Tag: Hanuman Jayanti

  • ಹನುಮ ಜಯಂತಿ ಹಿನ್ನೆಲೆ ಏನು? – ಆಂಜನೇಯ ಹುಟ್ಟಿದ್ದು ಹೇಗೆ?

    ಹನುಮ ಜಯಂತಿ ಹಿನ್ನೆಲೆ ಏನು? – ಆಂಜನೇಯ ಹುಟ್ಟಿದ್ದು ಹೇಗೆ?

    ಚಲ ಭಕ್ತಿ, ಧೈರ್ಯ ಮತ್ತು ಶಕ್ತಿಗೆ ಹೆಸರುವಾಸಿಯಾದ ದೇವರು ಯಾರು ಎಂದರೆ ಅದು ಹನುಮಂತ (Hanumantha). ರಾಮನ ಮೇಲಿಟ್ಟ ಭಕ್ತಿ, ಲಂಕೆಗೆ ಏಕಾಂಗಿಯ ಹೋಗಿ ಲಂಕಾದಹನ ಮಾಡಿದ ಪರಾಕ್ರಮಿ, ಗಟ್ಟಿ ಮುಟ್ಟಾದ ದೇಹವನ್ನು ಹೊಂದಿರುವ ಆಂಜನೇಯನ ಜನ್ಮವನ್ನು ಸ್ಮರಿಸಲು ಆಚರಿಸಲಾಗುವ ಹಿಂದೂಗಳ ಹಬ್ಬವೇ ಹನುಮ ಜಯಂತಿ (Hanuman Jayanti).

    ಹನುಮಂತ ಹುಟ್ಟಿದ್ದು ಹೇಗೆ?
    ಒಂದು ದಿನ ಪಾರ್ವತಿ, ಪರಮೇಶ್ವರರು ಕೈಲಾಸ ಪರ್ವತದಲ್ಲಿದ್ದಾಗ ಒಂದು ವಾನರಯುಗ್ಮವನ್ನು ಕಂಡರು. ಪಾರ್ವತಿ ಶಿವನೊಂದಿಗೆ ಕಲೆತು ಗರ್ಭವನ್ನು ಧರಿಸಿ ಅದನ್ನು ತಾಳಲಾರದೇ ಶಿವನಲ್ಲಿ ಮನವಿ ಮಾಡಿದಾಗ ಶಿವ ಆ ಗರ್ಭವನ್ನು ಪಾರ್ವತಿಯ ನಾಭಿಯಿಂದ ಹೊರಬೀಳುವಂತೆ ಮಾಡಿದ. ಭೂದೇವಿ ಅದನ್ನು ಧರಿಸಲಾರದೇ ಕಂಗೆಟ್ಟಳು.

    ಅದೇ ಸಮಯದಲ್ಲಿ ಗೌತಮನ ಪುತ್ರಿ, ಕೇಸರಿಯ ಪತಿ ಆಂಜನೆ ಪುತ್ರಕಾಂಕ್ಷೆಯಿಂದ ತೀವ್ರವಾದ ಜಪ, ತಪ ಕೈಗೊಂಡಿದ್ದಳು. ಆಗ ವಾಯುದೇವ ಆಕೆಯ ರೂಪಕ್ಕೆ ಮರುಳಾಗಿ, ಆ ಗರ್ಭವನ್ನು ತೆಗೆದುಕೊಂಡು ಆಕೆಯ ಅಂಗೈಯಲ್ಲಿಟ್ಟ. ಆಕೆ ಅದನ್ನು ನುಂಗಿದಳು. ನವಮಾಸಗಳು ತುಂಬಿದ ಬಳಿಕ ಒಬ್ಬ ವಟು ಜನಿಸಿದ. ಜನಿಸಿದ ವಟುವೇ ಆಂಜನೇಯ.

    ಹನುಮಂತ ಹೆಸರು ಬಂದಿದ್ದು ಹೇಗೆ?
    ಈ ವಟು ಸೂರ್ಯನನ್ನು ನೋಡಿ ಸೂರ್ಯನನ್ನೇ ನುಂಗಲು ಹೋಗಿದ್ದ. ಇಂದ್ರನ ವಜ್ರಾಯುಧದ ಪೆಟ್ಟಿನಿಂದ ಮೂರ್ಛೆ ಬಿದ್ದರೂ ದೇವತೆಗಳ ಮೂಲಕ ಅನೇಕ ವರಗಳನ್ನು ಪಡೆದ. ಇಂದ್ರನ ವಜ್ರಾಯುಧದಿಂದ ಪೆಟ್ಟು ಬಿದ್ದು ಒಂದು ಕೆನ್ನೆ ಗಾಯವಾಗಿ ಸೊಟ್ಟಗಾಯಿತು. ಈ ಕಾರಣದಿಂದ ಹನುಮಂತ ಎಂಬ ಹೆಸರು ಬಂದಿತು.

    ಹನುಮಂತ, ಆಂಜನೇಯ, ವಾಯುಪುತ್ರ, ಹನುಮ, ಭಜರಂಗಿ, ಅಕ್ಷಾಂತಕ, ಕಪೀಶ ಎಂದು ಕರೆಯುವ ಹನುಮಂತನ ಜನ್ಮ ಆಗಿದ್ದು ಹಿಂದೂ ಚಂದ್ರಮಾನ ಮಾಸದ ಹುಣ್ಣಿಮೆಯ ದಿನ. ಸಾಮಾನ್ಯವಾಗಿ ಗ್ರೆಗೋರಿಯನ್ ಕ್ಯಾಲೆಂಡರ್‌ನಲ್ಲಿ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಹನುಮ ಜಯಂತಿ ಬರುತ್ತದೆ.

