ದಾವಣಗೆರೆ: ಕಾಂಪೌಂಡ್ (Compound) ಹತ್ತುವ ವೇಳೆ ಜಾರಿ ಬಿದ್ದು ವಿದ್ಯಾರ್ಥಿನಿ (Student) ಸಾವನ್ನಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ತಾಲೂಕಿನಲ್ಲಿ ನಡೆದಿದೆ.
ಹರಿಹರದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್‌ನಲ್ಲಿ (Residential College) ಘಟನೆ ನಡೆದಿದ್ದು, ಸಿನಿಕ್ಷಾ (16) ಕಾಂಪೌಂಡ್‌ನಿಂದ ಜಾರಿಬಿದ್ದು ಮೃತಪಟ್ಟಿದ್ದಾಳೆ. ವಿಜಯನಗರ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಶಶಿಕಾಂತ್ ದಂಪತಿಯ ಪುತ್ರಿಯಾದ ಈಕೆ ಕಳೆದ ನಾಲ್ಕು ದಿನಗಳ ಹಿಂದಷ್ಟೇ ವಸತಿ ಶಾಲೆಗೆ ಸೇರಿದ್ದಳು. ಮಂಗಳವಾರ ರಾತ್ರಿ 11:30ರ ವೇಳೆಗೆ ವಸತಿ ಶಾಲೆಯ ಕಾಂಪೌಂಡ್ ಹತ್ತುವ ಸಂದರ್ಭ ಸಿನಿಕ್ಷಾ ಜಾರಿ ಬಿದ್ದಿದ್ದಾಳೆ. ಇದನ್ನೂ ಓದಿ: ಬೆಂ-ಮೈ ಹೆದ್ದಾರಿಯಲ್ಲಿ ಭೀಕರ ಅಪಘಾತ – ಮೂವರ ಸಾವು, ಓರ್ವನ ಸ್ಥಿತಿ ಗಂಭೀರ
ಘಟನೆಯಿಂದ ತೀವ್ರ ಗಾಯಗೊಂಡಿದ್ದ ಸಿನಿಕ್ಷಾಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ. ವಿದ್ಯಾರ್ಥಿನಿ ರಾತ್ರಿಯ ವೇಳೆ ಕಾಂಪೌಂಡ್ ಯಾಕೆ ಏರಿದಳು ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ – ಕಾನೂನು ವಿದ್ಯಾರ್ಥಿ ದುರ್ಮರಣ
ದಾವಣಗೆರೆ: ಬಿಜೆಪಿ (BJP) ಟಿಕೆಟ್ ವಂಚಿತ ವಾಗೀಶ್ ಪಕ್ಷೇತರವಾಗಿ ಸ್ಪರ್ಧಿಸಲು ಸುಳ್ಳು ಜಾತಿ ಪ್ರಮಾಣ (Fake caste certificate) ಪತ್ರ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮಾಯಕೊಂಡ (Mayakonda) ಎಸ್ಸಿ (SC) ಮೀಸಲು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಹರಿಹರ (Harihara) ಮೂಲದ ವಾಗೀಶ್ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಅವರ ಬಳಿ ಲಿಂಗಾಯತ ಸಮುದಾಯದ ಜಾತಿ ಪ್ರಮಾಣ ಪತ್ರವಿದ್ದರೂ, ಅಭ್ಯರ್ಥಿ ಬೇಡ ಜಂಗಮ ಸಮುದಾಯದ ಎಸ್ಸಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಈಶ್ವರಪ್ಪಗೆ ಕರೆ ಮಾಡಿದ ಮೋದಿ
ಶಾಲಾ ದಿನಗಳಿಂದ ಲಿಂಗಾಯತ (Lingayat) ಜಾತಿ ಪ್ರಮಾಣ ಪತ್ರ ಹೊಂದಿದ್ದ ಇವರು ಬೆಂಗಳೂರಿನಲ್ಲಿ 2020ರಲ್ಲಿ ಎಸ್ಸಿ ಪ್ರಮಾಣ ಪತ್ರ ಪಡೆದಿದ್ದಾರೆ. ಇದೀಗ ಬೆಂಗಳೂರು ನಗರ ಜಿಲ್ಲೆಯ ಡಿಸಿ ಕೆ.ಎ.ದಯಾನಂದ್ (K.A Dayananda) ಎಸ್‍ಸಿ ಪ್ರಮಾಣ ಪತ್ರವನ್ನು ರದ್ದು ಪಡಿಸಿ ಆದೇಶ ಹೊರಡಿಸಿದ್ದಾರೆ. ಈಗ ವಾಗೀಶ್ ಏ.24ರ ಒಳಗಾಗಿ ನ್ಯಾಯಾಲಯದ ಮೊರೆ ಹೋಗಿ ಜಿಲ್ಲಾಧಿಕಾರಿಗಳ ಆದೇಶ ರದ್ದು ಪಡಿಸುವ ಅನಿವಾರ್ಯತೆ ಇದೆ.
ಬೆಂಗಳೂರು: ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದೂಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು.
ಇಂದು ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20 2022 ರಂದು ಸಿಎಂಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ‘ಶಿಲಾನ್ಯಾಸ ಕಾರ್ಯಕ್ರಮ’ದ ಮಾಹಿತಿ ಹಾಗೂ ಕಾನ್ಸೆಪ್ಟ್ ವೀಡಿಯೋವನ್ನು ಬಿಡುಗಡೆಗೊಳಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಅವರು, ಉತ್ತರಕ್ಕೆ ಗಂಗೆಯ ರೀತಿ ದಕ್ಷಿಣ ಭಾರತಕ್ಕೆ ತುಂಗಾ ನದಿ ಪವಿತ್ರ ಎನಿಸಿದೆ. ಗಂಗಾ ಸ್ನಾನ-ತುಂಗಾ ಪಾನ ಎನ್ನುವ ಉಕ್ತಿಯೂ ಇದೆ ಎಂದು ಮಾತನಾಡಿದರು. ಇದನ್ನೂ ಓದಿ: ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ
ಗಂಗಾರತಿಯ ರೀತಿಯಲ್ಲಿಯೇ ತುಂಗಾರತಿಯನ್ನು ಏಕೆ ಆರಂಭಿಸಬಾರದು ಎನ್ನುವ ವಿಷಯ ನಮ್ಮ ಮನಸ್ಸಿಗೆ ಬಂದಿತ್ತು. ಈ ಯೋಚನೆ ಬರುತ್ತಿದ್ದಂತೆ, ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಬಳಿಯಿರುವ ತುಂಗಾ ತಟದಲ್ಲಿ ತುಂಗಾರತಿಯನ್ನು ಆರಂಭಿಸಲು ಯೋಚಿಸಿದೆವು. ಜೊತೆಗೆ ಗಂಗೆಯಂತೆ ತುಂಗಾ ನದಿಯನ್ನೂ ಶುಚಿಗೊಳಿಸಬೇಕು ಎನ್ನುವ ಮಹತ್ವಾಕಾಂಕ್ಷೆ ಬಂದಾಗ ಭಕ್ತಗಣದೊಂದಿಗೆ ಸೇರಿ ತುಂಗಾ ನದಿಯನ್ನು ಶುಚಿಗೊಳಿಸುವ, ನಮಾಮಿ ತುಂಗೆ ಯೋಜನೆಗೆ ಚಾಲನೆ ನೀಡಿದೆವು ಎಂದು ವಿವರಿಸಿದರು.
ಪ್ರತಿ ನಿತ್ಯ ಸೂರ್ಯಾಸ್ತವಾದ ನಂತರ ಗಂಗೋತ್ರಿ, ರುದ್ರಪ್ರಯಾಗ ದೇವಪ್ರಯಾಗ, ಋಷಿಕೇಶ, ಹರಿದ್ವಾರ ಸೇರಿದಂತೆ ನೂರಾರು ಪವಿತ್ರ ಗಂಗಾ ತಟಗಳಲ್ಲಿ ಗಂಗಾರತಿ ನಡೆಯುವ ರೀತಿಯಲ್ಲಿಯೇ ನಮ್ಮ ತುಂಗಾ ನದಿ ತಟದಲ್ಲೂ ತುಂಗಾರತಿ ಪ್ರಾರಂಭಿಸಬೇಕು. ಹೇಗೆ ಮನಮೋಹಕ ಗಂಗಾರತಿ ಲಕ್ಷಾಂತರ ಭಕ್ತರನ್ನು ಸೆಳೆಯಿತೋ ಹಾಗೆ, ತುಂಗಾರತಿ ಕೂಡ ನಾಡಿನ ಭಕ್ತರನನು ಸೆಳೆಯಬೇಕು ಎನ್ನುವುದು ನಮ್ಮ ಇಚ್ಛೆಯಾಗಿತ್ತು ಎಂದರು.
ಈ ಹಿನ್ನೆಲೆಯಲ್ಲಿ ನಾವು ಮಾಡಿದ ಮನವಿಗೆ ಸೂಕ್ತವಾಗಿ ಕರ್ನಾಟಕ ಸರ್ಕಾರ ಸ್ಪಂದಿಸಿದೆ. ಅಲ್ಲದೇ, 30 ಕೋಟಿ ರೂಪಾಯಿಗಳ ಅನುದಾನವೂ ನೀಡಿದ್ದು, ಭಾನುವಾರ ಫೆಬ್ರವರಿ 20 2022 ರಂದು ಮುಖ್ಯಮಂತ್ರಿಗಳು ಈ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಏನಿದು ‘ತುಂಗಾಭದ್ರಾ ಆರತಿ’ ಯೋಜನೆ?
ಹರಿಹರದ ತುಂಗಭದ್ರಾ ನದಿ ತಟದಲ್ಲಿನ ರಾಘವೇಂದ್ರ ಶ್ರೀಗಳ ದೇವಸ್ಥಾನದಿಂದ ಹರಿಹರೇಶ್ವರ ದೇವಸ್ಥಾನದ ಮಧ್ಯದಲ್ಲಿ ತುಂಗಾ ಮಂಟಪಗಳನ್ನು ನಿರ್ಮಾಣ ಮಾಡುವ ಯೋಜನೆ ಇದಾಗಿದೆ. ಇದಕ್ಕೆ 30 ಕೋಟಿ ರೂ. ಖರ್ಚಾಗಬಹುದೆಂದು ಅಂದಾಜಿಸಲಾಗಿದೆ. 108 ಮಂಟಪ ನಿರ್ಮಾಣ, ಗಂಗಾ ಆರತಿಯಂತೆ ಪ್ರತಿನಿತ್ಯ ತುಂಗಾಭದ್ರಾ ಆರತಿ, ಪೂಜೆ ನಡೆಸುವ ಯೋಜನೆ ಇದಾಗಿದೆ ಎಂದು ವಿವರಿಸಿದರು.
ಉತ್ತರ ಮತ್ತು ದಕ್ಷಿಣ ಕರ್ನಾಟಕ ಒಂದುಗೂಡಿಸುವ ಮಹತ್ವದ ಯೋಜನೆ ಇದಾಗಿರಲಿದೆ. ಇದಕ್ಕೆ ಈಗಾಗಲೇ ಅನುದಾನ ಬಿಡುಗಡೆ ಆಗಿದ್ದು, ಯೋಜನೆಯ ನೀಲೀ ನಕ್ಷೆಯನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಫೆಬ್ರವರಿ 20 ರಂದು ಮುಖ್ಯಮಂತ್ರಿಗಳು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಗತವೈಭವ ಮರಳಿಸುವ ಗುರಿ!
ತುಂಗಾಭದ್ರಾ ಆರತಿಯ ಅನುಷ್ಠಾನದಿಂದ ಹರಿಹರ ನಗರ ಹಾಗೂ ತುಂಗಾಭದ್ರಾ ನದಿ ಹರಿಯುವ ಎಲ್ಲ ಕಡೆಯೂ ಪ್ರವಾಸೋದ್ಯಮ, ಉದ್ಯೋಗಾವಕಾಶ ಹಾಗೂ ಗತವೈಭವವನ್ನು ಮರಳಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಹೇಗೆ ವಾರಣಾಸಿ ಕಾರಿಡಾರ್‍ನಲ್ಲಿ ಗಂಗಾನದಿ ಹರಿಯುವ ಎಲ್ಲ ಕಡೆಯೂ ಗಂಗಾ ಆರತಿ ನಡೆಯುವಂತೆ ತುಂಗಾಭದ್ರಾ ನದಿ ಹರಿಯುವ ಎಲ್ಲೆಡೆಯೂ ಆರತಿ ಕಾರ್ಯಕ್ರಮ ನಡೆಯಬೇಕು. ಈ ಮೂಲಕ ಜೀವ ನದಿಯನ್ನು ಸ್ವಚ್ಚವಾಗಿಟ್ಟುಕೊಳ್ಳುವ ಹಾಗೂ ಅದರ ಸುತ್ತಮುತ್ತಲಿನ ನಗರಗಳ ಸರ್ವತೋಮುಖ ಅಭಿವೃದ್ದಿಯಾಗುವುದು ನಮ್ಮ ಉದ್ದೇಶ ಮತ್ತು ಗುರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್
ತುಂಗಾಭದ್ರಾ ನದಿ ಹರಿಯುವ ಎಲ್ಲ ಸ್ಥಳಗಳಲ್ಲಿಯೂ ಕೂಡಾ ನಾವು ಪ್ರವಾಸೋದ್ಯಮ, ಉದ್ಯೋಗಾವಕಾಶ ಹೆಚ್ಚಿಸುವುದು ಮತ್ತು ದೇಶದ ಪ್ರಮುಖ ಹಿಂದೂಯಾತ್ರಾ ಸ್ಥಳಗಳಲ್ಲಿ ಒಂದಾಗಿ ಗುರುತಿಸುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ. ಈ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಮ್ಮ ಅಭಿನಂದನೆಗಳನ್ನು ತಿಳಿಸಿದರು.
ಬೆಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ ಡಾ. ವೈ.ನಾಗಪ್ಪ ವಿಧಿವಶರಾಗಿದ್ದಾರೆ.
ಶಾಸಕರಾಗಿದ್ದ ವೈ.ನಾಗಪ್ಪ ಅವರು ಧರಂಸಿಂಗ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಹರಿಹರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ವೈ.ನಾಗಪ್ಪ ಆಯ್ಕೆಯಾಗಿದ್ದರು. 1989, 1999 ಮತ್ತು 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದ ವೈ.ನಾಗಪ್ಪ ಅವರು ಗೆಲವು ದಾಖಲಿಸಿದ್ದರು. 1985ರ ಚುನಾವಣೆಯಲ್ಲಿ ಸೋತಿದ್ದರು.
ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವರಾದ ಡಾ! ವೈ.ನಾಗಪ್ಪ ವಿಧಿವಶರಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಹರಿಹರ ಕ್ಷೇತ್ರದಿಂದ ಮೂರು ಬಾರಿ
ಶಾಸಕರಾಗಿದ್ದ ವೈ.ನಾಗಪ್ಪ, ಧರ್ಮಸಿಂಗ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು. ನಾಗಪ್ಪ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/3VNX9Abagb
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 27, 2020
ವೈ.ನಾಗಪ್ಪ ಅವರ ನಿಧನಕ್ಕೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ ವೈ.ನಾಗಪ್ಪ ಅವರ ಫೋಟೋ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವರಾದ ಡಾ.ವೈ.ನಾಗಪ್ಪ ವಿಧಿವಶರಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಹರಿಹರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ವೈ.ನಾಗಪ್ಪ, ಧರಂಸಿಂಗ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು. ನಾಗಪ್ಪ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮಾಜಿ ಸಚಿವ ಡಾ.ವೈ.ನಾಗಪ್ಪ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. 80-90ರ ದಶಕದಲ್ಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಡಾ.ನಾಗಪ್ಪ ಸದಾ ಬಡವರು ಮತ್ತು ಶೋಷಿತರ ಪರವಾಗಿದ್ದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/heJAN6PeiF
ದಾವಣಗೆರೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒಂದಲ್ಲೊಂದು ಸಮಸ್ಯೆ ಬರುತ್ತಲೇ ಇವೆ. ಅದರಲ್ಲೂ ಸಚಿವ ಸ್ಥಾನ ತಮ್ಮ ಸಮಾಜದವರಿಗೆ ನೀಡಿ ಎಂದು ಅಯಾ ಸಮಾಜದ ಸ್ವಾಮೀಜಿಗಳು ಒತ್ತಾಯಿಸುತ್ತಿದ್ದಾರೆ. ಇದರಿಂದಾಗಿ ಪಕ್ಷ ಬಿಟ್ಟು ಬಿಜೆಪಿ ಪಕ್ಷ ಸೇರಿದ 15 ಜನರಿಗೆ ಸಚಿವ ಸ್ಥಾನ ನೀಡಬೇಕೋ ಮತ್ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಗೊಂದಲದಲ್ಲಿ ಸಿಎಂ ಯಡಿಯೂರಪ್ಪನವರು ಇದ್ದಾರೆ. ಇದೇ ವಿಚಾರವಾಗಿ ಸಿಎಂ ಇಂದು ಪಂಚಮಸಾಲಿ ಮಠದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ಸ್ವಾಮೀಜಿಗಳ ಮೇಲೆಯೇ ಗರಂ ಆದ ಪ್ರಸಂಗ ನಡೆಯಿತು.
ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠ ಹರ ಜಾತ್ರೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಅವರು ಕೆಂಡಾಮಂಡಲವಾದ ಪ್ರಸಂಗ ನಡೆಯಿತು. ಮೊದಲು ಮಾತನಾಡಿದ ವಚನಾನಂದ ಶ್ರೀಗಳು, ನೀವು ಪವರ್ ಫುಲ್ ಮುಖ್ಯಮಂತ್ರಿಯಾಗಿರುವುದರಿಂದ ಪಂಚಮಸಾಲಿ ಸಮಾಜಕ್ಕೆ ಮೂರು ಜನ ಸಚಿವರನ್ನಾಗಿ ಮಾಡಬೇಕು. ಪ್ರಥಮ ಪ್ರಾಶಸ್ತ್ಯವನ್ನು ಮುರುಗೇಶ್ ನಿರಾಣಿಗೆ ಕೊಡಬೇಕು. ಇಲ್ಲದಿದ್ದರೆ ಸಮಾಜ ನಿಮ್ಮನ್ನು ಕೈಬಿಡುತ್ತದೆ ಎಂದು ಹೇಳಿದರು.
ಶ್ರೀಗಳ ಹೇಳಿಕೆಯಿಂದ ಕೆಂಡಾಮಂಡಲವಾದ ಸಿಎಂ, ನೀವು ಹೀಗೆ ಮಾತನಾಡಿದರೆ ನಾನು ಎದ್ದು ಹೋಗುತ್ತೇನೆ ಎಂದು ಗುಡುಗಿದರು. ಆಗ ಶ್ರೀಗಳು ಸಮಾಧಾನದ ಮಾತನಾಡಿ, ನಾವು ಸತ್ಯವನ್ನೇ ಹೇಳುತ್ತಿದ್ದೇವೆ. ಕುಳಿತುಕೊಳ್ಳಿ ಎಂದು ಹೇಳಿದರು. ಆದರೆ ಇದಕ್ಕೆ ಒಪ್ಪದ ಸಿಎಂ, ದಯವಿಟ್ಟು ಕ್ಷಮಿಸಿ, ತಾವು ಈ ಮಾತು ಆಡಬಾರದು. ನಿಮ್ಮ ಬಾಯಲ್ಲಿ ಈ ತರ ಮಾತುಗಳು ಬರಬಾರದು. ಹೀಗೆ ಮಾತನಾಡಿದರೆ ನಾನು ಕೆಲಸ ಮಾಡುವುದಕ್ಕೆ ಆಗುವುದಿಲ್ಲ. ನೀವು ಸಲಹೆ ಕೊಡಬಹುದು ಅಷ್ಟೇ ಎಂದರು.
ಸಿಎಂ ಮಾತಿಗೆ ಪ್ರತಿಕ್ರಿಯಿಸಿದ ಸ್ವಾಮೀಜಿಗಳು, ನಾವು ಸಲಹೆ ಕೊಡುತ್ತಿದ್ದೇವೆ ಎಂದರು. ಆಗ ಸಿಎಂ ಬೆದರಿಸಬೇಡಿ ಎಂದು ಗರಂ ಆದರು. ಈ ವೇಳೆ ಸ್ವಾಮೀಜಿಗಳು, ನಾವು ಬೆದರಿಸುತ್ತಿಲ್ಲ. ನಮ್ಮ ಹಕ್ಕು, ನ್ಯಾಯವನ್ನು ಕೇಳುತ್ತಿದ್ದೇವೆ ಎಂದು ಗುಡುಗಿದರು. ಆಗ ಸಿಎಂ ಶಾಂತರಾಗಿ ಆಸನದ ಮೇಲೆ ಕುಳಿತರು. ಮತ್ತೆ ಮಾತು ಮುಂದುವರಿಸಿದ ಶ್ರೀಗಳು, ಇದು ನಮ್ಮ ಬೇಡಿಕೆಯಲ್ಲ. ಸಮಾಜದ ಕೂಗು. ನೀವು ಸಮಾಧಾನದಿಂದ ಕೇಳಬೇಕು ಎಂದರು.
ಬಳಿಕ ಭಾಷಣ ಮಾಡಿದ ಸಿಎಂ ಯಡಿಯೂರಪ್ಪ ಅವರು, ನಾನು ಕುರ್ಚಿಗೆ ಅಂಟಿಕೊಂಡು ಕೂತ್ತಿಲ್ಲ. ಬೇಕಾದ್ರೆ ನಾಳೆಯೇ ರಾಜೀನಾಮೆ ಕೊಡುತ್ತೇನೆ. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ನೇರವಾಗಿಯೇ ಅಸಮಾಧಾನ ಹೊರ ಹಾಕಿದರು.
ಎಲ್ಲಾ ಸಮಾಜದ ಶ್ರೀಗಳು ದಯವಿಟ್ಟು ಅರ್ಥ ಮಾಡಿಕೊಳ್ಳಬೇಕು. ಹದಿನೇಳು ಶಾಸಕರು ರಾಜೀನಾಮೆ ನೀಡಿ ವನವಾಸ ಅನುಭವಿಸಿದ್ದಾರೆ. ಅವರಿಗೆ ನ್ಯಾಯ ನೀಡಬೇಕಾಗಿದೆ, ದಯವಿಟ್ಟು ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನನಗೆ ಅಧಿಕಾರದ ಆಸೆ ಇಲ್ಲ. ಬೇಕಿದ್ದರೆ ರಾಜೀನಾಮೆ ಕೊಟ್ಟು ಬರುತ್ತೇನೆ. ಹದಿನೇಳು ಶಾಸಕರ ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲಾ ಸ್ವಾಮೀಜಿಗಳನ್ನ ಸೇರಿಸೋಣ, ನನ್ನ ಪರಿಸ್ಥಿತಿ ನಿಮಗೆಲ್ಲರಿಗೂ ಅರ್ಥ ಮಾಡಿಸುತ್ತೇನೆ ಎಂದು ಬೇಸರ ಹೊರಹಾಕಿದರು.
ದಾವಣಗೆರೆ: ಹೊಸದಾಗಿ ನಿರ್ಮಾಣವಾಗಿರುವ ಖಾಸಗಿ ಲೇಔಟ್ ಒಂದರ ಒಳಚರಂಡಿ ಛೇಂಬರ್ ನಲ್ಲಿ ಪುರಷನದ್ದು ಎಂದು ಶಂಕಿಸಲಾದ ಅಸ್ಥಿಪಂಜರ ದೊರೆತ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ನಗರದ ಶಿವಮೊಗ್ಗ ರಸ್ತೆಯ ಶ್ರೀ ಹರಿಹರರೇಶ್ವರ ಲೇಔಟ್ ಹಿಂಭಾಗದಲ್ಲಿನ ಹೊಸ ಲೇಔಟ್ ನಲ್ಲಿ ಕೆಲಸಗಾರರು ಯುಜಿಡಿ ಛೇಂಬರ್ ಸಂಪರ್ಕ ಕಲ್ಪಿಸಲು ಮುಂಜಾನೆ ಛೇಂಬರ್‍ನ ಮುಚ್ಚಳ ತೆರೆದಾಗ ಅಸ್ಥಿಪಂಜರ ಇರುವುದನ್ನು ನೋಡಿ ಭಯಗೊಂಡು ಕೂಡಲೇ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನದ ಪ್ರಯೋಗಾಲಯದ ಅಧಿಕಾರಿಗಳು ನಗರಸಭೆಯ ಪೌರ ಕಾರ್ಮಿಕರಿಂದ ಅಸ್ಥಿ ಪಂಜರವನ್ನು ಛೇಂಬರ್ ನಿಂದ ಮೇಲೆತ್ತಿ, ಪರೀಕ್ಷಿಸಲಾಯಿತು.
ಪ್ರಾಥಮಿಕ ಪರೀಕ್ಷೆಯನ್ನು ದಾವಣಗೆರೆ ಸಿ.ಜಿ ಆಸ್ಪತ್ರೆಯ ಡಾ. ಮೋಹನ್ ಕುಮಾರ್ ಗುರುತಿಸಿದಂತೆ ಮೃತ ವ್ಯಕ್ತಿಯು ಅಂದಾಜು 5.4 ಅಡಿ ಎತ್ತರ, ಸುಮಾರು 25 ರಿಂದ 30 ವರ್ಷದ ಒಳಗೆ ಇದ್ದಾನೆ. ಸುಮಾರು ಆರು ತಿಂಗಳ ಹಿಂದೆ ಈ ಘಟನೆ ನೆಡೆದಿರಬಹುದು ಎಂದು ಊಹಿಸಿದರು. ವ್ಯಕ್ತಿಯ ಉಡುದಾರ, ಮೆಟಲ್ ಕೈ ಬಳೆ, ಕೊರಳು ದಾರ ಸಿಕ್ಕಿದ್ದು ಪುರುಷನೆಂದು ತಿಳಿದು ಬಂದಿದೆ. ನಂತರ ಅಸ್ಥಿ ಪಂಜರವನ್ನು ವಿಧಿವಿಜ್ಞಾನದ ಪ್ರಯೋಗಾಲಯದ ಅಧಿಕಾರಿಗಳು ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ. ವರದಿ ಬಂದ ನಂತರ ಈ ವ್ಯಕ್ತಿ ಯಾರು ಮತ್ತು ಸಾವಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಗ್ರಾಮಾಂತರ ಡಿವೈಎಸ್‍ಪಿ ಮಂಜುನಾಥ್ ಕೆ.ಗಂಗಲ ತಿಳಿಸಿದರು.
ಸ್ಥಳಕ್ಕೆ ಆಗಮಿಸಿದ ಸಿಪಿಐ ಶಿವಪ್ರಸಾದ್ ಅವರ ನೇತೃತ್ವದ ತಂಡ ಪರಿಶೀಲನೆ ನಡೆಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ ಡಾ. ಭಾರ್ಗವಿ ಮತ್ತಿತರು ಇದ್ದರು.
ದಾವಣಗೆರೆ: ಮುಖ್ಯಮಂತ್ರಿಗಳು ಚೇಂಜ್ ಆದರೂ ಆಗಬಹುದು ಎಂದು ಹೇಳುವ ಮೂಲಕ ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಶಾಸಕರು, ಕಾಂಗ್ರೆಸ್ ಎಲ್ಲಿರುತ್ತೋ, ಅಲ್ಲಿ ನಾನಿರುತ್ತೇನೆ. ಹಾಗಾಗಿ ಯಾರು ರಾಜೀನಾಮೆ ಕೊಟ್ಟರೂ ನಾನು ತಲೆ ಕೆಡಿಸಿಕೊಳ್ಳಲ್ಲ. ಒಂದು ವೇಳೆ ಮುಖ್ಯಮಂತ್ರಿಗಳು ಬದಲಾವಣೆ ಆದರೆ ಆಗಬಹುದು. ಮೈತ್ರಿ ಸರ್ಕಾರ ಮಾತ್ರ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನೋರ್ವ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಕೆಲವರು ನನ್ನ ಹಿಂದೆ ಬಿದ್ದಿದ್ದಾರೆ. ಈಗಾಗಲೇ ನಾನು ಪಕ್ಷ ತೊರೆಯಲ್ಲ ಎಂಬುದನ್ನ ಅವರೆಲ್ಲರಿಗೂ ಸ್ಪಷ್ಟಪಡಿಸಿದ್ದೇನೆ. ನಾನು ಪಕ್ಷ ತೊರೆಯಲು ಸಿದ್ಧ ಎಂದರೆ ಹಣ ನೀಡಲು ತಯಾರಾಗಿದ್ದಾರೆ. ಆದ್ರೆ ನಾನು ಪಕ್ಷ ಬಿಡುವ ವಿಷಯವೇ ಇಲ್ಲಿ ಬರಲ್ಲ. ನಗರಸಭೆ ಸದಸ್ಯನಾಗಿದ್ದ ನನ್ನನ್ನು ಅಧ್ಯಕ್ಷ, ಶಾಸಕನಾಗಿ ಮತದಾರರು ಆಯ್ಕೆ ಮಾಡಿದ್ದಾರೆ. ಬೇರೆ ಪಕ್ಷಕ್ಕೆ ಹೋದ್ರೆ ನಮಗೆ ನಾವೇ ಮೋಸ ಮಾಡಿಕೊಂಡಂತೆ. 64 ಸಾವಿರ ಜನರು ಮತ ನೀಡಿ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದು, ಮತದಾರರಿಗೆ ಮೋಸ ಮಾಡಲ್ಲ ಎಂದು ತಿಳಿಸಿದರು.
ಚುನವಾಣೆ ವೇಳೆ ನಾನು ಜನರಿಗೆ ನೀಡಿದ್ದ ಮಾತಿನಂತೆ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ. ಚುನಾವಣೆಯಲ್ಲಿ ಕ್ಷೇತ್ರದ ಜನತೆಗೆ ನೀಡಿದ ಮಾತಿನಂತೆ ನಡೆದುಕೊಳ್ಳುತ್ತೇನೆ. ಸರ್ಕಾರ ಮಾತ್ರ ಯಾವುದೇ ಕಾರಣಕ್ಕೂ ವಿಸರ್ಜನೆ ಆಗಲ್ಲ. ಮಧ್ಯಂತರ ಚುನಾವಣೆಗೂ ಕಾಂಗ್ರೆಸ್ ಮತ್ತು ಜೆಡಿಎಸ್ ನ ಯಾವ ಶಾಸಕರು ಒಪ್ಪಿಕೊಳ್ಳಲ್ಲ. ಸಿಎಂ ಬದಲಾಗಬಹುದು ಅಷ್ಟೇ ಎಂದು ಹೇಳಿದರು.
ದಾವಣಗೆರೆ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹರಿಹರ ತಾಲೂಕಿನ ಹರಗನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ಬೆಂಗಳೂರು ಇಂದಿರಾನಗರದ ನಿವಾಸಿಗಳಾದ ಸಿದ್ದಪ್ಪ, ಅಜಯ್, ವಿನಯ್, ಸಿದ್ದಪ್ಪ ಮೃತಪಟ್ಟ ವ್ಯಕ್ತಿಗಳು. ಕಿರಣ್ ಹಾಗೂ ಗಿರೀಶ್‍ಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗೋಕಾಕ್ ಜಲಪಾತವನ್ನು ನೋಡಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಡಿಟಿಡಿಸಿ ಕೊರಿಯರ್ ಕಂಪೆನಿಯಲ್ಲಿ ನಲ್ಲಿ ಮೃತರು ಕೆಲಸ ಮಾಡುತ್ತಿದ್ದರು. ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿ ಘಟನೆ ನಡೆದಿದ್ದು, ಅಪಘಾತಕ್ಕೆ ಕಾರು ಚಾಲಕನ ವೇಗವೇ ಕಾರಣ ಎನ್ನುವುದು ತಿಳಿದು ಬಂದಿದೆ.
ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ಆರೋಗ್ಯಮಾತೆ ಚರ್ಚ್ ನಲ್ಲಿರುವ ಆರೋಗ್ಯಮಾತೆಯು ಕಣ್ಣೀರು ಸುರಿಸಿದ್ದು, ಈ ವಿಸ್ಮಯವನ್ನು ನೋಡಲು ನೂರಾರು ಸಾರ್ವಜನಿಕರು ಚರ್ಚ್ ಗೆ ಆಗಮಿಸಿದ್ದರು.
ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ವಿಸ್ಮಯಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ದೇವರ ವಿಗ್ರಹದಲ್ಲಿ ಕಣ್ಣಿರು ಬರುತ್ತಿದ್ದು. ಹಲವು ಕುತೂಹಲಕ್ಕೆ ಕಾರಣವಾಗಿದೆ. ಹರಿಹರ ಪಟ್ಟಣದ ಆರೋಗ್ಯಮಾತೆ ಚರ್ಚಿನ ಆರೋಗ್ಯಮಾತೆ ವಿಗ್ರಹದಿಂದ ಕಣ್ಣೀರು ಬರುತ್ತಿರುವ ಸುದ್ದಿ ಹರಡುತ್ತಲೇ, ನೂರಾರು ಭಕ್ತರು ಬಂದು ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೇ ಮಾತೆಗೆ ಕಣ್ಣೀರ ಬರಲು ಕಾರಣವೇನು ಎನ್ನುವ ಕುತೂಹಲ ಭಕ್ತರಲ್ಲಿ ಸೃಷ್ಟಿಯಾಗಿದೆ.
