Tag: HAL

  • ಯಶಸ್ವಿಯಾಗಿ ಮೊದಲ ಹಾರಾಟ ನಡೆಸಿದ ತೇಜಸ್ ಎಂಕೆ1ಎ ಯುದ್ಧ ವಿಮಾನ

    ಯಶಸ್ವಿಯಾಗಿ ಮೊದಲ ಹಾರಾಟ ನಡೆಸಿದ ತೇಜಸ್ ಎಂಕೆ1ಎ ಯುದ್ಧ ವಿಮಾನ

    ನಾಸಿಕ್: ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ (LCA Tejas Mk1A) ಇಂದು ತನ್ನ ಮೊದಲ ಹಾರಾಟ ನಡೆಸಿದೆ.

    ನಾಸಿಕ್‌ನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (HAL) ವಿಮಾನ ಉತ್ಪಾದನಾ ವಿಭಾಗದಲ್ಲಿ ಈ ಹಾರಾಟ ನಡೆಯಿತು. ಭಾರತದಲ್ಲಿ ಯುದ್ಧ ವಿಮಾನ ತಯಾರಿಕೆಯ ಅಭಿವೃದ್ಧಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

    ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಾಜನಾಥ್ ಸಿಂಗ್ ಅವರು LCA ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40 ವಿಮಾನದ ಎರಡನೇ ಘಟಕವನ್ನು ಉದ್ಘಾಟಿಸಿದರು.

    ತೇಜಸ್ MK1A ಅನ್ನು ವಾಯುಪಡೆಗೆ ಸೇರಿಸುವ ದಿನಾಂಕಗಳನ್ನು ಘೋಷಿಸಲಾಗಿಲ್ಲ. ಆದರೆ ಮುಂದಿನ ನಾಲ್ಕು ವರ್ಷಗಳಲ್ಲಿ 83 ತೇಜಸ್ ಮಾರ್ಕ್ 1A ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಪೂರೈಸಲಾಗುವುದು ಎಂದು ಹೆಚ್‌ಎಎಲ್‌ ಹೇಳಿದೆ.  ಇದನ್ನೂ ಓದಿ:  ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    ನಾಸಿಕ್‌ನಲ್ಲಿರುವ HAL ನ ವಿಮಾನ ಉತ್ಪಾದನಾ ವಿಭಾಗವು ಪ್ರತಿ ವರ್ಷ ಎಂಟು ಯುದ್ಧ ವಿಮಾನಗಳನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಹೊರತಾಗಿ, ತೇಜಸ್‌ನ ಎರಡು ಉತ್ಪಾದನಾ ಘಟಕಗಳು ಬೆಂಗಳೂರಿನಲ್ಲಿದ್ದು ಪ್ರತಿ ವರ್ಷ 16 ಯುದ್ಧ ವಿಮಾನಗಳನ್ನು ತಯಾರಿಸಲಾಗುತ್ತಿದೆ. ಈ ರೀತಿಯಾಗಿ, ನಾಸಿಕ್‌ನ ಉತ್ಪಾದನಾ ಘಟಕ ಪ್ರಾರಂಭವಾದ ನಂತರ, ಪ್ರತಿ ವರ್ಷ 24 ಯುದ್ಧ ವಿಮಾನಗಳನ್ನು ತಯಾರಿಸಲಾಗುವುದು.

    ತೇಜಸ್ ಮಾರ್ಕ್ 1A ಆವೃತ್ತಿಯು ಮುಂದುವರಿದ, ಬಹು-ಪಾತ್ರದ ಯುದ್ಧ ವಿಮಾನವಾಗಿದೆ. ಇದು ಎಲ್ಲಾ ಹವಾಮಾನ ಕಾರ್ಯಾಚರಣೆಗಳಿಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿದ ಸ್ಥಳೀಯ 4.5-ಪೀಳಿಗೆಯ ವಿಮಾನವಾಗಿದೆ.

