Tag: hari

  • ಕೊನೆಗೂ ಸಮಂತಾ ಅಭಿನಯದ ಯಶೋದಾ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಕೊನೆಗೂ ಸಮಂತಾ ಅಭಿನಯದ ಯಶೋದಾ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಮಂತಾ (Samantha) ಅಭಿನಯದ ‘ಯಶೋದಾ’ (Yashoda) ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಪ್ರೇಕ್ಷಕರಿಗೆ ಹಲವು ದಿನಗಳಿಂದ ಇತ್ತು. ಈಗ ಬಿಡುಗಡೆ (Release) ದಿನಾಂಕವು ಕೊನೆಗೂ ಘೋಷಣೆಯಾಗಿದ್ದು, ನವೆಂಬರ್ 11ರಂದು ಜಗತ್ತಿನಾದ್ಯಂತೆ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಶಿವಲೆಂಕ ಕೃಷ್ಣ ಪ್ರಸಾದ್ ಅವರು ತಮ್ಮ ಶ್ರೀದೇವಿ ಮೂವಿ ಪ್ರೊಡಕ್ಷನ್ಸ್ ಬ್ಯಾನರ್ನಡಿ 14ನೇ ಚಿತ್ರವಾಗಿ ನಿರ್ಮಿಸುತ್ತಿದ್ದರೆ, ಹರಿ-ಹರೀಶ್ (Hari, Harish)ಅವರು ನಿರ್ದೇಶನ ಮಾಡಿದ್ದಾರೆ.

    ಇದೊಂದು ಹೊಸ ಶೈಲಿಯ ಆಕ್ಷನ್ ಥ್ರಿಲ್ಲರ್ ಎನ್ನುವ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ ಚಿತ್ರದಲ್ಲಿ ಸಸ್ಪೆನ್ಸ್ ಮತ್ತು ಎಮೋಷನ್ಗಳು ಸಮವಾಗಿ ಬೆರೆತಿದ್ದು, ‘ಪ್ರೇಕ್ಷಕರನ್ನು ಸೀಟಿನಂಚಿನಲ್ಲಿ ಕೂರಿಸುವ ಶಕ್ತಿ ಹೊಂದಿದೆ. ಸಮಂತಾ ಈ ಚಿತ್ರದ ಆಕ್ಷನ್ ದೃಶ್ಯಗಳಿಗಾಗಿ ಅವರು ಬೆವರು ಮತ್ತು ರಕ್ತವನ್ನೇ ಹರಿಸಿದ್ದಾರೆ ಎಂದರೆ ತಪ್ಪಿಲ್ಲ. ಬರೀ ತೆಲುಗು ಅವತರಣಿಕೆಯಷ್ಟೇ ಅಲ್ಲ, ತಮಿಳಿನಲ್ಲೂ ಅವರು ಡಬ್ಬಿಂಗ್ ಮಾಡಿದ್ದಾರೆ. ಇನ್ನು. ಮಣಿಶರ್ಮ ಅವರ ಹಿನ್ನೆಲೆ ಸಂಗೀತ ಈ ಚಿತ್ರದ ಹೈಲೈಟ್ ಆಗಿ ಮೂಡಿಬಂದಿದೆ. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ಈಗಾಗಲೇ ತೆಲುಗು ಚಿತ್ರದ ಅವತರಣಿಕೆಯು ಸೆನ್ಸಾರ್ ಆಗಿತ್ತು, ಸದ್ಯದ್ಲ್ಲೇ ಬೇರೆ ಭಾಷೆಗಳ ಸೆನ್ಸಾರ್ ಆಗಲಿದೆ. ತಾಂತ್ರಿಕ ಸೇರಿದಂತೆ ಯಾವುದೇ ವಿಷಯದಲ್ಲೂ ರಾಜಿಯಾಗದೇ, ಈ ಚಿತ್ರವನ್ನು ಅದ್ಧೂರಿ ಬಜೆಟ್ ನಿರ್ಮಿಸಲಾಗಿದೆ. 100ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ಮಾಡಲಾಗಿದ್ದು, ಹೊಸ ಶೈಲಿಯ ಸಿನಿಮಾಗಳಿಗೆ ಹಾತೊರೆಯುತ್ತಿರುವ ಪ್ರೇಕ್ಷಕರು ಈ ಚಿತ್ರವನ್ನು ಮೆಚ್ಚುತ್ತಾರೆ ಎಂಬ ನಿರೀಕ್ಷೆ ಇದೆ. ಯಶೋದಾ, ನವೆಂಬರ್ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ’ ಎನ್ನುತ್ತಾರೆ.

    ಸಮಂತಾ ಜತೆಗೆ ಈ ಚಿತ್ರದಲ್ಲಿ ವರಲಕ್ಷ್ಮೀ ಶರತ್ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯ ಶ್ರೀಪಾದ, ಪ್ರಿಯಾಂಕಾ ಶರ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಯಶೋದಾ’ ಚಿತ್ರಕ್ಕೆ ಎಂ. ಸುಕುಮಾರ್ ಛಾಯಾಗ್ರಹಣ ಮಾಡಿದ್ದು, ಪುಲಗಂ ಚಿನ್ನಾರಾಯಣ ಮತ್ತು ಡಾ ಚಲ್ಲ ಭಾಗ್ಯಲಕ್ಷ್ಮೀ ಅವರ ಸಂಭಾಷಣೆ ಮತ್ತು ರಾಮಜೋಗಯ್ಯ ಶಾಸ್ತ್ರಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಟೀಸರ್ ಸೆ.09ಕ್ಕೆ  ರಿಲೀಸ್

    ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಟೀಸರ್ ಸೆ.09ಕ್ಕೆ ರಿಲೀಸ್

    ಮಂತಾ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾ’ದ ಟೀಸರ್ ಸೆ. 09ಕ್ಕೆ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಇದಕ್ಕೂ ಮುನ್ನ, ಬಿಡುಗಡೆಯಾದ ಚಿತ್ರದ ಸ್ನೀಕ್ ಪೀಕ್, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಈಗ ನಿರ್ದೇಶಕರಾದ ಹರಿ-ಹರೀಶ್ ಈ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ಎದೆಬಡಿತ ಹೆಚ್ಚಿಸುವುದಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆ ಘೋಷಣೆ ಪೋಸ್ಟರ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ ವೀಕ್ಷಕರ ಗಮನಸೆಳೆದಿದೆ.

    ‘ಯಶೋದಾ’ ಚಿತ್ರವು ಮೂಡಿಬಂದಿರುವ ಬಗ್ಗೆ ಖುಷಿಯಾಗಿರುವ ಶ್ರೀದೇವಿ ಮೂವೀಸ್ನ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ ಚಿತ್ರವನ್ನು ಐದು ಭಾಷೆಗಳಲ್ಲಿ ದೊಡ್ಡ ಮಟ್ಟದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದ್ದಾರೆ.

    ಸಮಂತಾ ಜತೆಗೆ ಈ ಚಿತ್ರದಲ್ಲಿ ವರಲಕ್ಷ್ಮೀ ಶರತ್ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯ ಶ್ರೀಪಾದ, ಪ್ರಿಯಾಂಕಾ ಶರ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ‘ಯಶೋದಾ’ ಚಿತ್ರಕ್ಕೆ ಮಣಿಶರ್ಮ ಸಂಗೀತ ಸಂಯೋಜಿಸಿದ್ದು, ಎಂ. ಸುಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಪುಲಗಂ ಚಿನ್ನಾರಾಯಣ ಮತ್ತು ಡಾ ಚಲ್ಲ ಭಾಗ್ಯಲಕ್ಷ್ಮೀ ಅವರ ಸಂಭಾಷಣೆ, ಚಂದ್ರಬೋಸ್ ಮತ್ತು ರಾಮಜೋಗಯ್ಯ ಶಾಸ್ತ್ರಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ.’ ಯಶೋದಾ’ ಚಿತ್ರವು ಸದ್ಯದಲ್ಲೇ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ತರುಣ್ ಟಾಕೀಸ್ ನಿರ್ಮಾಣದ ಮೂರನೇ ಚಿತ್ರ ಶುರು!

    ತರುಣ್ ಟಾಕೀಸ್ ನಿರ್ಮಾಣದ ಮೂರನೇ ಚಿತ್ರ ಶುರು!

    ಬೆಂಗಳೂರು: ತರುಣ್ ಟಾಕೀಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸುತ್ತಿರುವ `ಪ್ರೊಡಕ್ಷನ್ ನಂ 3` ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರಾಜಾಜಿನಗರದ ಮೋದಿ ಆಸ್ಪತ್ರೆ ಬಳಿಯಿರುವ ಗಣೇಶನ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ಸನ್ನಿವೇಶಕ್ಕೆ ಮಾನಸ ತರುಣ್ ಆರಂಭ ಫಲಕ ತೋರಿದರು. ನಿದೇರ್ಶಕ ಹರಿ ಸಂತು ಅವರ ತಾಯಿ ಪ್ರೇಮ ಕ್ಯಾಮೆರಾ ಚಾಲನೆ ಮಾಡಿದರು.

    ಅಲೆಮಾರಿ ಸಂತು ಎಂದೆ ಖ್ಯಾತರಾಗಿರುವ, ಇತ್ತೀಚೆಗಷ್ಟೇ `ಕಾಲೇಜ್ ಕುಮಾರ` ಎಂಬ ಯಶಸ್ವಿ ಚಿತ್ರವನ್ನು ನಿರ್ದೇಶಿಸಿದ್ದ ಹರಿ ಸಂತು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ತರುಣ್ ಸುಧೀರ್ ಬರೆದಿದ್ದಾರೆ. ಗುರುಪ್ರಶಾಂತ್ ರೈ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ಕೆ.ಎಂ.ಪ್ರಕಾಶ್ ಸಂಕಲನ, ಭೂಷಣ್ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.

    ಈ ಚಿತ್ರಕ್ಕಾಗಿ ಕಲಾ ನಿರ್ದೇಶಕ ಮೋಹನ್ ಬಿ ಕೆರೆ ಅವರು ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಒಂದು ತಿಂಗಳಿನಿಂದ ಬೃಹತ್ ಮನೆ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ.

    ಶರಣ್, ರವಿಶಂಕರ್, ಸಾಧುಕೋಕಿಲ, ತಬಲನಾಣಿ, ಪ್ರಶಾಂತ್ ಸಿದ್ದಿ, ಅರಸು, ಕಲ್ಯಾಣಿ, ಅರುಣ ಬಾಲರಾಜ್, ಸುಂದರ್, ನಾಜರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.