Tag: Hajj

  • 2025ರಲ್ಲಿ ಹಜ್‌ ಯಾತ್ರೆಗೆ ಮಕ್ಕಳು ನಿಷೇಧ – ಕಾರಣ ಏನು ಗೊತ್ತಾ?

    2025ರಲ್ಲಿ ಹಜ್‌ ಯಾತ್ರೆಗೆ ಮಕ್ಕಳು ನಿಷೇಧ – ಕಾರಣ ಏನು ಗೊತ್ತಾ?

    2025ರಲ್ಲಿ ಹಜ್‌ (Hajj) ಯಾತ್ರೆಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ (Saudi Arabia) ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ ಬಾರಿ ಹಜ್‌ ಯಾತ್ರೆಗೆ ಮಕ್ಕಳನ್ನು ನಿಷೇಧಿಸಲಾಗಿದೆ ಎಂದು ಅಲ್ಲಿನ ಸರ್ಕಾರ ಘೋಷಿಸಿದೆ. ಅಲ್ಲದೇ ವೀಸಾಗೆ ಸಂಬಂಧಿಸಿದಂತೆ ಹಲವು ಮಹತ್ವದ ಕ್ರಮಗಳನ್ನು ಕೂಡ ಸೌದಿ ಅರೇಬಿಯಾ ಸರ್ಕಾರ ಕೈಗೊಂಡಿದೆ. ಈ ಬಾರಿ ಹಜ್‌ ಯಾತ್ರೆಗೆ ಮಕ್ಕಳ ಮೇಲೆ ನಿಷೇಧವೇಕೆ? ವೀಸಾಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ತೆಗೆದುಕೊಂಡಿರುವ ಕ್ರಮಗಳೇನು ಎಂಬುದರ ಕುರಿತು ಇಲ್ಲಿ ವಿವರಿಸಲಾಗಿದೆ.

    ಹಜ್‌ ಯಾತ್ರೆಯಲ್ಲಿ ಮಕ್ಕಳಿಗೆ ನಿಷೇಧವೇಕೆ?
    2025ರ ಜೂನ್‌ನಲ್ಲಿ ಪ್ರಾರಂಭವಾಗುವ ಹಜ್‌ ಯಾತ್ರೆಗೆ ನೋಂದಣಿ ಆರಂಭವಾಗಿದೆ. ಈ ಬೆನ್ನಲ್ಲೇ ಸೌದಿ ಅರೇಬಿಯಾ ಸರ್ಕಾರ ಈ ಬಾರಿ ಮಕ್ಕಳನ್ನು ಹಜ್‌ ಯಾತ್ರೆಗೆ ಅನುಮತಿಸುವುದಿಲ್ಲ ಎಂದು ಹೇಳಿದೆ. ಈ ವಾರ್ಷಿಕ ಯಾತ್ರೆಯ ಸಂದರ್ಭದಲ್ಲಿ ಜನಸಂಖ್ಯೆ ಹೆಚ್ಚಾಗುವ ಹಿನ್ನೆಲೆ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಜ್‌ ಮತ್ತು ಉಮ್ರಾ ಸಚಿವಾಲಯ ತಿಳಿಸಿದೆ.

    ಮಕ್ಕಳನ್ನು ಜನದಟ್ಟಣೆಯ ಅಪಾಯದಿಂದ ರಕ್ಷಿಸಲು ಹಾಗೂ ಯಾತ್ರೆಯ ಅನುಭವವನ್ನು ಮತ್ತಷ್ಟು ಸೀಮಾತೀತಗೊಳಿಸಲು ಹಜ್ ಯಾತ್ರೆಗೆ ಮಕ್ಕಳನ್ನು ನಿಷೇಧಿಸಲಾಗಿದೆ. ಅಪಾಯಕಾರಿ ಸನ್ನಿವೇಶಗಳಲ್ಲಿ ಭಾರಿ ಜನಜಂಗುಳಿಯನ್ನು ನಿಯಂತ್ರಿಸಬೇಕಾಗುವುದರಿಂದ ಹಜ್ ಸಂದರ್ಭದಲ್ಲಿ ಸಣ್ಣ ಮಕ್ಕಳು ಗಂಭೀರ ಅಪಾಯಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಸಚಿವಾಲಯ ಒತ್ತಿ ಹೇಳಿದೆ.

    ಇದರೊಂದಿಗೆ, 2025ರ ಹಜ್ ಯಾತ್ರೆ ಕೈಗೊಳ್ಳಲು ಮೊದಲ ಬಾರಿಯ ಯಾತ್ರಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಎಷ್ಟು ಸಾಧ್ಯವೊ ಅಷ್ಟು ಮುಸ್ಲಿಮರಿಗೆ ತಮ್ಮ ಜೀವಮಾನದಲ್ಲಿ ಒಮ್ಮೆಯಾದರೂ ಈ ಪವಿತ್ರ ಯಾತ್ರೆಯ ಅವಕಾಶ ಮಾಡಿಕೊಡಲು ಸೌದಿ ಅರೇಬಿಯಾ ಈ ಕ್ರಮಕ್ಕೆ ಮುಂದಾಗಿದೆ.

    ಹಜ್‌ ಯಾತ್ರೆಗೆ ನೋಂದಣಿ ಹೇಗೆ?
    ಈ ವರ್ಷದ ಹಜ್ ನೋಂದಣಿ ಆರಂಭವಾಗಿದೆ. ಸೌದಿ ಪ್ರಜೆಗಳು ಮತ್ತು ವಿದೇಶಿ ನಿವಾಸಿಗಳಿಗೆ ನೋಂದಣಿ ಆರಂಭವಾಗಿದೆ ಎಂದು ಹಜ್ ಮತ್ತು ಉಮ್ರಾ ಸಚಿವಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದೆ. ‘ನುಸ್ಕ್’ ಆ್ಯಪ್ ಅಥವಾ ಆನ್‌ಲೈನ್ ಪೋರ್ಟಲ್ ಮೂಲಕ ನೋಂದಣಿ ಮಾಡಬೇಕು.

    ಹಜ್‌ಗೆ ಹೋಗಲು ಬಯಸುವವರು ತಮ್ಮ ಆರೋಗ್ಯ ಸ್ಥಿತಿ, ಜೊತೆಯಲ್ಲಿ ಹೋಗುವವರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಅರ್ಜಿ ಸ್ವೀಕರಿಸಿದ ನಂತರ, ಪ್ಯಾಕೇಜ್‌ಗಳು ಲಭ್ಯವಾದಾಗ ಬುಕ್ ಮಾಡಲು ಬಯಸುವವರಿಗೆ ಮಾಹಿತಿ ನೀಡಲಾಗುತ್ತದೆ. ಈ ಹಿಂದೆ ಹಜ್ ಮಾಡದವರಿಗೆ ಆದ್ಯತೆ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.

    ಕಠಿಣ ವೀಸಾ ನಿಯಮ:
    ಹಜ್ ಯಾತ್ರೆಯಲ್ಲಿ ಅನಧಿಕೃತ ಪಾಲ್ಗೊಳ್ಳುವಿಕೆಯನ್ನು ತಡೆಯಲು ಸೌದಿ ಅರೇಬಿಯಾ ತನ್ನ ವೀಸಾ ನೀತಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಘೋಷಿಸಿದೆ. ನಿರ್ದಿಷ್ಟ ದೇಶಗಳಿಂದ ಪ್ರವಾಸೋದ್ಯಮ, ವ್ಯಾಪಾರ ಮತ್ತು ಕುಟುಂಬ ಭೇಟಿಗಳಿಗಾಗಿ ಒಂದು ವರ್ಷದ ಬಹು-ಪ್ರವೇಶ ವೀಸಾಗಳನ್ನು ಸರ್ಕಾರ ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಿದೆ.

    ಫೆಬ್ರವರಿ 1, 2025ರಿಂದ ಭಾರತ ಸೇರಿದಂತೆ 14 ದೇಶಗಳ ನಿವಾಸಿಗಳು ಮಾತ್ರ ಏಕಪ್ರವೇಶ ವೀಸಾ (Single Entry Visa) ಗಳಿಗೆ ಅರ್ಹರಾಗಲಿದ್ದಾರೆ. ಈ ನಡೆಯು ಬಹುಪ್ರವೇಶ ವೀಸಾಗಳ ದುರ್ಬಳಕೆಯನ್ನು ಮಟ್ಟ ಹಾಕುವ ಉದ್ದೇಶ ಹೊಂದಿದ್ದು, ಕೆಲವು ಪ್ರವಾಸಿಗರು ಅಧಿಕೃತ ನೋಂದಣಿ ಇಲ್ಲದೆ ಹಜ್ ನಲ್ಲಿ ಭಾಗವಹಿಸುತ್ತಿರುವುದಿಂದ ಈ ನೀತಿಯನ್ನು ಜಾರಿಗೊಳಿಸಲಾಗಿದೆ.