    ಹನುಮ ಜಯಂತಿಯಂದು ಪ್ರಾರ್ಥನೆ, ಉಪವಾಸ, ಹನುಮಾನ್ ಚಾಲೀಸಾ (ಹನುಮನನ್ನು ಸ್ತುತಿಸುವ ಸ್ತೋತ್ರ) ಪಠಣ ಮತ್ತು ಹನುಮನಿಗೆ ಸಮರ್ಪಿತವಾದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಭಕ್ತರು ಆಚರಿಸುತ್ತಾರೆ.

    ಸಂಜೀವಿನಿಯನ್ನೇ ತಂದ:
    ರಾಮ-ರಾವಣರ ಮಧ್ಯೆ ಯುದ್ಧ ನಡೆಯುತ್ತಿದ್ದಾಗ ಮೇಘನಾಥನ ಜೊತೆಗಿನ ಕಾದಾಟದಲ್ಲಿ ಲಕ್ಷಣ ತೀವ್ರವಾಗಿ ಗಾಯಗೊಳ್ಳುತ್ತಾನೆ. ಮೂರ್ಛೆ ಹೋಗಿ ನೆಲದ ಮೇಲೆ ಉರುಳಿದ್ದ ಲಕ್ಷ್ಮಣನನ್ನು ಎತ್ತಿಕೊಂಡು ಬಂದ ಹನುಮಂತ ರಾಮನ ಮುಂದೆ ಮುಂದೆ ಇಡುತ್ತಾನೆ.

    ಈ ಸಂದರ್ಭದಲ್ಲಿ ಅಲ್ಲಿದ್ದ ಸುಷೇನರು ಹಿಮಾಲಯದಲ್ಲಿ ಇರುವಂತಹ ಸಂಜೀವಿನಿ ಪರ್ವತದಲ್ಲಿ ಔಷಧಿ ಇದೆ. ಅದನ್ನು ತಂದರೆ ಲಕ್ಷ್ಮಣನನ್ನು ಗುಣಪಡಿಸಬಹುದು ಎಂದು ಹೇಳುತ್ತಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಹನುಮಂತ ಹಿಮಾಲಯಕ್ಕೆ ಬಂದು ಔಷಧಿ ಸಸಿಗಳನ್ನು ಹುಡುಕುತ್ತಾನೆ. ಆದರೆ ಔಷಧಿ ಸಸಿ ಸಿಗದ ಕಾರಣ ಕೊನೆಗೆ ಇಡೀ ಪರ್ವತವನ್ನೇ ಹೊತ್ತುಕೊಂಡು ಲಂಕೆಗೆ ಬರುತ್ತಾನೆ. ಸುಷೇನರು ಔಷಧಿ ಸಸ್ಯದಿಂದ ಲಕ್ಷಣನಿಗೆ ಔಷಧ ನೀಡಿದರು. ತಕ್ಷಣ ಲಕ್ಷಣನಿಗೆ ಪ್ರಜ್ಞೆ ಬರುತ್ತದೆ. ಜೀವ ಉಳಿಸುವ ಗಿಡಮೂಲಿಕೆಯನ್ನು ತರಲು ಒಬ್ಬಂಟಿಯಾಗಿ ಇಡೀ ಪರ್ವತವನ್ನು ಹೊತ್ತುಕೊಂಡು ತರುವ ಮೂಲಕ ತನ್ನ ಅಪಾರ ಶಕ್ತಿಯನ್ನು ಹನುಮಂತ ಪ್ರದರ್ಶಿಸಿದ್ದ.

  • ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

    ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

    ಜೈಪುರ: ಕಾಂಗ್ರೆಸ್ (Congress) ಆಡಳಿತದಲ್ಲಿ ಹನುಮಾನ್ ಚಾಲೀಸಾ (Hanuman Chalisa) ಕೇಳುವುದು ಅಪರಾಧವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬೆಂಗಳೂರಿನ ಉದಾಹರಣೆ ನೀಡಿ ವಾಗ್ದಾಳಿ ನಡೆಸಿದ್ದಾರೆ.

    ರಾಜಸ್ಥಾನದ ಟೋಕ್‌ನಲ್ಲಿ ಮಾತನಾಡಿದ ಅವರು, ಇಂದು ದೇಶಾದ್ಯಂತ ಹನುಮ ಜಯಂತಿ (Hanuman Jayanti) ಆಚರಿಸಲಾಗುತ್ತದೆ. ಇಂದು ಹನುಮ ಜಯಂತಿಯಂದು ನಿಮ್ಮೊಂದಿಗೆ ಮಾತನಾಡುವಾಗ ಕೆಲ ಹಿಂದಿನ ಘಟನೆಗಳು ನೆನಪಿಗೆ ಬರುತ್ತಿದೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಅಂಗಡಿಯಲ್ಲಿ ಕುಳಿತು ಹನುಮಾನ್ ಚಾಲೀಸಾ ಕೇಳುತ್ತಿದ್ದ ಎಂಬ ಕಾರಣಕ್ಕೆ ಅಂಗಡಿಯವನಿಗೆ ಕ್ರೂರವಾಗಿ ಥಳಿಸಲಾಗಿತ್ತು ಎಂದು ಕಿಡಿಕಾರಿದರು.

    ಈ ಬಾರಿಯ ರಾಮನವಮಿಯಂದು ಮೊದಲ ಬಾರಿಗೆ, ರಾಜಸ್ಥಾನದಲ್ಲಿ ಶೋಭಾಯಾತ್ರೆಯ ಮೆರವಣಿಗೆಯನ್ನು ನಡೆಸಲಾಯಿತು. ರಾಜಸ್ಥಾನದಂತಹ ರಾಜ್ಯದಲ್ಲಿ ಅಲ್ಲಿ ಜನರು ರಾಮ-ರಾಮ ಎಂದು ಜಪಿಸುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

    ಮೋದಿ ಹೇಳಿದ್ದೇನು?
    ನಿನ್ನೆ ರಾಜಸ್ಥಾನದಲ್ಲಿ ನಾನು ಸಂಪತ್ತಿನ ಮರು ಹಂಚಿಕೆಯ (Wealth Redistribution) ಕೆಲವು ಸತ್ಯವನ್ನು ದೇಶದ ಮುಂದೆ ಮಂಡಿಸಿದೆ. ಈ ಭಾಷಣದ ಬಳಿಕ ಇಡೀ ಕಾಂಗ್ರೆಸ್ ಮತ್ತು INDIA ಮೈತ್ರಿಕೂಟವು ತಲ್ಲಣಗೊಂಡಿದೆ. ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದನ್ನು ತಮ್ಮ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಸಂಚು ಮಾಡುತ್ತಿದೆ ಎಂಬ ಸತ್ಯವನ್ನು ನಾನು ಮಂಡಿಸಿದೆ. ನಾನು ಅವರ ರಾಜಕೀಯವನ್ನು ಬಯಲಿಗೆಳೆದಾಗ ಅವರು ನನ್ನನ್ನು ನಿಂದಿಸಲು ಪ್ರಾರಂಭಿಸಿದರು. ಅವರು ಸತ್ಯಕ್ಕೆ ಯಾಕೆ ಹೆದರಬೇಕು? ಅವರು ತಮ್ಮ ನೀತಿಯನ್ನು ಏಕೆ ಮರೆಮಾಡುತ್ತಾರೆ? ನಿಮಗೆ ಧೈರ್ಯವಿದ್ದರೆ ಒಪ್ಪಿಕೊಳ್ಳಿ, ನಾವು ನಿಮ್ಮನ್ನು ಎದುರಿಸಲು ಸಿದ್ಧರಿದ್ದೇವೆ.

    ಕಾಂಗ್ರೆಸ್ ಪಕ್ಷವು ದೇಶದ ಸಂವಿಧಾನದೊಂದಿಗೆ ಆಟವಾಡಿದೆ. ಸಂವಿಧಾನ ರಚನೆಯಾದಾಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಜಾತಿಗಳ ರಕ್ಷಣೆಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ವಿರೋಧಿಸಲಾಯಿತು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ತಮ್ಮ ಭಾಷಣದಲ್ಲಿ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದು ಹೇಳಿದ್ದರು. ಕಾಂಗ್ರೆಸ್‌ನ ಆಲೋಚನೆ ಯಾವಾಗಲೂ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯವಾಗಿದೆ. 2004ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆಂಧ್ರಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ (Muslim Reservation) ಕಲ್ಪಿಸಲು ಪ್ರಯತ್ನಿಸುವುದು ಅದರ ಮೊದಲ ಕೆಲಸವಾಗಿತ್ತು. ಇದು ಪ್ರಾಯೋಗಿಕ ಯೋಜನೆಯಾಗಿದ್ದು, ಇಡೀ ದೇಶದಲ್ಲಿ ಕಾಂಗ್ರೆಸ್ ಜಾರಿಗೆ ತರಲು ಪ್ರಯತ್ನಿಸಿತ್ತು. ಇದನ್ನೂ ಓದಿ: ಪ್ರೀತಿ ತಿರಸ್ಕರಿಸಿದ್ದಕ್ಕೆ ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ

    2004 ಮತ್ತು 2010 ರ ನಡುವೆ, ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೆ ತರಲು ಕಾಂಗ್ರೆಸ್ ನಾಲ್ಕು ಬಾರಿ ಪ್ರಯತ್ನಿಸಿತು. ಆದರೆ ಕಾನೂನು ಅಡೆತಡೆಗಳು ಮತ್ತು ಸುಪ್ರೀಂ ಕೋರ್ಟ್‌ನ ಜಾಗೃತಿಯಿಂದಾಗಿ ಅವರು ಅವರ ಯೋಜನೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. 2011ರಲ್ಲಿ ಕಾಂಗ್ರೆಸ್ ಇದನ್ನು ದೇಶಾದ್ಯಂತ ಜಾರಿಗೆ ತರಲು ಪ್ರಯತ್ನಿಸಿತು. ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಯವರಿಗೆ ನೀಡಿದ್ದ ಹಕ್ಕುಗಳನ್ನು ಕಿತ್ತುಕೊಂಡು ಮತ ಬ್ಯಾಂಕ್ ರಾಜಕಾರಣಕ್ಕಾಗಿ ಇತರರಿಗೆ ನೀಡಿದ್ದಾರೆ. ಇದೆಲ್ಲ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧ ಎಂದು ಗೊತ್ತಿದ್ದೇ ಕಾಂಗ್ರೆಸ್ ಈ ಎಲ್ಲ ಪ್ರಯತ್ನಗಳನ್ನು ಮಾಡಿದೆ. ಆದರೆ ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಕಾಳಜಿ ಇಲ್ಲ.

  • ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ – 6 ಜನರ ಮೇಲೆ ಎಫ್‌ಐಆರ್, ಇಬ್ಬರು ಅರೆಸ್ಟ್

    ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ – 6 ಜನರ ಮೇಲೆ ಎಫ್‌ಐಆರ್, ಇಬ್ಬರು ಅರೆಸ್ಟ್

    ಮೈಸೂರು: ಟಿ. ನರಸೀಪುರದಲ್ಲಿ (T. Narseepur) ಹನುಮ ಜಯಂತಿ (Hanuman Jayanti) ಮೆರವಣಿಗೆ ವೇಳೆ ಗಲಾಟೆ ನಡೆದು ಯುವಬ್ರಿಗೇಡ್ ಕಾರ್ಯಕರ್ತನನ್ನು (Yuva Brigade Activist) ಬಾಟಲಿಯಿಂದ ಇರಿದು ಕೊಂದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 6 ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.

    ಜುಲೈ 8ರಂದು ಟಿ. ನರಸೀಪುರದಲ್ಲಿ ಹನುಮ ಜಯಂತಿ ಮೆರವಣಿಗೆ ನಡೆದಿದ್ದು, ದೇವಸ್ಥಾನದ ಬಳಿ ಯಾವ ವಾಹನವನ್ನು ಬಿಡದಂತೆ ತಡೆದಿದ್ದಕ್ಕೆ ಹಾಗೂ ಪುನೀತ್ ರಾಜ್‌ಕುಮಾರ್ ಫೋಟೋವನ್ನು ತೆಗೆಯಲು ಹೇಳಿದ್ದಕ್ಕೆ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹಾಗೂ ಆರೋಪಿಗಳ ನಡುವೆ ಜಗಳ ಉಂಟಾಗಿತ್ತು. ವೇಣುಗೋಪಾಲ್ ಯಾವುದೇ ಕಾರಣಕ್ಕೂ ದೇವಸ್ಥಾನದ ಬಳಿ ಬೈಕ್ ನಿಲ್ಲಿಸಲು ಬಿಡುವುದಿಲ್ಲ ಎಂದು ಹೇಳಿದ್ದಕ್ಕೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಗಲಾಟೆ ತೆಗೆದು ಕೊಲೆ ಮಾಡಲಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಪುನೀತ್ ಫೋಟೋ ತೆಗೆಸಿದ್ದೇ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಗೆ ಕಾರಣವೇ? – ಮೃತನ ಪತ್ನಿ ಹೇಳಿದ್ದೇನು?

    ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಮಣಿಕಂಠ, ಸಂದೇಶ್, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಪ್ರಮುಖ ಆರೋಪಿಗಳಾದ ಮಣಿಕಂಠ ಹಾಗೂ ಸಂದೇಶ್ ಬಂಧನವಾಗಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಸೆರೆಗೆ ತಂಡ ರಚಿಸಲಾಗಿದೆ. ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಯ ಕೈವಾಡ ಇಲ್ಲ. ಘಟನಾ ಸ್ಥಳದಲ್ಲಿ ಹ್ಯಾರಿಸ್ ಸರ್ವಿಸ್ ಸೆಂಟರ್ ಇತ್ತು. ಸಹಜವಾಗಿ ಘಟನೆ ನಡೆದಾಗ ಆತನು ಕೂಡಾ ಸ್ಥಳದಲ್ಲಿದ್ದ. ಘಟನೆಗೆ ಯಾವುದೇ ಕೋಮು ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪುನೀತ್ ಫೋಟೋ ತೆಗೆಸಿದ್ದೇ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಗೆ ಕಾರಣವೇ? – ಮೃತನ ಪತ್ನಿ ಹೇಳಿದ್ದೇನು?

    ಪುನೀತ್ ಫೋಟೋ ತೆಗೆಸಿದ್ದೇ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಗೆ ಕಾರಣವೇ? – ಮೃತನ ಪತ್ನಿ ಹೇಳಿದ್ದೇನು?

    ಮೈಸೂರು: ಹನುಮ ಜಯಂತಿ (Hanuman Jayanti) ಮೆರವಣಿಗೆ ವೇಳೆ 2 ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಬ್ರಿಗೇಡ್ ಕಾರ್ಯಕರ್ತನನ್ನು (Yuva Brigade Activist) ಗಾಜಿನ ಬಾಟಲಿಯಿಂದ ಚುಚ್ಚಿ ಹತ್ಯೆ ಮಾಡಿರುವ ಘಟನೆ ಮೈಸೂರಿನ (Mysuru) ಟಿ. ನರಸೀಪುರದಲ್ಲಿ (T. Narseepur) ನಡೆದಿದೆ. ಮೆರವಣಿಗೆಯಲ್ಲಿ ಪುನೀತ್ ರಾಜ್‌ಕುಮಾರ್ ಫೋಟೋ ಹಾಕಿದ್ದನ್ನು ತೆಗೆಸಿದ್ದೇ ಹತ್ಯೆಗೆ ಕಾಣವಾಯಿತಾ ಎಂಬ ಪ್ರಶ್ನೆ ಇದೀಗ ಮೂಡಿದೆ.

    ಕೊಲೆಯಾದ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಘಟನೆಯ ವಿವರವನ್ನು ತಿಳಿಸಿದ್ದಾರೆ. ಶನಿವಾರ ಟಿ. ನರಸೀಪುರದಲ್ಲಿ ಹನುಮ ಜಯಂತಿ ಮೆರವಣಿಗೆ ನಡೆದಿತ್ತು. ಈ ವೇಳೆ ವ್ಯಾನ್‌ನಲ್ಲಿ ಭಾರತ ಮಾತೆಯ ಫೋಟೋವನ್ನು ಹಾಕಲಾಗಿತ್ತು. ಅದರ ಮುಂದೆ ಪುನೀತ್ ರಾಜ್‌ಕುಮಾರ್ ಫೋಟೋ ಇದ್ದಿದ್ದರಿಂದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಇಲ್ಲಿ ಯಾವ ವ್ಯಕ್ತಿಯ ಫೋಟೋ ಕೂಡಾ ಹಾಕೋದು ಬೇಡ ಎಂದು ಹೇಳಿ ತಡೆದಿದ್ದರು. ಆ ವೇಳೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ನಂತರ ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು ಅವರ ಗುಂಪಿನಲ್ಲೇ ಗಲಾಟೆ ಆಯಿತು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    ಘಟನೆಗೆ ಸಂಬಂಧಿಸಿದಂತೆ ಭಾನುವಾರ ಮಧ್ಯಾಹ್ನ ಕೂಡಾ ಜಗಳವಾಗಿತ್ತು. ಬಳಿಕ ರಾತ್ರಿ ರಾಜಿ ಪಂಚಾಯಿತಿ ಎಂಬ ನೆಪ ಹೇಳಿ ಕರೆಸಿಕೊಂಡು ಕೊಲೆ ಮಾಡಿದ್ದಾರೆ ಎಂದು ಮೃತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ನಡುವೆ 2 ಟನ್ ಟೊಮೆಟೊವಿದ್ದ ವಾಹನವನ್ನೇ ಕದ್ದ ಕಳ್ಳರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    ಮೈಸೂರು:  ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಟಿ. ನರಸೀಪುರ (T. Narseepur) ಪಟ್ಟಣದ ಹೊರವಲಯದಲ್ಲಿ ನಡೆದಿದೆ.

    ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಹನುಮಜಯಂತಿ ವೇಳೆ 2 ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಬಳಿಕ ದುಷ್ಕರ್ಮಿಗಳು ಬಾಟಲಿಯಿಂದ ಇರಿದು ವೇಣುಗೋಪಾಲ್‌ನ ಹತ್ಯೆ ನಡೆಸಿದ್ದಾರೆ.

    ಟಿ. ನರಸೀಪುರ ಪಟ್ಟಣದ ಶ್ರೀರಾಂಪುರ ಕಲೋನಿಯ ನಿವಾಸಿಯಾಗಿದ್ದ ವೇಣುಗೋಪಾಲ್ ಯುವಬ್ರಿಗೇಡ್‌ನ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ ನಡೆದಿದೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

    ಘಟನೆಗೆ ಸಂಬಂಧಿಸಿದಂತೆ ಟಿ. ನರಸೀಪುರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ಬುಧವಾರ ಬೆಳಗ್ಗೆ ಪೊಲೀಸ್ ಹಾಗೂ ಅರೆಸೇನಾ ಪಡೆಗಳ ನಿಯೋಜನೆಯಲ್ಲಿ ಪ್ರಾರಂಭವಾಗಿದ್ದು, ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡಗಳನ್ನು ಒಡೆದು ಹಾಕಿದ್ದಾರೆ.

    ರಸ್ತೆ ಬದಿಯ ಆಹಾರ ಮಳಿಗೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ಮೂಲಕವಾಗಿ ಕೆಡವಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಭಾರೀ ಪ್ರಮಾಣದಲ್ಲಿ ನೆರೆದಿದ್ದು, ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು  ಹತೋಟಿಯಲ್ಲಿಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ಈ ಬಗ್ಗೆ ಜಹಾಂಗೀರ್‌ಪುರಿಯ ಸ್ಥಳೀಯರೊಬ್ಬರು ಮಾತನಾಡಿ, ಕಳೆದ 15 ವರ್ಷಗಳಿಂದ ನನ್ನ ಅಂಗಡಿ ಇಲ್ಲೇ ಇತ್ತು. ಅಕ್ರಮದ ಬಗ್ಗೆ ಮೊದಲು ಯಾರೂ ಚಕಾರ ಎತ್ತಲಿಲ್ಲ, ಈಗ ಎರಡು ಕೋಮುಗಳ ನಡುವೆ ಹಿಂಸಾಚಾರದ ಘಟನೆಯ ನಂತರ ಇದು ನಡೆಯುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಕೆಂಪಣ್ಣ ಕನಕಪುರದ ಕಾಂಗ್ರೆಸ್ ಏಜೆಂಟ್, ಕಾಂಗ್ರೆಸ್ ದಾಸ: ಈಶ್ವರಪ್ಪ

    ಈ ಹಿಂದೆ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿತ್ತು. ಇದರ ಪ್ರಕಾರ ಅಧಿಕ ಪೊಲೀಸ್‌ ಭದ್ರೆತೆ ನೀಡಲಾಗಿತ್ತು.

  • ದೆಹಲಿಯಲ್ಲಿ ಹನುಮ ಜಯಂತಿ ವೇಳೆ ಹಿಂಸಾಚಾರ – ಯುಪಿಯಲ್ಲಿ ಕಟ್ಟೆಚ್ಚರ

    ದೆಹಲಿಯಲ್ಲಿ ಹನುಮ ಜಯಂತಿ ವೇಳೆ ಹಿಂಸಾಚಾರ – ಯುಪಿಯಲ್ಲಿ ಕಟ್ಟೆಚ್ಚರ

    ಲಕ್ನೋ: ನೈರುತ್ಯ ದೆಹಲಿಯ ಜಹಂಗಿರ್‌ಪುರಿಯಲ್ಲಿ ಹನುಮ ಜಯಂತಿ ಆಚರಣೆ ವೇಳೆ ನಡೆದ ಹಿಂಸಾಚಾರ ಪ್ರಕರಣವು ದೇಶಾದ್ಯಂತ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

    ದೆಹಲಿಯ ಜಹಾಂಗೀರ್‌ಪುರಿ ಘಟನೆಯ ನಂತರ ರಾಜ್ಯದಲ್ಲಿ ಆಯಾ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳ ಮೇಲೆ ತೀವ್ರ ನಿಗಾ ವಹಿಸಲು ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಹನುಮಜಯಂತಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ, ಹಿಂಸಾಚಾರ

    ಅಧಿಕಾರಿಗಳು, ವಿಶೇಷವಾಗಿ ದೆಹಲಿಯ ಗಡಿಭಾಗದ ಜಿಲ್ಲೆಗಳಲ್ಲಿ, ರಾಜ್ಯದಲ್ಲಿ ಎಲ್ಲಿಯಾದರೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

    POLICE JEEP

    ಎಲ್ಲಾ ವಲಯಗಳಲ್ಲೂ ಸಂಬಂಧಪಟ್ಟ ಅಧಿಕಾರಿಗಳ ನೇತೃತ್ವದಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಘಟನೆಗಳಿಗೆ ಆಸ್ಪದ ನೀಡದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹನುಮಾನ್ ಮೆರವಣಿಗೆಗೆ ಪುಷ್ಪವೃಷ್ಟಿ ಸುರಿಸಿದ ಮುಸ್ಲಿಮರು

  • ಹನುಮಾನ್ ಮೆರವಣಿಗೆಗೆ ಪುಷ್ಪವೃಷ್ಟಿ ಸುರಿಸಿದ ಮುಸ್ಲಿಮರು

    ಹನುಮಾನ್ ಮೆರವಣಿಗೆಗೆ ಪುಷ್ಪವೃಷ್ಟಿ ಸುರಿಸಿದ ಮುಸ್ಲಿಮರು

    ಭೋಪಾಲ್: ಹನುಮ ಜಯಂತಿ ಅಂಗವಾಗಿ ಭೋಪಾಲ್‍ನಲ್ಲಿ ಮೆರವಣಿಗೆ ನಡೆಯಿತ್ತು. ಈ ಮೆರವಣಿಗೆಯಲ್ಲಿ ಮುಸ್ಲಿಮರ ತಂಡ ತಮ್ಮ ಹಿಂದೂ ಸಹೋದರರನ್ನು ಸ್ವಾಗತಿಸಿದ ರೀತಿ ಎಲ್ಲರ ಗಮನ ಸೆಳೆಯಿತು. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

    ಶನಿವಾರ ಸಂಜೆ ಹನುಮ ಜಯಂತಿ ಮೆರವಣಿಯ ಹಿನ್ನೆಲೆ ಭೋಪಾಲ್‍ನಲ್ಲಿ ಭಾರೀ ಪೊಲೀಸ್ ಭದ್ರತೆ ಇತ್ತು. ಈ ವೇಳೆ ದೇವರ ಮೆರವಣಿಗೆ ಚಾರ್ ಬಟ್ಟಿ ಪ್ರದೇಶವನ್ನು ತಲುಪುತ್ತಿದ್ದಂತೆ, ಮುಸ್ಲಿಂ ಸಮುದಾಯದ ಜನರು ‘ರಥಯಾತ್ರೆ'(ಮೆರವಣಿಗೆ)ಯನ್ನು ಹೂವು ಮಳೆ ಸುರಿಸುವ ಮೂಲಕ ಸ್ವಾಗತಿಸಿದರು. ಭೋಪಾಲ್ ಮಾತ್ರವಲ್ಲ, ರಾಜ್ಯದ ಇತರ ಹಲವು ಭಾಗಗಳಲ್ಲಿಯೂ ಮುಸ್ಲಿಮರು ಹನುಮಾನ್ ಶೋಭಾ ಯಾತ್ರೆಯನ್ನು ಹೂವಿನೊಂದಿಗೆ ಸ್ವಾಗತಿಸಿದರು. ಇದನ್ನೂ ಓದಿ: ನನ್ನನ್ನು ಪದಚ್ಯುತಿಗೊಳಿಸಲು ವಿದೇಶಿ ಸಂಚು ನಡೆದಿದೆ: ಇಮ್ರಾನ್ ಆರೋಪ

    ಭೋಪಾಲ್‍ನಲ್ಲಿ, ಭಗವಾನ್ ಹನುಮಾನ್ ಘೋಷಣೆಗಳ ನಡುವೆ ಮುಸ್ಲಿಮರ ಮನೆಗಳ ಮೇಲ್ಛಾವಣಿ ಮತ್ತು ಬಾಲ್ಕನಿಗಳಿಂದ ಹೂವುಗಳನ್ನು ಸುರಿಸಲಾಯಿತು. ರಸ್ತೆಗಳು ಮತ್ತು ಕಿರಿದಾದ ಬೀದಿಗಳಲ್ಲಿ ಎರಡೂ(ಹಿಂದೂ-ಮುಸ್ಲಿಂ) ಸಮುದಾಯಗಳ ಜನರು ತಮ್ಮ ಕೈಯಲ್ಲಿ ಹೂವುಗಳನ್ನು ಹಿಡಿದುಕೊಂಡು ಹನುಮಾನ್ ರಥಕ್ಕೆ ಹಾಕುತ್ತಿದ್ದರು.

    ಜಯಂತಿ ಕುರಿತು ಮಾತನಾಡಿದ ಮುಸ್ಲಿಂ ಬಂಧುಗಳು, ಹನುಮಾನ್ ಜಯಂತಿಯ ಸಂದರ್ಭದಲ್ಲಿ ನಮ್ಮ ಹಿಂದೂ ಸಹೋದರರನ್ನು ಸ್ವಾಗತಿಸಲು ನಾವು ಇಲ್ಲಿದ್ದೇವೆ. ಭೋಪಾಲ್ ಸೌಹಾರ್ದತೆ ಮತ್ತು ಭ್ರಾತೃತ್ವಕ್ಕೆ ಹೆಸರುವಾಸಿಯಾಗಿದೆ. ಅದನ್ನು ಅಡ್ಡಿಪಡಿಸಲು ನಾವು ಯಾರನ್ನೂ ಬಿಡುವುದಿಲ್ಲ ಎಂದು ಜುಬೇರ್ ಖಾನ್ ಅವರು ಇತರ ಅನೇಕ ಸ್ನೇಹಿತರೊಂದಿಗೆ ಹೇಳಿದರು. ಇದನ್ನೂ ಓದಿ: ದೇವಸ್ಥಾನದ ಮೇಲೆ ದಾಳಿ ಮಾಡಿದ್ದು ಖಂಡನೀಯ: ಮುತಾಲಿಕ್ 

    ಭೋಪಾಲ್‍ನಲ್ಲಿ ಹಿಂದೂ-ಮುಸ್ಲಿಮರು ಒಟ್ಟಿಗೆ ವಾಸಿಸುವ ಮತ್ತು ಪರಸ್ಪರ ಸಹಾಯ ಮಾಡುವ ಗಂಗಾ-ಯಮುನಾ ಸಂಸ್ಕøತಿಯಿದೆ. ಭೋಪಾಲ್‍ನ ನಿಜವಾದ ಸಂಸ್ಕೃತಿಯನ್ನು ತೋರಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ತಿಳಿಸಿದರು.

  • ತಾಯ್ನಾಡಲ್ಲಿ 108 ಅಡಿ ಎತ್ತರದ ಹನುಮ ಮೂರ್ತಿಯನ್ನು ಅನಾವರಣಗೊಳಿಸಿದ ಮೋದಿ

    ತಾಯ್ನಾಡಲ್ಲಿ 108 ಅಡಿ ಎತ್ತರದ ಹನುಮ ಮೂರ್ತಿಯನ್ನು ಅನಾವರಣಗೊಳಿಸಿದ ಮೋದಿ

    ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಹನುಮ ಜಯಂತಿ ಹಿನ್ನೆಲೆಯಲ್ಲಿ ಶನಿವಾರ ಗುಜರಾತ್‌ನ ಮೋರ್ಬಿಯಲ್ಲಿ 108 ಅಡಿ ಎತ್ತರದ ಹನುಮ ಮೂರ್ತಿಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಅನಾವರಣಗೊಳಿಸಿದರು.

    ಶನಿವಾರ ಅನಾವರಣಗೊಳಿಸಲಾದ ಹನುಮಂತನ ಮೂರ್ತಿ ಹನುಮಾನ್ ಜಿ ಚಾರ್ ಧಾಮ್ ಯೋಜನೆ ಭಾಗವಾಗಿ ದೇಶದ 4 ಭಾಗಗಳಲ್ಲಿ ಸ್ಥಾಪಿಸಲಾಗುತ್ತಿರುವ ಪ್ರತಿಮೆಗಳಲ್ಲಿ 2 ನೇಯದ್ದಾಗಿದೆ. ಇದನ್ನೂ ಓದಿ: ರಾಜೀನಾಮೆ ನೀಡಿದ ಈಶ್ವರಪ್ಪ ನಿವಾಸಕ್ಕೆ ಸ್ವಾಮೀಜಿಗಳ ಭೇಟಿ

    ಹನುಮ ಮೂರ್ತಿಯನ್ನು ಅನಾವರಣಗೊಳಿಸಿದ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವಿಟ್ಟರ್‌ನಲ್ಲಿ ತಿಳಿಸಿದ ಮೋದಿ, ಇಂದು ಹನುಮ ಜಯಂತಿಯ ಶುಭದಿನ. ಇಂದು ಗುಜರಾತ್‌ನ ಮೋರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜಿ ಮೂರ್ತಿಯನ್ನು ಉದ್ಘಾಟಿಸಲಾಗಿದೆ. ಈ ಶುಭ ಸಂದರ್ಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದ ಭಾಗವಾಗಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ ಎಂದು ಬರೆದಿದ್ದಾರೆ. ಇದನ್ನೂ ಓದಿ: ಬಂಜಾರ ಮುಖಂಡ ಗುರು ಚವಾಣ್ ಎಎಪಿ ಸೇರ್ಪಡೆ

    MODi

    ಹನುಮಾನ್ ಜಿ ಚಾರ್ ಧಾಮ್ ಯೋಜನೆ ಭಾಗವಾಗಿ ಮೊದಲ ಪ್ರತಿಮೆಯನ್ನು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸ್ಥಾಪನೆಯಾಗಿದೆ. ಈ ಸರಣಿಯ 3ನೇ ಪ್ರತಿಮೆ ತಮಿಳುನಾಡಿನ ರಾಮೇಶ್ವರಂನಲ್ಲಿ ನಿರ್ಮಾಣವಾಗುತ್ತಿದೆ.

  • ಹನುಮ ಜಯಂತಿ ಹಿನ್ನೆಲೆ ಕೇಸರಿ ಶಾಲು ಧರಿಸಿ ಗಣೇಶ್ ಹುಕ್ಕೇರಿ ಪಾದಯಾತ್ರೆ

    ಹನುಮ ಜಯಂತಿ ಹಿನ್ನೆಲೆ ಕೇಸರಿ ಶಾಲು ಧರಿಸಿ ಗಣೇಶ್ ಹುಕ್ಕೇರಿ ಪಾದಯಾತ್ರೆ

    ಚಿಕ್ಕೋಡಿ: ಹನುಮಂತನ ಜಯಂತಿ ಹಿನ್ನಲೆ ಶಾಸಕ ಗಣೇಶ್ ಹುಕ್ಕೇರಿಯವರು ತಮ್ಮ ಕಾರ್ಯಕರ್ತರ ಜೊತೆಗೆ ಬೆಳಗಾವಿ ಜಿಲ್ಲೆಯಿಂದ ಚಿಕ್ಕೋಡಿ ತೋರಣಹಳ್ಳಿಯ ಹನುಮಂತನ ದೇವಸ್ಥಾನದವರೆಗೆ ಪಾದಯಾತ್ರೆ ಮಾಡಿದ್ದಾರೆ.

    Ganesh Hukkeri

    ರಾಮಭಕ್ತ, ಪವನ ಪುತ್ರ ಹನುಮಂತ ಜಯಂತಿ ಹಿನ್ನಲೆ ಚಿಕ್ಕೋಡಿ ತಾಲೂಕಿನ ತೋರನಹಳ್ಳಿ ಹನುಮಂತ ದೇವಸ್ಥಾನದಲ್ಲಿ ಸಂಭ್ರಮ ಮನೆ ಮಾಡಿದೆ. ವಿಶೇಷವಾಗಿ ಗಣೇಶ್ ಹುಕ್ಕೇರಿಯವರು ತಮ್ಮ ಅಪಾರವಾದ ಕಾರ್ಯಕರ್ತರ ಜೊತೆಗೆ ಚಿಕ್ಕೋಡಿಯ ಬಸವ ವೃತ್ತದಿಂದ ತೋರಣಹಳ್ಳಿಯ ಹನುಮಂತನ ದೇವಸ್ಥಾನವರೆ ಪಾದಯಾತ್ರೆ ಮಾಡಿ ಆಂಜನೇಯನ ದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಔಷಧಿ ಗುಣಗಳಿರುವ ಏಲಕ್ಕಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ!

    ಪಾದಯಾತ್ರೆಯಲ್ಲಿ ಹನುಮಂತ ಭಕ್ತರು, ಗಣೇಶ್ ಹುಕ್ಕೇರಿ ಅವರ ಕಾರ್ಯಕರ್ತರು ಚಿಕ್ಕೋಡಿ ಪುರಸಭೆ ಸದಸ್ಯರು ಸೇರಿದಂತೆ ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ಜನರು ಭಾರೀ ಪ್ರಮಾಣದಲ್ಲಿ ಭಾಗಿಯಾಗಿದ್ದರು. ಗಣೇಶ್ ಹುಕ್ಕೇರಿಯವರಿಗೆ ತೋರಣ ಹಳ್ಳಿಯ ಹನುಮಂತ ಎಂದರೆ ಅಪಾರವಾದ ಭಕ್ತಿ, ಶ್ರದ್ಧೆ. ಈ ಕಾರಣಕ್ಕಾಗಿ ಗಣೇಶ್ ಹುಕ್ಕೇರಿಯವರು ಇಲ್ಲಿನ ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ ಹಾಗೂ ದೇವಸ್ಥಾನ ಅಭಿವೃದ್ಧಿಗೆ ದೇಣಿಗೆಯನ್ನು ನೀಡಿದ್ದಾರೆ.

    Ganesh Hukkeri

    ಪಾದಯಾತ್ರೆಯ ಉದ್ದಕೂ ಶ್ರೀರಾಮ ಜೈ…ಜೈ..ರಾಮ ಎನ್ನುವ ಘೋಷಣೆಗಳು ಮೊಳಗಿದವು. ಚಿಕ್ಕೋಡಿಯಿಂದ ತೋರಣಹಳ್ಳಿಯವರೆಗೆ ಸುಮಾರು 15 ಕಿ.ಮೀ. ವರೆಗೆ ಈ ಪಾದಯಾತ್ರೆ ನಡೆಯಿತು. ಇದನ್ನೂ ಓದಿ: ಬೇಸಿಗೆಯಲ್ಲಿ ನಿಮ್ಮ ಆರೋಗ್ಯವನ್ನು ಈ ರೀತಿ ಕಾಪಾಡಿಕೊಳ್ಳಿ