Tag: Halal Cut

  • ಸ್ವತಃ ಬಿಜೆಪಿಯವರೇ ಹಲಾಲ್‌ ಕಟ್‌ ಮಾಡಿ ಕಮಿಷನ್‌ ಹೊಡೆಯುತ್ತಿದ್ದಾರೆ – ಓವೈಸಿ ಆರೋಪ

    ಸ್ವತಃ ಬಿಜೆಪಿಯವರೇ ಹಲಾಲ್‌ ಕಟ್‌ ಮಾಡಿ ಕಮಿಷನ್‌ ಹೊಡೆಯುತ್ತಿದ್ದಾರೆ – ಓವೈಸಿ ಆರೋಪ

    ವಿಜಯಪುರ: ಮುಸ್ಲಿಮರ ಗಡ್ಡ, ಊಟ, ಟೋಪಿಗೆ ತೊಂದರೆ ಇದೆ ಎಂದು ಬಿಜೆಪಿ ಆಡಳಿತದ ವಿರುದ್ಧ ಎಐಎಂಐಎಂ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi) ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಸಬ್ ಕಾ ವಿಕಾಸ್, ಸಬ್ ಕಾ ಸಾಥ್ ಬರೀ ಬಿಜೆಪಿ ಮಾತಿನಲ್ಲೇ ಇದೆ. ಬಿಜೆಪಿ ಮುಸ್ಲಿಮರ ವಿರುದ್ಧ ಇದೆ. ಬಿಜೆಪಿ (BJP) ಹಲಾಲ್ ಕಟ್ ಮಾಡಿ ತಮ್ಮ ಕಮಿಷನ್ ಮಾಡಿಕೊಳ್ಳುತ್ತಿದೆ. ಹಲಾಲ್ (Halal Cut) ವಿಚಾರದಲ್ಲಿ ಬಿಜೆಪಿ ಕಮಿಷನ್ ಮಾಡುತ್ತಿದೆ. ಬಿಜೆಪಿ ಕಮಿಷನ್‌ ಬಗ್ಗೆ ವೀಡಿಯೋಗಳಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮಗೆ ಅಧಿಕಾರ ಬೇಕಿಲ್ಲ ಅಂದ್ರು ರಾಹುಲ್- ಶಾಕ್ ಕೊಟ್ಟ ಡಿಕೆಶಿ

    ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal)  ವಿರುದ್ಧ ಕಿಡಿಕಾರಿದ ಓವೈಸಿ, ನಾವು ಪಾಕಿಸ್ತಾನದ ಹೆಸರು ಕೂಡ ಹೇಳುವುದಿಲ್ಲ. ಆದರೆ ಶಾಸಕ ಯತ್ನಾಳ್ ಪದೇಪದೆ ಪಾಕಿಸ್ತಾನದ ಹೆಸರು ಉಲ್ಲೇಖ ಮಾಡುತ್ತಾರೆ. ಪಾಕಿಸ್ತಾನ ಮೇಲೆ ಅವರಿಗೆ ಪ್ರೀತಿ ಇದೆ. ಪಾಕಿಸ್ತಾನ ಮೇಲೆ ಪ್ರೀತಿ ಯಾಕೆ ಇದೆ ಎಂಬುದು ಅವರಿಗೆ ಗೊತ್ತು, ನನಗೆ ಗೊತ್ತಿಲ್ಲ. ಪ್ರಧಾನಿ ಮೋದಿ ಯತ್ನಾಳ್‌ಗೆ ಹೇಳಿ‌ಕೊಟ್ಟಿರಬಹುದು. ಪದೇಪದೆ ಪಾಕಿಸ್ತಾನ ಹೆಸರು ಹೇಳು ಎಂದು ಪ್ರಧಾನಿ ಹೇಳಿದ್ದಕ್ಕೆ ಯತ್ನಾಳ್ ಹೇಳ್ತಿದ್ದಾರೆ ಎಂದು ಟೀಕಿಸಿದ್ದಾರೆ.

    ಹಿಜಬ್ ಕುರಿತು ಸುಪ್ರೀಂ ಕೋರ್ಟ್ (Supreme Court) ತೀರ್ಪು ವಿಚಾರವಾಗಿ ಮಾತನಾಡಿ, ಹಿಜಬ್ (Hijab) ಪರ ತೀರ್ಪು ಬಂದಿದ್ದು ಸಂತಸ ತಂದಿದೆ. ತೀರ್ಪಿನಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ. ಹಿಜಬ್ ಪರ ತೀರ್ಪು ಬಂದಿದ್ದು ನಮ್ಗೆ ದೊಡ್ಡ ತೀರ್ಪು ಆಗಿದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೆಲವು ಮುಸ್ಲಿಮರು ಶಿವಮೊಗ್ಗವನ್ನು ಹಾಳು ಮಾಡ್ತಿದ್ದಾರೆ: ಕೆ.ಎಸ್ ಈಶ್ವರಪ್ಪ

    Live Tv
    [brid partner=56869869 player=32851 video=960834 autoplay=true]

  • ಜನರ ಗಮನ ಬೇರೆ ಕಡೆ ಸೆಳೆಯಲು ಬಿಜೆಪಿ ಪಿತೂರಿ ನಡೆಸಿದೆ: ಶ್ರೀನಿವಾಸ್ ಮಾನೆ

    ಜನರ ಗಮನ ಬೇರೆ ಕಡೆ ಸೆಳೆಯಲು ಬಿಜೆಪಿ ಪಿತೂರಿ ನಡೆಸಿದೆ: ಶ್ರೀನಿವಾಸ್ ಮಾನೆ

    ಹಾವೇರಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಮೂರು ವರ್ಷಗಳ ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ, ಯೋಜನೆಗಳನ್ನು ರೂಪಿಸುವಲ್ಲಿ ಹಿನ್ನಡೆಯಾಗಿದೆ. ಚುನಾವಣೆ ಕೇವಲ ಒಂದು ವರ್ಷ ಬಾಕಿ ಇರುವ ಕಾರಣ ಜನರ ಗಮನ ಬೇರೆ ಕಡೆ ಸೆಳೆಯಲು ಬಿಜೆಪಿ ಪಿತೂರಿ ನಡೆಸಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ಕಿಡಿಕಾರಿದ್ದಾರೆ.

    ಹಲಾಲ್ ಕಟ್, ಮಸೀದಿ ಮೈಕ್ ಬ್ಯಾನ್ ವಿವಾದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತ್ಯಾತೀತ ನೆಲದ ಅಡಿಯಲ್ಲಿ ಈ ದೇಶದ ಇತಿಹಾಸ, ಪರಂಪರೆ ಇದೆ. ಜನರ ಮನಸ್ಸುಗಳನ್ನು ಒಡೆಯುವ ಮೂಲಕ ಧರ್ಮಗಳ ವಿಚಾರ ಮುಂಚೂಣಿಗೆ ತರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೊರಟ್ಟಿ ಬಿಜೆಪಿಗೆ ಬಂದರೆ ಸ್ವಾಗತ: ಶಿವರಾಮ್ ಹೆಬ್ಬಾರ್

    ಈ ಮೂಲಕ ಅಭಿವೃದ್ಧಿಯ ಹಿನ್ನಡೆ ಮರೆಮಾಚುವ ಪ್ರಯತ್ನ ನಡೆದಿದೆ. ಇದನ್ನು ನಾವು ಖಂಡಿಸುತ್ತೇವೆ. ಜನ ಮತ್ತೆ ಒಗ್ಗೂಡಿ ತಪ್ಪಿತಸ್ಥರಿಗೆ ಪಾಠ ಕಲಿಸಲಿದ್ದಾರೆ ಎಂದು ಸಿಡಿದರು. ಇದನ್ನೂ ಓದಿ: ಹೆಚ್.ಡಿ ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು: ಡಾ.ಕೆ. ಸುಧಾಕರ್

  • ಬೆಲೆ ಏರಿಕೆ ಮುಚ್ಚಿಹಾಕಲು ಹಲಾಲ್ ತರ್ತಾರೆ: ಸಿದ್ದರಾಮಯ್ಯ ಕಿಡಿ

    ಬೆಲೆ ಏರಿಕೆ ಮುಚ್ಚಿಹಾಕಲು ಹಲಾಲ್ ತರ್ತಾರೆ: ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಸತತವಾಗಿ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

    ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಬೆಲೆ ಏರಿಕೆ ವಿಚಾರವನ್ನು ಮುಚ್ಚಿ ಹಾಕಲು ಕೋಮುವಾದಿ ವಿಷಯ ತರ್ತಾರೆ. ಅದಕ್ಕಾಗಿಯೇ ಹಿಜಬ್, ಹಲಾಲ್, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧದಂತಹ ವಿಚಾರಗಳನ್ನು ತರುತ್ತಿದ್ದಾರೆ. ಕಾಶ್ಮೀರ್ ಫೈಲ್ಸ್ ಸಿನಿಮಾವನ್ನೂ ತೋರಿಸುತ್ತಾ ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತಿದ್ದಾರೆ. ನಿಮಗೆ ಮನುಷ್ಯತ್ವ ಇದೆಯೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    4 ಎಲೆಕ್ಷನ್ ನಲ್ಲಿ ಗೆದ್ದಿಲ್ಲವೇ ಎನ್ನುತ್ತೀರಿ. ಭಾವನಾತ್ಮಕ ವಿಚಾರಗಳು ಹಾಗೂ ಹಿಂದುತ್ವದ ವಿಚಾರಗಳನ್ನಿಟ್ಟುಕೊಂಡು ಏಕೆ ಜನರನ್ನ ದಾರಿ ತಪ್ಪಿಸುತ್ತೀರಿ? ಹಲಾಲ್ ಎಷ್ಟು ವರ್ಷಗಳಿಂದ ಮಾಡಿಕೊಂಡು ಬರ್ತಿಲ್ಲ? ನಾವು ಮರಿ ಕುಯ್ಯಲ್ಲವಾ..? ನಾವು ಅವರಿಂದ ತಗೊಂಡು ತಿಂದಿಲ್ಲವಾ..? ಅದು ಅವರ ನಂಬಿಕೆ, ಮಾಡಿಕೊಳ್ಳಲು ಬಿಡಿ ಎಂದು ಹೇಳಿದರು.

    Siddaramaiah

    ಗೋ ಹತ್ಯೆ ಬಿಲ್ ಜೊತೆಗೆ ಹೋದವರು ಯಾರು? ಮತಾಂತರ ನಿಷೇಧ ಕಾಯ್ದೆ ಹಿಂದೆ ಹೋದವರು ಯಾರು? ಎಂದು ಪ್ರಶ್ನಿಸಿದ ಅವರು, ನಾವು ಸೆಕ್ಯುಲರಿಸಂ ಜೊತೆ ಕಮಿಟ್ ಆದವರು, ಸಂವಿಧಾನದ ಜೊತೆಗೆ ಹೋಗುವವರು, ಹಿಜಬ್ ಹಲಾಲ್ ಏನೇ ಇರಲಿ ನಾವು ಸಂವಿಧಾನದ ಜೊತೆಗೆ ಹೋಗುತ್ತೇವೆ ರಕ್ಷಣೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ: ಈಶ್ವರಪ್ಪ

    ಹಲಾಲ್ ಎಷ್ಟು ಸಾವಿರ ವರ್ಷಗಳಿಂದ ನಡೆಯುತ್ತಿದೆ. ನಾವೂ ಜಾತ್ರೆಗಳಲ್ಲಿ ಮರಿಗಳನ್ನು ಹೊಡೆಯುತ್ತಿರಲಿಲ್ವೇ? ಹಲಾಲ್ ಮಾಂಸ ತಿನ್ನುತ್ತಿರಲಿಲ್ವೇ? ಈಗ ಏಕೆ ಅನಗತ್ಯವಾಗಿ ಮನುಷ್ಯರನ್ನ ಎತ್ತಿಕಟ್ಟುತ್ತಿದ್ದಾರೆ? ಕಾನೂನು ಸುವ್ಯವಸ್ಥೆ ಇದ್ದರೆ ಇನ್ವೆಸ್ಟ್ಮೆಂಟ್ ಬರುತ್ತೆ, ಇನ್ವೆಸ್ಟ್ಮೆಂಟ್ ಇದ್ದರೆ ಉದ್ಯೋಗ ಸಿಗುತ್ತವೆ. ದೇಶ ಹಾಗೂ ರಾಜ್ಯದ ಆರ್ಥಿಕಾಭಿವೃದ್ಧಿ ಹೆಚ್ಚಾಗುತ್ತದೆ. ಅದು ಬಿಟ್ಟು ಈ ರೀತಿ ಮಾಡುವುದರಿಂದ ಏನು ಅಭಿವೃದ್ಧಿಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    Siddaramaiah

    ಬೆಲೆ ಏರಿಕೆ ಯಾರ ಕೈಯಲ್ಲಿದೆ ಮೋದಿ ಅವ್ರೆ?:  ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ನಮ್ಮ ಕೈಯಲ್ಲಿ ಇಲ್ಲ. ಅವು ಸ್ವಾಯತ್ತ ಸಂಸ್ಥೆಗಳು ಎಂದು ಪ್ರಧಾನಿ ಹೇಳುತ್ತಾರೆ. ಹಾಗಾದರೆ ನವೆಂಬರ್ ನಿಂದ ಮಾರ್ಚ್ 10ರ ತನಕ ಏರಿಕೆ ಮಾಡಲಿಲ್ಲ..? ಪಂಚರಾಜ್ಯ ಚುನಾವಣೆಯ ವೇಳೆ ಬೆಲೆ ಏರಿಕೆಯಾಗಲಿಲ್ಲ. ಚುನಾವಣಾ ಫಲಿತಾಂಶ ಬಂದ ನಂತರ ಪೆಟ್ರೋಲ್ ಬೆಲೆ 7 ರೂ. 20 ಪೈಸೆ, ಎಲ್‌ಪಿಜಿ ಸಿಲಿಂಡರ್ ದರ 50 ರೂ. ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಬಂದ ಮೇಲೆ ಇಲ್ಲಿವರೆಗೆ 18 ರೂ. 70 ಪೈಸೆ ಪೆಟ್ರೋಲ್ ಮೇಲಿನ ಸುಂಕ ಹಾಗೂ 18 ರೂ.30 ಪೈಸೆ ಡಿಸೇಲ್ ಮೇಲಿನ ಸುಂಕವನ್ನು ಹೆಚ್ಚಿಸಿದ್ದಾರೆ ಈಗ ಬೆಲೆ ಏರಿಕೆ ಯಾರ ಕೈಯಲ್ಲಿದೆ ಮೋದಿ ಅವರೇ ಎಂದು ಕುಟುಕಿದರು.

    ಬೆಲೆ ಏರಿಕೆ ವಿಚಾರದಲ್ಲಿ ಬಿಜೆಪಿ – ಕಾಂಗ್ರೆಸ್ ಸರ್ಕಾರಗಳ ಹೋಲಿಕೆ ಮಾಡುವಾಗ ಮೂರು ಬಾರಿ ನರಸಿಂಹರಾವ್ ಹೆಸರು ಹೇಳಿದ ಸಿದ್ದರಾಮಯ್ಯ ಬಳಿಕ ಮನಮೋಹನ್ ಸಿಂಗ್, ಮನಮೋಹನ್ ಸಿಂಗ್ ಎಂದು ಸರಿಪಡಿಸಿಕೊಂಡರು.

     

  • ಬೆಣ್ಣೆನಗರಿಯಲ್ಲಿ ನಾನ್ ವೆಜ್ ಸ್ಟಾಲ್‍ಗಳು ಖಾಲಿ ಖಾಲಿ.. ಏಕೆ ಗೊತ್ತಾ?

    ಬೆಣ್ಣೆನಗರಿಯಲ್ಲಿ ನಾನ್ ವೆಜ್ ಸ್ಟಾಲ್‍ಗಳು ಖಾಲಿ ಖಾಲಿ.. ಏಕೆ ಗೊತ್ತಾ?

    ದಾವಣಗೆರೆ:  ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ಮಾಂಸ ಮಾರಾಟ ಸ್ಥಳಗಳು ಗಿಜಿಗುಡುತ್ತವೆ. ಆದರೆ ಬೆಣ್ಣೆನಗರಿ ದಾವಣಗೆರೆಯಲ್ಲಿ ಮಾತ್ರ ಮಟನ್, ಚಿಕನ್ ಮಾರುಕಟ್ಟೆಗಳು ಸಂಪೂರ್ಣ ಖಾಲಿ ಖಾಲಿಯಾಗಿವೆ.

    ಬೆಳಗ್ಗೆ 8 ಗಂಟೆಯಾದರೂ ಜನರು ಮಟನ್, ಚಿಕನ್ ಖರೀದಿಗೆ ಆಗಮಿಸಿಲ್ಲ. ನಿನ್ನೆ ಚಂದ್ರ ದರ್ಶನವಾಗಿದ್ದರೆ ಇಂದು ನಾನ್ ವೆಜ್ ಮಾಡುತ್ತಿದ್ದರು. ಆದರೆ ಚಂದ್ರ ದರ್ಶನವಾಗದ ಹಿನ್ನೆಲೆ ಇಂದು ಕೂಡ ಸಿಹಿ ಮಾಡಿ ಇಂದು ಚಂದ್ರ ದರ್ಶನವಾದರೆ ನಾಳೆ ನಾನ್ ವೆಜ್ ಮಾಡುತ್ತಾರೆ.

    ಈ ಬಗ್ಗೆ ಇಲ್ಲಿನ ಮಟನ್ ವ್ಯಾಪಾರಸ್ಥರು ಮಾತನಾಡಿ, ಜಟ್ಕಾ ಕಟ್, ಹಲಾಲ್ ವಿವಾದ ಇಲ್ಲಿ ಇಲ್ಲ. ಮುಂದೆ ಹೇಗೆ ಬರುತ್ತೋ ನೋಡಿಕೊಂಡು ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಇಲ್ಲಿಯವರೆಗೂ ಯಾವುದೇ ಆ ರೀತಿಯ ವಿವಾದ ಇಲ್ಲಿಗೆ ಬಂದಿಲ್ಲ. ಎಲ್ಲರೂ ಕೂಡ ಸೌಹಾರ್ದಯುತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಚಿಕನ್ ಸ್ಟಾಲ್‍ಗಳು ಕೂಡ ಸಂಪೂರ್ಣ ಖಾಲಿ ಖಾಲಿಯಾಗಿವೆ. ಕೆಲ ಚಿಕನ್ ಅಂಗಡಿಗಳನ್ನು ಮುಚ್ಚಿದ್ದಾರೆ. ಪ್ರತಿವರ್ಷ ಕಾಲಿಡಲು ಕೂಡ ಜಾಗ ಇರುತ್ತಿರಲಿಲ್ಲ. ಆದರೆ ಈ ಬಾರಿ ಖಾಲಿ ಖಾಲಿಯಾಗಿದೆ. ನಾಳೆ ಏನಾದರೂ ವ್ಯಾಪಾರ ವಹಿವಾಟು ಆಗಬಹುದೆಂಬ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: 13ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

  • ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಬೆಂಗಳೂರು: ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಾಂಸ ಮಾರಾಟ ಜೋರಾಗಿದೆ. ಮಾಂಸದ ಮಳಿಗೆಗಳಲ್ಲಿ ಜನರ ದಂಡೇ ನೆರೆದಿದೆ. ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಮಧ್ಯೆಯೇ ಈ ಬಾರಿ ಮಾಂಸ ಮಾರಾಟ ಭರ್ಜರಿಯಾಗಿ ಸಾಗಿದೆ.

    ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಧ್ಯರಾತ್ರಿಯಿಂದಲೇ ಮಾಂಸ ಮಾರಾಟ ಅಂಗಡಿಗಳಲ್ಲಿ ಸಿದ್ಧತೆ ನಡೆದಿತ್ತು. ಬೆಳಗ್ಗೆ ಮಾಂಸದಂಗಡಿಗಳತ್ತ ಜನರ ದಂಡು ಬರಲಾರಂಭಿಸಿತು. ಸರತಿ ಸಾಲಿನಲ್ಲಿ ನಿಂತು ಮಾಂಸ ಖರೀದಿಗೆ ಮುಗಿಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು. ಇದನ್ನೂ ಓದಿ: ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ನಿರ್ಬಂಧ: ಗುಜರಾತ್‌ ಸಿಎಂ ಸಮರ್ಥನೆ 

    NONVEG

    ಬೆಂಗಳೂರಿನ ಯಶವಂತ ಮಾರುಕಟ್ಟೆ, ಮೈಸೂರಿನ ಪಾಪಣ್ಣ ಮಟನ್ ಸ್ಟಾಲ್, ಕೆ.ಜಿ.ಕೊಪ್ಪಲಿನಲ್ಲಿ ಗುಡ್ಡೆ ಮಾಂಸ ಖರೀದಿ, ತುಮಕೂರಿನ ಹಿಂದೂ ಮೀಟ್ ಮಾರ್ಟ್ ಸೇರಿದಂತೆ ವಿವಿಧ ಜಿಲ್ಲೆಯ ಪ್ರಮುಖ ಮಾರುಕಟ್ಟೆಗಳಲ್ಲಿ ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಕೆಲ ಮಳಿಗೆಗಳಲ್ಲಿ ಹಲಾಲ್ ಕಟ್, ಜಟ್ಕಾ ಕಟ್ ಎಂಬ ಬೋರ್ಡ್‍ಗಳನ್ನೂ ಹಾಕಿದ್ದು, ಜಟ್ಕಾಕಟ್‍ಗೆ ಬೇಡಿಕೆ ಹೆಚ್ಚಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದಲೂ ನಿರಾಶೆಗೊಂಡಿದ್ದ ವ್ಯಾಪಾರಿಗಳ ಮೊಗದಲ್ಲೂ ಹರುಷ ತುಂಬಿದೆ. ಬರುವ ಗ್ರಾಹಕರಿಗೆ ಸಂತಸದಿಂದಲೇ ಮಾಂಸ ನೀಡಿ ಗಲ್ಲಾ ಪೆಟ್ಟಿಗೆ ತುಂಬಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಹನುಮ ಹುಟ್ಟಿದ ದಿನ ಗೊತ್ತಾ, ಸುಮ್ನೆ ತಿನ್ಲಾ- ಮಾಂಸಾಹಾರ ಭೋಜನ ಸವಿದ ಸಿದ್ದು

    NONVEG

    ದಾವಣಗೆರೆಯಲ್ಲಿ ವ್ಯಾಪಾರಿಗಳಿಗೆ ನಿರಾಶೆ
    ಯುಗಾದಿ ಹಬ್ಬದಂದು ಚಂದ್ರದರ್ಶನವಾಗದ ಹಿನ್ನಲೆಯಲ್ಲಿ ದಾವಣೆಗೆರೆ ಜಿಲ್ಲೆಯ ಜನರು ಚಿಕನ್, ಮಟನ್ ಖರೀದಿಗೆ ನಿರುತ್ಸಾಹ ತೋರಿದ್ದಾರೆ. ಪ್ರತಿ ವರ್ಷ ಹೊಸ ತೊಡಕಿನ ಸಂದರ್ಭದಲ್ಲಿ ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿರುತ್ತಿತ್ತು. ಆದರೆ, ಇಂದು ಭಾನುವಾರವಾದರೂ ಮಾರುಕಟ್ಟೆ ಖಾಲಿ-ಖಾಲಿ ಹೊಡೆಯುತ್ತಿದೆ. ಇದರಿಂದ ಅಲಾಲ್ ಕಟ್, ಜಟ್ಕಾ ಕಟ್ ವಿವಾದ ಇಲ್ಲದಂತಾಗಿದೆ. ಚಂದ್ರದರ್ಶನವಾಗಿದ್ದರೆ ವ್ಯಾಪಾರ ಜಾತ್ರೆಯಂತಿರುತ್ತಿತ್ತು. ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಮಾಂಸ ಖರೀದಿಗೆ ಜನ ಹಿಂದೇಟು ಹಾಕಿದ್ದಾರೆ. ಮುಂದೆ ಎಲ್ಲರೂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದೇ ರೀತಿ ನಾವು ವ್ಯಾಪಾರ ಮಾಡುತ್ತೇವೆ. ಎಲ್ಲರೂ ಸಾಮರಸ್ಯದಿಂದ ಹಳೇ ಪದ್ದತಿಯಲ್ಲೇ ವ್ಯಾಪಾರ ವಹಿವಾಟು ನಡೆಸುತ್ತೇವೆ ಎನ್ನುತ್ತಾರೆ ಇಲ್ಲಿನ ವ್ಯಾಪಾರಸ್ಥರು.

     

  • ಕುರಿ, ಕೋಳಿ ಪ್ರಜ್ಞೆ ತಪ್ಪಿಸುವುದು ಹೇಗೆ: ಸ್ಟನ್ನಿಂಗ್ ನಿಯಮಕ್ಕೆ ಡಿಕೆಶಿ ಕಿಡಿ

    ಕುರಿ, ಕೋಳಿ ಪ್ರಜ್ಞೆ ತಪ್ಪಿಸುವುದು ಹೇಗೆ: ಸ್ಟನ್ನಿಂಗ್ ನಿಯಮಕ್ಕೆ ಡಿಕೆಶಿ ಕಿಡಿ

    ಬೆಂಗಳೂರು: ರೈತರ ಬದುಕಿನ ಮೇಲೆ ಗದಾಪ್ರಹಾರ ನಡೆಯುತ್ತಿದೆ. ಸಮಾಜದಲ್ಲಿ ಅಶಾಂತಿ ಮೂಡಿಸಲು, ರಾಜಕೀಯದ ಗುರಿ ಇಟ್ಟುಕೊಂಡು ಒಂದು ಧರ್ಮದ ಮೇಲೆ ಪ್ರಯೋಗ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸದಾಶಿವನಗರದ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ಕಳೆದ ಕೆಲ ವರ್ಷಗಳಿಂದ ನಾವು ಕೋವಿಡ್‍ನಿಂದ ನರಳಿದ್ದೇವೆ. ಹೊಸ ವರ್ಷಕ್ಕೆ ಕಾಲಿಟ್ಟಿದ್ದು, ಎಲ್ಲರ ಬದುಕು ಆರೋಗ್ಯಕರವಾಗಿ ಉತ್ತಮವಾಗಲಿ. ವ್ಯಾಪಾರ-ವಹಿವಾಟು, ಶಿಕ್ಷಣ, ಉದ್ಯೋಗ, ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಕಳೆದುಕೊಂಡವರೆಲ್ಲರಿಗೂ ಈ ವರ್ಷ ಭಾಗ್ಯ ಮರುಕಳಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಇದನ್ನೂ ಓದಿ: ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಮಗುವಿನ ನೆರವಿಗೆ ಬಂದ ರೈಲ್ವೆ ಅಧಿಕಾರಿಗಳು

    ಕಳೆದ ಒಂದು ವಾರದಿಂದ ರೈತರ ಬದುಕಿನ ಮೇಲೆ ಗದಾಪ್ರಹಾರ ನಡೆಯುತ್ತಿದೆ. ಸಮಾಜದಲ್ಲಿ ಅಶಾಂತಿ ಮೂಡಿಸಲು, ರಾಜಕೀಯದ ಗುರಿ ಇಟ್ಟುಕೊಂಡು ಒಂದು ಧರ್ಮದ ಮೇಲೆ ಪ್ರಯೋಗ ನಡೆಸಲಾಗುತ್ತಿದೆ. ನಿನ್ನೆ ಪಶುಸಂಗೋಪನಾ ಇಲಾಖೆಯಿಂದ ಆದೇಶ ಹೊರಡಿಸಿ, ಪೊಲೀಸ್ ಹಾಗೂ ಇತರ ಅಧಿಕಾರಿಗಳು ಸೇರಿ ಕೋಳಿ, ಕುರಿ ವ್ಯಾಪಾರ ನಡೆಸುತ್ತಿರುವವರ ಮೇಲೆ ನಿಯಂತ್ರಣ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

    ಬೆಂಗಳೂರು ಹಾಗೂ ಇತರ ಎಲ್ಲಾ ಕಡೆಗಳಲ್ಲಿ ಇನ್ನು ಮುಂದೆ ಮಾಂಸದ ವ್ಯಾಪಾರ ಮಾಡುವವರು ಪ್ರಾಣಿ ವಧೆ ಮಾಡುವ ಮುನ್ನ ಸ್ಟನ್ನಿಂಗ್ (ಪ್ರಜ್ಞೆ ತಪ್ಪಿಸುವ) ಮಾಡಬೇಕು. ಇನ್ನು ಮುಂದೆ ಎಲ್ಲ ವ್ಯಾಪಾರಿಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ವ್ಯವಸ್ಥೆ ಇದ್ದರಷ್ಟೇ ಇನ್ನು ಮುಂದೆ ಪರವಾನಗಿ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಇಡೀ ರಾಜ್ಯದ ರೈತರು ಕೋಳಿ, ಕುರಿ, ಮೇಕೆಗಳನ್ನು ಸಾಕುತ್ತಾರೆ. ಅದು ಅನೇಕರ ಉಪ ಕಸುಬಾಗಿದೆ. ಮಾಂಸದ ವ್ಯಾಪಾರ ಮಾಡುವವರಿಗೆ ರೈತರು ತಾವು ಸಾಕಿದ ಕೋಳಿ, ಕುರಿಗಳನ್ನು ಮಾರಾಟ ಮಾಡುತ್ತಾರೆ. ಕೆಲವರು ಹಲಾಲ್ ಮಾಡುತ್ತಾರೆ. ಮತ್ತೆ ಕೆಲವರು ಹಲಾಲ್ ಮಾಡುವುದಿಲ್ಲ. ಇದು ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದರು. ಇದನ್ನೂ ಓದಿ: RSS, ಬಿಜೆಪಿಯವರಿಗೆ ಯಾರೂ ಹೆದರಬೇಡಿ, ಕಾಂಗ್ರೆಸ್ ನಿಮ್ಮೊಂದಿಗಿದೆ: ಡಿಕೆಶಿ

    ಈ ದೇಶದಲ್ಲಿ ಯಾರು ಹೇಗೆ ಬದುಕಬೇಕು, ಯಾರು ಏನನ್ನು ತಿನ್ನಬೇಕು ಎಂಬುದು ಸಾವಿರಾರು ವರ್ಷಗಳಿಂದ ಪರಂಪರೆಯಾಗಿ ನಡೆದುಕೊಂಡು ಬಂದಿದೆ. ಅವರೆಲ್ಲ ಅನಾದಿ ಕಾಲದಿಂದ ವ್ಯಾಪಾರ ಮಾಡಿಕೊಂಡು ಬಂದಿದ್ದಾರೆ. ಈ ಹಿಂದೆ ವಸ್ತುಗಳ ವಿನಿಮಯ ವ್ಯಾಪಾರ ಪದ್ಧತಿ ಕೂಡ ಇತ್ತು ಎಂದು ತಿಳಿಸಿದರು.

    ರಾಜ್ಯದ ವಿವಿಧ ಕಡೆಗಳಿಂದ ರೈತರು ಕರೆ ಮಾಡಿ, ಸರ್ಕಾರದ ಈ ಆದೇಶದಿಂದ ನಮ್ಮ ಕುರಿ, ಕೋಳಿಗಳನ್ನು ಕೊಳ್ಳುವವರಿಲ್ಲದಂತಾಗಿದೆ. ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಒಂದು ಪಕ್ಷದ ಅಧ್ಯಕ್ಷನಾಗಿ ನೀವು ಯಾಕೆ ಸುಮ್ಮನೆ ಕೂತಿದ್ದೀರಿ ಅಂತ ಕೇಳುತ್ತಿದ್ದಾರೆ ಎಂದು ಹೇಳಿದರು.

    ಹಳ್ಳಿಗಳಲ್ಲಿ ಪಶು ಸಂಗೋಪನೆ ಮಾಡಿ ಎಂದು ಉತ್ತೇಜನ ನೀಡಿದವರು ಯಾರು? ಆಂಧ್ರ ಪ್ರದೇಶದ ಗಡಿ ಪ್ರದೇಶದಲ್ಲಿ ಹೆಚ್ಚಾಗಿ ಇದನ್ನೇ ಅವಲಂಬಿಸಿದ್ದಾರೆ. ಈ ಕೋಳಿ, ಕುರಿಗಳು ಸರಿಯಾದ ಸಮಯಕ್ಕೆ ಮಾರಾಟವಾಗದಿದ್ದರೆ, ಅವುಗಳಿಗೆ ನಿತ್ಯ ಹಾಕುವ ಮೇವು, ಸಾಕಣೆ ಮಾಡುವವನಿಗೆ ಹೊರೆಯಾಗುತ್ತದೆ ಎಂದು ನುಡಿದರು.

    ಬಟ್ಟೆ ಹೊಲಿಯುವವನು ಬಟ್ಟೆ ಹೊಲಿಯುತ್ತಾನೆ, ಮೊಟ್ಟೆ ಮಾರುವವನು ಮೊಟ್ಟೆ ಮಾರುತ್ತಾನೆ. ಹೀಗೆ ಒಬ್ಬೊಬ್ಬರು ಒಂದೊಂದು ವ್ಯಾಪಾರ ಮಾಡುತ್ತಿದ್ದಾರೆ. ಒಬ್ಬರು ತಮ್ಮ ವ್ಯಾಪಾರ ಬಿಟ್ಟು ಬೇರೆಯದನ್ನು ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ನಮ್ಮ ರೈತರು, ವರ್ತಕರು, ಅವರು ಯಾವುದೇ ಸಮುದಾಯದವರಿರಲಿ, ತಮ್ಮ ಬದುಕನ್ನು ಯಾವ ರೀತಿ ನಡೆಸಿಕೊಂಡು ಹೋಗುತ್ತಿದ್ದಾರೋ ಅದರಂತೆ ಸಾಗಲು ಸರ್ಕಾರ ಅವಕಾಶ ನೀಡಬೇಕು. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಇದನ್ನು ಹಾಳು ಮಾಡುವುದು ಬೇಡ. ಈ ಹೊಸ ತೊಡುಕು ಆಚರಣೆಯನ್ನು ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ಮಾತನಾಡಿದರು.

    ಹಲಾಲ್ ಕಟ್‍ಗೆ ಅವಕಾಶ ನೀಡಬಾರದು ಎಂದು ಕೆಲವು ಸಂಘಟನೆಗಳು ಆಗ್ರಹಿಸುತ್ತಿವೆ ಎಂಬ ಪ್ರಶ್ನೆಗೆ, ‘ಕೋಳಿ ಮತ್ತು ಕುರಿಗಳಿಗೆ ಪ್ರಜ್ಞೆ ತಪ್ಪಿಸಬೇಕಂತೆ. ಹೇಗೆ ತಪ್ಪಿಸಬೇಕು? ತಲೆಗೆ ಹೊಡೆದರೆ ಅವು ಸಾಯುವುದಿಲ್ಲವೇ? ಅದು ಹಿಂಸೆ ಅಲ್ಲವೇ? ಮಾಂಸ ವ್ಯಾಪಾರದಲ್ಲೂ ಅನೇಕ ಉಪ ವ್ಯಾಪಾರಗಳಿವೆ. ಇವು ಸಾಮಾಜಿಕವಾಗಿ ಬೆಸೆದುಕೊಂಡಿರುವ ವ್ಯಾಪಾರಗಳು. ನಾನು ಈ ವಿಚಾರದಲ್ಲಿ ಧ್ವನಿ ಎತ್ತದಿದ್ದರೆ ನನ್ನ ಸ್ಥಾನ ಹಾಗೂ ಜವಾಬ್ದಾರಿಗೆ ದ್ರೋಹ ಬಗೆದಂತಾಗುತ್ತದೆ. ಮುಖ್ಯಮಂತ್ರಿಗಳು ಸಂಜೆ ಒಳಗಾಗಿ ಉತ್ತರ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದರು.

  • ಹಲಾಲ್ ಕಟ್ : ನಟ ಚೇತನ್ ಪ್ರತಿಕ್ರಿಯೆಯೇ ಭಿನ್ನ

    ಹಲಾಲ್ ಕಟ್ : ನಟ ಚೇತನ್ ಪ್ರತಿಕ್ರಿಯೆಯೇ ಭಿನ್ನ

    ರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿದ್ಯಮಾನಗಳಿಗೂ ನಟ, ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಅವರು ಒಂದೊಂದು ಸಲ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ. ಈ ಸಲ ಅವರು ‘ಹಲಾಲ್’ ಕಟ್ ಮತ್ತು ‘ಜಟ್ಕಾ’ ಕಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕೊಲ್ಲುವ ಮಾದರಿಗಳ ಬಗ್ಗೆ ಹೋರಾಡುವ ಬದಲು, ಜೀವ ರಕ್ಷಣೆಯ ಕೆಲಸ ಮಾಡಬೇಕು ಅಲ್ಲವಾ? ಎಂದು ಪರೋಕ್ಷವಾಗಿ ಹಿಂದೂ ಸಂಘಟನೆಗಳ ಕುರಿತು ಮಾತನಾಡಿದ್ದಾರೆ.  ಇದನ್ನೂ ಓದಿ : ಕಂಗನಾ ರಣಾವತ್ ಶೋನಲ್ಲಿ ಕರ್ಮ ಕರ್ಮ : ಶರ್ಟ್ ಬಿಚ್ಚಿತೀನಿ ಅಂದ ಮಾದಕ ನಟಿ ಪೂನಂ

    ಹಲಾಲ್ ಕಟ್ ನಿಷೇಧಿಸಬೇಕು ಎಂಬ ಹೋರಾಟ ಕರ್ನಾಟಕದಲ್ಲಿ ತೀವ್ರಗೊಂಡಿದೆ. ಹಲಾಲ್ ಆಹಾರಗಳನ್ನು ಹಿಂದೂಗಳು ಕೊಳ್ಳದಿರುವಂತೆ ಹಿಂದೂಪರ ಸಂಘಟನೆಗಳು ಬೀದಿಗೆ ಇಳಿದಿವೆ. ಈ ಸಂದರ್ಭದಲ್ಲಿ ನಟ ಚೇತನ್ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ತಮ್ಮ ಫೇಸ್ ಬುಕ್ ಖಾತೆಯಲ್ಲಿ “ಕರ್ನಾಟಕದಲ್ಲಿ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ಮಾಂಸ ಮಾರಾಟಗಾರರನ್ನು ನಿಷೇಧಿಸಲು ಜಟ್ಕಾ ಕಟ್ ಮಾಂಸವನ್ನು ಒತ್ತಾಯಿಸಿ ದಂಗೆ ಎಬ್ಬಿಸುತ್ತಿದ್ದಾರೆ. ನಾವು ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಡುವ ಬದಲು, ಹೆಚ್ಚಿನ ಜೀವಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಅಲ್ಲವೆ? ಸದ್ಯದ ಪರಿಸ್ಥಿತಿಯಲ್ಲಿ ಬುದ್ಧನ ಅಹಿಂಸೆಯ ಅಗತ್ಯವಿದೆಯೇ ಹೊರತು, ಕೋಮು ದ್ವೆಷದ ಅಗತ್ಯವಿಲ್ಲ” ಎಂದು ಬರಹದ ಮೂಲಕ ತಿವಿದಿದ್ದಾರೆ. ಇದನ್ನೂ ಓದಿ : ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ನಟ ಚೇತನ್ ಮೊನ್ನೆಯಷ್ಟೇ ಹಿಜಬ್ ಕುರಿತು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ನ್ಯಾಯಾಧೀಶರ ವಿರುದ್ಧ ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದರು ಎನ್ನುವ ಕಾರಣಕ್ಕಾಗಿ ಜೈಲಿಗೂ ಹೋಗಿ ಬಂದರು. ಅಲ್ಲದೇ ಇವರನ್ನು ದೇಶ ಬಿಡಿಸುವಂತಹ ಕೆಲಸಗಳು ನಡೆಯುತ್ತವೆ ಎಂದಾಗ, ಅದೆಲ್ಲವೂ ಸುಳ್ಳು, ನನ್ನ ಹೋರಾಟ ನಿರಂತರ ಎನ್ನುವ ಮೂಲಕ ತಮ್ಮ ಮಾತಿಗೆ ಬದ್ಧರಾಗಿಯೇ ಉಳಿಯುತ್ತಿದ್ದಾರೆ.

