ಬೆಂಗಳೂರು: ಪೆಟ್ರೋಲ್ (Petrol) ಸುರಿದುಕೊಂಡು ಟೆಕ್ಕಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಸುಹಾಸಿ ಸಿಂಗ್ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಯುವತಿಯ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜ.12 ರಂದು ಹೋಟೆಲಿನಲ್ಲಿ ಯುವತಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಹಾಸಿ ಮೃತಪಟ್ಟಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮಾವ ಪ್ರವೀಣ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಏನಿದು ಪ್ರಕರಣ?
ಸುಹಾಸಿ ಸಿಂಗ್ ಮತ್ತು ಪ್ರವೀಣ್ ಸಿಂಗ್ ಸಂಬಂಧಿಗಳು. ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಉತ್ತಮ ಸಂಬಂಧ ಬೆಳೆದಿದೆ. ಇಬ್ಬರು ಒಟ್ಟಿಗೆ ಹೊರಗಡೆ ಹೋಗುತ್ತಿದ್ದರು. ಹೀಗೆ ಹೊರಗಡೆ ಹೋಗಿದ್ದಾಗ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಇದನ್ನೂ ಓದಿ: Saif Ali Khan Stabbed| ಮನೆಯ ಕೆಲಸದಾಕೆಯ ಜೊತೆ ದಾಳಿಕೋರನಿಗೆ ಇತ್ತಾ ಸಂಬಂಧ?
ಇಬ್ಬರು ಹಲವಾರು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರವೀಣ್ ಸಿಂಗ್ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ನಂತರ ವಿಡಿಯೋವನ್ನು ಇಟ್ಟುಕೊಂಡು ಸುಹಾಸಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಲೈಂಗಿಕ ಕ್ರಿಯೆಗೆ ಬರುವಂತೆ ಆಹ್ವಾನಿಸುತ್ತಿದ್ದ. ಒಂದು ವೇಳೆ ಸಹಕರಿಸದೇ ಇದ್ದರೆ ವಿಡಿಯೋವನ್ನು ಪೋಷಕರಿಗೆ ತಿಳಿಸುವುದಾಗಿ ಬೆದರಿಸುತ್ತಿದ್ದ. ಬೆದರಿಕೆಗೆ ಬಗ್ಗಿ ಪ್ರವೀಣ್ ಹೇಳಿದಾಗ ಸುಹಾಸಿ ಬರುತ್ತಿದ್ದಳು.
ಕೆಲ ತಿಂಗಳಿನಿಂದಲ ಸುಹಾಸಿ ಸಿಂಗ್ ಬೇರೊಬ್ಬ ಹುಡುಗನ ಜೊತೆ ಸುತ್ತಾಟ ಆರಂಭಿಸಿದ್ದಳು. ಈ ವಿಚಾರ ಪ್ರವೀಣ್‌ಗೆ ಗೊತ್ತಾಗಿದೆ. ಜನವರಿ 12 ರಂದು ಪ್ರವೀಣ್ ಹೋಟೆಲಿಗೆ ಬರುವಂತೆ ಆಹ್ವಾನಿಸಿದ್ದಾನೆ. ಈ ಆಹ್ವಾನವನ್ನು ಆಕೆ ತಿರಸ್ಕರಿಸಿದ್ದಾಳೆ. ಈ ವೇಳೆ ಪ್ರವೀಣ್ ಬಾರದೇ ಇದ್ದರೆ ವಿಡಿಯೋ ವೈರಲ್ ಮಾಡುತ್ತಿದ್ದೇನೆ ಎಂದು ಬೆದರಿಸಿದ್ದಾನೆ.
ಈತನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಸುಹಾಸಿ ಎಚ್‌ಎಎಲ್ ಬಳಿ ಹೋಟೆಲಿಗೆ ಪೆಟ್ರೋಲ್ ಜೊತೆ ಬಂದಿದ್ದಾಳೆ. ಪ್ರವೀಣ್ ನೋಡಿದ ಈಗೆ ಹೋಟೆಲಿನಲ್ಲೇ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಪ್ರವೀಣ್ ಆಕೆಯನ್ನು ರಕ್ಷಿಸಿದ್ದಾನೆ. ಗಂಭೀರ ಗಾಯಗೊಂಡ ಸುಹಾಸಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಪ್ರಕರಣ ತಿಳಿದ ಬಳಿಕ ಪ್ರವೀಣ್‌ನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬಯಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯೊಂದಿಗೆ ಮುನ್ನುಗ್ಗುತ್ತಿರುವ ಭಾರತ ಶತ್ರು ಸೇನೆಗಳ ಹುಟ್ಟಡಗಿಸಲು ಸೂಕ್ತ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಭಾರತ ಸ್ವದೇಶಿ ನಿರ್ಮಿತ ಆಯುಧಗಳನ್ನೇ ಸೇನೆಗೆ ಸೇರ್ಪಡೆಗೊಳಿಸಲು ಸಿದ್ಧತೆ ನಡೆಸಿದೆ. ಕೆಲ ದಿನಗಳ ಹಿಂದೆಯಷ್ಟೇ ಭಾರತ ಅಗ್ನಿ-5 (AGNI – 5) ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಪ್ರಯೋಗ ನಡೆಸಿತ್ತು. 5,000 ಕಿಮೀ ದೂರದಲ್ಲಿರುವ ಗುರಿಯನ್ನು ತಲುಪಿ ಶತ್ರುಗಳನ್ನು ಕೊಲ್ಲುವ ಸಾಮರ್ಥ್ಯದ ಈ ಕ್ಷಿಪಣಿಯನ್ನು ರಕ್ಷಣಾ ಸಚಿವಾಲಯ ಸೇನೆಗೆ ಸೇರಿಸುವ ಸಿದ್ಧತೆ ನಡೆಸಿದೆ. ಅಲ್ಲದೇ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವದೇಶಿ ನಿರ್ಮಿತ ಆಧುನಿಕ ತಂತ್ರಜ್ಞಾನ ಒಳಗೊಂಡಿರುವ ʻನಾಗಾಸ್ತ್ರʼವನ್ನು (ಆತ್ಮಹತ್ಯಾ ಡ್ರೋನ್) (Suicide Drone) ಭಾರತೀಯ ಸೇನೆಗೆ ಸೇರಿಸುವ ತಯಾರಿ ನಡೆದಿದೆ. ಇದಾದ ಒಂದೆರಡು ದಿನಗಳಲ್ಲೇ ಚೀನಾ ಮತ್ತು ಪಾಕ್ ಗಡಿಯಲ್ಲಿ ಭಾರತ ಗಸ್ತು ಹೆಚ್ಚಿಸಲು 156 ಲಘು ಯುದ್ಧ ಹೆಲಿಕಾಪ್ಟರ್‌ಗಳ ಖರೀದಿಗೆ ಮುಂದಾಗಿದೆ.
