Tag: Hanuman

  • ಭಗವಾನ್‌ ಹನುಮಂತ ಮೊದಲ ಬಾಹ್ಯಾಕಾಶ ಯಾನಿ: ವಿದ್ಯಾರ್ಥಿಗಳಿಗೆ ಕೇಂದ್ರ ಮಾಜಿ ಸಚಿವ ಅನುರಾಗ್‌ ಠಾಕೂರ್‌ ಮಾಹಿತಿ

    ಭಗವಾನ್‌ ಹನುಮಂತ ಮೊದಲ ಬಾಹ್ಯಾಕಾಶ ಯಾನಿ: ವಿದ್ಯಾರ್ಥಿಗಳಿಗೆ ಕೇಂದ್ರ ಮಾಜಿ ಸಚಿವ ಅನುರಾಗ್‌ ಠಾಕೂರ್‌ ಮಾಹಿತಿ

    ಶಿಮ್ಲಾ: ಭಗವಾನ್ ಹನುಮಂತ (Hanuman) ಮೊದಲ ಬಾಹ್ಯಾಕಾಶ ಯಾನಿ ಎಂದು ಭಾವಿಸುವಂತೆ ವಿದ್ಯಾರ್ಥಿಗಳಿಗೆ ಕೇಂದ್ರ ಮಾಜಿ ಸಚಿವ ಅನುರಾಗ್‌ ಠಾಕೂರ್‌ (Anurag Thakur) ಸಲಹೆ ನೀಡಿದ್ದಾರೆ.

    ಬಾಹ್ಯಾಕಾಶಕ್ಕೆ ಮೊದಲು ಪ್ರಯಾಣ ಬೆಳೆಸಿದ ವ್ಯಕ್ತಿ ಅಮೆರಿಕದ ಗಗನಯಾತ್ರಿ ನೀಲ್ ಆರ್ಮ್‌ಸ್ಟ್ರಾಂಗ್ ಎಂಬುದು ಸಾರ್ವತ್ರಿಕವಾಗಿ ಒಪ್ಪಿಕೊಂಡ ಸತ್ಯ. ಆದಾಗ್ಯೂ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ಭಗವಾನ್‌ ಹನುಮಂತ ಮೊದಲ ಬಾಹ್ಯಾಕಾಶ ಯಾನಿ ಎಂದು ವಿದ್ಯಾರ್ಥಿಗಳಿಗೆ ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ ಬೆಂಕಿ ಹಚ್ಚಿ ಕೊಂದವನ ಕಾಲಿಗೆ ಗುಂಡೇಟು – ನನಗ್ಯಾವ ಪಶ್ಚಾತ್ತಾಪ ಇಲ್ಲ ಎಂದ ಪಾಪಿ!

    ಪಿಎಂ ಶ್ರೀ ಶಾಲೆಯಲ್ಲಿ ಶನಿವಾರ ರಾಷ್ಟ್ರೀಯ ಬಾಹ್ಯಾಕಾಶ ದಿನದ ಸಂದರ್ಭದಲ್ಲಿ ಠಾಕೂರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳ ಜೊತೆ ಬಿಜೆಪಿ ಸಂಸದ ಠಾಕೂರ್‌ ಸಂವಾದ ನಡೆಸಿದರು.

    ಮೊದಲ ಬಾಹ್ಯಾಕಾಶ ಯಾನಿ ಯಾರು ಎಂದು ಠಕೂರ್‌ ಅವರು ಕೇಳಿದರು. ಆಗ ವಿದ್ಯಾರ್ಥಿಗಳು, ನೀಲ್ ಆರ್ಮ್‌ಸ್ಟ್ರಾಂಗ್ ಎಂದು ಹೇಳುತ್ತಾರೆ. ಮತ್ತೆ ಮಾತನಾಡಿದ ಠಾಕೂರ್‌, ಅದು ಭಗವಾನ್ ಹನುಮಂತ ಅಂತ ನನಗೆ ಅನಿಸುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

    ಏಕೆಂದರೆ ನಾವು ಇನ್ನೂ ನಮ್ಮನ್ನು ನಾವು ಇರುವಂತೆಯೇ ನೋಡುತ್ತೇವೆ. ನಮ್ಮ ಸಾವಿರಾರು ವರ್ಷಗಳ ಹಳೆಯ ಸಂಪ್ರದಾಯ, ಜ್ಞಾನ, ಸಂಸ್ಕೃತಿಯನ್ನು ನಾವು ತಿಳಿಯದೇ ಇರುವವರೆಗೆ, ಬ್ರಿಟಿಷರು ನಮಗೆ ತೋರಿಸಿದಂತೆಯೇ ಇರುತ್ತೇವೆ. ಆದ್ದರಿಂದ, ಪ್ರಾಂಶುಪಾಲರು ಮತ್ತು ನೀವೆಲ್ಲರೂ ಪಠ್ಯಪುಸ್ತಕಗಳಿಂದ ಆಚೆಗೆ ಯೋಚಿಸಿ ನಮ್ಮ ರಾಷ್ಟ್ರ, ನಮ್ಮ ಸಂಪ್ರದಾಯಗಳು, ನಮ್ಮ ಜ್ಞಾನವನ್ನು ನೋಡಬೇಕೆಂದು ವಿನಂತಿಸುತ್ತೇನೆ. ನೀವು ಆ ದಿಕ್ಕಿನಿಂದ ನೋಡಿದರೆ, ಬಹಳಷ್ಟು ವಿಷಯಗಳನ್ನು ಕಾಣಬಹುದು ಎಂದು ತಿಳಿಸಿದ್ದಾರೆ.

