Tag: Hariprasad

  • ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ

    ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ

    ಬೆಂಗಳೂರು: ಸಿಎಂ ವಿರುದ್ಧದ ಹರಿಪ್ರಸಾದ್ (Hariprasad) ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು ಉಂಟಾಗಿದೆ ಎಂದು ಕಾಂಗ್ರೆಸ್‍ನ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (T.B Jayachandra) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹರಿಪ್ರಸಾದ್ ಅವರಿಗೆ ಹೈಕಮಾಂಡ್ ನೋಟಿಸ್ ನೀಡಿರುವ ವಿಚಾರವಾಗಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ, ಹರಿಪ್ರಸಾದ್ ಕಾಂಗ್ರೆಸ್‍ನ (Congress) ಹಿರಿಯ ನಾಯಕರಾಗಿದ್ದಾರೆ. ನಾವೆಲ್ಲ ಒಂದೇ ಬಾರಿ ರಾಜಕೀಯಕ್ಕೆ ಬಂದವರು. ಅವರು ಎಐಸಿಸಿಯಲ್ಲಿ ಉನ್ನತ ಹುದ್ದೆಯಲ್ಲಿ ಇದ್ದರು. ಆದರೆ ಅವರು ಮಾತನಾಡುವಾಗ ಯೋಚನೆ ಮಾಡಬಹುದಿತ್ತು. ಇದು ಒಂದು ರೀತಿಯಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಾಗಿದೆ. ಅವರ ಹೇಳಿಕೆ ವಿಚಾರವಾಗಿ ಹೈಕಮಾಂಡ್ ನೋಟಿಸ್ ನೀಡಿದೆ. ಅದಕ್ಕೆ ಉತ್ತರ ಕೊಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: DCM ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

    ಬಿಜೆಪಿ, ಜೆಡಿಎಸ್ ದೋಸ್ತಿ ವಿಚಾರವಾಗಿ, ಇತ್ತೀಚೆಗೆ ಯಾವುದೇ ತತ್ವ ಆಧಾರಗಳಿಲ್ಲದೆ ಹೊಂದಾಣಿಕೆ ನಡೆಯುತ್ತಿದೆ. ಜಾತ್ಯತೀತ ಎಂದು ಹೆಸರಿಟ್ಟುಕೊಂಡವರು ಬಿಜೆಪಿ ಜೊತೆ ಹೋಗುವುದು ಎಷ್ಟು ಸರಿ ಎನಿಸುತ್ತದೆ? ಜನ ಅದನ್ನು ಹೇಗೆ ಒಪ್ಪುತ್ತಾರೆ ಎನ್ನುವುದು ಚರ್ಚೆ ಆಗಬೇಕು ಎಂದಿದ್ದಾರೆ.

    ಕೇವಲ ಅಸ್ತಿತ್ವ ಉಳಿಸಿಕೊಳ್ಳಲು ಹೀಗೆ ಮೈತ್ರಿ ಮಾಡಿಕೊಳ್ಳುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೇ ಈ ಮೈತ್ರಿಯಿಂದ ಕಾಂಗ್ರೆಸ್‍ಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್‍ಗೆ ರೈತ ಸಂಘ ನಿರ್ಧಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡದಲ್ಲಿ ಮಾತಾಡೋಕೆ ಹೇಳಿ, ನಮಗೆ ಏನೂ ಅರ್ಥ ಆಗ್ತಿಲ್ಲ: ಪರಿಷತ್‌ ಕಲಾಪದಲ್ಲಿ ಗಲಾಟೆ

    ಕನ್ನಡದಲ್ಲಿ ಮಾತಾಡೋಕೆ ಹೇಳಿ, ನಮಗೆ ಏನೂ ಅರ್ಥ ಆಗ್ತಿಲ್ಲ: ಪರಿಷತ್‌ ಕಲಾಪದಲ್ಲಿ ಗಲಾಟೆ

    ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು 420 ವಿಷಯದ ಕುರಿತು ಚರ್ಚೆ ನಡೆಯಿತು. ಈ ವೇಳೆ ಗಲಾಟೆಯಾದ ಪ್ರಸಂಗವೂ ನಡೆಯಿತು. ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯ್ತು.

    ಬಜೆಟ್ ಮೇಲಿನ ಚರ್ಚೆ ವೇಳೆ ವಿಪಕ್ಷ ನಾಯಕ ಹರಿಪ್ರಸಾದ್ ಇಂಗ್ಲಿಷ್‌ನಲ್ಲಿ ಕೆಲ ವಿಷಯ ಪ್ರಸ್ತಾಪ ಮಾಡಿದರು. ಈ ವೇಳೆ ಎದ್ದು ನಿಂತ ಬಿಜೆಪಿ ಸದಸ್ಯ ಪ್ರಾಣೇಶ್, ಸ್ವಲ್ಪ ಕನ್ನಡದಲ್ಲಿ ಮಾತಾಡೋಕೆ ಹೇಳಿ. ನಮಗೆ ಏನು ಅರ್ಥ ಆಗ್ತಿಲ್ಲ ಎಂದು ಸಭಾಪತಿಗಳಿಗೆ ಮನವಿ ಮಾಡಿದರು. ಇದಕ್ಕೆ ಹರಿಪ್ರಸಾದ್ ನನಗೆ ಹಿಂದಿ, ಸಂಸ್ಕೃತ, ಇಂಗ್ಲಿಷ್ ಮಾತಾಡೋಕೆ ಬರುತ್ತೆ ಎಂದರು. ಈ ವೇಳೆ ಕನ್ನಡ, ಇಂಗ್ಲಿಷ್‌ನಲ್ಲಿ ಮಾತಾಡಿ ಹಿಂದಿ ಬೇಡ ಎಂದ ಸಭಾಪತಿ ಸಲಹೆ ನೀಡಿದರು. ಆಗ ಪ್ರಾಣೇಶ್ ನಮಗೆ ಟ್ರಾನ್ಸ್‌ಲೇಟರ್ ಕೊಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

    ಬಳಿಕ ಮಾತು ಮುಂದುವರೆಸಿದ ಹರಿಪ್ರಸಾದ್, ನೀವು 430 ಅಂಶಗಳನ್ನು ಬಜೆಟ್ ಪುಸ್ತಕದಲ್ಲಿ ಮುದ್ರಿಸಿದ್ದೀರಾ. ಇದನ್ನು 420 ಎಂದು ಮಾಡಬೇಕಿತ್ತು ಎಂದರು. ಹರಿಪ್ರಸಾದ್ ಮಾತಿಗೆ ಬಿಜೆಪಿ ರವಿಕುಮಾರ್ ವಿರೋಧ ವ್ಯಕ್ತಪಡಿಸಿದರು. ಹರಿಪ್ರಸಾದ್ ಹೀಗೆ ಮಾತಾಡೋದು ಸರಿಯಲ್ಲ. ಜವಾಬ್ದಾರಿ ಸ್ಥಾನದಲ್ಲಿ ಇರುವವರು 420 ಅಂತ ಸೇರಿಸಿ ಅನ್ನೋದು ಸರಿಯಲ್ಲ. 420 ಯಾರು ಗೊತ್ತಿದೆ ಬಿಡಿ ಎಂದು ಹರಿಪ್ರಸಾದ್‌ಗೆ ತಿವಿದರು.

    ಈ ವೇಳೆ ಮತ್ತೆ ಮಾತು ಮುಂದುವರಿಸಿದ‌ ಹರಿಪ್ರಸಾದ್, ಪದೇ ಪದೇ ನನ್ನ ಮಾತಿಗೆ ಬಿಜೆಪಿಯವರು ಅಡ್ಡಿಪಡಿಸುತ್ತಿದ್ದಾರೆ. ಹೀಗೆ ಅಡ್ಡ ಮಾಡಿ ಅಂತ ಅವರ ಅಧ್ಯಕ್ಷರು ಹೇಳಿ ಕಳಿಸಿದ್ದಾರೆ ಎಂದು ಆರೋಪ ಮಾಡಿದರು. ಇದಕ್ಕೆ ಪ್ರಾಣೇಶ್, ನಮ್ಮಲ್ಲಿ ನಿಮಗಿಂತ ಚೆನ್ನಾಗಿ ಮಾತಾಡೋರು ಇದ್ದಾರೆ. ನಿಮ್ಮ ಭಾಷಣಕ್ಕೆ ಯಾಕೆ ಅಡ್ಡಿ ಮಾಡೋಣ. ನಾವು ಹಿಂಬಾಗಿಲ ಮೂಲಕ ಶಾಸಕರು ಆಗಿಲ್ಲ. ನಾವು ಮುಂಬಾಗಿಲ ಮೂಲಕ ಇಲ್ಲಿಗೆ ಬಂದಿದ್ದೇವೆ. ಹಿಂಬಾಗಿಲ ಮೂಲಕ ಬಂದಿಲ್ಲ ಅಂತ ಹರಿಪ್ರಸಾದ್‌ರಿಗೆ ಚಾಟಿ ಬೀಸಿದರು. ಇದನ್ನೂ ಓದಿ: ವಿಧಾನಸಭೆ ಕಲಾಪಕ್ಕೆ ಸಚಿವರು ಗೈರು – ಸ್ಪೀಕರ್ ಗರಂ

    ಇದಕ್ಕೆ ತಿರುಗೇಟು ಕೊಟ್ಟ ಹರಿಪ್ರಸಾದ್, ನಾನು ಚುನಾವಣೆಯಲ್ಲಿ ನಿಂತು ಸೋತಿದ್ದೇನೆ. ಗ್ರಾಮ ಪಂಚಾಯಿತಿ ಸದಸ್ಯನೂ ಆಗದೇ, ವಿಧಾನಸಭೆಗೆ ಸ್ಪರ್ಧೆ ಮಾಡದೇ, ಎಂಪಿ ಆಗದೇ ಮುಖ್ಯಮಂತ್ರಿ ಆಗಿಲ್ಲ. ಪ್ರಧಾನಿಯೂ ಆಗಿಲ್ಲ ಎಂದು ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸದೇ ಟಾಂಗ್‌ ಕೊಟ್ಟರು. ಈ ವೇಳೆ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ಮಾತಿನ ‌ಚಕಮಕಿ ನಡೆಯಿತು.

  • ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳೆಂದ ಡಿಸಿಎಂ

    ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳೆಂದ ಡಿಸಿಎಂ

    – ಲಸಿಕೆ ಅಭಿಯಾನ ಹಳಿತಪ್ಪಿಸುವುದೇ ಅವರ ದುರುದ್ದೇಶ

    ಬೆಂಗಳೂರು: ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಜಾತಿ ಆಧಾರದ ಮೇಲೆ ಲಸಿಕೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾಡಿರುವ ಆರೋಪವನ್ನು ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

    ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದೊಂದು ಬೇಜವಾಬ್ದಾರಿ ಹೇಳಿಕೆ. ಅವರಿಗೆ ಜಾತಿ- ಧರ್ಮದ ಹೆಸರೇಳದಿದ್ದರೆ ನಿದ್ದೆಯೂ ಬರಲ್ಲ. ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಲಸಿಕೆ ಅಭಿಯಾನವನ್ನು ಹೇಗಾದರೂ ಹಳಿತಪ್ಪಿಸಬೇಕು ಎಂಬ ಷಡ್ಯಂತ್ರ ಅವರು ಇಟ್ಟುಕೊಂಡಿರುವಂತಿದೆ ಎಂದು ತರಾಟೆಗೆ ತೆಗೆದುಕೊಂಡರು.

    ಲಸಿಕೆಯಲ್ಲಿ ಜಾತಿ ತರುವ ಕೆಲಸವನ್ನು ನಾನಾಗಲಿ ಅಥವಾ ನಮ್ಮ ಪಕ್ಷವಾಗಲಿ ಮಾಡಿಲ್ಲ. ಅಂಥ ಯಾವುದೇ ಘಟನೆ ಕ್ಷೇತ್ರದಲ್ಲಿ ನಡೆದಿಲ್ಲ. ಯಾರಿಗೂ ಲಸಿಕೆ ನಿರಾಕರಿಸಿಲ್ಲ” ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

    ಅಂಕಿ- ಅಂಶ ಕೊಟ್ಟ ಡಿಸಿಎಂ:
    ದಾನಿಗಳ ನೆರವಿನಿಂದ ಮುಕ್ತ ಮಾರುಕಟ್ಟೆಯಲ್ಲಿ ಲಸಿಕೆ ಖರೀದಿ ಮಾಡಿ ಕೊಳೆಗೇರಿಗಳಲ್ಲಿ ವಾಸಿಸುವ 1,000ಕ್ಕೂ ಹೆಚ್ಚು ಬಡವರಿಗೆ, ಆರ್ಥಿಕ ದುರ್ಬಲರಿಗೆ ಲಸಿಕೆ ಕೊಡಿಸಿದ್ದೇನೆ. ಅಲ್ಲದೆ 9,000 ಜನರಿಗೆ ಲಸಿಕೆ ನೀಡಲಾಗಿದೆ. ಇದರಲ್ಲಿ ಕ್ಷೇತ್ರದ 7 ಸ್ಲಂಗಳ ಜನರೇ ಹೆಚ್ಚು ಇದ್ದಾರೆ. ಸತ್ಯ ಅರ್ಥ ಮಾಡಿಕೊಳ್ಳದೆ ಸುಳ್ಳು ಆರೋಪ ಮಾಡುವುದು ಎಷ್ಟು ಸರಿ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆ ಮಾಡಿದರು.

    ಮಲ್ಲೇಶ್ವರದ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ದಲಿತರಿಗೆ ಲಸಿಕೆ ನಿರಾಕರಿಸಲಾಗಿದೆ ಎಂದು ಹರಿಪ್ರಸಾದ್ ದೂರಿದ್ದಾರೆ. ಇದು ಶುದ್ಧ ಸುಳ್ಳು. ಅಂದು, ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿನ ಜನರೂ, ಅವರ ಆರೈಕೆ ಮಾಡುವವರಿಗೆ ಲಸಿಕೆ ನೀಡಲಾಗುತ್ತಿತ್ತು. ಸರ್ಕಾರ ಹೊರಡಿಸಿರುವ ಈ ಮಾರ್ಗಸೂಚಿ ಪ್ರಕಾರ ಯಾರೇ ಬಂದರೂ ಲಸಿಕೆ ಹಾಕಿ ಕಳಿಸಲಾಗುತ್ತಿದೆ. ಪ್ರತಿಯೊಬ್ಬರ ಆಧಾರ್ ಸಂಖ್ಯೆ ದಾಖಲಿಸಿಕೊಂಡು ವ್ಯಾಕ್ಸಿನ್ ನೀಡಲಾಗುತ್ತಿದೆ. ಇಷ್ಟಕ್ಕೂ ಆಧಾರ್ ಕಾರ್ಡ್ ಮೇಲೆ ಜಾತಿ ನಮೂದಾಗಿರುವುದಿಲ್ಲ ಎಂಬ ಅಂಶವನ್ನು ಹರಿಪ್ರಸಾದ್ ಗಮನಿಸಬೇಕು ಎಂದು ಉಪ ಮುಖ್ಯಮಂತ್ರಿ ತಿರುಗೇಟು ಕೊಟ್ಟರು.

    ವೈರಸ್‍ಗೆ ಜಾತಿ- ಧರ್ಮದ ಹಂಗಿಲ್ಲ. ಅದೇ ರೀತಿ ವ್ಯಾಕ್ಸಿನ್‍ಗೆ ಇರುವುದಿಲ್ಲ. ಇದನ್ನು ಹರಿಪ್ರಸಾದ್ ಅವರು ಅರ್ಥ ಮಾಡಿಕೊಳ್ಳಬೇಕು. ಸಂಕಷ್ಟದ ಸಮಯದಲ್ಲಿ ಅವರು ಸರಕಾರಕ್ಕೆ ಸಲಹೆಗಳನ್ನು ನೀಡಿ ಉತ್ತೇಜಿಸಬೇಕೆ ಹೊರತು ಆಗುತ್ತಿರುವ ಕೆಲಸದಲ್ಲಿ ಕಲ್ಲು ಹುಡುಕಿ ನೈತಿಕ ಸ್ಥೈರ್ಯ ಕುಗ್ಗಿಸಬಾರದು. ಇಂಥ ಸೂಕ್ಷ್ಮ ವಿಷಯಗಳಲ್ಲಿ ಜಾತಿ-ಧರ್ಮದಂಥ ಸೂಕ್ಷ್ಮ ಸಂಗತಿಗಳನ್ನು ತರಬಾರದು. ಇವರಿಗೆ ನಾಚಿಕೆಯಾಗಬೇಕು. ಜನ ಪಾಠ ಕಲಿಸಿದ್ದರೂ ಇವರಿಗೆ ಬುದ್ಧಿ ಬಂದಿಲ್ಲ. ಹಾಗಾದರೆ ಇವರ ಪ್ರಕಾರ ಅರ್ಚಕರಿಗೆ ಲಸಿಕೆ ಕೊಡುವ ಹಾಗಿಲ್ಲವೆ? ಎಂದು ಡಿಸಿಎಂ ತರಾಟೆಗೆ ತೆಗೆದುಕೊಂಡರು.