Tag: Harshika Poonacha

  • ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್

    ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್

    ಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಭುವನ್ ಪೊನ್ನಣ್ಣ (Bhuvan Ponnanna) ದಂಪತಿಯ ಮುದ್ದಾದ ಮಗಳು ತ್ರಿದೇವಿ ಪೊನ್ನಕ್ಕ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡಿದ್ದಾರೆ. ಈ ಖುಷಿಯನ್ನು ತಮ್ಮ ಜಾಲತಾಣದಲ್ಲಿ ಹರ್ಷಿಕಾ ಹಾಗೂ ಭುವನ್ ಹಂಚಿಕೊಂಡಿದ್ದಾರೆ.

    ನಟ ಭುವನ್ ಹಾಗೂ ನಟಿ ಹರ್ಷಿಕಾ ತಮ್ಮ ಕಂದಮ್ಮನ ಜೊತೆ ಎರಡು ವಾರಗಳಲ್ಲಿ ಮೂರು ದೇಶ ಸುತ್ತಿದ್ದಾರೆ. ಎಂಟು ತಿಂಗಳ ತ್ರಿದೇವಿ (Tridevi) ವಿಯೆಟ್ನಾಂ, ಶ್ರೀಲಂಕಾ, ಥೈಲ್ಯಾಂಡ್ ಸುತ್ತಾಡಿ ಬಂದಿದ್ದಾಳೆ.

    ವಿದೇಶ ಸುತ್ತಿದ ಸುಂದರ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿದ್ದಾರೆ. ಮುದ್ದಾದ ಮಗು ನೋಡಿ ನೆಟ್ಟಿಗರು, ಆಪ್ತರು ಶುಭ ಹಾರೈಕೆ ತಿಳಿಸಿದ್ದಾರೆ.

  • ರಶ್ಮಿಕಾ ಬೈ ಮಿಸ್‌ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ

    ರಶ್ಮಿಕಾ ಬೈ ಮಿಸ್‌ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ

    ಬೆಂಗಳೂರು: ರಶ್ಮಿಕಾ ಮಂದಣ್ಣ (Rashmika Mandanna) ಹೇಳಿಕೆ ವಿವಾದ ಅಂತ ಹೇಳಲ್ಲ. ಅವರು ಗೊತ್ತಿಲ್ಲದೇ ಬೈ ಮಿಸ್ ಆಗಿ ಹೇಳಿರಬೇಕು ಕ್ಷಮಿಸಿಬಿಡೋಣ ಅಂತ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹೇಳಿದ್ದಾರೆ.

    ʻಕೊಡವ ಸಮುದಾಯದಿಂದ (Kodava community) ಇಲ್ಲಿಯವರೆಗೆ ಯಾರೂ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ, ನಾನೇ ಫಸ್ಟ್ ಅನ್ನಿಸುತ್ತೆʼ ಎಂಬ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಶ್ಮಿಕಾ ಮಂದಣ್ಣ ಹೇಳಿಕೆಯನ್ನ ಕ್ಷಮಿಸಿಬಿಡೋಣ. ರಶ್ಮಿಕಾ ಮಂದಣ್ಣ ಬಗ್ಗೆ ನೆಗೆಟಿವ್ ಮಾತಾಡೋದು ಬೇಡ. ನಾನಂತೂ ರಶ್ಮಿಕಾ ಅವರ ಬಗ್ಗೆ ನೆಗೆಟಿವ್ ಮಾತಾಡಲ್ಲ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್ – ರಶ್ಮಿಕಾ ಮತ್ತೊಂದು ಯಡವಟ್ಟು 

    ರಶ್ಮಿಕಾ ಮಂದಣ್ಣ ಹೇಳಿಕೆ ವಿವಾದ ಅಂತ ಹೇಳಲ್ಲ. ಅವರು ಗೊತ್ತಿಲ್ಲದೇ ಬೈ ಮಿಸ್ ಆಗಿ ಹೇಳಿರಬೇಕು. ತೆಲುಗು, ತಮಿಳು, ಬಾಲಿವುಡ್ ಅಲ್ಲಿ ಹೆಸರು ಮಾಡಿರುವ ಮೊದಲ ನಟಿ ಅಂತ ಹೇಳೋಕೆ ಹೊರಟಿರಬೇಕು. ರಶ್ಮಿಕಾ ಮಂದಣ್ಣ ಬಗ್ಗೆ ನನಗೆ ಗೌರವವಿದೆ. ಅವರು, ಒಳ್ಳೆ ಹೆಸರು ಮಾಡಿದ್ದಾರೆ. ಆದ್ರೆ ಬಾಲಿವುಡ್ ಅಲ್ಲೂ ಅವರೇ ಮೊದಲಲ್ಲ ಅಂತಲೂ ಹೇಳಿದ್ದಾರೆ. ಇದನ್ನೂ ಓದಿ: ಫಾರ್ಮ್‌ ಹೌಸ್‌ನಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ದರ್ಶನ್

    ನಮ್ಮ ಕೊಡವ ಸಮುದಾಯ ಸಣ್ಣ ಸಮುದಾಯ. ಆದ್ರೇ ಎಲ್ಲಾ ರಂಗದಲ್ಲೂ ನಮ್ಮ ಸಮುದಾಯದವರಿದ್ದಾರೆ. ಸೈನ್ಯ, ಸಿನಿಮಾ, ರಾಜಕೀಯ ಎಲ್ಲಾ ರಂಗದಲ್ಲೂ ನಮ್ಮ ಸಮುದಾಯದವರಿದ್ದಾರೆ. ಕೊಡವರಲ್ಲಿ ಗಂಡು ಹೆಣ್ಣು ಎನ್ನುವ ಬೇಧವಿಲ್ಲ ಎಂದಿದ್ದಾರೆ.

    ರಶ್ಮಿಕಾ ಹೇಳಿದ್ದೇನು?
    ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾತನಾಡುತ್ತಾ, ಕೊಡವ ಸಮುದಾಯದಿಂದ ಇಲ್ಲಿಯವರೆಗೆ ಯಾರೂ ಸಿನಿಮಾ ಇಂಡಸ್ಟ್ರಿಗೆ (Cinema Industry) ಬಂದಿಲ್ಲ. ಸಿನಿಮಾ ಇಂಡಸ್ಟ್ರಿಗೆ ನಟಿಯಾಗಿ ಬಂದಿರೋದು ನಾನೇ ಫಸ್ಟ್ ಅನ್ನಿಸುತ್ತೆ ಎಂದು ಹೇಳಿದ್ದಾರೆ. ಈ ವೇಳೆ ಸಂದರ್ಶಕಿ ನೀವೇ ಮೊದಲು ಎಂದು ಜನ ನಿರ್ಧರಿಸಿದ್ದಾರಾ ಎಂದು ಕೇಳಿದಾಗ, ಖಂಡಿತ ಕೊಡವ ಸಮುದಾಯದವರು ಇದನ್ನು ನಿರ್ಧರಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ರೀತಿ ಹೇಳಿಕೆ ನೀಡುವ ಮೂಲಕ ನಟಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈಗಾಗಲೇ ಕೊಡವ ಸಮುದಾಯದಿಂದ ಸಾಕಷ್ಟು ನಾಯಕಿಯರು ಚಿತ್ರರಂಗಕ್ಕೆ ಬಂದಿದ್ದು, ಖ್ಯಾತಿಯನ್ನು ಗಳಿಸಿದ್ದಾರೆ. ನಟಿ ಪ್ರೇಮ, ನಿಧಿ ಸುಬ್ಬಯ್ಯಾ, ಹರ್ಷಿಕ ಪೂಣಚ್ಚ, ಶುಭ್ರ ಅಯ್ಯಪ್ಪ ಸೇರಿ ಹಲವರು ಬಂದಿದ್ದು, ಹೆಸರು ಮಾಡಿದ್ದಾರೆ. ಇವರೆಲ್ಲರಿಗೂ ಮುನ್ನ ನಟಿ ಪ್ರೇಮ ಹಲವು ಭಾಷೆಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: `ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು’…ಅಮ್ಮನಾಗುತ್ತಿರುವ ನಟಿ ಭಾವನಾ ಮೊದಲ ಮಾತು

  • ಹರ್ಷಿಕಾ ಪೂಣಚ್ಚ ಮಗಳ ಹೆಸರು ರಿವೀಲ್ – ದೇವಿ ಹೆಸರಿಟ್ಟ ದಂಪತಿ

    ಹರ್ಷಿಕಾ ಪೂಣಚ್ಚ ಮಗಳ ಹೆಸರು ರಿವೀಲ್ – ದೇವಿ ಹೆಸರಿಟ್ಟ ದಂಪತಿ

    – ಕೊಡವ ಸಂಪ್ರದಾಯದಂತೆ ನಾಮಕರಣ

    ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಬಿಗ್ ಬಾಸ್ ಸೀಸನ್ 4ರ ಸ್ಪರ್ಧಿ ಭುವನ್ ಪೊನ್ನಣ್ಣ (Bhuvan Ponnanna) ದಂಪತಿ ಕೊಡವ ಸಂಪ್ರದಾಯದಂತೆ ಇಂದು ವಿರಾಜಪೇಟೆಯಲ್ಲಿ ಮುದ್ದು ಮಗಳ ನಾಮಕರಣ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಆಧುನಿಕ ಶೈಲಿಯ ಹೆಸರನ್ನಿಡುವ ಈ ಕಾಲದಲ್ಲಿ ಹರ್ಷಿಕಾ-ಭುವನ್ ಮಗಳಿಗೆ ವಿಭಿನ್ನವಾಗಿ ದೇವಿಯ ಹೆಸರನ್ನಿಟ್ಟಿದ್ದಾರೆ.