  • ಇಸ್ಪೀಟ್ ಆಡೋರಿಗೆ ಪೊಲೀಸರು ತೊಂದರೆ ಕೊಡದಂತೆ ಆದೇಶಿಸಿ: ಹೆಚ್‌ಡಿಕೆ ಮನವಿ

    ಇಸ್ಪೀಟ್ ಆಡೋರಿಗೆ ಪೊಲೀಸರು ತೊಂದರೆ ಕೊಡದಂತೆ ಆದೇಶಿಸಿ: ಹೆಚ್‌ಡಿಕೆ ಮನವಿ

    ರಾಮನಗರ: ಯುಗಾದಿ ಹಬ್ಬದ ಸಂದರ್ಭದಲ್ಲಿ ಹಳ್ಳಿ ಜನರು ಇಸ್ಪೀಟು ಆಡುವ ಸಂಪ್ರದಾಯ ಹಿಂದಿನಿಂದಲೂ ಬೆಳೆದು ಬಂದಿದೆ. ಅವರಿಗೆ ಪೊಲೀಸರು ತೊಂದರೆ ಕೊಡದಂತೆ ಸರ್ಕಾರ ನಿರ್ದೇಶನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

    ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳ್ಳಿಗಾಡಿನಲ್ಲಿ ಯುಗಾದಿ ಹಬ್ಬದ ವೇಳೆ ಎಲ್ಲರೂ ಮನೆಯಲ್ಲೇ ಇರುತ್ತಾರೆ. ರೈತರು ಹಬ್ಬದ ಮಾರನೇ ದಿನದಿಂದಲೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕಿರುವುದರಿಂದ ಆ ಎರಡು ದಿನ ಇಸ್ಪೀಟು ಆಡಿ ಸಂತಸ ಪಡುತ್ತಾರೆ. ಇದು ಸಂಪ್ರದಾಯವಾದ್ದರಿಂದ ಪೊಲೀಸರು ಜನರಿಗೆ ತೊಂದರೆ ಕೊಡದಂತೆ ಸರ್ಕಾರ ನಿರ್ದೇಶನ ನೀಡುವುದು ಒಳ್ಳೆಯದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೇಕೆದಾಟು ವಿಚಾರವಾಗಿ ʼಸುಳ್ಳಿನಯಾತ್ರೆʼ ಹೊರಟವರ ಜಾತಕ ಬೆತ್ತಲಾಗ್ತಿದೆ: ಹೆಚ್‌ಡಿಕೆ 

    HDK

    ಇದೇ ವೇಳೆ ಹಲಾಲ್ ಕಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಹಿಂದೂ, ಮುಸ್ಲಿಂ ಇನ್ನಾವುದೇ ಸಮಾಜವು ಪರಸ್ಪರ ಬಾಂಧವ್ಯದಿಂದ ಇರುವ ವಾತಾವರಣ ಇತ್ತು. ಕರಾವಳಿ ಭಾಗದಲ್ಲಿ ಮಾತ್ರ ಕೆಲವರು ಅವರೇ ವಿವಾದ ಹುಟ್ಟುಹಾಕಿಕೊಂಡಿದ್ದರು. ಆದರೆ ಇಂದು ಪ್ರತಿದಿನ ಹಿಂದುತ್ವದ ಹೆಸರಿನಲ್ಲಿ ಭಾವನಾತ್ಮಕವಾಗಿ ಮಾತನಾಡುತ್ತಾ ಸಮಾಜದ ಶಾಂತಿ ಕದಡುವ ಕೆಲಸವಾಗುತ್ತಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣ’ 

    HDK

    ಹಬ್ಬದ ಹೊಸತೊಡಕು ಮಾಡುವ ಸಂದರ್ಭದಲ್ಲಿ ಮಾಂಸಾಹಾರ ಸೇವನೆ ಮಾಡುವವರು ಹಲಾಲ್ ಮಾಡಿದ್ದಾರೋ ಇಲ್ಲವೋ ಎಂದು ನೋಡುವುದಿಲ್ಲ. ಹಾಗೇ ತಂದು ಹಬ್ಬದ ಅಡುಗೆ ಮಾಡುತ್ತಾರೆ. ಇಲ್ಲಿಯವರೆಗೆ ಇಲ್ಲದ ಹಲಾಲ್ ಕಟ್ ವಿಚಾರ ಈಗ ಮಾತನಾಡಿದ್ದೇಕೆ? ಇದಕ್ಕಾಗಿಯೇ ಇವರು ಸದನದಲ್ಲಿ ಕುಳಿತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

  • ಹಲಾಲ್ ಕಟ್, ಜಟ್ಕಾ ಕಟ್ ಎಂದರೇನು?

    ಹಲಾಲ್ ಕಟ್, ಜಟ್ಕಾ ಕಟ್ ಎಂದರೇನು?

    ಬೆಂಗಳೂರು: ಕರಾವಳಿಯಲ್ಲಿ ಹಿಜಬ್‌ನಿಂದ ಆರಂಭಗೊಂಡ ವಿವಾದ ಈಗ ಎಲ್ಲೆಲ್ಲೋ ಹೋಗುತ್ತಿದೆ. ದೇವಸ್ಥಾನಗಳಲ್ಲಿ ಹಿಂದೂಯೇತರರಿಗೆ ನಿರ್ಬಂಧ ಅಭಿಯಾನ ಹೊಸ ರೂಪ ಪಡೆದುಕೊಂಡಿದೆ. ಯುಗಾದಿ ಹೊಸತೊಡಕು ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ, ಹಿಂದೂಗಳ ಬಳಿಯೇ ಮಾಂಸ ಖರೀದಿ ಮಾಡುವಂತೆ ಸೋಷಿಯಲ್ ಮೀಡಿಯಾಗಳಲ್ಲಿ ದೊಡ್ಡ ಅಭಿಯಾನವೇ ನಡೆದಿದೆ.

