್ತೆ ಮಾಡಿ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಲಾಗಿದೆ. ಗರ್ಭಿಣಿಯಾಗಿದ್ದಾಗ ಎಚ್1 ಎನ್1 ಬಂದರೆ ಅಪಾಯ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ಈ ಘಟನೆ ಉಡುಪಿಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಅಮಿತ್ ಶಾಗೆ ಹಂದಿಜ್ವರ – ಏಮ್ಸ್ ಆಸ್ಪತ್ರೆಗೆ ದಾಖಲು

    ಅಮಿತ್ ಶಾಗೆ ಹಂದಿಜ್ವರ – ಏಮ್ಸ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎಚ್1ಎನ್1 ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅಮಿತ್ ಶಾ, ನಾನು ಎಚ್1ಎನ್1 ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಅಶೀರ್ವಾದಿಂದ ಬಹುಬೇಗ ಗುಣಮುಖನಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಸದ್ಯ ಅಮಿತ್ ಶಾ ಉಸಿರಾಟ ತೊಂದರೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದು ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಇದನ್ನು ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    ಇವರೆಗೂ ಜೈಪುರದಲ್ಲಿ 17 ಎಚ್1ಎನ್1 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಉಳಿದಂತೆ 13 ಜನರ ರಕ್ತದ ಮಾದರಿಗಳಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಅಲ್ಲದೇ ರಾಜ್ಯದಲ್ಲಿ 935 ಶಂಕಿತ ವ್ಯಕ್ತಿಗಳ ರಕ್ತ ಪರೀಕ್ಷೆ ಮಾಡಲಾಗಿದ್ದು, ಕಳೆದ 15 ದಿನಗಳಿಂದ ಎಚ್1ಎನ್1 ಸೋಂಕಿನಿಂದ 39 ಮಂದಿ ರಾಜಸ್ಥಾನದಲ್ಲಿ ಸಾವನ್ನಪ್ಪಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲಬುರಗಿಯಲ್ಲಿ ಎಚ್1ಎನ್1ಗೆ ವ್ಯಕ್ತಿ ಬಲಿ – ಸಾರ್ವಜನಿಕರಲ್ಲಿ ಆತಂಕ

    ಕಲಬುರಗಿಯಲ್ಲಿ ಎಚ್1ಎನ್1ಗೆ ವ್ಯಕ್ತಿ ಬಲಿ – ಸಾರ್ವಜನಿಕರಲ್ಲಿ ಆತಂಕ

    ಕಲಬುರಗಿ: ಎಚ್1ಎನ್1ಗೆ ಅಫಜಲಪುರದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ.

    ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅಫಜಲಪುರ ಪಟ್ಟಣ ನಿವಾಸಿ ಲಕ್ಷ್ಮೀಪುತ್ರ ಎಚ್1 ಎನ್1ಗೆ ಬಲಿಯಾಗಿದ್ದಾರೆ. ಮೊದಲು ಜ್ವರ ಕಾಣಿಸಿಕೊಂಡ ವೇಳೆ ಲಕ್ಷ್ಮಿ ಪುತ್ರ ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ಅವರಿಗೆ ಎಚ್1 ಎನ್1 ಸೋಕು ತಗುಲಿರುವುದು ಖಚಿತವಾಗಿದೆ.

    ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದರೂ ಯಾವುದೇ ಪ್ರಯೋಜನವಾಗದ ಕಾರಣ ಕಳೆದ ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಲಕ್ಷ್ಮೀಪುತ್ರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಮಹಾರಾಷ್ಟ್ರದ ಸೊಲ್ಲಾಪುರ ಬಬಲಾದ್ ಬಳಿ ಸಣ್ಣ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನು ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    ಸದ್ಯ ಮೃತ ಲಕ್ಷ್ಮೀಪುತ್ರ ಎಚ್1ಎನ್1 ಗೆ ನಿಂದ ಮೃತಪಟ್ಟಿರುವುದು ಖಚಿತವಾಗುತ್ತಿದಂತೆ ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದೆ. ಇಷ್ಟಾದರೂ ಜಿಲ್ಲಾ ಆರೋಗ್ಯ ಇಲಾಖೆ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಅಲ್ಲದೇ ಸಾರ್ವಜನಿಕರಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಂಡಿಲ್ಲ. ಕೂಡಲೇ ಜನರಿಗೆ ಈ ಕುರಿತೆ ಎಚ್ಚರಿಕೆ ನೀಡಿ ಮಾಹಿತಿ ನೀಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    ಚ್1ಎನ್1 ಮತ್ತೆ ಸದ್ದು ಮಾಡುತ್ತಿದೆ. ಸರ್ಕಾರಗಳು ಸಾಕಷ್ಟು ಎಚ್ಚರಿಕೆಗಳನ್ನು ಕೈಗೊಂಡರೂ ಮತ್ತಷ್ಟು ಜನರಿಗೆ ಈ ಸೋಂಕು ತಗಲುತ್ತಿದೆ. ಹೀಗಾಗಿ ಇಲ್ಲಿ ಏನಿದು ಹಂದಿ ಜ್ವರ? ಹೇಗೆ ಬರುತ್ತದೆ? ಬಂದ ಮೇಲೆ ಏನು ಮಾಡಬೇಕು ಎನ್ನುವ ಬಗ್ಗೆ ವಿವರಣೆಯಲ್ಲಿ ನೀಡಲಾಗಿದೆ.

    ಏನಿದು ಎಚ್1ಎನ್1?
    ಮಲೇರಿಯಾ ಜ್ವರ ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆಯಿಂದ ಬರುವುದು ನಿಮಗೆ ಗೊತ್ತಿರಬಹುದು. ಆದರೆ ಹಂದಿಜ್ವರ ಸೊಳ್ಳೆಯಿಂದ ಬರುವುದಿಲ್ಲ. ಒಂದು ವೈರಾಣುವಿನಿಂದ ಈ ಜ್ವರ ಬರುತ್ತದೆ.ಈ ವೈರಸ್‍ಗೆ ಎಚ್1ಎನ್1 ಎಂದು ಕರೆಯುತ್ತಾರೆ.

    ಹಂದಿ ಜ್ವರ ಎಂದು ಕರೆಯೋದು ಯಾಕೆ?
    ಈ ಎಚ್1ಎನ್1 ವೈರಾಸ್ ಮೊದಲು ಹಂದಿಗಳ ಶ್ವಾಸಕೋಶಕ್ಕೆ ತಗಲಿ ನಂತರ ಮನುಷ್ಯನಿಗೆ ಹರಡಿದೆ ಎಂದು ಶಂಕಿಸಿ ಈ ರೋಗಕ್ಕೆ ‘ಹಂದಿ ಜ್ವರ’ ಎಂದು ಕರೆಯಲಾಗುತ್ತಿದೆ.

    ಮೊದಲು ಹಂದಿ ಜ್ವರ ಪತ್ತೆಯಾಗಿದ್ದು ಎಲ್ಲಿ?
    2009ರ ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಅಮೆರಿಕ ಗಡಿಯಲ್ಲಿರುವ ಮೆಕ್ಸಿಕೋ ದೇಶದ ರಾಜಧಾನಿ ಮೆಕ್ಸಿಕೋ ನಗರದಲ್ಲಿ ಹಂದಿ ಜ್ವರ ಮೊದಲು ಕಾಣಿಸಿಕೊಂಡಿತು. ಬಳಿಕ ಅಮೆರಿಕದ ಕ್ಯಾಲಿಫೋರ್ನಿಯಾ ಮತ್ತು ಟೆಕ್ಸಾಸ್‍ನಲ್ಲಿ ಪತ್ತೆಯಾಯಿತು.

    ಮಾನವರಿಗೆ ಹಂದಿ ಜ್ವರ ಬರುತ್ತಾ?
    ಹಂದಿಯಿಂದ ಮಾನವನಿಗೆ ಜ್ವರ  ಹರಡುವುದಿಲ್ಲ. ಆದರೆ ಸೋಂಕು ತಗಲುತ್ತದೆ. ಈ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ವೇಗವಾಗಿ ಹರಡುತ್ತದೆ. ಈ ಸೋಂಕು ತಗುಲಿದ ವ್ಯಕ್ತಿಗಳಿಗೆ ಹಂದಿಗಳ ಒಡನಾಟ ಹೆಚ್ಚಿದ್ದರೆ ಬೇಗನೆ ಸೋಂಕು ಹರಡುತ್ತದೆ. ಮೆಕ್ಸಿಕೋ ನಗರದಲ್ಲಿ ಹಂದಿ ಸಾಕಾಣೆ ಮಾಡುವ ಮಂದಿಗೆ ಮೊದಲು ಸೋಂಕು ತಗಲಿ ನಂತರ ಈ ಸೋಂಕು ವಿಶ್ವಕ್ಕೆ ಪಸರಿಸುತ್ತಿದೆ ಎಂದು ಹೇಳಲಾಗುತ್ತಿದೆ.

    ಹಂದಿ ಜ್ವರ ಹೇಗೆ ಬರುತ್ತೆ? ಬಂದ ಮೇಲೆ ಏನಾಗುತ್ತೆ?
    ಈ ವೈರಸ್ ಮೊದಲು ಮೂಗು ಅಥವಾ ಬಾಯಿಯ ಮೂಲಕ ನಮ್ಮ ದೇಹಕ್ಕೆ ಲಗ್ಗೆ ಇಡುತ್ತದೆ. ಲಗ್ಗೆ ಇಟ್ಟ ವೈರಸ್ ರಕ್ತದಲ್ಲಿ ಸಂತಾನೋತ್ಪತಿ ಮಾಡುತ್ತದೆ. ಇದಾದ ಬಳಿಕ ಮೊದಲು ಶ್ವಾಸಕೋಶದ ಮೇಲೆ ದಾಳಿ ಮಾಡುತ್ತದೆ. ವೈರಾಣು ದಾಳಿ ಜಾಸ್ತಿ ಆದಂತೆ ಉಸಿರಾಟದ ತೊಂದರೆ, ಸಣ್ಣ ಜ್ವರ ಸುಸ್ತು ಕಾಣಿಸುತ್ತದೆ. ಸಾಧಾರಣವಾಗಿ ಜ್ವರ ಬಂದರೆ ಒಂದೆರಡು ದಿನದಲ್ಲಿ ಕಡಿಮೆ ಆಗುತ್ತದೆ. ಆದರೆ ಈ ಜ್ವರದಲ್ಲಿ ಮೊದಲು ಚಳಿ, ಗಂಟಲುರಿ, ಕೆಮ್ಮು, ತಲೆನೋವು, ಸಿಕ್ಕಾಪಟ್ಟೆ ಮೈಕೈನೋವು, ನಿಶ್ಶಕ್ತಿ, ಇವೆಲ್ಲ ಕಾಣಿಸಿಕೊಳ್ಳುತ್ತವೆ. ಕೆಲವು ರೋಗಿಗಳಿಗೆ ವಾಂತಿ ಆಗುವ ಸಾಧ್ಯತೆ ಇರುತ್ತದೆ. ಇಲ್ಲಿಯವರೆಗೆ ಆರೋಗ್ಯವಾಗಿದ್ದ ವ್ಯಕ್ತಿಯ ದೇಹದಲ್ಲಿ ದಿಢೀರ್ ಆಗಿ ಈ ರೀತಿಯ ಬದಲಾವಣೆ ಕಂಡು ಬಂದರೆ ಕೂಡಲೇ ಸಮೀಪದ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಹೋಗುವುದು ಉತ್ತಮ.

    ಜ್ವರ ಬಂದಿದೆ ಎಂದು ತಿಳಿಯೋದು ಹೇಗೆ?
    ಈ ಮೇಲಿನ ಲಕ್ಷಣ ಕಂಡುಬಂದವರು ಹೆದರುವ ಅಗತ್ಯವಿಲ್ಲ. ಆಸ್ಪತ್ರೆಗೆಂದು ಪರೀಕ್ಷೆಗೆ ತೆರಳಿದ ಸೋಂಕು ಪೀಡಿತ ಶಂಕೆ ಹೊಂದಿರುವ ವ್ಯಕ್ತಿಗಳ ಮೂಗಿನ ಸ್ರಾವ ಅಥವಾ ಉಗುಳಿನ ಮಾದರಿಯನ್ನು ವೈದ್ಯರು ಪರೀಕ್ಷೆ ಮಾಡುತ್ತಾರೆ. ಈ ಪರೀಕ್ಷೆಯಲ್ಲಿ ಹಂದಿಜ್ವರ ಬಂದಿದೆಯೋ ಅಥವಾ ಬಂದಿಲ್ಲವೋ ಎನ್ನುವುದನ್ನು ತಿಳಿಸುತ್ತಾರೆ.

    ಹಂದಿಜ್ವರ ಬಂದ ಮೇಲೆ ಏನ್ ಮಾಡಬೇಕು?
    ಹಂದಿ ಜ್ವರ ಬಂದವರು ಮೊದಲು ಮಾಡಬೇಕಾದ ಕೆಲಸ ಮಾಸ್ಕ್ ಧರಿಸುವುದು. ಮಾಸ್ಕ್ ಧರಿಸುವುದರಿಂದ ವೈರಾಣು ಬೇರೆಯವರಿಗೆ ಹರಡುವುದನ್ನು ತಡೆಯಬಹುದು. ಇದರ ಜೊತೆ ರೋಗಿಯ ಹತ್ತಿರವೇ ಓಡಾಟ ನಡೆಸುವ ವ್ಯಕ್ತಿಗಳೂ ಮಾಸ್ಕ್ ಹಾಕಿಕೊಳ್ಳಬೇಕಾಗುತ್ತದೆ. ರೋಗಿಗಳು ಹೆಚ್ಚು ಹೆಚ್ಚು ಬಿಸಿ ನೀರನ್ನು ಸೇವಿಸಬೇಕಾಗುತ್ತದೆ. ಮಕ್ಕಳು, ಹಿರಿಯ ವ್ಯಕ್ತಿಗಳು, ಗರ್ಭಿಣಿಯರಲ್ಲಿ ರೋಗ ನೀರೋಧಕ ಶಕ್ತಿ ಕಡಿಮೆ ಇರುವ ಕಾರಣ ಇವರು ರೋಗಿಗಳು ಇರುವ ಕೊಠಡಿಯನ್ನು ಪ್ರವೇಶಿಸದೇ ಇರುವುದು ಉತ್ತಮ.

    ಸಾವು ಖಚಿತವೇ?
    ಹಂದಿ ಜ್ವರ ಬಂದವರೆಲ್ಲ ಭಯ ಪಡುವ ಅಗತ್ಯವಿಲ್ಲ. ಈ ಜ್ವರ ಪೀಡಿತರಿಗೆ ವೈದ್ಯರು ಟ್ಯಾಮಿಫ್ಲೂ ಮಾತ್ರೆಯನ್ನು ನೀಡುತ್ತಾರೆ. ಈ ಮಾತ್ರೆಯ ರಿಟೇಲ್ ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಆದರೆ ಕೆಲ ವೈದ್ಯರು ಅಕ್ರಮವಾಗಿ ಈ ಮಾತ್ರೆಯನ್ನು ಸಾಮಾನ್ಯ ಜ್ವರ ಬಂದರೂ ನೀಡುತ್ತಿದ್ದಾರೆ. ಹೀಗಾಗಿ ಹಂದಿಜ್ವರ ಬಂದ ಮೇಲೆ ಈ ಮಾತ್ರೆಯನ್ನು ಮೊದಲೇ ಸೇವಿಸುತ್ತಿದ್ದವರು ಮತ್ತೊಮ್ಮೆ ಸೇವಿಸಿದರೆ ಟ್ಯಾಮಿಫ್ಲೂ ಮಾತ್ರೆ ಕೆಲಸ ಮಾಡುವುದಿಲ್ಲ. ಹೀಗಾಗಿ ವೈದ್ಯರು ಸೂಚಿಸಿದ ಬಳಿಕವಷ್ಟೇ ಈ ಮಾತ್ರೆಯನ್ನು ಸೇವಿಸಬೇಕಾಗುತ್ತದೆ. ಒಂದರಿಂದ ಮೂರು ದಿನಗಳ ಕಾಲ ಈ ವೈರಾಣು ಸಿಕ್ಕಾಪಟ್ಟೆ ಕ್ರಿಯಾಶೀಲವಾಗಿರುತ್ತದೆ, ನಂತರ ವೈರಾಣು ಸತ್ತುಹೋಗಿ ಒಂದು ವಾರದಲ್ಲಿ ಮನುಷ್ಯ ಮೊದಲಿನಂತೆ ಆರೋಗ್ಯವಾಗಿರುತ್ತಾನೆ. ಆದರೆ ಚಿಕಿತ್ಸೆ ಪಡೆಯದಿದ್ದರೆ ಮಾತ್ರೆ ರೋಗಿ ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ.

