Tag: Haryan

  • ರೈತರ ಪ್ರತಿಭಟನೆ; ಹರಿಯಾಣದಲ್ಲಿ ಡಿ.17 ರ ವರೆಗೆ ಇಂಟರ್ನೆಟ್‌ ಸೇವೆ ಸ್ಥಗಿತ

    ರೈತರ ಪ್ರತಿಭಟನೆ; ಹರಿಯಾಣದಲ್ಲಿ ಡಿ.17 ರ ವರೆಗೆ ಇಂಟರ್ನೆಟ್‌ ಸೇವೆ ಸ್ಥಗಿತ

    ಚಂಡೀಗಢ: ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರವು ಅಂಬಾಲಾ ಜಿಲ್ಲೆಯ 12 ಹಳ್ಳಿಗಳಲ್ಲಿ ಇಂಟರ್ನೆಟ್‌ ಮತ್ತು SMS ಸೇವೆಗಳನ್ನು ಸ್ಥಗಿತಗೊಳಿಸಿದೆ.

    ಶಂಭು ಗಡಿಯಿಂದ ದೆಹಲಿಗೆ ರೈತರು ಪ್ರತಿಭಟನಾ ಮೆರವಣಿಗೆ ಹೊರಡಲು ಸಜ್ಜಾಗಿದ್ದಾರೆ. ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಹರಿಯಾಣ ಸರ್ಕಾರ ಈ ಕ್ರಮ ಕೈಗೊಂಡಿದೆ.

    ಇಂದಿನಿಂದ ಡಿ.17 ರ ವರೆಗೂ ಇಂಟರ್ನೆಟ್‌ ಸೇವೆ ಸ್ಥಗಿತ ಮುಂದುವರಿಯಲಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಸುಮಿತಾ ಮಿಶ್ರಾ ತಿಳಿಸಿದ್ದಾರೆ. 101 ರೈತರ ಗುಂಪು ಇಂದು ಮಧ್ಯಾಹ್ನ ಶಂಭು ಗಡಿಯಿಂದ ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲು ಯೋಜಿಸಿದೆ.

    ದಂಗ್‌ದೇರಿ, ಲೆಹ್‌ಗರ್, ಮನಕ್‌ಪುರ್, ದಡಿಯಾನಾ, ಬರಿ ಘೇಲ್, ಚೋಟಿ ಘೇಲ್, ಲಾರ್ಸಾ, ಕಲು ಮಜ್ರಾ, ದೇವಿ ನಗರ (ಹೀರಾ ನಗರ, ನರೇಶ್ ವಿಹಾರ್), ಸದ್ದೋಪುರ್, ಸುಲ್ತಾನ್‌ಪುರ್ ಮತ್ತು ಅಂಬಾಲಾದ ಕಕ್ರು ಸೇರಿವೆ. ಸೇವೆಗಳ ಅಮಾನತು ಯಾವುದೇ ಸಾರ್ವಜನಿಕ ಅಸ್ವಸ್ಥತೆಯನ್ನು ತಡೆಗಟ್ಟುವ ಉದ್ದೇಶವನ್ನು ಹೊಂದಿದೆ.

    ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡಬೇಕೆಂದು ರೈತರು ಬೇಡಿಕೆ ಇಟ್ಟಿದ್ದಾರೆ. ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮಾತುಕತೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

  • Assembly elections 2024: ಜಮ್ಮು-ಕಾಶ್ಮೀರದಲ್ಲಿ 3 ಹಂತ, ಹರಿಯಾಣದಲ್ಲಿ ಅ.1ಕ್ಕೆ ಮತದಾನ

    Assembly elections 2024: ಜಮ್ಮು-ಕಾಶ್ಮೀರದಲ್ಲಿ 3 ಹಂತ, ಹರಿಯಾಣದಲ್ಲಿ ಅ.1ಕ್ಕೆ ಮತದಾನ

    ನವದೆಹಲಿ: ಜಮ್ಮು-ಕಾಶ್ಮೀರ (Jammu Kashmir) ಹಾಗೂ ಹರಿಯಾಣ (Haryan) ವಿಧಾನಸಭೆಗಳಿಗೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಮ್ಮು-ಕಾಶ್ಮೀರದಲ್ಲಿ 3 ಹಂತ ಹಾಗೂ ಹರಿಯಾಣದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

    ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌, ಜಮ್ಮು-ಕಾಶ್ಮೀರದಲ್ಲಿ 3 ಹಂತಗಳಲ್ಲಿ (ಸೆ.18, ಸೆ.25, ಅ.1) ಚುನಾವಣೆ ನಡೆಯಲಿದೆ. ಹರಿಯಾಣದಲ್ಲಿ ಅ.1 ರಂದು ಮತದಾನ ನಡೆಯಲಿದೆ. ಅಕ್ಟೋಬರ್‌ 4ಕ್ಕೆ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಆಯುಕ್ತರಾದ ಸುಖ್ಬಿರ್ ಸಿಂಗ್, ಜ್ಞಾನೇಶ್ ಕುಮಾರ್ ಭಾಗಿಯಾಗಿದ್ದರು. ಇದನ್ನೂ ಓದಿ: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

    ಜಮ್ಮು ಕಾಶ್ಮೀರದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 87.09 ಲಕ್ಷ ಮತದಾರರು ನೋಂದಣಿಯಾಗಿದ್ದಾರೆ. 44.46 ಪುರುಷರು, 42 ಲಕ್ಷ ಮಹಿಳಾ ಮತದಾರರು ಇದ್ದಾರೆ. 11,838 ಮತದಾನ ಕೇಂದ್ರಗಳು ನಿರ್ಮಾಣಗೊಂಡಿವೆ. ಗ್ರಾಮೀಣ ಭಾಗದಲ್ಲಿ 9,506 ಹಾಗೂ ನಗರ ಭಾಗದಲ್ಲಿ 2,332 ಮತದಾನ ಬೂತ್‌ಗಳ ನಿರ್ಮಾಣವಾಗಿದೆ.

    ಹರಿಯಾಣದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 2.01 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. 20,629 ಮತದಾನ ಕೇಂದ್ರಗಳ ನಿರ್ಮಾಣವಾಗಿವೆ. ಗ್ರಾಮೀಣ ಭಾಗದಲ್ಲಿ 13,497 ಹಾಗೂ ನಗರ ಭಾಗದಲ್ಲಿ 7132 ಮತದಾನ ಕೇಂದ್ರಗಳಿವೆ. ಇದನ್ನೂ ಓದಿ: 2027 ರ ವೇಳೆಗೆ ಭಾರತ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಭರವಸೆ ಇದೆ: ಡಾ. ಗೀತಾ ಗೋಪಿನಾಥ್

  • ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡಲ್ಲ: ಅಮಿತ್‌ ಶಾ

    ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡಲ್ಲ: ಅಮಿತ್‌ ಶಾ

    ಚಂಡೀಗಢ: ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

    ರಾಜ್ಯದಲ್ಲಿ ‘ಹಿಂದುಳಿದ ವರ್ಗಗಳ ಸಮ್ಮಾನ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಕಾಕಾ ಕಾಲೇಕರ್ ಆಯೋಗವು ಮಾಡಿದ ಶಿಫಾರಸುಗಳನ್ನು ಕಾಂಗ್ರೆಸ್ ವರ್ಷಗಳಿಂದ ಜಾರಿಗೆ ತಂದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್‌ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?

    ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲಿದೆ. 1980 ರಲ್ಲಿ, (ಅಂದಿನ ಪ್ರಧಾನಿ) ಇಂದಿರಾಗಾಂಧಿ ಮಂಡಲ್ ಆಯೋಗವನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದರು. 1990 ರಲ್ಲಿ ಅದನ್ನು ಅಂಗೀಕರಿಸಿದಾಗ, ರಾಜೀವ್ ಗಾಂಧಿ ಅವರು ಎರಡೂವರೆ ಗಂಟೆಗಳ ಭಾಷಣವನ್ನು ನೀಡಿದರು ಮತ್ತು ಒಬಿಸಿ ಮೀಸಲಾತಿಯನ್ನು ವಿರೋಧಿಸಿದ್ದರು ಎಂದು ತಿಳಿಸಿದ್ದಾರೆ.

    ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಒಬಿಸಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ಮೀಸಲಾತಿ ನೀಡಿದೆ. ಅವರು ಅಧಿಕಾರಕ್ಕೆ ಬಂದರೆ, ಇಲ್ಲಿಯೂ ಹಾಗೇ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