Tag: Hanuman temple

  • ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

    ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

    ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) 50 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ. ವಿವಿಧೆಡೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮುನ್ನವೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಶುಕ್ರವಾರ ಸಂಜೆಯಷ್ಟೇ ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದ ಕೇಜ್ರಿವಾಲ್ ಇಂದು (ಮೇ 11) ಬೆಳಗ್ಗೆ 11 ಗಂಟೆ ವೇಳೆಗೆ ಹನುಮಾನ್ ಮಂದಿರಕ್ಕೆ (Hanuman Temple) ಭೇಟಿ ನೀಡಿದ್ದಾರೆ. ಪತ್ನಿಯೊಂದಿಗೆ ದೆಹಲಿಯ ಕನೌಟ್ ಪ್ಲೇಸ್‌ (Delhi’s Connaught Place) ನಗರದಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಹಾಗೂ ಎಎಪಿ ಕಾರ್ಯಕರ್ತರೂ ಪಾಲ್ಗೊಂಡಿದ್ದಾರೆ. ಪೂಜೆ ವೇಳೆ ಮಂದಿರದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿತ್ತು.

    ಸಂಜೆ ರೋಡ್ ಶೋ:
    ಮಧ್ಯಂತರ ಜಾಮೀನು ಪಡೆದ ಮರುದಿನದಿಂದಲೇ ಚುನಾವಣಾ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಕೇಜ್ರಿವಾಲ್ ದೇವಸ್ಥಾನದ ಪೂಜಾ ಕಾರ್ಯಗಳು ಮುಗಿಯುತ್ತಿದ್ದಂತೆ ಆಪ್ ಕಾರ್ಯಕರ್ತರೊಂದಿಗೆ ಅಲ್ಲಿಯೇ ಸಭೆ ನಡೆಸಿದ್ದಾರೆ. ಮೇ 11 ರಂದು ಸಂಜೆ 5 ಗಂಟೆ ವೇಳೆಗೆ, ದಕ್ಷಿಣ ದೆಹಲಿಯಲ್ಲಿ ಆಪ್ ನಿಂದ ಆಯೋಜನೆಗೊಂಡ ರೋಡ್ ಶೋನಲ್ಲಿಯೂ (AAP Road Show) ಕೇಜ್ರಿವಾಲ್ ಭಾಗವಹಿಸಲಿದ್ದಾರೆ.

    ಜೂ.1 ರ ವರೆಗೆ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಮೇ 25 ರಂದು ದೆಹಲಿಯ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್ ಪರ ಕೇಜ್ರಿವಾಲ್ ಪ್ರಚಾರ ಮಾಡಲಿದ್ದಾರೆ.

    ಕೇಂದ್ರದ ವಿರುದ್ಧ ವಾಗ್ದಾಳಿ:
    ಇನ್ನೂ ಜೈಲಿನಿಂದ ಹೊರಬರುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ನನಗೆ ನಿಮ್ಮ ಆಶೀರ್ವಾದವನ್ನು ನೀಡಿದ್ದೀರಿ. ನಾನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರಿಂದಲೇ ನಾನು ನಿಮ್ಮ ಮುಂದೆ ಇದ್ದೇನೆ. ನಾವು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ.

  • ಅಯೋಧ್ಯೆಯಲ್ಲಿಂದು ರಾಮ ವಿರಾಜಮಾನ – ಬೆಂಗಳೂರಿನಲ್ಲಿ ಹೈ ಅಲರ್ಟ್

    ಅಯೋಧ್ಯೆಯಲ್ಲಿಂದು ರಾಮ ವಿರಾಜಮಾನ – ಬೆಂಗಳೂರಿನಲ್ಲಿ ಹೈ ಅಲರ್ಟ್

    – ಪ್ರಾಣಪ್ರತಿಷ್ಠೆ ಸಮಯಕ್ಕೆ ರಾಜ್ಯದ ದೇವಾಲಯಗಳಲ್ಲೂ ವಿಶೇಷ ಪೂಜೆ

    ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ತಲೆಎತ್ತಿರುವ ಭವ್ಯ ರಾಮಮಂದಿರದಲ್ಲಿಂದು (Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಲಿದೆ. ಅದಕ್ಕಾಗಿ ರಾಮನೂರಿನ ಎಲ್ಲ ಬೀದಿ-ಬೀದಿಗಳು ತಳಿರು ತೋರಣಗಳಿಂದ ಅಲಂಕೃತಗೊಂಡಿದೆ. ಧನುರ್ಧಾರಿ ರಾಮನ ಚಿತ್ರ, ರಾಮಚರಿತ ಮಾನಸದ ಸಾಲುಗಳನ್ನು ನಗರದ ಗೋಡೆ-ಗೋಡೆಗಳ ಮೇಲೂ ಬರೆಯಲಾಗಿದೆ. ಶತಮಾನಗಳ ಕನಸು ಇಂದು ನನಸಾಗುತ್ತಿದ್ದು, ಅಯೋಧ್ಯೆ ತುಂಬಾ ಸಂಭ್ರಮ ಮನೆ ಮಾಡಿದೆ.

    ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೂ (Bengaluru) ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದಲ್ಲಿರುವ ರಾಮಭಂಟ ಹನುಮನ ದೇವಾಲಯಗಳ ಮುಂದೆ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಹೊಸ ಗುಡ್ಡದ ಹಳ್ಳಿಯ ವೀರಾಂಜನೇಯ ಸ್ವಾಮಿ ದೇವಸ್ಥಾನ, ಯಲಹಂಕ, ಬ್ಯಾಟರಾಯನಪುರ, ರಾಜಾಜಿನಗರದ ವೀರಾಂಜನೇಯ ಸ್ವಾಮಿ ದೇವಸ್ಥಾನ, ದೀಪಾಂಜಲಿನಗರದಲ್ಲಿರುವ ಗಾಳಿ ಆಂಜನೇಯ ಸ್ವಾಮಿದೇವಸ್ಥಾನ ಸೇರಿದಂತೆ ಪ್ರಮುಖ ದೇವಸ್ಥಾನಗಳ ಮುಂದೆ ಖಾಕಿ ಕಣ್ಗಾವಲು ಇರಿಸಲಾಗಿದೆ.

    ನಗರದ ಅತಿಸೂಕ್ಷ್ಮ ಪ್ರದೇಶಗಳು ಹಾಗೂ ಪೆಂಡಲ್‌ಗಳು ಪ್ಲೆಕ್ಸ್‌ ಬಂಟಿಂಗ್ಸ್‌ಗಳು ಕಟ್ಟಿರುವ ಸ್ಥಳಗಲ್ಲಿ ಭದ್ರತೆ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನಗಳ ಮುಂದೆ ಭದ್ರತೆ ನಿಯೋಜನೆ ಮಾತ್ರವಲ್ಲದೇ ಪ್ರಮುಖ ಏರಿಯಾಗಳಲ್ಲಿ ಪೊಲೀಸರು ಬೀಟ್‌ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಪ್ರಕರಣ – ಉಗ್ರರಿಗೆ ಆಶ್ರಯ ನೀಡಿದ್ದ ಅಪ್ರಾಪ್ತನ ಬಂಧನ

    ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ: ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆ ನೆರವೇರುವ ಸಮಯಕ್ಕೆ ಬೆಂಗಳೂರಿನ ದೇವಾಲಯಗಳಲ್ಲೂ ವಿಶೇಷ ಪೂಜೆ ಸಲ್ಲಿಕೆಯಾಗಲಿದೆ. ಇದೇ ವೇಳೆ ಮಹಾಮಂಗಳಾರತಿ ನೆರವೇರಲಿದೆ. ಬಳಿಕ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ದೇವಸ್ಥಾನ ಆಡಳಿತ ಮಂಡಳಿಗಳು ತಿಳಿಸಿವೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ಮುಸ್ಲಿಮರು, ಕ್ರೈಸ್ತರು ಪ್ರಾರ್ಥನೆ ಮಾಡಿ: ಅಸ್ಸಾಂ ಸಿಎಂ ಮನವಿ 

  • ರಾಂಚಿಯಲ್ಲಿ ಹನುಮಾನ್ ವಿಗ್ರಹ ಧ್ವಂಸ- ಪರಿಸ್ಥಿತಿ ಉದ್ವಿಗ್ನ

    ರಾಂಚಿಯಲ್ಲಿ ಹನುಮಾನ್ ವಿಗ್ರಹ ಧ್ವಂಸ- ಪರಿಸ್ಥಿತಿ ಉದ್ವಿಗ್ನ

    ರಾಂಚಿ: ಜಾರ್ಖಂಡ್‌ನ (Jharkhand) ರಾಂಚಿಯಲ್ಲಿರುವ ದೇವಾಲಯದಲ್ಲಿ ಕೆಲ ಸಮಾಜ ವಿರೋಧಿ ಶಕ್ತಿಗಳು ಹನುಮಾನ್ ವಿಗ್ರಹ (Lord Hanuman Idol) ವನ್ನು ಧ್ವಂಸಗೊಳಿಸಿದ್ದಾರೆ.

    ರಾಂಚಿಯ ಮುಖ್ಯರಸ್ತೆಯಲ್ಲಿರುವ ದೇವಾಲಯದಲ್ಲಿ ಬೃಹತ್ ಹನುಮನ ವಿಗ್ರಹವನ್ನು ಇರಿಸಲಾಗಿತ್ತು. ಇದೀಗ ಕೀಡಿಗೇಡಿಗಳಿಂದ ಕೃತ್ಯ ನಡೆದಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದನ್ನೂ ಓದಿ: RSS ಭಯೋತ್ಪಾದಕ ಚಟುವಟಿಕೆ ಮಾಡಿದ್ದರೆ ಸರ್ಕಾರ ಕ್ರಮ ಕೈಗೊಳ್ಳಲಿದೆ: ಎಂಟಿಬಿ ನಾಗರಾಜ್‌

    ಹನುಮಾನ್ ವಿಗ್ರಹದ ಕೈ ಕಾಲು, ತಲೆ ಹಾಗೂ ಮುಖದ ಭಾಗಕ್ಕೆ ಹಾನಿ ಮಾಡಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು (Jharkhand Police) ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನೂ ಬಂಧಿಸಿದ್ದಾರೆ. ಇದನ್ನೂ ಓದಿ: ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಕ್ಲ್ಯಾಪ್ ಮಾಡಿ, ಹಾರೈಸಿದ ಅಭಿಷೇಕ್ ಅಂಬರೀಶ್

    ಪರಿಸ್ಥಿತಿ ನಿಯಂತ್ರಣದಲ್ಲಿಡಲು ದೇಗುಲದ ಸುತ್ತ ಹಾಗೂ ರಾಂಚಿ ನಗರದಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಾರ್ಖಂಡ್ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರೀಯ ಹೆದ್ದಾರಿಗಾಗಿ ಹನುಮಾನ್ ದೇವಾಲಯ ಸ್ಥಳಾಂತರ – ಹಿಂದೂ ಸಂಘಟನೆಗಳ ವಿರೋಧ

    ರಾಷ್ಟ್ರೀಯ ಹೆದ್ದಾರಿಗಾಗಿ ಹನುಮಾನ್ ದೇವಾಲಯ ಸ್ಥಳಾಂತರ – ಹಿಂದೂ ಸಂಘಟನೆಗಳ ವಿರೋಧ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಶಹಜಹಾನ್‌ಪುರದಲ್ಲಿರುವ (Shahjahanpur) ಹನುಮಾನ್ ದೇವಾಲಯವನ್ನು (Hanuman Temple) ರಾಷ್ಟ್ರೀಯ ಹೆದ್ದಾರಿ (National Highway) ನಿರ್ಮಾಣಕ್ಕಾಗಿ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಆದರೆ ಇದನ್ನು ವಿರೋಧಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

    ನಿರ್ಮಾಣ ಹಂತದಲ್ಲಿರುವ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದು ಹೋಗುವ ದೇವಾಲಯವನ್ನು ಸ್ಥಳಾಂತರಿಸಲು ಅಡ್ಡಿಪಡಿಸುತ್ತಿರುವ ದೇವಾಲಯದ ಅರ್ಚಕರು, ಗ್ರಾಮಸ್ಥರು ಸೇರಿದಂತೆ 32 ಜನರ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ದೇವಾಲಯದ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಲ್ಹಾರ್ ಪೊಲೀಸ್ ಠಾಣೆ ಪ್ರಭಾರಿ ವೀರೇಂದ್ರ ಸಿಂಗ್ ತಿಳಿಸಿದ್ದಾರೆ.

    ದೇವಾಲಯವನ್ನು ಪ್ರಸ್ತುತ ಸ್ಥಳದಿಂದ 80 ಮೀ. ದೂರಕ್ಕೆ ಸ್ಥಳಾಂತರಿಸಲಾಗುತ್ತಿದೆ. ಇದರ ಕೆಲಸ ಸೆಪ್ಟೆಂಬರ್ 17 ರಿಂದ ಪ್ರಾರಂಭಿಸಲಾಗಿದೆ. ಆದರೆ ಬಳಿಕ ಹಿಂದೂ ಸಂಘಟನೆಯ ಸದಸ್ಯರು ಇದನ್ನು ವಿರೋಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ಹೋರಾಟ- ವಾಟ್ಸಪ್, ಇನ್‌ಸ್ಟಾಗ್ರಾಮ್ ಬಳಕೆ ಸ್ಥಗಿತ

