Tag: Haryana CM

  • ಯಮುನಾ ನದಿಗೆ ವಿಷ ಆರೋಪ – ನದಿ ನೀರನ್ನು ಕುಡಿದು ಕೇಜ್ರಿವಾಲ್‌ಗೆ ಟಕ್ಕರ್‌ ಕೊಟ್ಟ ಹರಿಯಾಣ ಸಿಎಂ

    ಯಮುನಾ ನದಿಗೆ ವಿಷ ಆರೋಪ – ನದಿ ನೀರನ್ನು ಕುಡಿದು ಕೇಜ್ರಿವಾಲ್‌ಗೆ ಟಕ್ಕರ್‌ ಕೊಟ್ಟ ಹರಿಯಾಣ ಸಿಎಂ

    ನವದೆಹಲಿ: ಯಮುನಾ ನದಿಗೆ (Yamuna River) ಹರಿಯಾಣ (Haryana) ಸರ್ಕಾರವು ವಿಷಕಾರಿ ರಾಸಾಯನಿಕಗಳನ್ನು ಬೆರೆಸಲು ಯತ್ನಿಸಿದೆ ಎಂಬ ಕೇಜ್ರಿವಾಲ್‌ ಆರೋಪಕ್ಕೆ ಹರಿಯಾಣ ಸಿಎಂ ತಿರುಗೇಟು ನೀಡಿದ್ದಾರೆ. ಸ್ವತಃ ಸಿಎಂ ನಯಾಬ್‌ ಸೈನಿ (Nayab Saini) ಅವರು ನದಿ ನೀರನ್ನು ಕುಡಿದಿದ್ದಾರೆ.

    ನಯಾಬ್‌ ಸೈನಿ ಅವರು ದೆಹಲಿಯ ಪಲ್ಲಾ ಗ್ರಾಮ ದಾಟಿ ಹರಿಯುತ್ತಿದ್ದ ನದಿಯಿಂದ ನೀರನ್ನು ತೆಗೆದುಕೊಂಡು ಸೇವಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ನಾನು ಹರಿಯಾಣ ಗಡಿಯಲ್ಲಿ ಪವಿತ್ರ ಯಮುನೆಯ ನೀರನ್ನು ಕುಡಿದೆ. ದೆಹಲಿ ಸಿಎಂ ಅತಿಶಿ ಅವರು ಬಂದಿಲ್ಲ. ಅವರು ಸುಳ್ಳು ಹೇಳುತ್ತಿರಬೇಕು. ಎಎಪಿಯ ಸುಳ್ಳು ಕೆಲಸ ಮಾಡಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಕುಂಭಮೇಳದಿಂದ ವಾಪಸ್ ಆಗುವಾಗ ರಸ್ತೆ ಅಪಘಾತ – ಮೈಸೂರಿನ ಇಬ್ಬರು ದುರ್ಮರಣ

    ದೆಹಲಿಯ ದೇವರಂತಹ ಜನರು ಈ ವಂಚಕರನ್ನು (ಎಎಪಿ) ಗುರುತಿಸಿದ್ದಾರೆ. ಫೆ.5 ರಂದು (ದೆಹಲಿ ಮತ ಚಲಾಯಿಸಿದಾಗ) ಎಎಪಿಯ ವಂಚನೆಯ ಯುಗ ಅಂತ್ಯಗೊಳ್ಳುವುದು ನಿಶ್ಚಿತ ಎಂದು ವಾಗ್ದಾಳಿ ನಡೆಸಿದ್ದಾರೆ.

    ಸೈನಿ ಅವರು ನದಿ ನೀರನ್ನು ಕುಡಿಯುತ್ತಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. 57 ಸೆಕೆಂಡ್‌ ಇರುವ ವೀಡಿಯೋದಲ್ಲಿ, ಸೈನಿ ಅವರು ಬೊಗಸೆಯಲ್ಲಿ ನದಿ ನೀರನ್ನು ತೆಗೆದುಕೊಂಡು ಕುಡಿಯುತ್ತಾರೆ. ನಂತರ ಮೈಗೆ ನೀರನ್ನು ಚಿಮುಕಿಸಿಕೊಳ್ಳುತ್ತಾರೆ. ಇದನ್ನೂ ಓದಿ: ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ವದಂತಿ ನಂಬಬೇಡಿ: ಯೋಗಿ ಅದಿತ್ಯನಾಥ್‌

    ರಾಷ್ಟ್ರ ರಾಜಧಾನಿಗೆ ಸರಬರಾಜು ಮಾಡುವ ನೀರಿನಲ್ಲಿ ವಿಷ ಬೆರೆಸಿದ್ದಾರೆಂದು ಸೈನಿ ಸರ್ಕಾರದ ವಿರುದ್ಧ ಎಎಪಿ ನಾಯಕ ಅರವಿಂದ್‌ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತು. ಕೇಜ್ರಿವಾಲ್‌ ಅವರನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡು, ನಿಮ್ಮ ಆರೋಪಕ್ಕೆ ಪುರಾವೆ ಇದೆಯೇ ಎಂದು ಪ್ರಶ್ನಿಸಿತ್ತು.

  • ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲ ವಿಧಿವಶ

    ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲ ವಿಧಿವಶ

    ಚಂಡೀಗಢ: ಹರಿಯಾಣದ ಮಾಜಿ ಸಿಎಂ ಮತ್ತು ಭಾರತೀಯ ರಾಷ್ಟ್ರೀಯ ಲೋಕದಳ (INLD) ಮುಖ್ಯಸ್ಥ ಓಂ ಪ್ರಕಾಶ್ ಚೌತಾಲಾ (89) (Om Prakash Chautala) ಶುಕ್ರವಾರ (ಡಿ.20), ಗುರುಗ್ರಾಮ್‌ನಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು.

    ಭಾರತದ 6ನೇ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಚೌಧರಿ ದೇವಿ ಲಾಲ್ ಅವರ ಪುತ್ರನಾಗಿ 1935ರ ಜನವರಿ 1ರಲ್ಲಿ ಚೌತಾಲಾ ಜನಿಸಿದರು. 1989ರಲ್ಲಿ ಮೊದಲಬಾರಿಗೆ ಹರಿಯಾಣ ಮುಖ್ಯಮಂತ್ರಿಯಾಗಿದ್ದ ಚೌತಾಲಾ 6 ತಿಂಗಳ ಕಾಲ ಹುದ್ದೆಯಲ್ಲಿದ್ದರು. ಬಳಿಕ 2 ತಿಂಗಳ ನಂತರ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ರು, ಇದಾದ 5 ದಿನಗಳಲ್ಲೇ ರಾಜೀನಾಮೆ ನೀಡುವ ಪರಿಸ್ಥಿತಿ ಬಂದೊದಗಿತು. ಬಳಿಕ 1991ರಲ್ಲಿ 3ನೇ ಅವಧಿಗೆ ಸಿಎಂ ಆದರು. ಇದಾದ 2 ವಾರಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದರಿಂದ ಸಿಎಂ ಸ್ಥಾನ ಕಳೆದುಕೊಂಡರು. ನಂತರ 1999 ರಿಂದ 2025ರ ನಡುವೆ ಸತತ 2 ಅವಧಿಗೆ ಸಿಎಂ ಆಗಿ ಸೇವೆ ಸಲ್ಲಿಸಿದ್ದರು.

    ಭಾರತೀಯ ರಾಜಕೀಯದಲ್ಲಿ ಧೀಮಂತ ನಾಯಕನಾಗಿ ಗುರುತಿಸಿಕೊಂಡಿದ್ದರು. ಆದ್ರೆ ಅವರ ವೃತ್ತಿ ಜೀವನವು ವಿವಾದಗಳಿಂದಲೇ ಗುರುತಿಸಲ್ಪಟ್ಟಿತ್ತು. ಇದನ್ನೂ ಓದಿ: UI: ಉಪೇಂದ್ರ, ಶಿವಣ್ಣ ಫೋಟೋ ಇಟ್ಟು ಪೂಜೆ- ಫ್ಯಾನ್ಸ್ ಭರ್ಜರಿ ಸೆಲೆಬ್ರೇಶನ್

    1999-2000 ಅವಧಿಯಲ್ಲಿ ಹರಿಯಾಣದಲ್ಲಿ ಕಿರಿಯ ಮೂಲ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಹಗರಣರಣದಲ್ಲಿ ಚೌತಾಲಾಗೆ ಕೋರ್ಟ್‌ ಶಿಕ್ಷೆ ವಿಧಿಸಿತ್ತು. 2013 ರಲ್ಲಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

    87ನೇ ವಯಸ್ಸಿನವರಾಗಿದ್ದಾಗ 2021ರಲ್ಲಿ ಜೈಲಿನಿಂದ ಬಿಡುಗಡೆಯಾದರು. ಇದಕ್ಕೂ ಮುನ್ನ ದೆಹಲಿಯ ತಿಹಾರ್ ಜೈಲಿನ (87 ವರ್ಷ ವಯಸ್ಸಿನ) ಅತ್ಯಂತ ಹಳೆಯ ಖೈದಿ ಎಂಬ ದಾಖಲೆಯನ್ನೂ ಹೊಂದಿದ್ದರು. ಇದನ್ನೂ ಓದಿ: ಉಕ್ರೇನ್‌ ಯುದ್ಧ ಸಂಬಂಧ ಟ್ರಂಪ್‌ ಜೊತೆ ಮಾತುಕತೆಗೆ ಸಿದ್ಧ: ಪುಟಿನ್‌

  • ರಾಜ್ಯದಲ್ಲಿ ಅಪರಾಧಿಗಳಿಗೆ ಜಾಗವಿಲ್ಲ – ಹರಿಯಾಣ ಸಿಎಂ ಖಡಕ್ ವಾರ್ನಿಂಗ್

    ರಾಜ್ಯದಲ್ಲಿ ಅಪರಾಧಿಗಳಿಗೆ ಜಾಗವಿಲ್ಲ – ಹರಿಯಾಣ ಸಿಎಂ ಖಡಕ್ ವಾರ್ನಿಂಗ್

    ಚಂಡೀಗಢ: ಹರಿಯಾಣದಲ್ಲಿ (Haryana) ಅಪರಾಧಿಗಳಿದೆ ಜಾಗವಿಲ್ಲ ಎಂದು ಗುರುಗ್ರಾಮ್ ಬಾಂಬ್ ಸ್ಫೋಟದ (Gurugram Bomb Attack) ವಿಚಾರವಾಗಿ ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ (Nayab Saini) ಹೇಳಿದರು.

    ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಸಹಚರ ರೋಹಿತ್ ಗೋಡಾರಾ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತ ಬಳಿಕ ಹರಿಯಾಣ ಸಿಎಂ ಪ್ರತಿಕ್ರಿಯಿಸಿದ್ದಾರೆ.ಇದನ್ನೂ ಓದಿ: ಇಂದಿನಿಂದ ಮಹಾಕುಂಭ ಮೇಳ – 5,500 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸ್ಫೋಟದ ಹಿಂದೆ ಯಾರ ಕೈವಾಡವಿದ್ದರೂ ಅವರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಯಾರೇ ಆಗಲಿ ಕಾನೂನು ಹಾಗೂ ಸುವ್ಯವಸ್ಥೆಯೊಂದಿಗೆ ಆಟವಾಡಿದರೆ ಅವರು ಒಂದು ಆಸ್ಪತ್ರೆಯಲ್ಲಿ ಇರಬೇಕು, ಇಲ್ಲವಾದರೆ ಜೈಲಿನಲ್ಲಿ ಇರುತ್ತಾರೆ ಎಂದು ಕಿಡಿಕಾರಿದರು.

    ಈ ಮೂಲಕ ಗುರುಗ್ರಾಮ್‌ನ್ನು ಸ್ವಚ್ಛ ಹಾಗೂ ಸುಂದರ ಜಿಲ್ಲೆಯಾಗಿಸಲು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜೊತೆಗೆ ಬರುವ ದಿನಗಳಲ್ಲಿ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

    ಏನಿದು ಘಟನೆ?
    ಮಂಗಳವಾರ (ಡಿ.10) ಗುರುಗ್ರಾಮ್ ಸೆಕ್ಟರ್ 29ರ ಬಾರ್‌ನ ಹೊರಗೆ ಆರೋಪಿ ಎರಡು ಬಾಂಬ್‌ಗಳನ್ನ ಸ್ಫೋಟಿಸಿದ್ದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗುರುಗ್ರಾಮ್ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು.ಇದನ್ನೂ ಓದಿ: ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಆರೋಪ – ಸ್ನೇಹಮಯಿ ಕಷ್ಣ ದೂರು

  • ಹರಿಯಾಣ ಸಿಎಂ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

    ಹರಿಯಾಣ ಸಿಎಂ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

    ಚಂಡೀಗಢ: ಲೋಕಸಭಾ ಚುನಾವಣೆ (Lok Sabha Elections 2024) ಹೊತ್ತಲ್ಲೇ ಹರಿಯಾಣದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದೆ. ಹರಿಯಾಣ ಮುಖ್ಯಮಂತ್ರಿ ಎಂ.ಎಲ್.ಖಟ್ಟರ್ (M.L.Khattar) ಮತ್ತು ಸಚಿವ ಸಂಪುಟ ರಾಜೀನಾಮೆ ಸಲ್ಲಿಸಿದೆ.

    ಮಂಗಳವಾರ ಬೆಳಗ್ಗೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾಗಿ ಖಟ್ಟರ್‌ ರಾಜೀನಾಮೆ ಸಲ್ಲಿಸಿದ್ದಾರೆ. ಹರಿಯಾಣದ (Haryana) ನೂತನ ಮುಖ್ಯಮಂತ್ರಿ ಇಂದೇ (ಮಂಗಳವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕಲಬುರಗಿ-ಬೆಂಗಳೂರು, ಮೈಸೂರು-ಚೆನ್ನೈ ಸೇರಿ 10 ಮಾರ್ಗಗಳ ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆ

    90 ಸದಸ್ಯ ಬಲದ ವಿಧಾನಸಭೆಯಲ್ಲಿ 40 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿರುವ ಬಿಜೆಪಿ ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ ಎಂದು ಮೂಲಗಳು ತಿಳಿಸಿವೆ. ದುಶ್ಯಂತ್ ಚೌತಾಲಾ ಅವರ ಜೆಜೆಪಿ ಜೊತೆ ಮೈತ್ರಿ ಮಾಡಿಕೊಂಡ ನಂತರ ಇಲ್ಲಿಯವರೆಗೆ ಬಿಜೆಪಿ ಆಡಳಿತ ನಡೆಸುತ್ತಿತ್ತು.

    ಹರಿಯಾಣದಲ್ಲಿ ಬಿಜೆಪಿ-ಜನನಾಯಕ ಜನತಾ ಪಕ್ಷ (ಜೆಜೆಪಿ)ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಸಚಿವರು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: CAA ಸ್ವಾಗತಿಸಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಸೀಮಾ ಹೈದರ್‌

    ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲು ವಿಫಲವಾದ ನಂತರ ಬಿಜೆಪಿ ಮತ್ತು ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ನಡುವಿನ ಸಂಬಂಧ ಹದಗೆಟ್ಟಿದೆ. 2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲಾ 10 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

    ಮೈತ್ರಿ ಮುರಿದು ಬಿದ್ದಿದೆ. ಆದರೆ ಎಂ.ಎಲ್.ಖಟ್ಟರ್ ಅವರನ್ನು ಬೆಂಬಲಿಸುವ ಕೆಲವು ಸ್ವತಂತ್ರ ಶಾಸಕರು ಸರ್ಕಾರದ ಅಸ್ತಿತ್ವವನ್ನು ಖಚಿತಪಡಿಸುತ್ತಾರೆ ಎಂದು ಸ್ವತಂತ್ರ ಶಾಸಕ ನಯನ್ ಪಾಲ್ ರಾವತ್ ಮಂಗಳವಾರ ಹೇಳಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಸ್ಪರ್ಧೆಗೆ ಮಲ್ಲಿಕಾರ್ಜುನ ಖರ್ಗೆ ಹಿಂದೇಟು?

    ಬಿಜೆಪಿ ಮತ್ತು ಜೆಜೆಪಿ (ಜನನಾಯಕ ಜನತಾ ಪಕ್ಷ) ಎರಡೂ ಪಕ್ಷಗಳ ವರಿಷ್ಠರು ಆಯಾ ಶಾಸಕರ ಪ್ರತ್ಯೇಕ ಸಭೆಗಳನ್ನು ಕರೆದಿದ್ದಾರೆ. ಅದಕ್ಕೂ ಮುನ್ನ ಖಟ್ಟರ್ ಅವರು ತಮ್ಮ ನಿವಾಸದಲ್ಲಿ ಬಿಜೆಪಿಯ ಎಲ್ಲ ಸಚಿವರ ಸಭೆ ನಡೆಸಲಿದ್ದಾರೆ.