ಶಿವಮೊಗ್ಗ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಹರ್ಷ ಕೊಲೆ ಪ್ರಕರಣದಲ್ಲಿ (Harsha Murder Case) ಸಾಕ್ಷಿಯಾಗಿದ್ದ ಅಮ್ಜದ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಎನ್‌ಐಎ (NIA) ಅಧಿಕಾರಿಗಳು ನಗರಕ್ಕೆ (Shivamogga) ಭೇಟಿ ನೀಡಿದ್ದಾರೆ.
ಎನ್‍ಐಎ ಎಸ್ಪಿ ನೇತೃತ್ವದ ಮೂರು ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿ ತನಿಖೆ ಆರಂಭಿಸಿದೆ. ಅಮ್ಜದ್ ಕೊಲೆಯಲ್ಲಿ ಹರ್ಷ ಕೊಲೆಯ ನಂಟಿನ ಸಾಧ್ಯತೆ ಹಿನ್ನೆಲೆ ತನಿಖೆ ನಡೆಯುತ್ತಿದೆ. ನಗರದ ಪೊಲೀಸರ ಸಹಾಯದೊಂದಿಗೆ ಎನ್‍ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಜೈಲಾಧಿಕಾರಿಗಳ ಜೊತೆ ಕಿರಿಕ್ – ಹರ್ಷ ಕೊಲೆ ಆರೋಪಿಗಳಿಗೆ ಜೈಲಿನಲ್ಲಿ ಕ್ಲಾಸ್
ಅಮ್ಜದ್ ಕೊಲೆಯಲ್ಲಿ ಭಾಗಿಯಾದವರ ವಿಚಾರಣೆಗೂ ತಯಾರಿ ನಡೆಯುತ್ತಿದೆ. ಇತ್ತೀಚೆಗೆ ನಗರದಲ್ಲಿ ಹಲ್ಲೆಗೊಳಗಾಗಿ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಮ್ಜದ್, ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದರು. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳು ಕಿರಿಕ್
ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಹಿಂದೂ ಹರ್ಷ ಹತ್ಯೆಯಾದ ದಿನ ಆರೋಪಿಗಳು ಶಿವಮೊಗ್ಗದ ಪೆಟ್ರೋಲ್ ಬಂಕ್‌ನಲ್ಲಿ ತಮ್ಮ ಕಾರಿಗೆ ಇಂಧನ ಭರ್ತಿ ಮಾಡಿಸಿಕೊಂಡಿದ್ದರು. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಭರ್ತಿ ಮಾಡಿದ್ದ. ಈ ಕಾರಣಕ್ಕೆ ಆತನನ್ನು ಸಾಕ್ಷಿಯಾಗಿ ಪರಿಗಣಿಸಲಾಗಿತ್ತು.
ಸದ್ಯ ಆ ಯುವಕ ಪೆಟ್ರೋಲ್ ಬಂಕ್ ತೊರೆದು ಬೇರೆ ಕೆಲಸ ಮಾಡುತ್ತಿದ್ದಾನೆ. ಕೆಲ ದಿನಗಳ ಹಿಂದೆ ಪೆಟ್ರೋಲ್ ಬಂಕ್‌ಗೆ ಸ್ಕೂಟಿಯಲ್ಲಿ ತೆರಳಿದ್ದ ವ್ಯಕ್ತಿಯೊಬ್ಬ ಆ ಯುವಕ ಯಾರು ಎಂದು ವಿಚಾರಿಸಿದ್ದ. ಆತ ಕೆಲಸ ಬಿಟ್ಟಿರುವುದಾಗಿ ತಿಳಿಸಿದಾಗ, ‘ಕೋರ್ಟ್‌ಗೆ ಹೋಗುವುದು ಬೇಡ ಎಂದು ಹೇಳಿ’ ಎಂದು ಬಂಕ್ ಸಿಬ್ಬಂದಿಗೆ ತಿಳಿಸಿ ಹೋಗಿದ್ದ ಎಂದು ಆರೋಪಿಸಲಾಗಿದೆ.
ಈ ವಿಷಯ ಸ್ನೇಹಿತರಿಂದ ಯುವಕನಿಗೆ ಗೊತ್ತಾಗಿದೆ. ಡಿ.12ರಂದು ಎನ್‌ಐಎ ನ್ಯಾಯಾಲಯದಲ್ಲಿ ಯುವಕ ಸಾಕ್ಷಿ ನುಡಿದಿದ್ದಾನೆ. ಮರುದಿನ ಕೋರ್ಟ್ ಸೂಚನೆ ಮೇರೆಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ಶಿವಮೊಗ್ಗ (Shivamogga) ನಗರದಲ್ಲಿ ಫೆ.20 ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ (Harsha) ಹತ್ಯೆ ಪ್ರಕರಣದ ಆರೋಪಿ ಜಾಫರ್ ಸಾಧಿಕ್ (52) ಎಂಬಾತನಿಗೆ ಎನ್‍ಐಎ (NIA) ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು (Bail) ನೀಡಿದೆ.