ಹಾಗಾದ್ರೆ ಭಾರತದ ರಕ್ಷಣಾ ವಲಯದಲ್ಲಿ (India’s Defense Sector) ಆಗುತ್ತಿರುವ ಬೆಳವಣಿಗೆಗಳು ಏನು? ಸೇನಾ ಸಾಮರ್ಥ್ಯ ಹೆಚ್ಚಿಸಲು ಯಾವೆಲ್ಲ ಕ್ರಮಗಳನ್ನು ಮತ್ತು ಏಕೆ ಕೈಗೊಳ್ಳಲಾಗುತ್ತಿದೆ? ಅನ್ನೋ ಬಗ್ಗೆ ತಿಳಿಯೋಣ…
ಚೀನಾ-ಪಾಕ್‌ಗೆ ಠಕ್ಕರ್ ಕೊಡಲು ಪ್ಲ್ಯಾನ್:
ಇತ್ತೀಚೆಗೆ ಚೀನಾ, ಭಾರತದ ಸಿಕ್ಕಿಂನಿಂದ ಸುಮಾರು 150 ಕಿಮೀ ಮೀಟರ್‌ಗಳಷ್ಟು ದೂರದ ಪ್ರದೇಶದಲ್ಲಿ 150ಕ್ಕೂ ಹೆಚ್ಚು ಅತ್ಯಾಧುನಿಕ ಫೈಟರ್ ಜೆಟ್‌ಗಳನ್ನ ನಿಯೋಜಿಸಿದೆ. ಅಲ್ಲದೇ ಚೀನಾ ನೆರವಿನಿಂದಲೇ ಎದುರಾಳಿ ಪಾಕಿಸ್ತಾನ ಗಡಿ ಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳಿಗೆ ಠಕ್ಕರ್ ಕೊಡಲು ಭಾರತ ಸಹ ತನ್ನ ಸೇನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ಭಾರತೀಯ ಸೇನೆಗೆ 90 ಮತ್ತು ಭಾರತೀಯ ವಾಯುಸೇನೆಗೆ 66 ಲಘು ಯುದ್ಧ ಹೆಲಿಕಾಪ್ಟರ್‌ಗಳ (ಪ್ರಚಂಡ್) ಖರೀದಿಗಾಗಿ ಪ್ರಸ್ತಾವನೆ ಸಲ್ಲಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಡೆಟ್‌ಗೆ (HAL) 45,000 ಕೋಟಿ ರೂ.ಗೆ ಟೆಂಡರ್ ನೀಡಿದೆ. `ಪ್ರಚಂಡ್ʼ ಹೇಲಿಕಾಪ್ಟರ್ (Prachand Helicopter) 5,000 ಮೀಟರ್ (16,400 ಅಡಿ) ಎತ್ತರದಲ್ಲಿ ಲ್ಯಾಂಡಿಂಗ್ ಮತ್ತು ಟೇಕಾಫ್ ಮಾಡುವ ಸಾಮರ್ಥ್ಯ ಹೊಂದಿದ್ದು, ಸಿಯಾಚಿನ್ ಹಿಮನದಿ ಮತ್ತು ಪೂರ್ವ ಲಡಾಖ್ ನಂತಹ ಎತ್ತರದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸೂಕ್ತವಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಅಣ್ವಸ್ತ್ರಗಳ ಬಲ ಹೆಚ್ಚಿಸಿಕೊಂಡ ಭಾರತ:
ಹೌದು. ವಿಶ್ವದ 9 ರಾಷ್ಟ್ರಗಳು 2023ರಲ್ಲಿ ಅಣ್ವಸ್ತ್ರಗಳನ್ನು (Nuclear Weapons) ಆಧುನಿಕರಣಗೊಳಿಸುವುದರ ಜೊತೆಗೆ ಹೊಸ ಪರಮಾಣು ಸಾಮರ್ಥ್ಯದ ಶಸ್ತ್ರಾಸ್ತ್ರ ವ್ಯವಸ್ಥೆ ನಿಯೋಜಿಸಿವೆ. ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ದಕ್ಷಿಣ ಕೊರಿಯಾ, ಇಸ್ರೇಲ್ ಅಲ್ಲದೇ ಭಾರತವೂ ಸಹ ಈ ರಾಷ್ಟ್ರಗಳ ಪಟ್ಟಿಯಲ್ಲಿದೆ. ಜಾಗತಿಕ ಮಟ್ಟದಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ವಿಚಾರದಲ್ಲಿ ಮುನ್ನುಗ್ಗುತ್ತಿರುವ ಭಾರತ ಅಣ್ವಸ್ತ್ರಗಳ ಸಾಮರ್ಥ್ಯವನ್ನೂ ಹೆಚ್ಚಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಸದ್ಯ ಅತಿಹೆಚ್ಚು ಅಣ್ವಸ್ತ್ರಗಳನ್ನು ಹೊಂದಿರುವ ವಿಶ್ವದ ಅಗ್ರ ರಾಷ್ಟ್ರಗಳ ಪೈಕಿ ಭಾರತ 4ನೇ ಸ್ಥಾನಕ್ಕೆ ಏರಿಕೆ. ಅಮೆರಿಕ 5,044, ರಷ್ಯಾ 5,580, ಚೀನಾ 476, ಭಾರತ 172, ಪಾಕಿಸ್ತಾನ 170, ಇಸ್ರೇಲ್ 90, ಉತ್ತರ ಕೊರಿಯಾ 50 ಪರಮಾಣು ಅಸ್ತ್ರಗಳನ್ನು ಒಳಗೊಂಡಿವೆ.
ಶತ್ರುಗಳಲ್ಲಿ ನಡುಕ ಹುಟ್ಟಿಸಿದ ನಾಗಾಸ್ತ್ರ:
ನಾಗಾಸ್ತ್ರ-1 ಡ್ರೋನ್ (Nagastra – 1) ಅನ್ನು ಅತ್ಯಂತ ನಿಖರವಾದ ದಾಳಿ ನಡೆಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದ್ದು, ಜಿಪಿಎಸ್ ನಿರ್ದೇಶನದ ನೆರವಿನಿಂದ ಗುರಿಯ ಕೇವಲ 2 ಮೀಟರ್ ವ್ಯಾಪ್ತಿಯಲ್ಲಿ ನಿಖರ ದಾಳಿ ನಡೆಸಬಲ್ಲದು. ಅಲ್ಲದೇ ಇದು ಸ್ಥಿರ ರೆಕ್ಕೆಗಳನ್ನು ಹೊಂದಿದ್ದು, ಓರ್ವ ವ್ಯಕ್ತಿಯೇ ಕೊಂಡೊಯ್ಯುವಷ್ಟು ಹಗುರವಾಗಿದೆ. ಕೇವಲ 9 ಕೆಜಿ ತೂಕ ಹೊಂದಿದ್ದು, ಗರಿಷ್ಠ 30 ನಿಮಿಷಗಳಷ್ಟು ಕಾಲ ಹಾರಾಟ ನಡೆಸುವ ಸಾಮರ್ಥ್ಯ ಹೊಂದಿದೆ. ಡ್ರೋನ್ ಹೊಂದಿರುವ ಎಲೆಕ್ಟ್ರಿಕ್ ಪ್ರೊಪಲ್ಷನ್ ವ್ಯವಸ್ಥೆಯ ಕಾರಣದಿಂದ, ಇದು ಅತ್ಯಂತ ಕನಿಷ್ಠ ಪ್ರಮಾಣದ ಸದ್ದನ್ನು ಹೊರಹೊಮ್ಮಿಸುತ್ತದೆ. ಡ್ರೋನ್ 200 ಮೀಟರ್‌ಗಳಿಗಿಂತ ಎತ್ತರದಲ್ಲಿ ಹಾರಾಟ ನಡೆಸುವಾಗ ಅದನ್ನು ಗುರುತಿಸುವುದು ಶತ್ರುಗಳಿಗೆ ಕಷ್ಟಕರವಾಗುತ್ತದೆ.
ನಾಗಾಸ್ತ್ರ ಆತ್ಮಹತ್ಯಾ ಡ್ರೋನ್:
ನಾಗಾಸ್ತ್ರವನ್ನು ಆತ್ಮಹತ್ಯಾ ಡ್ರೋನ್‌ಗಳೆಂದೂ (ಸುಸೈಡ್ ಡ್ರೋನ್) ಕರೆಯಲಾಗುತ್ತದೆ. ಇವುಗಳು ಒಂದು ಬಾರಿ ಮಾತ್ರವೇ ಪ್ರಯೋಗಿಸಬಲ್ಲ ಆಯುಧಗಳಾಗಿವೆ. ನೇರವಾಗಿ ತಮ್ಮ ಗುರಿಯೆಡೆಗೆ ಸಾಗಿ, ತಮ್ಮನ್ನು ತಾವು ಸ್ಫೋಟಿಸಿಕೊಳ್ಳುತ್ತವೆ. ಇದು ಸರಿಯಾದ ಗುರಿಯನ್ನು ಗುರುತಿಸುವ ತನಕ ಮೇಲ್ಭಾಗದಲ್ಲಿ ಹಾರಾಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ಅವಕಾಶ ಸಿಕ್ಕ ತಕ್ಷಣವೇ ಗುರಿಯ ಮೇಲೆ ದಾಳಿ ನಡೆಸುತ್ತವೆ. ಒಂದು ವೇಳೆ ಗುರಿಯನ್ನು ಗುರುತಿಸಲು ಸಾಧ್ಯವಾಗದಿದ್ದರೆ, ದಾಳಿ ಯೋಜನೆ ರದ್ದುಗೊಳಿಸಿದರೆ, ಗಾಳಿಯಲ್ಲಿ ಅಡ್ಡಾಡುವ ಡ್ರೋನ್ ಅನ್ನು ಮರಳಿ ಹಿಂದಕ್ಕೆ ಕರೆಸಿಕೊಳ್ಳಬಹುದು. ಅದಕ್ಕಾಗಿ ಅನುಕೂಲಕರ ಲ್ಯಾಂಡಿಂಗ್ ಮಾಡಲು ಪ್ಯಾರಾಚುಟ್ ರಿಕವರಿ ವ್ಯವಸ್ಥೆಯನ್ನೂ ಹೊಂದಿದೆ. ಇದರಿಂದಾಗಿ ಡ್ರೋನ್ ಮರುಬಳಕೆಗೆ ಲಭ್ಯವಾಗುತ್ತದೆ.
ಇಷ್ಟೇ ಅಲ್ಲ, ಕಳೆದ ವರ್ಷವೂ ಸಹ ಭಾರತದ ರಕ್ಷಣಾ ಸಚಿವಾಲಯ ಸುಮಾರು 45,000 ಕೋಟಿ ರೂ. ಮೌಲ್ಯದ ವಿವಿಧ ಆಯುಧಗಳ ಖರೀದಿಗೆ ಒಪ್ಪಿಗೆ ಸೂಚಿಸಿತ್ತು. ಧ್ರುವಾಸ್ತ್ರ ಕ್ಷಿಪಣಿಗಳು, ಭಾರತ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಿರ್ಮಾಣದ 12 ಸುಖೋಯ್-30 MKI ಯುದ್ಧ ವಿಮಾನಗಳು, ಆರ್ಟಿಲರಿ ಗನ್‌ಗಳು ಮತ್ತು ರೇಡಾರ್‌ಗಳನ್ನ ಕ್ಷಿಪ್ರವಾಗಿ ಸಾಗಿಸಲು ಅತ್ಯವಶ್ಯಕವಾದ ಹೈ ಮೊಬಿಲಿಟಿ ವೆಹಿಕಲ್ ಹಾಗೂ ಗನ್ ಟೋವಿಂಗ್ ವೆಹಿಕಲ್ಸ್‌ಗಳನ್ನ ಖರೀದಿಸಲು ಅನುಮೋದನೆ ನೀಡಿತ್ತು.
ಗಾಳಿಯಿಂದ ಭೂಮಿಗೆ ದಾಳಿ ನಡೆಸುವ ʻಧ್ರುವಾಸ್ತ್ರʼ:
ಭಾರತದ ದೇಶೀಯ ನಿರ್ಮಾಣದ ಹೆಲಿಕಾಪ್ಟರ್ ಲಾಂಚ್ಡ್ ನಾಗ್ (ಹೆಲಿನಾ) ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ (ATGM) ಎಲ್ಲ ಪರೀಕ್ಷೆಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಹೆಲಿನಾ ಭಾರತೀಯ ಭೂಸೇನೆಯ ಆವೃತ್ತಿಯಾದರೆ, ಭಾರತೀಯ ವಾಯುಪಡೆಯ ಆವೃತ್ತಿಯನ್ನ ಧ್ರುವಾಸ್ತ್ರ ಎಂದು ಕರೆಯಲಾಗುತ್ತದೆ. ಈ ಧ್ರುವಾಸ್ತ್ರವೂ ತನ್ನ ಆರಂಭಿಕ ಪ್ರಾಯೋಗಿಕ ಪರೀಕ್ಷೆಗಳನ್ನ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಧ್ರುವಾಸ್ತ್ರ ಅವಳಿ ಲಾಂಚರ್‌ಗಳನ್ನ ಹೊಂದಿದ್ದು, ಒಟ್ಟು 8 ಕ್ಷಿಪಣಿಗಳನ್ನ ಒಯ್ಯುವ ಸಾಮರ್ಥ್ಯ ಹೊಂದಿದೆ. ಇದರ ಕ್ಷಿಪಣಿ ಗರಿಷ್ಠ 4 ಕಿಮೀ ಗಳಷ್ಟು ಎತ್ತರದಿಂದ ಉಡಾವಣೆಗೊಳಿಸಬಹುದಾಗಿದೆ. ಪ್ರತಿ ಗಂಟೆಗೆ 70 ಕಿಮೀ ಗಳಷ್ಟು ವೇಗದಲ್ಲಿ ನಿಖರವಾಗಿ ದಾಳಿ ನಡೆಸಬಲ್ಲದು. ಧ್ರುವಾಸ್ತ್ರ ಕ್ಷಿಪಣಿ 43 ಕೆಜಿ ತೂಕ ಹೊಂದಿರಲಿದೆ. ಇದು ಇದರ ಮೂಲ ವಿನ್ಯಾಸವಾದ ನಾಗ್ ಕ್ಷಿಪಣಿಯಷ್ಟೇ ತೂಕ ಹೊಂದಿದೆ. ಇದರ ಸಿಡಿತಲೆ 8 ಕೆಜಿಗಳಷ್ಟು ತೂಕವಿದೆ. ಇದು ಅಂದಾಜು 1.85 – 1.9 ಮೀಟರ್ (6 ಅಡಿ) ಉದ್ದವಿದ್ದು, 0.16-0.2 ಮೀಟರ್ (8 ಇಂಚ್) ಅಗಲ ಇರಲಿದೆ. ಧ್ರುವಾಸ್ತ್ರ ಸಹ ಈಗಾಗಲೇ ಪ್ರಾಯೋಗಿಕ ಪರೀಕ್ಷೆಗಳನ್ನ ಯಶಸ್ವಿಗೊಳಿಸಿದ್ದು, ಸೇನೆಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಡೆಟ್ (HAL) 45,000 ಕೋಟಿ ರೂ. ಟೆಂಡರ್ ಪಡೆದುಕೊಂಡಿದೆ. ರಕ್ಷಣಾ ಸಚಿವಾಲಯವು ಭಾರತೀಯ ವಾಯು ಸೇನೆಗೆ 156 ಪ್ರಚಂಡ ಮಾದರಿಯ ಲಘು ಯುದ್ಧ ಹೆಲಿಕಾಪ್ಟರ್‌ಗಳ (Light Combat Helicopter) ಖರೀದಿಗೆ ಪ್ರಸ್ತಾವನೆ ಸಲ್ಲಿದೆ. ಈ ಮೂಲಕ ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನ ನೀಡಿದೆ.
2015ರ ನಿಯಮಾವಳಿ 30ರ ಪ್ರಕಾರ, 156 ಲಘು ಯುದ್ಧ ಹೆಲಿಕಾಪ್ಟರ್‌ಗಳ ಖರೀದಿಗಾಗಿ ರಕ್ಷಣಾ ಸಚಿವಾಲಯವು ಪ್ರಸ್ತಾವನೆಗಾಗಿ ವಿನಂತಿ (RFP) ನೀಡಿದೆ. ಈ ಪೈಕಿ ಭಾರತೀಯ ಸೇನೆಗೆ 90 ಮತ್ತು ಭಾರತೀಯ ವಾಯು ಸೇನೆ 66 ಲಘು ಯುದ್ಧ ವಿಮಾನಗಳನ್ನು ಸ್ವಾಧೀನಪಡಿಸಿಕೊಳ್ಳಲಿದೆ. ಇದರ ವೆಚ್ಚ 45,000 ಕೋಟಿ ರೂ.ಗಳಷ್ಟಾಗಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸ್ವದೇಶಿ ಆಯುಧ ನಿರ್ಮಾಣ ತಂತ್ರಜ್ಞಾನದಲ್ಲಿ ಭಾರತದ ಸಾಧನೆ; ಶತ್ರುಗಳ ನಿದ್ದೆಗೆಡಿಸಲಿದೆ ಧ್ರುವಾಸ್ತ್ರ
ಪ್ರಸ್ತುತ ಈ ಎರಡೂ ಸೇನೆಗಳು 15 ಹೆಲಿಕಾಪ್ಟರ್‌ಗಳನ್ನು ಹೊಂದಿವೆ. ಈ 156 ಲಘು ಯುದ್ಧ ವಿಮಾನಗಳನ್ನು ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ನಿಯೋಜಿಸಲಾಗುತ್ತದೆ. ಇದು ಭಯೋತ್ಪಾದಕರು ಮತ್ತು ನುಸುಳುಕೋರರನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಪ್ರಚಂಡ ಹೆಲಿಕಾಪ್ಟರ್‌ಗಳು ರಕ್ಷಣಾ ಕಾರ್ಯಾಚರಣೆಯನ್ನು ಸುಗಮಗೊಳಿಸುತ್ತವೆ. ಶತ್ರುಗಳನ್ನು ಹುಡುಕಿ ಕೊಲ್ಲುವ ಜೊತೆಗೆ ಬಂಕರ್‌ಗಳ ಬಸ್ಟಿಂಗ್ ಕಾರ್ಯಾಚರಣೆಗೂ ಸಹಾಯಕವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಚಿತ್ರದುರ್ಗದಿಂದ ಹಾರಿದ ಸ್ವದೇಶಿ ತಪಸ್ ಯುಎವಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಲ್ಯಾಂಡಿಂಗ್
ʻಪ್ರಚಂಡ್ʼ ಹೇಲಿಕಾಪ್ಟರ್ 5,000 ಮೀಟರ್ (16,400 ಅಡಿ) ಎತ್ತರದಲ್ಲಿ ಲ್ಯಾಂಡಿಂಗ್ ಮತ್ತು ಟೇಕಾಫ್ ಮಾಡುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸಿಯಾಚಿನ್ ಹಿಮನದಿ ಮತ್ತು ಪೂರ್ವ ಲಡಾಖ್ ನಂತಹ ಎತ್ತರದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸೂಕ್ತವಾಗಿದೆ. ಪ್ರತಿಕೂಲ ವಾತಾವರಣದಲ್ಲಿಯೂ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಶತ್ರುಗಳ ವಾಯು ರಕ್ಷಣಾ ಕಾರ್ಯಾಚರಣೆಯನ್ನು ನಾಶಪಡಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ರಕ್ಷಣಾ ಸಚಿವಾಲಯವು ಹೆಚ್‌ಎಎಲ್‌ಗೆ 65,000 ಕೋಟಿ ರೂ. ಮೌಲ್ಯದ 97 LCA ಮಾರ್ಕ್ 1A ಫೈಟರ್ ಜೆಟ್‌ಗಳನ್ನು ಖರೀದಿಸಲು ಟೆಂಡರ್ ನೀಡಿದೆ.
ಬೆಂಗಳೂರು: ಮೂರನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ ನನ್ನನ್ನು ಕಾಪಾಡಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ (Apollo Hospital) ಹೃದಯ ಶಸ್ತ್ರಚಿಕಿತ್ಸೆ (Heart Surgery) ನಡೆದಿ ಇಂದು ಡಿಸ್ಚಾರ್ಜ್ ಆಗಿದ್ದ ಕುಮಾರಸ್ವಾಮಿ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್‍ಎಎಲ್‍ಗೆ ಬಂದಿಳಿದು ಜೆಪಿ ನಗರದ ನಿವಾಸಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಸೋನು ಶ್ರೀನಿವಾಸ ಗೌಡ ಯಾವುದೇ ಹಣದ ಸಹಾಯ ಮಾಡಿಲ್ಲ- ಪೊಲೀಸರಿಂದ ಸ್ಥಳ ಮಹಜರು
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿತ್ತು, ಈಗ ಮತ್ತೆ ಚಿಕಿತ್ಸೆ ಪಡೆದಿದ್ದೇನೆ ಎಂದಿದ್ದಾರೆ.
ನಾಡಿನಾದ್ಯಂತ ಅಭಿಮಾನಿಗಳು, ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ಚಿಕಿತ್ಸೆ ಬಳಿಕ, ವೈದ್ಯರು ನನ್ನ ಬಳಿ ಚರ್ಚೆ ಮಾಡಿದರು. ವೈದ್ಯರು ಸಾಯಿಬಾಬಾನ ಭಕ್ತರಾಗಿದ್ದು, ಸಾಯಿಬಾಬಾನಿಗೆ ಪೂಜೆ ಸಲ್ಲಿಸಿ ಆಪರೇಷನ್ ನೆರವೇರಿಸಿದ್ದಾರೆ. ನಾನು ಆಪರೇಷನ್ ಮಾಡಿಲ್ಲ, ಸಾಯಿಬಾಬಾನೇ ಆಪರೇಷನ್ ಮಾಡಿದ್ದು ಎಂದು ವೈದ್ಯರು ಹೇಳಿದರು. ಮತ್ತೊರ್ವ ವೈದ್ಯ ಹಂಗೇರಿಯಾದವರು, ನನಗೆ ಮರುಜನ್ಮ ನೀಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಗೆ ನನ್ನ ಕೈಲಾದ ರೀತಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಎನ್‍ಡಿಎ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ನಡೆಸುತ್ತೇನೆ. ವೈದ್ಯರು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡಲು ಹೇಳಿದ್ದಾರೆ. ಇನ್ನೆರೆಡು ದಿನಗಳಲ್ಲಿ ಮಂಡ್ಯ ಅಭ್ಯರ್ಥಿ ಯಾರೆಂಬುದು ಫೈನಲ್ ಆಗಲಿದೆ ಎಂದಿದ್ದಾರೆ.
ಕೇಂದ್ರ ತೆರಿಗೆ ಹಣ ಕೊಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‍ಗೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ದುಡ್ಡು, ನಮ್ ತೆರಿಗೆ ಅನ್ನೋದೆಲ್ಲ ಡ್ರಾಮಾ, ಇದೊಂದು ಸ್ಟಂಟ್. ಇದನ್ನು ಬಿಟ್ಟು ಸಿಎಂ ಕೆಲಸ ಮಾಡ್ಬೇಕು ಎಂದಿದ್ದಾರೆ.
ಬಳಿಕ ಮನೆ ಬಳಿ ಸೇರಿದ್ದ ಜೆಡಿಎಸ್ ಕಾರ್ಯಕರ್ತರನ್ನ ಮಾತನಾಡಿಸಿ ಅವರು ವಿಶ್ರಾಂತಿಗೆ ತೆರಳಿದ್ದಾರೆ. ನೂರಾರು ಕಾರ್ಯಕರ್ತರು ಭೇಟಿ ನೀಡುವ ನಿರೀಕ್ಷೆ ಇದ್ದು, ಜೆಪಿನಗರದ ನಿವಾಸದ ಬಳಿ ಸ್ಪೀಕರ್ ಅಳವಡಿಕೆ ಮಾಡಲಾಗಿದೆ. ಸ್ಪೀಕರ್ ಮೂಲಕ ಮಂಡ್ಯ ಕಾರ್ಯಕರ್ತರು, ಮುಖಂಡರೊಂದಿಗೆ ಅವರು ಮಾತಾಡಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ
ನವದೆಹಲಿ: ಇತ್ತೀಚೆಗೆ ಭಾರತೀಯ ಸೇನೆಗೆ ಎಂಹೆಚ್ 60ಆರ್ ಸೀಹಾಕ್ (MH 60R Seahawk) ಹೆಲಿಕಾಪ್ಟರ್ ಸೇರ್ಪಡೆಗೊಂಡಿದ್ದು, ಕೊಚ್ಚಿಯ ನೌಕಾ ನೆಲೆಯಲ್ಲಿ ನಿಯೋಜಿಸಲು ಸಿದ್ಧತೆ ನಡೆದಿದೆ. ಈ ಬೆನ್ನಲ್ಲೇ ಮತ್ತೊಂದು ಮಹತ್ವದ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದ್ದು, ಭಾರತೀಯ ಸೇನೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.
ಭಾರತೀಯ ಸೇನೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ಗಾಗಿ 34 ಹೊಸ ಸುಧಾರಿತ ಲಘು ಹೆಲಿಕಾಪ್ಟರ್ (ALH) ಧ್ರುವ್ ಹೆಲಿಕಾಪ್ಟರ್‌ಗಳನ್ನು (ALH Dhruv Helicopters) ಖರೀದಿಸುವ ಪ್ರಸ್ತಾವನೆಗೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಪದಾತಿ ದಳದ ಯುದ್ಧ ವಾಹನಗಳನ್ನು (ಟ್ಯಾಂಕರ್ ವಾಹನ) ಮೇಲ್ದರ್ಜೆಗೇರಿಸುವ ಯೋಜನೆಗಳಿಗೂ ಸರ್ಕಾರ ಅನುಮತಿ ನೀಡಿದೆ.
34 ಹೆಲಿಕಾಪ್ಟರ್‌ಗಳ ಪೈಕಿ ಭಾರತೀಯ ಸೇನೆಯು (Indian Army) 25 ಹೆಲಿಕಾಪ್ಟರ್‌ಗಳನ್ನು ಪಡೆಯಲಿದ್ದು, 9 ಹೆಲಿಕಾಪ್ಟರ್‌ಗಳನ್ನು ಭಾರತೀಯ ಕೋಸ್ಟ್ ಗಾರ್ಡ್‌ಗೆ ನೀಡಲಾಗುತ್ತದೆ. ಈ ಹೆಲಿಕಾಪ್ಟರ್‌ಗಳನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆ (HAL) ಸ್ಥಳೀಯವಾಗಿ ಉತ್ಪಾದಿಸಲಿದೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೌಕಾಪಡೆಗೆ ಎಂಹೆಚ್ 60ಆರ್ ಸೀಹಾಕ್ ಹೆಲಿಕಾಪ್ಟರ್ ನಿಯೋಜನೆಗೆ ಸಿದ್ಧತೆ – ಭಾರತಕ್ಕೆ ಭೀಮ ಬಲ
ಭಾರತೀಯ ಕೋಸ್ಟ್‌ಗಾರ್ಡ್‌ನಲ್ಲಿರುವ (Indian Coast Guard) ಸುಧಾರಿತ ಲಘು ಹೆಲಿಕಾಪ್ಟರ್‌ಗಳು ಹಳೆಯದ್ದಾದ ಕಾರಣ ಅವುಗಳನ್ನು ಬದಲಾಯಿಸಲು ಇಲಾಖೆ ಮುಂದಾಗಿದೆ. ಅಲ್ಲದೇ ಬಹುನಿಯೋಜಿತ ಕಾರ್ಯಗಳಿಗೆ ಭಾರತೀಯ ಸೇನೆಗೆ ಹೆಲಿಕಾಪ್ಟರ್‌ಗಳ ಅಗತ್ಯವಿದೆ. ಆದ್ದರಿಂದ ಸರ್ಕಾರ 34 ಹೆಲಿಕಾಪ್ಟರ್‌ಗಳ ಖರೀದಿಗೆ ಒಪ್ಪಿಗೆ ಸೂಚಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನರೇಂದ್ರ ಮೋದಿ ಮುಂದಿನ 10 ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ಮಾಡ್ತಾರೆ: ಅಮಿತ್ ಶಾ
ಈ ಯೋಜನೆಗೆ ಸುಮಾರು 8,000 ಕೋಟಿ ರೂ. ವೆಚ್ಚ ತಗುಲಲಿದೆ. ಸ್ಥಳಿಯವಾಗಿಯೇ ಹೆಲಿಕಾಪ್ಟರ್‌ಗಳನ್ನು ನಿರ್ಮಿಸುವುದರಿಂದ ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನವೂ ಸಿಗಲಿದೆ. ಸುಧಾರಿತ ಲಘು ಹೆಲಿಕಾಪ್ಟರ್ (ಧ್ರುವ್) 5.5 ಟನ್‌ಗಳಷ್ಟು ತೂಕ ಹೊಂದಿದೆ. ಸ್ಥಳೀಯವಾಗಿ ಈಗಿನ ಸೇನಾ ಕಾರ್ಯಾಚರಣೆಗಳಿಗೆ ಬಳಸಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್‌ಎಸ್‌ಜಿ ಕಮಾಂಡೋಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬ್ಲಾಸ್ಟ್ (Bomb Blast) ಪ್ರಕರಣದ ಕುರಿತು ಹೆಚ್‌ಎಎಲ್ (HAL) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ.
ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 471 (ಸುಳ್ಳು ಸ್ಪಷ್ಟನೆಯ ದಸ್ತಾವೇಜನ್ನು ನೈಜವಾದುದೆಂದು ಬಳಸುವುದು) ಮತ್ತು ಯುಎಪಿಯ 16 (ಭಯೋತ್ಪಾದಕ ಕೃತ್ಯ), 18 (ಪಿತೂರಿ) ಹಾಗೂ 38 (ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಅಪರಾಧ) ಮತ್ತು ಎಕ್ಸ್‌ಪ್ಲೋಸಿವ್ ಸಬ್ಸ್ಟೆನ್ಸ್ ಆ್ಯಕ್ಟ್ 3 (ಜೀವಕ್ಕೆ ಅಥವಾ ಆಸ್ತಿಗೆ ಅಪಾಯನ್ನುಂಟುಮಾಡುವ ಸ್ಫೋಟ) ಮತ್ತು 4 (ಜೀವಕ್ಕೆ ಹಾನಿಯುಂಟುಮಾಡುವ ಉದ್ದೇಶದಿಂದ ಸ್ಫೋಟಕ ತಯಾರಿಕೆ) ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್ – ಓರ್ವ ವಶಕ್ಕೆ
ಶುಕ್ರವಾರ ಮಧ್ಯಾಹ್ನ ಕೆಫೆಯಲ್ಲಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಫೆಯ ಒಳಗಡೆ ಸ್ಫೋಟಕವನ್ನು ಇರಿಸಿ ಬಳಿಕ ಬೈಕ್‌ನಲ್ಲಿ ತೆರಳಿದ್ದ ಶಂಕಿತನ ಬೈಕ್ ಮಾಹಿತಿಯನ್ನು ಆಧರಿಸಿ ಆತನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ – ಗಾಯಗೊಂಡವರ ಪೂರ್ಣ ವಿವರ ಓದಿ
ಕಪ್ಪು ಬ್ಯಾಗ್ ಬೆನ್ನಿಗೆ ಹಾಕಿಕೊಂಡು ಬಂದಿದ್ದ ಬಾಂಬರ್ ರಾಮೇಶ್ವರಂ ಕೆಫೆಯಲ್ಲಿ ತಿಂಡಿ ತಿಂದು ಕೈತೊಳೆದ ಬಳಿಕ ಬ್ಯಾಗ್ ಅನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ. ಸಿಸಿಟಿವಿಯಲ್ಲಿ ಆತನ ಪ್ರತಿಯೊಂದು ಚಲನವಲನಗಳು ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದನ್ನೂ ಓದಿ: ಐದನೇ ಬಾರಿಗೆ ಬೆಂಗಳೂರಿನಲ್ಲಿ ಬಾಂಬ್ ಸ್ಟೋಟ: ಹಿಂದೆ ಎಲ್ಲೆಲ್ಲಿ ಸಂಭವಿಸಿತ್ತು?
ಬೆಂಗಳೂರು: ನಗರದ ಪ್ರಮುಖ ಹೋಟೆಲ್‌ಗಳಲ್ಲಿ ಒಂದಾಗಿರುವ ಬ್ರೂಕ್‌ಫೀಲ್ಡ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ (Rameshwaram Cafe Blast) ಸಂಭವಿಸಿದೆ. ಮಧ್ಯಾಹ್ನ 1 ಗಂಟೆ 05 ನಿಮಿಷದ ವೇಳೆ ನಡೆದ ಘಟನೆಯಲ್ಲಿ ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಸ್ಫೋಟದ ಪರಿಣಾಮ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು.
ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಇತ್ತ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ರಾಥಮಿಕ ಹಂತದಲ್ಲಿ ಸಿಲಿಂಡರ್ ಸ್ಫೋಟದಿಂದ ಘಟನೆ ನಡೆದಿದೆ ಎನ್ನಲಾಗಿತ್ತು. ಆದರೆ ಇಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಾಮೇಶ್ವರಂ ಕೆಫೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ವೀಡಿಯೋಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಹಾಗೂ ಎಫ್‌ಎಸ್‌ಎಲ್ ಅಧಿಕಾರಿಗಳು ಕೂಡಾ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಐಡಿ ಕಾರ್ಡ್ ಆಧರಿಸಿ ತನಿಖೆ: ಘಟನೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ಕೆಲವು ಐಡಿ ಕಾರ್ಡ್‌ಗಳು ಲಭ್ಯವಾಗಿದೆ. ಪೊಲೀಸರು ಈ ಐಡಿ ಕಾರ್ಡ್‌ಗಳ ಆಧಾರದಲ್ಲೂ ತನಿಖೆ ಮುಂದುವರಿಸಿದ್ದಾರೆ. ಎಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಪೈಲಟ್‌ಗಳಿಗೆ ದಿಕ್ಕು ತಪ್ಪಿಸುವುದನ್ನು ತಡೆಯಲು ಫೈಟರ್‌ಜೆಟ್‌ಗಳಿಗೆ ಶೀಘ್ರದಲ್ಲೇ ಡಿಜಿಟಲ್ ನಕ್ಷೆ (India Made Digital Maps) ಗಳನ್ನು ಅಳವಡಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸಜ್ಜಾಗಿರುವುದಾಗಿ ಹೆಚ್‌ಎಎಲ್‌ನ ಉನ್ನತ ಅಧಿಕಾರಿ ತಿಳಿಸಿದ್ದಾರೆ.
ಡಿಜಿಟಲ್ ನಕ್ಷೆ (Digital Maps) ಹೊಂದುವುದರಿಂದ ಪೈಲಟ್‌ಗಳು ಅಚಾನಕ್ಕಾಗಿ ಗಡಿ ದಾಟುವುದಿಲ್ಲ. ಗ್ರೂಪ್ ಕ್ಯಾಪ್ಟನ್ ಅಭಿನಂದನ್ ಅವರ ರೀತಿ ಮತ್ತೊಂದು ಘಟನೆ ಸಂಭವಿಸಬಾರದು. ಅದಕ್ಕಾಗಿ ಈ ಡಿಜಿಟಲ್ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಇನ್ಮುಂದೆ ಅವರು ತಮ್ಮ ಕೈಯಲ್ಲಿ ಮ್ಯಾಪ್ ಹಿಡಿದಿಟ್ಟುಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಹೆಚ್‌ಎಎಲ್‌ನ ಎಂಜಿನಿಯರಿಂಗ್ ಮತ್ತು ಆರ್&ಡಿ ವಿಭಾಗದ ನಿರ್ದೇಶಕ ಡಿ.ಕೆ ಸುನೀಲ್ ಹೇಳಿದ್ದಾರೆ.
ಡಿಜಿಟಲ್ ನಕ್ಷೆಯಿಂದ ಏನು ಅನುಕೂಲ?
ಡಿಜಿಟಲ್ ನಕ್ಷೆಯಿಂದ ವಿಮಾನ ಹಾರಾಟ ಸಂದರ್ಭದಲ್ಲಿ ಪೈಲಟ್‌ಗಳು ಕಾಕ್‌ಪಿಟ್ ಡಿಸ್‌ಪ್ಲೇನಲ್ಲಿ (Cockpit Display) ನಕ್ಷೆಯನ್ನು ಪರಿಶೀಲಿಸಬಹುದು. 2ಡಿ ಮತ್ತು 3ಡಿ ರೂಪದಲ್ಲಿ ನಕ್ಷೆ ಲಭ್ಯವಿರಲಿದ್ದು, ಪೈಲಟ್‌ಗಳು ಗುಡ್ಡಗಾಡು ಪ್ರದೇಶದಲ್ಲಿದ್ದರೆ ಮೊದಲೇ ಎಚ್ಚರಿಸುತ್ತದೆ. ಹಾಗಾಗಿ ಎತ್ತರದ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಉಂಟಾಗುವ ಅಪಘಾತಗಳನ್ನು ತಡೆಯಲು ನೆರವಾಗುತ್ತದೆ. ಶತ್ರು ಸೇನಾ ನೆಲೆಗಳ ಬಗ್ಗೆಯೂ ಈ ನಕ್ಷೆ ಮಾಹಿತಿ ನೀಡುತ್ತದೆ ಎಂದು ಡಿ.ಕೆ ಸುನೀಲ್ ತಿಳಿಸಿದ್ದಾರೆ.
ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಹೆಚ್ಚಿಸಲು ಡಿಜಿಟಲ್ ನಕ್ಷೆಗಳನ್ನು ಭಾರತದಲ್ಲಿ ವಿನ್ಯಾಸಗೊಳಿಸಿ ಉತ್ಪಾದಿಸಲಾಗುತ್ತದೆ. ಎಲ್ಲಾ ಫೈಟರ್ ಜೆಟ್‌ಗಳಲ್ಲೂ ಡಿಜಿಟಲ್ ನಕ್ಷೆಯನ್ನು ಅಳವಡಿಸಲಾಗುತ್ತದೆ. ಅದಕ್ಕೆ ಬೇಕಾದ ಎಲ್ಲಾ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್‌ಗಳನ್ನೂ ದೇಶದಲ್ಲೇ ತಯಾರಿಸಲಾಗಿದೆ. ಈ ಮೊದಲು, ಈ ನಕ್ಷೆಗಳನ್ನು ವಿದೇಶದಲ್ಲಿ ಮಾತ್ರ ತಯಾರಿಸಲಾಗುತ್ತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೋದಿಯನ್ನ ಹೆಸರಿಸಬಹುದು ಅಂತ ಊಹಿಸೋಕು ಸಾಧ್ಯವಿಲ್ಲ – ಹಾಡಿ ಹೊಗಳಿದ ಪುಟಿನ್
ಶತ್ರು ಸೇನೆ ವಿರುದ್ಧ ಪರಾಕ್ರಮ ಮೆರೆದಿದ್ದ ಅಭಿನಂದನ್:
2019ರ ಫೆಬ್ರವರಿ 14ರಂದು 40 ಸಿಆರ್‌ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡಿದ್ದ ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಕಾರವಾಗಿ ಏರ್‌ಸ್ಟ್ರೈಕ್ ನಡೆಸಿ ಭಾರತ ಪ್ರತಿಕಾರ ತೀರಿಸಿಕೊಂಡಿತ್ತು. ಪಾಕಿಸ್ತಾನದ ಖೈಬರ್ ಪಕ್ತುಂಕ್ವಾ ಪ್ರದೇಶದ ಬಾಲಾಕೋಟ್‌ನಲ್ಲಿ ಜೈಷೆ ಮೊಹಮದ್ ಸಂಘಟನೆಗಳ ಉಗ್ರರ ಶಿಬಿರಗಳ ಮೇಲೆ 2019 ರ ಫೆಬ್ರವರಿ 26 ರಂದು ಭಾರತ ವೈಮಾನಿಕ ದಾಳಿ ನಡೆಸಿತ್ತು. ಇದನ್ನೂ ಓದಿ: ದೇಶ-ವಿದೇಶಗಳಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ವೈರಸ್‌ಗಳ ಬಗ್ಗೆ ನಿಮಗೆಷ್ಟು ಗೊತ್ತು?
ಫೆ.26ರ ನಸುಕಿನ ಜಾವ 3.30 ರಿಂದ 3.55ರ ನಡುವೆ ಪಾಕಿಸ್ತಾನದ ಬಾಲಾಕೋಟ್‌ನಲ್ಲಿದ್ದ ಜೈಷ್ ಉಗ್ರರ ಶಿಬಿರಗಳ ಮೇಲೆ 12 ಮಿರಾಜ್-2000 ಯುದ್ಧ ವಿಮಾನಗಳು ದಾಳಿ ನಡೆಸಿದ್ದವು. ಗಡಿ ನಿಯಂತ್ರಣ ರೇಖೆ ದಾಟಿ ಸುಮಾರು 85 ಕಿಮೀ ಒಳನುಗ್ಗಿ ಭಾರತೀಯ ವಾಯುಪಡೆ ಈ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸುಮಾರು 300 ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಭಾರತ ತನ್ನ ನೆಲದಲ್ಲಿ ದೊಡ್ಡ ದಾಳಿ ನಡೆಸಿದೆ ಎಂದು ಗೊತ್ತಾದ ತಕ್ಷಣ ಪಾಕ್ ಕೂಡ ಪ್ರತಿ ದಾಳಿ ಮಾಡಿತ್ತು. ಪಾಕ್‌ನ ಪ್ರತಿದಾಳಿಯ ವೇಳೆ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ವರ್ಧಮಾನ್ ಅವರು ತಮ್ಮ ಮಿಗ್-21 ರಿಂದ ಪಾಕಿಸ್ತಾನದ ಎಫ್-16 ಜೆಟ್ ವಿಮಾನವನ್ನು ಹೊಡೆದುರುಳಿಸಿದ್ದರು. ಅದಾದ ಬಳಿಕ ಅಭಿನಂದನ್ ಜೆಟ್‌ಗೆ ಹಾನಿಯಾಗಿತ್ತು. ಮಿಗ್-21 ಹಾನಿಗೀಡಾದ ಕಾರಣ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಜಿಗಿದು, ಸಿಕ್ಕಿಬಿದ್ದಿದ್ದರು. ಮೂರ್ನಾಲ್ಕು ದಿನಗಳ ಬಳಿಕ ಅವರನ್ನು ಭಾರತಕ್ಕೆ ಕರೆತರಲಾಯಿತು.
ಇಂತಹ ಯುದ್ಧದ ಸಂದರ್ಭದಲ್ಲಿ ಡಿಜಿಟಲ್ ನಕ್ಷೆಗಳು ಪೈಲಟ್‌ಗಳಿಗೆ ಅನುಕೂಲವಾಗುತ್ತವೆ, ಪೈಲಟ್‌ಗಳು ದಿಕ್ಕು ತಪ್ಪಿಹೋಗದಂತೆ ನೋಡಿಕೊಳ್ಳುತ್ತವೆ. ಗಡಿಯೊಳಗೆ ತನ್ನ ನಿಯಂತ್ರಣ ಕಾಯ್ದುಕೊಳ್ಳಲು ಸಹಾಯಕವಾಗುತ್ತದೆ. ಆದ್ದರಿಂದ ಯುದ್ಧ ವಿಮಾನಗಳಿಗೆ ಡಿಜಿಟಲ್ ನಕ್ಷೆಯನ್ನು ಅಳವಡಿಸಲು ಹೆಚ್‌ಎಎಲ್ ಮುಂದಾಗಿದೆ. ಈಗಾಗಲೇ ಈ ಕಾರ್ಯ ಆರಂಭಗೊಂಡಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ
ಬೆಂಗಳೂರು: ಇಲ್ಲಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ (Hindustan Aeronautics Limited) ಶನಿವಾರ ಬೆಳಗ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ “(Narendra Modi) ತೇಜಸ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.
Successfully completed a sortie on the Tejas. The experience was incredibly enriching, significantly bolstering my confidence in our country’s indigenous capabilities, and leaving me with a renewed sense of pride and optimism about our national potential. pic.twitter.com/4aO6Wf9XYO
ಈ ಸಂತಸವನ್ನು ಸೋಶಿಯಲ್ ಮೀಡಿಯಾ Xನಲ್ಲಿ ಹಂಚಿಕೊಂಡಿರುವ ಅವರು, ತೇಜಸ್‌ನಲ್ಲಿ ಒಂದು ಪಯಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅನುಭವವು ವಿಸ್ಮಯಕಾರಿಯಾಗಿ ಪುಷ್ಟೀಕರಿಸಿದೆ ಇದು ನಮ್ಮ ದೇಶದಲ್ಲಿ ಸ್ಥಳೀಯ ರಕ್ಷಣಾ ವಲಯಗಳ ಸಾಮರ್ಥ್ಯದ ಬಗ್ಗೆ ನನ್ನಲ್ಲಿ ಗಣನೀಯವಾಗಿ ವಿಶ್ವಾಸ ಹೆಚ್ಚಿಸಿತು. ಜೊತೆಗೆ ನಮ್ಮ ರಾಷ್ಟ್ರೀಯ ಸಾಮರ್ಥ್ಯದ ಬಗ್ಗೆಯೂ ಹೆಮ್ಮೆ ಮತ್ತು ಆಶಾವಾದವನ್ನು ಹೆಚ್ಚಿಸಿತು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹುತಾತ್ಮ ಯೋಧನ ತಾಯಿಯ ರೋಧನೆ ನಡುವೆ ರಾಜಕಾರಣಿಗಳ ಫೋಟೋಶೂಟ್- ನೆಟ್ಟಿಗರಿಂದ ಕ್ಲಾಸ್
ಮೋದಿ ಆಗಮನದ ವೇಳೆ ಎಚ್‌ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ವೈಟ್‌ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. 4 ಎಸಿಪಿ, 8 ಇನ್ಸ್ಪೆಕ್ಟರ್ ಸೇರಿ 500 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಹೈದರಾಬಾದನ್ನು ಭಾಗ್ಯನಗರ್ ಅಂತ ಮರುನಾಮಕರಣ: ಅಸ್ಸಾಂ ಸಿಎಂ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರಿಗೆ (Bengaluru) ಆಗಮಿಸಿದ್ದು, ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಹೆಚ್‌ಎಎಲ್ ಸಂಸ್ಥೆಯ ಕಾರ್ಯಕ್ರಮದ ನಿಮಿತ್ತ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮೋದಿ ಆಗಮನದ ವೇಳೆ ಎಚ್‌ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ವೈಟ್‌ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. 4 ಎಸಿಪಿ, 8 ಇನ್ಸ್ಪೆಕ್ಟರ್ ಸೇರಿ 500 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: Kambala: ಇಂದಿನಿಂದ 2 ದಿನ ಬೆಂಗ್ಳೂರಿನಲ್ಲಿ ಕಂಬಳದ ರಂಗು – ಸಾರ್ವಜನಿಕರಿಗೆ ಪ್ರವೇಶ ಉಚಿತ
ಮಧ್ಯಾಹ್ನ 12 ಗಂಟೆಯವರೆಗೆ ಹೆಚ್‌ಎಎಲ್ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದು, ತೇಜಸ್ ಯುದ್ಧ ವಿಮಾನ ಉತ್ಪಾದನೆಯನ್ನು ಪರಿಶೀಲಿಸಲಿದ್ದಾರೆ. 12:15ಕ್ಕೆ ಭಾರತೀಯ ವಾಯುಸೇನೆ ವಿಮಾನದ ಮೂಲಕ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದು, ಅಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಇತ್ತೀಚೆಗೆ ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದಿದ್ದ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದರು. ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಗುಡ್‌ನ್ಯೂಸ್ – ಚುನಾವಣೆಗೂ ಮುನ್ನ ಸಲ್ಲಿಸಿದ ಅರ್ಜಿಗಳ ವಿಲೇವಾರಿ