    ಈ ದೇವಾಲಯ ಸುಮಾರು 1 ಶತಮಾನದಷ್ಟು ಹಳೆಯದಾಗಿದೆ. ಇದೀಗ ಹೆದ್ದಾರಿ ವಿಸ್ತರಣೆಗೆ ದೇವಾಲಯ ಅಡ್ಡಿಯಾಗುತ್ತಿದೆಯೆಂದು ಸ್ಥಳಾಂತರಿಸುತ್ತಿದ್ದಾರೆ. ಕಳೆದ 2 ವರ್ಷದ ಹಿಂದೆಯೇ ದೇವಾಲಯವನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗಿತ್ತು. ಆದರೆ ಅದಕ್ಕಾಗಿ ತರಲಾಗಿದ್ದ ಕ್ರೇನ್ ಹಾನಿಗೊಳಗಾಗಿತ್ತು. ಬಳಿಕ ನಮಗೆ ದೇವಾಲಯದ ಮೇಲೆ ನಂಬಿಕೆ ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಪುರುಷ ED, CBI ನನ್ನನ್ನು ಮುಟ್ಟುವಂತಿಲ್ಲ – ಸುವೇಂದು ಅಧಿಕಾರಿಗೆ ಇದ್ರಿಸ್ ಅಲಿ ಟಾಂಗ್

    ಈ ಕಾಮಗಾರಿಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಹೆಚ್‌ಎಐ) ಅಡಿಯಲ್ಲಿ ಮಾಡಲಾಗುತ್ತಿದ್ದು, ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕವೇ ಹನುಮಾನ್ ದೇವಾಲಯವನ್ನು ಸ್ಥಳಾಂತರಿಸಲಾಗುತ್ತಿದೆ. ದೇವಾಲಯವನ್ನು ಸಂಪೂರ್ಣ ಗೌರವದಿಂದಲೇ ವರ್ಗಾವಣೆ ಮಾಡುತ್ತಿದ್ದೇವೆ ಎಂದು ಎಂದು ತಿಲ್ಹಾರ್ ಎಸ್‌ಡಿಎಂ ರಾಶಿ ಕೃಷ್ಣ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀರಂಗಪಟ್ಟಣದ ಆಂಜನೇಯ ದೇವಾಲಯ ಮಸೀದಿಯಾಗಿದೆ: ಮುತಾಲಿಕ್

    ಶ್ರೀರಂಗಪಟ್ಟಣದ ಆಂಜನೇಯ ದೇವಾಲಯ ಮಸೀದಿಯಾಗಿದೆ: ಮುತಾಲಿಕ್

    ಧಾರವಾಡ: ಶ್ರೀರಂಗಪಟ್ಟಣದ ಆಂಜನೇಯನ ದೇವಸ್ಥಾನ ಮಸೀದಿಯಾಗಿ ಪರಿವರ್ತನೆಯಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ಅದು ಪ್ರಾಚ್ಯ ಇಲಾಖೆಯ ಕಟ್ಟಡ. ಅಲ್ಲಿ ಬೋರ್ಡ್ ಕೂಡಾ ಇದೆ. ಅಲ್ಲಿ ಆಂಜನೇಯ ದೇವಸ್ಥಾನ ಪ್ರತಿಷ್ಠಾಪನೆ ಮಾಡಬೇಕೆಂಬ ಒತ್ತಡ ಕೂಡಾ ಬಂದಿದೆ. ಅಲ್ಲಿ ನಡೆದಿರುವ ವಾದ ನೂರಕ್ಕೆ ನೂರು ಸತ್ಯ ಎಂದರು. ಇದನ್ನೂ ಓದಿ: ದಿವ್ಯಾಂಗರಿಗೆ ಸರ್ಕಾರದ ಸೌಲಭ್ಯ ತಲುಪಿಸುವಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ: ರಾಜ್ಯಪಾಲ

    ಈ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ವಿಚಾರ ಮಂಚ್ ಹೋರಾಟ ಮಾಡುತ್ತಿದೆ. ಅದಕ್ಕೆ ನಾನು ಬೆಂಬಲ ಕೊಡುತ್ತೇನೆ. ಆಂಜನೇಯ ದೇವಾಲಯ ಪ್ರತಿಷ್ಠಾಪನೆಗೆ ಜಿಲ್ಲಾಧಿಕಾರಿ ಹಾಗೂ ಮುಸ್ಲಿಂ ಸಮಾಜ ಅವಕಾಶ ಮಾಡಿ ಕೊಡಬೇಕು. ಈ ವಿಚಾರದಲ್ಲಿ ಸಂಘರ್ಷ ಆಗದೇ ಸೌಹಾರ್ದ ಶಾಂತ ರೀತಿಯಲ್ಲಿ ಬಗೆಹರಿಸಬೇಕು ಎಂದು ವಿನಂತಿಸಿಕೊಂಡರು.