    ಸುಮಾರು ನಲವತ್ತು ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ ಮೊದಲ ಭಾರತೀಯ ರಾಕೇಶ್ ಶರ್ಮಾ. ಈ ವರ್ಷದ ಆರಂಭದಲ್ಲಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ ಎರಡನೇ ಭಾರತೀಯ ಗಗನಯಾತ್ರಿ ಎನಿಸಿಕೊಂಡರು.

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ದೆಹಲಿಯಲ್ಲಿ ಭಾರತೀಯ ಅಂತರಿಕ್ಷ ನಿಲ್ದಾಣದ (ಬಿಎಎಸ್) ಮಾದರಿಯನ್ನು ಅನಾವರಣಗೊಳಿಸಿತು. ತನ್ನದೇ ಆದ ಕಕ್ಷೀಯ ಪ್ರಯೋಗಾಲಯವನ್ನು ಸ್ಥಾಪಿಸುವ ಭಾರತದ ಪ್ರಯಾಣವು ತನ್ನ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಒಂದು ಪ್ರಮುಖ ಮುನ್ನಡೆಯನ್ನು ಸೂಚಿಸುತ್ತದೆ. ಬಾಹ್ಯಾಕಾಶ ಪರಿಶೋಧನೆಯಲ್ಲಿ ಜಾಗತಿಕ ನಾಯಕನಾಗಿ ತನ್ನ ಸ್ಥಾನವನ್ನು ಬಲಪಡಿಸುತ್ತದೆ.

    2028 ರ ವೇಳೆಗೆ ಯೋಜನೆಯ ಮೊದಲ ಮಾಡ್ಯೂಲ್ ಅನ್ನು ಪ್ರಾರಂಭಿಸಲು ISRO ಗುರಿ ಹೊಂದಿದೆ. ಪೂರ್ಣ ನಿಲ್ದಾಣವು 2035 ರ ವೇಳೆಗೆ ಕಾರ್ಯರೂಪಕ್ಕೆ ಬರುವ ನಿರೀಕ್ಷೆಯಿದೆ. ದೀರ್ಘಾವಧಿಯ ಮಾನವ ಬಾಹ್ಯಾಕಾಶ ಯಾತ್ರೆಗಳಿಗೆ ಸೂಕ್ಷ್ಮ ಗುರುತ್ವಾಕರ್ಷಣೆಯ ಅಧ್ಯಯನಗಳು ಮತ್ತು ಪರೀಕ್ಷಾ ತಂತ್ರಜ್ಞಾನಗಳು ಸೇರಿದಂತೆ ಸ್ಥಳೀಯ ಸಂಶೋಧನೆಗೆ BAS ಮಹತ್ವದ ವೇದಿಕೆಯಾಗಲಿದೆ.

  • `ಡಿಜಾಂಗೋ ಕೃಷ್ಣಮೂರ್ತಿ’ ಆದ ಗೋಲ್ಡನ್ ಸ್ಟಾರ್

    `ಡಿಜಾಂಗೋ ಕೃಷ್ಣಮೂರ್ತಿ’ ಆದ ಗೋಲ್ಡನ್ ಸ್ಟಾರ್

    ಎಸ್‌ಎನ್‌ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್‌ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ‘ಡಿಜಾಂಗೋ ಕೃಷ್ಣಮೂರ್ತಿ’ (Django Krishnamurthy) ಎಂದು ಹೆಸರಿಡಲಾಗಿದೆ.

    ಗಣೇಶ್ ಅವರ ಹುಟ್ಟುಹಬ್ಬದ ದಿನವೇ ಶೀರ್ಷಿಕೆ ಅನಾವರಣ ಮಾಡಿರುವ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಹುನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದ್ದು, ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ.

    Golden Star Ganesh

    ಗಣೇಶ್ ಅವರಿಗೆ ನಾಯಕಿಯಾಗಿ ʻಹನುಮಾನ್ʼ ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಅರುಣ ಬಾಲರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಅನೂಪ್ ಸೀಳಿನ್ ಸಂಗೀತ, ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನವಿರುವ “ಡಿಜಾಂಗೋ ಕೃಷ್ಣಮೂರ್ತಿ” ಚಿತ್ರಕ್ಕೆ ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನವಿದೆ.

  • ಹುಟ್ಟು ಹಬ್ಬದ ದಿನ ಆಂಜನೇಯ ಅವತಾರವೆತ್ತ ಗಣೇಶ್

    ಹುಟ್ಟು ಹಬ್ಬದ ದಿನ ಆಂಜನೇಯ ಅವತಾರವೆತ್ತ ಗಣೇಶ್

    ಕನ್ನಡ ಚಿತ್ರರಂಗದ ತ್ಯಾಗರಾಜರು ಅಂತಾನೇ ಖ್ಯಾತಿ ಪಡೆದಿರುವ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕಾಂಬೋ ‘Yours Sincerely Raamʼಗಾಗಿ ಒಂದಾಗಿರುವುದು ಗೊತ್ತೇ ಇದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇಂದು ಗಣೇಶ್ ಹುಟ್ಟುಹಬ್ಬಕ್ಕೆ ಚಿತ್ರತಂಡ ವಿಶೇಷವಾಗಿ ಶುಭ ಕೋರಿದೆ. ‘Yours Sincerely Raamʼ ಪೋಸ್ಟರ್ ಬಿಡುಗಡೆ ಮಾಡಿ ಗೋಲ್ಡನ್ ಸ್ಟಾರ್‌ಗೆ ಬರ್ತ್‌ಡೇ ಶುಭಾಶಯ ತಿಳಿಸಿದೆ.