ಹರಿಹರದ ಆರೋಗ್ಯ ಮಾತಾ ಚರ್ಚ್ ಪ್ರಸಿದ್ಧ ಸ್ಥಳವಾಗಿದ್ದು, ಇಲ್ಲಿಗೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಬಂದು ಮರೀಯಾ ದೇವಿಯ ದರ್ಶನ ಪಡೆದು ಹೋಗುತ್ತಾರೆ. ಆದರೆ ಬುಧವಾರ ಏಕಾಏಕಿ ಮರೀಯಾ ವಿಗ್ರಹದಲ್ಲಿ ಕಣ್ಣಿನಲ್ಲಿ ನೀರು ಬರುತ್ತಿದ್ದು, ಭಕ್ತರ ಮನದಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಬುಧವಾರ ಬೆಳಗ್ಗೆ 11.30ಕ್ಕೆ ಸೇಲೀನ್ ಎಂಬವರು ಪ್ರಾರ್ಥನೆ ಸಲ್ಲಿಸಲು ಚರ್ಚಿಗೆ ಬಂದಿದ್ದಾರೆ. ಈ ವೇಳೆ ಮರೀಯಾ ವಿಗ್ರಹದಿಂದ ಕಣ್ಣೀರು ಬರುತ್ತಿರುವುದನ್ನು ಕಂಡು, ಚರ್ಚಿನ ಫಾದರ್ ಆಂತೋನಿ ಪೀಟರ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಫಾದರ್ ಅದನ್ನು ಪರೀಕ್ಷಿಸಿ ನೋಡಿದಾಗ ವಿಗ್ರಹದ ಎಡ ಭಾಗದ ಕಣ್ಣಿನಿಂದ ಕಣ್ಣೀರಿನ ಹಾಗೆ ನೀರು ತೊಟ್ಟಿಕ್ಕುತ್ತಿದೆ. ಏನಾದರೂ ಬಿದ್ದರಬಹುದೆಂದು ಫಾದರ್ ಅದನ್ನು ಒಂದು ಬಟ್ಟೆಯಿಂದ ಒರೆಸಿದ್ದಾರೆ. ಬಳಿಕ ಕೆಲ ಸಮಯದಲ್ಲಿ ಮತ್ತೆ ಅದೇ ಭಾಗದಲ್ಲಿ ನೀರು ಹರಿಯಲಾರಂಭಿಸಿದೆ ಎಂದು ಚರ್ಚ್ ಫಾದರ್ ತಿಳಿಸಿದ್ದಾರೆ.
ಮರೀಯಾ ಮಾತೆಯ ಕಣ್ಣಿನಲ್ಲಿ ನೀರು ಬರುತ್ತಿರುದನ್ನು ತಿಳಿದ ಭಕ್ತರು ಮಾತೆಯ ದರ್ಶನ ಪಡೆಯಲು ಮುಗಿದಿದ್ದಾರೆ. ಅಲ್ಲದೇ ಏನಾದರೂ ತಪ್ಪಾಗಿದೆಯೋ, ಇಲ್ಲಾ ತಾಯಿಗೆ ನೋವಾಗುವ ಹಾಗೆ ಯಾರಾದರೂ ನಡೆದುಕೊಂಡಿದ್ದಾರೆಯೋ, ಒಂದು ವೇಳೇ ಆಗೇನಾದರೂ ನಡೆದುಕೊಂಡಿದ್ದರೆ, ಅವರನ್ನು ಕ್ಷಮಿಸು ಎಂದು ಭಕ್ತರು ಪ್ರತಿಮೆಯ ಮುಂಭಾಗ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ಎಂದು ಚರ್ಚಿನ ಆಡಳಿತ ಮಂಡಳಿಯವರಾದ ಫ್ರಾನ್ಸಿಸ್ ತಿಳಿಸಿದ್ದಾರೆ.
ದಾವಣಗೆರೆ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ವ್ಯಕ್ತಿಗೆ ಮಹಿಳೆ ಧರ್ಮದೇಟು ನೀಡಿರುವ ಘಟನೆ ಜಿಲ್ಲೆಯ ಹರಿಹರ ಹೊರಭಾಗದ ಪಿಬಿ ರಸ್ತೆಯಲ್ಲಿ ನಡೆದಿದೆ.
ಜಾವೇದ್ ಗೂಸಾ ತಿಂದ ವ್ಯಕ್ತಿ. ಮಹಿಳೆ ಮತ್ತು ಆಕೆಯ ಪತಿ ರಸ್ತೆ ಬದಿಯಲ್ಲಿ ಟೀ ಅಂಗಡಿ ನಡೆಸುತ್ತಿದ್ದರು. ನಾನು ರಸ್ತೆಯ ಕಾವಲುಗಾರ, ನನಗೆ ನೀವು ಹಣ ನೀಡಬೇಕೆಂದು ಜಾವೇದ್ ಧಮ್ಕಿ ಹಾಕಿದ್ದಾನೆ. ದಂಪತಿ ಹಣ ನೀಡದಕ್ಕೆ ಮಹಿಳೆಗೆ ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುವ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.
ಬುಧವಾರ ಅಂಗಡಿ ಬಳಿ ಬಂದ ಜಾವೇದ್ ನನ್ನು ಹಿಡಿದ ಮಹಿಳೆ ತಕ್ಕ ಪಾಠ ಕಲಿಸಿದ್ದಾರೆ. ಗೂಸಾ ನೀಡಿದ ಬಳಿಕ ಜಾವೇದ್ ನನ್ನು ಹರಿಹರ ಪೊಲೀಸರ ವಶಕ್ಕೆ ನೀಡಿದ್ದಾರೆ.