ಸೆಕೆಂಡ್ ಹ್ಯಾಂಡ್ ಕಾರ್ (Car) ಡೀಲರ್ ಆಗಿರುವ ಸಾಧಿಕ್‍ನನ್ನು ಫೆ. 24 ರಂದು ಪೊಲೀಸರು (Police) ಬಂಧಿಸಿದ್ದರು. ಹರ್ಷ ಕೊಲೆ ಪ್ರಕರಣದಲ್ಲಿ 10ನೇ ಆರೋಪಿಯಾಗಿರುವ ಈತ, ಪ್ರಕರಣದ 6ನೇ ಆರೋಪಿ ಜಿಲಾನ್‍ನ ತಂದೆ. ಸಾಧಿಕ್, ಜಾಮೀನು ಕೋರಿ ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸಾಧಿಕ್ ಪರ ವಕೀಲರು, ಕಕ್ಷಿದಾರರು ಹರ್ಷ ಕೊಲೆ ಪ್ರಕರಣದ ಆರೋಪಿಯಾದ ತಮ್ಮ ಮಗ ಜಿಲಾನ್‍ಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬೆಂಗಳೂರಿನ ಸ್ನೇಹಿತನ ಮನೆಯಲ್ಲಿ ಆಶ್ರಯ ಕೊಡಿಸಿದ್ದರು. ಅದನ್ನು ಹೊರತುಪಡಿಸಿದರೆ ಕಕ್ಷಿದಾರರ ವಿರುದ್ಧ ಬೇರೆ ಯಾವುದೇ ಆರೋಪವಿಲ್ಲ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಹೇಳಿದ್ದರು. ಇದನ್ನೂ ಓದಿ: ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ, ಮಸೀದಿ ಧ್ವಂಸ- 10ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ
ಎನ್‍ಐಎ ಪರ ವಾದ ಮಂಡಿಸಿದ ವಕೀಲರು, ಸಾದಿಕ್ ಖರೀದಿಸಿದ್ದ ಕಾರುಗಳನ್ನು ಇತರೆ ಆರೋಪಿಗಳು ಅಪರಾಧ ಕೃತ್ಯ ಎಸಗಲು ಮತ್ತು ಕೃತ್ಯದ ಬಳಿಕ ಸ್ಥಳದಿಂದ ತಪ್ಪಿಸಿಕೊಳ್ಳಲು ಬಳಕೆ ಮಾಡಿದ್ದಾರೆ. ಜೊತೆಗೆ ಸಾಧಿಕ್, ತಮ್ಮ ಮಗನಿಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾನೆ ಮತ್ತು ಸ್ನೇಹಿತನ ಮನೆಯಲ್ಲಿ ಆಶ್ರಯ ಕೊಡಿಸಿದ್ದಾನೆ. ಹೀಗಾಗಿ, ಇತರೆ ಆರೋಪಿಗಳ ಅಪರಾಧ ಕೃತ್ಯವು ಸಾಧಿಕ್‍ಗೆ ಚೆನ್ನಾಗಿ ತಿಳಿದಿತ್ತು. ಈ ಕಾರಣಕ್ಕೆ ಸಾಧಿಕ್‍ಗೆ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಕೇರಳ ನರಬಲಿ ಪ್ರಕರಣ – ನರಭಕ್ಷಕರ ಜಾಡು ಹಿಡಿದಿದ್ದು ಹೀಗೆ
ಅರ್ಜಿಯ ವಿಚಾರಣೆ ನಡೆಸಿದ ಎನ್‍ಐಎ ವಿಶೇಷ ನ್ಯಾಯಾಲಯ ಆರೋಪಿಯು 50 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿ ನೀಡಬೇಕು. ನ್ಯಾಯಾಲಯ ವಿನಾಯಿತಿ ನೀಡದ ಹೊರತು ಪ್ರತಿಬಾರಿ ಪ್ರಕರಣದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ನಾಶ ಮಾಡಬಾರದು. ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ರಾಜ್ಯವನ್ನು ದಂಗಾಗಿಸಿತ್ತು. ಇದೀಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ.
