Tag: haris

  • ಭಾರತ್ ಜೋಡೋ ಯಾತ್ರೆ – ಮಂಡ್ಯದಲ್ಲಿ ಕಾಣಿಸಿಕೊಂಡಿತು ಸಾವರ್ಕರ್ ಫೋಟೋ

    ಭಾರತ್ ಜೋಡೋ ಯಾತ್ರೆ – ಮಂಡ್ಯದಲ್ಲಿ ಕಾಣಿಸಿಕೊಂಡಿತು ಸಾವರ್ಕರ್ ಫೋಟೋ

    ಮಂಡ್ಯ: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ (Savarkar) ಅವರನ್ನು ಎಂದಿಗೂ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ವಾದಿಸುವ ಕಾಂಗ್ರೆಸ್ (Congress) ಮತ್ತೊಮ್ಮೆ ಗೊಂದಲಕ್ಕೆ ಸಿಲುಕಿಕೊಂಡಿದೆ. ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಪೋಸ್ಟರ್‌ನಲ್ಲಿ (Poster) ಮತ್ತೊಮ್ಮೆ ಸಾವರ್ಕರ್ ಫೋಟೋ ಕಾಣಿಸಿಕೊಂಡಿದೆ. ಆದರೆ ಇದು ದುಷ್ಕರ್ಮಿಗಳ ಕೃತ್ಯ ಎಂದು ಕಾಂಗ್ರೆಸ್ ಆರೋಪಿಸಿದೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜೋಡೋ ಯಾತ್ರೆ ಇದೀಗ ಕರ್ನಾಟಕದ ಮಂಡ್ಯ (Mandya) ಜಿಲ್ಲೆಯನ್ನು ತಲುಪಿದೆ. ಆದರೆ ಅಲ್ಲಿ ಈ ಯಾತ್ರೆಗೆ ಸಂಬಂಧಪಟ್ಟ ಒಂದು ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ ಕಾಣಿಸಿಕೊಂಡಿದೆ. ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋಗಳೂ ಕಂಡುಬಂದಿವೆ.

    ಈ ಪೋಸ್ಟರ್ ಶಾಂತಿನಗರ ಶಾಸಕ ಹ್ಯಾರಿಸ್‌ಗೆ ಸೇರಿದ್ದು ಎಂದು ಸುದ್ದಿ ಹಬ್ಬುತ್ತಲೇ ಅವರು ಮಾತನಾಡಿ, ಇದು ಕೆಲ ಕಿಡಿಗೇಡಿಗಳ ಕೃತ್ಯ, ನಾವು ಮಾಡಿರುವುದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಂಡ್ಯ ಜಿಲ್ಲೆಯಲ್ಲಿ ದೂರು ದಾಖಲಿಸುವುದಾಗಿಯೂ ಹ್ಯಾರಿಸ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಭಗವಾಧ್ವಜದ ಫೋಟೋ- ಸ್ಟೇಟಸ್ ಹಾಕಿದ್ದ 8 ಮಂದಿ ವಿರುದ್ಧ ಪ್ರಕರಣ

    ಇದಕ್ಕೂ ಮೊದಲು ಸೆಪ್ಟೆಂಬರ್ 21 ರಂದು ಕೇರಳದಲ್ಲಿ ಭಾರತ್ ಜೋಡೋ ಯಾತ್ರೆಯ ಪೋಸ್ಟರ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳ ಸಾಲಿನಲ್ಲಿ ಸಾವರ್ಕರ್ ಫೋಟೋ ಕೂಡಾ ಕಾಣಿಸಿಕೊಂಡಿತ್ತು. ಬಳಿಕ ಅದು ಪ್ರಿಂಟಿಂಗ್ ಮಿಸ್ಟೇಕ್ ಎಂದು ಸ್ಪಷ್ಟನೆ ನೀಡಿದ ಕಾಂಗ್ರೆಸ್ ಕಾರ್ಯಕರ್ತರು, ಅದರ ಮೇಲೆ ಮಹಾತ್ಮಾ ಗಾಂಧೀಜಿಯವರ ಫೋಟೋ ಅಂಟಿಸಿ ಸಾವರ್ಕರ್ ಫೋಟೋವನ್ನು ಮುಚ್ಚಿ ಹಾಕಿದ್ದರು. ಇದನ್ನೂ ಓದಿ: ದಸರಾ ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ – 9 ಜನರ ವಿರುದ್ಧ ಎಫ್‌ಐಆರ್

    Live Tv
    [brid partner=56869869 player=32851 video=960834 autoplay=true]

  • ಕೈ ಅವರದು, ಕಾಲು ಅವರದು, ಎಲ್ಲಾದರೂ ಇಟ್ಟುಕೊಳ್ಳಲಿ: ಹ್ಯಾರಿಸ್

    ಕೈ ಅವರದು, ಕಾಲು ಅವರದು, ಎಲ್ಲಾದರೂ ಇಟ್ಟುಕೊಳ್ಳಲಿ: ಹ್ಯಾರಿಸ್

    ಬೆಂಗಳೂರು: ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವುದಾಗಿ ಹೇಳುತ್ತಿದ್ದಾರೆ ಅಲ್ಪಸಂಖ್ಯಾತರಲ್ಲೇ ಹಲವು ಗುಂಪುಗಳಾಗಿವೆ ಅನ್ನೋದೆಲ್ಲಾ ಸುಳ್ಳು. ಇಬ್ರಾಹಿಂ ಅವರು ಕಾಲು ಹೊರಗಿಟ್ಟಿದ್ದಾರೋ, ಇಲ್ಲವೋ ಅದು ಅವರ ವೈಯಕ್ತಿಕ ನಿರ್ಧಾರ. ನಾವು ಅದನ್ನು ಪ್ರಶ್ನಿಸುವುದಿಲ್ಲ. ಅವರ ಕೈ, ಅವರ ಕಾಲು ಎಲ್ಲಾದರೂ ಇಟ್ಟುಕೊಳ್ಳಲಿ ಎಂದು ಎಂದ ಶಾಸಕ ಹ್ಯಾರಿಸ್ ಹೇಳಿದ್ದಾರೆ.

    ನಾವು ಎಲ್ಲರನ್ನು ಜೊತೆಗೂಡಿಸುವ ಕೆಲಸ ಮಾಡುತ್ತೇವೆ. ಸದ್ಯ ಪಕ್ಷದಲ್ಲಿ ನಾವು ಎಲ್ಲರೂ ಜೊತೆಯಾಗಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ತಮ್ಮ ಅಭಿಪ್ರಾಯ, ಅಸಮಾಧಾನ ಹೊರಹಾಕಬಹುದು. ಪಕ್ಷದಲ್ಲಿ ಅಲ್ಪಸಂಖ್ಯಾತರ ವಿಚಾರವಾಗಿ ತಿರ್ಮಾನ ಕೈಗೊಳ್ಳಲು ಅದಕ್ಕೆ ಘಟಕವಿದೆ. ನಾವು ಇಬ್ರಾಹಿಂ ಅವರ ಜೊತೆ ಮಾತನಾಡುತ್ತಿದ್ದೇವೆ. ಜಬ್ಬಾರ್ ಅವರು ಕೂಡ ಅವರ ಜೊತೆ ಮಾತನಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಸಿ.ಎಂ ಇಬ್ರಾಹಿಂ ಅವರು ಕೂಡ ನಮ್ಮ ನಾಯಕರು. ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ಅನ್ಯಾಯವಾಗಿಲ್ಲ. ನಮಗೆ ನ್ಯಾಯಯುತವಾಗಿ ಸಿಗಬೇಕಾದ ಎಲ್ಲ ನ್ಯಾಯ ಸಿಗುತ್ತಿದೆ. ಅಲ್ಪಸಂಖ್ಯಾತರಿಗೆ ಸರಿಯಾಗಿ ನ್ಯಾಯ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ನಾನು ಇಲ್ಲಿ ಶಾಸಕನಾಗಿ ಕೂತಿರುವುದಕ್ಕೆ ಕಾರಣ ಕಾಂಗ್ರೆಸ್. ಒಬ್ಬೊಬ್ಬ ನಾಯಕರು ತಮ್ಮ ಅಭಿಪ್ರಾಯವನ್ನು ಹೇಳಿರಬಹುದು. ಪಕ್ಷದ ವಿಚಾರ ಬಂದರೆ ನಾವೆಲ್ಲರೂ ಜೊತೆಯಾಗಿದ್ದೇವೆ ಎಂದರು. ಇದನ್ನೂ ಓದಿ: ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

    ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ನಾಯಕರನ್ನು ಹಂತ ಹಂತವಾಗಿ ರಾಜಕೀಯವಾಗಿ ಮುಗಿಸುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಪಸಂಖ್ಯಾತ ನಾಯಕರನ್ನು ಯಾರು ಮುಗಿಸಿದ್ದಾರೆ ಎಂದು ಜನ ನೋಡಿದ್ದಾರೆ. ತಮ್ಮ ಪಕ್ಷದಲ್ಲಿದ್ದ ಅಲ್ಪಸಂಖ್ಯಾತರಿಗೆ ಅವರು ಯಾವ ಸ್ಥಾನಮಾನ ಕೊಟ್ಟಿದ್ದರು ಎಂದು ಆ ಪಕ್ಷದಲ್ಲಿದ್ದ ನಾಯಕರೇ ಹೇಳಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:   ಅಪ್ಪು ಸರ್ ಎಂದರೆ ನನಗೆ ಹುಚ್ಚು ಅಭಿಮಾನ: ಅನುಶ್ರೀ

    ಕಳೆದ ಉಪಚುನಾವಣೆಯಲ್ಲಿ ಏನಾಯಿತು ಎಂದು ನಾವೆಲ್ಲರೂ ನೋಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಮಾತನಾಡುವ ಸ್ವಾತಂತ್ರ್ಯ ಇದೆ. ಅದಕ್ಕಾಗಿ ಮುಕ್ತವಾಗಿ ಮಾತನಾಡುತ್ತಾರೆ. ಇದೇ ರೀತಿ ಬಿಜೆಪಿಯಲ್ಲಿ ಮಾತನಾಡಲು ಸಾಧ್ಯವೇ? ಇಲ್ಲಿ ನಮಗೆ ಸಿಗುವ ಹಕ್ಕು, ಬೇರೆಲ್ಲೂ ಸಿಗುವುದಿಲ್ಲ ಎಂಬುದು ನಮ್ಮ ಅಭಿಪ್ರಾಯ. ಸ್ಥಾನಮಾನದ ವಿಚಾರವಾಗಿ ನಾವು ಪಕ್ಷದ ಒಳಗೆ ಕೂತು ಚರ್ಚೆ ಮಾಡುತ್ತೇವೆ. ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಸ್ಥಾನಮಾನ ಅಷ್ಟೇ ಅಲ್ಲ ಅವರಿಗಾಗಿ ಸರ್ಕಾರ ಇದ್ದಾಗ ಎಷ್ಟು ಅನುದಾನ ನೀಡಿ ಯಾವ ರೀತಿ ಕಾರ್ಯಕ್ರಮ ನೀಡಲಾಗಿದೆ ಎಂಬುದು ಮುಖ್ಯ. ನಮ್ಮ ಸರ್ಕಾರ ಇದ್ದಾಗ ನೀಡಲಾದ ಅನುದಾನ, ಈಗ ಯಾವ ರೀತಿ ಕಡಿಮೆಯಾಗಿದೆ. ಯೋಜನೆಗಳು ಯಾವ ರೀತಿ ಹಳ್ಳ ಹಿಡಿದಿವೆ, ವಿದ್ಯಾರ್ಥಿ ವೇತನ ನಿಂತಿದೆ ಎಂಬುದನ್ನು ಗಮನಿಸಬೇಕು. ಈ ಅನ್ಯಾಯವನ್ನು ಕೇಳುವ ಕೆಲಸ ಮಾಡಬೇಕಿದೆ. ವಿರೋಧ ಪಕ್ಷವಾಗಿ ನಾವು ನಮ್ಮ ಕೆಲಸ ಮಾಡುತ್ತೇವೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಜಬ್ಬಾರ್, ಶಾಸಕರಾದ ಎನ್.ಎ ಹ್ಯಾರಿಸ್, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಜಿ.ಎ ಬಾವಾ, ಕೆಪಿಸಿಸಿ ಕಾರ್ಯದರ್ಶಿ, ಮೆಹ್ರೊಜ್ ಖಾನ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

  • ಹ್ಯಾರಿಸ್ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿದ್ದರಾಮಯ್ಯ

    ಹ್ಯಾರಿಸ್ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿದ್ದರಾಮಯ್ಯ

    ಏ ಕಷಾಯ ತರಿಸು, ಮಾತ್ರೆ ತಾ
    – ಕಾಂಗ್ರೆಸ್‌ ಸಭೆ ನಡೆಯುತ್ತಿದ್ದಾಗ ಬಂತು ಮೆಸೇಜ್‌

    ಬೆಂಗಳೂರು: ಶಾಂತಿನಗರದ ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಾತು ಕೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದ ಪ್ರಸಂಗ ನಡೆದಿದೆ.

    ಇಂದು ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಭಾಗವಹಿಸುವ ಮೊದಲು ಹ್ಯಾರಿಸ್‌ ಅವರು ಕೋವಿಡ್‌ 19 ಪರೀಕ್ಷೆ ಸಂಬಂಧ ಗಂಟಲ ದ್ರವವನ್ನು ನೀಡಿದ ಬಳಿಕ ಪಾಲ್ಗೊಂಡಿದ್ದರು.

    ಮಧ್ಯಾಹ್ನ ಊಟ ಮಾಡಿದ ನಂತರ ಹ್ಯಾರಿಸ್‌ ಅವರ ಮೊಬೈಲಿಗೆ ಕೊರೊನಾ ಪಾಸಿಟಿವ್‌ ಬಂದಿರುವ ಮೆಸೇಜ್‌ ಬಂದಿದೆ. ಮೆಸೇಜ್‌ ಬಂದಿರುವುದನ್ನು ನೋಡಿದ ಹ್ಯಾರಿಸ್‌ ನನಗೆ ಕೊರೊನಾ ಬಂದಿದೆ. ನಾನು ಸಭೆಯಿಂದ ತೆರಳುತ್ತೇನೆ ಎಂದು ಹೇಳಿ ಹೋಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಸೇರಲು ಮುಂದಾಗಿದ್ರಾ ರಾಗಿಣಿ? – ಕೆಪಿಸಿಸಿ ಚರ್ಚೆಯ ಇನ್‌ಸೈಡ್‌ ಸ್ಟೋರಿ

    ಹ್ಯಾರಿಸ್ ಮಾತು ಕೇಳಿ ಕೈ ನಾಯಕರುಗಳು ಹಾಗೂ ಶಾಸಕರುಗಳು ಒಮ್ಮೆ ಕಕ್ಕಾಬಿಕ್ಕಿಯಾಗಿದ್ದಾರೆ. ಮೆಸೇಜ್‌ ಬರುವ ಮೊದಲು ಸಿದ್ದರಾಮಯ್ಯ ಸಮೀಪ ಬಂದ ಹ್ಯಾರಿಸ್ ಕಿವಿಯಲ್ಲಿ ಗುಟ್ಟು ಹೇಳಿದ್ದರು.

    ಹ್ಯಾರಿಸ್ ಪಾಸಿಟಿವ್ ಅಂತ ಗೊತ್ತಾಗುತ್ತಿದ್ದಂತೆ ಬೆಚ್ಚಿಬಿದ್ದ ಸಿದ್ದರಾಮಯ್ಯ, ಅಯ್ಯೋ ಅವನ, ಇಲ್ಲಿ ಬಂದು ಏನೋ ಮಾತಾಡಿ ಹೋದ್ನಲ್ಲ. ಏ ಕಷಾಯ ತರಿಸು, ಮಾತ್ರೆ ಇರಬೇಕು ತರಿಸು ಎಂದು ಶಾಸಕ ಬೈರತಿ ಸುರೇಶ್‌ಗೆ ಸೂಚಿಸಿದ್ದಾರೆ.

    ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಬಂದ ಬಳಿಕ ಸಿದ್ದರಾಮಯ್ಯನವರಿಗೂ ಸೋಂಕು ಬಂದಿತ್ತು. ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಆಗಸ್ಟ್‌ 13 ರಂದು ಡಿಸ್ಚಾರ್ಜ್‌ ಆಗಿದ್ದರು.

    ಡಿಸ್ಚಾರ್ಜ್‌ ಬಳಿಕ ಸಿದ್ದರಾಮಯ್ಯ ಎಲ್ಲರ ಜೊತೆ ಅಂತರ ಕಾಯ್ದುಕೊಂಡೇ ಇರುತ್ತಿದ್ದರು. ಮನೆಯಲ್ಲೇ ಸಭೆ ನಡೆಸದೇ ಹೊರಗಡೆ ನಡೆಸುತ್ತಿದ್ದಾರೆ. ಮನೆಯಲ್ಲಿದ್ದರೂ ಮತ್ತು ಹೊರಗಡೆ ಹೋದಾಗಲೂ ಕೈಗೆ ಗ್ಲೌಸ್‌, ಮುಖಕ್ಕೆ ಫೇಸ್‌ ಮಾಸ್ಕ್‌ ಧರಿಸಿಕೊಂಡೇ ಓಡಾಡುತ್ತಿದ್ದಾರೆ.

  • ಹಗಲು ಹೊಡೆದು ರಾತ್ರಿ ರಾಜಿ ಮಾಡ್ಕೊಂಡ ನಲಪಾಡ್

    ಹಗಲು ಹೊಡೆದು ರಾತ್ರಿ ರಾಜಿ ಮಾಡ್ಕೊಂಡ ನಲಪಾಡ್

    ಬೆಂಗಳೂರು: ಯುವ ಕಾಂಗ್ರೆಸ್ ಕಾರ್ಯಕರ್ತ ಸಚಿನ್ ಮೇಲೆ ಹಲ್ಲೆ ಮಾಡಿದ್ದ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣ ಪೊಲೀಸ್ ಸ್ಟೇಷನ್ ಮೆಟ್ಟಿಲೇರುತ್ತಿದ್ದಂತೆ ರಾತ್ರೋ ರಾತ್ರಿ ರಾಜಿ ಸಂಧಾನ ಮಾಡಿಕೊಂಡಿದ್ದಾನೆ. ನಿಯೋಜಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ತಡರಾತ್ರಿ ಡಿಕೆಶಿ ನಿವಾಸದಲ್ಲಿ ಇಬ್ಬರೂ ರಾಜಿ ಮಾಡಿಕೊಂಡಿದ್ದಾರೆ.

    ರಾಜಿ ಮಾಡಿಸುವಂತೆ ನಲಪಾಡ್ ಕೆಪಿಸಿಸಿ ಅಧ್ಯಕ್ಷರ ಮೇಲೆ ಒತ್ತಡ ಹಾಕಿದ್ದ. ತಂದೆ ಶಾಸಕ ಹ್ಯಾರೀಸ್ ರಿಂದಲೂ ಡಿಕೆಶಿ ಮೇಲೆ ಒತ್ತಡ ಹಾಕಲಾಗಿತ್ತು. ಹೀಗಾಗಿ ತಡರಾತ್ರಿ ಇಬ್ಬರನ್ನೂ ತಮ್ಮ ನಿವಾಸಕ್ಕೆ ಕರೆಸಿಕೊಂಡು ಡಿಕೆಶಿ ರಾಜಿ ಮಾಡಿಸಿದ್ದಾರೆ. ಇದನ್ನೂ ಓದಿ: ಯುವ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ – ಮತ್ತೊಮ್ಮೆ ಸುದ್ದಿಯಾದ ನಲಪಾಡ್

    ರಾಜಿ ನಂತರ ಪುಂಡ ನಲಪಾಡ್ ಗೆ ಡಿಕೆಶಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ನಿಂದು ಇದೇ ಫಸ್ಟ್, ಇದೇ ಲಾಸ್ಟ್ ಆಗ್ಬೇಕು. ಮತ್ತೆ ನಿನ್ನಿಂದ ಪಕ್ಷಕ್ಕೆ ಡ್ಯಾಮೇಜ್ ಆದರೆ ಪರಿಣಾಮ ಸರಿ ಇರಲ್ಲ. ನಾನು ನಿನ್ನ ಮೇಲೆ ಕ್ರಮ ತೆಗದುಕೊಳ್ಳಬೇಕಾಗುತ್ತೆ ಹುಷಾರ್ ಎಂದು ನಲಪಾಡ್‍ಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ.

    ಸಚಿನ್ ಬಳಿ ಕ್ಷಮೆ ಕೋರಿದ ನಲಪಾಡ್. ಇನ್ಮುಂದೆ ನಾನು ಆ ರೀತಿ ವರ್ತನೆ ಮಾಡಲ್ಲ ಎಂದಿದ್ದಾನೆ. ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಎರಡು ದಿನದ ಹಿಂದೆ ಸಚಿನ್ ಮೇಲೆ ನಲಪಾಡ್‍ ಹಲ್ಲೆ ಮಾಡಿದ್ದ. ನಿನ್ನೆ ವೈಯಾಲಿ ಕಾವಲ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಘಟನೆ ಏನು?
    ಭಾನುವಾರ ಸಂಜೆ ವೈಯ್ಯಾಲಿಕಾವಲ್ ತೆಲುಗು ಭವನದಲ್ಲಿ ಕೈ ಕಾರ್ಯಕರ್ತರಿಗೆ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಕೈ ಶಾಸಕ ಬಿ.ನಾರಾಯಣ ರವರ ಪುತ್ರ ಗೌತಮ್, ನಲಪಾಡ್ ಸೇರಿದಂತೆ ಯೂತ್ ಕಾಂಗ್ರೆಸ್ಸಿನ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಪುತ್ರ ಗೌತಮ್ ಅವರಿಗೆ ವೇದಿಕೆ ಮೇಲೆ ಅವಕಾಶ ನೀಡಿರಲಿಲ್ಲವಂತೆ. ಇದನ್ನು ಸಚಿನ್ ಎಂಬಾತ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾನೆ. ಇದನ್ನೆಲ್ಲ ಪ್ರಶ್ನಿಸಲು ನೀನ್ಯಾರು ಎಂದು ಶಿವಕುಮಾರ್ ಸಚಿನ್‍ಗೆ ಅವಾಜ್ ಹಾಕಿದ್ದಾರೆ. ಈ ವೇಳೆ ಅಲ್ಲೆ ಇದ್ದ ನಲಪಾಡ್ ಹಾಗೂ ಆತನ ಗನ್ ಮ್ಯಾನ್ ಏಕಾಏಕಿ ಸಚಿನ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ನಲಪಾಡ್ ಪಕ್ಷದ ಕೈ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು.

  • ನಲಪಾಡ್ ಪಾಲಿಗೆ ಕಾಂಗ್ರೆಸ್ಸಿಗರೇ ವಿಲನ್‍ಗಳು

    ನಲಪಾಡ್ ಪಾಲಿಗೆ ಕಾಂಗ್ರೆಸ್ಸಿಗರೇ ವಿಲನ್‍ಗಳು

    ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಅಪಘಾತ ಪ್ರಕರಣ ತಡವಾಗಿ ಬೆಳಕಿಗೆ ಬಂದು ಪೊಲೀಸರು ನಲಪಾಡ್‍ನನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಆದರೆ ಹೀಗೆ ಅಪಘಾತ ಮಾಡಿದ ನಲಪಾಡ್ ಪೊಲೀಸರಿಗೆ ಸಿಕ್ಕಿಹಾಕಿಕೊಳ್ಳಲು ಕಾಂಗ್ರೆಸ್ಸಿನವರೇ ಕಾರಣವಂತೆ. ನಲಪಾಡ್ ಯುವ ಕಾಂಗ್ರೆಸ್ ಬೆಂಗಳೂರು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾನೆ.

    ಫೆಬ್ರವರಿ ಅಂತ್ಯದಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದ್ದು ಈ ಬಾರಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಬಣದ ಡಾರ್ಕ್ ಹಾರ್ಸ್ ಮೊಹಮ್ಮದ್ ನಲಪಾಡ್. ಈ ಹಿಂದೆ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಲಪಾಡ್‍ನನ್ನು ಯುವ ಕಾಂಗ್ರೆಸ್ಸಿನಿಂದ ವಜಾ ಮಾಡಲಾಗಿತ್ತು. ನಲಪಾಡ್ ಜೈಲಿನಿಂದ ಹೊರ ಬರುತ್ತಿದ್ದಂತೆ ಅಷ್ಟೇ ವೇಗವಾಗಿ ಆತನನ್ನ ಯವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಅದೇ ನಲಪಾಡ್‍ನನ್ನು ಫೆಬ್ರವರಿ ಅಂತ್ಯದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ಮಾಡಲು ಸಿದ್ದರಾಮಯ್ಯ ಬಣ ಸಿದ್ಧತೆ ನಡೆಸಿತ್ತು. ಇದನ್ನೂ ಓದಿ: ನಾನೇನು ಮನುಷ್ಯನಲ್ವ, ದಯವಿಟ್ಟು ನನ್ನನ್ನು ಬಿಟ್ಟು ಬಿಡಿ – ಕೈ ಮುಗಿದು ನಲಪಾಡ್ ಕಣ್ಣೀರು

    ಆದರೆ ಅಪಘಾತ ಪ್ರಕರಣದಲ್ಲಿ ತಗಲಾಕಿಕೊಂಡ ನಲಪಾಡ್ ಮತ್ತೊಂದು ಅಪವಾದಕ್ಕೆ ಗುರಿಯಾಗಿದ್ದಾನೆ. ಇದರಿಂದ ಕಂಗಾಲಾದ ಶಾಸಕ ಹ್ಯಾರಿಸ್, ನನ್ನ ಮಗನನ್ನ ಯುವ ಕಾಂಗ್ರೆಸ್ಸಿನಲ್ಲಿ ಪ್ರಿನ್ಸ್ ಆಫ್ ಬೆಂಗಳೂರು ಅನ್ನುತ್ತಿದ್ದರು. ಅವನು ರಾಜ್ಯಾಧ್ಯಕ್ಷನಾಗ್ತಾನೆ ಅನ್ನೋ ಕಾರಣಕ್ಕೆ ನಮ್ಮವರೇ ಅವನ ಹೆಸರು ಬಹಿರಂಗವಾಗುವಂತೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಬಳಿ ಅಲವತ್ತುಕೊಂಡಿದ್ದಾರೆ. ಇದನ್ನೂ ಓದಿ: ಹಿಟ್ ಆಂಡ್ ರನ್ ಕೇಸ್, ಗನ್‍ಮ್ಯಾನ್ ಅರೆಸ್ಟ್ – ಅತಿ ಬುದ್ಧಿವಂತಿಕೆ ಪ್ರದರ್ಶಿಸಲು ಹೋಗಿದ್ದ ನಲಪಾಡ್ ಸಿಕ್ಕಿ ಬಿದ್ದಿದ್ದು ಹೇಗೆ?

    ಆದರೆ ತಮ್ಮ ಬಣದಿಂದ ಯುವ ಕಾಂಗ್ರೆಸ್ ಅಧ್ಯಕ್ಷನನ್ನಾಗಿಸುವುದು ಇರಲಿ ಇದು ಇನ್ನು ಸರಿ ಹೋಗದ ಹಳೆ ಜೈಲು ಗಿರಾಕಿ ಎಂಬುದನ್ನ ಅರ್ಥ ಮಾಡಿಕೊಂಡ ಸಿದ್ದರಾಮಯ್ಯ, ಏನೂ ಮಾತನಾಡದೆ ಸುಮ್ಮನಾಗಿದ್ದಾರೆ. ಶಾಸಕ ಹ್ಯಾರಿಸ್‍ಗೆ ತಮ್ಮ ಪುತ್ರ ತಪ್ಪು ಮಾಡಿದ್ದಾನೆ ಅನ್ನೋದಕ್ಕಿಂತ ಅವನಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸೋಕೆ ನಮ್ಮವರೇ ಹೀಗೆ ಮಾಡಿದ್ದಾರೆ ಅನ್ನೋದೇ ದೊಡ್ಡ ವಿಷಯವಾಗಿದೆ. ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷ ಆಗ್ತಾನೋ ಇಲ್ಲವೋ..? ಆದರೆ ಆತನ ಕಿರಿಕ್‍ಗಳು ಸ್ವತಃ ಸಿದ್ದರಾಮಯ್ಯಗೆ ಇದು ಸರಿಯಲ್ಲ ಅನ್ನಿಸಿದೆ. ಆದರೆ ತಿದ್ದಿಬುದ್ಧಿ ಹೇಳಬೇಕಾದ ಶಾಸಕ ಹ್ಯಾರಿಸ್ ಮಾತ್ರ ತಪ್ಪು ಮಾಡಿದ ಮಗನ ವಿರುದ್ಧ ಕಾಂಗ್ರೆಸ್ಸಿನವರೇ ಮಸಲತ್ತು ಮಾಡಿದ್ದಾರೆ ಎಂದು ಹೊಸ ರಾಗ ತೆಗೆದಿರುವುದಂತೂ ಸುಳ್ಳಲ್ಲ. ಇದನ್ನೂ ಓದಿ: ಸರಣಿ ಅಪಘಾತ ಮಾಡಿ ಬೆಂಟ್ಲಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ ನಲಪಾಡ್

  • ಒಂದ್ಕಡೆ ದೇಶಕ್ಕೆ ಉಗ್ರದಾಳಿಯ ಶೋಕ- ಇತ್ತ ಶಾಸಕ  ಹ್ಯಾರೀಸ್‌ಗೆ ಹುಟ್ಟುಹಬ್ಬದ ಸಂಭ್ರಮ

    ಒಂದ್ಕಡೆ ದೇಶಕ್ಕೆ ಉಗ್ರದಾಳಿಯ ಶೋಕ- ಇತ್ತ ಶಾಸಕ ಹ್ಯಾರೀಸ್‌ಗೆ ಹುಟ್ಟುಹಬ್ಬದ ಸಂಭ್ರಮ

    ಬೆಂಗಳೂರು: ಇಡೀ ದೇಶವೇ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಈ ನಡುವೆ ಶಾಂತಿನಗರ ಶಾಸಕ ಹ್ಯಾರೀಸ್ ಬೆಂಬಲಿಗರಿಂದ ಹುಟ್ಟುಹಬ್ಬ ಮನರಂಜನಾ ಕಾರ್ಯಕ್ರಮ ನಡೆದಿದೆ.

    ಶಾಂತಿನಗರ ಹಬ್ಬ ಎಂಬ ಹೆಸರಿನಲ್ಲಿ ವಿವೇಕನಗರ ಬಸ್ ನಿಲ್ದಾಣ ಬಳಿ ಕಾರ್ಯಕ್ರಮ ಆಯೋಜಿಸಿದ್ದು, ಆರ್ಕೆಸ್ಟ್ರಾ ಏರ್ಪಡಿಸಲಾಗಿತ್ತು. ಅಪ್ಪ-ಮಗನ ಹೆಸರಿನಲ್ಲಿ ದೊಡ್ಡ ದೊಡ್ಡ ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದವು. ಆದರೆ ವಿಷಯ ಮಾಧ್ಯಮದವರಿಗೆ ಗೊತ್ತಾಗುತ್ತಿದ್ದಂತೆ ಹ್ಯಾರೀಸ್ ಬೆಂಬಲಿಗರು ಕಾರ್ಯಕ್ರಮವನ್ನ ರದ್ದುಗೊಳಿಸಿದ್ದಾರೆ.

    ಈ ಬಗ್ಗೆ ಶಾಸಕ ಹ್ಯಾರೀಸ್‍ರನ್ನೇ ಕೇಳಿದ್ದಕ್ಕೆ, ನನ್ನ ಬರ್ತ್ ಡೇ ಇರುವುದು ಜನವರಿ ತಿಂಗಳಲ್ಲಿ. ಬರ್ತ್ ಡೇ ಪಾರ್ಟಿ ಮಾಡಿಲ್ಲ. ಅದು ಶಾಂತಿನಗರ ಹಬ್ಬ ಅಂತ ಮಾಡುತ್ತಿದ್ದರು. ಸ್ಥಳಕ್ಕೆ ಭೇಟಿ ನೀಡಿ ಆ ಕಾರ್ಯಕ್ರಮ ಬದಲಾಯಿಸಿ ಯೋಧರ ಬಗ್ಗೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮ ಮುಗಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಇನ್ನೂ ಪುಲ್ವಾಮಾ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಐವತ್ತು ಸಾವಿರ ನೆರವು ನೀಡಲು ಮುಂದಾಗಿದ್ದಾರೆ. ಎನ್.ಎ.ಹ್ಯಾರೀಸ್ ಫೌಂಡೇಷನ್ ನಿಂದ ಐವತ್ತು ಸಾವಿರ ನೆರವು ನೀಡುವುದಾಗಿ ಶಾಸಕ ಹ್ಯಾರೀಸ್ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!

    ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!

    ಬೆಂಗಳೂರು: ರಣಜಿ ಕ್ರಿಕೆಟ್ ಆಟಗಾರನಿಗೂ ಶಾಂತಿ ನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ಹಲ್ಲೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ.  ಇದನ್ನೂ ಓದಿ: ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ಸ್ಟಾರ್ ಹೋಟೆಲ್ ಒಂದರಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಯರ್ ಬಾಟಲ್ ನಲ್ಲಿ ರಣಜಿ ಆಟಗಾರನೊಬ್ಬನಿಗೆ ನಲಪಾಡ್ ಮಾರಣಾಂತಿಕ ಹಲ್ಲೆ ನಡೆಸಿದ್ದ. ಆರು ತಿಂಗಳ ಹಿಂದೆ ಈ ಘಟನೆ ನಡೆದಿದ್ದು ಆಟಗಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರನ್ನು ನೀಡಿರಲಿಲ್ಲ. ಇದನ್ನೂ ಓದಿ:  ವಿಪಕ್ಷಗಳು, ಮಾಧ್ಯಮದ ಮೇಲೆ ಗೂಬೆ ಕೂರಿಸಿದ ರೌಡಿ ನಲಪಾಡ್

    ಈಗ ಸ್ಟಾರ್ ಹೋಟೆಲ್ ಒಂದರ ಮ್ಯಾನೇಜರ್ ಈ ವಿಚಾರವನ್ನು ಬಹಿರಂಗ ಪಡಿಸಿದ ಕಾರಣ ಸುದ್ದಿಯಾಗಿದೆ. ಈ ಸುದ್ದಿ ಪ್ರಕಟವಾದ ಬಳಿಕ ಕರ್ನಾಟಕ ರಣಜಿ ತಂಡ ಸಿದ್ದರಾಮಯ್ಯನವರಿಗೆ ಟ್ವೀಟ್ ಮಾಡಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಕೇಳಿಕೊಂಡಿದೆ. ನಮ್ಮ ರಾಜ್ಯದ ಆಟಗಾರರು ನಮ್ಮ ಕನ್ನಡನಾಡಿನ ಹೆಮ್ಮೆಯ ಪ್ರತಿನಿಧಿಗಳು. ಭಾರತದ ಮಟ್ಟದ್ದಲ್ಲಿ ನಮ್ಮ ನಾಡ ಕೀರ್ತಿಯನ್ನು ಬೆಳಗಿರುವವರು. ದಯವಿಟ್ಟು ಈ ಹಿಂಸೆಗೆ ಅಂತ್ಯ ಹಾಡಿ ಎಂದು ಟ್ವೀಟ್ ಮಾಡಿ ಮಾನವಿ ಮಾಡಿಕೊಂಡಿದೆ. ಇದನ್ನೂ ಓದಿ:ಜೈಲಿಗೆ ಹೋದ ಎರಡೇ ದಿನಕ್ಕೆ ನಲಪಾಡ್ ಕೈಗೆ ಸಿಕ್ತು ಮೊಬೈಲ್ ಫೋನ್!

    https://www.youtube.com/watch?v=rByoOC1wzSk

    https://www.youtube.com/watch?v=RtMFKdQtfME

     

  • ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ಬೆಂಗಳೂರು: ಪುತ್ರ ನಲಪಾಡ್ ನಿಂದ ಹಲ್ಲೆಗೆ ಒಳಗಾದ ವಿದ್ವತ್ ಅವರನ್ನು ನೋಡಲು ಶಾಂತಿನಗರದ ಶಾಸಕ ಹ್ಯಾರಿಸ್ ದಂಪತಿ ಇಂದು ರಾತ್ರಿ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದರು.

    ಈ ಸಂದರ್ಭದಲ್ಲಿ ವಿದ್ವತ್ ತಂದೆ ಲೋಕನಾಥ್ ಬಳಿ, ಏನೋ ಮಕ್ಕಳು ಹೊಡೆದಾಡಿಕೊಂಡಿದ್ದು ಬುದ್ಧಿ ಹೇಳೋಣ. ಕಳೆದ ಮೂರು ದಿನಗಳಿಂದ ಸತ್ತು ಬದುಕಿದ್ದೇನೆ. ಕೋರ್ಟ್ ನಲ್ಲಿ ಆಕ್ಷೇಪಣೆ ಹಾಕಬೇಡಿ, ನನ್ನ ಮಗನಿಗೆ ಜಾಮೀನು ಸಿಗುವುದಿಲ್ಲ ಎಂದು ಹೇಳಿ ಶಾಸಕ ಹ್ಯಾರಿಸ್ ಗೋಳಾಡಿದ್ದಾರೆ.

    ಹ್ಯಾರಿಸ್ ಅವರ ಈ ಸಂಧಾನಕ್ಕೆ ಮಣಿಯದ ಲೋಕನಾಥ್, ಶಾಸಕರ ಸಂಪೂರ್ಣ ಮಾತು ಕೇಳಿ ಡಾಕ್ಟರ್ ಕರೆದರು ಎಂದು ಹೇಳಿ ಒಳಗಡೆ ಹೋಗಿದ್ದಾರೆ. ಕೊನೆಗೆ ಸಂಧಾನ ಯಶಸ್ವಿಯಾಗದೇ ಸಪ್ಪೆ ಮೋರೆ ಹಾಕಿಕೊಂಡು ಹ್ಯಾರಿಸ್ ಹೊರಬಂದಿದ್ದಾರೆ.

    ಇಬ್ಬರ ಮಾತುಕತೆಯ ಬಳಿಕ ಮಾಧ್ಯಮಗಳು ಪ್ರತಿಕ್ರಿಯೆ ಕೇಳಲು ಮುಂದಾದಾಗ “ನೋ ನೋ” ಎಂದು ಹೇಳಿ ಹ್ಯಾರಿಸ್ ಕಾರು ಹತ್ತಿ ಹೊರಟು ಹೋಗಿದ್ದಾರೆ.

    ರಾತ್ರಿ ಬಿಜೆಪಿ ಮುಖಂಡ ಸಿಟಿ ರವಿ ಅವರು ವಿದ್ವತ್ ನೋಡಲು ಆಸ್ಪತ್ರೆಗೆ ಆಗಮಿಸಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ಫೆಕ್ಷನ್ ಆಗುತ್ತದೆ ಎನ್ನುವ ಕಾರಣಕ್ಕೆ ಐಸಿಯುಗೆ ಬಿಡಲಿಲ್ಲ. ಅವರ ತಂದೆಯ ಜೊತೆ ಮಾತನಾಡಿ ಆರೋಗ್ಯವನ್ನು ವಿಚಾರಿಸಿ ಬಂದಿದ್ದೇನೆ. ಪೋಷಕರು ಮಕ್ಕಳನ್ನು ಹೇಗೆ ಬೆಳೆಸಬೇಕು ಎನ್ನುವುದನ್ನು ಈ ಪ್ರಕರಣ ತಿಳಿಸಿಕೊಡುತ್ತದೆ ಎಂದು ಹೇಳಿದರು.

    https://youtu.be/JGFneQ-8OTg

    https://youtu.be/-BMml-Cw79E

    https://youtu.be/S8uFT-0fdmo

     

    https://www.youtube.com/watch?v=rByoOC1wzSk

  • ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್‍ಗೆ 8 ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ.

    ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು 7 ಮಂದಿ ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಮಧ್ಯಾಹ್ನ 4.10 ರ ವೇಳೆಗೆ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದರು. ಇದಾದ ಬಳಿಕ ಪೊಲೀಸರು ಕೋರ್ಟ್ ಗೆ ನಲಪಾಡ್ ಮತ್ತು ಆತನ ಗ್ಯಾಂಗ್ ಸದಸ್ಯರನ್ನು ಹಾಜರು ಪಡಿಸಿದ್ದರು. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ಜಡ್ಜ್ 14 ದಿನಗಳ ಕಾಲ ಅಂದರೆ ಮಾರ್ಚ್ 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಲಪಾಡ್ ನನ್ನು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ರಾಜಕೀಯ ಒತ್ತಡದಿಂದಾಗಿ ಕೊಲೆ ಯತ್ನ (307) ಕೇಸು ದಾಖಲಿಸಲಾಗಿದೆ. ಎಫ್‍ಐಆರ್ ದಾಖಲಾಗಿ ಎಷ್ಟೋ ಗಂಟೆಗಳ ಬಳಿಕ ಮತ್ತೊಂದು ಸೆಕ್ಷನ್ ಸೇರಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸದೇ ಬಾಹ್ಯ ಒತ್ತಡಕ್ಕೆ ಮಣಿದು ಈ ಪ್ರಕರಣ ದಾಖಲಿಸಿರುವುದು ತಪ್ಪು ಎಂದು ಪೊಲೀಸರ ಕ್ರಮವನ್ನು ಪ್ರಶ್ನಿಸಿ ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ರೌಡಿ ನಲಪಾಡ್ ಪ್ರಕರಣಕ್ಕೆ ಆರಂಭದಲ್ಲೇ ಸಮಾಧಿ ಕಟ್ಟಲು ಮುಂದಾದ ಪೊಲೀಸರು!

    ಮುಂದೇನು?
    ಪ್ರಕರಣ ಈಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಿಂದ ಸಿಸಿಬಿಗೆ ವರ್ಗಾವಣೆಯಾಗಿದೆ. ಆದರೆ ಸಿಸಿಬಿ ಪೊಲೀಸರು ಇನ್ನೂ ವಿಚಾರಣೆ ಆರಂಭಿಸಿಲ್ಲ. ಅಷ್ಟೇ ಅಲ್ಲದೇ ಕಬ್ಬನ್ ಪಾರ್ಕ್ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ ಹೊರತು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ವಿದ್ವತ್ ಅವರ ಹೇಳಿಕೆಯನ್ನು ಪಡೆದಿಲ್ಲ. ಹೀಗಾಗಿ ವಿದ್ವತ್ ಅವರ ಹೇಳಿಕೆಯನ್ನು ಪಡೆಯಬೇಕಿದೆ. ಇದರ ಜೊತೆಯಲ್ಲೇ ನ್ಯಾಯಾಂಗ ಬಂಧನದಲ್ಲಿರುವ ನಲಪಾಡ್ ನನ್ನು ಬಾಡಿ ವಾರಟ್ ಮೇಲೆ ಕರೆತಂದು ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆಯಿದೆ.  ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.  ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

     

    https://www.youtube.com/watch?v=B-erXK9nl1M

    https://www.youtube.com/watch?v=TIPtfcxi6O4

    https://www.youtube.com/watch?v=vgXGeYC-QqU

    https://www.youtube.com/watch?v=ETcXE9RXvXE

    https://www.youtube.com/watch?v=bLWKOszy0uc

     

  • ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ಬೆಂಗಳೂರು: ಶಾಂತಿನಗರ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ಖಾಸಗಿ ವಿಮಾನ ಖರೀದಿಸಲು ಪ್ಲಾನ್ ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಆನ್ ಲೈನ್ ಹ್ಯಾಕರ್ ಗಳನ್ನು ಬಳಸಿಕೊಂಡು ಕೋಟ್ಯಾಂತರ ರೂ. ಸಂಪಾದನೆ ಮಾಡಿದ್ದ ನಲಪಾಡ್ ವಿಮಾನ ಖರೀದಿ ಮಾಡಲು ಪುಣೆಗೆ ಈ ಹಿಂದೆ ತೆರಳಿ ಮಾತುಕತೆ ನಡೆಸಿದ್ದ. ಇದಾದ ಬಳಿಕ ವಿಮಾನ ಖರೀದಿ ಪ್ರಕ್ರಿಯೆಯಿಂದ ಹಿಂದಕ್ಕೆ ಸರಿದಿದ್ದ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.  ಇದನ್ನೂ ಓದಿ: ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನ- ನಲಪಾಡ್ ನರಕದಿಂದ ಪಬ್ಲಿಕ್ ಟಿವಿಯ ಪ್ರತ್ಯಕ್ಷ ವರದಿ

    ಎಲ್ಲಾ ಹೈಡ್ರಾಮಾದ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ ಮಂಗಳವಾರ ಹುಬ್ಬಳ್ಳಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದರು. ಕೇವಲ ಕಾಲು ತಾಗಿದ್ದಕ್ಕೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಮಾಡಿಲ್ಲ. ಇದರ ಹಿಂದೆ ಕೋಟ್ಯಾಂತರ ರೂಪಾಯಿಗಳ ಹಗರಣ ಇದೆ. ಕಂಪ್ಯೂಟರ್ ಹ್ಯಾಕಿಂಗ್, ಬಿಟ್ ಕಾಯಿನ್, ಹವಾಲಾ ದಂಧೆಯ ಕರಾಳ ಮುಖ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಎಂ ಸಿದ್ದರಾಮಯ್ಯ ಈ ಪ್ರಕರಣವನ್ನು ಮುಚ್ಚಿಹಾಕುವ ಯತ್ನದಲ್ಲಿ ಇದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸೈಬರ್ ಕ್ರೈಂ ವಿಭಾಗದಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು