Tag: Hair Cutting

  • ಲಸಿಕೆ ಪಡೆಯದವರಿಗೆ ಇಲ್ಲ ಹೇರ್ ಕಟ್ಟಿಂಗ್, ಶೇವಿಂಗ್ – ಸಲೂನ್ ಮಾಲೀಕರ ನಿರ್ಧಾರ

    ಲಸಿಕೆ ಪಡೆಯದವರಿಗೆ ಇಲ್ಲ ಹೇರ್ ಕಟ್ಟಿಂಗ್, ಶೇವಿಂಗ್ – ಸಲೂನ್ ಮಾಲೀಕರ ನಿರ್ಧಾರ

    – ವ್ಯಾಕ್ಸಿನ್ ಪಡೆದ ಮೆಸೇಜ್ ತೋರಿಸಿ ಒಳಗೆ ಬನ್ನಿ

    ಭೋಪಾಲ್: ಕೊರೊನಾ ಲಸಿಕೆ ಪಡೆದುಕೊಳ್ಳದವರಿಗೆ ಹೇರ್ ಕಟ್ಟಿಂಗ್ ಮತ್ತು ಶೇವಿಂಗ್ ಮಾಡಬಾರದು ಎಂದು ಮಧ್ಯ ಪ್ರದೇಶದ ಛಿಂದ್ವಾಡಾ ಸಲೂನ್ ಮಾಲೀಕರು ನಿರ್ಧರಿಸಿದ್ದಾರೆ.

    ಕೊರೊನಾ ಲಸಿಕೆ ಪಡೆಯದವರಿಗೆ ಕ್ಷೌರ ಸೇರಿದಂತೆ ಯಾವುದೇ ಸೇವೆಗಳನ್ನು ನೀಡಲ್ಲ. ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಅಥವಾ ಮೆಸೇಜ್ ತೋರಿಸಿಯೇ ಸೇವೆ ಪಡೆಯಬೇಕು. ಈ ಮೂಲಕ ಜನರು ವ್ಯಾಕ್ಸಿನ್ ಪಡೆದುಕೊಳ್ಳುವಂತಾಗಲಿ. ಕೊರೊನಾ ಲಸಿಕೆ ಅಭಿಯಾನಕ್ಕೆ ನಾವು ಸಾಥ್ ನೀಡಿದ್ದೇವೆ ಎಂದು ಸಲೂಲ್ ಮಾಲೀಕರ ಸಂಘ ಹೇಳಿದೆ.

    ಸಲೂನ್ ಮಾಲೀಕರ ಸಂಘದ ಸಭೆಯಲ್ಲಿ ಸರ್ವಸಮ್ಮತಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕ್ಷೌರ ಮಾಡುವಾವ ಗ್ರಾಹಕರ ಸಮೀಪಕ್ಕೆ ಹೋಗಬೇಕಾಗುತ್ತದೆ . ಮುಂಜಾಗ್ರತ ಕ್ರಮ ತೆಗೆದುಕೊಂಡ್ರೂ ಸೋಂಕು ತಗಲುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಸಲೂನ್ ಸಂಘ ಈ ನಿರ್ಧಾರಕ್ಕೆ ಬಂದಿದೆ. ಇದನ್ನೂ ಓದಿ: ಎರಡು ದಿನದ SSLC ಪರೀಕ್ಷೆ ದಿನಾಂಕ ಪ್ರಕಟ

