ಗಾಯತ್ರಿ ಪೀಠದ ಬಳಿ ಮುಖ್ಯ ವೇದಿಕೆ, ಎದುರು ಬಸವಣ್ಣ, ಸಾಸಿವೆ ಕಾಳು ಗಣಪ, ವಿರೂಪಾಕ್ಷ ದೇಗುಲದ ಬಳಿ ವೇದಿಕೆಗಳು ಸೇರಿದಂತೆ ಧ್ವನಿ ಮತ್ತು ಬೆಳಕು ಒಂದು ವೇದಿಕೆ ಸೇರಿದಂತೆ ಒಟ್ಟು 5 ವೇದಿಕೆಗಳ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದೆ.
ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸ್ಮರಿಸಿಕೊಳ್ಳುವ ಈ ವರ್ಷದ ಹಂಪಿ ಉತ್ಸವಕ್ಕೆ (Hampi Utsav) ರಾಜ್ಯ ಸರ್ಕಾರ ಮುಹೂರ್ತ ನಿಗಧಿ ಮಾಡಿದೆ. ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ನಾನಾ ಪ್ರಕಾರಗಳ ಕಲಾ ಪ್ರದರ್ಶನ, ಥರ ಥರದ ಕಾರ್ಯಕ್ರಮಗಳು ಈ ಉತ್ಸವದ ಪ್ರಧಾನ ಆಕರ್ಷಣೆ. ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಅಂಥಾದ್ದೊಂದು ಸುವರ್ಣಾವಕಾಶ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ (Nimika Ratnakar) ಅವರಿಗೆ ಲಭಿಸಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಶೇಕ್ ಇಟ್ ಪುಷ್ಪವತಿ (Shake It Pushpavati) ಎಂಬ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಪ್ರಸಿದ್ಧಿ ಪಡೆದುಕೊಂಡಿರುವವರು ನಿಮಿಕಾ ರತ್ನಾಕರ್. ವಿಶೇಷವೆಂದರೆ, ಈ ಹಾಡೇ ಅವರನ್ನು ಹಂಪಿ ಉತ್ಸವದಲ್ಲಿ ಭಾಗಿಯಾಗಿ ನೃತ್ಯ ಪ್ರದರ್ಶನ ನೀಡುವ ಅವಕಾಶ ಕಲ್ಪಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಗಳನ್ನು ಮಾಡಿಕೊಂಡಿರುವ ನಿಮಿಕಾ, ಆ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.
ಹಂಪಿ ಎಂದರೇನೇ ಅದೇನೋ ಆಕರ್ಷಣೆ. ನಿಮಿಕಾ ರತ್ನಾಕರ್ ಪಾಲಿಗೂ ಅಂಥಾದ್ದೊಂದು ಸೆಳೆತವಿದೆಯಂತೆ. ಆದರೆ ಈ ವರೆಗೂ ಅಲ್ಲಿಗೆ ಭೇಟಿ ಕೊಡುವ ಅವಕಾಶ ಕೂಡಿ ಬಂದಿರಲಿಲ್ಲ. ಕೆಲ ಹಾಡುಗಳ ಮೂಲಕವಷ್ಟೇ ಹಂಪಿಯನ್ನು ಕಣ್ತುಂಬಿಕೊಂಡಿದ್ದ ತಮ್ಮ ಪಾಲಿಗೆ ಆ ಪರಿಸರದಲ್ಲಿ ಬೆರೆಯುವ ಅವಕಾಶ ಸಿಕ್ಕಿದ್ಚದು ಖುಷಿ ಕೊಟ್ಟಿದೆ ಎಂಬುದು ನಿಮಿಕಾ ಮನದ ಮಾತು. ಈ ಹಿಂದೆ ನಿಮಿಕಾ ದಸರಾ ಉತ್ಸವದಲ್ಲಿಯೂ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಅವರ ಪೋಷಕರು ಹಾಜರಿದ್ದು ಖುಷಿಗೊಂಡಿದ್ದರು. ಈ ಬಾರಿಯೂ ಪೋಷಕರೊಂದಿಗೆ ಹಂಪಿ ಉತ್ಸವದಲ್ಲಿ ಭಾಗಿಯಾಗೋ ಇಂಗಿತ ನಿಮಿಕಾರದ್ದು.
ಅಷ್ಟಕ್ಕೂ ಶೇಕ್ ಇಟ್ ಪುಷ್ಪವತಿ ಎಂಬ ಹಾಡು ನಿಮಿಕಾಗೆ ಒಂದಿಡೀ ಕರ್ನಾಟಕಕ್ಕೆ ಪ್ರದಕ್ಷಿಣೆ ಹಾಕುವ ಅವಕಾಶ ಕಲ್ಪಿಸುತ್ತಿದೆ. ಈಗಾಗಲೇ ಅವರು ರಾಜ್ಯದ ನಾನಾ ಪ್ರದೇಶಗಳಲ್ಲಿ ಈ ನೃತ್ಯ ಪ್ರದರ್ಶನ ನೀಡಿದ್ದಾರೆ. ಇದೀಗ ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರೋದು ಅವರ ಪಾಲಿಗೆ ವಿಶೇಷ ಘಳಿಗೆ. ಯಾಕೆಂದರೆ, ಉತ್ತರ ಕರ್ನಾಟಕ ಮಂದಿಯ ಪ್ರೀತಿ, ಅಭಿಮಾನ ಪಡೆದುಕೊಂಡಿರುವ ಅವರಿಗೆ, ಅಭಿಮಾನಿಗಳ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಸುಯೋಗ ಕೂಡಿ ಬಂದಿದೆ.
ವಿಜಯನಗರ: ಐತಿಹಾಸಿಕ ಹಂಪಿ ಉತ್ಸವ (Hampi Utsav) ಸಮಾರೋಪ ಸಮಾರಂಭದ ವೇಳೆ ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಕೇರ್ (Kailash Kher) ಮೇಲೆ ಕಿಡಿಗೇಡಿಗಳು ಬಾಟಲಿ ಎಸೆದಿದ್ದಾರೆ.
ಕನ್ನಡ ಹಾಡು (Kannada Song) ಹಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿನಿಂದ ಪ್ರೇಕ್ಷಕರ ಗ್ಯಾಲರಿಯಿಂದ ನೀರಿನ ಬಾಟಲಿ (Water Bottle) ಎಸೆದು ಅಪಮಾನ ಮಾಡಿದ್ದಾರೆ.
ಹಂಪಿ ಉತ್ಸವ ಸಮಾರೋಪ ಸಮಾರಂಭ ನಡೆಯುತ್ತಿದ್ದ ಗಾಯತ್ರಿ ಪೀಠದ ವೇದಿಕೆಯಲ್ಲಿ ಈ ಘಟನೆ ನಡೆದಿದೆ. ಬಾಟಲಿ ಎಸೆದ ಬಳಿಕವೂ ಕೈಲಾಶ್ ಕೇರ್ ಗಾಯನ ಮುಂದುವರಿಸಿದ್ದಾರೆ. ಅನುಮಾನದ ಹಿನ್ನೆಲೆಯಲ್ಲಿ ಸದ್ಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಜನವರಿ 27ರಿಂದ 3 ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದ ಲೋಗೋವನ್ನು ಬಿಡುಗಡೆಗೊಳಿಸಲಾಗುವುದು ಎಂದು ವಿಜಯನಗರ (Vijayanagara) ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ (shashikala Jolle) ತಿಳಿಸಿದರು.
ಅನಾರೋಗ್ಯದ ನಿಮಿತ್ತ ವೀಡಿಯೋ ಕಾನ್ಪರೆನ್ಸ್ ಮೂಲಕ ಹಂಪಿ ಉತ್ಸವದ ಪೂರ್ವ ಸಿದ್ಧತೆಗಳ ಸಭೆಯನ್ನು ನಡೆಸಿದ ಉಸ್ತುವಾರಿ ಸಚಿವೆ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದುಕೊಂಡರು. ಹಂಪಿ ಉತ್ಸವ (Hampi Utsav) ರಾಜ್ಯ ಮಟ್ಟದ ಕಾರ್ಯಕ್ರಮ. ದಸರಾ (Dasara) ನಂತರ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರುವ ಉತ್ಸವವಾಗಿದೆ. ಈ ಉತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆಗಳನ್ನು ಚುರುಕುಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಲಕ್ಷಾಂತರ ಜನರನ್ನು ಸೆಳೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಯಾವುದೇ ರೀತಿಯ ತೊಂದರೆಗಳು ಆಗಬಾರದು. ಈ ಹಿನ್ನಲೆಯಲ್ಲಿ ಶುದ್ಧ ಕುಡಿಯುವ ನೀರು, ಆಹಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು. ಗಣ್ಯವ್ಯಕ್ತಿಗಳು ಹಾಗೂ ಕಲಾವಿದರ ಪಟ್ಟಿಯನ್ನು ಶೀಘ್ರವಾಗಿ ಅಂತಿಮಗೊಳಿಸಲು ಸೂಚನೆ ನೀಡಿದರು. ಈಗಾಗಲೇ ಹಂಪಿ ಉತ್ಸವದ ಲೋಗೋ ಸಿದ್ಧಗೊಂಡಿದ್ದು, ಈ ಲೋಗೋವನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಬಿಡುಗಡೆಗೊಳಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ 3 ಮಂತ್ರಗಳ ತಂತ್ರಕ್ಕೆ ಮೊರೆ ಹೋಗಲು ಕಾಂಗ್ರೆಸ್ ಸಿದ್ಧತೆ
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಟಿ. ವೆಂಕಟೇಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್ ನಾರಾಯಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಹಾಗೂ ಅಪರ ಜಿಲ್ಲಾಧಿಕಾರಿ ಅನುರಾಧ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಕರ್ನಾಟಕದ 4 ದಿಕ್ಕುಗಳ ರಥಯಾತ್ರೆಗೆ ಬಿಜೆಪಿ ಬ್ಲೂಪ್ರಿಂಟ್ ಏನು? ಯಾರು ಯಾವ ಕಡೆ!?
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಹಂಪಿ ಉತ್ಸವ ಆಚರಣೆ ಕುರಿತು ಯಾರು ರಾಜಕೀಯ ಮಾಡಬಾರದು ಅಂತ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಂಪಿ ಉತ್ಸವ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ವರದಿ ನೀಡಿದ ಬಳಿಕ ಉತ್ಸವದ ಬಗ್ಗೆ ನಿರ್ಧಾರ ಮಾಡ್ತೀವಿ ಅಂದ್ರು.
ಆ ಭಾಗದಲ್ಲಿ ಹೆಚ್ಚು ಬರಗಾಲವಿದೆ. ಜನರ ಹಿತ ನಮಗೆ ಮುಖ್ಯ. ಉತ್ಸವ ಮಾಡಲು ಒಂದೆರಡು ದಿನ ಸಿದ್ಧತೆ ನಮಗೆ ಸಾಕಾಗೊಲ್ಲ. ಹೀಗಾಗಿ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ. ಇದೇ ವೇಳೆ ಭಿಕ್ಷೆ ಎತ್ತಿ ಉತ್ಸವ ಮಾಡ್ತೀನಿ ಅಂದವರಿಗೆ ಟಾಂಗ್ ನೀಡಿದ ಅವರು, ಇಂತಹ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ರಾಜಕಾರಣ ಮಾಡೋರಿಗೆ ಈಗಾಗಲೇ ಅನೇಕ ಸಾರಿ ಉತ್ತರ ಸಿಕ್ಕಿದೆ ಎಂದು ಮಾಜಿ ಸಚಿವ ಶ್ರೀರಾಮುಲು, ಜನಾರ್ದನ ರೆಡ್ಡಿಗೆ ತಿರುಗೇಟು ನೀಡಿದರು.
ಸೋಲಿನ ಭಯಕ್ಕೆ ಬಂಧನ!
ಚಂದ್ರಶೇಖರ್ ರಾವ್ ಸೋಲಿನ ಭಯದಲ್ಲಿ ತೆಲಂಗಾಣ ಕಾಂಗ್ರೆಸ್ ಕಾರ್ಯಾಧ್ಯಕ್ಷ ರೇವಂತ್ ರೆಡ್ಡಿಯನ್ನ ಬಂಧಿಸಿದ್ದಾರೆ ಅಂತ ಸಚಿವ ತೆಲಂಗಾಣ ಉಸ್ತುವಾರಿ ಡಿಕೆಶಿವಕುಮಾರ್ ಆರೋಪಿಸಿದ್ದಾರೆ. ಬೆಳಗ್ಗೆ 4 ಗಂಟೆಗೆ ರೇವಂತ್ ರೆಡ್ಡಿ ಅವರನ್ನು ಬಂಧಿಸಿದ್ದಾರೆ. ಮನೆ ಬಾಗಿಲು, ಬೆಡ್ ರೂಂ ಒಡೆದು ಹಾಕಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್ ರಾವ್ ಸೋಲಿನ ಭೀತಿಯಿಂದಾಗಿ ಹೀಗೆ ಮಾಡ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ಚಂದ್ರಶೇಖರ್ ರಾವ್ ಮಾಡಿದ್ದಾರೆ. ಇದನ್ನ ನಾನು ಖಂಡಿಸುತ್ತೇನೆ ಅಂದ್ರು.
ಘಟನೆ ಕುರಿತು ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡ್ತೀವಿ. ಚಂದ್ರಶೇಖರ್ ರಾವ್ ಗೆ ಸೋಲಿನ ಭೀತಿಯಿಂದ ಜನರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ತೆಲಂಗಾಣ ಜನರಿಗೆ ಚಂದ್ರಶೇಖರ್ ರಾವ್ ದ್ರೋಹ ಮಾಡಿದ್ದಾರೆ ಅಂತ ಗುಡುಗಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಗೆಲ್ಲುತ್ತೆ. ಸಂಪೂರ್ಣ ಬಹುಮತ ಕಾಂಗ್ರೆಸ್ ಮೈತ್ರಿ ಕೂಟಕ್ಕೆ ಬರುತ್ತೆ ಅಂತ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
It's highly condemnable that Telangana Police arrested Congress Working President & Kodangal MLA Revanth Reddy at 3am today because CM K. Chandrasekhar Rao is holding a rally there.
We appeal to EC that such intimidation goes against the spirit of free & fair elections. pic.twitter.com/BPXlZ1fwbq
ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಸವಾಲು ಹಾಕಿದ್ದಾರೆ. ಹಂಪಿ ಉತ್ಸವ ಕೈಬಿಡುವ ನಿಲುವಿಗೆ ಜನಾರ್ದನ ರೆಡ್ಡಿ ಫೇಸ್‍ಬುಕ್‍ನಲ್ಲಿ ಕಿಡಿಕಾರಿದ್ದಾರೆ.
ಕೋಟಿ ಕೋಟಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ಮಾಡ್ತೀರಿ. ಉಪ ಚುನಾವಣೆ ಗೆಲ್ಲೋದಕ್ಕೆ ನೀರಿನಂತೆ ಹಣ ಖರ್ಚು ಮಾಡ್ತೀರಿ. ಅವೆಲ್ಲದಕ್ಕೂ ಇರದ ಬರ, ಹಂಪಿ ಉತ್ಸವದ ವಿಚಾರಕ್ಕೆ ಏಕೆ ಬರುತ್ತೆ ಅಂತ ಪ್ರಶ್ನಿಸಿದ್ದಾರೆ. ಅಲ್ಲದೇ ಹಂಪಿ ಉತ್ಸವ ಮಾಡಲು ನಿಮ್ಮ ಕೈಲಿ ಆಗಲಿಲ್ಲ ಅಂದ್ರೆ ಹೇಳಿ. ನಾನು ದುಡ್ಡು ಕೊಡ್ತೇನೆ. ಹಂಪಿ ಉತ್ಸವ ನಡೆಸಿ ಅಂತ ದೋಸ್ತಿ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ.
ಬಳ್ಳಾರಿಗೆ ನಾನು ಬರಲು ಸಾಧ್ಯವಾಗದಿದ್ದರೂ ಕೂಡ ಜಿಲ್ಲೆಯ ಜನರಿಗೋಸ್ಕರ ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದಾರೆ.
ರೆಡ್ಡಿ ಪೋಸ್ಟ್ ನಲ್ಲೇನಿದೆ?:
ಹಂಪಿ ಉತ್ಸವ 3 ದಿನ ಅದ್ಧೂರಿಯಾಗಿಯೇ ನಡೆಯಲಿ. ನಾಡಿನಲ್ಲಿ ವಿವಿಧೆಡೆ ಉತ್ಸವಗಳನ್ನು ಆಚರಿಸಲು ಉತ್ಸುಕತೆ ತೋರುತ್ತಿರುವ ರಾಜ್ಯ ಸರ್ಕಾರ, ಕೇವಲ 3 ದಿನ ನಡೆಯುವ ಹಂಪಿ ಉತ್ಸವ ವಿಷಯದಲ್ಲಿ ಏನಾದರೂ ಒಂದು ಕುಂಟು ನೆಪ ಹೇಳುತ್ತಿರುವುದು ದುರಾದೃಷ್ಟಕರ. ನಾಡಿನ ವಿವಿಧ ಉತ್ಸವಗಳನ್ನು ನಡೆಸುವ ಸರ್ಕಾರ ಹಂಪಿ ಉತ್ಸವ ಆಚರಿಸಲು ಏನಾದರೊಂದು ನೆಪ ಹೇಳುತ್ತಲೇ ಬರುತ್ತಿದೆ. ಇಡೀ ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿರುವ ಹಂಪಿ ಉತ್ಸವ ರಾಜ್ಯದ ಜನತೆಗೆ ಅದರಲ್ಲೂ ಉತ್ತರ ಕರ್ನಾಟಕದ ಜನತೆಗೆ ಭಾವನಾತ್ಮಕವಾದ ಬೆಸುಗೆಯನ್ನು ಬೆಸೆಯುವಂಥದ್ದಾಗಿದೆ.
ಇದು ವ್ಯವಸ್ಥಿತವಾಗಿ ಸರ್ಕಾರದಿಂದ ಮತ್ತು ಕೆಲ ಸಚಿವರಿಂದ ಬಳ್ಳಾರಿಗರನ್ನು ಅದರಲ್ಲೂ ಉತ್ತರ ಕರ್ನಾಟಕದ ಜನರನ್ನು ಕಡೆಗಣಿಸುವ ಪ್ರಯತ್ನವಾಗಿದೆ. ನವೆಂಬರ್ 3 ರಂದು ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ?. ಬಿಜೆಪಿಯ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಭಿನ್ನವಿಸಿಕೊಂಡರೂ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ?
ಉಪಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ?. ಹಂಪಿ ಉತ್ಸವಕ್ಕೆ ತನ್ನದೇ ಆದ ಇತಿಹಾಸವಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಎಂ.ಪಿ. ಪ್ರಕಾಶ್ ಅವರು ಹಂಪಿ ಉತ್ಸವವನ್ನು ಮೊಟ್ಟ ಮೊದಲ ಬಾರಿಗೆ 1988ರಲ್ಲಿ ಆಚರಿಸಲು ಅವಕಾಶ ನೀಡಿದ್ದರು. ಇದಕ್ಕೂ ಮುನ್ನ ದಾಸಶ್ರೇಷ್ಠರೂ, ಮನುಕುಲದ ಸಾಮಾಜಿಕ ಚಿಕಿತ್ಸಕರೂ ಆದ ಕನಕ-ಪುರಂದರರ ಉತ್ಸವ ನಡೆಯುತ್ತಿತ್ತು. ಹಂಪಿ ಉತ್ಸವದ ವ್ಯಾಪ್ತಿಯನ್ನು ದೇಶದುದ್ದಕ್ಕೂ ಪಸರಿಸುವಂತೆ ಮಾಡಿದ ಕೀರ್ತಿ ಎಂ.ಪಿ.ಪ್ರಕಾಶ್ ಅವರಿಗೆ ಸಲ್ಲುತ್ತದೆ.
ಜನರ ಭಾವನೆಗಳನ್ನು ಪರಸ್ಪರ ಪ್ರೀತಿ, ಪ್ರೇಮ, ಸಾಮರಸ್ಯದೊಂದಿಗೆ ಸಮೀಕರಿಸುವ ಈ ಸಾಂಸ್ಕೃತಿಕ ಹಬ್ಬವನ್ನು ಕಡೆಗಣಿಸುವ ಮೂಲಕ ಸರ್ಕಾರ ಜನರ, ಕಲಾವಿದರ, ರೈತರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಸರ್ಕಾರದ ಈ ಕ್ರಮದಿಂದ ಬೇಸತ್ತಿರುವ ಮಠಾಧೀಶರೇ ಇಂದು ಬೀದಿಗೆ ಇಳಿದು ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯ ದ್ಯೋತಕವಾದ ಹಂಪಿ ಉತ್ಸವ ಆಚರಿಸಲು ಭಿಕ್ಷೆ ಯಾಚಿಸುತ್ತಿದ್ದಾರೆ. ಮಾಗಳ ಗ್ರಾಮದ ಶ್ರೀ ಮಳೆಯೋಗೀಶ್ವರ ಸ್ವಾಮಿಗಳು ಭಿಕ್ಷೆ ಬೇಡುವ ಮೂಲಕ ಕಲಾವಿದರ ಬೆನ್ನಿಗೆ ನಿಂತಿದ್ದಾರೆ. ಹಂಪಿ ಉತ್ಸವ ಆಚರಿಸಲು ಸ್ವಾಮೀಜಿಗಳು ಭಿಕ್ಷೆ ಬೇಡುತ್ತಿದ್ದಾರೆಂದರೆ ಏನು ಅರ್ಥ?
ಸರ್ಕಾರ ನಡೆಸುವವರು ಇಲ್ಲಿನ ಜನರನ್ನು, ಇಲ್ಲಿನ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಗತಕಾಲದ ಇತಿಹಾಸವನ್ನು ಕಡೆಗಣಿಸುತ್ತಿದ್ದಾರೆಂದೇ ಅರ್ಥವಲ್ಲವೇ? ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಂಪಿ ಉತ್ಸವವನ್ನು ಇಡೀ ಜಗತ್ತೇ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಉತ್ಸವ ಆಚರಿಸಿದ್ದೆವು. ನಾನಾಗ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದೆ. ತದನಂತರ ಉತ್ಸವ ಅದ್ಧೂರಿಯಾಗಿ ನಡೆಯಲೇ ಇಲ್ಲ. ಈಗ ಬರಗಾಲದ ನೆಪ ಹೇಳಿ ಉತ್ಸವ ರದ್ದುಗೊಳಿಸುವುದು ಸರಿಯೇ? ಎಂ.ಪಿ.ಪ್ರಕಾಶರು 3 ದಿನ ನಡೆಸಿದ್ದ ಹಂಪಿ ಉತ್ಸವವನ್ನು ಎರಡು ದಿನ ಆಚರಿಸುವುದು ಸರಿಯೇ? ಕಾಟಾಚಾರಕ್ಕೆ ಹಂಪಿ ಉತ್ಸವ ನಡೆಸದೇ ಅದ್ಧೂರಿಯಾಗಿ ಉತ್ಸವ ನಡೆಸಲಿ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನಾನು ನೀಡುತ್ತೇನೆ.
ಹಂಪಿ ಉತ್ಸವ ನಮ್ಮ ಹೆಮ್ಮೆಯ ಹಬ್ಬ. ಈ ಉತ್ಸವ ಜನರಲ್ಲಿ ಪ್ರೀತಿ, ಬಾಂಧವ್ಯ, ಉಲ್ಲಾಸಗಳ ಜೊತೆ ಸಾಮರಸ್ಯಗಳನ್ನು ಹೆಚ್ಚಿಸುತ್ತಿದೆ. ಅಷ್ಟೇ ಅಲ್ಲ ಗತವೈಭವದ ಮೆರಗು, ನೆನಪು, ಸ್ಮರಣೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಒಂದು ಪ್ರತೀಕವಾಗಿದೆ. ಹಂಪಿ ಉತ್ಸವ ಯಾವುದೇ ಕಾರಣಕ್ಕೂ ಕಾಟಾಚಾರಕ್ಕೆ ನಡೆಯಬಾರದು. 3 ದಿನವೂ ಅದ್ಧೂರಿಯಾಗಿಯೇ ನಡೆಯಬೇಕು. ಬಳ್ಳಾರಿಗೆ ನಾನು ಬರಲು ಸಾಧ್ಯವಾಗದೇ ಇರುವುದರಿಂದ ನನ್ನ ಸಹಪಾಠಿಗಳ ಜಿಲ್ಲೆಯ ಜನತೆಯ ಕಲಾರಾಧನೆಯ ಉತ್ಸವಕ್ಕೆ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ನೆರವು ಮತ್ತು ಸಹಕಾರ ನೀಡಲು ಬದ್ಧನಾಗಿದ್ದೇನೆ.
ಬಳ್ಳಾರಿ ಜಿಲ್ಲೆಯ ಜನರೂ ಸೇರಿದಂತೆ ನೆರೆಯ ವಿವಿಧ ಜಿಲ್ಲೆಗಳ ಜನರು ವರ್ಷದಿಂದ ವರ್ಷಕ್ಕೆ ಕಣ್ಣಲ್ಲಿ ಕಣ್ಣಿಟ್ಟು ಹಂಪಿ ಉತ್ಸವ ಸಡಗರಕ್ಕೆ ಕಾದು ಕುಳಿತಿರುತ್ತಾರೆ. ಅವರಿಗೆಲ್ಲ ನಿರಾಶೆಯಾಗಬಾರದು. ಒಟ್ಟಿನಲ್ಲಿ, ಹಂಪಿ ಉತ್ಸವ 3 ದಿನಗಳ ಕಾಲ ಸಡಗರ, ಸಂಭ್ರಮಗಳಿಂದ ಜರುಗಬೇಕೆನ್ನುವುದೇ ನನ್ನ ಇಚ್ಛೆಯಾಗಿದೆ ಅಂತ ರೆಡ್ಡಿ ಬರೆದುಕೊಂಡಿದ್ದಾರೆ.
ಬಳ್ಳಾರಿ: ರಾಜ್ಯದೆಲ್ಲೆಡೆ ಬರಗಾಲ ಪರಿಸ್ಥಿತಿಯಿದೆ. ಆದ್ರೆ ಅದ್ಧೂರಿಯಾಗಿ ಮಾಡೋ ಮೈಸೂರು ದಸರಾಗೆ ಇಲ್ಲದ ಬರದ ಭೀತಿ ಬಳ್ಳಾರಿ ಹಂಪಿ ಉತ್ಸವಕ್ಕೆ ತಟ್ಟಿದೆ. ಹೀಗಾಗಿ ಹಂಪಿ ಉತ್ಸವ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸ್ಥಳೀಯರು ಇದೀಗ ಸಿಡಿದೆದ್ದಿದ್ದಾರೆ.
ಸರ್ಕಾರದಿಂದ ಹಠಕ್ಕೆ ಬಿದ್ದು ಟಿಪ್ಪು ಜಯಂತಿಯ ಆಚರಣೆ ಮತ್ತೊಂದೆಡೆ ಸಂಭ್ರಮ ಮೈಸೂರು ದಸರಾ ಆಚರಣೆ. ಆದರೆ ಈ ಬಾರಿ ನಮ್ಮ ನಾಡಿನ ಪರಂಪರೆ ಸಂಸ್ಕೃತಿಯ ಪ್ರತೀಕ ಹಂಪಿ ಉತ್ಸವ ನೋಡುವ ಸೌಭಾಗ್ಯವಿಲ್ಲ. ಹೌದು ವಿಶ್ವವಿಖ್ಯಾತ ಹಂಪಿ ಉತ್ಸವವನ್ನ ಈ ಬಾರಿ ರದ್ದುಗೊಳಿಸಲಾಗಿದೆ. ರಾಜ್ಯ ಸೇರಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ಭೀಕರ ಬರವಿದೆಯೆಂದು ಹಂಪಿ ಉತ್ಸವಕ್ಕೆ ಈ ಬಾರಿ ಬ್ರೇಕ್ ಹಾಕಲಾಗಿದೆ ಅಂತ ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದನ್ನು ಓದಿ: ಈ ಬಾರಿ ಹಂಪಿ ಉತ್ಸವ ಕೈಬಿಡಲು ಸರ್ಕಾರ ನಿರ್ಧಾರ: ಡಿ.ಕೆ.ಶಿವಕುಮಾರ್
ಹಂಪಿ ಉತ್ಸವಕ್ಕಾಗಿ ಸರ್ಕಾರ ಪ್ರತಿ ವರ್ಷ ಬಜೆಟ್‍ನಲ್ಲಿ ಪ್ರತ್ಯೇಕವಾಗಿ ಅನುದಾನ ಮೀಸಲಿಡುತ್ತಿತ್ತು. ಆದ್ರೆ ಈ ಬಾರಿಯ ಬಜೆಟ್‍ನಲ್ಲಿ ಪ್ರತ್ಯೇಕ ಅನುದಾನವಿರಲಿ ಉತ್ಸವದ ಬಗ್ಗೆ ಪ್ರಸ್ತಾಪವೇ ಆಗಿಲ್ಲ. ಇದೀಗ ಬರದ ನೆಪವೊಡ್ಡಿ ಹಂಪಿ ಉತ್ಸವ ರದ್ದುಗೊಳಿಸಿರುವುದರಿಂದ ಬಳ್ಳಾರಿ ಜಿಲ್ಲೆಯ ಜನರು ಸಿಡಿದೆದ್ದಿದ್ದಾರೆ. ಹಂಪಿ ಉತ್ಸವ ನಡೆಸಲೇಬೇಕೆಂದು ಗಣಿನಾಡಿನ ಜನ ಒತ್ತಾಯಿಸುತ್ತಿದ್ದಾರೆ. ಮಾತ್ರವಲ್ಲದೇ ಅನುದಾನ ಇಲ್ಲದಿದ್ದರೂ ಪರವಾಗಿಲ್ಲ ಚಂದಾ ಎತ್ತಿಯಾದ್ರೂ ಉತ್ಸವ ಮಾಡಿ ಅಂತಾ ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ. ಮಾಗಳ ಗ್ರಾಮದ ಗ್ರಾಮಸ್ಥರು ಚಂದಾ ಎತ್ತಿ ಹಣವನ್ನ ಗ್ರಾಮ ಪಂಚಾಯತಿ ಪಿಡಿಓಗೆ ಸಲ್ಲಿಸುವ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ.
ಪ್ರತಿ ವರ್ಷ ಹಂಪಿ ಉತ್ಸವವನ್ನ ನಡೆಸುವ ಮೂಲಕ ನಮ್ಮ ನಾಡಿನ ಕಲೆ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಲಾಗುತ್ತಿತ್ತು. ಆದ್ರೆ ಈ ವರ್ಷ ಬರದ ನೆಪವೊಡ್ಡಿ ಬಳ್ಳಾರಿ ಜಿಲ್ಲೆಯ ಹಂಪಿ ಉತ್ಸವವನ್ನ ರದ್ದುಗೊಳಿಸುವ ಮೂಲಕ ಸರ್ಕಾರ ಮತ್ತೊಮ್ಮೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು: ಹಂಪಿ ಉತ್ಸವವನ್ನು ಈ ವರ್ಷ ಆಚರಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದ ನೂರು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಹಂಪಿ ಉತ್ಸವವನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷ ವಿಜೃಂಭನೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಸಚಿವರು, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ಕೇಂದ್ರ ಜಲ ಸಂಪನ್ಮೂಲ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. ಆದರೂ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ಅವರಿಗೆ ಯಾವುದೇ ಸಮಸ್ಯೆಯಾಗದಂತೆ ಯೋಜನೆ ಜಾರಿಗೆ ತರುತ್ತೇವೆ. ಗಡಿ ಭಾಗದಲ್ಲಿ ಯೋಜನೆ ರೂಪಿಸಿದ್ದು, ಈ ನೀರನ್ನು ಕೃಷಿಗೆ ಬಳಕೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನು ಓದಿ:ಮೇಕೆದಾಟು ಡ್ಯಾಂ – ಕರ್ನಾಟಕಕ್ಕೆ ಆರಂಭಿಕ ಗೆಲುವು, ತಮಿಳುನಾಡಿಗೆ ಮುಖಭಂಗ
ಕಾವೇರಿ ಜಲ ವಿವಾದದಲ್ಲಿ ಈಗಾಗಲೇ ನ್ಯಾಯಾಲಯದ ಆದೇಶ ನೀಡಿದಂತೆ ತಮಿಳುನಾಡಿಗೆ ನೀರು ಬಿಡುತ್ತೇವೆ. ಇದರಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ. ತಮಿಳುನಾಡು ಬಯಸಿದರೆ ಮಾತುಕತೆಗೆ ನಾವು ಸಿದ್ಧರಿದ್ದೇವೆ. ಸಿಎಂ ಕುಮಾರಸ್ವಾಮಿ ಅವರೊಂದಿಗೆ ಡಿಸೆಂಬರ್ 6ರಂದು ಸಭೆ ನಡೆಸಿ, ಚರ್ಚಿಸಲಾಗುತ್ತದೆ. ಇದಾದ ಬಳಿಕ ಮುಂದಿನ ನಿರ್ಧಾರಕ್ಕೆ ಕೈ ಹಾಕಲಿದ್ದೇವೆ ಎಂದು ತಿಳಿಸಿದರು.