Tag: Halal meat

  • ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

    ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

    ಬೆಂಗಳೂರು: ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡುತ್ತಿದೆ. ಸರ್ಕಾರ ಕೂಡಲೇ ಖಟ್ಟರ್ ಮುಸ್ಲಿಂ ಮೂಲಭೂತವಾದಿಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಹಲಾಲ್ ಎನ್ನುವುದು ಮಾಂಸಕ್ಕೆ ಸೀಮಿತವಾಗದೇ ಎಲ್ಲಾ ಕಡೆ ವ್ಯಾಪಿಸಿದೆ. ದೇವರ ಪೂಜೆಗೆ ಬಳಸುವ ಅರಿಶಿಣ, ಕುಂಕುಮಕ್ಕೆ, ಜೇನು ತುಪ್ಪಕ್ಕೂ ಹಲಾಲ್ ಸರ್ಟಿಫಿಕೇಟ್ ಬಂದಿದೆ. ಪ್ರೈವೇಟ್ ಕೆಲಸಗಳಲ್ಲಿ ಮುಸ್ಲಿಂರೇ ಕೆಲಸದಲ್ಲಿ ಇರಬೇಕು ಎನ್ನುವ ಮನಸ್ಥಿತಿಯಲ್ಲಿದ್ದಾರೆ. ಈಗಾಗಲೇ ಹಲಾಲ್ ಕಾನೂನು ರೂಪವನ್ನು ಪಡೆದುಕೊಂಡಿದೆ. ಎಲ್ಲದಕ್ಕೂ ಹಲಾಲ್ ಸರ್ಟಿಫಿಕೇಟ್ ಎನ್ನುವುದು ಹಾಗೂ ಅನ್ಯ ಧರ್ಮಿಯರ ಮೇಲೆ ಹೇರುವುದು ಸಂವಿಧಾನದ ವಿರೋಧಿ ನಡೆ. ಈ ಹಿಂದೆ ಇಸ್ಕಾನ್ ಈರುಳ್ಳಿ, ಬೆಳ್ಳುಳ್ಳಿ ರಹಿತ ಊಟ ಕೊಡುವಾಗ ಅದನ್ನು ಮುಸಲ್ಮಾನರು ವಿರೋಧಿಸಿದ್ದರು. ಆದರೆ ಈಗ ಹಲಾಲ್ ಸರ್ಟಿಫಿಕೇಟ್ ಬ್ಯುಸಿನೆಸ್ ವ್ಯಾಪಕವಾಗುತ್ತಿದೆ. ಇದನ್ನೂ ಓದಿ: ಸದನದಲ್ಲಿ ಗದ್ದಲವೆಬ್ಬಿಸಿದ ಶಾಸಕರನ್ನು ಹೊತ್ತು ತಂದು ಹೊರಹಾಕಿದ ಮಾರ್ಷಲ್‍ಗಳು

    ಈ ಹಲಾಲ್ ಸರ್ಟಿಫಿಕೇಟ್ ವಿರುದ್ಧ ಕಾನೂನು ಹೋರಾಟ ಆಗಲೇಬೇಕಿದೆ. ಮುಸ್ಲಿಮರ ಹಲಾಲ್ ಮನಸ್ಥಿತಿ ಬದಲಾಗಬೇಕು. ಇಲ್ಲ ಅದರ ವಿರುದ್ಧ ಕಾನೂನು ತರುವ ಕೆಲಸ ಆಗಬೇಕಿದೆ. ಮಲೇಷ್ಯಾದಲ್ಲಿ ಇಸ್ಲಾಂ ಬ್ಯಾಂಕಿಂಗ್ ತಂದು, ಎಲ್ಲದಕ್ಕೂ ಸರ್ಟಿಫಿಕೇಟ್ ತಂದರು. ಮುಂದೆ ಹಲಾಲ್ ಸರ್ಟಿಫಿಕೇಟ್ ತಗೆದುಕೊಂಡವರು ಇಸ್ಲಾಂ ಬ್ಯಾಂಕಿಂಗ್ ಮೂಲಕವೇ ವ್ಯವಹಾರ ಮಾಡಿ ಅಂತಾರೆ.

    ಈ ರೀತಿ ಆದರೆ ಸಂಪೂರ್ಣ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಹುನ್ನಾರ ಈ ಹಲಾಲ್ ಸರ್ಟಿಫಿಕೇಟ್ ಹುನ್ನಾರ. ಶ್ರೀಮಂತ ಮುಸ್ಲಿಮರಿಗಾಗಿ ಬಡ ಮುಸ್ಲಿಮರ ಜೀವನ ಹಾಳು ಮಾಡುತ್ತಿದ್ದಾರೆ. ನಾವೆಲ್ಲ ಭಾರತದಲ್ಲಿ ಸೌಹರ್ದತೆಯಿಂದ ಬದುಕಿದ್ದೇವೆ. ಹಿಜಬ್‍ನಿಂದ ಹಿಡಿದು ಹಲಾಲ್‍ವರೆಗೂ ಬಂದು ನಿಂತಿದೆ. ದೇವಸ್ಥಾನ, ಜಾತ್ರೆಗಳಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ ಕೊಡದೇ ಇರುವ ಕಾನೂನು ಕಾಂಗ್ರೆಸ್ ತಂದಿದ್ದು, ಕರ್ನಾಟಕದಲ್ಲಿಯೇ ಹಿಜಬ್, ಹಲಾಲ್ ವಿಚಾರಗಳು ಪ್ರಾರಂಭವಾಗುತ್ತಿವೆ. ಅದು ಇಡೀ ದೇಶಕ್ಕೆ ಹಬ್ಬುತ್ತಿದೆ. ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡುತ್ತಿದೆ. ಸರ್ಕಾರ ಕೂಡಲೇ ಖಟ್ಟರ್ ಮುಸ್ಲಿಂ ಮೂಲಭೂತವಾದಿಗಳಿಗೆ ಕಡಿವಾಣ ಹಾಕಬೇಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆಯಲ್ಲಿ ತೊಡಗಲು ಮುಸ್ಲಿಂ ಯುವಕರಿಗೆ ಪ್ರೇರಣೆ- 5 ವರ್ಷ ಜಾಕಿರ್‌ ನಾಯಕ್‌ ಸಂಸ್ಥೆ ಬ್ಯಾನ್‌

  • ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಸಿಎಂಗೆ ಹೆಚ್‍ಡಿಕೆ ಸವಾಲ್

    ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಸಿಎಂಗೆ ಹೆಚ್‍ಡಿಕೆ ಸವಾಲ್

    ರಾಮನಗರ: ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಬೊಮ್ಮಾಯಿಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.

    ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಪರಿಷತ್, ಭಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ? ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು ಅದೇ ಸಮಾಜದವರೇ ಬರಬೇಕು. ಈಗ ಹಲಾಲ್ – ಜಟ್ಕಾ ಕಟ್ ಅಂತಿದ್ದಾರೆ. ನಿಮ್ಮ ಜಟ್ಕಾ ಮಾಡುವುದಕ್ಕೆ, ಇನ್ನೊಂದು ಮಾಡುವುದಕ್ಕೂ ಅವರೇ ಬರಬೇಕು. ರೇಷ್ಮೆ, ಮಾವು ಬೆಳೆ ಮಾರಾಟಕ್ಕೆ ಈ ಪೋಲಿಸರು ಬರ್ತಾರಾ? ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ಅದನ್ನು ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ವಿಶ್ವ ಹಿಂದೂ ಪರಿಷತ್‍ನವರು ಭಜರಂಗದಳದವರು ಇವರ ಹೊಟ್ಟೆ ಮೇಲೆ ಹೊಡೆಯಲು, ದೇಶ ಹಾಳು ಮಾಡುವುದಕ್ಕೆ ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ.

    ಇಷ್ಟು ವರ್ಷ ಹಲಾಲ್ ತಿಂದಿದ್ದೇವೆ, ನಮಗೆ ಏನಾಗಿದೆ ಚೆನ್ನಾಗಿದ್ದಿವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಗುತ್ತಾ, ನಮ್ಮ ದೇವರು ಮೆಚ್ಚಲ್ವಾ, ಹೀಗಂತ ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಹೇಳಿಲ್ಲವಲ್ಲ. ಹಲಾಲ್ ಈಗಿನಿಂದಲ್ಲ, ಹಲವಾರು ವರ್ಷಗಳಿಂದಲೂ ನಡೆಯುತ್ತಿದೆ. ಎಂದರು. ಇದೇ ವೇಳೆ ಕೊರೊನಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಆಗ ವಿಶ್ವ ಹಿಂದೂ ಪರಿಷತ್ – ಭಜರಂಗದಳದವರು ಎಲ್ಲಿ ಹೋಗಿದ್ದರು? ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಆಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಚಪ್ಪಲಿ ಏಟು ತಿನ್ನಬಹುದು ಆದರೆ, ದುಡ್ಡೇಟು ತಿನ್ನೋಕೆ ಆಗಲ್ಲ: ಡಿ.ಕೆ ಶಿವಕುಮಾರ್

    ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬಸವರಾಜ ಬೊಮ್ಮಾಯಿಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು. ಸಮಾಜ ಹೊಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ. ನೀವು ಯಾವ ಸಂವಿಧಾನವನ್ನು ಗೌರವಿಸುತ್ತಿದ್ದೀರಾ, ಯಾಕೆ ಅಂಬೇಡ್ಕರ್ ಜಯಂತಿ ಆಚರಿಸುತ್ತೀರಿ ಎಂದು ತಿಳಿದುಕೊಳ್ಳಿ ಎಂದು ಕೆಂಡಕಾರಿದ್ದಾರೆ.

    ನನಗೆ ಓಟ್ ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಬದುಕಬೇಕು. ಹಾಗಾಗಿ ನಾನು ಮೌನವಾಗಿರಲು ಸಾಧ್ಯವಿಲ್ಲ. ಈ ಬಗ್ಗೆ ಕಾಂಗ್ರೆಸ್‍ನವರಿಗೆ ಮಾತನಾಡಲು ತಾಕತ್ತಿಲ್ಲ. ಹಿಂದೂಗಳು ಓಟ್ ಹಾಕುತ್ತಾರೋ, ಇಲ್ಲವೋ ಎಂಬ ಭಯದಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ಪ್ರತಿಭಟನೆ

  • ದಲಿತರು, ಸವರ್ಣೀಯರ ಮಧ್ಯೆ ವಿವಾದ ಸೃಷ್ಟಿಸಲು ಕುಮಾರಸ್ವಾಮಿ ಯತ್ನ: ಆಂದೋಲಾ ಶ್ರೀ ಕಿಡಿ

    ದಲಿತರು, ಸವರ್ಣೀಯರ ಮಧ್ಯೆ ವಿವಾದ ಸೃಷ್ಟಿಸಲು ಕುಮಾರಸ್ವಾಮಿ ಯತ್ನ: ಆಂದೋಲಾ ಶ್ರೀ ಕಿಡಿ

    ಕಲಬುರಗಿ: ರಾಜ್ಯದಲ್ಲಿ ದಲಿತರ ಮತ್ತು ಸವರ್ಣೀಯರ ಮಧ್ಯೆ ದೊಡ್ಡ ವಿವಾದ ಸೃಷ್ಟಿಸಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯತ್ನಿಸುತ್ತಿದ್ದಾರೆ ಎಂದು ಶ್ರೀ ರಾಮ ಸೇನೆಯ ರಾಜ್ಯ ಗೌರವಾಧ್ಯಕ್ಷ ಹಾಗೂ ಕರುಣೇಶ್ವರ ಮಠದ ಆಂದೋಲಾ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಕಿಡಿಕಾರಿದ್ದಾರೆ.

    ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಎಷ್ಟು ಜನ ದಲಿತ ಮತ್ತು ಹಿಂದೂಳಿದ ವರ್ಗದವರನ್ನು ನಿಮ್ಮ ಮನೆಗೆ ಮತ್ತು ದೇವರ ಕೋಣೆಗೆ ಕರೆಸಿಕೊಂಡಿದ್ದಿರಿ? ಬಹಿರಂಗಪಡಿಸಿ ಎಂದು ಸವಾಲೆಸೆದರು. ಸರ್ಕಾರವನ್ನು ಟೀಕಿಸುವ ಭರದಲ್ಲಿ ಮಠ-ಮಾನ್ಯಗಳನ್ನು ಎಳೆದು ತಂದು ವಿವಾದ ಸೃಷ್ಟಿ ಮಾಡುತ್ತಿದ್ದಿರಿ ಇದು ಸರಿಯಲ್ಲ ಎಂದರು. ಇದನ್ನೂ ಓದಿ: ಮುಸ್ಲಿಂ ಶಿಲ್ಪಿಗಳನ್ನು ಯಾವಾಗ ಬಹಿಷ್ಕರಿಸುತ್ತೀರಿ: ಹೆಚ್‌ಡಿಕೆ ಪ್ರಶ್ನೆ

    ನೀವು ನಿಮ್ಮ ಮನೆಗಳನ್ನು ಮತ್ತು ರೆಸಾರ್ಟ್‍ಗಳನ್ನು ದಲಿತರಿಂದ ಕಟ್ಟಿಸಿಕೊಂಡಿದ್ದಿರಿ. ದೇವಸ್ಥಾನ ನಾವು ಕಟ್ಟಿದ್ದೇವೆ ಎಂದು ದಲಿತರು ದೇವಸ್ಥಾನಕ್ಕೆ ಪ್ರವೇಶ ಮಾಡುತ್ತೇವೆ ಎಂದು ಬಂದಿಲ್ಲ ಎಂದರು. ನೀವು ಮುಖ್ಯಮಂತ್ರಿ ಇದ್ದಾಗ ಮುಜರಾಯಿ ಇಲಾಖೆಯಿಂದ ದಲಿತರಿಗೆ ಪ್ರವೇಶ ಕೊಟ್ಟಿದ್ದಿರಿ ಎಂದರು.

    ಹಲಾಲ್ ವಿರುದ್ಧ ಹೋರಾಟ ವಿಚಾರವಾಗಿ ಮಾತನಾಡಿದ ಅವರು, ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳ ಹೋರಾಟ ಸ್ವಾಗತಾರ್ಹ. ಹಿಂದೂಗಳು ಯಾವುದೇ ಕಾರಣಕ್ಕೂ ಮುಸ್ಲಿಂರ ಹಲಾಲ್ ಅಂಗಡಿಗೆ ಹೋಗಿ ಮಾಂಸ ಖರೀದಿಸಬಾರದು ಎಂದರು. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

    ಹಲಾಲ್ ಅಂಗಡಿಗಳಲ್ಲಿ ಮಾಂಸ ಖರೀದಿ ಮಾಡಿದರೆ, ಹಿಂದೂ ವಿರೋಧಿಗಳ ಶಕ್ತಿ ಕೈ ಬಲಪಡಿಸಿದಂತಾಗುತ್ತದೆ. ಹಿಂದೂಗಳಿಗೆ ದ್ರೋಹ ಬಗೆದಂತಾಗುತ್ತದೆ ಎಂದರು. ಮುಸ್ಲಿಂ ವ್ಯಕ್ತಿ ಚೂರಿ ಹಾಕಿದ ಮಾಂಸ, ಮುಸ್ಲಿಂರಿಗೆ ಮಾತ್ರ ಶ್ರೇಷ್ಠವಾಗಿರುತ್ತದೆ. ಅದು ಹಿಂದೂಗಳಿಗೆ ಎಂಜಲಾಗುತ್ತದೆ ಎಂದು ಹೇಳಿದ್ದಾರೆ.

  • ಹಲಾಲ್ ಮಾಂಸ ಮುಸ್ಲಿಮರ ದೇವರಿಗೆ ಪ್ರಿಯ, ನಮ್ಮ ದೇವರಿಗೆ ಎಂಜಲು : ಸಿ.ಟಿ ರವಿ

    ಹಲಾಲ್ ಮಾಂಸ ಮುಸ್ಲಿಮರ ದೇವರಿಗೆ ಪ್ರಿಯ, ನಮ್ಮ ದೇವರಿಗೆ ಎಂಜಲು : ಸಿ.ಟಿ ರವಿ

    ಬೆಂಗಳೂರು: ಮುಸ್ಲಿಮರು ಅವರ ದೇವರಿಗೆ ಒಪ್ಪಿಸಿದ ಹಲಾಲ್ ಮಾಂಸ ಅವರ ದೇವರಿಗೆ ಪ್ರಿಯ ನಮ್ಮ ದೇವರಿಗೆ ಎಂಜಲು ಎಂದು ಶಾಸಕ ಸಿ.ಟಿ ರವಿ ಹೇಳಿದ್ದಾರೆ.

    ಹಲಾಲ್ ಮಾಂಸಕ್ಕೆ ಹಿಂದು ಸಂಘಟನೆಗಳು ಬಹಿಷ್ಕಾರ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲಾಲ್ ಮಾಂಸ ಉಪಯೋಗಿಸಿ ಅಂತ ಹೇಗೆ ಹೇಳುವ ರೈಟ್ಸ್ ಇದೆಯೋ ಹಾಗೇ. ಅದನ್ನ ಬಹಿಷ್ಕಾರಿಸಿ ಅಂತ ಹೇಳುವ ರೈಟ್ಸ್ ನಮಗಿದೆ. ಹಲಾಲ್ ಅಂದರೆ ಮುಸ್ಲಿಂರ ಧಾರ್ಮಿಕ ಕ್ರಿಯೆ. ಅದು ಅವರಿಗೆ ಪ್ರಿಯವಾಗಿರುತ್ತದೆ. ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಅಂತ ಏನಾದರೂ ಇದ್ಯಾ? ಸಮಾರಸ್ಯವನ್ನು ಹೇರುವುದಕ್ಕೆ ಬರುವುದಿಲ್ಲ. ಹಾಗಂತ ಸಮಾರಸ್ಯ ಒನ್ ವೇ ಅಲ್ಲ, ಅದು ಟೂ ವೇ. ಹಲಾಲ್ ಇಲ್ಲದ ಮಾಂಸ ಅವರು ತಿನ್ನುವುದಕ್ಕೆ ರೆಡಿಯಾದರೆ, ಹಲಾಲ್ ಆಗಿರುವ ಮಾಂಸ ಇವರು ತಿನ್ನುತ್ತಾರೆ. ಈ ಹಿಂದೆ ಇರುವಂತ ನಿಯಮಗಳನ್ನೆಲ್ಲಾ ಈಗಲೂ ಒಪ್ಪಿಕೊಳ್ಳಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹಲಾಲ್ ಮಾಂಸ ಎಂದರೇನು? ಹಲಾಲ್ ಕಟ್ ಏನು?

    ಹಲಾಲ್ ಎನ್ನುವುದು ಒಂದು ಆರ್ಥಿಕ ಜಿಹಾದ್. ಆರ್ಥಿಕ ಜಿಹಾದ್ ಅಂದರೆ ಮುಸ್ಲಿಮರು ಇನ್ನೊಬ್ಬರ ಜೊತೆ ವ್ಯಾಪಾರ ಮಾಡಬಾರದು ಅಂತ ಒಂದು ಎಕಾನಾಮಿಕ್ ಜಿಹಾದ್ ತರಹ ಉಪಯೋಗಿಸುತ್ತಾರೆ. ಹಲಾಲ್ ಮಾಂಸವನ್ನು ಉಪಯೋಗಿಸಬಾರದು ಅಂದರೆ ತಪ್ಪೇನು? ಹಲಾಲ್ ಮಾಂಸ ಅವರ ದೇವರಿಗೆ ಒಪ್ಪಿಸಿದ್ದು ಅವರಿಗೆ ಪ್ರಿಯ, ನಮ್ಮ ದೇವರಿಗೆ ಎಂಜಲು. ಒಬ್ಬ ಹಿಂದೂ ಮಟನ್ ಸ್ಟಾಲ್ ಇಟ್ಟರೆ ಮುಸ್ಲಿಮರು ಬಂದು ತಗೋತಾರಾ? ಮುಸ್ಲಿಂರ ಅಂಗಡಿಯಲ್ಲಿ ತೆಗೆದುಕೊಳ್ಳಬೇಕು ಅಂತ ನೀವು ಯಾಕೆ ಹೇಳುತ್ತೀರಾ? ಹೇಳುವುದಕ್ಕೆ ಏನು ರೈಟ್ಸ್ ಇದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ

    Eshwarappa

    ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ವಿಚಾರ: ರಾಜಕಾರಣದಲ್ಲಿ ಬಹಳ ಸಂಗತಿಗೆ ಆಧಾರ ಇರುವುದಿಲ್ಲ. ಆಧಾರ ಇದ್ದರೆ ಆಗಲೇ ಸಂಬಂಧಪಟ್ಟವರ ಮೇಲೆ ದೂರು ಕೊಡಬೇಕಿತ್ತು. ಈಶ್ವರಪ್ಪ ಕಳೆದ ನಾಲ್ಕು ದಶಕದಿಂದ ರಾಜಕೀಯದಲ್ಲಿದ್ದವರು. ಹಿಂದೆ ಇಲ್ಲದ ಆರೋಪ ಈಗ ಮಾಡುತ್ತಿದ್ದಾರೆ ಅಂದರೆ ಭವಿಷ್ಯ ರಾಜಕಾರಣ ಇರಬಹುದು. ನೇರವಾಗಿ ಮಾತಾಡುವವರಿಗೆ ಶತ್ರುಗಳ ಹೆಚ್ಚಾಗಿರುತ್ತಾರೆ. ನಾನು ನಂಬುವುದಿಲ್ಲ, ಅವರ ಹೆಸರಲ್ಲಿ ಮೋಸ ಮಾಡಿರಬಹುದು. ಸತ್ಯಾಸತ್ಯತೆ ತಿಳಿದು ಆರೋಪ ಮಾಡಬೇಕು ಎಂದಿದ್ದಾರೆ.

  • ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣೀಕೃತ ಮಾಂಸ ಮಾತ್ರ ಸೇವಿಸಬೇಕೆಂದ ಬಿಸಿಸಿಐ

    ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣೀಕೃತ ಮಾಂಸ ಮಾತ್ರ ಸೇವಿಸಬೇಕೆಂದ ಬಿಸಿಸಿಐ

    ಮುಂಬೈ: ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣೀಕೃತ ಮಾಂಸವನ್ನು ಮಾತ್ರ ಸೇವಿಸಬೇಕೆಂದು ಬಿಸಿಸಿಐ ಕಡ್ಡಾಯಗೊಳಿಸಿದೆ. ಬಿಸಿಸಿಐನ ಈ ನಿಯಮದ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

    ಬಿಸಿಸಿಐ ಆಟಗಾರರ ಡಯಟ್ ಪ್ಲಾನ್‍ನಲ್ಲಿ ಹಲಾಲ್ ಮಾಂಸ ಪದ್ಧತಿಯನ್ನು ಸೇರಿಸಿದೆ. ಮುಂಬರುವ ಐಸಿಸಿ ಟೂರ್ನಿಗಳು ನಿರ್ಣಾಯಕವಾಗಿರೋ ಕಾರಣ, ಆಟಗಾರರನ್ನು ಫಿಟ್ ಆಗಿಡಲು ಇಂಥ ಡಯಟ್ ಪ್ಲಾನ್ ಅನಿವಾರ್ಯ. ಹಾಗಾಗಿ, ಪೋರ್ಕ್ ಮತ್ತು ಬೀಫ್ ಯಾವುದನ್ನೂ ಸೇವಿಸುವಂತಿಲ್ಲ ಎಂದು ಬಿಸಿಸಿಐ ತಾಕೀತು ಮಾಡಿದೆ. ಆದರೆ, ಬಿಸಿಸಿಐನ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕನ್ನಡಿಗ ಕೆ.ಎಲ್ ರಾಹುಲ್ ಹೊರಕ್ಕೆ

    ಹಲಾಲ್ ಮಾಂಸ ಎಂದರೇನು?:
    ಹಲಾಲ್ ಮಾಂಸ ಎಂದರೆ ಕುರಿ ಕೋಳಿ ಇನ್ನಿತರ ಪ್ರಾಣಿಗಳ ಕತ್ತು ಕುಯ್ಯುವ ಮೂಲಕ ಅದರ ರಕ್ತನಾಳಗಳನ್ನು ಕತ್ತರಿಸಿ ಸಂಪೂರ್ಣ ರಕ್ತ ಹರಿದ ಬಳಿಕ ಮಾಂಸ ಮಾಡಲಾಗುತ್ತದೆ ಇದನ್ನು ಹಲಾಲ್ ಮಾಂಸ ತಯಾರಿ ಎನ್ನಲಾಗುತ್ತದೆ.  ಇದನ್ನೂ ಓದಿ: ಕಪ್ ಗೆಲ್ಲಲು ಲಕ್ಕಿ ಕಲರ್ ಆದ ಹಳದಿ ಜೆರ್ಸಿ

    https://twitter.com/VinayaPrabhu10/status/1462969882488705027

    ಟೀಂ ಇಂಡಿಯಾ ಸರ್ವಧರ್ಮೀಯ ತಂಡ. ಹಿಂದೂ, ಸಿಖ್ ಧರ್ಮದಲ್ಲಿ ಹಲಾಲ್ ಮಾಂಸ ಸೇವನೆ ನಿಷೇಧವಿದೆ. ಮುಸ್ಲಿಂ ಆಟಗಾರರಿಗೆ ಮಾತ್ರ ಹಲಾಲ್ ಮಾಂಸ ಸೇವನೆಗೆ ಅವಕಾಶ ಇದೆ. ಅವರು ಹಲಾಲ್ ಮಾಂಸ ಹೊರತುಪಡಿಸಿ ಬೇರೆ ಯಾವುದೇ ಮಾಂಸ ಸೇವಿಸುವುದಿಲ್ಲ. ಆದರೆ, ಬಿಸಿಸಿಐ ಯಾಕೆ ಇಂಥ ನಿರ್ಧಾರ ಮಾಡಿದೆ? ಬಿಸಿಸಿಐ ಹಲಾಲ್‍ಗೆ ಉತ್ತೇಜನ ಕೊಡ್ತಿದ್ಯಾ? ಸರ್ವಧರ್ಮೀಯರಿರುವ ಟೀಂ ಇಂಡಿಯಾದಲ್ಲಿ ಇದೆಂತಹ ಪದ್ಧತಿ ಅಂತ ನೆಟ್ಟಿಗರು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಚಹರ್ ಸಿಕ್ಸ್‌ಗೆ ಸೆಲ್ಯೂಟ್ ಹೊಡೆದ ರೋಹಿತ್