    ಹರ್ಷಿಕಾ-ಭುವನ್ ದಂಪತಿ ಮದುವೆ, ಸೀಮಂತ ಹೀಗೆ ಪ್ರತಿಯೊಂದು ಕಾರ್ಯಕ್ರಮವನ್ನೂ ಸಾಂಪ್ರದಾಯಿಕ ಶೈಲಿಯಲ್ಲೇ ಮಾಡಿಕೊಂಡು ಬಂದಿದ್ದರು. ಇದೀಗ ನವರಾತ್ರಿ ಮೊದಲ ದಿನ ಜನಿಸಿದ ಮಗಳಿಗೆ ‘ತ್ರಿದೇವಿ ಪೊನ್ನಕ್ಕ’ (Tridevi Ponnakkaah) ಎಂದು ಸಾಂಪ್ರದಾಯಿಕವಾಗಿ ನಾಮಕರಣ ಮಾಡಿದ್ದಾರೆ. ಮಗಳೊಂದಿಗಿನ ಫೋಟೋ ಹಂಚಿಕೊಳ್ಳುವ ಮೂಲಕ ಮಗಳ ಹೆಸರನ್ನು ದಂಪತಿ ರಿವೀಲ್ ಮಾಡಿದ್ದಾರೆ. ಕೊಡವ ಶೈಲಿಯಲ್ಲೇ ಮಗುವಿಗೆ ಉಡುಪನ್ನು ಧರಿಸಿದ್ದು ವಿಶೇಷವಾಗಿತ್ತು. ನಾಮಕರಣ ಕಾರ್ಯಕ್ರಮದಲ್ಲಿ ದಂಪತಿಯ ಕುಟುಂಬಸ್ಥರು, ಸಿನಿಮಾ ಕಲಾವಿದರು ಹಾಗೂ ಸ್ನೇಹಿತರು ಭಾಗಿಯಾಗಿದ್ದಾರೆ. ಇದನ್ನೂ ಓದಿ: 17 ವರ್ಷದ ಬಳಿಕ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ಅಕ್ಷಯ್ ಕುಮಾರ್, ಸೈಫ್ ಅಲಿ ಖಾನ್

    ಗರ್ಭಿಣಿಯಾಗಿದ್ದ ಸಂದರ್ಭದಲ್ಲೂ ಹರ್ಷಿಕಾ ಪೂಣಚ್ಚ ವೆಸ್ಟರ್ನ್ ಸ್ಟೈಲ್ ಅನುಸರಿಸದೇ ಸಾಂಪ್ರದಾಯಿಕವಾಗಿ ಕೊಡವ ಶೈಲಿಯಲ್ಲಿಯೇ ಫೋಟೋಶೂಟ್ ಮಾಡಿಸಿಕೊಂಡು ಗಮನಸೆಳೆದಿದ್ದರು. ಇವರ ಸೀಮಂತ ಕಾರ್ಯಕ್ರಮವನ್ನು ಸಹ ಅದ್ಧೂರಿಯಾಗಿ ನೆರವೇರಿಸಲಾಗಿತ್ತು. 2024ರ ಸೆಪ್ಟೆಂಬರ್ ತಿಂಗಳಲ್ಲಿ ಹರ್ಷಿಕಾ ಮುದ್ದಾದ ಹೆಣ್ಣುಮಗುವಿಗೆ ಜನ್ಮಕೊಟ್ಟರು.‌ ಇದನ್ನೂ ಓದಿ: ಕ್ರಿಕೆಟ್‌ ಲೋಕದ ಕಿಂಗ್‌ ವಿರಾಟ್‌ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು?

  • ‘ಕಾಲನಾಗಿಣಿ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

    ‘ಕಾಲನಾಗಿಣಿ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

    ಸ್ಯಾಂಡಲ್‌ವುಡ್ ಚಿಟ್ಟೆ ಹರ್ಷಿಕಾ ಪೂಣಚ್ಚ (Harshika Poonacha) ಕಾಲನಾಗಿಣಿಯಾಗಿ (Kaalanaagini) ಮಿಂಚಲು ರೆಡಿಯಾಗಿದ್ದಾರೆ. ಇದೀಗ ಹರ್ಷಿಕಾ ಪಾತ್ರದ ಪೋಸ್ಟರ್ ಅನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಇದನ್ನೂ ಓದಿ:ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ಶಿವಣ್ಣನ ‘A for ಆನಂದ್’ ಸಿನಿಮಾ


    ಮೇ 1ರಂದು ಹರ್ಷಿಕಾ ಪೂಣಚ್ಚ ಹುಟ್ಟುಹಬ್ಬದ ಹಿನ್ನೆಲೆ ‘ಕಾಲನಾಗಿಣಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ರಿಲೀಸ್ ಮಾಡಿ ಚಿತ್ರತಂಡಕ್ಕೆ ಬೆಂಬಲಿಸಿದ್ದಾರೆ. ಇದನ್ನೂ ಓದಿ:ಕನ್ನಡ.. ಕನ್ನಡ ಇದಕ್ಕೇನೇ ಭಯೋತ್ಪಾದಕ ದಾಳಿ ನಡೆದಿದ್ದು – ವಿವಾದ ಮೈಮೇಲೆಳೆದುಕೊಂಡ ಸೋನು ನಿಗಮ್

    ‘ಕಾಲನಾಗಿಣಿ’ ಸಿನಿಮಾದಲ್ಲಿ ನಾಗಿಣಿ ಮತ್ತು ರಾಣಿ ಎರಡು ರೀತಿಯ ಶೇಡ್‌ನಲ್ಲಿ ಹರ್ಷಿಕಾ ನಟಿಸಲಿದ್ದಾರೆ. ಈ ಸಿನಿಮಾಗೆ ವಿಶ್ರುತ್ ನಾಯಕ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಮಧುರಾ ಮೂವೀಸ್ ಬ್ಯಾನರ್ ಅಡಿ ಈ ಚಿತ್ರ ನಿರ್ಮಾಣ ಆಗ್ತಿದೆ.

    ಹರ್ಷಿಕಾ ಜೊತೆ ಅರ್ಜುನ್ ವೇದಾಂತ್, ಅವಿನಾಶ್, ಶರತ್ ಲೋಹಿತಾಶ್ವ, ಉಗ್ರಂ ಮಂಜು, ವಿಜಯ್ ಚೆಂಡೂರ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.

  • ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ

    ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ

    ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಅವರು ಚೊಚ್ಚಲ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಹರ್ಷಿಕಾ ಮತ್ತು ಭುವನ್ (Bhuvan) ಜೋಡಿ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಆರೋಪ – ಚೆಮ್ಮನೂರ್‌ ಮಾಲೀಕ ಅರೆಸ್ಟ್‌

    ಮಗು ಜನಿಸಿದ ಬಳಿಕ ಕೊಲ್ಲೂರಿಗೆ ಭೇಟಿ ನೀಡುತ್ತೇನೆ ಎಂದು ಹರ್ಷಿಕಾ ದಂಪತಿ ಹರಿಸಿಕೊಂಡಿದ್ದರು. ಅದರಂತೆ ಮಗಳ ಜೊತೆ ಮೊದಲ ಬಾರಿಗೆ ಕೊಲ್ಲೂರು ದೇಗುಲಕ್ಕೆ ಭೇಟಿ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಇನ್ನೂ 2023ರ ಆಗಸ್ಟ್ 24ರಂದು ಕೊಡಗಿನಲ್ಲಿ ಹರ್ಷಿಕಾ ಮತ್ತು ಭುವನ್ ಹೊಸ ಬಾಳಿಗೆ ಕಾಲಿಟ್ಟರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು. ಈ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪೂಜಾ ಗಾಂಧಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

    ಕಳೆದ ವರ್ಷ ಅಕ್ಟೋಬರ್ 3ರಂದು ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದರು. ಮಗಳ ಪಾಲನೆಯಲ್ಲಿ ಬ್ಯುಸಿಯಿರುವ ಹರ್ಷಿಕಾ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

  • ಹರ್ಷಿಕಾ ಪೂಣಚ್ಚಗೆ ಹೆಣ್ಣು ಮಗು ಜನನ

    ಹರ್ಷಿಕಾ ಪೂಣಚ್ಚಗೆ ಹೆಣ್ಣು ಮಗು ಜನನ

    ಸ್ಯಾಂಡಲ್‌ವುಡ್‌ (Sandalwood) ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಪತಿ ಭುವನ್‌ ಪೊನ್ನಣ್ಣ (Bhuvann Ponnanna) ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ಗುರುವಾರ ಬೆಳಗಿನ ಜಾವ 3 ಗಂಟೆಗೆ ಹರ್ಷಿಕಾ ಹಾಗೂ ಭುವನ್‌ ಪೊನ್ನಣ್ಣ ಜೋಡಿ ಹೆಣ್ಣು ಮಗುವಿನ ಆಗಮನವಾಗಿದೆ. ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಹೆಣ್ಣು ಮಗುವಿನ ಆಗಮನದಿಂದ ಸಂತಸಗೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರ್ಷಿಕಾ ಜನ್ಮ ನೀಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಪೊನ್ನಣ್ಣ, ಎಲ್ಲರಿಗೂ ನಮಸ್ಕಾರ, ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ. ಹರ್ಷಿ ಮತ್ತು ಮಗಳು ಆರೋಗ್ಯವಾಗಿದ್ದಾರೆ. ನನ್ನ ಪ್ರಕಾರ ಮಗಳು ಹರ್ಷಿಕಾಳಂತೆ ಇದ್ದರೆ ಅವಳ ಪ್ರಕಾರ ಮಗು ನನ್ನ ಕಾಪಿ ಎನ್ನುತ್ತಿದ್ದಾಳೆ.ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

  • ಹರ್ಷಿಕಾ ಬೇಬಿ ಶವರ್ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಸ್

    ಹರ್ಷಿಕಾ ಬೇಬಿ ಶವರ್ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಸ್

    ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ(Harshika Poonacha) ಅವರು ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಇದೀಗ ಅಮ್ಮನಾಗ್ತಿರುವ ನಟಿಗೆ ಗೋಲ್ಡನ್ ಸ್ಟಾರ್ ಗಣೇಶ್ (Goldenstar Ganesh) ದಂಪತಿ ಸರ್ಪ್ರೈಸ್ ಬೇಬಿ ಶವರ್ ಪಾರ್ಟಿ ಆಯೋಜಿಸಿದ್ದಾರೆ. ಬೇಬಿ ಶವರ್ ಪಾರ್ಟಿಯಲ್ಲಿ ನಟಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

    8 ತಿಂಗಳು ತುಂಬು ಗರ್ಭಿಣಿ ಆಗಿರುವ ಹರ್ಷಿಕಾಗೆ ಬೇಬಿ ಶವರ್ ಪಾರ್ಟಿ ಆಯೋಜಿಸಿ ಗಣೇಶ್ ಮತ್ತು ಶಿಲ್ಪಾ ದಂಪತಿ‌ ಸರ್ಪ್ರೈಸ್ ನೀಡಿದ್ದಾರೆ.

    ಈ ಸಂಭ್ರಮದಲ್ಲಿ ನಟಿ ಶರಣ್ಯಾ ಶೆಟ್ಟಿ, ಅಮೂಲ್ಯ ಜಗದೀಶ್ ದಂಪತಿ, ಮಾಲಾಶ್ರೀ, ಆರಾಧನಾ, ಪ್ರಿಯಾಂಕಾ ಉಪೇಂದ್ರ, ಅನುಪ್ರಭಾಕರ್, ಹಿರಿಯ ನಟಿ ಶ್ರುತಿ ಮತ್ತು ಅವರ ಪುತ್ರಿ ಗೌರಿ ಸೇರಿದಂತೆ ಅನೇಕರು ಭಾಗಿಯಾಗಿ ಹರ್ಷಿಕಾಗೆ ವಿಶ್ ಮಾಡಿದ್ದಾರೆ.

    ಇನ್ನೂ ಅಕ್ಟೋಬರ್‌ನಲ್ಲಿ ಹರ್ಷಿಕಾ ಮತ್ತು ಭುವನ್ ಜೋಡಿ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಪುಟ್ಟ ಕಂದಮ್ಮನನ್ನು ನೋಡಲು ಎದುರು ನೋಡುತ್ತಿದ್ದಾರೆ.

    ಹಲವು ವರ್ಷಗಳು ಪ್ರೀತಿಸಿ ಕಳೆದ ವರ್ಷ ಆಗಸ್ಟ್‌ನಲ್ಲಿ ಹರ್ಷಿಕಾ ಮತ್ತು ಭುವನ್ ಹುಟ್ಟೂರಿನಲ್ಲಿ ಮದುವೆಯಾದರು. ಇದನ್ನೂ ಓದಿ:Bigg Boss Kannada 11: ಸ್ವರ್ಗ, ನರಕದ ಪಾಠ ಮಾಡಿದ ಸುದೀಪ್

    ಈ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪೂಜಾ ಗಾಂಧಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕರು ಭಾಗಿಯಾಗಿ ನವಜೋಡಿಗೆ ಶುಭಕೋರಿದ್ದರು. ಇದನ್ನೂ ಓದಿ:ತೆಲುಗಿನತ್ತ ರವೀನಾ ಟಂಡನ್- ವಿಲನ್ ಆದ ‘ಕೆಜಿಎಫ್ 2’ ನಟಿ

    ಅಂದಹಾಗೆ, ಭುವನ್ ನಟನೆಯ ಹೊಸ ಚಿತ್ರಕ್ಕೆ ಹರ್ಷಿಕಾ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಪತಿ ಸಿನಿಮಾವನ್ನು ನಟಿಯೇ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

  • ಪ್ರೆಗ್ನೆನ್ಸಿ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಹರ್ಷಿಕಾ ಪೂಣಚ್ಚ

    ಪ್ರೆಗ್ನೆನ್ಸಿ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಹರ್ಷಿಕಾ ಪೂಣಚ್ಚ

    ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ (Harshika Poonacha) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಹೊಸ ಬೇಬಿ ಬಂಪ್ (Baby Bump) ಫೋಟೋಶೂಟ್‌ವೊಂದನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ನಟಿ ಮುದ್ದಾಗಿ ಪೋಸ್ ನೀಡಿದ್ದಾರೆ. ಈ ಫೋಟೋಸ್ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ಸಹಾಯಕ ನಿರ್ದೇಶಕ ನಿಧನ

    ನೇರಳೆ ಬಣ್ಣದ ಸೀರೆಯುಟ್ಟು ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್‌ನಲ್ಲಿ ಮಿರ ಮಿರ ಎಂದು ಮಿಂಚಿದ್ದಾರೆ. ಫೋಟೋದಲ್ಲಿ ತಾಯ್ತನದ ಕಳೆ ಎದ್ದು ಕಾಣುತ್ತಿದೆ. ನಟಿಯ ಬ್ಯಾಕ್ ಟು ಬ್ಯಾಕ್ ಬೇಬಿ ಬಂಪ್ ಫೋಟೋಶೂಟ್‌ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

    ಹರ್ಷಿಕಾ ಮತ್ತು ಭುವನ್ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಎದುರು ನೋಡ್ತಿದ್ದಾರೆ. ಚೊಚ್ಚಲ ಮಗು ಆಗಮನಕ್ಕೆ ದಿನಗಣನೆ ಶುರುವಾಗಿದ್ದು, ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದಾರೆ. ಇದನ್ನೂ ಓದಿ:ರಣ್‌ವೀರ್ ಸಿಂಗ್ ಜೊತೆ ಹೆಜ್ಜೆ ಹಾಕಲಿದ್ದಾರೆ ನಾಗಚೈತನ್ಯ ಭಾವಿ ಪತ್ನಿ

    ಜು.2ರಂದು ಕೊಡಗು ಶೈಲಿಯಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ತಾಯಿಯಾಗುತ್ತಿರುವ ಗುಡ್ ನ್ಯೂಸ್ ಅನ್ನು ನಟಿ ಹಂಚಿಕೊಂಡಿದ್ದರು. ಇಡೀ ಕುಟುಂಬ ಈ ಫೋಟೋಶೂಟ್‌ನಲ್ಲಿ ಭಾಗಿಯಾಗಿತ್ತು.

    ಅಂದಹಾಗೆ, ಹಲವು ವರ್ಷಗಳು ಪ್ರೀತಿಸಿ, ಆ.24ರಂದು ಹರ್ಷಿಕಾ ಮತ್ತು ಭುವನ್ ಜೋಡಿ ಹಸೆಮಣೆ ಏರಿದರು. ಹುಟ್ಟೂರು ಕೊಡಗಿನಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಮದುವೆಗೆ ಪೂಜಾ ಗಾಂಧಿ, ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.

    ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ, ಪತಿ ಭುವನ್ (Actor Bhuvan) ನಟಿಸಲಿರುವ ಮುಂಬರುವ ಚಿತ್ರಕ್ಕೆ ಹರ್ಷಿಕಾ ಅವರೇ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಸದ್ಯ ಶೂಟಿಂಗ್ ಕೂಡ ಭರದಿಂದ ನಡೆಯುತ್ತಿದೆ.

  • ಸಿಹಿಸುದ್ದಿ ಕೊಟ್ಟ ನಟಿ- ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ ದಂಪತಿ

    ಸಿಹಿಸುದ್ದಿ ಕೊಟ್ಟ ನಟಿ- ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ ದಂಪತಿ

    ನ್ನಡದ ಚಿತ್ರರಂಗದ ಸ್ಟಾರ್ ದಂಪತಿ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ಪೊನ್ನಣ್ಣ (Bhuvan Ponnanna) ಇದೀಗ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕೊಡವ ಸಂಪ್ರದಾಯದ ಉಡುಗೆಯಲ್ಲೇ ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿರುವ ದಂಪತಿ ಮಗುವಿನ ಆಗಮನದ ಸುದ್ದಿ ಘೋಷಿಸಿದ್ದಾರೆ. ಇದನ್ನೂ ಓದಿ:ದರ್ಶನ್ ಪ್ರಕರಣಕ್ಕೆ ಪರೋಕ್ಷವಾಗಿ ಸುಮಲತಾ ಪ್ರತಿಕ್ರಿಯೆ

    ಇದೇ ಅಕ್ಟೋಬರ್‌ನಲ್ಲಿ ಮಗು ಬರಲಿರುವ ಸಂತಸದಲ್ಲಿದ್ದಾರೆ ಹರ್ಷಿಕಾ ದಂಪತಿ. ಬಹುಕಾಲದ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಕಳೆದ ವರ್ಷ ಆಗಸ್ಟ್ 24ರಂದು ಕೊಡಗಿನಲ್ಲೇ ಅವರ ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದರು. ಇದೀಗ ವರ್ಷದೊಳಗೆ ಮಗು ಆಗಮಿಸುವ ಸುದ್ದಿ ಕೊಟ್ಟಿದ್ದಾರೆ.


    ಕೊಡವ ಸಂಪ್ರದಾಯದ ಹಳ್ಳಿ ಮನೆಯಲ್ಲಿ ಕ್ಲಾಸಿಕ್ ಶೈಲಿಯಲ್ಲಿ ದಂಪತಿ ಫೋಟೋಶೂಟ್ ಮಾಡಿಸಿದ್ದಾರೆ. ಇಡೀ ಕುಟುಂಬ ಅದೇ ಶೈಲಿಯಲ್ಲೇ ಕಂಗೊಳಿಸಿದೆ. ಕಪ್ಪು ಮಿಶ್ರಿತ ಬ್ರೌನ್ ಕಲರ್ ಕೊಡವ ಶೈಲಿಯ ಸೀರೆ ಧರಿಸಿರುವ ಹರ್ಷಿಕಾ ಬೇಬಿ ಬಂಪ್ ಪ್ರದರ್ಶಿಸಿದ್ದಾರೆ. ಇನ್ನು ತಂದೆಯಾಗುತ್ತಿರುವ ಭುವನ್ ಪೊನ್ನಣ್ಣ ಕೊಡವ ಸಂಪ್ರದಾಯದ ಕಪ್ಪು ಕೋಟ್ ಧರಿಸಿ-ತಲೆಗೆ ಪೇಟಾ ಧರಿಸಿ ಕೈಯಲ್ಲಿ ಬಂದೂಕು ಹಿಡಿದು ಗರ್ಭಿಣಿ ಪತ್ನಿ ಜೊತೆ ನಿಂತಿದ್ದಾರೆ.

    ಮದುವೆ ಬಳಿಕ ಹರ್ಷಿಕಾ ನಟನೆಯಿಂದ ಬ್ರೇಕ್ ಪಡೆದುಕೊಂಡು ಸಂಸಾರದ ಕಡೆ ಗಮನ ಕೊಟ್ಟಿದ್ದಾರೆ. ಮಗು ಜನಿಸಿದ ಬಳಿಕ ಮತ್ತೆ ಚಿತ್ರರಂಗದಲ್ಲಿ ಆ್ಯಕ್ವೀವ್ ಆಗುವ ನಿರೀಕ್ಷೆಯಲ್ಲಿದ್ದಾರೆ. ಒಂದೇ ಊರು ಒಂದೇ ಸಂಪ್ರದಾಯದಲ್ಲಿ ಬೆಳೆದು ಬಂದವರು ಹರ್ಷಿಕಾ ಹಾಗೂ ಭುವನ್ ದಂಪತಿ. ಸ್ಯಾಂಡಲ್‌ವುಡ್‌ನ ಈ ತಾರಾಜೋಡಿ ಸದ್ಯಕ್ಕೆ ತಮ್ಮ ಜೀವನಕ್ಕೆ ಹೊಸ ಸದಸ್ಯನ ಆಗಮನದ ಖುಷಿಯಲ್ಲಿದೆ.

    ಫ್ಯಾಶನ್ ಕ್ಷೇತ್ರದಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿರುವ ಭುವನ್ ಮತ್ತು ಹರ್ಷಿಕಾ ಜೋಡಿ ಇದೀಗ ಪ್ರೆಗ್ನೆನ್ಸಿ ರಿವೀಲ್ ಫೋಟೋಶೂಟ್‌ನಲ್ಲೂ ಯೂನಿಕ್ ಕಾನ್ಸೆಪ್ಟ್ ಪ್ಲ್ಯಾನ್ ಮಾಡಿದ್ದು ವಿಶೇಷ. ಇಲ್ಲಿ ಕೊಡವರ ತುಂಬು ಕುಟುಂಬದ ಶೈಲಿಯನ್ನ ಅನಾವರಣ ಮಾಡಿದ್ದಾರೆ ದಂಪತಿ. ಕುಟುಂಬಸ್ಥರೆಲ್ಲರೂ ಸಾಂಪ್ರದಾಯಿಕ ಉಡುಗೆಯಲ್ಲಿ ನಿಂತು ಗರ್ಭಿಣಿ ಮನೆ ಸೊಸೆಯನ್ನ ಪರಿಚಯಿಸುವ ಶೈಲಿಯ ವಿಡಿಯೋ ಈಗ ನೋಡುಗರ ಗಮನ ಸೆಳೆಯುತ್ತದೆ.

  • ಕೊಳಕು ಕೃತ್ಯಗಳನ್ನು ಸೃಷ್ಟಿಸಿದವರಿಗೆ ಕಾನೂನಿನಡಿ ಶಿಕ್ಷೆಯಾಗಬೇಕು- ಹರ್ಷಿಕಾ ಆಗ್ರಹ

    ಕೊಳಕು ಕೃತ್ಯಗಳನ್ನು ಸೃಷ್ಟಿಸಿದವರಿಗೆ ಕಾನೂನಿನಡಿ ಶಿಕ್ಷೆಯಾಗಬೇಕು- ಹರ್ಷಿಕಾ ಆಗ್ರಹ

    ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ (Harshika Poonacha) ಧ್ವನಿಯೆತ್ತಿದ್ದಾರೆ. ಸೆಕ್ಸ್ ಸ್ಕ್ಯಾಂಡಲ್ ಬಗ್ಗೆ ನಟಿ ಮಾತನಾಡಿದ್ದಾರೆ. ತಪ್ಪು ಮಾಡಿದ್ರೆ ಕಾನೂನು ಅಡಿಯಲ್ಲಿ ತಕ್ಕ ಶಿಕ್ಷೆಯಾಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಹರ್ಷಿಕಾ ಬರೆದುಕೊಂಡಿದ್ದಾರೆ.

    ದುರದೃಷ್ಟವಶಾತ್ ವೈರಲ್ ಆಗಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ. ಅದನ್ನು ನೋಡುವುದು ನಿಜಕ್ಕೂ ನೋವಿನ ಸಂಗತಿ. ವೀಡಿಯೋಗಳು ಕಾನೂನುಬದ್ಧ ಮತ್ತು ನೈಜವಾಗಿದ್ದರೆ, ಅಂತಹ ಕೊಳಕು ಕೃತ್ಯಗಳನ್ನು ಸೃಷ್ಟಿಸಿದವರು ಖಂಡಿತವಾಗಿಯೂ ದೇಶದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಯಾಗಬೇಕು ಎಂದು ನಟಿ ಬರೆದುಕೊಂಡಿದ್ದಾರೆ.

    ಈ ವೀಡಿಯೊಗಳಲ್ಲಿ ಕಾಣಿಸಿಕೊಂಡಿರುವ ಅಸಂಖ್ಯಾತ ಮಹಿಳೆಯರ ಕುರಿತಾಗಿ ನನ್ನ ನೋವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರೆಲ್ಲರೂ ಸಭ್ಯ ಮತ್ತು ಸರಳ ಕುಟುಂಬದ ಸಾಮಾನ್ಯ ಮಹಿಳೆಯರಂತೆ ಕಾಣುತ್ತಾರೆ. ಈ ಸಂತ್ರಸ್ತರ ಮುಖಗಳನ್ನು ವಿವಿಧ ಗುಂಪುಗಳು ರಾಜಕೀಯ ಚರ್ಚೆಗೆ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಅವರು ರಾಜಕಾರಣಿಗಳ ವಿರುದ್ಧ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಬದುಕೇ ಬೇಡ ಎಂದು ಕುಗ್ಗಿದ ದಿನಗಳ ಬಗ್ಗೆ ‘ಕೆಜಿಎಫ್’ ನಟಿ ಓಪನ್ ಟಾಕ್

    ಅಲ್ಲಿರುವ ಮಹಿಳೆಯರ ಮುಖವನ್ನು ಬ್ಲರ್ ಮಾಡಬಹುದಿತ್ತು. ಭವಿಷ್ಯದಲ್ಲಿ ಅವರು ಸಮಾಜವನ್ನು ಹೇಗೆ ಎದುರಿಸುತ್ತಾರೆ. ಇನ್ನು ಮುಂದೆ ನಮ್ಮ ಜನ ಅವರನ್ನು ಯಾವ ದೃಷ್ಟಿಕೋನದಲ್ಲಿ ನೋಡಬಹುದು ಎಂದು ವಿವರಿಸಿ ಹೇಳಬೇಕಾಗಿಲ್ಲ. ಅವರ ಕುಟುಂಬ ಮತ್ತು ಮಕ್ಕಳ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ? ಎಂದು ನಟಿ ಕೇಳಿದ್ದಾರೆ. ಅವರು ಈಗ ಅನುಭವಿಸುತ್ತಿರುವ ಮಾನಸಿಕ ಆಘಾತವನ್ನು ಒಮ್ಮೆ ಯೋಚಿಸಿ ನೋಡಿ ಎಂದು ಹರ್ಷಿಕಾ ಬರೆದುಕೊಂಡಿದ್ದಾರೆ.

    ಈ ವೀಡಿಯೋಗಳನ್ನು ಸಾರ್ವಜನಿಕರಿಗೆ ಹರಡಲು ಕಾರಣರಾದ ವ್ಯಕ್ತಿಗಳಿಗೂ ಸಮಾನವಾಗಿ ಶಿಕ್ಷೆಯಾಗಬೇಕು. ನಾನು ಯಾವಾಗಲೂ ಗೌರವ, ಸುರಕ್ಷತೆ ಮತ್ತು ಮಹಿಳೆಯರಿಗೆ ಸಮಾನತೆಗಾಗಿ ನಿಂತಿದ್ದೇನೆ ಮತ್ತು ನಾನು ಯಾವಾಗಲೂ ಇದನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಸಮಸ್ಯೆಗೆ ಒಳಗಾದ ಎಲ್ಲಾ ಅಮಾಯಕ ಕುಟುಂಬಗಳಿಗೆ ಶಕ್ತಿ ಮತ್ತು ಧೈರ್ಯವನ್ನು ನೀಡಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ನಟಿ ಬರೆದುಕೊಂಡಿದ್ದಾರೆ.