Tag: Harish Chandra Meena

  • ಬಿಜೆಪಿಯಿಂದ ಮತ್ತೊಬ್ಬ ನಾಯಕ ಕಾಂಗ್ರೆಸ್‍ಗೆ ಜಂಪ್

    ಬಿಜೆಪಿಯಿಂದ ಮತ್ತೊಬ್ಬ ನಾಯಕ ಕಾಂಗ್ರೆಸ್‍ಗೆ ಜಂಪ್

    -ರಾಜಸ್ಥಾನದಲ್ಲಿ ಇಬ್ಬರು ಪ್ರಬಲ ಅಭ್ಯರ್ಥಿಗಳನ್ನು ಕಳೆದುಕೊಂಡ ಬಿಜೆಪಿ

    ಜೈಪುರ್: ರಾಜಸ್ಥಾನ ವಿಧಾನಸಭಾ ಚುನಾವಣೆಗೆ ನಾಮ ಪತ್ರಸಲ್ಲಿಕೆ ಪ್ರಾರಂಭವಾಗಿದೆ. ಈ ಬೆಳವಣಿಗೆಯಲ್ಲಿ ಬಿಜೆಪಿಯ ಎರಡು ವಿಕೆಟ್‍ಗಳನ್ನು ಕಾಂಗ್ರೆಸ್ ಪಡೆದುಕೊಂಡಿದೆ.

    ಹೌದು, ಮಾಜಿ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಸಂಸದ ಹರೀಶ್ ಮೀನಾ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಶಾಕ್ ನೀಡಿದೆ. ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನೇತೃತ್ವದಲ್ಲಿ ಹರೀಶ್ ಮೀನಾ ಕಾಂಗ್ರೆಸ್ ಮನೆ ಸೇರಿದ್ದಾರೆ.

    ಈ ಮೂಲಕ 2019ರ ಲೋಕಸಭಾ ಚುನಾವಣೆ ಮತ್ತಷ್ಟು ಕುತೂಹಲಕ್ಕೆ ಎಡೆ ಮಾಡಿಕೊಡುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಚುನಾವಣೆಗೆ ಭಾರೀ ಸಿದ್ಧತೆ ನಡೆಸಿದ್ದು, ರಣತಂತ್ರ ಹೆಣೆಯುತ್ತಿವೆ. ಈ ಬೆಳವಣಿಗೆಯಲ್ಲಿಯೇ ರಾಜಸ್ಥಾನದ ಇಬ್ಬರು ಪ್ರಬಲ ಅಭ್ಯರ್ಥಿಗಳು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಳೆದ ತಿಂಗಳು ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ  ಸಿಂಗ್ ಕಾಂಗ್ರೆಸ್ ಸೇರಿಕೊಂಡಿದ್ದರು.

    ಹರೀಶ್ ಮೀನಾ ಕಾಂಗ್ರೆಸ್ ಸೇರುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಉತ್ತಮ ಸಮಯದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ. ಇದನ್ನು ಓದಿ: ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಪುತ್ರ ಮಾನವೇಂದ್ರ ಸಿಂಗ್ ಕಾಂಗ್ರೆಸ್ ಸೇರ್ಪಡೆ

    ಹರೀಶ್ ಮೀನಾ ಯಾರು?:
    ರಾಜಸ್ಥಾನದ ಮಾಜಿ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಹರೀಶ್ ಮೀನಾ ಅವರು, 2014ರಲ್ಲಿ ನಿವೃತ್ತಿ ಹೊಂದಿದ್ದರು. ಬಳಿಕ 2014ರ ಲೋಕಸಭಾ ಚುನಾವಣೆಗೆ ದೌಸ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಮೊದಲ ಚುನಾವಣೆಯಲ್ಲಿಯೇ ಜಯಗಳಿಸಿದ್ದರು.

    ವಿಶೇಷವೆಂದರೆ ಹರೀಶ್ ಮೀನಾ ಅವರ ಸಹೋದರ ನಮೋ ನಾರಾಯಾಣ ಮೀನಾ ಕಾಂಗ್ರೆಸ್ ಮುಖಂಡ. ಹೀಗಿದ್ದರೂ 2014ರ ಲೋಕಸಭಾ ಚುನಾವಣೆಯಲ್ಲಿ ಹರೀಶ್ ಮೀನಾ ಬಿಜೆಪಿಯಿಂದ ಸ್ಪರ್ಧಿಸಿ ಸಹೋದರನಿಗೆ ಭಾರೀ ಪೈಪೋಟಿ ನೀಡಿದ್ದರು. ಆದರೆ ಈಗ ಇಬ್ಬರು ಒಂದೇ ಪಕ್ಷದಿಂದ ಚುನಾವಣೆ ಕಣಕ್ಕೆ ಇಳಿಯಲಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬಾಮೈದ ಸಂಜಯ್ ಸಿಂಗ್ ಮಸಾನಿ ಕಾಂಗ್ರೆಸ್ ಸೇರಿ ಭಾರೀ ಚರ್ಚೆಯಾಗಿದ್ದರು. ಅದರ ಬೆನ್ನಲ್ಲೆ ರಾಜಸ್ಥಾನದಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಳೆದುಕೊಂಡಿದೆ. ಇದನ್ನು ಓದಿ: ಮಧ್ಯಪ್ರದೇಶದ ಸಿಎಂ ಅಳಿಯ ಕಾಂಗ್ರೆಸ್ ಸೇರ್ಪಡೆ

    ರಾಜಸ್ಥಾನ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ನವೆಂಬರ್ 12ರಂದು ಪ್ರಾರಂಭವಾಗಿದ್ದು, 19 ಕೊನೆಯ ದಿನಾಂಕವಾಗಿದೆ. ಮತದಾನವು ಡಿಸೆಂಬರ್ 7ರಂದು ಮತದಾನ ನಡೆಯಲಿದೆ. ಈ ಮೂಲಕ ವರ್ಷಾಂತ್ಯಕ್ಕೂ ಮುನ್ನವೇ ರಾಜಸ್ಥಾನದಲ್ಲಿ ಹೊಸ ಸರ್ಕಾರ ರಚೆನೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews