Tag: hariyana

  • ನಾಳೆ ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ಮುರ್ಮು

    ನಾಳೆ ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ಮುರ್ಮು

    – ರಫೇಲ್ ಏರಿದ ಮೊದಲ ರಾಷ್ಟ್ರಪತಿ

    ಚಂಡೀಗಢ: ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ (Droupadi Murmu) ಮುರ್ಮು ಬುಧವಾರ (ಅ.29) ರಫೇಲ್ ಫೈಟರ್ ಜೆಟ್‌ನಲ್ಲಿ (Rafale Fighter Jet) ಹಾರಾಟ ನಡೆಸಲಿದ್ದಾರೆ.

    67 ವರ್ಷದ ದ್ರೌಪದಿ ಮುರ್ಮು ಬುಧವಾರ (ಅ.29) ಹರಿಯಾಣದ ಅಂಬಾಲಾ ಏರ್‌ಬೇಸ್‌ಗೆ (Ambala Airbase) ತೆರಳಿ ಅಲ್ಲಿ ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ. ಈ ಮೂಲಕ ಮೊದಲ ಬಾರಿಗೆ ರಫೇಲ್ ಏರಿದ ರಾಷ್ಟ್ರಪತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    ಈ ಮೊದಲು 2023ರ ಏಪ್ರಿಲ್ 8ರಂದು ಅಸ್ಸಾಂನ ತೇಜ್‌ಪುರ ಏರ್‌ಬೇಸ್‌ನಲ್ಲಿ ಸುಖೋಯ್ -30 ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು. ಇದಕ್ಕೂ ಮುನ್ನ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀಮತಿ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಅಬ್ದುಲ್ ಅವರು ಸುಖೋಯ್-30 ಫೈಟರ್ ಜೆಟ್‌ಗಳಲ್ಲಿ ಹಾರಾಟ ನಡೆಸಿದ್ದರು.

    `ಆಪರೇಷನ್ ಸಿಂಧೂರ’ದ (Operation Sindoor) ವೇಳೆ ಅಂಬಾಲಾ ಏರ್‌ಬೇಸ್‌ನಿಂದ ಟೇಕಾಫ್ ಆದ ನಮ್ಮ ಫೈಟರ್ ಜೆಟ್‌ಗಳು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದವು.ಇದನ್ನೂ ಓದಿ:ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

     

  • ಹರಿಯಾಣ | ಎರಡು ಕಾರುಗಳು ಮುಖಾಮುಖಿ ಡಿಕ್ಕಿ – ದಂಪತಿ ಸೇರಿ ಸ್ಥಳದಲ್ಲೇ ಪ್ರಾಣಬಿಟ್ಟ ಐವರು

    ಹರಿಯಾಣ | ಎರಡು ಕಾರುಗಳು ಮುಖಾಮುಖಿ ಡಿಕ್ಕಿ – ದಂಪತಿ ಸೇರಿ ಸ್ಥಳದಲ್ಲೇ ಪ್ರಾಣಬಿಟ್ಟ ಐವರು

    – ಐವರ ಸ್ಥಿತಿ ಗಂಭೀರ

    ಚಂಡೀಗಢ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ ಘಟನೆ ಹರಿಯಾಣದ (Hariyana) ಕುರುಕ್ಷೇತ್ರ-ಕೈತಾಲ್ ರಸ್ತೆಯಲ್ಲಿ ನಡೆದಿದೆ.

    ಮೃತರನ್ನು ಪ್ರವೀಣ್, ಪವನ್, ಅವರ ಪತ್ನಿ ಉರ್ಮಿಳಾ, ರಾಜೇಂದ್ರ ಹಾಗೂ ಸುಮನ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್‌ ರನ್‌ಗೆ ಬಿ.ಕಾಂ ಪದವೀಧರೆ ಬಲಿ

    ಸೋಮವಾರ (ಸೆ.29) ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಐವರು ಟಾಟಾ ಹ್ಯಾರಿಯರ್ ಕಾರಿನಲ್ಲಿ ಅಂಬಾಲಾ ಕಡೆಗೆ ಹೋಗುತ್ತಿದ್ದರು. ಇದೇ ಸಮಯಕ್ಕೆ ಯಮುನಾನಗರ HR 13F 3611 ನೋಂದಣಿ ಸಂಖ್ಯೆ ಹೊಂದಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಎದುರಿಗೆ ಬಂದಿದ್ದು, ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಎರಡು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ.

    ಕೂಡಲೇ ಸ್ಥಳೀಯರು ಕಾರಿನಲ್ಲಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅತೀ ವೇಗದಿಂದ ಕಾರು ಚಲಾಯಿಸಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್

  • ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನ ಗುಂಡಿಕ್ಕಿ ಕೊಂದ ತಂದೆ

    ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನ ಗುಂಡಿಕ್ಕಿ ಕೊಂದ ತಂದೆ

    – ಮಗಳ ಮೇಲೆ 5 ಸುತ್ತು ಗುಂಡು ಹಾರಿಸಿದ ಅಪ್ಪ

    ಚಂಡೀಗಡ: ಟೆನ್ನಿಸ್ ಅಕಾಡೆಮಿಯನ್ನ ಮುಚ್ಚಲು ನಿರಾಕರಿಸಿದ ಮಗಳನ್ನು ತಂದೆಯೇ ಗುಂಡಿಕ್ಕಿ ಕೊಂದಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ (Gurugram) ನಡೆದಿದೆ.

     ಹತ್ಯೆಯಾದ ಟೆನ್ನಿಸ್ ಆಟಗಾರ್ತಿಯನ್ನು (Tennis player) ರಾಧಿಕಾ ಯಾದವ್ (25) ಎಂದು ಗುರುತಿಸಲಾಗಿದೆ. ದೀಪಕ್ ಯಾದವ್ (47) ಆರೋಪಿ ತಂದೆ. ರೀಲ್ಸ್ ನೋಡುತ್ತಿದ್ದಕ್ಕೆ ಟೆನ್ನಿಸ್ ಆಟಗಾರ್ತಿಯನ್ನು ತಂದೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಊಹಿಸಲಾಗಿತ್ತು. ಪೊಲೀಸರ ತನಿಖೆ ವೇಳೆ ನಿಜಾಂಶ ಬಯಲಾಗಿದೆ. ಇದನ್ನೂ ಓದಿ: ಮಾಜಿ ಉಪಸಭಾಪತಿ, ಹಿರಿಯ ನ್ಯಾಯವಾದಿ ಡಾ.ಎನ್.ತಿಪ್ಪಣ್ಣ ನಿಧನ

    ಟೆನ್ನಿಸ್ ಆಟಗಾರ್ತಿಯಾಗಿದ್ದ ರಾಧಿಕಾ ಯಾದವ್ ಅವರಿಗೆ ಕೆಲ ದಿನಗಳ ಹಿಂದೆ ಪಂದ್ಯವೊಂದರಲ್ಲಿ ಭುಜದ ಭಾಗಕ್ಕೆ ಗಾಯವಾಗಿತ್ತು. ಇದರಿಂದಾಗಿ ಅವರು ಮಕ್ಕಳಿಗೆ ತರಬೇತಿ ನೀಡಲು ನೂತನ ಟೆನ್ನಿಸ್ ಅಕಾಡೆಮಿಯನ್ನು ಆರಂಭಿಸಿದ್ದರು. ಆದರೆ ಆಕೆಯ ತಂದೆ ದೀಪಕ್ ಯಾದವ್, ಅಕಾಡೆಮಿಯನ್ನು ಮುಚ್ಚಬೇಕೆಂದು ಮಗಳ ಬಳಿ ಹೇಳಿದ್ದರು. ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ – ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

    ದೀಪಕ್ ಯಾದವ್ ಬಳಿ ಜನರು ತಮ್ಮ ಮಗಳ ಗಳಿಕೆಯಿಂದ ಬದುಕುತ್ತಿದ್ದೀರಿ ಎಂದು ಹಿಯಾಳಿಸುತ್ತಿದ್ದರು. ಇದರಿಂದ ದೀಪಕ್ ಅವರು ಅಕಾಡೆಮಿಯನ್ನು ಮುಚ್ಚುವಂತೆ ಹೇಳಿದ್ದರು. ಆದರೆ ಮಗಳು ತಂದೆಯ ಈ ಮಾತಿಗೆ ನಿರಾಕರಿಸಿದ್ದಳು. ಹೀಗಾಗಿ ಜು. 10ರಂದು ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಮಗಳಿಗೆ ಹಿಂದಿನಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಇದನ್ನೂ ಓದಿ: ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಡೋದಾಗಿ ಮೌಲ್ವಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ – ಕೇಸ್‌ ದಾಖಲು

    ಗುಂಡಿನ ಸದ್ದು ಕೇಳುತ್ತಿದ್ದಂತೆ ಮೊದಲ ಮಹಡಿಗೆ ರಾಧಿಕಾ ಚಿಕ್ಕಪ್ಪ ಧಾವಿಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಧಿಕಾಳನ್ನು ತಕ್ಷಣ ಗುರುಗ್ರಾಮದಲ್ಲಿರುವ ಏಷ್ಯಾ ಮೊರಿಂಗೊ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಳು ಎಂದು ವೈದ್ಯರು ದೃಢಪಡಿಸಿದ್ದರು. ಇದನ್ನೂ ಓದಿ: ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ

    ಘಟನೆ ಕುರಿತು ಗುರುಗ್ರಾಮ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿ ತಂದೆ ದೀಪಕ್ ಯಾದವ್‌ನನ್ನು ಪೊಲೀಸರು ಬಂಧಿಸಿದ್ದಾರೆ.

  • ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ

    ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ

    ನವದೆಹಲಿ: ಹರಿಯಾಣ, ಮಹಾರಾಷ್ಟ್ರ ಚುನಾವಣೆಯಲ್ಲಿ ಸೋಲಿನ ಬಳಿಕ ಇಂಡಿಯಾ (INDIA) ಒಕ್ಕೂಟದಲ್ಲಿ ಬಿರುಕು ಮೂಡಿದೆ. ಇಂಡಿಯಾ ಒಕ್ಕೂಟದ ನಾಯಕತ್ವ ಬದಲಾಗಬೇಕು ಎಂದು ಸಮಾಜವಾದಿ ಪಕ್ಷ ಆಗ್ರಹಿಸಿದರೆ, ಕಾಂಗ್ರೆಸ್ (Congress) ಇದನ್ನು ವಿರೋಧಿಸಿದೆ. ಇತ್ತ ಒಕ್ಕೂಟದ ಶಿಲ್ಪಿ ನಾವು ಎಂದು ಆರ್‌ಜೆಡಿ (RJD) ಪ್ರತಿಪಾದಿಸಿದೆ.

    ಸಮಾಜವಾದಿ ಪಕ್ಷ ಮತ್ತು ಸಿಪಿಐ ಮೈತ್ರಿಕೂಟದಲ್ಲಿ ತಮ್ಮ ಪಾತ್ರ ಹೆಚ್ಚಿಸುವ ಹೇಳಿಕೆ ನೀಡಿದ ಬೆನ್ನಲ್ಲೇ ಈ ಹೇಳಿಕೆಗಳು ಬಂದಿವೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಉದಯವೀರ್ ಸಿಂಗ್, ಇಂಡಿಯಾ ಬಣವು ಬ್ಯಾನರ್ಜಿಯವರ ಸಲಹೆಯನ್ನು ಚರ್ಚಿಸಬೇಕು ಮತ್ತು ಟಿಎಂಸಿ ವರಿಷ್ಠರಿಗೆ 100% ಬೆಂಬಲ ಮತ್ತು ಸಹಕಾರ ವಿಸ್ತರಿಸಬೇಕು ಎಂದು ಹೇಳಿದ್ದರು.ಇದನ್ನೂ ಓದಿ: ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಮಿತ್ ಶಾ ವಿಫಲವಾಗಿದ್ದಾರೆ: ಕೇಜ್ರಿವಾಲ್ ಆರೋಪ

    ಮಮತಾ ಬ್ಯಾನರ್ಜಿ ಅವರಿಗೆ ಒಕ್ಕೂಟ ಮುನ್ನಡೆಸುವ ಆಸೆ ವ್ಯಕ್ತಪಡಿಸಿದ್ದರೆ, ಮೈತ್ರಿಕೂಟದ ನಾಯಕರು ಅದನ್ನು ಪರಿಗಣಿಸಿ ಅವರಿಗೆ ಬೆಂಬಲ ನೀಡಬೇಕು. ಇದು ಮೈತ್ರಿಯನ್ನು ಬಲಪಡಿಸುತ್ತದೆ. ಬಂಗಾಳದಲ್ಲಿ ಬಿಜೆಪಿಯನ್ನು ನಿಲ್ಲಿಸುವಲ್ಲಿ ಮಮತಾ ಬ್ಯಾನರ್ಜಿ ಮುಂದಾಳತ್ವ ವಹಿಸಿದರು. ಅವರ ಬಗ್ಗೆ ನಮಗೆ ಗೌರವ ಇದೆ ಎಂದು ಉದಯವೀರ್ ಸಿಂಗ್ ಹೇಳಿದ್ದಾರೆ.

    ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಗಳಲ್ಲಿ ತನ್ನ ಮಿತ್ರಪಕ್ಷಗಳಿಗೆ ಅವಕಾಶ ನೀಡದ ಕಾಂಗ್ರೆಸ್‌ನ ವಿರುದ್ಧ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅಸಮಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಯಲ್ಲಿ ಮೈತ್ರಿಕೂಟದ ಪಾಲುದಾರರಿಗೆ ಅವಕಾಶ ನೀಡಲಿಲ್ಲ. ಕಾಂಗ್ರೆಸ್ ಇಂಡಿಯಾ ಬ್ಲಾಕ್ ಪಾಲುದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು ಎಂದು ಹೇಳಿದರು.

    ಲಾಲು ಪ್ರಸಾದ್ ಯಾದವ್ ಅವರ ಉಪಕ್ರಮದ ಮೇರೆಗೆ ಪ್ರತಿಪಕ್ಷಗಳ ಮೈತ್ರಿಕೂಟದ ಮೊದಲ ಸಭೆ ಪಾಟ್ನಾದಲ್ಲಿ ನಡೆಯಿತು ಎಂದು ಆರ್‌ಜೆಡಿಯ ಮೃತ್ಯುಂಜಯ ತಿವಾರಿ ಪ್ರತಿಪಾದಿಸಿದರು. ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮೈತ್ರಿಯ ನಿಜವಾದ ಶಿಲ್ಪಿ ಲಾಲು ಪ್ರಸಾದ್ ಯಾದವ್. ಎಲ್ಲರೂ ತಮ್ಮ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ತೊಡಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಪ್ರಬಲವಾಗಿ ಹೋರಾಡುತ್ತಿದ್ದಾರೆ. 2025ರಲ್ಲಿ ಬಿಹಾರದ ಸರದಿ ಎಂದರು.

    ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೂ ಇಂಡಿಯಾ ಒಕ್ಕೂಟದಲ್ಲಿನ ಬಿರುಕು ಗೋಚರಿಸಿತು. ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಿಂದ ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳು ದೂರವಿದ್ದವು. ಹೀಗಾಗೀ ಒಕ್ಕೂಟದಲ್ಲಿ ನಾಯಕತ್ವಕ್ಕಾಗಿ ಹೋರಾಟ ಶುರುವಾಗಿದೆ.ಇದನ್ನೂ ಓದಿ: Namma Metro | ಒಂದೇ ದಿನ ದಾಖಲೆಯ 9.20 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚಾರ

  • ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

    ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

    ನವದೆಹಲಿ: ದೆಹಲಿ ( Delhi) ಮತ್ತು ಎನ್‌ಸಿಆರ್ ಭಾಗದಲ್ಲಿ ಉದ್ಭವಿಸುವ ವಾಯು ಮಾಲಿನ್ಯ (Air Pollution ಸಮಸ್ಯೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ (Hariyana) ಮತ್ತು ಪಂಜಾಬ್ (Punjab) ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಮುಂದಿನ ವಿಚಾರಣೆಗೆ ಎರಡು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಖುದ್ದು ಹಾಜರಾಗಿ ಕೋರ್ಟ್ ಆದೇಶ ಪಾಲನೆ ಮಾಡದಿರಲು ಕಾರಣಗಳೇನು ಎಂದು ವಿವರಿಸುವಂತೆ ತಾಕೀತು ಮಾಡಿದೆ.

    ಎರಡೂ ರಾಜ್ಯಗಳಲ್ಲಿ ಹುಲ್ಲು ಸುಡುವ ಪ್ರಕರಣಗಳಲ್ಲಿ ಗಣನೀಯ ಹೆಚ್ಚಳ ಕಂಡು ಬಂದಿದೆ. ಇದರ ವಿರುದ್ಧ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಹರಿಯಾಣ ಸರ್ಕಾರ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಸುಳ್ಳು ಮಾಹಿತಿಗಳಿವೆ. ಹುಲ್ಲು ಸುಡುವ ಪ್ರಕರಣ ವರದಿಯಾಗಿಲ್ಲ ಎಂದು ಸರ್ಕಾರ ಹೇಳುತ್ತದೆ. ಆದರೆ ಸ್ಯಾಟಲೈಟ್ ಚಿತ್ರಗಳಲ್ಲಿ ಬೆಂಕಿ ಹೊತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನಿಮಗೆ ನಾಚಿಕೆಯೇ ಎಂದು ಕೋರ್ಟ್ ಪ್ರಶ್ನಿಸಿತು. ಇದನ್ನೂ ಓದಿ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

    ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸದ್ಯ ದಾಖಲಾಗಿರುವ ದೂರುಗಳ ವಿರುದ್ಧ ಒಂದು ವಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ, ಕೋರ್ಟ್ ಆದೇಶ ಪಾಲನೆ ಮಾಡದಿದ್ದರೆ ಅವರ ವಿರುದ್ಧ ನ್ಯಾಯಂಗ ನಿಂದನೆ ದಾಖಲು ಮಾಡಬೇಕಾಗುತ್ತದೆ. ವಾಯು ಮಾಲಿನ್ಯ ರಾಜಕೀಯ ವಿಷಯವಲ್ಲ, ಇಂತಹ ವಿಚಾರದಲ್ಲಿ ಅಧಿಕಾರಿಗಳಿಗೆ ಒತ್ತಡ ಹೇರುವವರಿಗೂ ನಾವು ಸಮನ್ಸ್ ಮಾಡಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿತು.  ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

    ಪಂಜಾಬ್ ಸರ್ಕಾರವು ಮಾಲಿನ್ಯ ನಿಯಂತ್ರಣಕ್ಕೆ ಸಮರ್ಪಕ ಕೆಲಸ ಮಾಡಿಲ್ಲ. ಹೀಗಾಗಿ ಮುಂದಿನ ವಿಚಾರಣೆ ವೇಳೆ ಹರಿಯಾಣ ಮತ್ತು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಖುದ್ದು ಹಾಜರಾಗಬೇಕು. ಮಾಲಿನ್ಯ ನಿಯಂತ್ರಣಕ್ಕೆ ಕ್ರಮ ವಹಿಸದ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ವಹಿಸಿಲ್ಲ ಎಂಬುದನ್ನು ವಿವರಿಸಬೇಕು ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ

    ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ವಾಯು ಗುಣಮಟ್ಟ ನಿರ್ವಹಣಾ ಆಯೋಗವು ವಿಶೇಷವಾಗಿ ಹುಲ್ಲು ಸುಡುವಿಕೆಗೆ ಸಂಬಂಧಿಸಿದಂತೆ ಹೊರಡಿಸಿದ ಆದೇಶಗಳನ್ನು ಪಾಲಿಸದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ – ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

  • ಏಕಾಂಗಿಯಾಗಿ ಸ್ಪರ್ಧಿಸಿದ್ದರಿಂದ ಕಾಂಗ್ರೆಸ್‌ಗೆ ಸೋಲು – ಮೈತ್ರಿ ಪಕ್ಷವನ್ನೇ ಟೀಕಿಸಿದ ಶಿವಸೇನೆ

    ಏಕಾಂಗಿಯಾಗಿ ಸ್ಪರ್ಧಿಸಿದ್ದರಿಂದ ಕಾಂಗ್ರೆಸ್‌ಗೆ ಸೋಲು – ಮೈತ್ರಿ ಪಕ್ಷವನ್ನೇ ಟೀಕಿಸಿದ ಶಿವಸೇನೆ

    ಮುಂಬೈ: ಹರಿಯಾಣದಲ್ಲಿ (Hariyana Election) ಸೋತ ಕಾಂಗ್ರೆಸ್‌ಗೆ (Congress) ಈಗ ಮಹಾರಾಷ್ಟ್ರದಲ್ಲಿ ಕಂಪನ ಆರಂಭವಾಗಿದೆ.  ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಕಾಂಗ್ರೆಸ್‌ ನಿರ್ಧಾರವನ್ನು ಮೈತ್ರಿ ಪಕ್ಷ ಶಿವಸೇನೆ (ಯುಬಿಟಿ) ಟೀಕಿಸಿದೆ.

    Shiv Sena (UBT) ಸಂಸದ ಸಂಜಯ್ ರಾವುತ್, ಕಾಂಗ್ರೆಸ್ ದೇಶಾದ್ಯಂತ ಏಕಾಂಗಿಯಾಗಿ ಹೋಗಲು ಬಯಸಿದರೆ ಉಳಿದವರು ಅವರ ರಾಜ್ಯಗಳಲ್ಲಿ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳಲು ಸ್ವತಂತ್ರರು ಎಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

    ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಮಿತ್ರಪಕ್ಷಗಳ ಬಗೆಗಿನ ಕಾಂಗ್ರೆಸ್‌ ಧೋರಣೆಯೇ ಕಾರಣ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ (Saamana) ಬುಧವಾರ ಸಂಪಾದಕೀಯ ಬರೆದಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ (Maharashtra) ಸೀಟು ಹಂಚಿಕೆಯ ಬಗ್ಗೆ ಶಿವಸೇನೆ ಮತ್ತು ಕಾಂಗ್ರೆಸ್ ಮಧ್ಯೆ ನಡೆಯುತ್ತಿರುವ ಮಾತುಕತೆ ಸಮಯದಲ್ಲೇ ಈ ಸಂಪಾದಕೀಯ ಬಂದಿರುವುದು ವಿಶೇಷ. ಇದನ್ನೂ ಓದಿ: ಭೂಪಿಂದರ್‌ ಹೂಡಾಗೆ ಮಣೆ ಹಾಕಿ ಕೈ ಸುಟ್ಟುಕೊಂಡ ಕಾಂಗ್ರೆಸ್!‌

    ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸ್ಪರ್ಧಿಸಿದ್ದರಿಂದ INDIA ಗೆದ್ದಿದೆ. ಆದರೆ ಹರಿಯಾಣದಲ್ಲಿ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಹೋಗಿದ್ದರಿಂದ ಸೋತಿದೆ. ಜನರು ಬಿಜೆಪಿಯಿಂದ ಅಸಮಾಧಾನಗೊಂಡಿದ್ದರು ಸುಲಭವಾಗಿ ಗೆಲ್ಲಬಹುದಾಗಿದ್ದ ರಾಜ್ಯವನ್ನು ಕಳೆದುಕೊಳ್ಳುವ ಕಲೆ ಕಾಂಗ್ರೆಸ್‌ಗೆ ಇದೆ ಎಂದು ವ್ಯಂಗ್ಯವಾಡಿದೆ.

    ಹರಿಯಾಣದಂತೆ, ಕಾಂಗ್ರೆಸ್ ದೇಶಾದ್ಯಂತ ಏಕಾಂಗಿಯಾಗಿ ಹೋಗಲು ಬಯಸಿದರೆ ಪಕ್ಷವು ಅದನ್ನು ಘೋಷಿಸಬೇಕು. ಇದರಿಂದ ಮೈತ್ರಿಯಲ್ಲಿರುವ ಪ್ರತಿಯೊಬ್ಬರೂ ಆಯಾ ರಾಜ್ಯಗಳಲ್ಲಿ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳಲು ಮುಕ್ತರಾಗುತ್ತಾರೆ ಎಂದು ಅವರು ಹೇಳಿದರು. ಇದನ್ನೂ ಓದಿ: ಆಯುಧ ಪೂಜೆಗೂ ದುಡ್ಡಿಲ್ಲದೆ ದಿವಾಳಿ ಆಯ್ತಾ KSRTC – ಒಂದು ಬಸ್ಸಿಗೆ ತಲಾ 100 ರೂ. ಖರ್ಚು ಮಾಡುವಂತೆ ಸೂಚನೆ

    ಮಹಾರಾಷ್ಟ್ರದಲ್ಲಿ ಈ ವರ್ಷದ ಅಂತ್ಯದಲ್ಲೇ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌, ಎನ್‌ಸಿಪಿ, ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ ಫಲ ನೀಡಿತ್ತು. ಒಟ್ಟು 47 ಸ್ಥಾನಗಳ ಪೈಕಿ INDIA ಒಕ್ಕೂಟ 30 ಸ್ಥಾನಗಳನ್ನು ಗೆದ್ದರೆ ಎನ್‌ಡಿಎ 17 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿತ್ತು.

     

  • ಮೋದಿ ಹಳ್ಳಿ-ಹಳ್ಳಿಗೆ ಹೋಗಿ ಕರ್ನಾಟಕದ ವಿಚಾರ ಪ್ರಚಾರ ಮಾಡ್ತಾರೆ, ಅದ್ಕೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತೆ: ಕೋಳಿವಾಡ

    ಮೋದಿ ಹಳ್ಳಿ-ಹಳ್ಳಿಗೆ ಹೋಗಿ ಕರ್ನಾಟಕದ ವಿಚಾರ ಪ್ರಚಾರ ಮಾಡ್ತಾರೆ, ಅದ್ಕೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತೆ: ಕೋಳಿವಾಡ

    – ಸಿಎಂ ವಿಚಾರದ ಹೇಳಿಕೆಗೆ ಈಗಲು ಬದ್ಧ

    ಬೆಂಗಳೂರು: ಪ್ರಧಾನಿ ಮೋದಿ (PM Modi) ಹಳ್ಳಿ-ಹಳ್ಳಿಗೆ ಹೋಗಿ ಕರ್ನಾಟಕದ (Karnataka) ವಿಚಾರ ಪ್ರಚಾರ ಮಾಡ್ತಾರೆ, ಅದಕ್ಕೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ (KB Koliwada) ಕಿಡಿಕಾರಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಅವರು, ನಾನು ಅವತ್ತೇ ಹೇಳಿದ್ದೆ. ಮೋದಿ ಹರಿಯಾಣದಲ್ಲಿ (Hariyana) ಹಳ್ಳಿ ಹಳ್ಳಿಗೆ ಹೋಗಿ ಕರ್ನಾಟಕದ ವಿಚಾರ ಪ್ರಚಾರ ಮಾಡ್ತಾರೆ. ಆದ್ದರಿಂದ ಹಿನ್ನಡೆ ಆಗುತ್ತದೆ ಎಂದು ಹೇಳಿದ್ದೆ, ಈಗ ಅದು ಎಫೆಕ್ಟ್ ಆಗಿದೆ. ಹರಿಯಾಣದಲ್ಲಿ ಹಿನ್ನಡೆ ಆಗುತ್ತಿದೆ. ಪಾರ್ಟಿಗೆ ಮುಜುಗರ ಆಗಿದೆ ಎಂದು ಬೇಸರ ಹೊರಹಾಕಿದರು.ಇದನ್ನೂ ಓದಿ: Haryana Election Results | ಆಪ್‌ನಿಂದ ಬಿಜೆಪಿ ಮುನ್ನಡೆ?

    ಸಿಎಂ ವಿಚಾರದಲ್ಲಿ ನಾನು ಅಂದು ಹೇಳಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಪಕ್ಷಕ್ಕೆ ಧಕ್ಕೆಯಾದರೆ ನೋಟಿಸ್ ಕೊಡುತ್ತಾರೆ. ಪಕ್ಷದ ದೃಷ್ಟಿಯಿಂದ ಹೇಳಿದ್ದೇನೆ. ಇವತ್ತು ಹರಿಯಾಣ ಚುನಾವಣೆಯಲ್ಲಿ ಎಫೆಕ್ಟ್ ಆಗಿದೆ. ಪ್ರಚಾರದಲ್ಲಿ ಮೋದಿ ಕರ್ನಾಟಕದ ಬಗ್ಗೆ ಮಾತನಾಡಿದ್ದರು. ಪದೇ ಪದೇ ಮಾತನಾಡಿರುವುದು ಎಫೆಕ್ಟ್ ಆಗಿದೆ. ಇನ್ನೂ ಪೂರ್ಣ ಪ್ರಮಾಣದ ಫಲಿತಾಂಶ ಬಂದಿಲ್ಲ ಆದರೆ ಎಫೆಕ್ಟ್ ಆಗಿದೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದರು.

    ಜಾತಿ ಜನಗಣತಿ ವಿಚಾರ:
    ಜಾತಿ ಜನಗಣತಿ (Caste Census) ಮಾಡುವಾಗ ನಾನೇ ವೈಯಕ್ತಿಕವಾಗಿ ಹಲವು ಕಡೆ ಹೋಗಿದ್ದೇನೆ. ಪ್ರತಿಯೊಂದು ಮನೆಗೆ ಭೇಟಿ ನೀಡಿದ್ದೇನೆ. ನಾನು ಪ್ರತಿ ಊರು ಪ್ರತಿ ಹಳ್ಳಿ ಅಡ್ಡಾಡಿದ್ದೇನೆ. ಜಾತಿ ಜನಗಣತಿ ಸರಿಯಾಗಿ ಆಗಿದೆ. ಶಾಮನೂರು ಶಿವಶಂಕರಪ್ಪ ಅಡ್ಡಾಡಿದ್ದಾರಾ? ಮನೆಯಲ್ಲಿ ಕುಳಿತು ಮಾತನಾಡಿದ್ರೆ ಆಗಲ್ಲ. ಆದಷ್ಟು ಬೇಗ ಜಾರಿ ಮಾಡಬೇಕು ಎಂದರು.ಇದನ್ನೂ ಓದಿ: ಹರಿಯಾಣದಲ್ಲಿ ನಮ್ದೇ ಸರ್ಕಾರ, 50 ಸೀಟ್‌ ಪಕ್ಕಾ ಅಂತ ಆಂತರಿಕ ಸಮೀಕ್ಷೆ ಹೇಳಿದೆ: ಪರಮೇಶ್ವರ್‌

    ಜಾತಿ ಉಪಜಾತಿಯನ್ನೂ ಕೂಡ ದಾಖಲು ಮಾಡಿಕೊಂಡಿದ್ದಾರೆ. ಬಹಳ ಉತ್ತಮವಾಗಿ ಜನಗಣತಿ ಮಾಡಿದ್ದಾರೆ ಅದನ್ನು ಆದಷ್ಟು ಬೇಗ ಜಾರಿ ಮಾಡಬೇಕು. ಜಾರಿ ಮಾಡುವುದು ಇನ್ನೂ ಮುಂದೂಡುವ ಅವಶ್ಯಕತೆ ಇಲ್ಲ. ಒಂದು ತಿಂಗಳು ಟೈಂ ಕೊಟ್ಟು ಏನಾದರೂ ಬದಲಾವಣೆ ಇದ್ದರೆ ಮಾಡಲಿ. ಸಬ್ ಕಮಿಟಿ ಮಾಡಿ ಇನ್ನೂ ಮುಂದೂಡುವ ಅವಶ್ಯಕತೆ ಇಲ್ಲ. ಕಾಂತರಾಜು ವರದಿ ಕೇವಲ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಜನಗಣತಿ ಮಾತ್ರವಲ್ಲ. ಅದು ಜಾತಿ ಜನಗಣತಿ ಕೂಡ ಹೌದು. ವೈಜ್ಞಾನಿಕ ಅವೈಜ್ಞಾನಿಕ ಎಂದರೆ ಏನೂ ಅಂತ ಅರ್ಥ ಆಗುತ್ತಿಲ್ಲ. ಇದರಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದು ನನಗೆ ಅನಿಸುವುದಿಲ್ಲ ಎಂದು ತಿಳಿಸಿದರು.

  • ದೆಹಲಿಗೆ ಹೆಚ್ಚುವರಿ ನೀರು ಬಿಡುವಂತೆ ಹರಿಯಾಣ, ಹಿಮಾಚಲಪ್ರದೇಶಕ್ಕೆ ಸುಪ್ರೀಂ ಸೂಚನೆ

    ದೆಹಲಿಗೆ ಹೆಚ್ಚುವರಿ ನೀರು ಬಿಡುವಂತೆ ಹರಿಯಾಣ, ಹಿಮಾಚಲಪ್ರದೇಶಕ್ಕೆ ಸುಪ್ರೀಂ ಸೂಚನೆ

    ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಎದರಾಗಿರುವ ಹಿನ್ನೆಲೆಯಲ್ಲಿ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಎಂದು ಸುಪ್ರೀಂಕೋರ್ಟ್‌ (Supreme Court) ಹರಿಯಾಣ ಹಾಗೂ ಹಿಮಾಚಲ ಪ್ರದೇಶಕ್ಕೆ ನಿರ್ದೇಶನ ನೀಡಿದೆ.

    ದೆಹಲಿಯಲ್ಲಿ ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟಿನ ಕುರಿತು ದೆಹಲಿ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವನಾಥನ್ ಮತ್ತು ನ್ಯಾಯಮೂರ್ತಿ ಪ್ರಶಾಂತ್ ಮಿಶ್ರಾ ಅವರ ಪೀಠ, ಹಿಮಾಚಲ ಪ್ರದೇಶಕ್ಕೆ 137 ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ.

    ಹಿಮಾಚಲ ಪ್ರದೇಶದಿಂದ (Himachal Pradesh) ಬಿಡುಗಡೆಯಾದ ಹೆಚ್ಚುವರಿ ನೀರನ್ನು ರಾಷ್ಟ್ರ ರಾಜಧಾನಿಗೆ ತಲುಪುವಂತೆ ನೋಡಿಕೊಳ್ಳುವಂತೆ ಪೀಠವು ಹರಿಯಾಣ ಸರ್ಕಾರಕ್ಕೆ ನಿರ್ದೇಶಿಸಿದೆ. ಅಲ್ಲದೆ ದೆಹಲಿ ಸರ್ಕಾರವು ನೀರನ್ನು ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬಾರದು ಎಂದು ಸೂಚಿಸಿದೆ. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತೆ ಎಂದಿದ್ದ ಚಲುವರಾಯಸ್ವಾಮಿ ವೀಡಿಯೋ ವೈರಲ್

    ಜೂನ್ 7 ರಂದು ಹರಿಯಾಣಕ್ಕೆ (Haryana) ಪೂರ್ವ ಸೂಚನೆಯೊಂದಿಗೆ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಹಿಮಾಚಲ ಪ್ರದೇಶವು ಬಿಡುಗಡೆ ಮಾಡಬೇಕು ಎಂದು ಪೀಠ ಹೇಳಿದೆ. ಅಲ್ಲದೇ ನೀರಿನ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಬಳಿಕ ಜೂನ್ 10ಕ್ಕೆ ವಿಚಾರಣೆಯನ್ನು ಮುಂದೂಡಿತು.

  • ಬಿಸಿಲಿನ ತಾಪಕ್ಕೆ ನಲುಗಿದ ಉತ್ತರದ ರಾಜ್ಯಗಳು- ರಾಜಸ್ಥಾನದಲ್ಲಿ 7 ಮಂದಿ ಸಾವು

    ಬಿಸಿಲಿನ ತಾಪಕ್ಕೆ ನಲುಗಿದ ಉತ್ತರದ ರಾಜ್ಯಗಳು- ರಾಜಸ್ಥಾನದಲ್ಲಿ 7 ಮಂದಿ ಸಾವು

    ನವದೆಹಲಿ: ಉತ್ತರದ ರಾಜ್ಯಗಳು ಬಿಸಿಲಿನ ತಾಪಕ್ಕೆ ಅಕ್ಷರಶಃ ತತ್ತರಿಸಿಹೋಗಿವೆ. ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ 50.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

    ಹರಿಯಾಣದ (Haryana) ಸಿರ್ಸಾದಲ್ಲಿ 50.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜಸ್ಥಾನದಲ್ಲಿ ನಿರಂತರ ಹೀಟ್ ವೇವ್‍ನಿಂದಾಗಿ 7 ದಿನಗಳಲ್ಲಿ 7 ಜೀವಗಳು ಬಲಿಯಾಗಿವೆ. ಬೇಸಿಗೆಯ ಆರಂಭದಲ್ಲಿ `ನವತಾಪ’ ಎಂಬ 9 ದಿನಗಳು ಪ್ರಾರಂಭವಾಗುತ್ತವೆ. ಈ ದಿನಗಳಲ್ಲಿ ಅಧಿಕ ತಾಪಮಾನದಿಂದಾಗಿ 55 ಮಂದಿ ಸಾವನ್ನಪ್ಪಿರುವ ವರದಿಯಾಗಿದ್ದು, ಇಡೀ ಬೇಸಿಗೆ ಅವಧಿಯಲ್ಲಿ 122 ಮಂದಿ ಸಾವನ್ನಪ್ಪಿರುವುದಾಗಿ ಹೇಳಲಾಗ್ತಿದೆ.

    ರಾಜಸ್ಥಾನದ 20 ಜಿಲ್ಲೆಗಳಲ್ಲಿ ಶಾಖದ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಪಂಜಾಬ್, ಹರಿಯಾಣ ಮತ್ತು ದೆಹಲಿಗೆ ಸಂಪರ್ಕವಿರುವ ಪ್ರದೇಶಗಳು ಶಾಖದ ಅಲೆಯ ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿವೆ. ದೆಹಲಿಯಲ್ಲಿ ದಾಖಲೆಯ 52.3 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ನಗರದ ವಿದ್ಯುತ್ ಬೇಡಿಕೆಯು ಬುಧವಾರದಂದು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 8,302 ಮೆಗಾವ್ಯಾಟ್‍ಗೆ ತಲುಪಿದೆ.

    ಒಂದೇ ದಿನ ಅಗ್ನಿಶಾಮಕ ದಳಕ್ಕೆ 220 ಫೋನ್ ಕರೆಗಳು ಬಂದಿವೆ ಎನ್ನಲಾಗಿದೆ. ಮತ್ತೊಂದ್ಕಡೆ, ದೆಹಲಿಯಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದ್ದು, ವಾಟರ್ ಟ್ಯಾಂಕರ್ ಗಳಿಗೆ ಜನ ಮುಗಿಬೀಳ್ತಿದ್ದಾರೆ. ಇದನ್ನೂ ಓದಿ: ಕೇರಳ, ಈಶಾನ್ಯ ರಾಜ್ಯಗಳಿಗೆ 2 ದಿನ ಮೊದಲೇ ಮುಂಗಾರು ಪ್ರವೇಶ

  • ಹರಿಯಾಣದಲ್ಲಿ ನೂತನ ಸಚಿವರಾಗಿ 8 ಮಂದಿ ಪ್ರಮಾಣ ವಚನ ಸ್ವೀಕಾರ

    ಹರಿಯಾಣದಲ್ಲಿ ನೂತನ ಸಚಿವರಾಗಿ 8 ಮಂದಿ ಪ್ರಮಾಣ ವಚನ ಸ್ವೀಕಾರ

    ಚಂಡೀಗಢ: ಇಂದು ಹರಿಯಾಣದಲ್ಲಿ ನಯಾಬ್ ಸಿಂಗ್ (Nayab Singh) ಅವರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಒಟ್ಟು 8 ಹೊಸ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸದ್ಯ ನಯಾಬ್‌ ಅವರ ಸಂಪುಟದಲ್ಲಿ ಒಟ್ಟು 13 ಮಂದಿ ಸಚಿವರಿದ್ದಾರೆ.

    ಇತ್ತೀಚೆಗಷ್ಟೇ ಹರಿಯಾಣದಲ್ಲಿ ಮನೋಹರ್ ಲಾಲ್ ಖಟ್ಟರ್ (Manohar Lal Khattar) ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿಯು ನಯಾಬ್ ಸಿಂಗ್ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಹುಮತ ಸಾಬೀತುಪಡಿಸಿದ ನಂತರ ನಯಾಬ್ ಸಿಂಗ್ ಹರಿಯಾಣದ ಹೊಸ ಮುಖ್ಯಮಂತ್ರಿಯಾದರು.

    ನಯಾಬ್ ಸಿಂಗ್ ಸಿಎಂ ಆದ ಬಳಿಕ ಇಂದು ರಾಜಭವನದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ.‌ ಒಟ್ಟು 8 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಳೆದ ಬಾರಿ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿತ್ತು. ಈ ಮೂಲಕ ಈಗ ಉಪ ಸಚಿವ ಸಂಪುಟದಲ್ಲಿ ಒಟ್ಟು 13 ಮಂದಿ ಸಚಿವ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಸಿಎಎಗೆ ತಡೆ ಇಲ್ಲ: ಅರ್ಜಿಗಳಿಗೆ 3 ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

    ಪ್ರಮಾಣ ವಚನ ಸ್ವೀಕರಿಸಿದವರು ಯಾರು?: ಕಮಲ್ ಗುಪ್ತಾ, ಸೀಮಾ ತ್ರಿಖಾ, ಮಹಿಪಾಲ್ ಧಂಡಾ, ಅಸೀಮ್ ಗೋಯಲ್, ಅಭಯ್ ಸಿಂಗ್ ಯಾದವ್, ಸುಭಾಷ್ ಸುಧಾ ಹಾಗೂ ವಿಶಂಭರ್ ಸಿಂಗ್ ವಾಲ್ಮೀಕಿ ಹಾಗೂ ಸಂಜಯ್ ಸಿಂಗ್ ನೂತನ ಸಚವರುಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.