    ಫೆಬ್ರವರಿ 1ರಿಂದ ಈ ನಿಯಮಗಳು ಅನ್ವಯವಾಗಿದೆ. ಭಾರತ ಸೇರಿದಂತೆ 14 ದೇಶಗಳ ವ್ಯಕ್ತಿಗಳು 30 ದಿನಗಳವರೆಗೆ ಮಾನ್ಯವಾಗಿರುವ ಏಕ-ಪ್ರವೇಶ ವೀಸಾಗಳಿಗೆ ಮಾತ್ರ ಅರ್ಹರಾಗಿರುತ್ತಾರೆ. ಈ ನಿಯಮಗಳು ಅಲ್ಜೀರಿಯಾ, ಬಾಂಗ್ಲಾದೇಶ, ಈಜಿಪ್ಟ್, ಇಥಿಯೋಪಿಯಾ, ಭಾರತ, ಇಂಡೋನೇಷ್ಯಾ, ಇರಾಕ್, ಜೋರ್ಡಾನ್, ಮೊರಾಕೊ, ನೈಜೀರಿಯಾ, ಪಾಕಿಸ್ತಾನ, ಸುಡಾನ್, ಟುನೀಶಿಯಾ ಮತ್ತು ಯೆಮೆನ್ ದೇಶಗಳಿಂದ ಭೇಟಿ ನೀಡುವ ಜನರಿಗೆ ಅನ್ವಯಿಸುತ್ತದೆ.

    ಈ ಹಿಂದೆ ಸೌದಿ ಅರೇಬಿಯಾಕ್ಕೆ ಬಹು-ಪ್ರವೇಶ ವೀಸಾಗಳನ್ನು ಹೊಂದಿರುವ ಅನೇಕ ಜನರು ನೋಂದಣಿ ಇಲ್ಲದೇ ಹಜ್‌ನಲ್ಲಿ ಭಾಗವಹಿಸಿದ್ದರು. ಇದರಿಂದಾಗಿ ಜನದಟ್ಟಣೆ ಉಂಟಾಗಿತ್ತು. 2022ರಲ್ಲಿ ಸುಮಾರು 2.5 ಮಿಲಿಯನ್ ಭಾರತೀಯರು ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದರು.

    2024ರಲ್ಲಿ, 1,200ಕ್ಕೂ ಹೆಚ್ಚು ಯಾತ್ರಿಕರು ತೀವ್ರ ಶಾಖ ಮತ್ತು ಜನದಟ್ಟಣೆಯಿಂದ ಸಾವನ್ನಪ್ಪಿದ್ದರು. ಯಾವುದೇ ನೋಂದಣಿಯಿಲ್ಲದೇ ಅನಧಿಕೃತವಾಗಿ ಹಜ್‌ ಯಾತ್ರೆಗೆ ಆಗಮಿಸಿರುವುದು ಈ ದುರಂತಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    2024ರಲ್ಲಿ 18.3 ಕೋಟಿಗೂ ಹೆಚ್ಚು ಮುಸ್ಲಿಮರು ಹಜ್ ಯಾತ್ರೆ ಮಾಡಿದ್ದಾರೆ. ಈ ಪೈಕಿ 22 ದೇಶಗಳಿಂದ 16 ಕೋಟಿಗೂ ಹೆಚ್ಚು ಜನರು ಆಗಮಿಸಿದ್ದರು. ಸುಮಾರು 2,22,000 ಸೌದಿ ನಾಗರಿಕರು ಮತ್ತು ನಿವಾಸಿಗಳು ಹಜ್‌ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು ಎಂದು ಸೌದಿ ಹಜ್ ಅಧಿಕಾರಿಗಳು ತಿಳಿಸಿದ್ದಾರೆ.

    ಅಸೋಸಿಯೇಟೆಡ್ ಪ್ರೆಸ್ ವರದಿಯ ಪ್ರಕಾರ, 2015ರಲ್ಲಿ, ಹಜ್ ಸಮಯದಲ್ಲಿ ಮಿನಾದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 2,400ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿದ್ದರು. ಹಜ್ ತೀರ್ಥಯಾತ್ರೆಯಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ದುರಂತ ಇದಾಗಿದೆ. ಇದಕ್ಕೂ ಮೊದಲು 1990ರಲ್ಲಿ ನಡೆದ ಕಾಲ್ತುಳಿತದಲ್ಲಿ 1,426 ಮಂದಿ ಮೃತಪಟ್ಟಿದ್ದರು.