    ನಗರದಲ್ಲೇ ಹೆಚ್ಚು ಏಕೆ?
    ನಗರಗಳಲ್ಲಿ ಜನ ಸಂಚಾರ ಹೆಚ್ಚು. ಉದ್ಯೋಗಕ್ಕಾಗಿ ಪ್ರಯಾಣ ಮಾಡುವವರೇ ಹೆಚ್ಚಾಗಿದ್ದಾರೆ. ಹೀಗಾಗಿ ಮಹಾನಗರಗಳಲ್ಲಿ ಹಂದಿ ಜ್ವರ ಹೆಚ್ಚಾಗಿ ಕಂಡುಬರುತ್ತಿದೆ.

    ರೋಗ ಬಾರದಂತೆ ತಡೆಯಲು ಏನು ಮಾಡಬಹುದು?
    – ಹೊರಗೆ ಸಿಕ್ಕಿದಲ್ಲೆಲ್ಲ ಉಗುಳುವ ಅಭ್ಯಾಸವನ್ನು ಬಿಡಬೇಕು
    – ಸೀನುವಾಗ, ಕೆಮ್ಮುವಾಗ ಕರವಸ್ತ್ರವನ್ನು ಅಥವಾ ಯಾವುದಾದರೂ ಬಟ್ಟೆಯನ್ನು ಬಾಯಿ ಹಾಗೂ ಮೂಗಿಗೆ ಅಡ್ಡ ಹಿಡಿಯಬೇಕು.
    – ಧರಿಸಿರುವ ಮಾಸ್ಕನ್ನು ಪ್ರತಿದಿನ ಬದಲಿಸಬೇಕು. ಜಾಸ್ತಿ ಜನ ಸಂದಣಿ ಇರುವ ಪ್ರದೇಶಗಳಿಗೆ ಹೋಗದೇ ಇರುವುದು ಉತ್ತಮ. ಹೋದರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
    – ಸ್ವಚ್ಛವಾಗಿರುವ ಸೋಪಿನಲ್ಲಿ ಕೈಯನ್ನು ತೊಳೆಯುತ್ತಿರಬೇಕು
    – ದೂರದ ಪ್ರಯಾಣವನ್ನು ಕಡಿಮೆ ಮಾಡಿ ಮನೆಯಲ್ಲೇ ವಿಶ್ರಾಂತಿ ಪಡೆದುಕೊಳ್ಳಿ.

    ಇದೂವರೆಗೆ ಎಷ್ಟು ಜನ ಮೃತಪಟ್ಟಿದ್ದಾರೆ?
    ಯುರೋಪಿಯನ್ ಸೆಂಟರ್ ಫಾರ್ ಡಿಸಿಸ್ ಆಂಡ್ ಪ್ರಿವೆಂನ್ಷನ್ ಆಂಡ್ ಕಂಟ್ರೋಲ್ ನೀಡಿದ ವರದಿಯಂತೆ ಈ ರೋಗ ಕಂಡು ಬಂದ ಆರಂಭದ ವರ್ಷವಾದ 2009ರಲ್ಲಿ ವಿಶ್ವದಲ್ಲಿ 14,286 ಮಂದಿ ಮೃತಪಟ್ಟಿದ್ದಾರೆ. ಭಾರತದಲ್ಲಿ 33,761 ಮಂದಿಗೆ ಹಂದಿ ಜ್ವರ ಬಾಧಿಸಿದ್ದು, 2035 ಮಂದಿ ಮೃತಪಟ್ಟಿದ್ದಾರೆ ಎಂದು 2015ರ ಮಾರ್ಚ್‍ನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿತ್ತು.

