Tag: Hanuman Chalice

  • ಕನ್ನಡದ ಮೊದಲ ‘ಸೂಪರ್ ಹೀರೋ’ ಕಾನ್ಸೆಪ್ಟ್ ಚಿತ್ರದಲ್ಲಿ ಹನುಮಾನ್ ಚಾಲೀಸ್

    ಕನ್ನಡದ ಮೊದಲ ‘ಸೂಪರ್ ಹೀರೋ’ ಕಾನ್ಸೆಪ್ಟ್ ಚಿತ್ರದಲ್ಲಿ ಹನುಮಾನ್ ಚಾಲೀಸ್

    ವನ್ ಕುಮಾರ್ (Pawan Kumar) ನಿರ್ದೇಶನದ ‘ದಿ ಎಂಡ್’ (The End) ಚಿತ್ರದ ಹಾಡೊಂದರ (ಹನುಮಾನ್ ಚಾಲೀಸ) (Hanuman Chalice) ಲಿರಿಕಲ್ ವಿಡಿಯೋ ಮಹಾಶಿವರಾತ್ರಿಯ ಪುಣ್ಯದಿವಸ ಬಿಡುಗಡೆಯಾಯಿತು. ನಿರ್ಮಾಪಕರಾದ ಶಿಲ್ಪ ಶ್ರೀನಿವಾಸ್, ಮಂಜುನಾಥ್, ಧರ್ಮಶ್ರೀ ಮಂಜುನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ವೆಂಕಟೇಶ್ ಮುಂತಾದ ಗಣ್ಯರು ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಕನ್ನಡ ಪ್ರಥಮ ಸೂಪರ್ ಹೀರೋ ಕಾನ್ಸೆಪ್ಟ್ ನ ಚಿತ್ರ ದಿ ಎಂಡ್‌‌. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೇವಲ ಐದು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ವಿಶೇಷ ಪಾತ್ರದಲ್ಲಿ ನಟಿಸಲು ಅನಂತನಾಗ್ ಅವರ ಜೊತೆ ಮಾತುಕತೆ ನಡೆಯುತ್ತಿದೆ. ಹದಿನೆಂಟು ಪುರಾಣಗಳನ್ನು ಆಧರಿಸಿ ಮಾಡುತ್ತಿರುವ ಈ ಚಿತ್ರ, ಒಂಭತ್ತು ಭಾಷೆಗಳಲ್ಲಿ ಐದು ಭಾಗಗಳಲ್ಲಿ ಬರಲಿದೆ. ಇದು ಮೊದಲ ಭಾಗ. ದಿ ಎಂಡ್ ಚಿತ್ರಕ್ಕೆ PREAMBLE ಎಂಬ ಅಡಿಬರಹವಿದೆ.PREAMBLE ಎಂದರೆ ಪೀಠಿಕೆ ಎಂದು ಅರ್ಥ. ಇನ್ನು ಸರ್ವಕಾಲಿಕ ಸೂಪರ್ ಹೀರೋ ಹನುಮಂತನ ಮಹಿಮೆಯನ್ನು ವರ್ಣಿಸುವ ಹನುಮಾನ್ ಚಾಲೀಸ ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಂಡಿದ್ದೇವೆ.  ಮಹಾಶಿವರಾತ್ರಿ ಪುಣ್ಯದಿವಸ ಈ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಐದು ಪ್ರಸಿದ್ದ ಶಿವ ದೇಗುಲಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿರುವುದು ವಿಶೇಷ. ಅರುಣ್ ಆಂಡ್ರ್ಯೂ ಸಂಗೀತ ನೀಡಿರುವ ಈ ಹಾಡನ್ನು ಮಧುಕುಮಾರ್ ಭಾವಪರವಶರಾಗಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಆದರೆ “ದಿ ಎಂಡ್” ಇದೇ ಮೇ ವೇಳೆಗೆ ನಿಮ್ಮ ಮುಂದೆ ಬರಲಿದೆ ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದರು.

    ಪವನ್ ಕುಮಾರ್ ಅವರು ಆಯ್ದುಕೊಂಡಿರುವ ಕಥೆ ಚೆನ್ನಾಗಿದೆ. ಸೂಪರ್ ಹೀರೋ ಎಂದರೆ ವಿಶೇಷ ಶಕ್ತಿಯುಳ್ಳವನು ಎಂದು. ಚಿತ್ರದಲ್ಲಿ ನಾನು ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ರವಿಶೇಖರ್.

    ನಾಯಕಿ ಪವಿತ್ರ, ವಿಶೇಷ ಪಾತ್ರದಲ್ಲಿ ನಟಿಸಲಿರುವ ನಟಿ ಚೈತ್ರಾ ಕೊಟ್ಟೂರ್, ಸಂಗೀತ ನಿರ್ದೇಶಕ ಅರುಣ್ ಆಂಡ್ರ್ಯೂ, ಗಾಯಕ ಮಧುಕುಮಾರ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ದಿ ಎಂಡ್” ಕುರಿತು ಮಾತನಾಡಿದರು.

  • ಉದ್ಭವ್ ಠಾಕ್ರೆ ರಾಜೀನಾಮೆ ಬೆನ್ನಲ್ಲೆ ಮತ್ತೆ ಸಿಡಿದೆದ್ದ ಕಂಗನಾ ರಣಾವತ್

    ಉದ್ಭವ್ ಠಾಕ್ರೆ ರಾಜೀನಾಮೆ ಬೆನ್ನಲ್ಲೆ ಮತ್ತೆ ಸಿಡಿದೆದ್ದ ಕಂಗನಾ ರಣಾವತ್

    ಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ರಾಜೀನಾಮೆ ಕೊಡುತ್ತಿದ್ದಂತೆಯೇ ಕಂಗನಾ ರಣಾವತ್, ತುಂಬಾ ಆಕ್ಟಿವ್ ಆಗಿದ್ದಾರೆ. ಠಾಕ್ರೆ ಸಿಎಂ ಖುರ್ಚಿಯಿಂದ ಇಳಿಯುತ್ತಿದ್ದಂತೆಯೇ ವಿಡಿಯೋವೊಂದನ್ನು ಮಾಡಿರುವ ಕಂಗನಾ, ಒಂದಷ್ಟು ಇತಿಹಾಸದ ಪಾಠವನ್ನು ಮಾಡಿದ್ದಾರೆ.  ಪ್ರಜಾಪ್ರಭುತ್ವದ ಮಹತ್ವದ ಬಗ್ಗೆಯೂ ಮಾತನಾಡಿದ್ದಾರೆ. ಜೆ.ಪಿ ನಾರಾಯಣ್ ಅವರನ್ನು ಅವರು ನೆನಪಿಸಿಕೊಂಡಿದ್ದಾರೆ. 1975ರ ಘಟನೆಯನ್ನೂ ಅವರು ನೆನಪಿಸಿಕೊಂಡಿದ್ದಾರೆ.

    ಹನುಮಾನ್ ಚಾಲೀಸ್ ಕುರಿತಾಗಿಯೂ ವಿಡಿಯೋದಲ್ಲಿ ಹೇಳಿರುವ ಕಂಗನಾ ರಣಾವತ್, “ಶಿವನ 12ನೇ ಅವತಾರವೇ ಹನುಮಂತ. ಶಿವನ ಆರಾಧನೆಯನ್ನೂ ಮಾಡುವ ಶಿವಸೇನೆಯು ಹುನುಮಾನ್ ಚಾಲೀಸ್ ಅನ್ನು ಬ್ಯಾನ್ ಮಾಡಲು ಹೊರಟಿತ್ತು. ಹಾಗೇನಾದರೂ ಮಾಡಿದ್ದರೆ ಶಿವನೂ ಅವರನ್ನು ಕಾಪಾಡುವುದಿಲ್ಲ. ಹರಹರ ಮಹಾದೇವ್” ಎಂದು ಕಂಗನಾ ವಿಡಿಯೋದಲ್ಲಿ ಹೇಳಿದ್ದಾರೆ. ಅದನ್ನು ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿದ್ದಾರೆ. ಇದನ್ನೂ ಓದಿ:ಪವಿತ್ರ ಲೋಕೇಶ್ ದೂರು : ತನಿಖೆ ಆರಂಭಿಸಿದ ಸೈಬರ್ ಪೊಲೀಸ್

    ಕಂಗನಾ ರಣಾವತ್ ಗೂ ಹಾಗೂ ಉದ್ಭವ ಠಕ್ರೆಗೂ ಎರಡ್ಮೂರು ವರ್ಷಗಳಿಂದ  ಮಾತಿನ ಚಕಮಕಿ ನಡೆದೇ ಇದೆ. ಮುಂಬೈನಲ್ಲಿರುವ ಕಂಗನಾ ರಣಾವತ್  ಆಫೀಸಿನ ಕಟ್ಟಡವು ನಿಯಮಬಾಹಿರವಾಗಿ ಕಟ್ಟಿದ್ದಾರೆ ಎಂದು ಆರೋಪಿಸಿ 2020ರಲ್ಲಿ ತೆರೆವುಗೊಳಿಸಲಾಗಿತ್ತು. ಅಲ್ಲಿಂದ ಠಾಕ್ರೆ ಸರಕಾರದ ವಿರುದ್ಧ ಕಂಗನಾ ಸಿಡಿದೆದ್ದಿದ್ದರು. ಶಿವಸೇನೆ ಕಾರ್ಯಕರ್ತರು ಕಂಗನಾ ವಿರುದ್ಧ ಪ್ರತಿಭಟನೆ ಮಾಡಿದ್ದರಿಂದ ಈ ಕಾರಣಕ್ಕಾಗಿ ಕಂಗನಾ ಅವರಿಗೆ ಭದ್ರತೆಯನ್ನೂ ನೀಡಲಾಗಿತ್ತು.

    Live Tv