Tag: Hanur

  • ಚಾ.ನಗರ| ಕೃಷಿ ಹೊಂಡದಲ್ಲಿ ಮಹಿಳೆ, ಪುರುಷನ ಮೃತದೇಹ ಪತ್ತೆ

    ಚಾ.ನಗರ| ಕೃಷಿ ಹೊಂಡದಲ್ಲಿ ಮಹಿಳೆ, ಪುರುಷನ ಮೃತದೇಹ ಪತ್ತೆ

    ಚಾಮರಾಜನಗರ: ಕೃಷಿ ಹೊಂಡದಲ್ಲಿ ಮಹಿಳೆ ಮತ್ತು ಪುರುಷನ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.

    ಗುಳ್ಯದ ಬಯಲು ಬಳಿ ಒಡೆಯರಪಾಳ್ಯ ನಿವಾಸಿಗಳಾದ ಮೀನಾಕ್ಷಿ (38) ಹಾಗೂ ರವಿ (40) ಎಂಬವರು ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಅಥವಾ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

  • ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ಜಮೀನು ವಶ – ಮನನೊಂದು ಮಹಿಳೆ ಆತ್ಮಹತ್ಯೆ

    ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ಜಮೀನು ವಶ – ಮನನೊಂದು ಮಹಿಳೆ ಆತ್ಮಹತ್ಯೆ

    ಚಾಮರಾಜನಗರ: ಅಂಬೇಡ್ಕರ್ ಭವನ (Ambedkar Bhavan) ನಿರ್ಮಾಣ ಮಾಡುವುದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಜಮೀನು ವಶ ಪಡಿಸಿಕೊಂಡ ಹಿನ್ನೆಲೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ (Chamarajanagar) ನಡೆದಿದೆ.

    ರಾಜಮ್ಮ (52) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಚಾಮರಾಜನಗರ ಜಿಲ್ಲೆ ಹನೂರು (Hanur) ತಾಲೂಕಿನ ದೊಡ್ಡಾಲತ್ತೂರಿನಲ್ಲಿ ಘಟನೆ ನಡೆದಿದೆ. ರಾಜಮ್ಮರಿಗೆ ಪಿತ್ರಾರ್ಜಿತವಾಗಿ 90 ಸೆಂಟ್ಸ್ ಭೂಮಿ ಬಂದಿತ್ತು. ಇದ್ದ ಚೂರುಪಾರು ಭೂಮಿಯಲ್ಲಿ ಕುಟುಂಬ ವ್ಯವಸಾಯ ಮಾಡಿಕೊಂಡಿತ್ತು. ಕಳೆದ ವಾರ ಇದ್ದಕ್ಕಿದ್ದ ಹಾಗೆ ಬಂದ ಕಂದಾಯ ಇಲಾಖೆಯ ಅಧಿಕಾರಿಗಳು 20 ಸೆಂಟ್ಸ್ ಭೂಮಿ ವಶಪಡಿಸಿಕೊಂಡಿದ್ದರು. ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಇದರಿಂದ ಬೇಸತ್ತು ರಾಜಮ್ಮ ಇಂದು ಮುಂಜಾನೆ ತಮ್ಮ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಗುಂಡಿ ತೋಡಿದ್ದ ಕಾರ್ಮಿಕರ ಸಹಿ ಪಡೆದು ಕಳುಹಿಸಿದ ಎಸ್‌ಐಟಿ

    ರಾಜಮ್ಮರ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಯಾವುದೇ ಕಾರಣಕ್ಕೂ ಶವ ತೆಗೆಯುವುದಿಲ್ಲವೆಂದು ಪ್ರತಿಭಟನೆ ನಡೆಸಿದರು. ಘಟನೆ ಸಂಬಂಧ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶ್ರಾವಣ ಶನಿವಾರ – ಕೋಲಾರದ ಚಿಕ್ಕ ತಿರುಪತಿ, ಬಂಗಾರ ತಿರುಪತಿ ದೇವಾಲಯದಲ್ಲಿ ಭಕ್ತ ಸಾಗರ

  • PUBLiC TV Impact – ಸೋಲಿಗ ಬಾಲಕಿಗೆ ಆಧಾರ್ ಕಾರ್ಡ್ ನೋಂದಣಿ

    PUBLiC TV Impact – ಸೋಲಿಗ ಬಾಲಕಿಗೆ ಆಧಾರ್ ಕಾರ್ಡ್ ನೋಂದಣಿ

    ಚಾಮರಾಜನಗರ: ಸೋಲಿಗ ಬಾಲಕಿ ಚೈತ್ರಗೆ 12 ವರ್ಷವಾದರೂ ಕೂಡ ಇಲ್ಲಿಯವರೆಗೂ ಕೂಡ ಆಧಾರ್ ಕಾರ್ಡ್ (Aadhar Card) ಇಲ್ಲದೇ ಸರ್ಕಾರದ ಯಾವುದೇ ಸೌಲಭ್ಯ ಸಿಕ್ಕಿರಲಿಲ್ಲ. ಈ ಬಗ್ಗೆ ಪಬ್ಲಿಕ್ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿ ಪ್ರಸಾರದ ಬಳಿಕ ಕೆಲವೇ ಘಂಟೆಗಳಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಬಾಲಕಿ ಚೈತ್ರಗೆ ಆಧಾರ್ ಕಾರ್ಡ್ ನೋಂದಣಿ ಮಾಡಿಸಿಕೊಟ್ಟಿದ್ದಾರೆ.

    ಚೈತ್ರ ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು (Hanur) ತಾಲೂಕಿನ ಕೌಳೇಹಳ್ಳ ನಿವಾಸಿಯಾಗಿದ್ದು, ದಿನನಿತ್ಯ ಲೊಕ್ಕನಹಳ್ಳಿಗೆ ಕರ್ನಾಟಕ ಪಬ್ಲಿಕ್ ಶಾಲೆಯ ವ್ಯಾಸಂಗಕ್ಕಾಗಿ ಹೋಗುತ್ತಿದ್ದಳು. ದಿನಾ 30 ರೂ. ಬಸ್ ಚಾರ್ಜ್ ಕೊಟ್ಟು ಓಡಾಡುವ ಪರಿಸ್ಥಿತಿ ಇತ್ತು. ಅಲ್ಲದೇ ಸರ್ಕಾರದ ಬಹುತೇಕ ಎಲ್ಲಾ ಸೌಲಭ್ಯದಿಂದ ವಂಚಿತಳಾಗಿದ್ದಳು. ಇದನ್ನೂ ಓದಿ: ಮತ್ತೆ ಉದ್ಯೋಗಕ್ಕೆ ಮರಳಿದ ರಿಷಿ ಸುನಕ್ – 70 ಗಂಟೆ ಕೆಲ್ಸ ಮಾಡಿ ಎಂದು ನೆಟ್ಟಿಗರ ಅಪಹಾಸ್ಯ

    ಈ ಬಗ್ಗೆ ಪಬ್ಲಿಕ್ ಟಿವಿ ವಿಸ್ತೃತ ವರದಿಗೆ ಜಿಲ್ಲಾಡಳಿತ ಸ್ಪಂದಿಸಿದ್ದು, ಬಾಲಕಿ ಚೈತ್ರಗೆ ತೊಡಕಾಗಿದ್ದ ಆಧಾರ್ ಕಾರ್ಡ್ ನೋಂದಣಿಯನ್ನು ಮಾಡಿಸಲಾಗಿದೆ. ಅಲ್ಲದೇ ಶೀಘ್ರದಲ್ಲೇ ಬಾಲಕಿ ಮನೆಗೆ ಆಧಾರ್ ಕಾರ್ಡ್ ತಲುಪುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಈ ಹಿನ್ನಲೆ ಪಬ್ಲಿಕ್ ಟಿವಿಗೆ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಸಿಸಿ ರೋಡ್ ಕಮಿಷನ್ ವಿಚಾರ – ಇಬ್ಬರು ಅಧಿಕಾರಿಗಳ ಅಮಾನತು: ಪ್ರಿಯಾಂಕ್ ಖರ್ಗೆ

  • Chamarajanagar | ಕೌಟುಂಬಿಕ ಕಲಹ – 2 ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

    Chamarajanagar | ಕೌಟುಂಬಿಕ ಕಲಹ – 2 ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

    ಚಾಮರಾಜನಗರ: ಕೌಟುಂಬಿಕ ಕಲಹದಿಂದ (Family Feud) ಬೇಸತ್ತು ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು (Hanur) ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ನಡೆದಿದೆ.

    ಸುಶೀಲ (30), ಆಕೆಯ ಮಕ್ಕಳಾದ ಚಂದ್ರು (8), ದಿವ್ಯ (11) ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾವಿಯ ದಡದಲ್ಲಿ ಚಪ್ಪಲಿ ಹಾಗೂ ತಾಳಿ ಇಟ್ಟು ತಾಯಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕ ನೀರು ತರಲು ಬಾವಿಯ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

    ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಂಬೇಡ್ಕರ್‌ಗೆ ಕಾಂಗ್ರೆಸ್ ಭಾರತರತ್ನ ಕೊಟ್ಟಿಲ್ಲ, ಬಿಜೆಪಿ ಬೆಂಬಲಿತ ಸರ್ಕಾರದಿಂದ ಗೌರವ: ವಿಜಯೇಂದ್ರ

  • ಚಾಮರಾಜನಗರ| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ – 18 ಅಡಿ ಉದ್ದದ ಸರಳಲ್ಲಿ ಬಾಯಿ ಬೀಗ

    ಚಾಮರಾಜನಗರ| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ – 18 ಅಡಿ ಉದ್ದದ ಸರಳಲ್ಲಿ ಬಾಯಿ ಬೀಗ

    ಚಾಮರಾಜನಗರ: ಹನೂರು (Hanur) ಪಟ್ಟಣದ ಗ್ರಾಮ ದೇವತೆ ಬೆಟ್ಟಳ್ಳಿ ಮಾರಮ್ಮ (Bettalli Maramma Temple) ಜಾತ್ರಾ ಮಹೋತ್ಸವದ ಹಿನ್ನೆಲೆ ಬುಧವಾರದಂದು 3,000ಕ್ಕೂ ಹೆಚ್ಚು ಭಕ್ತಾದಿಗಳು ಸಣ್ಣ ಬಾಯಿ ಬೀಗ ಹಾಕಿಕೊಂಡು ಮಾರಮ್ಮನಿಗೆ ಹರಕೆ ತೀರಿಸಿದರು. ಜೊತೆಗೆ, 103 ಮಂದಿ 18-20 ಅಡಿ ಉದ್ದದ ಸರಳಗಳ ಬಾಯಿ ಬೀಗ ಧರಿಸಿ ಮಾರಮ್ಮನಿಗೆ ನಮಿಸಿದರು.

    ದೊಡ್ಡ ಬಾಯಿಬೀಗ ಹಾಕಿಕೊಂಡ ಭಕ್ತರು ಕಳೆದ ಒಂದು ವಾರದಿಂದ ಮಾರಮ್ಮನ ದೇವಾಲಯದಲ್ಲಿ ಸೇವೆ ಸಲ್ಲಿಸಿ ಬೆಳಗ್ಗೆ ತಣ್ಣೀರು ಸ್ನಾನ ಮಾಡಿ, ಉಪವಾಸವಿದ್ದ 103 ಮಂದಿ ಭಕ್ತಾದಿಗಳು 18ರಿಂದ 20 ಅಡಿ ಸರಳನ್ನು ಬಾಯಿಗೆ ಚುಚ್ಚಿಕೊಂಡು ಭಕ್ತಿ ಪರಾಕಾಷ್ಟೆ ಮೆರೆದರು. ಇದನ್ನೂ ಓದಿ: ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