  • ಹಜ್‌ ಯಾತ್ರೆಯ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ – ಪಾಕ್‌ಗೆ ಸೌದಿ ಎಚ್ಚರಿಕೆ

    ಹಜ್‌ ಯಾತ್ರೆಯ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ – ಪಾಕ್‌ಗೆ ಸೌದಿ ಎಚ್ಚರಿಕೆ

    ರಿಯಾದ್‌: ಹಜ್‌ ಯಾತ್ರೆಯ (Hajj) ನೆಪದಲ್ಲಿ ಪಾಕಿಸ್ತಾನದಿಂದ (Pakistan) ಗಲ್ಫ್‌ ರಾಷ್ಟ್ರಗಳಿಗೆ ಬರುತ್ತಿರುವ ಭಿಕ್ಷುಕರ ಸಂಖ್ಯೆ ಕಂಡು ಸೌದಿ ಅರೇಬಿಯಾ (Saudi Arabia) ಹೌಹಾರಿದೆ.

    ಧಾರ್ಮಿಕ ಯಾತ್ರೆಗೆ ನೀಡಲಾಗುವ ಉಮ್ರಾ ವೀಸಾದಡಿ (Umrah Visa) ಸೌದಿ ಪ್ರವೇಶ ಮಾಡುತ್ತಿರುವ ಭಿಕ್ಷುಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.

    ಈ ಬೆನ್ನಲ್ಲೇ ಉಮ್ರಾ ಕಾಯ್ದೆ ಜಾರಿಗೆ ಪಾಕ್ ಮುಂದಾಗಿದೆ. ಯಾತ್ರೆ ಆಯೋಜಿಸುವ ಏಜೆಂಟರನ್ನು ನಿರ್ಬಂಧಿಸಲು ಸಿದ್ಧತೆ ನಡೆಸಿದೆ. ಪಾಕ್ ವಿದೇಶಾಂಗ ಇಲಾಖೆ ಪ್ರಕಾರ, ವಿದೇಶಗಳಲ್ಲಿರುವ ಭಿಕ್ಷುಕರಲ್ಲಿ 90% ಮಂದಿ ಪಾಕಿಸ್ತಾನದವರೇ ಆಗಿದ್ದಾರೆ. ಇದನ್ನೂ ಓದಿ: ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಐಎಂಎಫ್‌ನಿಂದ ಸಿಗುತ್ತಾ ಬೂಸ್ಟರ್‌ ಡೋಸ್‌!

    ಸೌದಿ ರಾಯಭಾರಿ ನವಾಫ್ ಬಿನ್ ಸೈದ್ ಅಹ್ಮದ್ ಅಲ್-ಮಲ್ಕಿ ಅವರನ್ನು ಭೇಟಿಯಾಗಿದ್ದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಅವರು ಸೌದಿ ಅರೇಬಿಯಾಕ್ಕೆ ಭಿಕ್ಷುಕರನ್ನು ಕಳುಹಿಸುವ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಇದನ್ನೂ ಓದಿ: ಭಯೋತ್ಪಾದನೆ ನಿಂತರೆ ಮಾತ್ರ ಪಾಕಿಸ್ತಾನದೊಂದಿಗೆ ಶಾಂತಿ: ರಾಜನಾಥ್‌ ಸಿಂಗ್‌

    ಪಾಕಿಸ್ತಾನಿ ಭಿಕ್ಷುಕರು ಜಿಯಾರತ್ (ತೀರ್ಥಯಾತ್ರೆ) ನೆಪದಲ್ಲಿ ಮಧ್ಯಪ್ರಾಚ್ಯಕ್ಕೆ ಪ್ರಯಾಣಿಸುತ್ತಾರೆ. ಹೆಚ್ಚಿನ ಜನರು ಉಮ್ರಾ ವೀಸಾದಲ್ಲಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಭಿಕ್ಷಾಟನೆ-ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಸಾಗರೋತ್ತರ ಪಾಕಿಸ್ತಾನಿಗಳ ಕಾರ್ಯದರ್ಶಿ ಜೀಶಾನ್ ಖಂಜಾದಾ ಕಳೆದ ವರ್ಷ ಹೇಳಿದ್ದರು.

    ಇತ್ತೀಚೆಗೆ 11 ವ್ಯಕ್ತಿಗಳನ್ನು ಕರಾಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಸೌದಿಗೆ ಭಿಕ್ಷೆ ಬೇಡಲು ತೆರಳುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸೌದಿ ವಿಮಾನದಿಂದಲೇ ಅವರನ್ನು ಹೊರಹಾಕಲಾಗಿತ್ತು.

     

  • 98 ಭಾರತದ ಹಜ್‌ ಯಾತ್ರಿಕರು ಸಾವು – ವಿದೇಶಾಂಗ ಇಲಾಖೆಯಿಂದ ಅಧಿಕೃತ ಮಾಹಿತಿ

    98 ಭಾರತದ ಹಜ್‌ ಯಾತ್ರಿಕರು ಸಾವು – ವಿದೇಶಾಂಗ ಇಲಾಖೆಯಿಂದ ಅಧಿಕೃತ ಮಾಹಿತಿ

    ನವದೆಹಲಿ: ಹಜ್‌ (Hajj) ಯಾತ್ರೆಗಾಗಿ ಸೌದಿ ಅರೇಬಿಯಾಗೆ (Saudi Arabia) ತೆರಳಿದ್ದ 98 ಭಾರತೀಯರು (Indians) ಸಾವನ್ನಪ್ಪಿದ್ದಾರೆ. ಎಲ್ಲ ಸಾವುಗಳಿಗೆ ವಯೋ ಸಹಜ ಖಾಯಿಲೆ, ವೃದ್ಧಾಪ್ಯ ಕಾರಣ ಎಂದು ಕೇಂದ್ರ ವಿದೇಶಾಂಗ ಇಲಾಖೆ (MEA) ಹೇಳಿದೆ.

    ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಇಲಾಖೆ, ನೈಸರ್ಗಿಕ ಕಾರಣಗಳಿಂದ ಭಾರತೀಯ ಮೂಲದ ಹಜ್‌ ಯಾತ್ರಿಗಳು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.


    ಹಜ್ ಯಾತ್ರೆಯು ಇಸ್ಲಾಂ ಧರ್ಮದ ಐದು ಸ್ತಂಭಗಳಲ್ಲಿ ಒಂದಾಗಿದೆ. ಎಲ್ಲಾ ಮುಸ್ಲಿಮರು ತಮ್ಮ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ಧಾರ್ಮಿಕ ಬಾಧ್ಯತೆಯನ್ನು ಪೂರೈಸಬೇಕು. ಈ ವರ್ಷ 1,75,000 ಭಾರತೀಯ ಯಾತ್ರಿಕರು ಹಜ್‌ಗಾಗಿ ಸೌದಿಗೆ ಭೇಟಿ ನೀಡಿದ್ದಾರೆ. ಜುಲೈ 9 ರಿಂದ 22 ರವರೆಗೆ ಕೋರ್ ಹಜ್ ಅವಧಿ ಆರಂಭವಾಗಲಿದೆ. ಈ ನಡುವೆ ಇದುವರೆಗೆ 98 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಆಯುರ್ವೇದ ಮಸಾಜ್‌ಗೆ ಬಂದಾಗ ಬಲವಂತದ ಸೆಕ್ಸ್‌: ದೂರು ಸಲ್ಲಿಸಿದ ವಿದೇಶಿ ಯುವತಿ

    ಈ‌ ನಡುವೆ ಗರಿಷ್ಠ ತಾಪಮಾನ ಸುಡುವ ಬಿಸಿಲಿನ ಕಾರಣದಿಂದಾಗಿ 1000 ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಇಡೀ ಯಾತ್ರೆಯಲ್ಲಿ 180ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಸೌದಿಯ ಅಧ್ಯಯನವೊಂದು ಈ ಪವಿತ್ರ ಕ್ಷೇತ್ರದ ತಾಪಮಾನವು ಪ್ರತಿ ದಶಕದಲ್ಲಿ 0.4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ ಎಂದು ತಿಳಿಸಿದೆ.

     

  • ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ – 20 ಹಜ್ ಯಾತ್ರಾರ್ಥಿಗಳ ಸಾವು

    ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ – 20 ಹಜ್ ಯಾತ್ರಾರ್ಥಿಗಳ ಸಾವು

    ರಿಯಾದ್: ಮುಸ್ಲಿಮರ ಪವಿತ್ರ ನಗರ ಮೆಕ್ಕಾಗೆ (Mecca) ಯಾತ್ರಾರ್ಥಿಗಳನ್ನು (Pilgrims) ಕರೆದೊಯ್ಯುತ್ತಿದ್ದ ಬಸ್ ಒಂದು ಸೇತುವೆಯೊಂದರಲ್ಲಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ 20 ಜನರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಬಸ್‌ನಲ್ಲಿದ್ದ ಇನ್ನೂ ಹಲವರಿಗೆ ಗಾಯಗಳಾಗಿವೆ ಎಂದು ಸೌದಿ (Saudi Arabia) ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

    ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್‌ನಲ್ಲಿ ನಡೆದಿದೆ. ಯಾತ್ರಾರ್ಥಿಗಳನ್ನು ಮೆಕ್ಕಾ ಹಾಗೂ ಮದೀನಾಗೆ ಕರೆದುಕೊಂಡು ಹೋಗುವ ಸಂದರ್ಭ ನಿರಂತರವಾಗಿ ಸವಾಲು ಎದುರಿಸಲಾಗುತ್ತಿದೆ ಎಂಬುದನ್ನು ಈ ಘಟನೆ ಎತ್ತಿ ತೋರಿಸುತ್ತಿದೆ. ಇದನ್ನೂ ಓದಿ: ಜೆಡಿಎಸ್ ಭದ್ರಕೋಟೆ ಒಡೆಯಲು ಸುಮಲತಾ ರಣತಂತ್ರ

    ಇದು ರಂಜಾನ್‌ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ. ಆದರೆ ಅವರ ಗುರುತುಗಳನ್ನು ಇನ್ನೂ ತಿಳಿಸಲಾಗಿಲ್ಲ.

    ವರದಿಗಳ ಪ್ರಕಾರ ಬಸ್ ಸೇತುವೆಯಲ್ಲಿ ಹೋಗುತ್ತಿದ್ದಾಗ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್‌ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ – ಮೂವರು ಮಕ್ಕಳು ಸೇರಿ 6 ಜನ ಸಾವು

  • ಹಜ್‍ನಿಂದ ಬಂದ ಯಾತ್ರಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ಕಾಶ್ಮೀರಿ ಹಿಂದೂಗಳು

    ಹಜ್‍ನಿಂದ ಬಂದ ಯಾತ್ರಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ಕಾಶ್ಮೀರಿ ಹಿಂದೂಗಳು

    ಶ್ರೀನಗರ: ಸೌದಿ ಅರೇಬಿಯಾದ ಮೆಕ್ಕಾದ ಹಜ್ ಯಾತ್ರೆಯಿಂದ ಹಿಂದಿರುಗಿರುವ ಯಾತ್ರಾರ್ಥಿಗಳನ್ನು ಸ್ಥಳೀಯ ಕಾಶ್ಮೀರಿ ಹಿಂದೂಗಳು ಹಾಡನ್ನು ಹಾಡಿ ಆರತಿ ಮಾಡುವ ಮೂಲಕ ಶ್ರೀನಗರದಲ್ಲಿ ಅದ್ಧೂರಿಯಾಗಿ ಬರಮಾಡಿಕೊಂಡರು.

    ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹಜ್ ಯಾತ್ರೆ ಮುಗಿಸಿ ಬಂದ ಇಸ್ಲಾಮಿಕ್ ಯಾತ್ರಾರ್ಥಿಗಳನ್ನು ಕಾಶ್ಮೀರಿ ಪಂಡಿತರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದು, ಗುಲಾಬಿ ಹೂವುಗಳನ್ನು ನೀಡಿ ಹಸ್ತಾಲಾಘವ ಮಾಡಿದರು. ಈ ಮೂಲಕ ಧಾರ್ಮಿಕ ಸಾಮರಸ್ಯವನ್ನು ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಪ್ರವಾದಿಯ ಹಾಡನ್ನು ಹಾಕಿ ಆರತಿ ಎತ್ತಿ ಯಾತ್ರಾರ್ಥಿಗಳನ್ನು ಸ್ವಾಗತಿಸಿದರು. ಇದನ್ನೂ ಓದಿ: ಭಾರತದ ಗಡಿಯಲ್ಲಿ ಪಾಕ್‌ನ ಡ್ರೋನ್‍ ಹಾರಾಟ

    ಈ ವೀಡಿಯೋವನ್ನು ಉತ್ತರಪ್ರದೇಶದ ಶಾಸಕ ಅಬ್ಬಾಸ್ ಬಿನ್ ಮುಖ್ತಾರ್ ಅನ್ಸಾರಿ ಟ್ವೀಟ್‍ನಲ್ಲಿ ಹಂಚಿಕೊಂಡಿದ್ದಾರೆ. ಶ್ರೀನಗರ ವಿಮಾನ ನಿಲ್ದಾಣದಿಂದ ಸಣ್ಣ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡ ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಬಿನ್ ಮುಖ್ತಾರ್ ಅನ್ಸಾರಿ, ಕಾಶ್ಮೀರಿ ಪಂಡಿತರು ವಿಮಾನ ನಿಲ್ದಾಣದ ಹೊರಗೆ ಸಾಲಿನಲ್ಲಿ ನಿಂತಿದ್ದರು. ಪ್ರವಾದಿ ಮೊಹಮ್ಮದ್ ಅವರನ್ನು ಶ್ಲಾಘಿಸುವ ನಾತ್ ಕವನವನ್ನು ಹಾಡಿ, ಯಾತ್ರೆಗೆ ಅಭಿನಂದನೆ ಸಲ್ಲಿಸಿದರು ಎಂದು ಶಾಸಕ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಿ – ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

    Live Tv
    [brid partner=56869869 player=32851 video=960834 autoplay=true]

  • 2 ವರ್ಷಗಳ ನಂತರ ಹಜ್ ಯಾತ್ರೆ ಪ್ರಕ್ರಿಯೆಗೆ ಶಶಿಕಲಾ ಜೊಲ್ಲೆ ಅಧಿಕೃತ ಚಾಲನೆ

    2 ವರ್ಷಗಳ ನಂತರ ಹಜ್ ಯಾತ್ರೆ ಪ್ರಕ್ರಿಯೆಗೆ ಶಶಿಕಲಾ ಜೊಲ್ಲೆ ಅಧಿಕೃತ ಚಾಲನೆ

    – ಆನ್ ಲೈನ್ ಅರ್ಜಿಗಳ ಪ್ರಕ್ರಿಯೆಗೆ ಚಾಲನೆ

    ಬೆಂಗಳೂರು: ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ ಪ್ರಕ್ರಿಯೆಗೆ ಇಂದು ಮುಜರಾಯಿ, ಹಜ್ ಮತ್ತು ವಕ್ಫ್  ಸಚಿವೆ ಶಶಿಕಲಾ ಜೊಲ್ಲೆ ಇಂದು ನಗರದ ಹಜ್ ಭವನದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.

    ಆನ್‍ಲೈನ್ ಅರ್ಜಿಗಳ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಯಾತ್ರೆ ಹಜ್. ಕೊರೊನಾ ಕಾರಣದಿಂದ ಕಳೆದ 2 ವರ್ಷಗಳಿಂದ ಇದು ಸ್ಥಗಿತಗೊಂಡಿತ್ತು. ವಿಶ್ವದಾದ್ಯಂತ ಕೊರೊನಾ ಲಸಿಕೆ ಕಾರ್ಯ ಚುರುಕುಗೊಂಡಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಹಜ್ ಯಾತ್ರೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದರು.

    ಆನ್‍ಲೈನ್ ಮೂಲಕ ಅರ್ಜಿ ಪ್ರಕ್ರಿಯೆಗೆ ಚಾಲನೆ:
    ಈ ಬಾರಿ ಹಜ್ ಯಾತ್ರೆಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನವೆಂಬರ್ 1 ರಿಂದ ಆನ್‍ಲೈನ್ ಅರ್ಜಿ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಜನರು ಆನ್‍ಲೈನ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 2022ರ ಜನವರಿ 31 ವರೆಗೆ ಅರ್ಜಿಯನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ಖುರ್ರಾ(ಲಾಟರಿ) ನಡೆಸಿ, ಜುಲೈ 2022 ರಲ್ಲಿ ಹಜ್ ಯಾತ್ರೆಯನ್ನು ಅಯೋಜಿಸಲಾಗುವುದು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. ಇದನ್ನೂ ಓದಿ: ನೇತ್ರದಾನಕ್ಕೆ ಜಮೀರ್ ಅಹಮ್ಮದ್ ಖಾನ್ ಸಹಿ

    ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ:
    ಮುಸ್ಲಿಂ ಸಮುದಾಯದವರು ಶ್ರದ್ಧೆ ಮತ್ತು ಭಕ್ತಿಯಿಂದ ಕೈಗೊಳ್ಳುವ ಈ ಯಾತ್ರೆಯಲ್ಲಿ ಅವರಿಗೆ ಯಾವುದೇ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು. ವಿಮಾನದ ವ್ಯವಸ್ಥೆ, ಅಲ್ಲಿ ತಂಗುವ ಹಾಗೂ ಇನ್ನಿತರ ವ್ಯವಸ್ಥೆಗಳಲ್ಲಿ ಲೋಪ ಆಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಹಣದಾಸೆಗೆ ವೃದ್ಧ ದಂಪತಿಯನ್ನು ಹತ್ಯೆಗೈದು ಮನೆಯೆಲ್ಲಾ ಹುಡುಕಿದ್ರು- ಆದ್ರೆ ಸಿಕ್ಕಿದ್ದು ಕೇವಲ 500 ರೂ!

    ರಾಜ್ಯದ ವಿವಿಧ ಭಾಗಗಳಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರು ಹಜ್ ಭವನದ ರಿಪೇರಿ, ಹೆಚ್ಚಿನ ಅನುದಾನ ದೊರಕಿಸಿಕೊಡಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇಂದು ಬೆಳಿಗ್ಗೆ ಕೇಂದ್ರ ಹಜ್ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಹಲವಾರು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯು ಚರ್ಚೆ ನಡೆಯಿತು ಎಂದು ಶಶಿಕಲಾ ಜೊಲ್ಲೆ ಮಾಹಿತಿ ಹಂಚಿಕೊಂಡರು.

    ಹಜ್ ಭವನದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷರಾದ ರೌಫುದ್ದೀನ್ ಕಛೇರಿವಾಲೈ, ರಾಜ್ಯಸಭಾ ಸದಸ್ಯ ಹಾಗೂ ಹಜ್ ಸಮಿತಿ ಸದಸ್ಯ ಸೈಯ್ಯದ್ ನಾಸಿರ್ ಹುಸೇನ್, ಶಾಸಕಿ ಹಾಗೂ ಸಮಿತಿ ಸದಸ್ಯೆ ಖಾನಿಜ್ ಫಾತಿಮಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೈಲಿನಿಂದ ಬಿಡುಗಡೆ

  • ವಿದೇಶಿಯರಿಗೆ ಹಜ್ ಯಾತ್ರೆ ಇಲ್ಲ – 60 ಸಾವಿರ ಮಂದಿಗೆ ಮಾತ್ರ ಅನುಮತಿ

    ವಿದೇಶಿಯರಿಗೆ ಹಜ್ ಯಾತ್ರೆ ಇಲ್ಲ – 60 ಸಾವಿರ ಮಂದಿಗೆ ಮಾತ್ರ ಅನುಮತಿ

    ರಿಯಾದ್: ಈ ವರ್ಷ ಕೋವಿಡ್ 19 ಹಿನ್ನೆಲೆಯಲ್ಲಿ ಪವಿತ್ರ ಹಜ್ ಯಾತ್ರೆಯನ್ನು ವಿದೇಶಿಯರಿಗೆ ನಿರ್ಬಂಧಿಸಲಾಗಿದೆ. ತನ್ನ ದೇಶದ ಕೇವಲ 60 ಸಾವಿರ ಮಂದಿಗೆ ಮಾತ್ರ ಅನುಮತಿ ನೀಡುವುದಾಗಿ ಸೌದಿ ಅರೇಬಿಯಾ ಸರ್ಕಾರ ಹೇಳಿದೆ.

    ಹಜ್ ಸಚಿವಾಲಯ ಮತ್ತು ಉಮ್ರಾ ಈ ನಿರ್ಧಾರವನ್ನು ಸೌದಿ ಸರ್ಕಾರದ ಪ್ರೆಸ್ ಏಜೆನ್ಸಿ ಪ್ರಕಟಿಸಿದೆ. ಕಳೆದ ವರ್ಷವೂ ಕೋವಿಡ್ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಯಾತ್ರಿಕರು ಭಾಗವಹಿಸಿದ್ದರು.

    ಜುಲೈ ಮಧ ಭಾಗದಲ್ಲಿ ಈ ವರ್ಷದ ಹಜ್ ಯಾತ್ರೆ ಆರಂಭವಾಗಲಿದ್ದು, 18 ರಿಂದ 65 ವಯಸ್ಸಿನ ಯಾತ್ರಿಕರಿಗೆ ಮಾತ್ರ ಸೀಮಿತವಾಗಿರುತ್ತದೆ. ಅಲ್ಲದೆ ಈ ಯಾತ್ರೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಸಚಿವಾಲಯ ತಿಳಿಸಿದೆ.  ಇದನ್ನೂ ಓದಿ: ಚೀನಿ ಲಸಿಕೆ ಪಡೆದವರಿಗೆ ಸೌದಿ ನಿರ್ಬಂಧ – ಪಾಕ್ ಜನತೆಗೆ ಶಾಕ್

    160 ವಿವಿಧ ರಾಷ್ಟ್ರಗಳ ಮೂರನೇ ಎರಡರಷ್ಟು ವಿದೇಶಿ ನಿವಾಸಿಗಳು ಸಾಮಾನ್ಯವಾಗಿ ಹಜ್ ಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಳೆದ ವರ್ಷ ವಿದೇಶಿಯರಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಈ ನಿರ್ಬಂಧ ಜಾರಿಯಾಗುವಷ್ಟರಲ್ಲೇ 1 ಸಾವಿರ ಮಂದಿ ಹಜ್ ಯಾತ್ರೆ ಮಾಡಲು ಸೌದಿ ಅರೇಬಿಯಾಗೆ ಬಂದಿದ್ದರು. ಅವರೆಲ್ಲ ಸೌದಿ ಅರೇಬಿಯಾ ಸುತ್ತಮುತ್ತ ಇದ್ದು ಅವರಿಗೆ ಈ ಬಾರಿ ಅವಕಾಶ ನೀಡಲಾಗಿದೆ.