    ಗಣೇಶ್ ಜನ್ಮದಿನಕ್ಕೆ ಅನಾವರಣಗೊಂಡಿರುವ ಪೋಸ್ಟರ್ ಬಹಳ ವಿಶೇಷವಾಗಿದೆ. ಗಣೇಶ್ ಹಿಂದೆಂದೂ ಕಾಣದ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಭಜರಂಗಿ ಅವತಾರದಲ್ಲಿ ಮಳೆ ಹುಡ್ಗ ದರ್ಶನ ಕೊಟ್ಟಿದ್ದಾರೆ. ಹಿಮಾಲಯದ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ರಾಮ ಸೈಕಲ್ ಮೇಲೆ ಕುಳಿತಿದ್ದು, ಭಜರಂಗಿ ಭುಜದಲ್ಲಿ ಪೋಸ್ಟ್ ಮ್ಯಾನ್ ಬ್ಯಾಗ್ ಕಾಣಿಸುತ್ತದೆ. ಪೋಸ್ಟರ್ ನಾನಾ ಕುತೂಹಲ ಹುಟ್ಟುಹಾಕುವ ಕ್ರಿಯೇಟ್ ಮಾಡುವುದರ ಜೊತೆಗೆ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದನ್ನೂ ಓದಿ: ಪತ್ನಿಯನ್ನು ಎತ್ತಿ ಮುದ್ದಾಡಿದ ಯಶ್

    ʻಪುಷ್ಪಕ ವಿಮಾನ’, ʻಇನ್ಸ್ಪೆಕ್ಟರ್ ವಿಕ್ರಮ್ʼ, ʻಮಾನ್ಸೂನ್ ರಾಗʼದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಿನಿಮಾ ಹಸಿವಿರುವ ವಿಖ್ಯಾತ್ ಎ ಆರ್ ಈ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ

    ಐರಾ ಫಿಲ್ಮ್ಸ್ ಮತ್ತು ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ಅಡಿ ಸತ್ಯ ರಾಯಲ Your’s sincerely ರಾಮ್ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಜೆ ಅನೂಪ್ ಸೀಳಿನ್ ಸಂಗೀತ, ಗುಣ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯ ಭರದಿಂದ ಚಿತ್ರೀಕರಣ ಸಾಗುತ್ತಿದ್ದು, ಈ ವರ್ಷಾಂತ್ಯಕ್ಕೆ Your’s sincerely ತೆರೆಗೆ ಬರಲಿದೆ. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಮದಗಜ ಮಹೇಶ್

  • ಸಂಭಲ್‌ ಮಸೀದಿ ಸುತ್ತ ಒತ್ತುವರಿ ತೆರವು ವೇಳೆ ಹಳೇ ಹಿಂದೂ ದೇಗುಲ ಪತ್ತೆ

    ಸಂಭಲ್‌ ಮಸೀದಿ ಸುತ್ತ ಒತ್ತುವರಿ ತೆರವು ವೇಳೆ ಹಳೇ ಹಿಂದೂ ದೇಗುಲ ಪತ್ತೆ

    * 46 ವರ್ಷ ಹಳೆಯ ಶಿವ, ಹನುಮಂತ ವಿಗ್ರಹಗಳು ಪತ್ತೆ; ದೇವಾಲಯ ಓಪನ್‌
    * ಹಿಂದೂ-ಮುಸ್ಲಿಂ ಗಲಾಟೆಯಿಂದ ವಲಸೆ ಹೋಗಿದ್ದ ಹಿಂದೂಗಳು

    ಲಕ್ನೋ: ಸಂಭಲ್‌ನಲ್ಲಿರುವ (Sambhal) ಶಾಹಿ ಜಾಮಾ ಮಸೀದಿಯ ಸುತ್ತ ಒತ್ತುವರಿ ತೆರವು ವೇಳೆ 46 ವರ್ಷಗಳಷ್ಟು ಹಿಂದಿನ ಹಳೇ ದೇಗುಲ ಪತ್ತೆಯಾಗಿದೆ.

    ಸಂಭಲ್‌ನಲ್ಲಿ ಹಿಂಸಾಚಾರ ನಡೆದಿದ್ದ ಮಸೀದಿ ಸುತ್ತಮುತ್ತ ಸರ್ಕಾರ ಒತ್ತುವರಿ ತೆರವು ಕಾರ್ಯ ಆರಂಭಿಸಿದೆ. ದೇವಾಲಯದಲ್ಲಿ ಶಿವ ಮತ್ತು ಹನುಮಂತನ ವಿಗ್ರಹಗಳು ಪತ್ತೆಯಾಗಿವೆ. ನಖಾಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಂಕಿತ ಅಕ್ರಮ ವಿದ್ಯುತ್ ಸಂಪರ್ಕಗಳನ್ನು ಹೊಂದಿರುವ ಸ್ಥಳಗಳನ್ನು ಕೂಡ ಈ ಕಾರ್ಯಾಚರಣೆಯು ಗುರಿಯಾಗಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಸಂವಿಧಾನ ಶಿಕಾರಿ..75 ಬಾರಿ ಬದಲಾವಣೆ| ನೆಹರು ಟು ರಾಹುಲ್‌ – ಉದಾಹರಣೆಯೊಂದಿಗೆ ತಿವಿದ ಮೋದಿ

    ಸಂಭಲ್ ಸಿಒ ಅನುಜ್ ಕುಮಾರ್ ಚೌಧರಿ ಮಾತನಾಡಿ, ಈ ಪ್ರದೇಶದಲ್ಲಿ ದೇವಸ್ಥಾನವನ್ನು ಅತಿಕ್ರಮಣ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ನಾವು ಸ್ಥಳವನ್ನು ಪರಿಶೀಲಿಸಿದಾಗ ಅಲ್ಲಿ ಒಂದು ದೇವಸ್ಥಾನವನ್ನು ಪತ್ತೆ ಮಾಡಿದ್ದೇವೆಂದು ತಿಳಿಸಿದ್ದಾರೆ.

    ನಗರ ಹಿಂದೂ ಸಭಾದ ಪೋಷಕರಾದ ವಿಷ್ಣು ಶರಣ್ ರಸ್ತೋಗಿ ಅವರು 1978 ರ ನಂತರ ದೇವಾಲಯವನ್ನು ಪುನಃ ತೆರೆಯಲಾಗಿದೆ ಎಂದು ಹೇಳುತ್ತಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಅಶ್ರುವಾಯು, ಜಲ ಫಿರಂಗಿ ಬಳಕೆ; 17 ಮಂದಿ ರೈತರಿಗೆ ಗಾಯ

    ಹೆಚ್ಚುವರಿ ಎಸ್‌ಪಿ ಶ್ರೀಶ್‌ಚಂದ್ರ ಮಾತನಾಡಿ, ಕೆಲವರು ಮನೆ ನಿರ್ಮಿಸಿ ದೇವಸ್ಥಾನವನ್ನು ಒತ್ತುವರಿ ಮಾಡಿಕೊಂಡಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ. ದೇವಸ್ಥಾನವನ್ನು ಸ್ವಚ್ಛಗೊಳಿಸಲಾಗಿದ್ದು, ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ದೇವಾಲಯದಲ್ಲಿ ಶಿವ ಮತ್ತು ಹನುಮಂತನ ವಿಗ್ರಹಗಳಿವೆ. ಈ ಪ್ರದೇಶದಲ್ಲಿ ಹಿಂದೂ ಕುಟುಂಬಗಳು ವಾಸವಿದ್ದವು. ಕಾರಣಾಂತರಗಳಿಂದ ಅವರು ಈ ಪ್ರದೇಶವನ್ನು ತೊರೆದರು. ದೇವಾಲಯದ ಸಮೀಪದಲ್ಲಿಯೇ ಪುರಾತನ ಬಾವಿಯ ಬಗ್ಗೆಯೂ ಮಾಹಿತಿ ಇದೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ | ಉದ್ಯಮಿ ದಂಪತಿ ಆತ್ಮಹತ್ಯೆ ಕೇಸ್‌ – ಡೆತ್‌ ನೋಟ್‌ನಲ್ಲಿ ಬಿಜೆಪಿ, ಇ.ಡಿ ಕಿರುಕುಳ ಆರೋಪ

  • ಹನುಮಾನ್ ದರ್ಶನಕ್ಕೆ ಪತ್ನಿ ಸಮೇತ ರಾಯಚೂರಿಗೆ ಬಂದಿಳಿದ ಸುದೀಪ್

    ಹನುಮಾನ್ ದರ್ಶನಕ್ಕೆ ಪತ್ನಿ ಸಮೇತ ರಾಯಚೂರಿಗೆ ಬಂದಿಳಿದ ಸುದೀಪ್

    ಕಿಚ್ಚ ಸುದೀಪ್ (Sudeep) ಇಂದು ರಾಯಚೂರಿಗೆ (Raichur) ಬಂದಿಳಿದಿದ್ದಾರೆ. ಪತ್ನಿ ಪ್ರಿಯಾ (Priya) ಜೊತೆ ರಾಯಚೂರಿಗೆ ಆಗಮಿಸಿರುವ ಅವರು, ರಾಯಚೂರಿನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದಂಪತಿ ಸಹಿತ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಯಚೂರು ನಗರದ ಗಾಂಧಿ ವೃತ್ತದಲ್ಲಿರುವ ಹನುಮಾನ್ (Hanuman) ದೇವಾಲಯ ಜೀರ್ಣೋದ್ಧಾರ ಬಳಿಕ ಇತ್ತೀಚೆಗೆ ಉದ್ಘಾಟನೆಯಾಗಿದೆ.

    ಈ ಸಂದರ್ಭದಲ್ಲಿ ಸುದೀಪ್ ದಂಪತಿಯಿಂದ ಹೋಮ ಹವನ ವಿಶೇಷ ಪೂಜೆ ನಡೆದಿದೆ. ಜೀರ್ಣೊದ್ದಾರ ವೇಳೆಯೂ ದೇವಾಲಯಕ್ಕೆ ಭೇಟಿ ನೀಡಿದ್ದ ಸುದೀಪ್ ಆಗ ಒಬ್ಬರೇ ಬಂದಿದ್ದರು. ಈಗ ಪತ್ನಿಯನ್ನೂ ಕರೆತಂದು ಹನುಮಾನ್ ಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮೂರಿಗೆ ನೆಚ್ಚಿನ ನಟ ಬಂದಿದ್ದಾರೆ ಎಂದು ತಿಳಿಯುತ್ತಿದ್ದಂತೆಯೇ, ಸುದೀಪ್ ನೋಡಲು ಬಿರು ಬಿಸಿಲಿನಲ್ಲಿ ಅಭಿಮಾನಿಗಳು ಕಾದು ನಿಂತಿದ್ದರು.

    ಸದ್ಯ ಸುದೀಪ್ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ತಮಿಳುನಾಡಿನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಕೊನೆಯ ಹಂತದ ಚಿತ್ರೀಕರಣದಲ್ಲಿ ಅವರು ಈವರೆಗೂ ಪಾಲ್ಗೊಂಡಿದ್ದರು. ಬಹುತೇಕ ಸಿನಿಮಾದ ಚಿತ್ರೀಕರಣ ಮುಗಿದಿದೆ ಎನ್ನಲಾಗುತ್ತಿದೆ. ಮುಂದಿನ ಚಿತ್ರಕ್ಕಾಗಿ ಅವರು ಈಗ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

  • ‘ಹನುಮಾನ್’ ಹೀರೋ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಅನೌನ್ಸ್

    ‘ಹನುಮಾನ್’ ಹೀರೋ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಅನೌನ್ಸ್

    ‘ಹನುಮಾನ್’ (Hanuman) ಸಿನಿಮಾ ಮೂಲಕ ಸೂಪರ್ ಸಕ್ಸಸ್ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2 (Karthikeya 2), ಧಮಾಕ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಇಂದು (ಏ.18) ಅನಾವರಣಗೊಂಡಿದೆ.

    ‘ಹನುಮಾನ್’ನಲ್ಲಿ (Hanuman Film) ಸೂಪರ್ ಹೀರೋ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ. ಇದನ್ನೂ ಓದಿ:ಇಡಿಯಿಂದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಆಸ್ತಿ ಜಪ್ತಿ

     

    View this post on Instagram

     

    A post shared by Hanu⭐️Man (@tejasajja123)

    ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾ ‘ಮಿರಾಯ್’ ಎಂಬ ಟೈಟಲ್ ಇಡಲಾಗಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ.

    ‘ಮಿರಾಯ್’ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ಅನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

    ಕಾರ್ತಿಕ್ ಗಟ್ಟಮ್ನೇನಿ ಮಿರಾಯ್‌ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

  • ಒಟಿಟಿಗೆ ಕೊನೆಗೂ ಬಂತು ಹನುಮಾನ್

    ಒಟಿಟಿಗೆ ಕೊನೆಗೂ ಬಂತು ಹನುಮಾನ್

    ಭಾರೀ ಸದ್ದು ಮಾಡಿರುವ ಹನುಮಾನ್ ಸಿನಿಮಾ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ (OTT) ಸ್ಟ್ರೀಮಿಂಗ್ ಆಗುವ ಕುರಿತಂತೆ ಸುದ್ದಿಯೊಂದು ಬಂದಿತ್ತು. ಆದರೆ, ಅದು ಅಂದು ಆಗಲಿಲ್ಲ. ಇದೀಗ ಹನುಮಾನ್ ಒಟಿಟಿಗೆ ಬಂದಿದೆ. ಸದ್ಯಕ್ಕೆ ತೆಲುಗಿನಲ್ಲಿ ಮಾತ್ರ ಈ ಸಿನಿಮಾವನ್ನು ನೋಡಬಹುದಾಗಿದೆ.

    ಒಪ್ಪಂದ ಪ್ರಕಾರ ಸಿನಿಮಾ ರಿಲೀಸ್ ಆಗಿ ಮೂರೇ ಮೂರು ವಾರದಲ್ಲಿ ಹನುಮಾನ್ ಚಿತ್ರ ಒಟಿಟಿಯಲ್ಲಿ ಬರಬೇಕಿತ್ತು. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರುವ ಕಾರಣದಿಂದಾಗಿ 55 ದಿನಗಳ ನಂತರ ಚಿತ್ರವನ್ನು ಒಟಿಟಿಯಲ್ಲಿ ತರಲು ನಿರ್ಧರಿಸಲಾಗಿತ್ತು. ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 2ರಿಂದ ಝೀ 5ನಲ್ಲಿ ಚಿತ್ರ ಬರಬೇಕಿತ್ತು. ಅದು ಆಗಿರಲಿಲ್ಲ.

    ಮಾರ್ಚ್ 2ನೇ ತಾರೀಖು ಒಟಿಟಿಯಲ್ಲಿ ಹನುಮಾನ್ ಸಿಗಲಿಲ್ಲ. ಹಾಗಾಗಿ ಮತ್ತೊಂದು ದಿನಾಂಕವನ್ನು ಘೋಷಣೆ ಮಾಡಲಾಯಿತು. ಅದರಂತೆ ಮಾರ್ಚ್ 16ಕ್ಕೆ ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಒಟಿಟಿಗೆ ಹನುಮಾನ್ ಬರಬೇಕಿತ್ತು. ತಾಂತ್ರಿಕ ಕಾರಣದಿಂದಾಗಿ ಕೇವಲ ಒಂದೇ ಒಂದು ಭಾಷೆಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

    ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಿಲೀಸ್ ಆದ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ನಡುವೆ ಪಾರ್ಟ್ 2 ಮಾಡುವ ಕುರಿತೂ ಸುದ್ದಿ ಹರಿದಾಡುತ್ತಿದೆ.

     

    ತೇಜ ಸಜ್ಜ ನಟಿಸಿರುವ ‘ಹನುಮಾನ್’ (Hanuman) ಸಿನಿಮಾ ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದೆ. ಈ ಚಿತ್ರವನ್ನು ಪಾರ್ಟ್ 2 ಮಾಡಲು ತೆರೆಮರೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ. ಹೀಗಿರುವಾಗ ಪ್ರದೀಪ್ ವರ್ಮಾ ಅವರ ನಿರ್ದೇಶನದಲ್ಲಿ ‘ಹನುಮಾನ್ ಪಾರ್ಟ್ 2’ ಸಿದ್ಧತೆ ಆರಂಭಿಸಿದೆ.

  • ಸದ್ಯಕ್ಕೆ ಒಟಿಟಿಯಲ್ಲಿ ಸಿಗಲ್ಲ ಹನುಮಾನ್

    ಸದ್ಯಕ್ಕೆ ಒಟಿಟಿಯಲ್ಲಿ ಸಿಗಲ್ಲ ಹನುಮಾನ್

    ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡಿರುವ ಹನುಮಾನ್ ಸಿನಿಮಾ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ (OTT) ಸ್ಟ್ರೀಮಿಂಗ್ ಆಗುವ ಕುರಿತಂತೆ ಸುದ್ದಿಯೊಂದು ಬಂದಿತ್ತು. ಒಪ್ಪಂದ ಪ್ರಕಾರ ಸಿನಿಮಾ ರಿಲೀಸ್ ಆಗಿ ಮೂರೇ ಮೂರು ವಾರದಲ್ಲಿ ಚಿತ್ರ ಒಟಿಟಿಯಲ್ಲಿ ಬರಬೇಕಿತ್ತು. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರುವ ಕಾರಣದಿಂದಾಗಿ 55 ದಿನಗಳ ನಂತರ ಚಿತ್ರವನ್ನು ಒಟಿಟಿಯಲ್ಲಿ ತರಲು ನಿರ್ಧರಿಸಲಾಗಿತ್ತು. ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 2ರಿಂದ ಝೀ 5ನಲ್ಲಿ ಚಿತ್ರ ಬರಬೇಕಿತ್ತು. ಅದು ಆಗಲಿಲ್ಲ.

    ಮಾರ್ಚ್ 2ನೇ ತಾರೀಖು ಒಟಿಟಿಯಲ್ಲಿ ಹನುಮಾನ್ ಸಿಗಲಿಲ್ಲ. ಹಾಗಾಗಿ ಮತ್ತೊಂದು ದಿನಾಂಕವನ್ನು ಘೋಷಣೆ ಮಾಡಲಾಯಿತು. ಅದರಂತೆ ಮಾರ್ಚ್ 16ಕ್ಕೆ ಒಟಿಟಿಗೆ ಹನುಮಾನ್ ಬರಬೇಕಿತ್ತು. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ನಾಳೆಯೂ ಸಿನಿಮಾ ಒಟಿಟಿಯಲ್ಲಿ ಲಭ್ಯವಿರುವುದಿಲ್ಲ. ಅದಕ್ಕಾಗಿ ಕಾರಣವನ್ನೂ ನೀಡಿದ್ದಾರೆ ನಿರ್ದೇಶಕರು. ತಾಂತ್ರಿಕ ಕಾರಣದಿಂದಾಗಿ ನಾಳೆ ಒಟಿಟಿಯಲ್ಲಿ ಹನುಮಾನ್ ಲಭ್ಯವಿಲ್ಲವಂತೆ.

    ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಿಲೀಸ್ ಆದ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆ. ಈ ನಡುವೆ ಪಾರ್ಟ್ 2 ಮಾಡುವ ಕುರಿತೂ ಸುದ್ದಿ ಹರಿದಾಡುತ್ತಿದೆ.

    ಕೆಜಿಎಫ್, ಕೆಜಿಎಫ್ 2 (KGF 2) ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್ ಬಗ್ಗೆ ಸದಾ ಒಂದಲ್ಲಾ ಒಂದು ವಿಚಾರವಾಗಿ ಚಾಲ್ತಿಯಲ್ಲಿರುತ್ತಾರೆ. ಸುದ್ದಿಗೋಷ್ಠಿಯೊಂದರಲ್ಲಿ ಶಾರುಖ್ ಖಾನ್, ಕರೀನಾ ಕಪೂರ್ ‘ಟಾಕ್ಸಿಕ್’ ಚಿತ್ರಕ್ಕೆ ಎಂಟ್ರಿ ಕೊಡ್ತಾರಾ ಎಂಬ ವಿಚಾರಕ್ಕೆ ಯಶ್ ಸ್ಪಷ್ಟನೆ ನೀಡಿದ್ದರು. ಅದರಂತೆ ‘ಹನುಮಾನ್’ 2ನಲ್ಲಿ ರಾಕಿಬಾಯ್ ನಟಿಸ್ತಾರಾ ಎಂಬ ವಿಚಾರಕ್ಕೆ ಸ್ವತಃ ಯಶ್ ಕ್ಲ್ಯಾರಿಟಿ ಕೊಟ್ಟಿದ್ದಾರೆ.

    ‘ಹನುಮಾನ್’ ಪಾರ್ಟ್ 2ನಲ್ಲಿ ನಾನು ನಟಿಸುತ್ತಿಲ್ಲ. ಈಗ ‘ಟಾಕ್ಸಿಕ್’ (Toxic) ಸಿನಿಮಾ ಬಿಟ್ಟು ಬೇರೆ ಕಡೆ ಯೋಚನೆ ಮಾಡುತ್ತಿಲ್ಲ. ಪರಭಾಷೆಯಿಂದ ಸಾಕಷ್ಟು ಸಿನಿಮಾಗಳು ನನ್ನನ್ನು ಅರಸಿ ಬಂದಿರೋದು ನಿಜ. ಆದರೆ ಯಾವ ಚಿತ್ರಕ್ಕೂ ನಾನು ಸಹಿ ಹಾಕಿಲ್ಲ ಎಂದು ಯಶ್ ಉತ್ತರಿಸಿದ್ದಾರೆ. ಅಲ್ಲಿಗೆ ಹನುಮಾನ್ 2ನಲ್ಲಿ ಯಶ್ ನಟಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

     

    ತೇಜ ಸಜ್ಜ ನಟಿಸಿರುವ ‘ಹನುಮಾನ್’ (Hanuman) ಸಿನಿಮಾ ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದೆ. ಈ ಚಿತ್ರವನ್ನು ಪಾರ್ಟ್ 2 ಮಾಡಲು ತೆರೆಮರೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ. ಹೀಗಿರುವಾಗ ಪ್ರದೀಪ್ ವರ್ಮಾ ಅವರ ನಿರ್ದೇಶನದಲ್ಲಿ ‘ಹನುಮಾನ್ ಪಾರ್ಟ್ 2’ ಮೂಡಿ ಬರಲಿದ್ದು, ಯಶ್ ಲೀಡ್ ರೋಲ್‌ನಲ್ಲಿ ನಟಿಸುತ್ತಾರೆ ಎಂದೇ ಸುದ್ದಿಯಾಗಿತ್ತು. ಅದಕ್ಕೆ ರಾಕಿಭಾಯ್ ಈಗ ಉತ್ತರ ನೀಡಿದ್ದಾರೆ.

  • ‘ಹನುಮಾನ್’ ತಂಡಕ್ಕೆ ಮೆಚ್ಚುಗೆ ಸೂಚಿಸಿದ ಅಮಿತ್ ಶಾ

    ‘ಹನುಮಾನ್’ ತಂಡಕ್ಕೆ ಮೆಚ್ಚುಗೆ ಸೂಚಿಸಿದ ಅಮಿತ್ ಶಾ

    ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿದೆ ಹನುಮಾನ್ ಟೀಮ್. ಆ ಫೋಟೋವನ್ನು ಅಮಿತ್ ಶಾ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರತಿಭಾವಂತ ಟೀಮ್ ಭೇಟಿ ಮಾಡಿತು. ಸಂಸ್ಕೃತಿ ಸಾರುವಂತಹ ಚಿತ್ರವನ್ನು ಅವರು ನೀಡಿದ್ದಾರೆ. ಮುಂದಿನ ಪ್ರಾಜೆಕ್ಟ್ ಗಳಿಗೆ ಶುಭವಾಗಲಿ ಎಂದು ಅವರು ಬರೆದುಕೊಂಡಿದ್ದಾರೆ.

    ಬಾಕ್ಸ್ ಆಫೀಸಿನಲ್ಲಿ ಭಾರೀ ಸದ್ದು ಮಾಡಿರುವ ಹನುಮಾನ್ ಸಿನಿಮಾ ಇನ್ನೂ ಹಲವು ಕಡೆ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ (OTT) ಸ್ಟ್ರೀಮಿಂಗ್ ಆಗುತ್ತಿದೆ. ಒಪ್ಪಂದ ಪ್ರಕಾರ ಸಿನಿಮಾ ರಿಲೀಸ್ ಆಗಿ ಮೂರೇ ಮೂರು ವಾರದಲ್ಲಿ ಚಿತ್ರ ಒಟಿಟಿಯಲ್ಲಿ ಬರಬೇಕಿತ್ತು. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರುವ ಕಾರಣದಿಂದಾಗಿ 55 ದಿನಗಳ ನಂತರ ಚಿತ್ರವನ್ನು ಒಟಿಟಿಯಲ್ಲಿ ತರಲು ನಿರ್ಧರಿಸಲಾಗಿತ್ತು. ಮಾರ್ಚ್ 2ರಿಂದ ಝೀ 5ನಲ್ಲಿ ಚಿತ್ರ ಸ್ಟ್ರೀಮಿಂಗ್ ಆಗುತ್ತಿದೆ.

    ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಿಲೀಸ್ ಆದ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆತ್ತು ಈ ನಡುವೆ ಪಾರ್ಟ್ 2 ಮಾಡುವ ಕುರಿತೂ ಸುದ್ದಿ ಹರಿದಾಡುತ್ತಿದೆ.

    ಕೆಜಿಎಫ್, ಕೆಜಿಎಫ್ 2 (KGF 2) ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್ ಬಗ್ಗೆ ಸದಾ ಒಂದಲ್ಲಾ ಒಂದು ವಿಚಾರವಾಗಿ ಚಾಲ್ತಿಯಲ್ಲಿರುತ್ತಾರೆ. ಸುದ್ದಿಗೋಷ್ಠಿಯೊಂದರಲ್ಲಿ ಶಾರುಖ್ ಖಾನ್, ಕರೀನಾ ಕಪೂರ್ ‘ಟಾಕ್ಸಿಕ್’ ಚಿತ್ರಕ್ಕೆ ಎಂಟ್ರಿ ಕೊಡ್ತಾರಾ ಎಂಬ ವಿಚಾರಕ್ಕೆ ಯಶ್ ಸ್ಪಷ್ಟನೆ ನೀಡಿದ್ದರು. ಅದರಂತೆ ‘ಹನುಮಾನ್’ 2ನಲ್ಲಿ ರಾಕಿಬಾಯ್ ನಟಿಸ್ತಾರಾ ಎಂಬ ವಿಚಾರಕ್ಕೆ ಸ್ವತಃ ಯಶ್ ಕ್ಲ್ಯಾರಿಟಿ ಕೊಟ್ಟಿದ್ದಾರೆ.

     

    ‘ಹನುಮಾನ್’ ಪಾರ್ಟ್ 2ನಲ್ಲಿ ನಾನು ನಟಿಸುತ್ತಿಲ್ಲ. ಈಗ ‘ಟಾಕ್ಸಿಕ್’ (Toxic) ಸಿನಿಮಾ ಬಿಟ್ಟು ಬೇರೆ ಕಡೆ ಯೋಚನೆ ಮಾಡುತ್ತಿಲ್ಲ. ಪರಭಾಷೆಯಿಂದ ಸಾಕಷ್ಟು ಸಿನಿಮಾಗಳು ನನ್ನನ್ನು ಅರಸಿ ಬಂದಿರೋದು ನಿಜ. ಆದರೆ ಯಾವ ಚಿತ್ರಕ್ಕೂ ನಾನು ಸಹಿ ಹಾಕಿಲ್ಲ ಎಂದು ಯಶ್ ಉತ್ತರಿಸಿದ್ದಾರೆ. ಅಲ್ಲಿಗೆ ಹನುಮಾನ್ 2ನಲ್ಲಿ ಯಶ್ ನಟಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ‘ಹನುಮಾನ್’ ನಿರ್ಮಾಪಕರ ಜೊತೆ ಕಿಚ್ಚ ಸುದೀಪ್ ಸಿನಿಮಾ

    ‘ಹನುಮಾನ್’ ನಿರ್ಮಾಪಕರ ಜೊತೆ ಕಿಚ್ಚ ಸುದೀಪ್ ಸಿನಿಮಾ

    ಕಿಚ್ಚ ಸುದೀಪ್ ಸದ್ಯ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಆ ನಂತರ ಅವರು ಇನ್ನೂ ಎರಡು ಚಿತ್ರಗಳಿಗೆ ಸಹಿ ಕೂಡ ಮಾಡಿದ್ದಾರೆ. ಈ ನಡುವೆ ಗಾಂಧಿನಗರದಲ್ಲಿ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಹನುಮಾನ್ (Hanuman) ಚಿತ್ರ ಖ್ಯಾತಿಯ ನಿರಂಜನ್ ರೆಡ್ಡಿ (Niranjan Reddy) ಅವರ ಚಿತ್ರದಲ್ಲೂ ಸುದೀಪ್ ನಟಿಸಲಿದ್ದಾರಂತೆ.

    ನಿರ್ಮಾಪಕ ನಿರಂಜನ್ ರೆಡ್ಡಿ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾವನ್ನು ನಿರ್ಮಾಣ ಮಾಡುವ ಯೋಜನೆ ಹಾಕಿಕೊಂಡಿದ್ದು ಈ ಚಿತ್ರಕ್ಕೆ ಸುದೀಪ್ ನಾಯಕ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಆದರೆ, ಕಾಂಬಿನೇಷನ್  ಕಾರಣದಿಂದಾಗಿ ಕುತೂಹಲವನ್ನಂತೂ ಮೂಡಿಸಿದೆ.

    ಕ್ರಿಕೆಟ್, ಬಿಗ್ ಬಾಸ್ ನಡುವೆಯೂ ನಿರೀಕ್ಷಿತ ಮ್ಯಾಕ್ಸ್ (Max) ಸಿನಿಮಾದ ಚಿತ್ರೀಕರಣ ಮುಗಿಸುತ್ತಿದ್ದಾರೆ ಕಿಚ್ಚ ಸುದೀಪ್. ಸದ್ಯ ಈ ಸಿನಿಮಾದ ಕ್ಲೈಮ್ಯಾಕ್ಸ್ (Climax) ಶೂಟಿಂಗ್ ನಡೆದಿದ್ದು, ಈ ಭಾಗದ ಚಿತ್ರೀಕರಣದಲ್ಲಿ (Shooting) ಸುದೀಪ್ ಭಾಗಿಯಾಗಿದ್ದಾರೆ.  ಅಂದುಕೊಂಡ ತಿಂಗಳಲ್ಲೇ ಸಿನಿಮಾ ತೆರೆಗೆ ತರಬೇಕಾಗಿದ್ದರಿಂದ ಚಿತ್ರೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರಂತೆ.

    ‘ಮ್ಯಾಕ್ಸ್’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿದ ಮೇಲೆ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ. ಈ ಕುರಿತಂತೆ ಚಿತ್ರದ ಕೆಲಸ ಎಲ್ಲಿಯವರೆಗೂ ಬಂತು ಎಂದು ಸ್ವತಃ ಸುದೀಪ್ (Sudeep) ಅವರೇ ಮೊನ್ನೆ ಮಾಹಿತಿ ನೀಡಿದ್ದರು.

     

    ಬಹುನಿರೀಕ್ಷಿತ ಮ್ಯಾಕ್ಸ್ ಬಗ್ಗೆ ಸುದೀಪ್ ಮಾಹಿತಿ ನೀಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದರು. ‘ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾದ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ. ಚಿತ್ರದ ಉಳಿದ ಭಾಗಗಳ ಚಿತ್ರೀಕರಣ ಪ್ರಗತಿಯಲ್ಲಿದೆ ಎಂದು ಮೊನ್ನೆಯಷ್ಟೇ ಮಾಹಿತಿ ಹಂಚಿಕೊಂಡಿದ್ದರು.