    ಬೆಟ್ಟಳ್ಳಿ ಮಾರಮ್ಮನ ಜಾತ್ರಾ ಮಹೋತ್ಸವದ ಹಿನ್ನೆಲೆ ಬುಧವಾರದಂದು 78 ಮಂದಿ ಪುರುಷರು 25 ಮಹಿಳೆಯರು ದೊಡ್ಡ ಬಾಯಿ ಬೀಗ ಹಾಕಿಕೊಂಡಿದ್ದು ನೋಡುಗರ ಎದೆ ಝಲ್ಲೆನಿಸುವಂತಿತ್ತು. ಇದನ್ನೂ ಓದಿ: ಡಿಕಾಕ್‌ ಅಬ್ಬರಕ್ಕೆ ರಾಯಲ್ಸ್‌ ಪಂಚರ್‌ – ಕೋಲ್ಕತ್ತಾಗೆ 8 ವಿಕೆಟ್‌ಗಳ ಜಯ

    ಆಂಜನೇಯ ಸ್ವಾಮಿ ದೇವಾಲಯದಿಂದ ಕಿಲೋಮೀಟರ್ ಗಟ್ಟಲೆ ಮೆರವಣಿಗೆ ನಡೆಸಿ ಮಾರಮ್ಮನಿಗೆ ಭಕ್ತಿ ಸಮರ್ಪಿಸಿ ತಮ್ಮ ಸೇವೆಯನ್ನು ಸಂಪನ್ನಗೊಳಿಸಿದರು. ಇದನ್ನೂ ಓದಿ: ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ: ಜಯಮೃತ್ಯುಂಜಯ ಸ್ವಾಮೀಜಿ

  • ಮಲೆ ಮಹದೇಶ್ವರ ಕೋಟಿ ಒಡೆಯ – 1.94 ಕೋಟಿ ಕಾಣಿಕೆ ಸಂಗ್ರಹ

    ಮಲೆ ಮಹದೇಶ್ವರ ಕೋಟಿ ಒಡೆಯ – 1.94 ಕೋಟಿ ಕಾಣಿಕೆ ಸಂಗ್ರಹ

    ಚಾಮರಾಜನಗರ: ಮಲೆ ಮಹದೇಶ್ವರ ಮತ್ತೆ ಕೋಟಿ ಒಡೆಯನಾಗಿದ್ದಾನೆ. ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ 1,94,49,243 ರೂ. ಕಾಣಿಕೆ ಸಂಗ್ರಹವಾಗಿದೆ.

    ಬೆಟ್ಟದಲ್ಲಿ ಹುಂಡಿ ಕಾಣಿಕೆ ಎಣಿಕೆ ನಡೆಸಲಾಯಿತು. ಕಳೆದ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂಪಾಯಿ ಭಕ್ತರಿಂದ ಕಾಣಿಕೆ ರೂಪದಲ್ಲಿ ಹರಿದುಬಂದಿದೆ.

    ನಗದು ಹಣದ ಜೊತೆಗೆ 63 ಗ್ರಾಂ ಚಿನ್ನ ಹಾಗೂ ಒಂದು ಕೆಜಿ 510 ಗ್ರಾಂ ಬೆಳ್ಳಿಯ ಆಭರಣಗಳನ್ನು ಸಹ ಭಕ್ತರು ಮಲೆ ಮಹದೇಶ್ವರನಿಗೆ ಸಮರ್ಪಿಸಿದ್ದಾರೆ.

    11 ವಿದೇಶಿ ನೋಟು, 2000 ಮುಖಬೆಲೆಯ ನೋಟುಗಳನ್ನು ಕೂಡ ಭಕ್ತರು ಸಮರ್ಪಿಸಿದ್ದಾರೆ. ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರ ಸಮಕ್ಷಮದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ನಡೆಸಲಾಯಿತು.

  • ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

    ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

    -ಭಕ್ತರಿಂದ 62 ಗ್ರಾಂ ಚಿನ್ನ, 2.513 ಕೆಜಿ ಬೆಳ್ಳಿ ಅರ್ಪಣೆ

    ಚಾಮರಾಜನಗರ: ಜಿಲ್ಲೆಯ ಹನೂರು (Hanur) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ (Male Mahadeshwara Temple) ಮತ್ತೆ ಕೋಟ್ಯಧೀಶನಾಗಿದ್ದಾನೆ.

    ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ನಗದು ಹಣ ಜೊತೆಗೆ 62 ಗ್ರಾಂ ಚಿನ್ನ, 2.51 ಕೆಜಿ ಬೆಳ್ಳಿಯನ್ನು ಭಕ್ತರು ಮಲೆ ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ವಿಧಿವಶ

    ಬಿಗಿ ಬಂದೋಬಸ್ತ್‌ನಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ದೀಪಾವಳಿ ಹಬ್ಬ, ಅಮವಾಸ್ಯೆ ಹಾಗೂ ಕಾರ್ತಿಕ ಸೋಮವಾರ ಹಿನ್ನೆಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರನ ದರ್ಶನ ಪಡೆದಿದ್ದರು. ಈ ಹಿನ್ನೆಲೆ ಹುಂಡಿ ಆದಾಯದಲ್ಲೂ ಕೂಡ ಏರಿಕೆಯಾಗಿದೆ. ಇದನ್ನೂ ಓದಿ: ಧಾರವಾಡದಲ್ಲಿ ತಾಯಂದಿರಿಂದಲೇ ಮಕ್ಕಳ ಕಿಡ್ನ್ಯಾಪ್‌ – ತಾಯಂದಿರು, ಅವರ ಪ್ರೇಮಿಗಳು ಅರೆಸ್ಟ್‌

  • ಲೋಕಸಭಾ ಚುನಾವಣೆ: ಹನೂರು ಭಾಗದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ

    ಲೋಕಸಭಾ ಚುನಾವಣೆ: ಹನೂರು ಭಾಗದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ

    – ಇಂಡಿಗನತ್ತ ಗ್ರಾಮದಲ್ಲಿ ಇವಿಎಂ, ಪೀಠೋಪಕರಣ ಧ್ವಂಸ ಮಾಡಿದ್ದ ಸ್ಥಳೀಯರು

    ಚಾಮರಾಜನಗರ: ಲೋಕಸಭಾ ಚುನಾವಣೆಗೆ ಜನರಿಂದ ಮತದಾನ ಬಹಿಷ್ಕಾರಕ್ಕೆ ಒಳಗಾಗಿದ್ದ ಹನೂರು (Hanur) ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ ನಡೆಯಲಿದೆ.

    ಮತಗಟ್ಟೆ ಸಂಖ್ಯೆ 146 ಕ್ಕೆ ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೂ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಶುಕ್ರವಾರ ಸ್ಥಳೀಯ ಜನರ ಗಲಾಟೆಯಿಂದಾಗಿ ಮತದಾನಕ್ಕೆ ಅಡ್ಡಿಯಾಗಿತ್ತು. ಇದನ್ನೂ ಓದಿ: ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, ಇವಿಎಂ ಧ್ವಂಸ

    ಶುಕ್ರವಾರ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಿತು. ಆದರೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮತಗಟ್ಟೆಯಲ್ಲಿದ್ದ ಇವಿಎಂ ಮತ್ತು ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು. ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಗ್ರಾಮದಲ್ಲಿ ಗದ್ದಲ ಸೃಷ್ಟಿಸಲಾಗಿತ್ತು. ಇದರಿಂದ ಮತದಾನ ನಡೆದಿರಲಿಲ್ಲ.

    ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ

    ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hill) ಅಗ್ನಿ ಅವಘಡ ಸಂಭವಿಸಿದೆ. ಲಾಡು ತಯಾರಿಸುವ ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

    ಮಹದೇಶ್ವರ ದೇಗುಲದ (Temple) ಹಿಂಭಾಗದಲ್ಲೇ ಇರುವ ಲಾಡು ತಯಾರಿಸುವ ಘಟಕದಲ್ಲಿ ಬೆಂಕಿ (Fire) ಹೊತ್ತಿಕೊಂಡಿದೆ. ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ಅಲ್ಲಿನ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ.