    ಕರ್ನಾಟಕದಲ್ಲಿ ಎಷ್ಟು ಮಂದಿಗೆ ಬಂದಿದೆ?
    ಕರ್ನಾಟಕದಲ್ಲಿ 2016ರಲ್ಲಿ 110 ಮಂದಿಗೆ ಕಾಣಿಸಿದ್ದರೂ ಒಂದೇ ಒಂದು ಸಾವಿನ ಪ್ರಕರಣ ವರದಿಯಾಗಿರಲಿಲ್ಲ. 2017ರಲ್ಲಿ 871 ಮಂದಿಗೆ ಕಾಣಿಸಿಕೊಂಡಿದ್ದು, 7 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರ ಮಾರ್ಚ್‍ನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ತಿಳಿಸಿದೆ.

     

  • ಬೆಂಗಳೂರಿನಲ್ಲಿ ಹೆಚ್1ಎನ್1 ಮಹಾಮಾರಿ ಅಬ್ಬರ-ರಾಜ್ಯಾದ್ಯಂತ ಹೈ ಅಲರ್ಟ್

    ಬೆಂಗಳೂರಿನಲ್ಲಿ ಹೆಚ್1ಎನ್1 ಮಹಾಮಾರಿ ಅಬ್ಬರ-ರಾಜ್ಯಾದ್ಯಂತ ಹೈ ಅಲರ್ಟ್

    ಬೆಂಗಳೂರು: ನಗರದಲ್ಲಿ ಹೆಚ್1 ಎನ್1 ಪ್ರಕರಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದೆ. ಮಹಾಮಳೆಯ ಬೆನ್ನೆಲ್ಲೆ ಸಾಂಕ್ರಾಮಿಕ ರೋಗದ ಪ್ರಕರಣಗಳು ಕಳೆದ ಒಂದು ವಾರದಿಂದ ಹೆಚ್ಚಾಗುತ್ತಿವೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆರೋಗ್ಯಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ನಗರದಲ್ಲಿಯೇ ಇದೂವರೆಗೂ 46 ಹೆಚ್1 ಎನ್1 ಪ್ರಕರಣಗಳು ದಾಖಲಾಗಿವೆ. ಮಹದೇವಪುರ, ಮಾರತಹಳ್ಳಿ, ಕಾಡುಗೋಡಿ ಸೇರಿದಂತೆ ಕೇರಳಕ್ಕೆ ಹೋಗಿ ಬಂದವರಲ್ಲಿ ಹೆಚ್ಚಾಗಿ ಹೆಚ್1 ಎನ್1 ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಖಾಸಗಿ ಹಾಗೂ ಸರ್ಕಾರಿ ಅಸ್ಪತ್ರೆಗಳಿಗೆ ಮುಂಜಾಗೃತೆ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಬಗ್ಗೆ ದಿನನಿತ್ಯದ ವರದಿ ಸಲ್ಲಿಸುವಿಕೆ, ಔಷಧಗಳ ಸಂಗ್ರಹಣೆ ಮಾಡಿಕೊಳ್ಳುವಂತೆ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    ಕೇರಳದತ್ತ ಪ್ರಯಾಣಿಸುವವರು ಮುಂಜಾಗ್ರತ ಕ್ರಮಕೈಗೊಳ್ಳಬೇಕು. ಕೇರಳದಲ್ಲಿ ಉಂಟಾದ ಜಲಪ್ರಳಯದ ಬಳಿಕ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಹಾಗಾಗಿ ಕೇರಳ ಪ್ರವಾಸಕೈಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆರೋಗ್ಯ ಇಲಾಖೆ ಸೂಚಿಸಿದೆ. ಹೆಚ್1 ಎನ್1 46, ಡೆಂಗ್ಯೂ 20 ಮತ್ತು ಚಿಕುನುಗುನ್ಯಾ 23 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಂದಿ ಜ್ವರಕ್ಕೆ ತೀರ್ಥಹಳ್ಳಿ ತತ್ತರ- 14 ಮಂದಿಯಲ್ಲಿ ಜ್ವರ ಪತ್ತೆ