    ಇದಿಗ ಹಲಾಲ್ ತ್ಯಜಿಸಿ, ಜಟ್ಕಾ ಬಾಡು ಖರೀದಿಸಿ ಎಂದು ಹಿಂದೂ ಸಮುದಾಯದವರು ಕರೆ ನೀಡುತ್ತಿದ್ದಾರೆ. ಇದಕ್ಕೆ ಬಿಜೆಪಿಯೂ ಬಹಿರಂಗ ಬೆಂಬಲ ನೀಡಿದೆ. ಹಲಾಲ್ ಅನ್ನು ಆರ್ಥಿಕ ಜಿಹಾದ್ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಹಲಾಲ್ ಮಾಂಸವನ್ನು ಉಪಯೋಗಿಸಬಾರದು ಅಂದರೆ ತಪ್ಪೇನು? ಮುಸಲ್ಮಾನರು ಹಿಂದೂಗಳ ಬಳಿ ಮಾಂಸ ಖರೀದಿ ಮಾಡಲ್ಲ. ಹಿಂದೂಗಳೇಕೆ ಮುಸ್ಲಿಮರ ಬಳಿ ಮಾಂಸ ಖರೀದಿ ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಯಾವ ಅಂಶ ಪ್ರಚೋದನೆ ಕೊಡ್ತಿದೆ ನೀವೇ ಹೇಳಿ ಎಂದು ಸಿಟಿ ರವಿ ಕೇಳಿದ್ದಾರೆ. ಇದನ್ನೂ ಓದಿ: ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಭಟ್‌ಗೆ ಆಹ್ವಾನ – ಎಸ್‌ಎಫ್‌ಐ ವಿರೋಧ

    ಹಲಾಲ್ ಮಾಂಸದ ವಿಚಾರ ವಿವಾದ ಆಗಿರೋದು ಹೋಟೆಲ್ ಮಾಲೀಕರಿಗೆ ಹೊಸ ಪೀಕಲಾಟ ತಂದಿಟ್ಟಿದೆ. ಬೆಂಗಳೂರಿನ ಜಿಎಫ್‌ಸಿ ಬಿರಿಯಾನಿ ಮಳಿಗೆಯ ಬೋರ್ಡ್‌ನಲ್ಲಿ ಉಲ್ಲೇಖಿಸಿದ್ದ ಹಲಾಲ್ ಎಂಬ ಪದ ಮುಚ್ಚಲಾಗಿದೆ. ಹಲಾಲ್ ಬಹಿಷ್ಕಾರ ಅಭಿಯಾನಕ್ಕೆ ವಿರೋಧವೂ ವ್ಯಕ್ತವಾಗುತ್ತಿದೆ. ಆಯ್ತು ಹಲಾಲ್ ತ್ಯಜಿಸುತ್ತೇವೆ. ಆರ್‌ಎಸ್‌ಎಸ್‌ನವರು ಪ್ರತಿ ಹಳ್ಳಿಯಲ್ಲೂ ಮಾಂಸದಂಗಡಿ ತೆರೆಯಲಿ. ಫಿಫ್ಟಿ ಪರ್ಸೆಂಟ್ ಡಿಸ್ಕೌಂಟ್ ನೀಡಲಿ ಎಂಬ ಟ್ವೀಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

     

    ಇದೀಗ ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ಎಂದರೇನು ಎಂಬ ಪ್ರಶ್ನೆ ಎದ್ದಿದೆ. ಹಲಾಲ್ ಕಟ್ ಹಾಗೂ ಜಟ್ಕಾ ಕಟ್‌ಗೆ ಇರುವ ವ್ಯತ್ಯಾಸ ಇಲ್ಲಿದೆ.

    ಹಲಾಲ್ ಕಟ್:
    ಹಲಾಲ್ ಎಂಬುದು ಅರೇಬಿಕ್ ಪದ. ಇದರ ಅರ್ಥ ಅನುಮತಿ ಇದೆ ಎಂಬುದು. ಹಲಾಲ್ ಕಟ್ ಪ್ರಕಾರ ಪ್ರಾಣಿಯ ಗಂಟಲು ಸೀಳಿ ರಕ್ತ ಬರಿದಾಗಿಸಿ ಕೊಲ್ಲಲಾಗುತ್ತದೆ. ಪ್ರಾಣಿ ಮೊದಲೇ ಸತ್ತಿದ್ದರೆ ಅಥವಾ ಅನಾರೋಗ್ಯವಿದ್ದರೆ ಇದನ್ನು ಪರಿಗಣಿಸಲಾಗುವುದಿಲ್ಲ.

    ಹಲಾಲ್ ಕಟ್ ಮಾಡುವವರು ಇಸ್ಲಾಂ ಧರ್ಮಕ್ಕೆ ಸೇರಿದವರಾಗಬೇಕು. ಪ್ರಾಣಿಯನ್ನು ಕೊಲ್ಲುವಾಗ ಮುಸಲ್ಮಾನರ ಪವಿತ್ರ ಸ್ಥಳ ಮೆಕ್ಕಾದ ದಿಕ್ಕಿಗೆ ಮುಖ ಮಾಡಿ ಪ್ರಾರ್ಥನೆ ಮಾಡಬೇಕು. ಮಾಂಸ ತಿನ್ನುವವರೂ ಪ್ರಾಣಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಬೇಕು.

    ಹಲಾಲ್ ಕಟ್ ಮಾಡುವವರು ಜಮಿಯತ್ ಉಲಾಮ ಐ ಹಿಂದ್ ಹಲಾಲ್ ಟ್ರಸ್ಟ್ ವತಿಯಿಂದ ಹಣ ಪಾವತಿಸಿ ಪ್ರಮಾಣ ಪತ್ರ ಪಡೆದಿರಬೇಕು. ಇದನ್ನೂ ಓದಿ: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಎನ್ನುವ ಕಿಡಿಗೇಡಿಗಳನ್ನು ಮಟ್ಟ ಹಾಕಿ: ಹೆಚ್‌ಡಿಕೆ ಆಗ್ರಹ

    ಜಟ್ಕಾ ಕಟ್:
    ಜಟ್ಕಾ ಕಟ್ ಎಂದರೆ ಬಲಿ ಅಥವಾ ದೈವ ಬಲಿ ಎಂದರ್ಥ. ಈ ರೀತಿಯ ಪ್ರಾಣಿ ಬಲಿ ಬಗ್ಗೆ ಸನಾತನ ಹಿಂದೂ ಪದ್ಧತಿಯಲ್ಲಿ ಉಲ್ಲೇಖವಿದೆ. ಜಟ್ಕಾ ಕಟ್ ಪ್ರಕಾರ ಒಂದೇ ಏಟಿಗೆ ಪ್ರಾಣಿಯ ರುಂಡ ಹಾಗೂ ಮುಂಡವನ್ನು ಬೇರ್ಪಡಿಸಲಾಗುತ್ತದೆ. ಈ ರೀತಿಯಲ್ಲಿ ಪ್ರಾಣಿಯ ಜೀವ ಒಂದೇ ಬಾರಿಗೆ ಹೋಗುತ್ತದೆ.

    ಇವೇ ಹಲಾಲ್ ಕಟ್ ಹಾಗೂ ಜಟ್ಕಾ ಕಟ್‌ಗೂ ಇರುವ ವ್ಯತ್ಯಾಸ. ಮಾಂಸದ ಖರೀದಿಯಲ್ಲೂ ಧರ್ಮದ ವೈವಿಧ್ಯತೆ ಇರುವ ಕಾರಣಕ್ಕೆ ಇದೀಗ ಮತ್ತೆ ಹಿಂದೂ-ಮುಸ್ಲಿಂ ವಿವಾದ ಭುಗಿಲೇಳುತ್ತಿದೆ.

  • ಹಲಾಲ್ ಮಾಂಸ ಎಂದರೇನು? ಹಲಾಲ್ ಕಟ್ ಏನು?

    ಹಿಜಬ್ ಗಲಾಟೆಯ ಬಳಿಕ ಮುಸ್ಲಿಂ ವರ್ತಕರಿಗೆ ಹಿಂದೂಗಳ ಜಾತ್ರೆಯಲ್ಲಿ ಬಹಿಷ್ಕಾರ ಹಾಕಲಾಯಿತು. ಬಹಿಷ್ಕಾರದ ಮುಂದುವರಿದ ಭಾಗವಾಗಿ ಈಗ ಹಲಾಲ್ ಮಾಂಸಗಳನ್ನು ಬಹಿಷ್ಕರಿಸುವಂತೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

    ಯುಗಾದಿ ಮರು ದಿವಸ ಕರ್ನಾಟಕದ ಕೆಲ ಭಾಗಗಳಲ್ಲಿ ಆಚರಿಸುವ ಹೊಸತೊಡಕು ವೇಳೆ ಮಾಂಸ ತಿನ್ನಲಾಗುತ್ತದೆ. ಈ ವೇಳೆ ಹಲಾಲ್ ಮಾಂಸವನ್ನು ಸೇವಿಸದಂತೆ ಕರೆ ನೀಡಿದೆ. ಮುಸ್ಲಿಮ್ ದೇವರಿಗೆ ಅರ್ಪಣೆ ಮಾಡಿದ ಬಳಿಕ ಹಿಂದೂ ದೇವರಿಗೆ ಅರ್ಪಣೆ ಮಾಡುವುದು ಸರಿಯಲ್ಲ ಎಂದು ಹಿಂಜಾವೇ ಹೇಳಿದೆ. ಹೀಗಾಗಿ ಇಲ್ಲಿ ಹಲಾಲ್ ಮಾಂಸದ ಬಗ್ಗೆ ಕಿರು ಮಾಹಿತಿಯನ್ನು ನೀಡಲಾಗಿದೆ. ಇದನ್ನೂ ಓದಿ: ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ

    ಹಲವು ಮಾಂಸದಂಗಡಿಗಳು ಹಾಗೂ ಮುಸ್ಲಿಂ ಅಂಗಡಿಗಳ ಬ್ಯಾನರ್‍ಗಳಲ್ಲಿ ಹಲಾಲ್ ಪದ ಇರುತ್ತದೆ. ಮಾಂಸಗಳ ಗುಣಮಟ್ಟ ತೋರಿಸಲು ಹಲವು ಕಂಪನಿಗಳು ಹಲಾಲ್ ಕಟ್ ಪದವನ್ನು ಉಪಯೋಗಿಸುತ್ತವೆ. ಆದರೆ ಚೀನಾ ದೇಶದಲ್ಲಿ ಹಲಾಲ್ ಮಾಂಸವನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಹಲಾಲ್ ಮಾಂಸ, ಹಲಾಲ್ ಕಟ್ ಅಂದರೇನು ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವಿಸುತ್ತದೆ. ಇದನ್ನೂ ಓದಿ: ಎಚ್‍ಡಿಡಿ ಪತ್ನಿಗೆ ಐಟಿ ನೋಟಿಸ್

    ಹಲಾಲ್ ಮಾಂಸ ಯಾವುದು?
    ಇಸ್ಲಾಮ್ ಧರ್ಮಬದ್ಧವಾಗಿರುವ ಆಹಾರ ಕ್ರಮವೇ ಹಲಾಲ್. ಇಸ್ಲಾಮ್ ಧರ್ಮದಲ್ಲಿ ಪರಿಶುದ್ಧ ಆಹಾರವೆಲ್ಲವೂ ಹಲಾಲ್ ಎಂದು ಪರಿಗಣಿಸಲಾಗಿದೆ. ಪರಿಶುದ್ಧತೆ ಇಲ್ಲದ ಆಹಾರವು ಇಸ್ಲಾಮ್‍ನಲ್ಲಿ ನಿಷಿದ್ಧ. ಮಾಂಸದ ವಿಚಾರಕ್ಕೆ ಬಂದರೆ ಹಂದಿ, ಮನುಷ್ಯ, ಹುಲಿ, ಸಿಂಹ ಇತ್ಯಾದಿ ಮಾಂಸಗಳು ನಿಷಿದ್ಧವಾಗಿವೆ. ಕಾನೂನುಬದ್ಧವೆನಿಸಿದ ಕುರಿ, ಕೋಳಿ, ಒಂಟೆ, ದನ, ಮೀನು ಇತ್ಯಾದಿ ಪ್ರಾಣಿಗಳ ಮಾಂಸವು ಹಲಾಲ್ ಎನಿಸುತ್ತವೆ. ವಧಿಸುವ ಮೊದಲೇ ಸತ್ತಿದ್ದ ಪ್ರಾಣಿಗಳು ಹಾಗೂ ವಧಿಸುವ ವೇಳೆ ರೋಗ, ಅನಾರೋಗ್ಯದಿಂದ ಬಳಲುತ್ತಿರುವ ಪ್ರಾಣಿಗಳನ್ನು ಮುಸ್ಲಿಮರು ತಿನ್ನುವಂತಿಲ್ಲ.

    ಹಲಾಲ್ ಕಟ್ ಎಂದರೇನು?
    ತಿನ್ನುವ ಪ್ರಾಣಿಗಳನ್ನ ಕೊಲ್ಲುವುದಕ್ಕೂ ಇಸ್ಲಾಮ್‍ನಲ್ಲಿ ನಿರ್ದಿಷ್ಟ ಕ್ರಮ ಮತ್ತು ನಿಯಮಗಳಿವೆ. ಒಂದೊಂದು ಪ್ರಾಣಿಯ ವಧೆಗೂ ಪ್ರತ್ಯೇಕ ನಿಯಮವಿರುತ್ತದೆ. ಒಂದು ಸಾಮಾನ್ಯ ನಿಯಮವೆಂದರೆ ವಧಿಸಲ್ಪಟ್ಟ ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಬೇಕು. ಸೌದಿಯಲ್ಲಿರುವ ಮೆಕ್ಕಾ ಮಸೀದಿಯತ್ತ ಮುಖ ಮಾಡಿ ಪ್ರಾಣಿಯನ್ನು ವಧಿಸಲಾಗುತ್ತದೆ.

    ವಧಿಸುವ ವ್ಯಕ್ತಿಯು ಅಲ್ಲಾಹುವಿನ ನಾಮೋಚ್ಛಾರ ಮಾಡುತ್ತಾ ವಧಿಸಬೇಕು. ತಲೆಯನ್ನು ಒಡೆಯದೇ ಗಂಟಲು ಸೀಳಿ ಸಾಯಿಸಬೇಕು ಎಂಬಿತ್ಯಾದಿ ನಿಯಮಗಳು ಕುರಾನ್‍ನಲ್ಲಿ ತಿಳಿಸಲಾಗಿದೆ. ಕೋಳಿ ಅಥವಾ ಕುರಿಯನ್ನು ಕಡಿಯುವ ಮುಂಚೆ ಮುಸ್ಲಿಂ ಧರ್ಮದಲ್ಲಿ ಕುರಾನಿನ ಕೆಲ ಸಾಲುಗಳನ್ನು ಉಚ್ಚರಿಸಿ ಕೊಲ್ಲಲಾಗುತ್ತದೆ.

    ಹಿಂದೂ ಸಂಪ್ರದಾಯದಲ್ಲಿ ಪ್ರಾಣಿಗಳನ್ನು ನೇರವಾಗಿಯೇ ವಧಿಸುತ್ತಾರೆ. ಆದರೆ ಮುಸ್ಲಿಂ ಧರ್ಮದಲ್ಲಿ ಕೆಲ ರೀತಿ ರಿವಾಜುಗಳಿವೆ. ಮುಸ್ಲಿಂ ಧರ್ಮಗಳಲ್ಲಿ ಏಡಿಯನ್ನು ಹೆಚ್ಚಾಗಿ ತಿನ್ನಲು ಬಯಸುವುದಿಲ್ಲ. ಏಕೆಂದರೆ ತಲೆ ಇಲ್ಲದ ಪ್ರಾಣಿಗಳನ್ನು ತಿನ್ನುವುದು ಅವರಲ್ಲಿ ಮಹಾ ಪಾಪ ಎಂಬುವ ವಾಡಿಕೆಯಿದೆ. ಮುಸ್ಲಿಂ ಮಾಂಸದಂಗಡಿಗಳಲ್ಲಿ ಪ್ರಾಣಿಯನ್ನು ವಧಿಸುವ ಮೊದಲು ಅದರ ಬಾಯಿಗೆ ನೀರು ಹಾಕುತ್ತಾರೆ. ನಂತರ ಆ ಪ್ರಾಣಿಯ ಕತ್ತನ್ನು ಕತ್ತರಿಸುತ್ತಾರೆ. ಒಂದೊಂದು ಪ್ರಾಣಿಯನ್ನು ಸಾಯಿಸುವ ಕ್ರಮದಲ್ಲಿ ವ್ಯತ್ಯಾಸವಿರುತ್ತದೆ. ಆಯಾ ಪ್ರಾಣಿಗೆ ಅನುಗುಣವಾಗಿ ಈ ನಿಯಮವನ್ನು ಮಾಡಲಾಗಿದೆ.