Tag: Harsh Sanghavi

  • ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    – ನೂತನ ಡಿಸಿಎಂ ಆಗಿ ಹರ್ಷ ಸಾಂಘ್ವಿ ಪ್ರಮಾಣ ಸ್ವೀಕಾರ

    ಗಾಂಧಿನಗರ: ಗುಜರಾತ್‌ನಲ್ಲಿಂದು (Gujarat) ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ (Harsh Sanghavi) ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ (Rivaba Jadeja) ಸೇರಿ 26 ಸಚಿವರೂ ಪ್ರಮಾಣ ಸ್ವೀಕಾರ ಮಾಡಿದರು.

    ಭೂಪೇಂದ್ರ ಪಟೇಲ್‌ (Bhupendra Patel) ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಜಾತಿ ಮತ್ತು ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಕೆಲವರಿಗೆ, ವಿಪಕ್ಷಗಳಿಂದ ಬಿಜೆಪಿ ಸೇರ್ಪಡೆಯಾದ ಕೆಲ ನಾಯಕರನ್ನ ಗುರುತಿಸಿ ಸಚಿವ ಸ್ಥಾನ ನೀಡಿರುವುದು ಹಿರಿಯ ನಾಯಕರ ಮೆಚ್ಚುಗೆಗೂ ಪಾತ್ರವಾಗಿದೆ.

    2027ರ ವಿಧಾನಸಭಾ ಚುನಾವಣೆಯನ್ನ ಗುರಿಯಾಗಿಟ್ಟು ಸಮುದಾಯದ ನಾಯಕರು, ಕಾರ್ಯಕರ್ತರ ಮೇಲೆ ಹಿಡಿತ ಸಾಧಿಸುವ ನಾಯಕರನ್ನ ಸಂಪುಟಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಪಾಟಿದಾರ್ ಸಮುದಾಯದ ಆರು ಮಂದಿ, ಪರಿಶಿಷ್ಟ ಜಾತಿಯಿಂದ ಮೂವರು, ಆದಿವಾಸಿ ಸಮುದಾಯದ ನಾಲ್ವರು, ಕ್ಷತ್ರಿಯ ಸಮುದಾಯದ ಇಬ್ಬರು, ಒಬಿಸಿ ಸಮುದಾಯದ ಎಂಟು ಮಂದಿ ಹಾಗೂ ಬ್ರಾಹ್ಮಣ ಮತ್ತು ಜೈನ ಸಮುದಾಯ ತಲಾ ಒಬ್ಬೊಬ್ಬರಿಗೆ ಸಚಿವ ಸ್ಥಾನ ನೀಡಲಾಯಿತು.

    ಸಮುದಾಯವಾರು ನಾಯಕರ ಪಟ್ಟಿ
    * ಪಾಟಿದಾರ್ ಸಮುದಾಯದಿಂದ: ಕೌಶಿಕ್ ವೆಕಾರಿಯಾ, ಪ್ರಫುಲ್ ಪನ್ಸಾರಿಯಾ, ಕಾಂತಿ ಅಮೃತಿಯಾ, ರಿಷಿಕೇಶ್ ಪಟೇಲ್, ಜಿತುಭಾಯ್ ವಘಾನಿ ಮತ್ತು ಕಮಲೇಶ್ ಪಟೇಲ್.
    * ಪರಿಶಿಷ್ಟ ಜಾತಿಯಿಂದ: ಮನೀಶಾ ವಕೀಲ್, ಪ್ರದ್ಯುಮ್ನ ವಾಜಾ ಮತ್ತು ದರ್ಶನ್ ವಘೇಲಾ.
    * ಆದಿವಾಸಿ ಸಮುದಾಯದಿಂದ: ರಮೇಶ ಕಾಟಾರ, ಪಿ.ಸಿ. ಬರಂದ, ಜೈರಾಮ್ ಗಮಿತ್ ಮತ್ತು ನರೇಶ್ ಪಟೇಲ್.
    * ಕ್ಷತ್ರಿಯ ಸಮುದಾಯದಿಂದ: ರಿವಾಬಾ ಜಡೇಜಾ ಮತ್ತು ಸಂಜಯ್‌ಸಿನ್ಹ್ ಮಹಿದಾ.
    * ಒಬಿಸಿ ಸಮುದಾಯದಿಂದ: ಕುನ್ವರ್ಜಿ ಬವಲಿಯಾ, ಅರ್ಜುನ್ ಮೊದ್ವಾಡಿಯಾ, ಪರ್ಷೋತ್ತಮ್ ಸೋಲಂಕಿ, ತ್ರಿಕಮ್ ಛಂಗಾ, ಪ್ರವೀಣ್ ಮಾಲಿ, ಸ್ವರೂಪ್ಜಿ ಠಾಕೋರ್, ಈಶ್ವರಸಿನ್ಹ್ ಪಟೇಲ್ ಮತ್ತು ರಾಮನ್ ಸೋಲಂಕಿ.
    * ಬ್ರಾಹ್ಮಣ ಸಮುದಾಯದಿಂದ: ಕನುಭಾಯಿ ದೇಸಾಯಿ
    * ಜೈನ (ಲಘುಮತಿ) ಸಮುದಾಯದಿಂದ: ಹರ್ಷ ಸಾಂಘ್ವಿ

  • Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

    Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

    – ರಾಜಕೋಟ್‌ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

    ಅಹಮದಾಬಾದ್‌: ಇಲ್ಲಿನ ಮೇಘನಿ ನಗರದಲ್ಲಿ ಏರ್‌ ಇಂಡಿಯಾ ವಿಮಾನ ದುರಂತ (Air India Crash) ಸಂಭವಿಸಿದ ಮೂರು ದಿನಗಳ ನಂತರ ಗುಜರಾತ್‌ನ ಮಾಜಿ ಸಿಎಂ ವಿಜಯ್‌ ರೂಪಾನಿ (Vijay Rupani) ಅವರ ಮೃತದೇಹದ ಗುರುತು ಪತ್ತೆಯಾಗಿದೆ. ಅಪಘಾತ ಸ್ಥಳದಲ್ಲಿ ಪತ್ತೆಯಾದ ಮೃತದೇಹದೊಂದಿಗೆ ಡಿಎನ್‌ಎ ಮ್ಯಾಚ್ ಆಗಿದ್ದು, ಮೃತದೇಹ ಹಸ್ತಾಂತರಕ್ಕೆ ತಯಾರಿ ನಡೆದಿದೆ.

    ಈ ಕುರಿತು ರಾಜ್ಯದ ಗೃಹ ಸಚಿವ ಹರ್ಷ್ ಸಾಂಘವಿ (Harsh Sanghavi )ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ 11:10ಕ್ಕೆ ಬಂದ ಡಿಎನ್‌ಎ ವರದಿಯಲ್ಲಿ ರೂಪಾನಿ ಅವರ ಡಿಎನ್‌ಎಗೆ ಮ್ಯಾಚ್‌ (DNA Match) ಆಗಿದೆ ಎಂದು ತಿಳಿಸಿದ್ದಾರೆ.

    ರೂಪಾನಿ ಅವರ ಸಹೋದರಿಯಿಂದ ಸ್ಯಾಂಪಲ್‌ ಪಡೆದು ಡಿಎನ್‌ಎ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆ ವೇಳೆ ಡಿಎನ್‌ಎ ಮಾಚ್‌ ಆಗಿದ್ದು ಮೂರು ದಿನಗಳ ಬಳಿಕ ಮೃತದೇಹದ ಗುರುತು ಪತ್ತೆಯಾಗಿದೆ. ಸದ್ಯ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಶೀಘ್ರದಲ್ಲೇ ಅವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬಂದ ಬಳಿಕ ಮೃತದೇಹ ಹಸ್ತಾಂತರಿಸಲಾಗುತ್ತದೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್‌ ಸಹ ಕುಟುಂಬಸ್ಥರೊಂದಿಗೆ ಇರಲಿದ್ದಾರೆ.

    ರಾಜಕೋಟ್‌ನಲ್ಲಿ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಈಗಾಗಲೇ ಸಕಲ ತಯಾರಿ ಮಾಡಿಕೊಂಡಿದ್ದಾರೆ.

    ಏರ್ ಇಂಡಿಯಾ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರ ಮೃತದೇಹಗಳಿಗಾಗಿ ಸಂಬಂಧಿಕರು ಇನ್ನೂ ಕಾಯುತ್ತಿದ್ದಾರೆ. ಸಿವಿಲ್ ಆಸ್ಪತ್ರೆಯಲ್ಲಿ ಹತ್ತಾರು ಕುಟುಂಬಗಳ ಕುಟುಂಬಸ್ಥರು ಮೃತದೇಹಕ್ಕಾಗಿ ಕಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಡಿಎನ್‌ಎ ಮ್ಯಾಚ್ ಮಾಡುವ ಕಾರ್ಯ ನಡೆಯುತ್ತಿದೆ. ಶನಿವಾರದವರೆಗೆ 31 ಮೃತ ದೇಹಗಳ ಡಿಎನ್‌ಎ ಮ್ಯಾಚ್ ಆಗಿದ್ದು, 12 ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿತ್ತು. ಇಂದು ಇನ್ನಷ್ಟು ಮೃತದೇಹಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ.

  • ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಬಂಧನ

    ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಬಂಧನ

    ಅಹಮದಾಬಾದ್: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಇಡೀ ದೇಶಾದ್ಯಂತ ನೆಲೆಸಿರುವ ಪಾಕಿಸ್ತಾನಿಯರನ್ನ ವಾಪಸ್‌ ಕಳುಹಿಸುವ ಕಾರ್ಯಾಚರಣೆಯನ್ನು ಸರ್ಕಾರಗಳು ಚುರುಕುಗೊಳಿಸಿವೆ. ಈ ನಡುವೆ ವಿವಿಧ ದೇಶಗಳಿಂದ ಬಂದು ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು (Illegal Immigrants) ಪತ್ತೆಹಚ್ಚುವ ಕೆಲಸಕ್ಕೆ ಪೊಲೀಸ್‌ ಇಲಾಖೆ ಮುಂದಾಗಿದೆ.

    ಅದರಂತೆ ಅಹಮದಾಬಾದ್ (Ahmedabad) ಮತ್ತು ಸೂರತ್‌ನಲ್ಲಿ ನಡೆದ ಶೋಧ ಕಾರ್ಯಾಚರಣೆಯ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರನ್ನು (Bangladeshis) ಬಂಧಿಸಲಾಗಿದೆ. ಗುಜರಾತ್ ಪೊಲೀಸರು (Gujarat Police) ಇಲ್ಲಿಯವರೆಗೆ ನಡೆಸಿದ ಅತಿದೊಡ್ಡ ಕಾರ್ಯಾಚರಣೆ ಇದಾಗಿದ್ದು, ಬಂಧಿತರನ್ನ ಶೀಘ್ರವೇ ಗಡೀಪಾರು ಮಾಡುವ ಪ್ರಕ್ರಿಯೆ ಚುರುಕುಗೊಂಡಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘ್ವಿ ತಿಳಿಸಿದ್ದಾರೆ.

    ಅಹಮದಾಬಾದ್‌ನಲ್ಲಿ ಕನಿಷ್ಠ 890 ಮತ್ತು ಸೂರತ್‌ನಲ್ಲಿ 134 ಬಾಂಗ್ಲಾದೇಶಿಗರನ್ನ ಬಂಧಿಸಲಾಗಿದೆ. ಬಂಧಿತರು ಗುಜರಾತ್‌ಗೆ ಬರುವ ಮುನ್ನ ಭಾರತದ ವಿವಿಧ ಭಾಗಗಳಲ್ಲಿ ಉಳಿಯಲು ಪಶ್ಚಿಮ ಬಂಗಾಳದಿಂದ ಪಡೆದ ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಸಹ ಸಚಿವರು ಮಾಹಿತಿ ನೀಡಿದ್ದಾರೆ.

    ಗುಜರಾತ್‌ನಲ್ಲಿ ವಾಸಿಸುವ ಅಕ್ರಮ ವಲಸಿಗರು ಸ್ವಯಂಪ್ರೇರಿತವಾಗಿ ಪೊಲೀಸರ ಮುಂದೆ ಶರಣಾಗಬೇಕು, ಇಲ್ಲದಿದ್ದರೆ ಅವರನ್ನು ಬಂಧಿಸಿ ಗಡೀಪಾರು ಮಾಡಲಾಗುವುದು ಎಚ್ಚರಿಕೆ ಸಹ ನೀಡಿದ್ದಾರೆ.

  • ಮಹಿಳಾ ದಿನಾಚರಣೆ – ಪ್ರಧಾನಿ ಕಾರ್ಯಕ್ರಮಕ್ಕೆ ಸಂಪೂರ್ಣ ಮಹಿಳಾ ಪೊಲೀಸ್ ತುಕಡಿಯಿಂದ ಭದ್ರತೆ

    ಮಹಿಳಾ ದಿನಾಚರಣೆ – ಪ್ರಧಾನಿ ಕಾರ್ಯಕ್ರಮಕ್ಕೆ ಸಂಪೂರ್ಣ ಮಹಿಳಾ ಪೊಲೀಸ್ ತುಕಡಿಯಿಂದ ಭದ್ರತೆ

    ಅಹಮದಾಬಾದ್: ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (PM Narendra Modi) ಭಾಗಿಯಾಗಲಿದ್ದು, ಕಾರ್ಯಕ್ರಮದ ಭದ್ರತಾ ವ್ಯವಸ್ಥೆಯನ್ನು ಸಂಪೂರ್ಣ ಮಹಿಳಾ ಪೊಲೀಸ್ ತುಕಡಿಯೇ ನಿರ್ವಹಿಸಲಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ (Harsh Sanghavi) ಹೇಳಿದ್ದಾರೆ.

    ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ನಡೆಯುತ್ತಿದೆ. ಪ್ರಧಾನ ಮಂತ್ರಿಗಳು ವಂಶಿ ಬೋರ್ಸಿ ಗ್ರಾಮದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸುವುದರಿಂದ ಹಿಡಿದು ಕಾರ್ಯಕ್ರಮದ ಸ್ಥಳದವರೆಗೆ ಅವರ ಭದ್ರತೆಯನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ನಿಭಾಯಿಸಲಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ ಸಾಧ್ಯತೆ

    ಮಹಿಳಾ ಭದ್ರತಾ ತಂಡದಲ್ಲಿ 2,100 ಮಹಿಳಾ ಕಾನ್‌ಸ್ಟೆಬಲ್‌ಗಳು, 187 ಸಬ್-ಇನ್ಸ್ಪೆಕ್ಟರ್‌ಗಳು, 61 ಪೊಲೀಸ್ ಇನ್ಸ್ಪೆಕ್ಟರ್‌ಗಳು, 16 ಉಪಪೊಲೀಸ್ ವರಿಷ್ಠಾಧಿಕಾರಿಗಳು (ಡಿಎಸ್ಪಿಗಳು), 5 ಪೊಲೀಸ್ ಸೂಪರಿಂಟೆಂಡೆಂಟ್‌ಗಳು, 1 ಪೊಲೀಸ್ ಮಹಾನಿರ್ದೇಶಕರು (ಐಜಿಪಿ), 1 ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಇರಲಿದ್ದಾರೆ. ಭದ್ರತಾ ವ್ಯವಸ್ಥೆಗಳನ್ನು ಹಿರಿಯ ಐಪಿಎಸ್ ಅಧಿಕಾರಿ ಮತ್ತು ಗೃಹ ಕಾರ್ಯದರ್ಶಿ ನಿಪುನಾ ತೊರವಾನೆ ಅವರು ಮೇಲ್ವಿಚಾರಣೆ ಮಾಡಲಿದ್ದಾರೆ.

    ರಾಜ್ಯ ಸರ್ಕಾರದ ಈ ಕ್ರಮದ ಮಹತ್ವವನ್ನು ಒತ್ತಿ ಹೇಳಿದ ಹರ್ಷ ಸಂಘವಿ, ಸಂಪೂರ್ಣ ಮಹಿಳೆಯರೇ ಇರುವ ಭದ್ರತಾ ಪಡೆಗಳ ನಿಯೋಜನೆಯು ಸುರಕ್ಷತೆ ಮತ್ತು ಭದ್ರತೆಗೆ ಮಹಿಳೆಯರ ಕೊಡುಗೆಯನ್ನು ಮಹಿಳಾ ದಿನಾಚರಣೆಯಂದು ಜಗತ್ತಿಗೆ ಬಲವಾದ ಸಂದೇಶವನ್ನು ನೀಡುತ್ತದೆ. ಮಹಿಳಾ ಶಕ್ತಿ ಗುಜರಾತ್ ಅನ್ನು ಹೇಗೆ ಸುರಕ್ಷಿತ ಮತ್ತು ಸುಭದ್ರ ರಾಜ್ಯವನ್ನಾಗಿ ಮಾಡಲು ಸಕ್ರಿಯವಾಗಿ ಕೊಡುಗೆ ನೀಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.

    ಪ್ರಧಾನಿ ಮೋದಿ ಮಾರ್ಚ್ 8 ಮತ್ತು 9 ರಂದು ಗುಜರಾತ್ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ ಹವೇಲಿಗೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 8 ರಂದು ವಂಶಿ ಬೋರ್ಸಿ ಗ್ರಾಮದಲ್ಲಿ ನಡೆಯಲಿರುವ `ಲಖ್ಪತಿ ದೀದಿ ಸಮ್ಮೇಳನ’ದಲ್ಲಿ ಅವರು ಮಾತನಾಡಲಿದ್ದಾರೆ. ಇದು ಆರ್ಥಿಕ ಸ್ವಾತಂತ್ರ‍್ಯ ಮತ್ತು ಸ್ವಾವಲಂಬನೆ ಕಾರ್ಯಕ್ರಮಗಳ ಮೂಲಕ ಮಹಿಳೆಯರ ಸಬಲೀಕರಣ ಅಭಿಯಾನವಾಗಿದೆ.ಇದನ್ನೂ ಓದಿ: ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?

     

     

  • ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಅರೆಸ್ಟ್

    ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಅರೆಸ್ಟ್

    ಗಾಂಧಿನಗರ: ಗುಜರಾತ್‍ನ (Gujarat) ರಾಜ್‍ಕೋಟ್‍ನ ಟಿಆರ್‌ಪಿ ಗೇಮಿಂಗ್ ಝೋನ್‌ನಲ್ಲಿ (Rajkot Game Zone Fire) 27 ಮಂದಿಯ ಸಾವಿಗೆ ಕಾರಣವಾದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಪ್ರಮುಖ ಆರೋಪಿ ಧವಲ್ ಠಕ್ಕರ್‌ (Dhawal Thakkar) ರಾಜಸ್ಥಾನದ ಅಬು ರಸ್ತೆಯಲ್ಲಿ ಬಂಧಿಸಲಾಗಿದೆ. ಈತ ರಾಜಸ್ಥಾನದ ಸಂಬಂಧಿಕರ ಮನೆಯಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು

    ಗೇಮಿಂಗ್ ಝೋನ್‍ನ ಆರು ಪಾಲುದಾರರ ವಿರುದ್ಧವೂ ಎಫ್‍ಐಆರ್ ದಾಖಲಿಸಲಾಗಿದೆ. ಈ ವಲಯವನ್ನು ನಿರ್ವಹಿಸುತ್ತಿದ್ದ ರೇಸ್‍ವೇ ಎಂಟರ್‌ಪ್ರೈಸಸ್ ಇಬ್ಬರು ಪಾಲುದಾರರಾದ ಯುವರಾಜ್‍ಸಿಂಹ ಸೋಲಂಕಿ ಮತ್ತು ರಾಹುಲ್ ರಾಥೋಡ್ ಮತ್ತು ವ್ಯವಸ್ಥಾಪಕ ನಿತಿನ್ ಜೈನ್‍ನನ್ನು ಇಂದು ಮುಂಜಾನೆ (ಮೇ 28) ಬಂಧಿಸಲಾಗಿದೆ. ಬಂಧಿತ ಮೂವರನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ವೇಳೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ತುಷಾರ್ ಗೋಕನಿ ಆರೋಪಿಗಳ ಬಳಿ ಗೇಮಿಂಗ್ ಝೋನ್‍ನ ದಾಖಲೆಗಳನ್ನು ಕೇಳಿದಾಗ ಬೆಂಕಿಯಲ್ಲಿ ಸುಟ್ಟುಹೋಗಿವೆ ಎಂದಿದ್ದಾರೆ.

    ಹೆಚ್ಚಿನ ತನಿಖೆಗಾಗಿ ಸರ್ಕಾರ ನೇಮಿಸಿದ ವಿಶೇಷ ತನಿಖಾ ತಂಡ (SIT) ಟಿಆರ್‌ಪಿ ಗೇಮಿಂಗ್ ಝೋನ್‍ಗೆ ಸಂಬಂಧಿಸಿದ ಎಲ್ಲಾ ಫೈಲ್‍ಗಳನ್ನು ವಶಪಡಿಸಿಕೊಂಡಿದೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ  (Harsh Sanghavi) ಹೇಳಿದ್ದಾರೆ.

    ರಾಜ್‍ಕೋಟ್‍ನ ಟಿಆರ್‌ಪಿ ಗೇಮಿಂಗ್ ಝೋನ್‍ನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಮುನ್ಸಿಪಲ್ ಕಾರ್ಪೋರೇಷನ್ ಅನ್ನು ಗುಜುರಾತ್ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತ ಯಂತ್ರದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ ಎಂದು ಹೇಳಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ. ಬಿರೇನ್ ವೈಷ್ಣವ್ ಮತ್ತು ನ್ಯಾ.ದೇವನ್ ದೇಸಾಯಿ ಅವರನ್ನೊಳಗೊಂಡ ವಿಶೇಷ ಪೀಠ, ಗೇಮಿಂಗ್ ವಲಯ ನಿರ್ವಾಹಕರು ರಾಜ್‍ಕೋಟ್ ಮುನ್ಸಿಪಲ್ ಕಾರ್ಪೋರೇಷನ್‌ನಿಂದ ಕಡ್ಡಾಯ ಅನುಮತಿಗಳು ಮತ್ತು ಪರವಾನಗಿಗಳನ್ನು ತೆಗೆದುಕೊಂಡಿಲ್ಲ ಎಂದು ವರದಿಯಾಗಿದೆ. ಅಧಿಕಾರಿಗಳು ಏನು ನಿದ್ದೆ ಮಾಡುತ್ತಿದ್ದಾರಾ ಎಂದು ಖಾರವಾಗಿ ಪ್ರಶ್ನಿಸಿತ್ತು. ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಸರ್ಕಾರ 7 ಅಧಿಕಾರಿಗಳನ್ನ ಅಮಾನತುಗೊಳಿಲಾಗಿದೆ. ಇದನ್ನೂ ಓದಿ: ಮಡಿಕೇರಿಯಲ್ಲಿ 5 ವರ್ಷ ಕಳೆದರೂ ನೆರೆಸಂತ್ರಸ್ತರಿಗೆ ಸಿಗದ ಶಾಶ್ವತ ಸೂರು – ಸರ್ಕಾರದ ವಿರುದ್ಧ ಆಕ್ರೋಶ

  • ಮೊಬೈಲ್‍ನಲ್ಲಿ ಅಶ್ಲೀಲ ವೀಡಿಯೋ ಸುಲಭವಾಗಿ ಸಿಗುವುದರಿಂದ ಅತ್ಯಾಚಾರವಾಗುತ್ತಿದೆ: ಗುಜರಾತ್ ಸಚಿವ ಹರ್ಷ ಸಂಘವಿ

    ಮೊಬೈಲ್‍ನಲ್ಲಿ ಅಶ್ಲೀಲ ವೀಡಿಯೋ ಸುಲಭವಾಗಿ ಸಿಗುವುದರಿಂದ ಅತ್ಯಾಚಾರವಾಗುತ್ತಿದೆ: ಗುಜರಾತ್ ಸಚಿವ ಹರ್ಷ ಸಂಘವಿ

    ಗಾಂಧೀನಗರ: ಮೊಬೈಲ್ ಫೋನ್‍ಗಳಲ್ಲಿ ಸುಲಭವಾಗಿ ಆಶ್ಲೀಲ ವೀಡಿಯೋ ಸಿಗುವುದರಿಂದಾಗಿ ರೇಪ್ ಹೆಚ್ಚಾಗುತ್ತಿದೆ ಎಂದು ಗುಜರಾತ್ ಸಚಿವ ಹರ್ಷ ಸಂಘವಿ ಅಭಿಪ್ರಾಯಪಟ್ಟಿದ್ದಾರೆ.

    STOP RAPE

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಮೊಬೈಲ್ ಫೋನ್‍ಗಳಲ್ಲಿ ಅಶ್ಲೀಲ ವೀಡಿಯೋಗಳನ್ನು ನೋಡುವುದರಿಂದ ರೇಪ್ ಮತ್ತು ಇತರ ಅಪರಾಧ ಕೃತ್ಯಗಳು ಭಾರತದಲ್ಲಿ ಹೆಚ್ಚಾಗುತ್ತಿದೆ ಎಂಬ ಅಂಶ ಸರ್ವೇಯೊಂದರ ಮುಖಾಂತರ ತಿಳಿದು ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: 3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು

    ರೇಪ್ ನಡೆದಾಗ ಪ್ರತಿಯೊಬ್ಬರು ಪೊಲೀಸರ ಮೇಲೆ ಗೂಬೆ ಕೂರಿಸುತ್ತಾರೆ. ಇಂತಹ ಘಟನೆ ಬಳಿಕ ರಾಜ್ಯದಲ್ಲಿ ಅಥವಾ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ ಎನ್ನುತ್ತೇವೆ. ಪೊಲೀಸರನ್ನು ದೂರಿ ಯಾವುದೇ ಪ್ರಯೋಜನವಿಲ್ಲ. ಕೆಲದಿನಗಳ ಹಿಂದೆ ಗುಜರಾತ್‍ನಲ್ಲಿ ತಂದೆಯೇ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಇದರ ಹಿಂದೆ ಮೊಬೈಲ್ ಫೋನ್ ಕಾರಣವಾಗಿರುವುದು ಬೆಳಕಿಗೆ ಬಂದಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