    ಹಂದಿ ಜ್ವರಕ್ಕೆ ತೀರ್ಥಹಳ್ಳಿ ತತ್ತರ- 14 ಮಂದಿಯಲ್ಲಿ ಜ್ವರ ಪತ್ತೆ

    ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಾದ್ಯಂತ ಹಂದಿ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಇದೂವರೆಗೂ 14 ಜನರಲ್ಲಿ ಈ ಜ್ವರ ಪತ್ತೆಯಾಗಿದೆ. ಎಚ್1ಎನ್1 ಎಂದೇ ಕರೆಯಲಾಗುವ ಈ ಜ್ವರದ ಭಯದಿಂದ ತಾಲೂಕಿ ಜನತೆ ತತ್ತರಿಸಿದ್ದಾರೆ.

    ಶಿವರಾಜಪುರ, ಮೇಲಿನಕುರುವಳ್ಳಿ, ಮಹಿಷಿ, ದಬ್ಬಣಗದ್ದೆ ಮೇಗರವಳ್ಳಿ ಇನ್ನಿತರ ಪ್ರದೇಶಗಳಲ್ಲಿ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ತೀರ್ಥಹಳ್ಳಿಯಲ್ಲಿರುವ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ವಿಶೇಷ ಘಟಕವನ್ನು ತೆರೆಯಲಾಗಿದ್ದು, ನಿತ್ಯ 20-30 ಜನ ಬರುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಇನ್ನೂ ಅಧಿಕೃತವಾಗಿ ದೊರಕಿಲ್ಲ.

    ಸ್ಟಾಫ್ ನರ್ಸ್‍ಗಳ ಕೊರತೆ ಇದ್ದದ್ದರಿಂದ ಶಿವಮೊಗ್ಗದಿಂದ ಹೆಚ್ಚುವರಿಯಾಗಿ 25 ಜನರನ್ನು ತೀರ್ಥಹಳ್ಳಿಗೆ ಕಳಿಸಲಾಗಿದೆ. ಇಲ್ಲಿಂದ ನಿತ್ಯವೂ ಶಂಕಿತ 15-20 ರೋಗಿಗಳ ರಕ್ತದ ಮಾದರಿಯನ್ನು ಪರೀಕ್ಷೆಗೆ ಮಣಿಪಾಲ ಹಾಗೂ ಶಿವಮೊಗ್ಗದ ಪ್ರಯೋಗಾಲಯಗಳಿಗೆ ಕಳಿಸಲಾಗುತ್ತಿದೆ. ಇದನ್ನೂ ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    ಮುಖ್ಯವಾಗಿ ಕೆಮ್ಮು ಹಾಗೂ ನೆಗಡಿಯಿಂದ ಈ ಜ್ವರದ ವೈರಸ್‍ಗಳು ಹರಡುತ್ತವೆ. ಈ ಬಗ್ಗೆ ಎಚ್ಚರಿಕೆ ವಹಿಸಿ ಹಾಗೂ ಸ್ವಚ್ಛತೆ ಬಗ್ಗೆ ಗಮನ ಇರಲಿ. ಅಲ್ಲದೇ ಈ ಜ್ವರಕ್ಕೆ ಅಗತ್ಯವಿರುವ ಚಿಕಿತ್ಸೆ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಕಿರಣ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಎಚ್ಚರಿಕೆಯಿಂದ ಇರಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇವಲ ತೀರ್ಥಹಳ್ಳಿ ಮಾತ್ರವಲ್ಲದೆ ಶಿವಮೊಗ್ಗದ ಹೊಸನಗರ, ಭದ್ರಾವತಿ, ಶಿಕಾರಿಪುರ ತಾಲೂಕುಗಳಲ್ಲೂ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv