Tag: Hangzhou

  • ಏಷ್ಯನ್‌ ಗೇಮ್ಸ್‌; 100 ಪದಕ ಗೆದ್ದು ಇತಿಹಾಸ ಬರೆದ ಭಾರತ

    ಏಷ್ಯನ್‌ ಗೇಮ್ಸ್‌; 100 ಪದಕ ಗೆದ್ದು ಇತಿಹಾಸ ಬರೆದ ಭಾರತ

    ಬೀಜಿಂಗ್: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ 2023ರಲ್ಲಿ (Asian Games) ಭಾರತ ಇತಿಹಾಸ ಸೃಷ್ಟಿಸಿದೆ. ಏಷ್ಯನ್‌ ಗೇಮ್ಸ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪದಕಗಳ ಬೇಟೆಯಲ್ಲಿ ಭಾರತ ಸೆಂಚುರಿ ಬಾರಿಸಿದೆ. ಕ್ರೀಡಾಕೂಟ ಆರಂಭವಾದ ದಿನದಿಂದ ಇಲ್ಲಿಯವರೆಗೆ ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ 100 ಪದಕಗಳನ್ನು (100 Medal Mark) ಜಯಿಸಿದ್ದಾರೆ.

    ಭಾರತದ (India) ಕ್ರೀಡಾ ಪ್ರಾಧಿಕಾರವು ಈ ಐತಿಹಾಸಿಕ ಸಾಧನೆಗೆ ಕಾರಣಕರ್ತರಾದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತವು ತನ್ನ 100 ಪದಕವನ್ನು ಪಡೆಯುತ್ತಿದ್ದಂತೆ ಇತಿಹಾಸವನ್ನು ನಿರ್ಮಿಸಲಾಗಿದೆ. ಟೀಮ್‌ ಇಂಡಿಯಾ ಸಾಧನೆಯಲ್ಲಿ ತೊಡಗಿಸಿಕೊಂಡಿರುವ ನಮ್ಮ ಕ್ರೀಡಾಪಟುಗಳ ಕನಸುಗಳ ಶಕ್ತಿ, ಸಮರ್ಪಣೆ ಮತ್ತು ತಂಡದ ಕೆಲಸಗಳಿಗೆ ಇದು ಸಾಕ್ಷಿಯಾಗಿದೆ. ಈ ಸಾಧನೆಯು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿ. ಕಠಿಣ ಪರಿಶ್ರಮ ಮತ್ತು ಉತ್ಸಾಹದಿಂದ ಏನು ಸಾಧ್ಯ ಎಂಬುದನ್ನು ಇದು ತೋರಿಸುತ್ತದೆ ಎಂದು ಬರೆದುಕೊಂಡಿದೆ. ಇದನ್ನೂ ಓದಿ: Asian Games 2023: ಜಪಾನ್‌ ಮಣಿಸಿ ಚಿನ್ನದ ಹಾರ ʻಹಾಕಿʼಕೊಂಡ ಭಾರತ – ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಗ್ರೀನ್‌ ಸಿಗ್ನಲ್‌!

    ಇದುವರೆಗೆ ಭಾರತಕ್ಕೆ 25 ಚಿನ್ನ, 35 ಬೆಳ್ಳಿ, 40 ಕಂಚಿನ ಪದಕ ಸೇರಿದಂತೆ ಒಟ್ಟು 100 ಪದಕಗಳು ಏಷ್ಯನ್‌ ಗೇಮ್ಸ್‌ನಲ್ಲಿ ಸಿಕ್ಕಿವೆ. ಇಂಡೋನೇಷ್ಯಾದಲ್ಲಿ ಕಳೆದ ಆವೃತ್ತಿಯಲ್ಲಿ ಭಾರತ 70 ಪದಕಗಳನ್ನು ಗೆದ್ದಿತ್ತು. ಅಲ್ಲಿ ದೇಶದ ಕ್ರೀಡಾಪಟುಗಳು 16 ಚಿನ್ನ, 23 ಬೆಳ್ಳಿ ಮತ್ತು 31 ಕಂಚಿನ ಪದಕಗಳನ್ನು ಗೆದ್ದು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ದಾಖಲಿಸಿದ್ದರು. ಇದನ್ನೂ ಓದಿ: Asian Games 2023: ಅರ್ಚರಿಯಲ್ಲಿ ಚಿನ್ನ ಗೆದ್ದ ಭಾರತ

    ಭಾರತ ತಂಡವು ಈ ಬಾರಿ ಅನೇಕ ಅಚ್ಚರಿಯ ಪದಕಗಳನ್ನು ಗೆದ್ದಿದೆ. ಮಹಿಳಾ ಟೇಬಲ್ ಟೆನಿಸ್‌ನಲ್ಲಿ ಸುತೀರ್ಥ ಮುಖರ್ಜಿ ಮತ್ತು ಅಯ್ಹಿಕಾ ಮುಖರ್ಜಿ ಕಂಚಿನ ಪದಕ ಗೆದ್ದರು. ಸೆಮಿಫೈನಲ್‌ನಲ್ಲಿ ಬಲಿಷ್ಠ ಚೀನಾ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಗೆಲುವು ದಾಖಲಿಸಿದ್ದು ವಿಶೇಷವಾಗಿತ್ತು.

    ಜಾವೆಲಿನ್ ಎಸೆತದಲ್ಲಿ ಕಿಶೋರ್ ಕುಮಾರ್ ಜೆನಾ ಅವರ ಬೆರಗುಗೊಳಿಸುವ 86.77 ಮೀಟರ್ ಎಸೆತವು ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಗಮನ ಸೆಳೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023- ಪುರುಷರ ಟ್ರ್ಯಾಪ್ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ

    Asian Games 2023- ಪುರುಷರ ಟ್ರ್ಯಾಪ್ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ

    ಬೀಜಿಂಗ್: ಭಾನುವಾರ ಚೀನಾದ (China) ಹ್ಯಾಂಗ್‌ಝೌನಲ್ಲಿ (Hangzhou) ನಡೆದ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಪುರುಷರ ಟ್ರ್ಯಾಪ್ ಶೂಟಿಂಗ್‌ನಲ್ಲಿ‌ (Men’s Trap Shooting) ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೊರಾವರ್ ಸಿಂಗ್ ಸಂಧು ಚಿನ್ನದ ಪದಕವನ್ನು (Gold Medal) ತಮ್ಮದಾಗಿಸಿಕೊಂಡಿದ್ದಾರೆ.

    ಪುರುಷರ ತಂಡವು ಒಟ್ಟು 361 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿತು.‌ ಕುವೈತ್‌ನ ಖಲೀದ್ ಅಲ್ಮುದಾಫ್, ತಲಾಲ್ ಅಲ್ರಾಶಿದಿ ಮತ್ತು ಅಬ್ದುಲ್ ರಹಮಾನ್ ಅಲ್ಪೈಹಾನ್ ಒಟ್ಟು 359 ಅಂಕಗಳನ್ನು ಪಡೆದುಕೊಂಡಿದ್ದು, ಬೆಳ್ಳಿ ಪದಕವನ್ನು (Silver Medal) ಪಡೆದುಕೊಂಡಿದ್ದಾರೆ. ಚೀನಾದ ಯುಹಾವೊ ಗುವೊ, ಯಿಂಗ್ ಕಿ ಮತ್ತು ಯುಹಾವೊ ವಾಂಗ್ ಒಟ್ಟು 354 ಅಂಕ ಪಡೆದು ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ – ಗಾಲ್ಫ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಕರ್ನಾಟಕದ ಅದಿತಿ ಅಶೋಕ್

    ಮಹಿಳಾ ಟ್ರ್ಯಾಪ್ ಟೀಮ್ ಈವೆಂಟ್‌ನಲ್ಲಿ ಮನೀಶಾ ಕೀರ್, ಪ್ರೀತಿ ರಜಾಕ್ ಮತ್ತು ರಾಜೇಶ್ವರಿ ಕುಮಾರಿ ಅವರು ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಇದನ್ನೂ ಓದಿ: Asian Games 2023: ಎದುರಾಳಿ ಪಾಕ್‌ ವಿರುದ್ಧ ಭಾರತಕ್ಕೆ ಜಯ – ಸ್ಕ್ವಾಷ್‌ನಲ್ಲಿ ಚಿನ್ನದ ಬೇಟೆ

    ಪುರುಷರ ಸ್ಪರ್ಧೆಯಲ್ಲಿ ಕಿನಾನ್ ಚೆನೈ 122 ಅಂಕಗಳನ್ನು ಪಡೆದಿದ್ದು, ಜೊರಾವರ್ ಸಂಧು 120 ಅಂಕಗಳನ್ನು ಪಡೆಯುವ ಮೂಲಕ ಫೈನಲ್ಸ್‌ಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: Asian Games: ಟೆನ್ನಿಸ್‌ ಮಿಶ್ರ ಡಬಲ್ಸ್‌ನಲ್ಲಿ ಭಾರತಕ್ಕೆ ಚಿನ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ – ಕಂಚು ಗೆದ್ದು ಕಿರಣ್‌ ಮಿಂಚು

    Asian Games 2023: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ – ಕಂಚು ಗೆದ್ದು ಕಿರಣ್‌ ಮಿಂಚು

    ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​ 2023ರಲ್ಲಿ (Asian Games 2023) ಭಾರತದ ಸ್ಪರ್ಧಿಗಳ ಪದಕದ ಬೇಟೆ 6ನೇ ದಿನವಾದ ಶುಕ್ರವಾರವೂ ಮುಂದುವರಿದೆ. ಏರ್ ಪಿಸ್ತೂಲ್ ಶೂಟಿಂಗ್‌, ಸ್ಕ್ವಾಷ್‌, ಟೆನ್ನಿಸ್‌ ಬಳಿಕ ಅಥ್ಲೆಟಿಕ್ಸ್‌ನಲ್ಲೂ (Athletics) ಭಾರತೀಯರ ಪದಕ ಬೇಟೆ ಶುರುವಾಗಿದೆ.

    ಶುಕ್ರವಾರ ಟೆನ್ನಿಸ್‌ನಲ್ಲಿ ಭಾರತ ಕಂಚು ಗೆದ್ದ ಬಳಿಕ ಮಹಿಳೆಯರ ಶಾಟ್‌ಪುಟ್‌ (Women’s Shot Put) ವಿಭಾಗದಲ್ಲಿ ಕಿರಣ್ ಬಲಿಯಾನ್ (Kiran Baliyan) ಕಂಚು ಗೆದ್ದು ಸಾಧನೆ ಮಾಡಿದ್ದಾರೆ. ಇದು ಈ ಬಾರಿ ಭಾರತಕ್ಕೆ ಅಥ್ಲೆಟಿಕ್ಸ್‌ನಲ್ಲಿ ಸಂದ ಮೊದಲ ಪದಕವಾಗಿದೆ. ಈ ಮೂಲಕ 8 ಚಿನ್ನ, 12 ಬೆಳ್ಳಿ, 13 ಕಂಚಿನ ಪದಕಗಳು ಸೇರಿ ಒಟ್ಟು 33 ಪದಕಗಳೊಂದಿಗೆ ಭಾರತ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ.

    ಇದಕ್ಕೂ ಮುನ್ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಭಾರತದ ಶೂಟರ್​ ಪಲಕ್​ ಚಿನ್ನ ಗೆದ್ದರೆ, ಇಶಾ ಬೆಳ್ಳಿಯ ಪದಕ ಬಾಚಿಕೊಂಡಿದ್ದರು. ಇದನ್ನೂ ಓದಿ: Asian Games 2023: ಚಿನ್ನದ ಪದಕಕ್ಕೆ ಶಾರ್ಪ್‌ ಶೂಟ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

    ಅಲ್ಲದೇ ಪುರುಷರ 50 ಮೀಟರ್ ರೈಫಲ್ 3ಪಿ ತಂಡ (ಮೂವರನ್ನೊಳಗೊಂಡ ತಂಡ) ಸ್ಪರ್ಧೆಯಲ್ಲಿ ಭಾರತ 1769 ಅಂಕಗಳೊಂದಿಗೆ ಚಿನ್ನ ಗೆದ್ದುಕೊಂಡಿತು. 1763 ಅಂಕಗಳಿಂದ ಬೆಳ್ಳಿ ಪದಕ ಹಾಗೂ 1748 ಅಂಕಗಳೊಂದಿಗೆ ಕಂಚಿನ ಪದಕ ದಕ್ಷಿಣ ಕೊರಿಯಾ ಪಾಲಾಯಿತು. ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023: ಚಿನ್ನದ ಪದಕಕ್ಕೆ ಶಾರ್ಪ್‌ ಶೂಟ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

    Asian Games 2023: ಚಿನ್ನದ ಪದಕಕ್ಕೆ ಶಾರ್ಪ್‌ ಶೂಟ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

    ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​ 2023ರಲ್ಲಿ (Asian Games 2023) ಭಾರತದ ಸ್ಪರ್ಧಿಗಳ ಪದಕದ ಬೇಟೆ ಮುಂದುವರಿದಿದೆ. 6ನೇ ದಿನವಾದ ಶುಕ್ರವಾರ ಭಾರತಕ್ಕೆ ಗನ್‌ ಶೂಟಿಂಗ್‌ನಲ್ಲಿ (Air Pistol Final) ಚಿನ್ನದ ಪದಕ ಬಂದಿದೆ.

    ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ (Air Pistol) ವೈಯಕ್ತಿಕ ಸ್ಪರ್ಧೆಯಲ್ಲಿ ಭಾರತದ ಶೂಟರ್​ ಪಲಕ್​ (Palak) ಚಿನ್ನ ಗೆದ್ದರೆ, ಇಶಾ ಬೆಳ್ಳಿಯ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದರಿಂದ 5ನೇ ದಿನ 5ನೇ ಸ್ಥಾನದಲ್ಲಿದ್ದ ಭಾರತ ಶುಕ್ರವಾರ 8 ಚಿನ್ನ, 11 ಬೆಳ್ಳಿ, 12 ಕಂಚು ಸೇರಿ ಒಟ್ಟು 31 ಪದಕಗಳೊಂದಿಗೆ ಭಾರತ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದನ್ನೂ ಓದಿ: Asian Games 2023: ಈಕ್ವೆಸ್ಟ್ರೀಯನ್‌ನಲ್ಲಿ ಭಾರತಕ್ಕೆ ಕಂಚು – ಇತಿಹಾಸ ನಿರ್ಮಿಸಿದ ಅನುಷ್‌

    ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಫೈನಲ್​ನಲ್ಲಿ ಪಲಕ್ 242.1 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಚಿನ್ನ ಗೆದ್ದಿದ್ದಾರೆ. ಇಶಾ 239.7 ಅಂಕಗಳೊಂದಿಗೆ ಬೆಳ್ಳಿ ಪದಕದೊಂದಿಗೆ 2ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಪಾಕಿಸ್ತಾನದ ತಲಾತ್ 218.2 ಅಂಕಗಳೊಂದಿಗೆ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

    ಇದು ಶುಕ್ರವಾರ ಭಾರತಕ್ಕೆ ಲಭಿಸಿದ 4ನೇ ಪದಕವಾಗಿದೆ. ಇದಕ್ಕಿಂತ ಮೊದಲು ಮಹಿಳೆಯರ ತಂಡ ಶೂಟಿಂಗ್​ನಲ್ಲಿ ಬೆಳ್ಳಿ, ಪುರುಷರ ತಂಡ ಶೂಟಿಂಗ್​ನಲ್ಲಿ ಚಿನ್ನ ಹಾಗೂ ಟೆನಿಸ್​ ಜೋಡಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದರು. ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಪುರುಷರ ತಂಡಕ್ಕೂ ಚಿನ್ನ:
    ಶುಕ್ರವಾರ ಪುರುಷರ 50 ಮೀಟರ್ ರೈಫಲ್ 3ಪಿ ತಂಡ (ಮೂವರನ್ನೊಳಗೊಂಡ ತಂಡ) ಸ್ಪರ್ಧೆಯಲ್ಲಿ ಭಾರತ 1769 ಅಂಕಗಳೊಂದಿಗೆ ಚಿನ್ನ ಗೆದ್ದುಕೊಂಡಿತು. 1763 ಅಂಕಗಳಿಂದ ಬೆಳ್ಳಿ ಪದಕ ಹಾಗೂ 1748 ಅಂಕಗಳೊಂದಿಗೆ ಕಂಚಿನ ಪದಕ ದಕ್ಷಿಣ ಕೊರಿಯಾ ಪಾಲಾಯಿತು.

    ಮಹಿಳೆಯರ ತಂಡಕ್ಕೆ ಬೆಳ್ಳಿ
    ಇದರೊಂದಿಗೆ ಪಾಲಕ್, ಇಶಾ ಸಿಂಗ್ ಮತ್ತು ದಿವ್ಯಾ ತಡಿಗೋಲ್ ಅವರನ್ನೊಳಗೊಂಡ ಭಾರತೀಯ ಶೂಟಿಂಗ್ ತಂಡ 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ತಂಡ ಸ್ಪರ್ಧೆಯಲ್ಲಿ ಭಾರತ 1731 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದರೆ, 1736 ಅಂಕ ಪಡೆದ ಚೀನಾ ಚಿನ್ನಕ್ಕೆ ಕೊರಳೊಡ್ಡಿತು. 1723 ಅಂಕಗಳನ್ನು ಪಡೆದುಕೊಂಡ ತೈವಾನ್‌ ಕಂಚಿನ ಪದಕ ಪಡೆದುಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023- ಮಹಿಳಾ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ

    Asian Games 2023- ಮಹಿಳಾ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ

    ಬೀಜಿಂಗ್: ಚೀನಾದ (China) ಹ್ಯಾಂಗ್‌ಝೌನಲ್ಲಿ (Hangzhou) ಬುಧವಾರ ನಡೆದ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಭಾರತದ ಮನು ಭಾಕರ್, ಇಶಾ ಸಿಂಗ್ ಮತ್ತು ರಿದಮ್ ಸಾಂಗ್ವಾನ್ ಮಹಿಳೆಯರ 25 ಮೀಟರ್ ಶೂಟಿಂಗ್‌ನಲ್ಲಿ (Women’s Pistol Team Event) ಚಿನ್ನದ ಪದಕವನ್ನು (Gold Medal)  ಪಡೆದುಕೊಂಡಿದ್ದಾರೆ.

    ಭಾರತ ಒಟ್ಟು 1759 ಅಂಕಗಳನ್ನು ಗಳಿಸಿದ್ದು, 1756 ಅಂಕಗಳೊಂದಿಗೆ ಚೀನಾ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದೆ. ಕೊರಿಯಾ ದೇಶ 1742 ಅಂಕಗಳೊಂದಿಗೆ ಕಂಚಿನ ಪದಕವನ್ನು ಪಡೆದುಕೊಂಡಿದೆ. ಅರ್ಹತಾ ಸುತ್ತಿನಲ್ಲಿ ಮನು 590 ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಪಡೆದಿದ್ದು, ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್- 41 ವರ್ಷಗಳ ಬಳಿಕ ಈಕ್ವೆಸ್ಟ್ರಿಯನ್ ಕ್ರೀಡೆಯಲ್ಲಿ ಭಾರತಕ್ಕೆ ಚಿನ್ನ

    ಇಶಾ ಸಿಂಗ್ ಕೂಡಾ 586 ಅಂಕಗಳೊಂದಿಗೆ 5ನೇ ಸ್ಥಾನವನ್ನು ಗಳಿಸಿದ್ದಾರೆ. ರಿದಮ್ 583 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ನಡೆದ ಮಹಿಳಾ 50 ಮೀಟರ್ ರೈಫಲ್ಸ್‌ನಲ್ಲಿ ಆಶಿ ಚೌಕ್ಸೆ, ಮಾನಿನಿ ಕೌಶಿಕ್ ಮತ್ತು ಸಿಫ್ಟ್ ಕೌರ್ ಸಮ್ರಾ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಇದನ್ನೂ ಓದಿ: World Cup 2023: ಇನ್ನೂ ವೀಸಾ ಸಿಕ್ಕಿಲ್ಲ – ಪಾಕಿಸ್ತಾನ ಆಟಗಾರರಿಗೆ ಶುರುವಾಯ್ತು ಹೊಸ ಸಮಸ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023: ಭಾರತಕ್ಕೆ ಮೂರು ಬೆಳ್ಳಿ, ಎರಡು ಕಂಚಿನ ಪದಕ

    Asian Games 2023: ಭಾರತಕ್ಕೆ ಮೂರು ಬೆಳ್ಳಿ, ಎರಡು ಕಂಚಿನ ಪದಕ

    ಬೀಜಿಂಗ್: 19ನೇ ಏಷ್ಯನ್‌ ಕ್ರೀಡಾಕೂಟ (Asian Games 2023) ಚೀನಾದ ಹಾಂಗ್‌ಝೌನಲ್ಲಿ (Hangzhou) ನಡೆಯುತ್ತಿದ್ದು, ಮೊದಲ ದಿನ ವಿವಿಧ ಕ್ರೀಡೆಗಳಲ್ಲಿ ಭಾರತಕ್ಕೆ 3 ಬೆಳ್ಳಿ ಹಾಗೂ 2 ಕಂಚಿನ ಪದಕಗಳು ಬಂದಿವೆ.

    ಮಹಿಳೆಯರ ಶೂಟಿಂಗ್‌ ವಿಭಾಗದಲ್ಲಿ ಇಂದು (ಭಾನುವಾರ) ಭಾರತವು ಮೊದಲ ಪದಕದೊಂದಿಗೆ ಖಾತೆ ತೆರೆಯಿತು. ಇದನ್ನೂ ಓದಿ: ದ್ರಾವಿಡ್‌ ಪುತ್ರ ಅಂಡರ್‌ 19 ಕರ್ನಾಟಕ ತಂಡಕ್ಕೆ ಆಯ್ಕೆ

    * 10 ಮೀ ಏರ್‌ ರೈಫಲ್‌ ಶೂಟಿಂಗ್‌: 10 ಮೀ ಏರ್‌ ರೈಫಲ್‌ ಶೂಟಿಂಗ್‌ನಲ್ಲಿ ಭಾರತದ ಮಹಿಳಾ ತಂಡವು ಬೆಳ್ಳಿ ಪದಕ ಜಯಿಸಿದೆ. ಮೆಹುಲಿ ಘೋಷ್, ರಮಿತಾ ಮತ್ತು ಆಶಿ ಚೌಕ್ಸೆ ಪದಕಕ್ಕೆ ಮುತ್ತಿಟ್ಟರು. ಒಟ್ಟು 1,886 ಅಂಕ ಗಳಿಸುವ ಮೂಲಕ ಚೀನಾದ ನಂತರ 2ನೇ ಸ್ಥಾನ ಗಳಿಸಿದ್ದಾರೆ.

    * ರೋಯಿಂಗ್: ಲೈಟ್‌ವೇಟ್ ಪುರುಷರ ಡಬಲ್ ಸ್ಕಲ್ಸ್‌ನಲ್ಲಿ ಅರ್ಜುನ್ ಲಾಲ್ ಜಾಟ್ ಮತ್ತು ಅರವಿಂದ್ ಸಿಂಗ್ ಜೋಡಿ 6:28.18 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದರು.

    * ರೋಯಿಂಗ್‌, ಪುರುಷರ ಜೋಡಿ: ಲೇಖ್ ರಾಮ್ ಮತ್ತು ಬಾಬು ಲಾಲ್ ಯಾದವ್ ಜೋಡಿಯು 6:50.41 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕಕ್ಕೆ ಮುತ್ತಿಟ್ಟರು. ಆ ಮೂಲಕ ಭಾರತಕ್ಕೆ ಮೂರನೇ ಪದಕ ತಂದುಕೊಟ್ಟರು. ಇದನ್ನೂ ಓದಿ: ರೋಯಿಂಗ್‌ನಲ್ಲಿ ಭಾರತಕ್ಕೆ ಮೂರು ಪದಕ – ಕ್ರಿಕೆಟ್‌ನಲ್ಲಿ ಫೈನಲ್‌ ಪ್ರವೇಶಿಸಿದ ಮಹಿಳೆಯರು

    * ರೋಯಿಂಗ್‌: ರೋಯಿಂಗ್‌ನಲ್ಲಿ ಪದಕದ ಭರಾಟೆ ಮುಂದುವರಿಸಿದ ಭಾರತವು ಈ ಬಾರಿ ಪುರುಷರ ಎಂಟರ ಸ್ಪರ್ಧೆಯಲ್ಲಿ ಮತ್ತೊಂದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿತು.

    * ಶೂಟಿಂಗ್: ಮಹಿಳೆಯರ 10 ಮೀಟರ್‌ ಏರ್‌ ರೈಫಲ್‌ ಸ್ಪರ್ಧೆಯಲ್ಲಿ ಭಾರತದ ಯುವ ಶೂಟರ್‌ ರಮಿತಾ ಜಿಂದಾಲ್‌ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟಿದ್ದಾರೆ. 19 ವಯಸ್ಸಿನ ರಮಿತಾ 230.1 ಅಂಕದೊಂದಿಗೆ ಮೂರನೇ ಸ್ಥಾನ ಗಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]