    ಪಠ್ಯದಲ್ಲಿ ಹೆಡಗೆವಾರ್ ಸ್ವಾಗತಾರ್ಹ:
    ಪಠ್ಯ ಪುಸ್ತಕದಲ್ಲಿ ಆರ್‌ಎಸ್‌ಎಸ್ ಹೆಡಗೆವಾರ್ ಇವರ ವಿಚಾರ ಧಾರೆ ಮುದ್ರಿಸಿದ್ದು ಸ್ವಾಗತಾರ್ಹ. ಇದು ವಿರೋಧಾತ್ಮಕ ಪ್ರಕ್ರಿಯೆ ಅಲ್ಲ, ಇದು ರಾಷ್ಟ್ರೀಯ ವಾದ. ದೇಶ ಭಕ್ತಿಯ ಹಿನ್ನೆಲೆಯಲ್ಲಿ ಆದ ಘಟನೆ. ಇದನ್ನು ನಾನು ಸ್ವಾಗತ ಮಾಡುತ್ತೇನೆ. ಇದನ್ನು ವಿರೋಧ ಮಾಡುವ ಅವಶ್ಯಕತೆ ಇಲ್ಲ ಎಂದರು. ಇದನ್ನೂ ಓದಿ: ಮೇ 19ಕ್ಕೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ

    Pramod Muthalik (3)

    ಇಲ್ಲಿವರೆಗೆ ನಾಸ್ತಿಕವಾದ, ಅರಾಷ್ಟ್ರೀಯತೆ, ಮುಸ್ಲಿಂ ಗುಲಾಮಿ ರಾಜರ ವೈಭವಿಕರಣ ಪಠ್ಯ ಪುಸ್ತಕದಲ್ಲಿತ್ತು. ಟಿಪ್ಪು, ಔರಂಗಜೇಬ, ಅಕ್ಬರನ ಪಾಠ ಸಾಕು. ಈಗ ಹೆಡಗೆವಾರ್, ಭಗತಸಿಂಗ್, ಸಾವರಕರ್, ರಾಯಣ್ಣ, ಚನ್ನಮ್ಮರಂತವರ ಬಗ್ಗೆ ಹಾಕುತ್ತಿರುವದು ಒಳ್ಳೆಯ ವಿಚಾರ ಎಂದರು.

  • ಕಳ್ಳತನ ಮಾಡುವುದಕ್ಕೂ ಮುನ್ನ ದೇವರ ಪಾದ ಮುಟ್ಟಿ ನಮಸ್ಕರಿಸಿದ!- ವೀಡಿಯೋ ವೈರಲ್

    ಕಳ್ಳತನ ಮಾಡುವುದಕ್ಕೂ ಮುನ್ನ ದೇವರ ಪಾದ ಮುಟ್ಟಿ ನಮಸ್ಕರಿಸಿದ!- ವೀಡಿಯೋ ವೈರಲ್

    ಮುಂಬೈ: ಎಲ್ಲ ಕಳ್ಳರು ದುಡ್ಡು ಸಿಕ್ಕರೆ ಸಾಕು ಮೊದಲು ಅಲ್ಲಿಂದ ಹೊರಟು ಹೋಗಬೇಕು ಎನ್ನುವಾಗ ಇಲ್ಲೊಬ್ಬ ಕಳ್ಳ ದೇವರ ಪಾದಕ್ಕೆ ನಮಸ್ಕರಿಸಿದ ವಿಲಕ್ಷಣ ಘಟನೆಯೊಂದು ಮಹಾರಾಷ್ಟ್ರದ ಥಾಣೆ ನಗರದ ದೇವಸ್ಥಾನದಲ್ಲಿ ನಡೆದಿದೆ.

    ಮಹಾರಾಷ್ಟ್ರದ ಥಾಣೆ ನಗರದ ಖೋಪಾಟ್ ಪ್ರದೇಶದ ಹನುಮಂತ ದೇವಸ್ಥಾನಕ್ಕೆ ನುಗ್ಗಿದ ಕಳ್ಳನೊಬ್ಬ ಹುಂಡಿಯನ್ನು ಕದಿಯಲು ಬಂದಿದ್ದಾನೆ. ಆದರೆ ಇಲ್ಲಿರುವ ವಿಶೇಷವೆಂದರೆ ಆತ ಹಣ ಕದಿಯುವ ಮುನ್ನ ಹನುಮಾನ್ ದೇವರ ಕಾಲಿಗೆ ಬಿದ್ದು, ಪ್ರಾರ್ಥನೆ ಮಾಡಿದ್ದಾನೆ. ನಂತರ ವಿಗ್ರಹದ ಮುಂದೆ ಇದ್ದ ಹುಂಡಿಯನ್ನು ಕದ್ದು ಪರಾರಿಯಾಗಿದ್ದಾನೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ತಮಿಳು ಚಿತ್ರತಂಡದ ನಂತರ ಮತ್ತೆ ಸಕ್ಕರೆ ನಾಡಿನಲ್ಲಿ ತೆಲುಗು ಸಿನಿಮಾದವರಿಂದ ಅವಾಂತರ

    ದೇವಸ್ಥಾನಕ್ಕೆ ಬೆಳಗ್ಗೆ ಬಂದು ನೋಡಿದ ನಂತರ ಕಳ್ಳತನವಾಗಿರುವುದು ತಿಳಿದುಬಂದಿದೆ. ನಂತರ ಪೊಲೀಸರಿಗೆ ಈ ಮಾಹಿತಿ ತಿಳಿಸಿದ್ದು, ಅವರು ಸಿಸಿಟಿವಿಯನ್ನು ಪರಿಶೀಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

    ಪ್ರಸ್ತುತ ನೌಪದ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದು, ಆತ ಕದ್ದ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ

  • ಆಂಜನೇಯನ ದೇಗುಲ ನವೀಕರಣಕ್ಕೆ 1 ಕೋಟಿ ಮೌಲ್ಯದ ಭೂಮಿ ನೀಡಿದ ಮುಸ್ಲಿಂ ವ್ಯಕ್ತಿ!

    ಆಂಜನೇಯನ ದೇಗುಲ ನವೀಕರಣಕ್ಕೆ 1 ಕೋಟಿ ಮೌಲ್ಯದ ಭೂಮಿ ನೀಡಿದ ಮುಸ್ಲಿಂ ವ್ಯಕ್ತಿ!

    – ಸೋಶಿಯಲ್ ಮೀಡಿಯಾದಲ್ಲಿ ಬ್ಯಾನರ್ ವೈರಲ್

    ಬೆಂಗಳೂರು: ಆಂಜನೇಯನ ದೇಗುಲದ ಜೀರ್ಣೋದ್ದಾರಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬರು ಸುಮಾರು 1 ಕೋಟಿ ಬೆಲೆಬಾಳುವ ತನ್ನ ಭೂಮಿಯನ್ನು ದಾನ ಮಾಡಿದ್ದಾರೆ. ಸದ್ಯ ಇದರ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಹೌದು. ನಗರದ ಕಾಡುಗೋಡಿ ಬೆಳತೂರು ಕಾಲನಿ ನಿವಾಸಿಯಾಗಿರುವ ಎಚ್.ಎಂ.ಜಿ ಬಾಷಾ ಅವರು ಈ ಮಹಾನ್ ಕಾರ್ಯ ಮಾಡಿದವರು. ಲಾರಿ ಉದ್ಯಮಿಯಾಗಿರುವ ಬಾಷಾ ಬೆಂಗಳೂರಿನಿಂದ 35 ಕಿ.ಮೀ ದೂರದಲ್ಲಿರುವ ಹೊಸಕೋಟೆ ತಾಲೂಕಿನ ವಾಲಗೇರಪುರದಲ್ಲಿರುವ ತಮ್ಮ 3 ಎಕರೆ ಭೂಮಿಯಲ್ಲಿ 1.5 ಗುಂಟೆ ಜಾಗವನ್ನು ಉಚಿತವಾಗಿಯೇ ಆಂಜನೇಯನ ದೇಗುಲಕ್ಕೆ ದಾನ ಮಾಡಿ ಸುದ್ದಿಯಾಗಿದ್ದಾರೆ.

    ಈ ಸಂಬಂಧ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಬಾಷಾ, ಅಲ್ಲಿ ಒಂದು ಸಣ್ಣ ಹನುಮಾನ್ ದೇವಾಲಯವಿತ್ತು. ಹೀಗಾಗಿ ದೊಡ್ಡ ದೇಗುಲವನ್ನು ನಿರ್ಮಿಸಲು ಬಯಸಿದರೆ ನಾನು ಅವರಿಗೆ ಭೂಮಿಯನ್ನು ನೀಡಬಹುದು ಎಂದು ಕೆಲವರಲ್ಲಿ ಹೇಳಿದೆ. ಇತ್ತೀಚೆಗೆ ಟ್ರಸ್ಟ್ ಅವರು 1 ಗುಂಟೆ ಭೂಮಿಯನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚಿಸಲು ನನ್ನ ಬಳಿಗೆ ಬಂದರು. ಆಗ ನಾನು ಭೂಮಿ ನೀಡಲು ಸಿದ್ಧವಾಗಿರುವುದಾಗಿ ತಿಳಿಸಿದೆ. ಅಲ್ಲದೆ 1.5 ಗುಂಟೆ ಭೂಮಿಯ ಮಾಲಕತ್ವವನ್ನು ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಸೇವಾ ಟ್ರಸ್ಟ್ ಗೆ ವರ್ಗಾವಣೆ ಮಾಡಿರುವುದಾಗಿ ತಿಳಿಸಿದರು.

    ಪೂಜಾ ಕಾರ್ಯಕ್ರಮಗಳು ಇದ್ದಂತಹ ಸಮಯದಲ್ಲಿ ದೇಗುಲದ ಆವರಣದಲ್ಲಿ ಜಾಗವಿಲ್ಲದೆ ಭಕ್ತರು ಪರದಾಡುತ್ತಿರುವುದನ್ನು ಬಾಷಾ ಗಮನಿಸಿದ್ದಾರೆ. ಈ ವಿಚಾರ ಅವರಿಗೆ ಭೂಮಿ ನೀಡಲು ಪ್ರೇರೇಪಿಸಿರುವುದಾಗಿ ಬಾಷಾ ಹೇಳಿದ್ದಾರೆ. ಸದ್ಯ ಸುಮಾರು 80 ಲಕ್ಷದಿಂದ 1 ಕೋಟಿವರೆಗೂ ಬೆಲೆಬಾಳುವ ಜಾಗವನ್ನು ಬಾಷಾ ಹಿಂದೂಗಳಿಗೆ ಹಸ್ತಾಂತರಿಸಿದ್ದಾರೆ.

    ಬಾಷಾ ಅವರ ಈ ದಿಟ್ಟ ನಿರ್ಧಾರದಿಂದ ವಾಲಗೇರಪುರದ ಜನರಿಗೆ ಮೊದಲು ಶಾಕ್ ಜೊತೆ ಸಪ್ರೈಸ್ ಕೂಡ ಉಂಟುಮಾಡಿದೆ. ಈತ ಏನು ಮಾಡುತ್ತಿದ್ದಾನೆ ಎಂದು ಗ್ರಾಮದ ಜನ ಅನುಮಾನಪಟ್ಟರು. ಆದರೆ ಇಲ್ಲಿ ನಿರ್ಮಾಣವಾಗುವ ಹನುಮಾನ್ ದೇವಾಲಯವನ್ನು ನೋಡಲು ನಾನು ಕೂಡ ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ಬಾಷಾ ತಿಳಿಸಿದ್ದಾರೆ.

    ಗ್ರಾಮದ ಜನರು ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ವ್ಯತ್ಯಾಸವನ್ನು ನೋಡುವವರಲ್ಲ ಎಂದು ನಾನು ಭಾವಿಸುತ್ತೇನೆ. ನಾವೆಲ್ಲ ಒಂದೇ ಎಂಬುದನ್ನು ಅವರು ಪರಿಗಣಿಸುತ್ತಾರೆ. ಕೆಲ ರಾಜಕೀಯ ಮುಖಂಡರು ತಮ್ಮ ಸ್ವಂತ ಲಾಭಕ್ಕಾಗಿ ಮಾತನಾಡುವಾಗ ಜನರ ಧರ್ಮವನ್ನು ಎತ್ತಿ ತೋರಿಸುತ್ತಾರೆ. ಪ್ರಸ್ತುತ ಪೀಳಿಗೆ ಕೋಮುವಾದಿ ಮಾರ್ಗಗಳಲ್ಲಿ ಹೆಚ್ಚು ಯೋಚಿಸುತ್ತಿದೆ. ‘ಲವ್ ಜಿಹಾದ್’, ‘ಗೋಹತ್ಯಾ’ ಮುಂತಾದ ವಿಷಯಗಳ ಬಗ್ಗೆ ನಾವು ದಿನನಿತ್ಯ ಕೇಳುತ್ತೇವೆ. ದೇಶವು ಈ ರೀತಿಯಾದರೆ ಪ್ರಗತಿ ಹೊಂದುತ್ತದೆಯೇ? ನಾವು ಒಗ್ಗಟ್ಟಾಗಬೇಕು ಮತ್ತು ನಮ್ಮ ದೇಶದ ಬಗ್ಗೆ ನಮಗೆ ಪ್ರೀತಿ ಇರಬೇಕು ಎಂದು ಅವರು ವಿವರಿಸಿದ್ದಾರೆ.

    ನನ್ನ ಈ ನಿರ್ಧಾರಕ್ಕೆ ಕುಟುಂಬ ಕೂಡ ಸಂಪೂರ್ಣ ಒಪ್ಪಿಗೆ ನೀಡಿದೆ. ಟ್ರಸ್ಟ್ ಸದ್ಯ ಸುಮಾರು 1 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಿದೆ ಎಂದರು. ಈ ಜಮೀನು ಓಲ್ಡ್ ಮದ್ರಾಸ್ ರಸ್ತೆಯ ಪಕ್ಕದಲ್ಲಿಯೇ ಹಾದುಹೋಗುವ ಹೆದ್ದಾರಿಯ ಸಮೀಪದಲ್ಲಿದೆ. ಬಾಷಾ ಅವರ ದೇಣಿಗೆಯನ್ನು ಶ್ಲಾಘಿಸುವ ಪೋಸ್ಟರ್ ಅನ್ನು ಸ್ಥಾಪಿಸಲಾಗಿದೆ. ಸದ್ಯ ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಅಲ್ಲದೆ ಬಾಷಾ ಈ ದೃಢ ನಿರ್ಧಾರಕ್ಕೆ ಜನ ಬೇಷ್ ಎನ್ನುತ್ತಿದ್ದಾರೆ.

  • ಜಲದಿಗ್ಬಂಧನದಿಂದ ಕೊನೆಗೂ ಸಿಕ್ತು ಆಂಜನೇಯನಿಗೆ ಮುಕ್ತಿ

    ಜಲದಿಗ್ಬಂಧನದಿಂದ ಕೊನೆಗೂ ಸಿಕ್ತು ಆಂಜನೇಯನಿಗೆ ಮುಕ್ತಿ

    ರಾಯಚೂರು: ಸತತ ಮಳೆಯಿಂದಾಗಿ ಜಲದಿಗ್ಬಂಧನಕ್ಕೊಳಗಾಗಿದ್ದ ರಾಯಚೂರಿನ ಉಸುಕಿನ ಆಂಜನೇಯನಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

    ಇಲ್ಲಿನ ಮುಳ್ಳಕುಂಟೆ ಕೆರೆ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದ ಉಸುಕಿನ ಆಂಜನೇಯ ದೇವಾಲಯದಲ್ಲಿ ಕಳೆದ ಒಂದು ವಾರದಿಂದ ಪೂಜಾ ಕೈಂಕರ್ಯಗಳನ್ನ ನಿಲ್ಲಿಸಲಾಗಿತ್ತು. ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ರಾಯಚೂರು ನಗರಸಭೆ ಕೊನೆಗೆ ದೇವಾಲಯದಲ್ಲಿನ ನೀರು ಹೊರಹೋಗಲು ವ್ಯವಸ್ಥೆ ಮಾಡಿದೆ. ದೊಡ್ಡ ಪೈಪ್ ಅಳವಡಿಸಿ ನೀರನ್ನು ಹೊರ ಬಿಡಲಾಗುತ್ತಿದೆ.

    ಸತತ ಮಳೆಗೆ ಮುಳ್ಳಕುಂಟೆ ಕೆರೆ ತುಂಬಿ ಹರಿದು ದೇವಸ್ಥಾನಕ್ಕೆ ನೀರು ನುಗ್ಗಿತ್ತು. ರಸ್ತೆ ಸಹ ಹಾಳಾಗಿ ಭಕ್ತರು ದೇವರ ದರ್ಶನದಿಂದ ದೂರ ಉಳಿದಿದ್ದರು. ಈಗ ನಗರಸಭೆ ನೀರು ತೆರವುಗೊಳಿಸಿ ಭಕ್ತರಿಗೆ ಅನುಕೂಲ ಮಾಡಲು ಮುಂದಾಗಿದೆ.

     

    ದೇವಾಲಯ ಪಕ್ಕದ 4 ಎಕರೆ ಭತ್ತ ಹಾಗೂ ಎರಡು ಎಕರೆಯ ಹೂವಿನ ತೋಟ ಸಂಪೂರ್ಣ ಹಾಳಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ಹಾನಿಯಾಗಿದೆ. ಕೂಡಲೇ ಕಂದಾಯ ಇಲಾಖೆ ಪರಿಶೀಲನೆ ನಡೆಸಿ ಪರಿಹಾರ ಕಾರ್ಯಕ್ಕೆ ಮುಂದಾಗಬೇಕು ಅಂತ ರೈತರು ಒತ್ತಾಯಿಸಿದ್ದಾರೆ.

  • ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು

    ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು

    ಕೋಲಾರ: ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲವನ್ನ ಧ್ವಂಸಗೊಳಿಸಿ ಬೆಂಕಿ ಇಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತೆರ್ನಹಳ್ಳಿ ಗ್ರಾಮದಲ್ಲಿ ತಡ ರಾತ್ರಿ ಈ ಘಟನೆ ನಡೆದಿದೆ. ವಕೀಲ ಚಂದ್ರಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಈ ದೇವಾಲಯ ನಿರ್ಮಾಣವಾಗಿತ್ತು.

    ಜಮೀನಿನಲ್ಲಿ ದೇವಾಲಯ ನಿರ್ಮಿಸಿದ್ದಕ್ಕೆ ನಾರಾಯಣಮ್ಮ ಅಕ್ಷೇಪ ವ್ಯಕ್ತಪಡಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಜಮೀನು ವಿವಾದದ ಹಿನ್ನೆಲೆಯಲ್ಲಿ ನಾರಾಯಣಮ್ಮ ದೇಗುಲಕ್ಕೆ ಬೆಂಕಿ ಇಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

    ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.