ಹರ್ಷನ ಕೊಲೆ ಕೇವಲ ರಸ್ತೆ ಜಗಳ, ವೈಯಕ್ತಿಕ ದ್ವೇಷದಿಂದಾಗಿ ಆಗಿದ್ದಲ್ಲ. ಬದಲಿಗೆ ಉಗ್ರ ಸಂಘಟನೆಯೊಂದರ ಕೈವಾಡ ಇರುವುದಾಗಿ (ರಾಷ್ಟ್ರೀಯ ತನಿಖಾ ದಳ) ಎನ್‍ಐಎ ತನಿಖೆ ವೇಳೆ ತಿಳಿದುಬಂದಿದೆ. ಹರ್ಷ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‍ಐಎ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದಾಗ ಕೆಲವೊಂದು ಎಲೆಕ್ಟ್ರಾನಿಕ್ ವಸ್ತುಗಳಿಂದ ತಾಂತ್ರಿಕ ಸಾಕ್ಷ್ಯ ಲಭ್ಯವಾಗಿದೆ. ಆರೋಪಿಗಳ ಹೇಳಿಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಜೊತೆಗೆ ಶೀಘ್ರದಲ್ಲೇ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲು ಎನ್‍ಇಎ ಸಿದ್ಧತೆ ನಡೆಸಿದೆ. ದೋಷಾರೋಪ ಪಟ್ಟಿಯಲ್ಲಿ ಹರ್ಷನ ಹತ್ಯೆಗೆ ಪ್ರಚೋದನೆ ನೀಡಿದ ಉಗ್ರ ಸಂಘಟನೆಯ ಹೆಸರನ್ನೂ ಉಲ್ಲೇಖಿಸಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ
ಹರ್ಷ ಕೊಲೆ:
ಫೆಬ್ರವರಿ 20ರಂದು ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿತ್ತು. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿತ್ತು. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಬಳಿಕ ಹತ್ಯೆಗೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ನಡುವೆ ಪ್ರಕರಣವನ್ನು ಸರ್ಕಾರ ಎನ್‍ಐಎಗೆ ತನಿಖೆಗೆ ವರ್ಗಾಹಿಸಿತ್ತು. ಎನ್‍ಐಎ ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದರು. ಈವರೆಗೆ ಒಟ್ಟು 450 ಹೆಚ್ಚು ಮಂದಿಯನ್ನು ಎನ್‍ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?
Live Tv
[brid partner=56869869 player=32851 video=960834 autoplay=true]
ಶಿವಮೊಗ್ಗ: ಹಿಂದೂ ಸಮಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿಗಳು ಸೆಂಟ್ರಲ್ ಜೈಲಿನಲ್ಲಿ ಪುಂಡಾಟಿಕೆ ಮಾಡಿದ್ದಾರೆ.
ಸೆಂಟ್ರಲ್ ಜೈಲಿನಲ್ಲಿದ್ರೂ ಬ್ಯಾರಕ್‍ನಲ್ಲಿ ಪುಂಡಾಟಿಕೆ ನಡೆಸುತ್ತಿರುವ ಆರೋಪಿಗಳು ಜೈಲಿನ ಭದ್ರತಾ ಸಿಬ್ಬಂದಿಗಳಿಗೇ ಅವಾಜ್ ಹಾಕತ್ತಿದ್ದಾರೆ. ಈ ಮೊದಲು ಬೆಂಗಳೂರು, ಧಾರವಾಡ, ಬೆಳಗಾವಿ ಮತ್ತು ತುಮಕೂರು ಜೈಲಿನಲ್ಲಿ ಆರೋಪಿಗಳನ್ನು ಇರಿಸಲಾಗಿತ್ತು ಆ ಬಳಿಕ ಇತ್ತೀಚೆಗಷ್ಟೇ ಹತ್ತು ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಹತ್ತು ಮಂದಿ ಆರೋಪಿಗಳು ಒಂದೇ ಬ್ಯಾರಕ್‍ನಲ್ಲಿದ್ದು, ಕ್ವಾರಂಟೈನ್ ಸೆಲ್‍ನಿಂದ ಸೆಂಟ್ರಲ್ ಜೈಲಿನ ಒಳಗೆ ಕಳುಹಿಸುವಂತೆ ಆರೋಪಿಗಳು ಜೈಲಾಧಿಕಾರಿಗಳಿಗೆ ಅವಾಜ್ ಹಾಕುತ್ತಿರುವ ಬಗ್ಗೆ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಹರ್ಷ ಕೊಲೆಯ ಪ್ರತೀಕಾರಕ್ಕೆ ನಡೆಯಿತಾ ಸಂಚು – ಪೊಲೀಸ್ ಕಾರ್ಯಾಚರಣೆಯಿಂದ ಸಂಚು ವಿಫಲ
ಜೈಲಿನ ನಿಯಮಾವಳಿಯಂತೆ 14 ದಿನ ಕ್ವಾರಂಟೈನ್ ಕಡ್ಡಾಯಕ್ಕೆ ಆರೋಪಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ನಮಗೇನು ಕೊರೊನಾ ಇದೆಯಾ? ಒಳಗೆ ಕಳುಹಿಸಿ ಎಂದು ಜೈಲಾಧಿಕಾರಿಗಳನ್ನು ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ಜೈಲಿನಲ್ಲಿರುವ ಟೈಲ್ಸ್ ಕಲ್ಲನ್ನು ಒಡೆದು ಕಲ್ಲಿನ ಚೂರ್‌ನಿಂದ ಕೈ ಕೊಯ್ದುಕೊಂಡು ಹುಚ್ಚಾಟ ನಡೆಸುತ್ತಿದ್ದಾರೆ. ಆರು ಮಂದಿ ಆರೋಪಿಗಳು ಪರಸ್ಪರ ತಮ್ಮಷ್ಟಕ್ಕೆ ಟೈಲ್ಸ್ ಚೂರ್‌ನಿಂದ ಮೈ, ಕೈ ರಕ್ತ ಬರುವಂತೆ ಕೊಯ್ದುಕೊಂಡು ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಕೋಮುಗಲಭೆ ಸೃಷ್ಟಿಸಲು ಹರ್ಷನ ಹತ್ಯೆ- ಎನ್‌ಐಎ ವರದಿಯಲ್ಲಿ ಸ್ಫೋಟಕ ಮಾಹಿತಿ
ಪ್ರಮುಖ ಆರೋಪಿ ಮಹಮ್ಮದ್ ಖಾಸಿಫ್, ಅಬ್ದುಲ್ ರೋಷನ್ ಸೇರಿ ಆರು ಮಂದಿ ಆರೋಪಿಗಳು ಮೈ, ಕೈ ಕೊಯ್ದುಕೊಂಡು ಹುಚ್ಚಾಟ ನಡೆಸುತ್ತಿದ್ದಂತೆ ಕೂಡಲೇ ಜೈಲಿನ ಆಸ್ಪತ್ರೆ ಸಿಬ್ಬಂದಿಯಿಂದ ಆರು ಮಂದಿ ಆರೋಪಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಜೈಲಿನ ಒಳಗೆ ಬ್ಯಾರಕ್‍ಗೆ ಶಿಫ್ಟ್ ಮಾಡಲಾಗಿದ್ದು, ಉಳಿದವರನ್ನು ಪ್ರತ್ಯೇಕವಾಗಿ ಬೇರೆ ಬೇರೆ ಕ್ವಾರಂಟೈನ್ ಸೆಲ್‍ಗೆ ಶಿಫ್ಟ್ ಮಾಡಲಾಗಿದೆ.
ಈ ಘಟನೆ ಬಳಿಕ ಜೈಲಾಧಿಕಾರಿಗಳು ಕೂಡಲೇ ಪರಪ್ಪನ ಅಗ್ರಹಾರ ಪೊಲೀಸ್ ಸ್ಟೇಷನ್‍ಗೆ ಪ್ರಾಥಮಿಕ ರಿಪೋರ್ಟ್ ನೀಡಿದ್ದಾರೆ. ಹರ್ಷ ಕೊಲೆ ಕೇಸ್ ಆರೋಪಿಗಳದ್ದೇ ಇದೀಗ ಜೈಲಾಧಿಕಾರಿಗಳಿಗೆ ತಲೆನೋವಾಗಿದ್ದು, ಸದ್ಯ ಎನ್‍ಐಎ ಟೀಂ ತನಿಖೆ ನಡೆಸ್ತಿದೆ. ಆರೋಪಿಗಳನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಘಟನೆ ಬಳಿಕ ಆರೋಪಿಗಳ ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗಿದ್ದು ಯಾವುದೇ ವಸ್ತು ಸಿಗದಂತೆ ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಕಾರಾಗೃಹ ಇಲಾಖೆಗೂ ಆರೋಪಿಗಳ ನಡವಳಿಕೆ ಮತ್ತು ಘಟನೆ ಬಗ್ಗೆ ಮಾಹಿತಿ ರವಾನೆಯಾಗಿದೆ.