    ಕಷಾಯ ಕುಡಿದ್ರೆ ಟಿಫನ್:
    ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಇಡೀ ಊರಿಗೆ ಊರೇ ಕೊರೊನಾ ವಿರುದ್ಧ ಟೊಂಕಕಟ್ಟಿ ನಿಂತಿದೆ. ಹೆಮ್ಮಾರಿ ಕೊರೊನಾ ಹಿಮ್ಮೆಟ್ಟಿಸಲು ಗ್ರಾಮ ಪಂಚಾಯ್ತಿ ಮಾಡಿರೋ ಮಾಸ್ಟರ್ ಪ್ಲಾನ್‍ನಿಂದಾಗಿ ಗ್ರಾಮಸ್ಥರು ಆರೋಗ್ಯವೇ ಭಾಗ್ಯ ಅಂತಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಮಾಜಿ ಪ್ರಿಯಕರನ ದುಬಾರಿ ಬೈಕ್‍ಗೆ ಬೆಂಕಿ ಇಟ್ಟ ಮಹಿಳೆ

    ಗ್ರಾಮದಲ್ಲಿ ಯಾವುದೇ ಹೋಟೆಲ್‍ಗೆ ಹೋದ್ರೂ ಮೊದಲು ಒಂದು ಲೋಟ ಕಷಾಯ ಕೊಡ್ತಾರೆ. ಆಮೇಲೆ ಊಟ, ತಿಂಡಿ ಏನ್ ಬೇಕು ಅಂತ ಕೇಳ್ತಾರೆ. ಕಷಾಯಕ್ಕೆ ಆಯುರ್ವೇದಲ್ಲಿ ವಿಶೇಷ ಸ್ಥಾನ ಇದೆ. ಗಂಟಲಿನಲ್ಲಿನ ವೈಸರ್ಗಳನ್ನು ಕೊಲ್ಲಬಲ್ಲ, ರೋಗನಿರೋಧಕ ಶಕ್ತಿಯನ್ನ ಹೆಚ್ವಿಸುವಲ್ಲೂ ಕಷಾಯ ಸಹಕಾರಿ. ಹೀಗಾಗಿ ಅಬ್ಬಿಗೇರಿ ಗ್ರಾಮ ಪಂಚಾಯ್ತಿ ಗ್ರಾಮದ ಪ್ರತಿ ಹೋಟೆಲ್‍ಗಳಲ್ಲಿ ಕಷಾಯ ನೀಡುವಂತೆ ಮನವಿ ಮಾಡಿದೆ. ಟೀ ಅಂಗಡಿಗೆ ಹೋದ್ರೂ ಅಲ್ಲೂ ಮೊದಲಿಗೆ ಒಂದು ಕಪ್ ಕಷಾಯ ಕೊಡ್ತಾರೆ. ಹೋಟೆಲ್‍ಗಳಲ್ಲಿ ಒಂದು ವೇಳೆ ಕಷಾಯ ಬೇಡಪ್ಪ ಅಂದ್ರೆ ಎದ್ದು ಮುಂದಕ್ಕೆ ಹೋಗಯ್ಯ ಅಂತಾರೆ. ಇನ್ನು ಎಲ್ಲೇ ಕಷಾಯ ಕುಡಿದ್ರೂ ಹಣ ಪಡೆಯಲ್ಲ.

  • ಸಲೂನ್ ಶಾಪ್‍ನಲ್ಲಿ ಸೋಂಕಿತ ಕಟಿಂಗ್- ನಂತ್ರ 15ಕ್ಕೂ ಹೆಚ್ಚು ಜನರಿಂದ ಹೇರ್ ‌‍ಕಟ್

    ಸಲೂನ್ ಶಾಪ್‍ನಲ್ಲಿ ಸೋಂಕಿತ ಕಟಿಂಗ್- ನಂತ್ರ 15ಕ್ಕೂ ಹೆಚ್ಚು ಜನರಿಂದ ಹೇರ್ ‌‍ಕಟ್

    – ಮಲೇಷಿಯಾದಿಂದ ಬಂದ ಸೋಂಕಿತನ ಎಡವಟ್ಟು

    ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಸಲೂನ್ ಒಂದರಲ್ಲಿ ಕೊರೊನಾ ಸೋಂಕಿತ ಕಟಿಂಗ್ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಲೂನ್ ಶಾಪ್ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ.

    ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಈವರೆಗೆ 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದುವರೆಗೂ ಐವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಕೋಲಾರ ಜಿಲ್ಲೆಗೆ ಹೊರ ರಾಜ್ಯ, ವಿದೇಶದಿಂದ ಬಂದವರಿಂದಲೇ ಕಂಟಕ ಎದುರಾಗುತ್ತಿದೆ. ಸದ್ಯಕ್ಕೆ ಮಲೇಷಿಯಾದಿಂದ ಬಂದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡುಬಂದಿರುವುದು ಅಧಿಕಾರಿಗಳನ್ನು ಆತಂಕಕ್ಕೆ ದೂಡಿದೆ.

    ಈ ನಡುವೆ ಸಲೂನ್ ಶಾಪ್‍ನಿಂದ ಬಂಗಾರಪೇಟೆಗೆ ಆತಂಕ ಶುರುವಾಗಿದೆ. ಬಂಗಾರಪೇಟೆ ಪಟ್ಟಣದ ವಿವೇಕಾನಂದ ನಗರಕ್ಕೆ ಮಲೇಷಿಯಾದಿಂದ ಬಂದಿದ್ದ ರೋಗಿ 3186 ವ್ಯಕ್ತಿ ಬಂಗಾರಪೇಟೆ ಪಟ್ಟಣದ ಸೂಪರ್ ಜೆಂಟ್ಸ್ ಪಾರ್ಲರ್ ನಲ್ಲಿ ಹೇರ್ ಕಟ್ ಮಾಡಿಸಿಕೊಂಡಿದ್ದ. ಅದಾದ ನಂತರ ಸುಮಾರು 15ಕ್ಕೂ ಹೆಚ್ಚು ಜನ ಹೇರ್ ಕಟ್ ಮಾಡಿಸಿಕೊಳ್ಳಲು ಹೋಗಿದ್ದು, ಅವರಿಗಾಗಿ ಅಧಿಕಾರಿಗಳು ಹುಡುಕಾಟ ಮಾಡುತ್ತಿದ್ದಾರೆ.

    ಅಲ್ಲದೇ ಆ ದಿನ ಯಾರೆಲ್ಲಾ ಶೇವಿಂಗ್ ಮತ್ತು ಕಟಿಂಗ್ ಮಾಡಿಸಿಕೊಂಡಿದ್ದಾರೋ ಅವರೆಲ್ಲ ಕೂಡಲೇ ಸರ್ಕಾರಿ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಬೇಕೆಂದು ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಪಟ್ಟಣದ ಬೀದಿ ಬೀದಿಯಲ್ಲಿ ಮೈಕ್‍ನಲ್ಲಿ ಅನೌನ್ಸ್ ಮಾಡುತ್ತಿದ್ದಾರೆ. ಈ ಮೂಲಕ ಸಲೂನ್ ಶಾಪ್‍ನಿಂದ ಬಂಗಾರಪೇಟೆ ಪಟ್ಟಣದಲ್ಲಿ ಆತಂಕ ಶುರುವಾಗಿದೆ.

    ಸಲೂನ್ ಮಾಲೀಕರಿಂದ ವಿಭಿನ್ನ ಪ್ರಯತ್ನ:
    ಕೋಲಾರದಲ್ಲಿ ಎಚ್ಚೆತ್ತ ಸಲೂನ್ ಮಾಲೀಕರು ಸಲೂನ್‍ನಲ್ಲಿ ಪಿಪಿಇ ಕಿಟ್ ಧರಿಸಿ ಗ್ರಾಹಕರಿಗೆ ಕಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಕೋಲಾರ ತಾಲೂಕಿನ ಚಿಟ್ನಹಳ್ಳಿ ಗ್ರಾಮದ ಮಂಜುನಾಥ್ ಹೇರ್ ಕಟಿಂಗ್ ಶಾಪ್‍ನ ಮಾಲೀಕ ವಿಭಿನ್ನ ಪ್ರಯತ್ನ ಮಾಡುತ್ತಿದ್ದು, ಗ್ರಾಹಕರ ಆರೋಗ್ಯ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಹೇರ್ ಕಟಿಂಗ್ ಮಾಡುತ್ತಿದ್ದಾರೆ. ಸೋಂಕು ಹರಡದಂತೆ ಸಲೂನ್ ನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

  • ಹೇರ್ ಕಟ್ಟಿಂಗ್ ಮಾಡಿಸಿಕೊಂಡಿದ್ದ ಕೊರೊನಾ ಸೋಂಕಿತ

    ಹೇರ್ ಕಟ್ಟಿಂಗ್ ಮಾಡಿಸಿಕೊಂಡಿದ್ದ ಕೊರೊನಾ ಸೋಂಕಿತ

    – ಕಾಪು ತಾಲೂಕಿನ ಎಲ್ಲಾ ಸಲೂನ್ ಬಂದ್

    ಉಡುಪಿ: ಜಿಲ್ಲಾ ಪಂಚಾಯತ್‍ನ ಹೊರಗುತ್ತಿಗೆ ನೌಕರನಿಗೆ ಕೊರೊನಾ ಸೋಂಕು ತಗುಲುತ್ತಿದ್ದಂತೆ ಕಾಪುವಿನ ಸವಿತಾ ಸಮಾಜ ಬೆಚ್ಚಿ ಬಿದ್ದಿದೆ.

    ಉಡುಪಿ ಜಿಲ್ಲಾ ಪಂಚಾಯತ್‍ನ ಸ್ವಚ್ಛ ಭಾರತ ಮಿಷನ್ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಮೂವತ್ತು ವರ್ಷದ ಯುವಕನಿಗೆ ಕೊರೊನಾ ಬಾಧಿಸಿದೆ. ಯುವಕನಿಗೆ ಕೊರೊನಾ ಪಾಸಿಟಿವ್ ವರದಿ ಬರುವ ಎರಡು ದಿನಗಳ ಹಿಂದೆ ಆತ ಕಾಪುವಿನ ಸಲೂನ್ ಒಂದರಲ್ಲಿ ಹೇರ್ ಕಟ್ಟಿಂಗ್ ಮಾಡಿಸಿಕೊಂಡಿದ್ದ. ಹೀಗಾಗಿ ಕಾಪು ತಾಲೂಕಿನ ಸವಿತಾ ಸಮಾಜ ತಮ್ಮ ಎಲ್ಲಾ ಸಲೂನ್ ಗಳನ್ನು ಬಂದ್ ಮಾಡಲು ನಿರ್ಧರಿಸಿದೆ.

    ಸೋಂಕಿತನಿಂದ ಬೇರೆಯವರಿಗೂ ರೋಗ ಅಂಟಿರಬಹುದು ಎಂಬುವುದು ಸವಿತಾ ಸಮಾಜದ ಆತಂಕ. ತಾಲೂಕಿನ ನೂರಾರು ಸಲೂನ್ ಗಳನ್ನು ಬಂದ್ ಮಾಡಿರುವ ಸವಿತಾ ಸಮಾಜ, ತಮ್ಮ ಸಂಘದ ಮುಂದಿನ ನಿರ್ಧಾರದ ವರೆಗೆ ಅಂಗಡಿಗಳನ್ನೆಲ್ಲಾ ಬಂದ್ ಇಟ್ಟುಕೊಳ್ಳಲು ಚಿಂತನೆ ಮಾಡಿದೆ.

  • ಕೊರೊನಾ ಎಫೆಕ್ಟ್ – ಗಂಡನಿಗೆ ಮಡದಿಯಿಂದ ಹೇರ್ ಕಟಿಂಗ್

    ಕೊರೊನಾ ಎಫೆಕ್ಟ್ – ಗಂಡನಿಗೆ ಮಡದಿಯಿಂದ ಹೇರ್ ಕಟಿಂಗ್

    ಉಡುಪಿ: ಕೊರೊನಾ ಲಾಕ್‍ಡೌನ್ ಎಫೆಕ್ಟ್ ಪುರುಷರ ತಲೆಕೂದಲ ಮೇಲೂ ಬಿದ್ದಿದೆ. ಹೆಂಡತಿ ಗಂಡನ ಹೇರ್ ಕಟ್ ಮಾಡುವ ಪರಿಸ್ಥಿತಿ ಬಂದಿದೆ.

    ಕಳೆದ 15 ದಿನಗಳಿಂದ ಉಡುಪಿಯಲ್ಲಿ ಕ್ಷೌರದಂಗಡಿಗಳು ಸಂಪೂರ್ಣ ಲಾಕ್ ಡೌನ್ ಆಗಿದ್ದು, ಜನತಾ ಕರ್ಫ್ಯೂಗೂ ಮೊದಲೇ ಕಟಿಂಗ್ ಶಾಪ್ ಮುಚ್ಚಲಾಗಿತ್ತು. ನಗರ, ಜಿಲ್ಲೆ ಹಳ್ಳಿಯ ಎಲ್ಲಾ ಅಂಗಡಿಗಳು ಮುಚ್ಚಿದೆ. ಬಿರು ಬೇಸಿಗೆ ಆಗುತ್ತಿರುವುದರಿಂದ ಉದ್ದ ಕೂದಲು ಬಂದ ಪುರುಷರಿಗೆ ಕಿರಿಕಿರಿಯಾಗುತ್ತಿದೆ.

    ಸಲೂನ್ ಸಿಗದೆ ಮನೆಯಲ್ಲೇ ಕಟಿಂಗ್ ಮಾಡಿಸುತ್ತಿದ್ದಾರೆ. ಪತ್ನಿ ಕತ್ತರಿ ಬಾಚಣಿಗೆ ಹಿಡಿದುಕೊಂಡು ನೀಟಾಗಿ ಗಂಡನ ಕೂದಲು ಕಟ್ ಮಾಡುತ್ತಿದ್ದಾರೆ. ಈ ಮೂಲಕ ಸ್ಟೇ ಹೋಂ ಎಂದು ಸರ್ಕಾರ ಘೋಷಣೆ ಮಾಡಿದ್ದನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪತ್ನಿ, ಮಕ್ಕಳ ಕೈಯಲ್ಲಿ ಹೇರ್ ಕಟ್ ಮಾಡಿಸಿ ಫೇಸ್ ಬುಕ್ ಮತ್ತು ಇನ್‍ಸ್ಟಾ ನಲ್ಲಿ ಜನ ಫೋಟೋ ಅಪ್ಲೋಡ್ ಮಾಡುತ್ತಿದ್ದಾರೆ.

    ಹೋಮ್ ಕಟಿಂಗ್ ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಪ್ರಚಾರ ಸಿಗುತ್ತಿದೆ. ಹೇರ್ ಕಟಿಂಗ್ ಮಾಡಿದ ನೀತು ಹರೀಶ್ ಕಿಣಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಇದು ನನ್ನ ಮೊದಲನೇ ಅನುಭವ. ಫುಲ್ ಫ್ಯಾಮಿಲಿ ಮನೆಯಲ್ಲೇ ಇದ್ದಾರೆ. ಇದೂ ಒಂಥರಾ ಹೊಸ ಅನುಭವ ಕುಟುಂಬದವರ ಜೊತೆ ಇದ್ದೇವೆ ಎಂದರು. ಹೀಗೆಯೇ ಪರಿಸ್ಥಿತಿ ಮುಂದುವರಿದರೆ ಜನಕ್ಕೆ ಕಷ್ಟ ಆಗುತ್ತದೆ ಎಂದು ಹೇಳಿದರು.