Tag: Harpanahalli

  • ನಾನು ಕಾಂಗ್ರೆಸ್ ಸದಸ್ಯೆಯಲ್ಲ – ಉಲ್ಟಾ ಹೊಡೆದ ಶಾಸಕಿ

    ನಾನು ಕಾಂಗ್ರೆಸ್ ಸದಸ್ಯೆಯಲ್ಲ – ಉಲ್ಟಾ ಹೊಡೆದ ಶಾಸಕಿ

    ದಾವಣಗೆರೆ: ನಾನು ಕಾಂಗ್ರೆಸ್ (Congress) ಸದಸ್ಯೆಯಲ್ಲ, ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಎಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ (Harpanahalli) ಶಾಸಕಿ ಎಂಪಿ ಲತಾ ಮಲ್ಲಿಕಾರ್ಜುನ (MP Latha Mallikarjun) ಅಚ್ಚರಿಯ ಹೇಳಿಕೆ ನೀಡಿದ್ದಾರೆ.

    ಪಕ್ಷೇತರ ಶಾಸಕಿ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದೀಗ ಅವರು ನಾನು ಕಾಂಗ್ರೆಸ್ ಸದಸ್ಯೆ ಅಲ್ಲ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ ಮೇಲೆ ಇಡಿ ದಾಳಿ

    ಹರಪನಹಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ ಸಮ್ಮುಖದಲ್ಲಿ ಶಾಸಕಿ ಲತಾ ಮಲ್ಲಿಕಾರ್ಜುನ ಈ ಹೇಳಿಕೆ ನೀಡಿದ್ದಾರೆ. ಇದೀಗ ಅಚ್ಚರಿಯ ಹೇಳಿಕೆ ನೀಡಿರುವ ಶಾಸಕಿ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿಂತ ಮಳೆ – ಕೆಆರ್‌ಎಸ್ ಒಳಹರಿವಿನಲ್ಲಿ ಕುಸಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀರಿನ ಟ್ಯಾಂಕ್‍ಗೆ ವಿಷ ಮಾತ್ರೆಯ ಬಾಟೆಲ್ ಹಾಕಿದ ಕಿರಾತಕರು

    ನೀರಿನ ಟ್ಯಾಂಕ್‍ಗೆ ವಿಷ ಮಾತ್ರೆಯ ಬಾಟೆಲ್ ಹಾಕಿದ ಕಿರಾತಕರು

    ವಿಜಯನಗರ: ಕುಡಿಯುವ ನೀರಿನ ಟ್ಯಾಂಕ್ ವಿಷದ ಮಾತ್ರೆಗಳು ತುಂಬಿದ ಬಾಟೆಲ್ ಹಾಕಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

    ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಮಾತ್ರೆಗಳುಳ್ಳ ಬಾಟೆಲ್ ಇದಾಗಿದೆ. ಇಂದು ಬೆಳಗ್ಗೆ ನೀರು ಸರಬರಾಜು ಮಾಡುವ ಸಿಬ್ಬಂದಿ ಟ್ಯಾಂಕ್ ಮೇಲೇರಿ ಪರಿಶೀಲಿಸಿದಾಗ ನೀರಿನಲ್ಲಿ ವಿಷದ ಬಾಟೆಲ್ ಬಿದ್ದಿರೋದು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ನೀರಿನಲ್ಲಿದ್ದ ವಿಷದ ಬಾಟೆಲ್ ಮೇಲೆಕ್ಕೆತ್ತಲಾಗಿದ್ದು, ಟ್ಯಾಂಕ್ ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದೆ.

    ಸದ್ಯ ಗ್ರಾಮಕ್ಕೆ ಡಿವೈಎಸ್‍ಪಿ ಹಾಲಮೂರ್ತಿರಾವ್ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕತ್ತಿದ್ದಾರೆ. ಇನ್ನು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಶಾಸಕ ಕರುಣಾಕರ್ ರೆಡ್ಡಿ ಸೂಚನೆ ನೀಡಿದ್ದಾರೆ.