Tag: Haryana Election Result

  • ಬಿಜೆಪಿಗೆ ಸತತ 3ನೇ ಬಾರಿಗೆ ಅಧಿಕಾರ ನೀಡಿ ಹರಿಯಾಣ ಇತಿಹಾಸ ಬರೆದಿದೆ: ಮೋದಿ ಸೆಲ್ಯೂಟ್‌

    ಬಿಜೆಪಿಗೆ ಸತತ 3ನೇ ಬಾರಿಗೆ ಅಧಿಕಾರ ನೀಡಿ ಹರಿಯಾಣ ಇತಿಹಾಸ ಬರೆದಿದೆ: ಮೋದಿ ಸೆಲ್ಯೂಟ್‌

    – ಕಾಂಗ್ರೆಸ್‌ ಸರ್ಕಾರ ಎಲ್ಲೂ ವಾಪಸ್‌ ಬರ್ತಿಲ್ಲ
    – ಕಾಂಗ್ರೆಸ್‌ ‘ಪರಾವಲಂಬಿ ಪಕ್ಷ’ ಎಂದು ಪ್ರಧಾನಿ ವ್ಯಂಗ್ಯ

    ನವದೆಹಲಿ: ಬಿಜೆಪಿಗೆ ಸತತ ಮೂರನೇ ಬಾರಿಗೆ ಅಧಿಕಾರ ನೀಡಿ ಹರಿಯಾಣ ರಾಜ್ಯ ಇತಿಹಾಸ ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

    ದೆಹಲಿಯಲ್ಲಿ ಬಿಜೆಪಿ (BJP) ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಹರಿಯಾಣದ (Haryana Election Results) ಜನರು ಮತ್ತೊಮ್ಮೆ ಕಮಾಲ್ ಮಾಡಿದ್ದಾರೆ. ಕಮಲ್ ಕಮಲ್ ಮಾಡಿದ್ದಾರೆ. ಇಂದು ನವರಾತ್ರಿಯ ನಾಲ್ಕನೇ ದಿನ. ತಾಯಿ ಕಾತ್ಯಾಯಿನಿ ಆರಾಧ್ಯನೆಯ ದಿನ. ಕ್ಯಾತಯಿನಿ ದೇವಿ ಕೈಯಲ್ಲಿ ಕಮಲದ ಹೂವಿದೆ. ಇಂತಹ ಪಾವನ ದಿನದಂದು ಹರಿಯಾಣದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಪಕ್ಷ ಬಂದಿದೆ. ಗೀತಾದ ನೆಲದಲ್ಲಿ ವಿಕಾಸ‌ದ ಗೆಲವು ಬಂದಿದೆ. ಎಲ್ಲ ಜಾತಿ ವರ್ಗದ ಜನರು ನಮಗೆ ಮತ ನೀಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ಮತದಾನ ನಡೆದಿದೆ. ಇದು ಭಾರತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಜಯವಾಗಿದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: Haryana Assembly Elections: ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್‌ಗೆ ಗೆಲುವು

    ಜಮ್ಮು ಕಾಶ್ಮೀರ ಜನರು ಎನ್‌ಸಿ ಒಕ್ಕೂಟಕ್ಕೆ ಹೆಚ್ಚು ಸ್ಥಾನ ನೀಡಿದ್ದಾರೆ. ಅವರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಎಷ್ಟು ಪಕ್ಷಗಳು ಚುನಾವಣಾ ಅಖಾಡದಲ್ಲಿದ್ದವು, ಅದರಲ್ಲಿ ಬಿಜೆಪಿ ಹೆಚ್ಚು ಮತ ಪಡೆದಿದೆ. ಅಲ್ಲಿ ಗೆಲವು ಸಾಧಿಸಿದ ಜನರಿಗೆ ಅಭಿನಂದನೆ ಹೇಳುತ್ತೇನೆ. ಎರಡು ರಾಜ್ಯದ ನಮ್ಮ ಕಾರ್ಯಕರ್ತರಿಗೆ ಧನ್ಯವಾದ ಹೇಳ್ತೀವಿ. ಇದು ಕಾರ್ಯಕರ್ತರ ಶ್ರಮದಿಂದ ಗೆಲುವು ಸಾಧ್ಯವಾಗಿದೆ. ನಡ್ಡಾ ಅವರ ತಂಡದ ಗೆಲುವಾಗಿದೆ. ನಮ್ಮ ಸಿಎಂ ಕರ್ತವ್ಯದ ಜಯವಾಗಿದೆ ಎಂದು ಹೊಗಳಿದ್ದಾರೆ.

    ಸುಳ್ಳಿನ ರಾಶಿಯ ಮೇಲೆ ಅಭಿವೃದ್ಧಿ ಗ್ಯಾರಂಟಿ ಹೊರೆಯಾಯಿತು. ಹರಿಯಾಣ ಜನರು ಹೊಸ ಇತಿಹಾಸ ರಚಿಸಿದ್ದಾರೆ. 1966 ರಿಂದ ಸತತ ಮೂರನೇ ಬಾರಿಗೆ ಯಾವ ಪಕ್ಷ ಅಧಿಕಾರಕ್ಕೆ ಬಂದಿಲ್ಲ. ದೊಡ್ಡ ದೊಡ್ಡ ಪಕ್ಷಗಳು ಆಡಳಿತ ನಡೆಸಿವೆ. ಇದು ಯಾರಿಗೂ ಸಾಧ್ಯವಾಗಲಿಲ್ಲ. ಹರಿಯಾಣದ ಜನರು ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುತ್ತಾರೆ. ಈ ಬಾರಿ ಹರಿಯಾಣದ ಜನರು ಮಾಡಿರುವುದು ಅಭೂತಪೂರ್ವವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: Jammu Kashmir Results | ಚುನಾವಣೆಯಲ್ಲಿ ಸೋತರೂ ಮತಗಳಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

    ಕೇವಲ ಮೂರನೇ ಬಾರಿಗೆ ಸರ್ಕಾರ ಬಂದಿಲ್ಲ. ಮತ ಪ್ರಮಾಣವು ಅಧಿಕವಾಗಿದೆ. ಈ ಜನಾದೇಶ ಸಂದೇಶ ದೂರ ದೂರದವರೆಗೂ ಹೋಗಲಿದೆ. ಬಿಜೆಪಿ ಪ್ರಂಪಚ ದೊಡ್ಡ ಪಕ್ಷ ಮಾತ್ರವಲ್ಲ, ಬಿಜೆಪಿ ಪ್ರಂಪಚದಲ್ಲೇ ಅತಿ ಹೆಚ್ಚು ಜನರ ಹೃದಯದಲ್ಲಿದೆ. ಜನರು ನಮ್ಮ ಅಭಿವೃದ್ಧಿ ಕೆಲಸಕ್ಕೆ ಹ್ಯಾಟ್ರಿಕ್ ಅವಕಾಶ ನೀಡಿದ್ದಾರೆ. ಗುಜರಾತ್ ಮಧ್ಯಪ್ರದೇಶ ಜನರು ಎರಡು ದಶಕದಿಂದ ಆಶೀರ್ವಾದ ಮಾಡಿದ್ದಾರೆ. ಯುಪಿ ಬಿಹಾರದಲ್ಲಿ ಕಾನೂನು ಸ್ಥಾಪಿಸುವ ಎನ್‌ಡಿಎ ಸರ್ಕಾರಕ್ಕೆ ಅವಕಾಶ ನೀಡಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆಯೋ ಅಲ್ಲಿ ದೀರ್ಘಾವಧಿಗೆ ಬೆಂಬಲ ನೀಡುತ್ತಾರೆ. ಮತ್ತೊಂದು ಕಡೆ ಕಾಂಗ್ರೆಸ್ ಸರ್ಕಾರ ಎಲ್ಲೂ ವಾಪಸ್ ಬರ್ತಿಲ್ಲ. 13 ವರ್ಷ ಮುಂಚೆ ಅಸ್ಸಾಂ ಸರ್ಕಾರ ವಾಪಸ್ ಬಂದಿತ್ತು. ಆ ಬಳಿಕ ನಡೆದ ಚುನಾವಣೆಗಳಲ್ಲಿ ಎರಡನೇ ಅವಕಾಶ ಕಾಂಗ್ರೆಸ್‌ಗೆ ನೀಡಿಲ್ಲ. ದೇಶದ ರಾಜ್ಯಗಳಲ್ಲಿ ಒಮ್ಮೆ ತೆಗೆದು ಹಾಕಿದ್ದಾರೆ. ಮತ್ತೆ ವಾಪಸ್ ಬರಲು ಕಾಂಗ್ರೆಸ್‌ಗೆ ಅವಕಾಶ ನೀಡಿಲ್ಲ ಎಂದು ಕುಟುಕಿದ್ದಾರೆ.

    ಮೊದಲು ಕಾಂಗ್ರೆಸ್ ಕೆಲಸ ಮಾಡದರೂ, ಮಾಡಿದಿದ್ದರೂ ಜನರು ಮತ ಕೊಡ್ತಾರೆ ಅನ್ನುವ ಮನಸ್ಥಿತಿ ಇತ್ತು. ಸರ್ಕಾರ ತಮ್ಮ ಜನ್ಮಸಿದ್ಧ ಹಕ್ಕು ಎಂದು ಭಾವಿಸುತ್ತಿತ್ತು. ಅಧಿಕಾರ ಇಲ್ಲದೇ ನೀರಿನಿಂದ ಹೊರ ಬಿದ್ದ ಮೀನಿನಂತೆ ಕಾಂಗ್ರೆಸ್ ಆಗಿದೆ. ಈಗ ಅವರ ಪರಿಸ್ಥಿತಿ ಬದಲಾಗಿದೆ. ಕಾಂಗ್ರೆಸ್ ಹೇಗೆ ವಿಷ ಬೀಜ ಬಿತ್ತಿದೆ ಎಂದು ಇಡೀ ದೇಶವೇ ನೋಡಿದೆ. ಹಲವು ತಲೆಮಾರುಗಳನ್ನು ಜಾತಿ ಹೆಸರಿನಲ್ಲಿ ಹೊಡೆದಾಡಲು ಬಿಟ್ಟಿದೆ. ಹಿಂದುಳಿದ ವರ್ಗ, ದಲಿತರ ಮೇಲೆ ಹೆಚ್ಚು ಶೋಷಣೆ ಮಾಡಿದೆ. ಅಧಿಕಾರ ಸಿಕ್ಕಾಗ ಎಂದು ದಲಿತ ಹಿಂದುಳಿದ ವರ್ಗದವರಿಗೆ ಅಧಿಕಾರ ನೀಡಲಿಲ್ಲ. ಕಾಂಗ್ರೆಸ್ ಪರಿವಾರ ದಲಿತ ಹಿಂದುಳಿದ ಆದಿವಾಸಿಗಳನ್ನು ದ್ವೇಷ ಮಾಡುತ್ತದೆ. ಈ ಎಲ್ಲ ವರ್ಗದ ಜನರು ಉನ್ನತ ಸ್ಥಾನಕ್ಕೆ ಹೋಗ್ತಿದ್ದರೆ ಇವರ ಹೊಟ್ಟೆಯಲ್ಲಿ ಇಲಿ ಓಡಾಡುತ್ತವೆ ಎಂದು ವಾಗ್ದಾಳಿ ನಡೆಸಿದ್ದಾರೆ.

  • ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್‌

    ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್‌

    ನವದೆಹಲಿ: ಹರಿಯಾಣದಲ್ಲಿನ (Haryana Election Results) ಚುನಾವಣಾ ಫಲಿತಾಂಶಗಳು ಅನಿರೀಕ್ಷಿತ ಮತ್ತು ಆಘಾತಕಾರಿ, ಕಾಂಗ್ರೆಸ್ (Congress) ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪಕ್ಷವು ತಿಳಿಸಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ (Jairam Ramesh), ಹರಿಯಾಣದ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರವಾಗಿದೆ. ಇದು ವಾಸ್ತವಕ್ಕೆ ವಿರುದ್ಧವಾಗಿದೆ. ಇದು ಹರಿಯಾಣದ ಜನರು ಬದಲಾವಣೆ ಮತ್ತು ಪರಿವರ್ತನೆಗಾಗಿ ಮನಸ್ಸು ಮಾಡಿದ್ದಕ್ಕೆ ವಿರುದ್ಧವಾಗಿದೆ. ಹೀಗಿರುವಾಗ ಇಂದು ಪ್ರಕಟವಾಗಿರುವ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹರಿಯಾಣದಲ್ಲಿ ನಾವು ಇಂದು ನೋಡಿರುವುದು ಕುಶಲತೆಯ ಗೆಲುವು, ಜನರ ಇಚ್ಛೆಯನ್ನು ಬುಡಮೇಲು ಮಾಡಿದ ವಿಜಯವಾಗಿದೆ. ಇದು ಪಾರದರ್ಶಕ, ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ಸೋಲು. ಹರಿಯಾಣದ ಅಧ್ಯಾಯ ಪೂರ್ಣವಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: Jammu Kashmir Results | ಚುನಾವಣೆಯಲ್ಲಿ ಸೋತರೂ ಮತಗಳಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

    ಮಧ್ಯಾಹ್ನದವರೆಗೆ ನಾನು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೆ. ನನ್ನ ದೂರುಗಳಿಗೆ ಅವರು ಉತ್ತರಿಸಿದ್ದಾರೆ. ಅವರ ಉತ್ತರಕ್ಕೆ ನಾನು ಪ್ರತಿಕ್ರಿಯಿಸಿದ್ದೇನೆ. ಹರಿಯಾಣದ ಕನಿಷ್ಠ ಮೂರು ಜಿಲ್ಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಎಣಿಕೆಯ ಪ್ರಕ್ರಿಯೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ನಾವು ಗಂಭೀರ ದೂರುಗಳನ್ನು ಸ್ವೀಕರಿಸಿದ್ದೇವೆ. ಇನ್ನೂ ಹೆಚ್ಚಿನವುಗಳು ಬರುತ್ತಿವೆ. ಈ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇದನ್ನು ಇಂದು ಅಥವಾ ಮರುದಿನ ಚುನಾವಣಾ ಆಯೋಗಕ್ಕೆ ಪ್ರಸ್ತುತಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

    ಈಗ ಬಹುಮುಖ್ಯ ವಿಷಯವೆಂದರೆ ನಮ್ಮ ಗೆಲುವು ಕಿತ್ತುಕೊಳ್ಳಲಾಗಿದೆ. ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಹರಿಯಾಣದಲ್ಲಿ ಕನಿಷ್ಠ 12-14 ಸ್ಥಾನಗಳಲ್ಲಿ ಅಭ್ಯರ್ಥಿಗಳು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದು ಎಣಿಕೆ ಪ್ರಕ್ರಿಯೆಯ ಸಮಗ್ರತೆ ಮತ್ತು ಇವಿಎಂಗಳ ಕಾರ್ಯನಿರ್ವಹಣೆಯನ್ನು ಪ್ರಶ್ನಿಸುತ್ತದೆ ಎಂದು ಜೈರಾಮ್‌ ರಮೇಶ್‌ ದೂರಿದ್ದಾರೆ. ಇದನ್ನೂ ಓದಿ: Jammu Kashmir Election Results| ಉಗ್ರರಿಂದ ಹತ್ಯೆಯಾಗಿದ್ದ ವ್ಯಕ್ತಿಯ ಮಗಳಿಗೆ ಒಲಿದ ಜಯ

    ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಒಟ್ಟು 90 ಕ್ಷೇತ್ರಗಳ ಪೈಕಿ ಬಿಜೆಪಿ 48 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆ ಮೂಲಕ ಹ್ಯಾಟ್ರಿಕ್‌ ಜಯದ ಹೊಸ್ತಿಲಲ್ಲಿದೆ. ದಶಕಗಳ ಬಳಿಕ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ ನಿರಾಸೆಯಾಗಿದ್ದು, 37 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಐಎನ್‌ಎಲ್‌ಡಿ 2 ರಲ್ಲಿ ಮುಂದಿದೆ.

  • ಜಮ್ಮು-ಕಾಶ್ಮೀರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ನಮ್ಮನ್ನು ಬೆಂಬಲಿಸಿದ್ದಾರೆ: ಈರಣ್ಣ ಕಡಾಡಿ

    ಜಮ್ಮು-ಕಾಶ್ಮೀರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ನಮ್ಮನ್ನು ಬೆಂಬಲಿಸಿದ್ದಾರೆ: ಈರಣ್ಣ ಕಡಾಡಿ

    ಬೆಳಗಾವಿ: ಜಮ್ಮು-ಕಾಶ್ಮೀರದಲ್ಲಿ (Jammu-Kashmir) ದೊಡ್ಡ ಸಂಖ್ಯೆಯಲ್ಲಿ ಜನ ನಮ್ಮನ್ನು ಬೆಂಬಲಿಸಿದ್ದಾರೆ. ನಮ್ಮ ಅಸ್ತಿತ್ವ ಇಲ್ಲದ ರಾಜ್ಯದಲ್ಲಿ ನಮಗೆ ಈ ಸಲ ಹೆಚ್ಚಿನ ಸ್ಥಾನಗಳು ಬಂದಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ (Iranna Kadadi) ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಬಗ್ಗೆ ದೊಡ್ಡ ಪ್ರಮಾಣದ ಅಪಪ್ರಚಾರ ಇರುವ ರಾಜ್ಯದಲ್ಲಿ ಇಷ್ಟೊಂದು ದೊಡ್ಡ ಬೆಂಬಲ ಸಿಕ್ಕಿದೆ. ಬರುವ ದಿನಗಳಲ್ಲಿ ಪಕ್ಷವನ್ನು ಜಮ್ಮು-ಕಾಶ್ಮೀರದಲ್ಲಿ ಗಟ್ಟಿ ಮಾಡುತ್ತೇವೆ. ವಿರೋಧ ಪಕ್ಷವಾಗಿ ಆ ರಾಜ್ಯಕ್ಕೆ ಹೇಗೆ ನ್ಯಾಯ ಕೊಡಿಸಬೇಕೋ? ಕೊಡಿಸುತ್ತೇವೆ ಎಂದರು. ಇದನ್ನೂ ಓದಿ: ಟಿಕೆಟ್‌ಗಾಗಿ ದೆಹಲಿಯಲ್ಲೇ ಬೀಡುಬಿಟ್ಟ ಸಿಪಿವೈ – ಪಕ್ಷೇತರ ಸ್ಪರ್ಧೆಗೆ ಬೆಂಬಲಿಗರ ಒತ್ತಾಯ

    ಎರಡೂ ರಾಜ್ಯಗಳಲ್ಲಿ ಬಿಜೆಪಿಗೆ (BJP) ಹಿನ್ನಡೆ ಆಗಲಿದೆ ಎಂದು ಸರ್ವೆ ವರದಿಗಳು ಹೇಳಿದ್ದವು. ಎರಡು ಸಲ ಅಧಿಕಾರ ನಡೆಸಿದ ಕಾರಣಕ್ಕೆ ಆಡಳಿತ ವಿರೋಧಿ ಅಲೆ ಇತ್ತು. ಆದರೆ ಹರಿಯಾಣ ಜನ ನಮ್ಮನ್ನು ಒಪ್ಪಿಕೊಂಡು, ಬಹುಮತ ಕೊಟ್ಟಿದ್ದಾರೆ. ಅಲ್ಲಿನ ಜನರಿಗೆ ನಾನು ಅಭಿನಂದಿಸುವೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರನ್ನು ಸೀಜ್ ಮಾಡಿದ ಪೊಲೀಸರು

    ಹರಿಯಾಣದ ಜನ ಕಾಂಗ್ರೆಸ್ (Congress) ಗ್ಯಾರಂಟಿ ನೋಡದೇ ಬಿಜೆಪಿಗೆ ಬಂಬಲಿಸಿರುವ ವಿಚಾರಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಹೇಗೆ ನಗೆಪಾಟಲಿಗೆ ಈಡಾಗಿದೆ ಎಂದು ಎಲ್ಲರಿಗೂ ಗೊತ್ತು. ಗ್ಯಾರಂಟಿ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಸಿಗುತ್ತಿಲ್ಲ. ಮಂತ್ರಿಗಳು ಗುದ್ದಲಿ ಪೂಜೆ ಮಾಡಿಲ್ಲ. ಆಡಳಿತ ವ್ಯವಸ್ಥೆ ಹಣಕಾಸಿನ ಕೊರತೆಯಿಂದ ಕುಸಿದು ಬಿದ್ದಿದೆ. ಜನರ ಎದುರು ಹೋಗಲು ಶಾಸಕರೇ ತಯಾರಿಲ್ಲ. ಗ್ಯಾರಂಟಿ ಮುಂದುವರೆಸಿದರೆ ಕಷ್ಟ ಇದೆ ಎಂದು ತಿಳಿಸಿದರು. ಇದನ್ನೂ ಓದಿ: Haryana Election Results| ಜಿಲೇಬಿ ಟ್ರೆಂಡ್‌ ಆಗಿದ್ದು ಯಾಕೆ?

  • ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ನಡೆದಿಲ್ಲ: ಸಚಿವ ಕೃಷ್ಣಭೈರೇಗೌಡ

    ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ನಡೆದಿಲ್ಲ: ಸಚಿವ ಕೃಷ್ಣಭೈರೇಗೌಡ

    ಬೆಳಗಾವಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾರ್ಯಾರು ಪ್ರಯತ್ನಿಸುತ್ತಿದ್ದಾರೋ ಅದು ಅವರ ವೈಯಕ್ತಿಕ ವಿಚಾರ ಬಿಟ್ಟರೆ. ಪಕ್ಷದ ಹಂತದಲ್ಲಿ ಯಾವುದೇ ರೀತಿ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ. ಹೈಕಮಾಂಡ್‌ನಿಂದ ಹಿಡಿದು ಎಲ್ಲರೂ ಸಿದ್ದರಾಮಯ್ಯ (CM Siddaramaiah) ಅವರ ಬೆನ್ನಿಗೆ ನಿಂತಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಅಭಿಪ್ರಾಯ ಪಟ್ಟರು.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈ ನಾಯಕರು ಭೇಟಿ ಆಗುತ್ತಿರುವ ವಿಚಾರಕ್ಕೆ ಕಿತ್ತೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅವರವರ ಪ್ರಯತ್ನ, ಆಸೆ. ಅದು ಅವರಿಗೆ ಬಿಟ್ಟಿದ್ದು. ಅದು ತಪ್ಪು ಏನೂ ಅಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅವರು ಪಕ್ಷದ ಉನ್ನತ ಮಟ್ಟದಲ್ಲಿದ್ದಾರೆ. ಇವರೆಲ್ಲಾ ನಾವು ಸಿಎಂ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಸಿಎಂ ಬದಲಾವಣೆ ಎನ್ನುವುದು ಕೇವಲ ಊಹೆ ಮತ್ತು ಕಲ್ಪನೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಜೊತೆಗಿದೆ. ಇದರಲ್ಲಿ ವ್ಯಯಕ್ತಿಕವಾಗಿ ನನಗೆ ನೂರಕ್ಕೆ ನೂರು ಭರವಸೆ ಇದೆ ಎಂದರು. ಇದನ್ನೂ ಓದಿ: ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

    ಒಳ್ಳೆಯ ಕೆಲಸಗಾರ ಎಂದು ಗುರುತಿಸಿಕೊಂಡಿರುವ ತಮ್ಮ ಹೆಸರು ಸಿಎಂ ರೇಸ್‌ನಲ್ಲಿ ಬರಬಹುದಾ ಎಂಬ ಪ್ರಶ್ನೆಗೆ ಜನ ನನ್ನ ಆರು ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ (Congress) ಪಕ್ಷ ಮೂರು ಬಾರಿ ಮಂತ್ರಿ ಮಾಡಿದೆ. ನನ್ನ ತಂದೆ ತಾಯಿ ಪುಣ್ಯ ನನಗೆ ಸಿಕ್ಕಿದೆ. ಇದಕ್ಕಿಂತ ಇನ್ನೇನು ನನಗೆ ಬೇಕು. ಐದು ವರ್ಷ ಕೃಷಿ ಮಂತ್ರಿಯಾಗಿದ್ದೆ.ಪಂಚಾಯತರಾಜ್ ಇಲಾಖೆ ನಿರ್ವಹಿಸಿದ್ದೇನೆ. ಈಗ ಕಂದಾಯ ಸಚಿವನಾಗಿದ್ದೇನೆ. ಕೈ ತುಂಬಾ ಕೆಲಸ ಇದೆ. ದಿನದ 24 ಗಂಟೆ ಅಲ್ಲ, 48 ಗಂಟೆ ಇದ್ದರೂ ಸಾಕಾಗುವುದಿಲ್ಲ. ಇರುವುದರಲ್ಲಿ ಜನರಿಗೆ ಒಳ್ಳೆಯ ಕೆಲಸ ಮಾಡಿದರೆ ಅದೇ ನನಗೆ ಸೌಭಾಗ್ಯ. ಎಐಸಿಸಿ ಅಧ್ಯಕ್ಷರು, ಸಿಎಂ ಸೇರಿ ಎಲ್ಲರಿಂದ ಒಳ್ಳೆಯ ಗೌರವ ಸಿಕ್ಕಿದೆ. ಏನೆಲ್ಲಾ ಸಿಗಬೇಕೋ ಅದೆಲ್ಲವೂ ಸಿಕ್ಕಿದೆ. ಹಾಗಾಗಿ, ಏನೋ ಗೊಂದಲ ಎನ್ನುತ್ತಿದ್ದಿರಿ. ಆದರೆ, ನಾನು ಎಲ್ಲಾ ಕಡೆ ಓಡಾಡಿ ಕೆಲಸ ಮಾಡುತ್ತಿದ್ದೇನೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: Haryana Results| ಚುನಾವಣಾ ಕುಸ್ತಿಯಲ್ಲಿ ಗೆದ್ದ ವಿನೇಶ್‌ ಫೋಗಟ್‌

     

    ಹರಿಯಾಣ (Haryana) ಮತ್ತು ಜಮ್ಮುವಿನಲ್ಲಿ (Jammu) ಕಾಂಗ್ರೆಸ್ ನೇತೃತ್ವದ ಘಟಬಂಧನ್‌ಗೆ ಬಹುಮತ ಸಿಕ್ಕಿರೋದು ಸಂತೋಷದ ವಿಷಯ. ರಾಹುಲ್ ಗಾಂಧಿ (Rahul Gandhi) ಹಾಗೂ ಖರ್ಗೆಯವರಿಗೆ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಹೋರಾಟ ನಡೆದು ಬಂದಿದೆ. ದೇಶದಲ್ಲಿ ಕೆಲವೇ ಕೆಲವು ಶ್ರೀಮಂತರಿಗೆ ಅನುಕೂಲ ಆದರೆ ಸಾಲದು. ಜನಸಾಮಾನ್ಯರಿಗೆ ಅನುಕೂಲ ಆಗಬೇಕು. ದೇಶದಲ್ಲಿ ಉದ್ಯೋಗ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಇದರ ವಿರುದ್ಧ ರಾಹುಲ್ ಗಾಂಧಿ ಹೋರಾಟ ನಡೆಸಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲೂ ಸಹ ಕಾಂಗ್ರೆಸ್ ಮಿತ್ರ ಪಕ್ಷಗಳಿಗೆ ನೀಡಿವೆ. ಅದಕ್ಕಿಂತಲೂ ಹೆಚ್ಚಿನ ಬೆಂಬಲ ಈ ಚುನಾಚಣೆಯಲ್ಲಿ ದೊರೆತಿದೆ. ದೇಶದಲ್ಲಿ ಬದಲಾವಣೆ ಗಾಳಿ ಬೀಸ್ತಿರೋದು ಬಲ ಆಗ್ತಿರೋದಕ್ಕೆ ಇದು ಸಾಕ್ಷಿ ಎಂದರು. ಇದನ್ನೂ ಓದಿ: Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

    ಮಹಾರಾಷ್ಟ್ರ ಚುನಾವಣೆ ಬರುತ್ತಿದೆ, ಅಲ್ಲೂ ಸಹ ನಮಗೆ ಬಹುಮತ ಸಿಗುವ ನಿರೀಕ್ಷೆ ಇದೆ. ಒಟ್ಟಾರೆ ದೇಶದಲ್ಲಿ ಬಡವರ ವಿರೋಧಿ ಸರ್ಕಾರದ ಇದೆ. ಬಡವರು, ಯುವಕರಿಗೆ ಉದ್ಯೋಗ ಕೊಡುತ್ತಿಲ್ಲ. ಕೆಲವೇ ಕೆಲವು ಅಂಬಾನಿ ಅದಾನಿತಂತವರಿಗೆ ಬಿಜೆಪಿ ಕೆಲಸ ಮಾಡ್ತಿದೆ. ಹೀಗಾಗಿಯೇ ಬಿಜೆಪಿಯ ವಿರುದ್ಧ ಜನಾಭಿಪ್ರಾಯ ಇವತ್ತು ದೇಶದಲ್ಲಿ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

    ಬದಲಾವಣೆಗೆ ಕರ್ನಾಕಟವೇ ಮುನ್ನುಡಿ ಆಯಿತಾ ಎಂಬ ಪ್ರಶ್ನೆಗೆ, ಇದು ಕಾಲದ ಚಕ್ರ ಬದಲಾವಣೆ ಜಗದ ನಿಯಮ. ಯಾರಿಗೂ ಅವನತಿ ಅಂತ ಹೇಳೋದಿಲ್ಲ. ಶ್ರೀಮಂತರ ಪರವಾಗಿ ಬಿಜೆಪಿ (BJP) ಕೆಲಸ ಮಾಡ್ತಿದೆ. ಸಾಮಾನ್ಯ ಭಾರತೀಯರ ಹಿತವನ್ನು ಕೈಬಿಟ್ಟಿದೆ. ಅದರ ವಿರುದ್ಧವಾಗಿ ಜನ ಇವತ್ತು ಒಂದಾಗಿದ್ದಾರೆ. ಹೊಟ್ಟೆಪಾಡಿನ ವಿಷಯಗಳನ್ನು ಬಿಜೆಪಿಯವರು ಮುಚ್ಚಿ ಹಾಕಿದ್ದಾರೆ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡ್ತಾರೆ. ಅದಕ್ಕೂ ಒಂದು ಕಾಲ ಇತ್ತು ಆದರೆ ಈಗ ಜನ ಜಾಗೃತರಾಗಿದ್ದಾರೆ. ಹೊಟ್ಟೆ ಪಾಡಿನ ವಿಷಯಗಳು ಮತ್ತೆ ಮುನ್ನೆಲೆಗೆ ಬಂದಿವೆ. ನಿಜವಾದ ಜೀವನದ ಅಂಶಗಳು ಮತ್ತು ಹೊಟ್ಟೆ ಪಾಡಿನ ವಿಷಯಗಳ ಮೇಲೆ ರಾಜಕೀಯ ನಡೆಯುತ್ತದೆ. ಅಲ್ಲಿವರೆಗೆ ಪ್ರಜಾಪ್ರಭುತ್ವ ಚೆನ್ನಾಗಿರುತ್ತದೆ. ಅದು ಬಿಟ್ಟು ಹೊಟ್ಟೆ ಪಾಡಿಗೆ ಅನ್ಯಾಯ ಮಾಡಿ ಮನಸ್ಸನ್ನು ಡೈವರ್ಟ್ ಮಾಡಿದರೆ ಜನರಿಗೆ ಅನ್ಯಾಯ ಆಗುತ್ತದೆ. ಇವತ್ತು ಅದರ ವಿರುದ್ಧವಾಗಿ ಬದಲಾವಣೆ ಆಗುತ್ತಿವೆ. ಮುಂದೆ ಎಲ್ಲಿ ಹೋಗುತ್ತದೆ ನೋಡಬೇಕು ಎಂದು ಹೇಳಿದರು. ಇದನ್ನೂ ಓದಿ: ಹರಿಯಾಣದ ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ: ಬಸವರಾಜ ಬೊಮ್ಮಾಯಿ

  • ಹರಿಯಾಣದ ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ: ಬಸವರಾಜ ಬೊಮ್ಮಾಯಿ

    ಹರಿಯಾಣದ ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ: ಬಸವರಾಜ ಬೊಮ್ಮಾಯಿ

    ಬೆಂಗಳೂರು: ಹರಿಯಾಣದ (Haryana) ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ. ಬಿಜೆಪಿ ಸಂಪೂರ್ಣ ವಿಜಯದತ್ತ ದಾಪುಗಾಲು ಹಾಕ್ತಿದೆ. ಮೋದಿಯವರ ವರ್ಚಸ್ಸು, ಕಾರ್ಯಕರ್ತರ ಶ್ರಮ ವಿಜಯ ತಂದುಕೊಟ್ಟಿದೆ. ಇಡೀ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗ್ತಿದೆ ಅನ್ನೋದಕ್ಕೆ ಇದು ದಿಕ್ಸೂಚಿ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಈ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸಿನ (Congress) ಜಾತಿ ರಾಜಕಾರಣವನ್ನು ಹರಿಯಾಣದ ಜನ ತಿರಸ್ಕರಿಸಿದ್ದಾರೆ. ಹೀಗಾಗಿ ಮತ್ತೊಮ್ಮೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಶ್ರೇಷ್ಠ ಭಾರತ್, ಅಮೃತ್ ಕಾಲ್ ಈ ವಿಚಾರಕ್ಕೆ ಜನ ಸಾಥ್ ಕೊಟ್ಟಿದ್ದಾರೆ. ಮಹಾರಾಷ್ಟ್ರದಲ್ಲೂ ಮುಂದೆ ಇದೇ ಫಲಿತಾಂಶ ಬರಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

    ಇನ್ನೂ ಜಾತಿಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಮಾತನಾಡಿ, ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಬಾರದು. ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡಬೇಕು. ನಾಳೆ ಸಮಾಜದಲ್ಲಿ ಅದು ಗೊಂದಲವನ್ನು ಉಂಟುಮಾಡುವಂತೆ ಇರಬಾರದು ಎಂದು ನಾವು ಈಗಾಗಲೇ ಸೂಚಿಸಿದ್ದೇವೆ. ಆದರೆ ಕಾಂಗ್ರೆಸ್‌ನವರು ಡಬಲ್ ಗೇಮ್ ಆಡ್ತಿದ್ದಾರೆ. ಸುಪ್ರೀಂಕೋರ್ಟ್ ಆದೇಶ ಬಂದ ನಂತರ ಒಳಮೀಸಲಾತಿ ವಿಚಾರದಲ್ಲಿ ನಾಟಕ ಮಾಡುತ್ತಿದ್ದಾರೆ. ಕಾಂಗ್ರೆಸ್‌ಗೆ ದಲಿತರು, ಒಬಿಸಿ ವರ್ಗಗಳ ಮೇಲೆ ಯಾವುದೇ ಕಾಳಜಿ ಇಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಮೋದಿ ಹಳ್ಳಿ-ಹಳ್ಳಿಗೆ ಹೋಗಿ ಕರ್ನಾಟಕದ ವಿಚಾರ ಪ್ರಚಾರ ಮಾಡ್ತಾರೆ, ಅದ್ಕೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತೆ: ಕೋಳಿವಾಡ

    ಹಿಂದುಳಿದ ವರ್ಗಗಳ ಚಾಂಪಿಯನ್ ಅಂತ ಸಿದ್ದರಾಮಯ್ಯ ಕರೆಸಿಕೊಂಡಿದ್ದಾರೆ. ಅವರ ಕಾಲದಲ್ಲೇ ಕಾಂತರಾಜ್ ವರದಿ ಸಲ್ಲಿಕೆ ಆಯ್ತು. ಆಗ ಯಾಕೆ ಅವರು ವರದಿ ಜಾರಿ ಮಾಡಲಿಲ್ಲ? ಜಯಪ್ರಕಾಶ್ ಹೆಗಡೆ ಅಧ್ಯಯನ ಮಾಡದೇ ಕಾಂತರಾಜ್ ಡೇಟಾ ತಗೊಂಡು ವರದಿ ಸಲ್ಲಿಸಿದ್ದಾರೆ. ಇದರಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಎಷ್ಟರ ಮಟ್ಟಿಗೆ ಸಿಗುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: Haryana Election Results | ಆಪ್‌ನಿಂದ ಬಿಜೆಪಿ ಮುನ್ನಡೆ?

    ವರದಿ ವೈಜ್ಞಾನಿಕವಾಗಿ ನಡೆದಿರಬೇಕು, ಎಲ್ಲರಿಗೂ ನ್ಯಾಯ ಸಿಗಬೇಕು ಎಂಬ ನಮ್ಮ ನಿಲುವು ಸ್ಪಷ್ಟವಾಗಿದೆ. ಈಗ ಸಿದ್ದರಾಮಯ್ಯ (CM Siddaramaiah) ತಮ್ಮ ಮೇಲಿನ ಹಗರಣ ಮರೆಮಾಚಲು ಜಾತಿ ಜನಗಣತಿ ವರದಿ ಬಳಕೆ ಮಾಡ್ಕೊಳ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಜನ ನೋಡಿಕೊಳ್ಳಬೇಕು ಎಂದು ಹೇಳಿದರು.  ಇದನ್ನೂ ಓದಿ: ಹರಿಯಾಣದಲ್ಲಿ ನಮ್ದೇ ಸರ್ಕಾರ, 50 ಸೀಟ್‌ ಪಕ್ಕಾ ಅಂತ ಆಂತರಿಕ ಸಮೀಕ್ಷೆ ಹೇಳಿದೆ: ಪರಮೇಶ್ವರ್‌

  • ಹರಿಯಾಣದಲ್ಲಿ ನಮ್ದೇ ಸರ್ಕಾರ, 50 ಸೀಟ್‌ ಪಕ್ಕಾ ಅಂತ ಆಂತರಿಕ ಸಮೀಕ್ಷೆ ಹೇಳಿದೆ: ಪರಮೇಶ್ವರ್‌

    ಹರಿಯಾಣದಲ್ಲಿ ನಮ್ದೇ ಸರ್ಕಾರ, 50 ಸೀಟ್‌ ಪಕ್ಕಾ ಅಂತ ಆಂತರಿಕ ಸಮೀಕ್ಷೆ ಹೇಳಿದೆ: ಪರಮೇಶ್ವರ್‌

    ಬೆಂಗಳೂರು: ಹರಿಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ (Jammu and Kashmir) ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನಮ್ಮ ಆಂತರಿಕ ಸಮೀಕ್ಷೆಯಲ್ಲೂ 50 ಕ್ಷೇತ್ರಗಳಲ್ಲಿ ಗೆಲ್ಲುವ ವರದಿ ಇದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ಹೇಳಿದ್ದಾರೆ.

    ಬೆಂಗಳೂರಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮೈತ್ರಿ ಸರ್ಕಾರ ಹಾಗೂ ಹರಿಯಾಣದಲ್ಲಿ (Haryana) ನಮ್ಮ ಪಕ್ಷವೇ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಸರ್ವೆಯಲ್ಲೂ ಕನಿಷ್ಠ 50 ಕ್ಷೇತ್ರಗಳಲ್ಲಿ ಗೆಲುವಿನ ವರದಿ ಬಂದಿದೆ. ಇದರಿಂದ ದೇಶದಲ್ಲಿ ಬದಲಾವಣೆ ಪ್ರಾರಂಭವಾಗಿದೆ ಎನ್ನಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Haryana Results| ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ಗೆ ಹಿನ್ನಡೆ

    ದೀರ್ಘವಾಗಿ ಚರ್ಚೆ ಮಾಡಿ, ಆರ್ಥಿಕ ಸ್ಥಿತಿಗತಿ ಅಧ್ಯಯನ ಮಾಡಿ ಈ ಗ್ಯಾರಂಟಿಗಳನ್ನು ತಗೊಂಡು ಬಂದಿದ್ದೇವೆ. ಪ್ರಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟೀಕೆ ಮಾಡಿದ್ರು, ರಾಜ್ಯದಲ್ಲಿ ಜೆಡಿಎಸ್ ನಾಯಕರು ಕೂಡ ಟೀಕೆ ಮಾಡಿದ್ರು. ಯಾವ ಪಕ್ಷ ಜನರಿಗೆ ಸಹಾಯ ಮಾಡುತ್ತದೋ ಅವರ ಪರವಾಗಿ ಜನರು ನಿಲ್ತಾರೆ, ನಾವು ಕೂಡ ಇದನ್ನೇ ಮಾಡಬೇಕು ಅಂತಾ ಈಗ ಅವರಿಗೆ ಅರ್ಥ ಆಗಿದೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಜ, ರಾಜಕಾರಣಿಯಾಗಿ ಮೈಸೂರು ದಸರಾದಲ್ಲಿ ಭಾಗಿ – ಪರಂಪರೆ ಮುಂದುವರಿಸಿದ ಯದುವೀರ್

    ಇದೇ ವೇಳೆ ಜಾತಿ ಜನಗಣತಿ ವರದಿ ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಾತಿ ಜನಗಣತಿ ನಾವು ತರದೇ ಇದ್ದಾಗ ಕೋಲ್ಡ್ ಸ್ಟೋರೇಜ್ ನಲ್ಲಿ ಇಟ್ಟುಬಿಟ್ರು ಅಂತಿದ್ರು. ಇವಾಗ ನಾವು ಜನ ಸಮುದಾಯದ ಮುಂದೆ ತರುತ್ತಿದ್ದೇವೆ ಅಂದಾಗ, ಅವರಿಗೆ ನುಂಗಲಾರದ ತುತ್ತಾಗಿದೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಹೆಚ್ಚು ಇದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಅದರ ಆಧಾರದ ಮೇಲೆ ಬರುವ ದಿನಗಳಲ್ಲಿ ಕಾರ್ಯಕ್ರಮ ಕೊಡಲು ಸಹಕಾರಿ ಆಗುತ್ತದೆ. ಹಾಗಾಗಿ ಅದು ಆಗಬಾರದು ಅಂದರೆ, ಈ ಸಮುದಾಯಗಳಿಗೆ ಯೋಜನೆ ಕೊಡಬಾರದಾ..? ಜನಸಂಖ್ಯೆ ಆಧಾರ ಇಟ್ಟುಕೊಂಡು ಯೋಜನೆ ಕೊಡಬೇಕು. ಅದಕ್ಕಾಗಿ ಜಾತಿ ಜನಗಣತಿ ವರದಿಯನ್ನು ಅನುಷ್ಟಾನಕ್ಕೆ ತರಬೇಕೆಂದು ಸಿಎಂ ಹೇಳಿದ್ದಾರೆ. ಅಕ್ಟೋಬರ್ 18ರ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

    ಇನ್ನೂ ಒಕ್ಕಲಿಗ ಹಾಗೂ ಲಿಂಗಾಯತ ರಿಂದ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಈ ಸಮುದಾಯಗಳ ಬೆಂಬಲದ ಪ್ರಶ್ನೆ ಇಲ್ಲಿ ಬರೋದಿಲ್ಲ. ವಸ್ತು ಸ್ಥಿತಿ ಏನಿದೆ ಎಂದು ಜನರ ಮುಂದೆ ಇಡ್ತಾರೆ. ಅದು ಬೇಡ ಅಂದರೆ ಹೇಗೆ? ಇವತ್ತು 160 ಕೋಟಿ ಖರ್ಚು ಮಾಡಿ ಮಾಡಿದ್ದಾರೆ. ಮುಂದೆ ಕೇಂದ್ರ ಸರ್ಕಾರ ಸೆನ್ಸಸ್ ಮಾಡ್ತಿದೆ. ನಾನು ಸಿಎಂ ಪ್ರಧಾನಿಗಳ ಭೇಟಿ ಮಾಡಿದಾಗ ಸೆನ್ಸಸ್‌ ಮಾಡೋದಾಗಿ ಹೇಳಿದ್ರು. 28ರ ಚುನಾವಣೆಗೆ ಹೊಸ ಸೆನ್ಸಸ್ ಇರುತ್ತೆ ಅಂತಾ ಹೇಳಿದ್ರು. ಅವಾಗ ಬರಲ್ವಾ ಡೇಟಾ? ಅವಾಗ ವಿರೋಧ ಮಾಡಲ್ವಾ? ಫಸ್ಟ್ ಇದು ಬರಲಿ, ಪ್ರತಿ ಸೆನ್ಸಸ್ ಹತ್ತು ವರ್ಷಗಳಿಗೆ ಮಾಡಬೇಕು. ಇವಾಗ ಏರುಪೇರು ಆಗಿದೆ. 10 ವರ್ಷಗಳಲ್ಲಿ 15 ಪರ್ಸೆಂಟ್ ಸೆನ್ಸಸ್ ಆಗಿರಬಹುದು ಎಂದು ಅಂದಾಜು. ಅದರ ಆಧಾರದ ಮೇಲೆ ಇದು ಬಿಡುಗಡೆ ಮಾಡಿದ್ರೆ ಗೊತ್ತಾಗುತ್ತಲ್ಲ ಎಂದು ಹೇಳಿದ್ದಾರೆ.

  • ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಫಾರ್ಮುಲಾ ಸಕ್ಸಸ್‌ ಆಗಿದೆ – ಸಿ.ಟಿ ರವಿ

    ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಫಾರ್ಮುಲಾ ಸಕ್ಸಸ್‌ ಆಗಿದೆ – ಸಿ.ಟಿ ರವಿ

    – ಕಾಂಗ್ರೆಸ್‌ನಂತೆ ಹಗರಣಗಳಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲವೆಂದು ವಾಗ್ದಾಳಿ

    ಬೆಂಗಳೂರು: ಹರಿಯಾಣದಲ್ಲಿ (Haryana) ಬಿಜೆಪಿ (BJP) ಗೆಲುವು ನಮಗೆ ಸ್ಪಷ್ಟವಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 28 ರಿಂದ 32 ಸ್ಥಾನಗಳು ಬರಲಿದೆ ಎಂದು ನಮ್ಮ ಸಮೀಕ್ಷೆ ಹೇಳಿತ್ತು. ಆದ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu-Kashmir) ಕಾಂಗ್ರೆಸ್‌ ಫಾರ್ಮುಲಾ ಸಕ್ಸಸ್‌ ಆಗಿದೆ ಅನ್ನಿಸುತ್ತಿದೆ ಎಂದು ರಾಜ್ಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ (C T Ravi) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿಗೆ ಆರಂಭಿಕ ಹಿನ್ನಡೆಯಾದರೂ ಬಳಿಕ ಮುನ್ನಡೆ ಕಾಯ್ದುಕೊಂಡಿದೆ. ಇನ್ನೂ ಫಲಿತಾಂಶ ಇದೆ ನೋಡೋಣ. ಕರ್ನಾಟಕದಲ್ಲಿ ಕಾಂಗ್ರೆಸ್‌ ಹಗರಣಗಳಲ್ಲೇ ಮುಳುಗೆದ್ದಿದೆ, ಆದ್ರೆ ಹರಿಯಾಣದಲ್ಲಿ ಹಗರಣದಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲ. ಇನ್ನೂ 12 ಗಂಟೆ ಬಳಿಕ ಸ್ಪಷ್ಟತೆ ಸಿಗಲಿದೆ ಎಂದರು. ಇದನ್ನೂ ಓದಿ: ಸಿಎಂ ಆಪ್ತ ಮಹದೇವಪ್ಪರನ್ನ ಭೇಟಿಯಾದ ಸತೀಶ್ ಜಾರಕಿಹೊಳಿ – ರಾಜ್ಯ ರಾಜಕಾರಣದಲ್ಲಿ ಸಂಚಲನ

    ಇದು ಭಾರತದ ಜಯ
    ಫಲಿತಾಂಶ ಏನೇ ಬಂದರೂ ಚುನಾವಣಾ ಆಯೋಗ ದೂರೋದು, ಇವಿಎಂ ದೂರೋದು, ಜನ ಸರಿಯಿಲ್ಲ ಅಂತ ಇದುವರೆಗೆ ನಾವು ಮಾಡಿಲ್ಲ. ಕಾಂಗ್ರೆಸ್‌ನವರು ಅವರ ಪರ ಬಂದರೆ ಜನಾದೇಶ. ಇಲ್ಲದಿದ್ದರೇ ಇವಿಎಂ ದೋಷ. ಜನ ಸರಿಯಿಲ್ಲ ಅಂತಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಮತ ಚಲಾವಣೆ ಆಗಿದೆ. ಆ ಮೂಲಕ ಅಲ್ಲಿನ ಜನ ನಾವು ಭಾರತದ ಜೊತೆಗೆ, ಪ್ರಜಾಪ್ರಭುತ್ವದ ಜೊತೆ ಇದ್ದೇವೆ ಎಂದು ತೋರಿಸಿದ್ದಾರೆ. ಹಾಗಾಗಿಯೇ ಇದು ಪ್ರಜಾಪ್ರಭುತ್ವದ ಜಯ. ಜನ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟು ಭಯೋತ್ಪಾದನೆಯ ವಿರುದ್ಧ ಮತ ಚಲಾಯಿಸಿದ್ದಾರೆ. ಇದು ಭಾರತದ ಜಯ ಎಂದು ಹೇಳಿದರು. ಇದನ್ನೂ ಓದಿ: Haryana Result | ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು ಖಚಿತ – ಸಿಎಂ ನಯಾಬ್‌ ಸಿಂಗ್‌ ಸೈನಿ ವಿಶ್ವಾಸ

    ನಮ್ಮ ಸರ್ಕಾರ ಜನವಿರೋಧಿ ಕಾರ್ಯಗಳನ್ನು ಮಾಡಿರಲಿಲ್ಲ. ನಮ್ಮ ಸರ್ಕಾರ ಮತ್ತು ಪಕ್ಷದ ವಿರುದ್ಧ ಅಪಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಹಗರಣದಲ್ಲೇ ಮುಳುಗೆದ್ದಿದೆ. ಕೆಲವೊಮ್ಮೆ ಅಪಪ್ರಚಾರವೇ ಗೆಲ್ಲುತ್ತದೆ. ಕಾಂಗ್ರೆಸ್ ಅಪಪ್ರಚಾರದಲ್ಲಿ ಎತ್ತಿದ ʻಕೈʼ. ಕರ್ನಾಟಕದಲ್ಲಿ ಅವರು ಅದನ್ನೇ ಮಾಡಿದ್ದಾರೆ. ಜಮ್ಮುವಿನಲ್ಲೂ ಅದನ್ನೇ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: Haryana Results| ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸ್ಪರ್ಧಿ: ಕೈ ಸಂಸದೆ ಸೆಲ್ಜಾ

    ನಾವು ಜನಹಿತ ಹಾಗೂ ರಾಷ್ಟ್ರಹಿತವನ್ನು ಗಮನದಲ್ಲಿ ಇಟ್ಟುಕೊಂಡು, ಸೈದಾಂತಿಕ ನಿಲುವುಗಳಲ್ಲೂ ಸ್ಪಷ್ಟತೆ ಇಟ್ಟುಕೊಂಡು, ಜನರ ಮುಂದೆ ಪ್ರಣಾಳಿಕೆಯನ್ನು ಇಟ್ಟೆವು. ನಮ್ಮ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ಹಾಗಾಗಿ ಉತ್ತಮ ಫಲಿತಾಂಶವೇ ಸಿಗುತ್ತೆ ಎಂಬ ನಂಬಿಕೆ ಇದೆ ಎಂದರು. ಇದನ್ನೂ ಓದಿ: ರಾಜ, ರಾಜಕಾರಣಿಯಾಗಿ ಮೈಸೂರು ದಸರಾದಲ್ಲಿ ಭಾಗಿ – ಪರಂಪರೆ ಮುಂದುವರಿಸಿದ ಯದುವೀರ್