    ತೇಜಸ್ Mk-1A ತೇಜಸ್ Mk-1 ಆವೃತ್ತಿಗಿಂತ ಹಲವಾರು ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ, ಇದರಲ್ಲಿ ಇಸ್ರೇಲಿ EL/M-2025 AESA ರಾಡಾರ್, ಜಾಮರ್‌ಗಳೊಂದಿಗೆ ಸುಧಾರಿತ ಎಲೆಕ್ಟ್ರಾನಿಕ್ ವಾರ್‌ಫೇರ್ ಸೂಟ್ ಮತ್ತು ಬಿಯಾಂಡ್ ವಿಷುಯಲ್ ರೇಂಜ್ (BVR) ಸಾಮರ್ಥ್ಯಗಳು ಸೇರಿವೆ.

  • Bengaluru | ನೀರಿನ ಟ್ಯಾಂಕರ್ ಹರಿದು ಬಾಲಕಿ ಸಾವು

    Bengaluru | ನೀರಿನ ಟ್ಯಾಂಕರ್ ಹರಿದು ಬಾಲಕಿ ಸಾವು

    ಬೆಂಗಳೂರು: ನೀರಿನ ಟ್ಯಾಂಕರ್ (Water Tanker) ಹರಿದು ಒಂಬತ್ತು ವರ್ಷದ ಬಾಲಕಿ (Girl) ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಹೆಚ್‌ಎಎಲ್‌ನಲ್ಲಿ ನಡೆದಿದೆ.

    ಕಲಬುರಗಿ (Kalaburagi) ಮೂಲದ ದಂಪತಿಯ ಮಗಳು ಅನುಶ್ರೀ ಸಾವನ್ನಪ್ಪಿದ ಬಾಲಕಿ. ಹೆಚ್‌ಎಎಲ್ ರಸ್ತೆಯ ಶಿವಲಿಂಗಯ್ಯ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಕಟ್ಟಡವೊಂದಕ್ಕೆ ವಾಟರ್ ಸಪ್ಲೈಗೆ ಟ್ಯಾಂಕರ್ ಬಂದಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಆಟ ಆಡುತ್ತಿದ್ದ ಬಾಲಕಿಯನ್ನು ನೋಡದೆ ಟ್ಯಾಂಕರ್ ಚಾಲಕ ವಾಹನ ಚಲಾಯಿಸಿದ ಪರಿಣಾಮ ಕೆಳಗೆ ಕೆಳಗೆ ಬಿದ್ದ ಬಾಲಕಿ ಮೇಲೆ ಟ್ಯಾಂಕರ್ ಹರಿದು ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: Bihar Elections | 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

    ಸದ್ಯ ಬಾಲಕಿಯ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಜೀವನ್ ಭೀಮನಗರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

  • 75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್‌ ಸುಟ್ಟು ಕರಕಲು

    75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್‌ ಸುಟ್ಟು ಕರಕಲು

    – ಬೆಳ್ಳಂಬೆಳಗ್ಗೆಯೇ ಅಗ್ನಿ ಅವಘಡ

    ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ (BMTC Bus Fire) ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ (HAL) ಮುಖ್ಯದ್ವಾರದ ಬಳಿ ನಡೆದಿದೆ.

    ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್‌ (ಸಂಖ್ಯೆ KA57 F 4568) ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು

    ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್‌ ಧಗಧಗಿಸಿದೆ. ಚಾಲಕನ ಸಮಯಪ್ರಜ್ಷೆಯಿಂದ 75 ಪ್ರಯಾಣಿಕರು ಸೇಫ್‌ ಆಗಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳು ಬಲಿ; ತಂದೆ ನೇಣಿಗೆ ಶರಣು, ಪ್ರಾಣಪಾಯದಿಂದ ತಾಯಿ ಪಾರು

    ಬಳಿಕ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚಲು ಮುಂದಾಗಿದೆ. ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ಝೂ ಸಿಬ್ಬಂದಿಯನ್ನೇ ಕೊಂದು ತಿಂದ ಸಿಂಹಪಡೆ

  • ಸುರಿವ ಮಳೆಯಲ್ಲೇ ಬೀಳ್ಕೊಡುಗೆ – ಕರ್ನಾಟಕದ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೊರಟ ಮೋದಿ

    ಸುರಿವ ಮಳೆಯಲ್ಲೇ ಬೀಳ್ಕೊಡುಗೆ – ಕರ್ನಾಟಕದ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೊರಟ ಮೋದಿ

    ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ (Yellow Line Metro) ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿದ ಪ್ರಧಾನಿ ಮೋದಿ (Narendra Modi), ಕರ್ನಾಟಕದ ಕಾರ್ಯಕ್ರಮ ಮುಗಿಸಿ ದೆಹಲಿಗೆ ವಾಪಸ್ಸಾದರು.

    ಕರ್ನಾಟಕ ಸರ್ಕಾರ, ವಸತಿ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ ಹಾಗೂ ಕೇಂದ್ರ ರೈಲ್ವೆ ಮಂಡಳಿ ಮತ್ತು ರೈಲ್ವೇ ಸಚಿವಾಲಯದ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ಮೆಟ್ರೋ ಹಂತ-2ರ ಹಳದಿ ಮಾರ್ಗ ಉದ್ಘಾಟನೆ, ಬೆಂಗಳೂರು (Bengaluru) ಮೆಟ್ರೋ ಹಂತ-3ರ ಶಂಕುಸ್ಥಾಪನೆ, ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ (HAL Airport) ದೆಹಲಿಗೆ ವಾಪಸ್ಸಾದರು. ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

    ಸುರಿವ ಮಳೆಯ ನಡುವೆಯೇ ಪ್ರಧಾನ ಮಂತ್ರಿಗಳನ್ನು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕರಾದ ಛಲವಾದಿ ಟಿ. ‌ನಾರಾಯಣಸ್ವಾಮಿ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ – ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾನ

    ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ: ಮೋದಿ

  • ನಮ್ಮ ಮೆಟ್ರೋಗೆ ರಾಜ್ಯದ ಪಾಲೇ ಹೆಚ್ಚು – ಮೋದಿ ಎದುರೇ ಸಿದ್ದರಾಮಯ್ಯ ‘ಕ್ರೆಡಿಟ್‌’ ಕ್ಲೈಮ್

    ನಮ್ಮ ಮೆಟ್ರೋಗೆ ರಾಜ್ಯದ ಪಾಲೇ ಹೆಚ್ಚು – ಮೋದಿ ಎದುರೇ ಸಿದ್ದರಾಮಯ್ಯ ‘ಕ್ರೆಡಿಟ್‌’ ಕ್ಲೈಮ್

    – ಕೇಂದ್ರದಿಂದ 7,468.86 ಕೋಟಿ, ರಾಜ್ಯದಿಂದ 25,387 ಕೋಟಿ ರೂ. ಖರ್ಚು; ವಿವರ ಕೊಟ್ಟ ಸಿಎಂ

    ಬೆಂಗಳೂರು: ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ. ಕೇಂದ್ರ 50%, ರಾಜ್ಯ 50% ಖರ್ಚು ಮಾಡುವ ಒಪ್ಪಂದ ಆಗಿದೆ. ಆದ್ರೆ ರಾಜ್ಯ ಸರ್ಕಾರವೇ ಹೆಚ್ಚು ಖರ್ಚು ಮಾಡ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಧಾನಿ ಮೋದಿ ಎದುರೇ ಕ್ರೆಡಿಟ್‌ ಕ್ಲೈಮ್‌ ಮಾಡಿಕೊಂಡರು.

    ಐಐಐಟಿಯಲ್ಲಿ ನಮ್ಮ ಮೆಟ್ರೋದ ಕಿತ್ತಳೆ ಮಾರ್ಗಕ್ಕೆ (Orange Line) ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತಮಾಡಿದ ಸಿಎಂ ಮೋದಿ ಎದುರೇ ಕ್ರೆಡಿಟ್‌ ತೆಗೆದುಕೊಂಡರು. ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

    ಮೋದಿಯವ್ರು (Narendra Modi) ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮೆಟ್ರೋ ಕೇಂದ್ರ ರಾಜ್ಯಗಳ ಸಹಯೋಗದೊಂದಿಗೆ ನಡೆಯುವ ಯೋಜನೆ. ಈ ಯೋಜನೆಗೆ ಕೇಂದ್ರ 50%, ರಾಜ್ಯ 50% ಖರ್ಚು ಮಾಡುವ ಒಪ್ಪಂದ ಆಗಿದೆ. ಆದ್ರೆ ರಾಜ್ಯ ಸರ್ಕಾರವೇ ಹೆಚ್ಚು ಕರ್ಚು ಮಾಡ್ತಿದೆ, ಕೇಂದ್ರ ತಾಂತ್ರಿಕ ಮತ್ತು ಹಣಕಾಸು ನೆರವು ಕೊಡ್ತಿದೆ. ಹಾಗಾಗಿ ಇದು ಕೇಂದ್ರ, ರಾಜ್ಯಗಳ ಜಂಟಿ ಕಾರ್ಯಕ್ರಮ ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ: ಮೋದಿ

    ಈಗಾಗಲೇ 96.10 ಕಿಮೀ ಮೆಟ್ರೋ ರೈಲು ಕೆಲಸ ಮುಗಿದಿದೆ. ಇದಕ್ಕೆ ರಾಜ್ಯ 25,387 ಕೋಟಿ ರೂ. ಖರ್ಚು ಮಾಡಿದೆ. ಕೇಂದ್ರ 7,468.86 ಕೋಟಿ ಖರ್ಚು ಮಾಡಿದೆ, ಹಳದಿ ಮಾರ್ಗಕ್ಕೆ 7,160 ಕೋಟಿ ಖರ್ಚಾಗಿದೆ ಎಂದು ಹೇಳಿದ ಸಿಎಂ ಮೋದಿ ಎದುರಲ್ಲೇ ಕ್ರೆಡಿಟ್‌ ಕ್ಲೈಮ್‌ ಮಾಡಿಕೊಂಡರು. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಮೋದಿ ಅಭಿನಂದನೆ

    2030ರ ಹೊತ್ತಿಗೆ 220 ಕಿ.ಮೀ ಉದ್ದದ ಮೆಟ್ರೋ ಮಾಡುವುದು ಕೇಂದ್ರದ ಉದ್ದೇಶ. ಇದು ಆದರೆ, ನಿತ್ಯ 30 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಬಹುದು. ಇವತ್ತು 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 3ಎ ಯೋಜನೆಗೆ ಡಿಪಿಆರ್ ರೆಡಿಯಾಗಿದೆ, ಕೇಂದ್ರಕ್ಕೆ ಕಳಿಸಿದ್ದೇವೆ. ಕೇಂದ್ರ ಇದಕ್ಕೆ ಅನುಮತಿ ಕೊಟ್ರೆ ಶೀಘ್ರ ಕಾಮಗಾರಿ ಶುರು ಮಾಡಬಹುದು ಎಂದರಲ್ಲದೇ ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳಿಗೆ ಒತ್ತು ಕೊಡುವಷ್ಟೇ ಕರ್ನಾಟಕಕ್ಕೂ ಒತ್ತು ಕೊಡಿ ಎಂದು ವೇದಿಕೆಯಲ್ಲೇ ಪ್ರಧಾನಿಗೆ ಸಿಎಂ ಆಗ್ರಹಿಸಿದರು. ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ನಿರ್ಬಂಧ – ಪಾಕಿಗೆ 1,240 ಕೋಟಿ ನಷ್ಟ

  • ಇನ್ಸ್ಟಾದಲ್ಲಿ ಆಂಟಿಗೆ ಪ್ರೀತಿಸುವಂತೆ ಟಾರ್ಚರ್ – ಬುದ್ಧಿ ಹೇಳೋಕೆ ಬಂದವನ ಕತ್ತು ಕೊಯ್ದ ಪಾಗಲ್ ಪ್ರೇಮಿ!

    ಇನ್ಸ್ಟಾದಲ್ಲಿ ಆಂಟಿಗೆ ಪ್ರೀತಿಸುವಂತೆ ಟಾರ್ಚರ್ – ಬುದ್ಧಿ ಹೇಳೋಕೆ ಬಂದವನ ಕತ್ತು ಕೊಯ್ದ ಪಾಗಲ್ ಪ್ರೇಮಿ!

    – ಚಲಿಸುತ್ತಿದ್ದ ಬೈಕ್‌ನಲ್ಲೇ ಹತ್ಯೆಗೆ ಯತ್ನ

    ಬೆಂಗಳೂರು: ಇನ್ಸ್ಟಾಗ್ರಾಮ್‍ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಪ್ರೀತಿಸುವಂತೆ (Love) ಟಾರ್ಚರ್ ಕೊಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಲು ಬಂದಿದ್ದಕ್ಕೆ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಹೆಚ್‍ಎಎಲ್‍ನಲ್ಲಿ ನಡೆದಿದೆ.

    ಇನ್ಸ್ಟಾದಲ್ಲಿ ಪರಿಚಯವಾಗಿದ್ದ ಮಹಿಳೆಗೆ ತಮಿಳುನಾಡು ತಿರಪ್ಪತ್ತೂರು ಮೂಲದ ಯುವಕ ಸೆಲ್ವ ಕಾರ್ತಿಕ್ ಪ್ರೀತಿಸುವಂತೆ ಪೀಡಿಸುತ್ತಿದ್ದ. ಇದೇ ವಿಚಾರಕ್ಕೆ ಯುವಕನನ್ನು ಮಾತನಾಡಲು ಹೆಚ್‍ಎಎಲ್ (HAL) ಬಳಿ ಬರಲು ಮಹಿಳೆಯ ತಂದೆ ಹಾಗೂ ಸಂಬಂಧಿಯೊಬ್ಬರು ಹೇಳಿದ್ದರು. ಈ ವೇಳೆ ಆರೋಪಿ ಕೊಲೆಗೆ ಯತ್ನಿಸಿದ್ದಾನೆ. ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಆರೋಪಿಗೆ ಜಾಮೀನು

    ಮಾತುಕತೆಗೆ ಕರೆಸಿದ್ದ ಮಹಿಳೆ ತಂದೆ ಹಾಗೂ ಸಂಬಂಧಿ, ಕಾರ್ತಿಕ್‍ನನ್ನು ಬೈಕ್‍ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರು. ಈ ವೇಳೆ, ಚಲಿಸುತ್ತಿದ್ದ ಬೈಕ್‍ನಲ್ಲಿಯೇ ಆರೋಪಿ, ಸತೀಶ್ ಎಂಬವರ ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ.

    ಗಾಯಾಳುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 17ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಬಂಧಿಸಿರುವ ಹೆಚ್‍ಎಎಲ್ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಒಂದೇ ವಧುವನ್ನು ಮದುವೆಯಾದ ಸಹೋದರರು!

  • ಸದ್ಯದಲ್ಲೇ ರಾಜನಾಥ್ ಭೇಟಿ, ಡಿಫೆನ್ಸ್ ಕಾರಿಡಾರ್‌ಗೆ ಪಟ್ಟು: ಎಂಬಿಪಿ

    ಸದ್ಯದಲ್ಲೇ ರಾಜನಾಥ್ ಭೇಟಿ, ಡಿಫೆನ್ಸ್ ಕಾರಿಡಾರ್‌ಗೆ ಪಟ್ಟು: ಎಂಬಿಪಿ

    ಬೆಂಗಳೂರು: ಸದ್ಯದಲ್ಲೇ ತಾವು ದೆಹಲಿಗೆ(Delhi) ಹೋಗುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಿಗಬೇಕಾಗಿರುವ ಡಿಫೆನ್ಸ್ ಕಾರಿಡಾರ್ ಕೊಡುವಂತೆ ಆಗ್ರಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್‌(MB Patil) ಸೋಮವಾರ ಹೇಳಿದ್ದಾರೆ.

    ಇತ್ತೀಚೆಗೆ ನಡೆದ ನೀತಿ ಆಯೋಗದ ಸಭೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಬೆಂಗಳೂರಿನಲ್ಲಿರುವ ಎಚ್ಎಎಲ್ ಕಾರ್ಖಾನೆಯನ್ನು (HAL Factory) ತಮ್ಮ ರಾಜ್ಯಕ್ಕೆ ಸ್ಥಳಾಂತರಿಸುವಂತೆ ಕೋರಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ನಾಯ್ಡು ಅವರು ಈ ವ್ಯವಸ್ಥೆಯನ್ನು ಚೆನ್ನಾಗಿ ಬಲ್ಲವರು. ಅವರು ತಮ್ಮಲ್ಲೂ ಎಚ್ಎಎಲ್ ಘಟಕ ಸ್ಥಾಪನೆಗೆ ಕೇಳಿರಬಹುದು. ಅದರಲ್ಲಿ ತಪ್ಪೇನೂ ಇಲ್ಲ. ಒಂದು ವೇಳೆ ಅವರು ಎಚ್ಎಎಲ್ ಸ್ಥಳಾಂತರಕ್ಕೆ ಕೇಳಿದ್ದರೆ ಅದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮಾಡಾಳ್ ಜೈಲಿಗೆ ಹೋದಾಗ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ: ಬಿವೈವಿ ವಿರುದ್ಧ ಎಂಬಿಪಿ ಕಿಡಿ

    ಕೇಂದ್ರ ಸರ್ಕಾರವು ಎರಡು ವರ್ಷಗಳ ಹಿಂದೆ ಉತ್ತರಪ್ರದೇಶ ಮತ್ತು ತಮಿಳು‌ನಾಡಿಗೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿತು. ಅದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ ರಕ್ಷಣಾ ವಹಿವಾಟಿನಲ್ಲಿ ದೇಶಕ್ಕೆ 65%ರಷ್ಟು ಕೊಡುಗೆ ನೀಡುತ್ತಿರುವ ಮತ್ತು ಜಾಗತಿಕವಾಗಿ ತೃತೀಯ ಸ್ಥಾನದಲ್ಲಿ ಇರುವ ನಮ್ಮ ರಾಜ್ಯಕ್ಕೆ ಆ ಯೋಜ‌ನೆಯನ್ನು ಘೋಷಿಸದೇ ಇದ್ದುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

    ಚಂದ್ರಬಾಬು ನಾಯ್ಡು ತಮ್ಮಲ್ಲಿ ಉದ್ದಿಮೆ ಬೆಳೆಸಲು ಲೇಪಾಕ್ಷಿಯಲ್ಲಾದರೂ ಜಮೀನು ಕೊಡಲಿ, ಮಡಕಶಿರಾದಲ್ಲಾದರೂ ಭೂಮಿ ಕೊಡಲಿ, ಅದು ಅವರಿಗೆ ಬಿಟ್ಟಿದ್ದು. ಆದರೆ ನಮ್ಮಲ್ಲಿರುವ ಉದ್ಯಮಗಳನ್ನು ಎಳೆದುಕೊಂಡು ಹೋಗುವ ಆಲೋಚನೆಯನ್ನು ಅವರು ಮಾಡಿರಲಾರರು ಎಂದು ಭಾವಿಸಿರುವೆ. ರಾಜನಾಥ್ ಸಿಂಗ್ ಬಳಿಗೆ ಹೋಗುವಾಗ ಕೇಂದ್ರ ಸಂಪುಟದಲ್ಲಿ ಇರುವ ನಮ್ಮ ರಾಜ್ಯದ ಸಚಿವರುಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಅದಕ್ಕೂ ಮೊದಲು ಮುಖ್ಯಮಂತ್ರಿಗಳು ಮತ್ತು ಸರಕಾರದ ಮುಖ್ಯ ಕಾರ್ಯದರ್ಶಿಗಳ ಜತೆ ನೀತಿ ಆಯೋಗದ ಸಭೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ವಿದ್ಯಮಾನದ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ನುಡಿದಿದ್ದಾರೆ.

  • ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್

    ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್

    ಬೆಂಗಳೂರು: ಭಾರತ ಪಾಕ್ ಉದ್ವಿಗ್ನ ಸ್ಥಿತಿ ಹಿನ್ನೆಲೆ ಬೆಂಗಳೂರಿನ(Bengaluru) ಹೆಚ್‌ಎಎಲ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಿಬ್ಬಂದಿ ರಜೆಗಳನ್ನು ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ.

    ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಹೆಚ್‌ಎಎಲ್ ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಯಾಗಿದೆ. ಇದನ್ನೂ ಓದಿ: ಬಿಎಸ್‌ಎಫ್‌ ಯೋಧರ ಭರ್ಜರಿ ಬೇಟೆ – ಸಾಂಬಾದಲ್ಲಿ 7 ಮಂದಿ ಜೈಶ್‌ ಉಗ್ರರ ಹತ್ಯೆ


    1940ರ ಡಿ. 23ರಂದು ಸ್ಥಾಪನೆಯಾದ ಹೆಚ್‌ಎಎಲ್ ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ರದ್ದಾಗುತ್ತಾ ಐಪಿಎಲ್‌?- ಅತ್ತ ಪಾಕ್‌ ಸೂಪರ್‌ ಲೀಗ್‌ ದುಬೈಗೆ ಶಿಫ್ಟ್‌

    ಏ. 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ(Pahalgam Terror Attack) ನಡೆಸಿದ್ದು, ಈ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಪಾಕ್ ಉಗ್ರರ 9 ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು. ಇದೀಗ ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ದೇಶದ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

  • HALನಲ್ಲಿ ಲಘು ಯುದ್ಧ ವಿಮಾನಗಳ ಉತ್ಪಾದನೆಯಲ್ಲಿ ವಿಳಂಬ – ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ ರಚನೆ

    HALನಲ್ಲಿ ಲಘು ಯುದ್ಧ ವಿಮಾನಗಳ ಉತ್ಪಾದನೆಯಲ್ಲಿ ವಿಳಂಬ – ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ ರಚನೆ

    – ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚನೆ

    ನವದೆಹಲಿ: ಭಾರತದ ಲಘು ಯುದ್ಧ ವಿಮಾನ (LCA -Light Combat Aircraft) Mk-1A ಉತ್ಪಾದನೆ ಮತ್ತು ಸೇರ್ಪಡೆಯಲ್ಲಿನ ವಿಳಂಬವನ್ನು ಪರಿಹರಿಸಲು ರಕ್ಷಣಾ ಸಚಿವಾಲಯವು ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ (Rajesh Kumar Singh) ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ಹೇಳಿವೆ.

    ಎಲ್‌ಸಿಎ ವಿಮಾನಗಳ ವಿತರಣೆಯಲ್ಲಿನ ವಿಳಂಬದ ಬಗ್ಗೆ ವಾಯುಪಡೆಯ (IAF) ಮುಖ್ಯಸ್ಥ ಎಪಿ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಮತದಾನಕ್ಕೆ ಅಮೆರಿಕ ದೇಣಿಗೆ ನೀಡಿಲ್ಲ, 7 ಯೋಜನೆಗಳಿಗಷ್ಟೇ ಧನಸಹಾಯ – ಹಣಕಾಸು ಸಚಿವಾಲಯ

    LCA ಉತ್ಪಾದನೆಯಲ್ಲಿನ ಅಡಚಣೆಗಳನ್ನು ಗುರುತಿಸುವ ಮತ್ತು ಉತ್ಪಾದನೆಯನ್ನು ವೇಗಗೊಳಿಸಲು ಕ್ರಮಗಳನ್ನು ಶಿಫಾರಸು ಮಾಡುವ ಕಾರ್ಯವನ್ನು ಸಮಿತಿ ವಹಿಸಿಕೊಂಡಿದೆ. ಸಮಿತಿಯು ತನ್ನ ವರದಿಯನ್ನು ಸಲ್ಲಿಸಲು ಒಂದು ತಿಂಗಳ ಗಡುವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವಿಮಾನಗಳ ವಿತರಣೆಯನ್ನು ತ್ವರಿತಗೊಳಿಸಲು ವಿಮಾನ ತಯಾರಿಕೆಯಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮಾರ್ಗಗಳನ್ನು ಸಮಿತಿಯೂ ಪರಿಶೀಲಿಸುತ್ತದೆ. ಮುಂದಿನ ದಶಕ ಮತ್ತು ಅದಕ್ಕೂ ಮೀರಿದ ಅವಧಿಯಲ್ಲಿ ವಾಯುಪಡೆಯು Mk-1, Mk-1A, ಮತ್ತು Mk-2 ಸೇರಿದಂತೆ ಸುಮಾರು 350 LCA ರೂಪಾಂತರಗಳನ್ನು ನಿರ್ವಹಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಯುಎಸ್‌ಏಡ್‌ ಉದ್ಯೋಗಿಗಳಿಗೆ ಟ್ರಂಪ್‌ ಶಾಕ್‌ – 1,600ಕ್ಕೂ ಹೆಚ್ಚು ಮಂದಿ ವಜಾ

    ಸರ್ಕಾರದ ಆತ್ಮ ನಿರ್ಭರ ಭಾರತ್ ಉಪಕ್ರಮದ ಅಡಿಯಲ್ಲಿ ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಗಾಗಿ ಭಾರತದ ಪ್ರಯತ್ನದಲ್ಲಿ LCA ಕಾರ್ಯಕ್ರಮವು ನಿರ್ಣಾಯಕವಾಗಿದೆ. IAF ನ ಕಾರ್ಯಾಚರಣೆಯ ಅವಶ್ಯಕತೆಗಳನ್ನು ಪೂರೈಸಲು ಸಕಾಲಿಕ ವಿತರಣೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಸಮಿತಿಯ ಶಿಫಾರಸುಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    https://youtu.be/9aRZwimkiN0?si=KeDewaxigwrszoWU

    ಎಲ್‌ಸಿಎ ವಿಮಾನದ ಉತ್ಪಾದನೆ ನಿಧಾನ ಮತ್ತು ವಾಯುಸೇನೆಗೆ ಸೇರ್ಪಡೆ ವಿಳಂಬ ಬಗ್ಗೆ ವಾಯುಪಡೆ ಮುಖ್ಯಸ್ಥ ಎಪಿ ಸಿಂಗ್ ಅವರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಏರೋ ಇಂಡಿಯಾ ಪ್ರದರ್ಶನದಲ್ಲಿ ವಿಮಾನವನ್ನು ಪರಿಶೀಲಿಸುವಾಗ ಅವರು ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಕಂಪನಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ʻನಂಬಿಕೆ ಇಲ್ಲʼ ಎಂದು ಹೇಳಿದ್ದರು. ಇದನ್ನೂ ಓದಿ: ಅಮೆರಿಕ ನಾಲ್ಕನೇ ಹಂತದ ಗಡಿಪಾರು: 12 ಮಂದಿ ಅಕ್ರಮ ವಲಸಿಗರು ಭಾರತಕ್ಕೆ

  • HAL ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು: ತೇಜಸ್ವಿ ಸೂರ್ಯ

    HAL ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು: ತೇಜಸ್ವಿ ಸೂರ್ಯ

    ಬೆಂಗಳೂರು: ಹೆಚ್‌ಎಎಲ್‌ ವಿಮಾನ ನಿಲ್ದಾಣವನ್ನು (HAL Airport) ಆದಷ್ಟು ಬೇಗ ತೆರೆಯಬೇಕು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಆಗ್ರಹಿಸಿದ್ದಾರೆ.

    ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ (Airport) ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ತೇಜಸ್ವಿ ಸೂರ್ಯ ಅವರಿಂದ ಈ ಅಭಿಪ್ರಾಯ ವ್ಯಕ್ತವಾಗಿದೆ. ಇದನ್ನೂ ಓದಿ: ಕಗ್ಗಲೀಪುರದಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ?

    ಹೊಸ ಎರಡನೇ ವಿಮಾನ ನಿಲ್ದಾಣಕ್ಕಾಗಿ ನಾವು ಕಾಯುತ್ತಿರುವಾಗ ಹೆಚ್‌ಎಎಲ್‌ನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸಾರ್ವಜನಿಕ ಮೂಲಸೌಕರ್ಯವನ್ನು ವ್ಯರ್ಥ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ಪ್ರಯೋಜನ ಪಡೆಯುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ದೀರ್ಘ ಪ್ರಯಾಣ ಇದರಿಂದ ಉಳಿತಾಯವಾಗುತ್ತದೆ ಎಂದಿದ್ದಾರೆ.