Tag: harshika poonaccha

  • ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಮೂಡಿ ಬಂದ ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್

    ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಮೂಡಿ ಬಂದ ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್

    ಟಿ ಹರ್ಷಿಕಾ ಪೂಣಚ್ಚ (Harshika Poonacha) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 7 ತಿಂಗಳ ತುಂಬು ಗರ್ಭಿಣಿಯಾಗಿರುವ ನಟಿ ಇದೀಗ ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಸುಂದರವಾಗಿ ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಸಿದ್ದಾರೆ. ಇದನ್ನೂ ಓದಿ:‘ಜಂಬೂ ಸರ್ಕಸ್’ : ರಿಲೀಸ್ ಆಯ್ತು ಮನಸೋತೆ ಮನಸಾರೆ ಸಾಂಗ್

    ಮೈ ತುಂಬಾ ಆಭರಣ ಧರಿಸಿ ಪಿಂಕ್ ಬಣ್ಣದ ಸೀರೆಯುಟ್ಟು ಮುದ್ದಾಗಿ ನಟಿ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಗಳಲ್ಲಿ ನಟಿ ಪೋಸ್ ನೀಡಿದ್ದಾರೆ. ವಿಭಿನ್ನ ರೀತಿಯಲ್ಲಿ ನಟಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಲುಕ್‌ ನೋಡಿ ಫ್ಯಾನ್ಸ್‌ ವಾವ್‌ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಹರ್ಷಿಕಾ ಮತ್ತು ಭುವನ್ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಎದುರು ನೋಡ್ತಿದ್ದಾರೆ. ಚೊಚ್ಚಲ ಮಗು ಆಗಮನಕ್ಕೆ ದಿನಗಣನೆ ಶುರುವಾಗಿದ್ದು, ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದಾರೆ. ಇದನ್ನೂ ಓದಿ:ರಾಖಿ ಹಬ್ಬ ಆಚರಿಸಿದ ಸ್ಯಾಂಡಲ್‌ವುಡ್‌ ಸ್ಟಾರ್ಸ್

    ಜು.2ರಂದು ಕೊಡಗು ಶೈಲಿಯಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ತಾಯಿಯಾಗುತ್ತಿರುವ ಗುಡ್ ನ್ಯೂಸ್ ಅನ್ನು ನಟಿ ಹಂಚಿಕೊಂಡಿದ್ದರು. ಇಡೀ ಕುಟುಂಬ ಈ ಫೋಟೋಶೂಟ್‌ನಲ್ಲಿ ಭಾಗಿಯಾಗಿತ್ತು. ಇದನ್ನೂ ಓದಿ:ಲವ್ ಯೂ ಗೊಂಬೆ ಎಂದು ತಂಗಿಗೆ ಲವ್ಲಿ ನೋಟ್ ಬರೆದ ರಶ್ಮಿಕಾ ಮಂದಣ್ಣ

    ಅಂದಹಾಗೆ, ಹಲವು ವರ್ಷಗಳು ಪ್ರೀತಿಸಿ, ಆ.24ರಂದು ಹರ್ಷಿಕಾ ಮತ್ತು ಭುವನ್ ಜೋಡಿ ಹಸೆಮಣೆ ಏರಿದರು. ಹುಟ್ಟೂರು ಕೊಡಗಿನಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಮದುವೆಗೆ ಪೂಜಾ ಗಾಂಧಿ, ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.

    ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ, ಪತಿ ಭುವನ್‌ (Actor Bhuvan) ನಟಿಸಲಿರುವ ಮುಂಬರುವ ಚಿತ್ರಕ್ಕೆ ಹರ್ಷಿಕಾ ಅವರೇ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಸದ್ಯ ಶೂಟಿಂಗ್‌ ಕೂಡ ಭರದಿಂದ ನಡೆಯುತ್ತಿದೆ.

  • ಹರ್ಷಿಕಾ ಪೂಣಚ್ಚ ಮನೆಯಲ್ಲಿ ಕಳೆಗಟ್ಟಿದ ಮದುವೆ ಸಂಭ್ರಮ

    ಹರ್ಷಿಕಾ ಪೂಣಚ್ಚ ಮನೆಯಲ್ಲಿ ಕಳೆಗಟ್ಟಿದ ಮದುವೆ ಸಂಭ್ರಮ

    ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ(Harshika Poonachcha)-ಭುವನ್ (Bhuvan) ಮದುವೆ (Wedding) ಸಂಭ್ರಮ ಮನೆ ಮಾಡಿದೆ. ಇದೇ ಆಗಸ್ಟ್ 24ರಂದು ಕೊಡವ (Kodava) ಪದ್ಧತಿಯಂತೆ ಭುವನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮದುವೆಗೂ ಮುನ್ನ ತಯಾರಿ ಮತ್ತು ಪೂಜಾ ವಿಧಾನಗಳು ನಟಿಯ ಮನೆಯಲ್ಲಿ ಜರಗುತ್ತಿವೆ. ಇದನ್ನೂ ಓದಿ:‘ಸಲಾರ್’ ಸೆಟ್‌ನಿಂದ ಮ್ಯಾಟರ್ ಲೀಕ್- ಪ್ರಭಾಸ್ ಚಿತ್ರದ ಬಿಗ್ ಅಪ್‌ಡೇಟ್

    ಹರ್ಷಿಕಾ-ಭುವನ್ 12 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಭರ್ಜರಿಯಾಗಿ ಮದುವೆ ತಯಾರಿ ಹರ್ಷಿಕಾ ಮನೆಯಲ್ಲಿ ನಡೆಯುತ್ತಿದೆ. ಈ ಕುರಿತ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಹೇಳಿದ್ದಾರೆ.

    ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ. ಮುಂದಿನ ನಮ್ಮಿಬ್ಬರ ಕೊಡವ ಶೈಲಿಯಲ್ಲಿ ಮದುವೆ ಎಂದು ಖುಷಿಯಿಂದ ಭುವನ್ ಮಾತನಾಡಿದ್ದಾರೆ.

    ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ಕೊಡಗಿನ ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊದಲು ಪ್ರಪೋಸ್ ಮಾಡಿದ್ದು ಯಾರು? ಲವ್ ಸ್ಟೋರಿ ಬಿಚ್ಚಿಟ್ಟ ಹರ್ಷಿಕಾ-ಭುವನ್ ಜೋಡಿ

    ಮೊದಲು ಪ್ರಪೋಸ್ ಮಾಡಿದ್ದು ಯಾರು? ಲವ್ ಸ್ಟೋರಿ ಬಿಚ್ಚಿಟ್ಟ ಹರ್ಷಿಕಾ-ಭುವನ್ ಜೋಡಿ

    ಸ್ಯಾಂಡಲ್‌ವುಡ್ (Sandalwood) ಚಿಟ್ಟೆ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan) ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಇಬ್ಬರ ಮೊದಲ ಭೇಟಿಯಾಗಿದ್ದು, ಹೇಗೆ? ಯಾರ ಮೊದಲು ಪ್ರಪೋಸ್ (Prapose) ಮಾಡಿದ್ರು? ಇದೆಲ್ಲದರ ಬಗ್ಗೆ ಹೊಸ ಜೋಡಿ ಅಸಲಿ ಸಂಗತಿಯನ್ನ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:ಉರ್ಫಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಹೆಸರು ಬಹಿರಂಗ ಪಡಿಸಿದ ನಟಿ

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ (Harshika Poonacha) ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಹೇಳಿದ್ದಾರೆ.

    ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ. ಮುಂದಿನ ನಮ್ಮಿಬ್ಬರ ಕೊಡವ ಶೈಲಿಯಲ್ಲಿ ಮದುವೆ ಎಂದು ಖುಷಿಯಿಂದ ಭುವನ್ ಮಾತನಾಡಿದ್ದಾರೆ. ಇದನ್ನೂ ಓದಿ:ಉರ್ಫಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಹೆಸರು ಬಹಿರಂಗ ಪಡಿಸಿದ ನಟಿ

    ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದೇ ಆಗಸ್ಟ್ 24ಕ್ಕೆ ಕೊಡವ ಪದ್ಧತಿಯಂತೆ ಹರ್ಷಿಕಾ- ಭುವನ್ ಮದುವೆ

    ಇದೇ ಆಗಸ್ಟ್ 24ಕ್ಕೆ ಕೊಡವ ಪದ್ಧತಿಯಂತೆ ಹರ್ಷಿಕಾ- ಭುವನ್ ಮದುವೆ

    ಸ್ಯಾಂಡಲ್‌ವುಡ್ (Sandalwood) ಚಿಟ್ಟೆ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan Ponnanna) ಅವರು ಇದೇ ಆಗಸ್ಟ್ 24ರಂದು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಕೊಡಗಿನ ಜೋಡಿ ಗುಡ್ ನ್ಯೂಸ್ ಕೊಡ್ತಿದ್ದಾರೆ.

    harshika-poonacha-101391458

    ಚಿತ್ರರಂಗದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಒಬ್ಬರ ಹಿಂದೆ ಮತ್ತೊಂದು ಜೋಡಿ ಹಸೆಮಣೆ ಏರುತ್ತಿದ್ದಾರೆ. ಹರಿಪ್ರಿಯಾ-ವಸಿಷ್ಠ, ಅಭಿಷೇಕ್ ಅಂಬರೀಶ್- ಅವಿವಾ ಜೋಡಿ ನಂತರ ಹರ್ಷಿಕಾ-ಭುವನ್ ದಾಂಪತ್ಯ ಬದುಕಿಗೆ ಅಣಿಯಾಗುತ್ತಿದ್ದಾರೆ.

    ‘ಪಿಯುಸಿ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪರಿಚಿತರಾದ ನಟಿ ಹರ್ಷಿಕಾ ಪೂಣಚ್ಚ (Harshika Poonachcha) ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದರು. ತಮಸ್ಸು, ಜಾಕಿ ಚಿತ್ರದಲ್ಲಿ ಹರ್ಷಿಕಾ ಅದ್ಭುತವಾಗಿ ನಟಿಸಿದ್ದರು. ಕೊಡಗಿನ ಕುವರಿ ಹರ್ಷಿಕಾ ಅವರು ಸಾಲು ಸಾಲು ಸಿನಿಮಾಗಳ ಮೂಲಕ ಚಿತ್ರರಂಗದಲ್ಲಿ ಗಟ್ಟಿ ಸ್ಥಾನ ಗಿಟ್ಟಿಸಿಕೊಳ್ಳುವ ಸಂದರ್ಭದಲ್ಲಿ 2010ರಲ್ಲಿ ಭುವನ್ ಪೊನ್ನಣ್ಣ ಅವರು `ಜಸ್ಟ್ ಮಾತ್ ಮಾತಲ್ಲಿ’ ಚಿತ್ರದ ಮೂಲಕ ಎಂಟ್ರಿ ಕೊಟ್ಟರು. ಗಣೇಶ್ ನಟನೆಯ ಕೂಲ್ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಭುವನ್ ನಟಿಸಿದ್ರು. ಆದರೆ ಗುರುತಿಸುವಂತಹ ಪಾತ್ರ ಅವರಿಗೆ ಸಿಗಲೇ ಇಲ್ಲಾ. ಅದ್ಯಾವಾಗ ಸುದೀಪ್ ನಿರೂಪಣೆಯ ಬಿಗ್ ಬಾಸ್ ಶೋ ಮೂಲಕ ದೊಡ್ಮನೆಗೆ ಕಾಲಿಟ್ರೋ ಅಂದಿನಿಂದ ಕನ್ನಡಿಗರ ಕಣ್ಣಿಗೆ ಭುವನ್ ಗಮನ ಸೆಳೆದರು. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಹರ್ಷಿಕಾ- ಭುವನ್ ಒಂದೇ ಜಿಲ್ಲೆ ಕೊಡಗಿನವರಾಗಿದ್ದಾರೆ. ಆ ಆಪ್ತತೆಯೇ ಇಬ್ಬರನ್ನು ಲವ್ ರಿಂಗ್‌ಗೆ ಬೀಳುವಂತೆ ಮಾಡಿತ್ತು. ಹಲವು ವರ್ಷಗಳ ಗೆಳೆತನವೇ ಇಂದು ಮದುವೆಯೆಂಬ ಹೊಸ ಹೆಜ್ಜೆ ಇಡಲು ಸಾಕ್ಷಿಯಾಗಿದೆ. ಈ ಜೋಡಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಬ್ಬರೂ ಜೊತೆಯಾಗಿ ಸಮಾಜಮುಖಿ ಕಾರ್ಯಗಳನ್ನೂ ಮಾಡಿದ್ದಾರೆ. ಕೊವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರಿಗೆ ಅವರು ನೆರವು ನೀಡಿದ್ದರು. ಇಬ್ಬರ ನಡುವೆ ಪ್ರೀತಿ ಇದೆ ಎಂದು ಅನೇಕ ಬಾರಿ ಗಾಸಿಪ್ ಹಬ್ಬಿತ್ತು. ಆದರೆ ಆ ಕುರಿತು ಅವರು ಬಹಿರಂಗವಾಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಈಗ ಅವರಿಬ್ಬರು ವೈವಾಹಿಕ ಜೀವನ ಆರಂಭಿಸುವ ಸಿದ್ಧತೆಯಲಿದ್ದಾರೆ. ಎರಡೂ ಕುಟುಂಬಗಳು ಮದುವೆಗೆ ತಯಾರಿ ಮಾಡಿಕೊಳ್ಳುತ್ತಿವೆ. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಜುಲೈ 15ಕ್ಕೆ ಕೊಡಗಿನಲ್ಲಿ ಭುವನ್ ಮನೆಯ ಗೃಹಪ್ರವೇಶ ಸಮಾರಂಭ ನಡೆದಿದೆ. ಇದಾದ ಬಳಿಕ ಕೊಡವ (Kodava) ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ (Wedding) ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಸದ್ಯ ಈ ಜೋಡಿ, ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ಬೆಂಗ್ಳೂರಲ್ಲೇ ಇದ್ದು, ಸೇಫಾಗಿದ್ದೀನಿ: ಹರ್ಷಿಕಾ ಪೂಣಚ್ಚ

    ನಾನು ಬೆಂಗ್ಳೂರಲ್ಲೇ ಇದ್ದು, ಸೇಫಾಗಿದ್ದೀನಿ: ಹರ್ಷಿಕಾ ಪೂಣಚ್ಚ

    ಬೆಂಗಳೂರು: ನಾನು ಬೆಂಗಳೂರಲ್ಲಿಯೇ ಇದ್ದೀನಿ. ಆರಾಮಾಗಿದ್ದೀನಿ ಎಂದು ನಟಿ ಹರ್ಷಿಕಾ ಪೂಣಚ್ಚ ಸ್ಪಷ್ಟಪಡಿಸಿದ್ದಾರೆ.

    ವಿಡಿಯೋ ಮೂಲಕ ಲಂಡನ್ ಪ್ರವಾಸದ ಬಗ್ಗೆ ಮಾಹಿತಿ ನೀಡಿರುವ ನಟಿ, ಹೌದು ನಾನು ಲಂಡನ್ ಗೆ ಹೋಗಿದ್ದೆ. ಆದರೆ ಎರಡು ವಾರಗಳ ಹಿಂದೆನೆ ನಾನು ಅಲ್ಲಿಂದ ವಾಪಸ್ ಬಂದಿದ್ದೇನೆ. ಮತ್ತೆ ಅಲ್ಲಿಗೆ ಹೋಗಲಿಲ್ಲ. ಲಂಡನ್ ನನಗೆ ತುಂಬಾ ಇಷ್ಟವಾದ ಜಾಗವಾಗಿರುವುದರಿಂದ ಆಗಾಗ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುತ್ತೇನೆ. ಎಂದರು.

    ವಾರದ ಹಿಂದೆ ಅಲ್ಲಿ ನಾನು ಫೋಟೋಶೂಟ್ ಮಾಡಿಸಿದ್ದೆ ಅಷ್ಟೆ. ಆ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತೇನೆ. ಸದ್ಯ ನಾನು ಬೆಂಗಳೂರಿನಲ್ಲಿಯೇ ಇದ್ದೇನೆ. ನಾನು ತುಂಬಾನೇ ಸೇಫಾಗಿದ್ದೇನೆ. ಬೆಂಗಳೂರಿನಲ್ಲಿಯೇ ಇದ್ದೇನೆ ಎಂದು ಹೇಳಿದ್ದಾರೆ.

    ಹರ್ಷಿಕಾ ಅವರು 8 ದಿನಗಳ ಹಿಂದೆಯಷ್ಟೇ ಲಂಡನ್ ಅಡ್ಡಾಡಿ ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಿಗೆ ಬಂದಿದ್ದರು. ಲಂಡನ್‍ನ ಬೀದಿ ಬೀದಿಯಲ್ಲಿಯೂ ಸುತ್ತಾಡಿದ್ದು, ಲಂಡನ್‍ನಿಂದ ಬಂದ ಮೇಲೆ ನಟಿ ಕ್ವಾರಂಟೈನ್ ಕೂಡ ಆಗಿಲ್ಲ. ಬ್ರಿಟನ್‍ನಲ್ಲಿ ಕೊರೊನಾ ಹೊಸ ತಳಿಯಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ನಟಿ ಹರ್ಷಿಕಾ ಪೂಣಚ್ಚ ಹೋಂ ಕ್ವಾರಂಟೈನ್‍ಗೆ ಒಳಗಾಗುತ್ತಾರಾ ಎಂಬ ಪ್ರಶ್ನೆ ಎದ್ದಿತ್ತು.

    ಭೋಜ್‍ಪುರಿ ಚಿತ್ರದ ಶೂಟಿಂಗ್‍ಗಾಗಿ ತೆರಳಿದ್ದ ಹರ್ಷಿಕಾ ಚಿತ್ರೀಕರಣಕ್ಕಾಗಿ ಲಂಡನ್‍ನಲ್ಲಿ ಬೀಡು ಬಿಟ್ಟಿದ್ದರು. ನವೆಂಬರ್-ಡಿಸೆಂಬರ್‍ನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಪವನ್ ಸಿಂಗ್ ಈ ಸಿನಿಮಾ ಹೀರೋ ಆಗಿ ನಟಿಸಿದ್ದಾರೆ. ಹರ್ಷಿಕಾ ಅಭಿನಯದ ಮೊದಲು ಭೋಜ್‍ಪುರಿ ಸಿನಿಮಾವನ್ನು ಪ್ರೇಮಾಂಶು ಸಿಂಗ್ ನಿರ್ದೇಶನ ಮಾಡಿದ್ದಾರೆ.

  • ಮನೆಯಲ್ಲೇ ಇದ್ದು ಹೀರೋಗಳಾಗಿ: ಹರ್ಷಿಕಾ, ಭುವನ್ ಮನವಿ

    ಮನೆಯಲ್ಲೇ ಇದ್ದು ಹೀರೋಗಳಾಗಿ: ಹರ್ಷಿಕಾ, ಭುವನ್ ಮನವಿ

    ಮಡಿಕೇರಿ: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದೆ. ಆದರೂ ಕೆಲವರು ಮನೆಯಿಂದ ಹೊರಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ವಿರಾಜಪೇಟೆ ತಾಲೂಕಿನ ಕೊಮ್ಮೆತೂಡು ಗ್ರಾಮದಲ್ಲಿರುವ ಹರ್ಷಿಕಾ ಪೂಣಚ್ಚ ಅವರ ಮನೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಮನೆಯಲ್ಲೇ ಇದ್ದು ಹೀರೋಗಳಾಗಿ ಎಂದು ಹೇಳಿದ್ದಾರೆ.

    ಮನವಿಯೇನು?:
    ದಯವಿಟ್ಟು ಕೊಡಗಿನ ಜನತೆ ಯಾರೂ ಮನೆಯಿಂದ ಹೊರಗೆ ಹೋಗಬೇಡಿ. ಸರ್ಕಾರ, ಕಾನೂನು ವಿವಿಧ ಯೋಜನೆಗಳನ್ನು ನಮ್ಮ ಜನರಿಗೆ ನೀಡಿದ್ದಾರೆ. ಇದು ನಮಗೆ ಒಳ್ಳೆಯದು ಅಗಬೇಕು ಎಂಬ ಉದ್ದೇಶದಿಂದ ಮಾಡಿದ್ದಾರೆ. ಜನಸಾಮಾನ್ಯರು ಇದನ್ನ ಅರ್ಥ ಮಾಡಿಕೊಳ್ಳುವ ಮನಸ್ಸು ಮಾಡಬೇಕು. ಗ್ರಾಮೀಣ ಭಾಗದಲ್ಲಿ ಸ್ವಯಂಪ್ರೇರಿತರಾಗಿ ಬೀದಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.

    ನಗರದ ಜನತೆ ಮಾತ್ರ ಈ ಕೊರೊನಾ ವೈರಸ್ ಗೂ ನಮಗೂ ಯಾವುದೇ ಸಂಬಂಧ ಇಲ್ಲ ಅನ್ನೋ ಹಾಗೆ ವರ್ತಸುತ್ತಿದ್ದಾರೆ. ದಯವಿಟ್ಟು ಮನೆಯಿಂದ ಯಾರು ಹೊರಗೆ ಬರಬೇಡಿ. ಮೊದಲು ನಿಮ್ಮ ಸೇಫ್ ಮುಖ್ಯ. ನಾವುಗಳು ಅಷ್ಟೇ ಮನೆಯಿಂದ ಹೊರಗೆ ಹೋಗುತ್ತಿಲ್ಲ. ಯಾವಾಗ್ಲೂ ಶೂಟಿಂಗ್ ಅಂತ ಬ್ಯುಸಿ ಇರುತ್ತಿದ್ದೆವು. ಆದರೆ ಈಗ ಈ ಸಮಸ್ಯೆಯಿಂದ ಮನೆಯಲ್ಲೇ ಇದ್ದೇವೆ ಎಂದು ತಿಳಿಸಿದ್ದಾರೆ.

    ಒಂದು ರೀತಿಯಲ್ಲಿ ಮನೆಯಲ್ಲಿ ಇರುವುದು ಖುಷಿಯಾಗುತ್ತಿದೆ. ತಂದೆ-ತಾಯಿ ಜೊತೆ ಸಮಯ ಕಳೆಯುತ್ತಾ ಇದ್ದೀನಿ. ಮನೆಯಲ್ಲೇ ಕೆಲಸ ಮಾಡುತ್ತೇವೆ. ನಾವು ಮತ್ತು ನಮ್ಮ ಕುಟುಂಬ ಸದಸ್ಯರೊಂದಿಗೆ ಖುಷಿಯಿಂದ ಮನೆಯಲ್ಲೇ ಇದ್ದೀವಿ. ಹಾಗೆಯೇ ತಾವು ಕೂಡ ಇರಿ. ಮನೆಯವರೊಂದಿಗೆ ನೀವು ಖುಷಿಯಿಂದ ಕೆಲಸ ಊಟ ಎಲ್ಲಾ ಮಾಡಿಕೊಂಡು ಮನೆಯ ಹೀರೋಗಳಾಗಿ ಇರಬಹುದು ಎಂದು ಇಬ್ಬರೂ ತಿಳಿಸಿದ್ದಾರೆ.