    ಘಟನೆ ಬಳಿಕ ಪ್ರಾಧಿಕಾರದ ನೌಕರರಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಬೆಂಕಿ ಹೊತ್ತಿಕೊಳ್ಳಲು ಸಿಲಿಂಡರ್ ಕಾರಣವೆಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಎಣ್ಣೆ ಬಾಣಲೆಯಿಂದ ಬೆಂಕಿ ಪ್ರಜ್ವಲಿಸಿ, ಹೆಚ್ಚಿನ ಭಾಗಕ್ಕೆ ಹರಡಿಕೊಂಡಿದೆ. 2 ಟ್ಯಾಂಕರ್ ನೀರಿನ ಮೂಲಕ ಮಹದೇಶ್ವರ ಬೆಟ್ಟದ ಸ್ವಚ್ಛತಾ ಸಿಬ್ಬಂದಿ ಜೊತೆಗೂಡಿ ಬೆಂಕಿ ನಂದಿಸಿದ್ದಾರೆ. ಒಂದು ಭಾಗದ ಗೋಡೆ ಹಾಳಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ಹೇಳಿದ್ದಾರೆ.

    ದೇವಾಲಯದ ಆವರಣದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆ ಸತತ 1 ಗಂಟೆ ಪರಿಶ್ರಮದ ಬಳಿಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿದ ಸ್ಥಳದಲ್ಲಿ ಪ್ರಾಧಿಕಾರದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Bengaluru Bomb Threat: ಶಾಲೆಗಳು, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ – ಸಿಎಂ

  • ಚಿರತೆ ದಾಳಿಗೆ ಒಳಗಾಗಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು

    ಚಿರತೆ ದಾಳಿಗೆ ಒಳಗಾಗಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು

    ಚಾಮರಾಜನಗರ: ಚಿರತೆ ದಾಳಿಗೆ (Cheetah Attack) ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯಲ್ಲಿ ನಡೆದಿದೆ.

    ಜೂನ್ 26ರಂದು ಚಾಮರಾಜನಗರ ಜಿಲ್ಲೆಯ ಹನೂರು (Hanur) ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಸುಶೀಲ (ಆರೂವರೆ ವರ್ಷ) ಎಂಬ ಬಾಲಕಿಯ ಮೇಲೆ ಏಕಾಏಕಿ ಚಿರತೆಯೊಂದು ದಾಳಿ ಮಾಡಿತ್ತು. ರಾತ್ರಿ ವೇಳೆ ಬಾಲಕಿ ಮನೆಯಿಂದ ಹೊರಗೆ ಬಂದಿದ್ದ ಸಂದರ್ಭ ಘಟನೆ ನಡೆದಿದ್ದು, ಚಿರತೆ ದಾಳಿಯಿಂದ ಬಾಲಕಿಯ ಕತ್ತಿನ ಬಳಿ ಗಂಭೀರ ಗಾಯಗಳಾಗಿತ್ತು. ಈ ಹಿನ್ನೆಲೆ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ (KR Hospital) ದಾಖಲಿಸಲಾಗಿತ್ತು. ಇದನ್ನೂ ಓದಿ: ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ – ಎಸ್ಪಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಕಗ್ಗಲಿಗುಂದಿ ಸೋಲಿಗರ ಹಾಡಿಯಲ್ಲಿ ಘಟನೆ ನಡೆದಿದ್ದು, ತೀವ್ರ ಗಾಯಗೊಂಡಿದ್ದ ಬಾಲಕಿಗೆ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಮಲಗಿದ್ದಲ್ಲಿಯೇ ಇಬ್ಬರು ಯುವಕರ ಅನುಮಾನಾಸ್ಪದ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]