Tag: Hariprasad Jayanna

  • ‘ಪದವಿಪೂರ್ವ’ ಹಾಡುಗಳನ್ನು ಭಾರೀ ಮೊತ್ತಕ್ಕೆ ಖರೀದಿಸಿದ ಲಹರಿ ಸಂಸ್ಥೆ

    ‘ಪದವಿಪೂರ್ವ’ ಹಾಡುಗಳನ್ನು ಭಾರೀ ಮೊತ್ತಕ್ಕೆ ಖರೀದಿಸಿದ ಲಹರಿ ಸಂಸ್ಥೆ

    ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ‘ಪದವಿಪೂರ್ವ’ ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ. ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆಗೆ ವಿಕಟಕವಿ ಯೋಗರಾಜ್ ಭಟ್ ಸಾಹಿತ್ಯ ರಚಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಾಗಲೇ ಚಿತ್ರದ ಹಾಡುಗಳ ಬಗ್ಗೆ ಸಿನಿಪ್ರಿಯರಲ್ಲಿ ಕುತೂಹಲ ಮನೆ ಮಾಡಿತ್ತು. ಈಗ ನಿರೀಕ್ಷೆಗೆ ತಕ್ಕಂತ ಪದವಿಪೂರ್ವ ಚಿತ್ರದ ಹಾಡುಗಳ ಹಕ್ಕನ್ನು ಕನ್ನಡದ ಪ್ರತಿಷ್ಠಿತ ಆಡಿಯೋ ಸಂಸ್ಥೆ ‘ಲಹರಿ ಮ್ಯೂಸಿಕ್’ ತನ್ನ ತಕ್ಕೆಗೆ ಹಾಕಿಕೊಂಡಿದೆ.

    ಇನ್ನು ಎರಡನೆಯ ಖುಷಿ ಸುದ್ದಿಯೂ ಮೊದಲನೇ ಖುಷಿ ಸುದ್ದಿಯ ಮುಂದುವರಿದ ಭಾಗವೇ ಆಗಿದೆ. ಅದೇನೆಂದರೆ, ಪದವಿಪೂರ್ವ ಚಿತ್ರದ ಸುಂದರ ಗೀತೆಗಳಲ್ಲಿ ಒಂದಾದ ‘ಫ್ರೆಂಡ್ಸ್ ಇದ್ರೇನೆ ಜೀವನ’ ಎಂಬ ಹಾಡು ಫ್ರೆಂಡ್‌ಶಿಪ್ ಡೇ ಪ್ರಯುಕ್ತ ಇದೇ ಆಗಸ್ಟ್ 06 ರಂದು ಸಂಜೆ 04:32ಕ್ಕೆ ‘ಲಹರಿ ಮ್ಯೂಸಿಕ್’ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗುತ್ತಿದೆ. ಯೋಗರಾಜ್ ಭಟ್ ಸಾಹಿತ್ಯವಿರುವ ಈ ಹಾಡಿಗೆ ಕನ್ನಡದ ಹೆಮ್ಮೆಯ ಗಾಯಕ ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ. ಇದನ್ನೂ ಓದಿ:‘ಆಪರೇಷನ್ ಲಂಡನ್ ಕೆಫೆ’ ಚಿತ್ರತಂಡದಿಂದ ಮೇಘಾ ಶೆಟ್ಟಿ ಹುಟ್ಟು ಹಬ್ಬಕ್ಕೆ ಗಿಫ್ಟ್

    ಶೂಟಿಂಗ್ ಶುರುವಾದ ದಿನದಿಂದಲೂ ಒಂದಿಲ್ಲೊಂದು ಕಾರಣಕ್ಕೆ ಪ್ರೇಕ್ಷಕರ ನಿರೀಕ್ಷೆ ಹೆಚ್ಚಾಗುವಂತೆ ಮಾಡುತ್ತಿರುವ ಪದವಿಪೂರ್ವ ಚಿತ್ರ, ಸ್ನೇಹದ ಮಹತ್ವ ಸಾರುವ  ತಮ್ಮ ಸಿನಿಮಾದ ಪ್ರಪ್ರಥಮ ಹಾಡನ್ನು ಫ್ರೆಂಡ್‌ಶಿಪ್‌ ಡೇ ಸಲುವಾಗಿ ಬಿಡುಗಡೆ ಮಾಡುತ್ತಿರುವುದು ನಿಜಕ್ಕೂ ವಿಶೇಷ.   ಚಿತ್ರದ ನಾಯಕನಾಗಿ ಪೃಥ್ವಿ ಶಾಮನೂರು ಅಭಿನಯಿಸುತ್ತಿದ್ದು ನಾಯಕಿಯರಾಗಿ ಅಂಜಲಿ ಅನೀಶ್ ಹಾಗು ಯಶ ಶಿವಕುಮಾರ್ ನಟಿಸುತ್ತಿದ್ದಾರೆ. ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ. ಚಿತ್ರದ ಸಂಕಲನದ ಜವಾಬ್ಧಾರಿಯನ್ನು  ಸಂಕಲನಕಾರ ಮಧು ತುಂಬಕೆರೆ ವಹಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಡುಗಡೆಗೂ ಮುನ್ನ ಮತ್ತೊಂದು ಸಿನಿಮಾ ಘೋಷಣೆ ಮಾಡಿದ ‘ಪದವಿಪೂರ್ವ’ ಚಿತ್ರತಂಡ

    ಬಿಡುಗಡೆಗೂ ಮುನ್ನ ಮತ್ತೊಂದು ಸಿನಿಮಾ ಘೋಷಣೆ ಮಾಡಿದ ‘ಪದವಿಪೂರ್ವ’ ಚಿತ್ರತಂಡ

    ರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಪದವಿಪೂರ್ವ’ ಸಿನಿಮಾ ಇನ್ನೂ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವಾಗಲೇ ನಿರ್ಮಾಣ ಸಂಸ್ಥೆ ಇದೇ ನಿರ್ದೇಶಕರೊಡನೆ ಮತ್ತೊಂದು ಚಿತ್ರ ಅನೌನ್ಸ್ ಮಾಡಿದೆ. ಹೌದು, ಪೋಸ್ಟ್ ಪ್ರೊಡಕ್ಷನ್ ಕಾರ್ಯದ ನಡುವೆ ಸಿನಿಮಾ ವೀಕ್ಷಣೆ ಮಾಡಿರುವ ನಿರ್ಮಾಪಕರಲ್ಲೊಬ್ಬರಾದ ವಿಕಟಕವಿ ಯೋಗರಾಜ್ ಭಟ್ಟರು, ತಮ್ಮ ತಂಡದ ನೆಚ್ಚಿನ ಸದಸ್ಯ, ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರ ಕಾರ್ಯವೈಖರಿಯನ್ನು ಮೆಚ್ಚಿ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲು ತಯಾರಾಗಿದ್ದಾರೆ ಎನ್ನಲಾಗಿದೆ. ಸಿನಿಮಾದ ಮತ್ತೊಬ್ಬ ನಿರ್ಮಾಪಕರಾದ ರವಿ ಶಾಮನೂರ್ ಅವರೂ ಸಹ ಭಟ್ಟರ ನಿರ್ಮಾಣ ಸಂಸ್ಥೆಯೊಡನೆ ಮತ್ತೊಮ್ಮೆ ಸಹಭಾಗಿತ್ವ ವಹಿಸಲು ಖುಷಿಯಿಂದ ಒಪ್ಪಿಕೊಂಡಿದ್ದಾರಂತೆ.

    ಅಕ್ಟೋಬರ್ ತಿಂಗಳಿನಲ್ಲಿ ಸೆಟ್ಟೇರಲಿರುವ ಈ ಹೊಸ ಚಿತ್ರಕ್ಕೂ ‘ಪದವಿಪೂರ್ವ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದ ಯುವ ನಟ ಪೃಥ್ವಿ ಶಾಮನೂರ್ ಅವರೇ ನಾಯಕನಾಗಿ ಮುಂದುವರೆಯಲಿದ್ದಾರೆ. ಪೃಥ್ವಿ ಈಗಾಗಲೇ ಯೋಗರಾಜ್ ಭಟ್ಟರ ಮುಂಬರಲಿರುವ ‘ಗರಡಿ’ ಸಿನಿಮಾದಲ್ಲೂ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಭಟ್ಟರ ಕ್ಯಾಂಪ್‌ನಲ್ಲಿ ಸತತವಾಗಿ ಅವಕಾಶ ಗಿಟ್ಟಿಸುವುದು ಅಷ್ಟು ಸುಲಭದ ಮಾತಲ್ಲ. ತನ್ನ ಅಸಾಧಾರಣ ಪ್ರತಿಭೆಯಿಂದ ಭಟ್ಟರನ್ನು ಹಾಗೂ ತಂಡವನ್ನು ಮೋಡಿ ಮಾಡಿರುವ ಈ ಯುವ ನಟನ ಅಭಿನಯ ಕೌಶಲ್ಯಕ್ಕೆ ನಮ್ಮದೊಂದು ಸಲಾಂ. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?

    ಚಿತ್ರತಂಡ ಈ ಬಾರಿಯೂ ಮತ್ತಷ್ಟು ಹೊಸ ಪ್ರತಿಭೆಗಳ ಹುಡುಕಾಟ ನಡೆಸಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಆಡಿಶನ್ ಮೂಲಕ ಅಪ್ಪಟ ದೇಸಿ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇನ್ನುಳಿದಂತೆ ‘ಪದವಿಪೂರ್ವ’ ಚಿತ್ರಕ್ಕಾಗಿ ದುಡಿದಿದ್ದ ಉತ್ಸಾಹಿ ಯುವ ತಂತ್ರಜ್ಞರ ತಂಡದ ಬಹುತೇಕ ಸದಸ್ಯರೇ ಸೆಟ್ಟೇರಲಿರುವ ಹೊಸ ಸಿನಿಮಾದಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ ಎಂದು ನಿರ್ದೇಶಕ ಹರಿಪ್ರಸಾದ್ ಜಯಣ್ಣ ತಿಳಿಸಿದ್ದಾರೆ.

    Live Tv